Tag: ಹೂಡಿಕೆದಾರರು

  • ಕಲ್ಲಿದ್ದಲು ಗಣಿ ಹರಾಜು- ಹೂಡಿಕೆದಾರರ ಆಕರ್ಷಣೆಗೆ ಜ.16ರಂದು ರಾಂಚಿಯಲ್ಲಿ ರೋಡ್ ಶೋ

    ಕಲ್ಲಿದ್ದಲು ಗಣಿ ಹರಾಜು- ಹೂಡಿಕೆದಾರರ ಆಕರ್ಷಣೆಗೆ ಜ.16ರಂದು ರಾಂಚಿಯಲ್ಲಿ ರೋಡ್ ಶೋ

    – 8 ರಾಜ್ಯಗಳ 70 ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ

    ಬೆಂಗಳೂರು: ಕಲ್ಲಿದ್ದಲು ಗಣಿ ಹರಾಜಿಗಾಗಿ (Coal Mine Auction) ಹೂಡಿಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಜನವರಿ 16ರಂದು ರಾಂಚಿಯಲ್ಲಿ (Ranchi) ರೋಡ್ ಶೋ (Road Show) ನಡೆಸಲಿದೆ.

    ಕಲ್ಲಿದ್ದಲು ಗಣಿಗಳ ವಾಣಿಜ್ಯ ಹರಾಜಿನಲ್ಲಿ ಹೆಚ್ಚು ಹೆಚ್ಚು ಹೂಡಿಕೆದಾರರು ಭಾಗವಹಿಸುವಂತೆ ಸೆಳೆಯಲು ಕೇಂದ್ರ ಕಲ್ಲಿದ್ದಲು ಸಚಿವಾಲಯ ಜನವರಿ 16ರಂದು ರಾಂಚಿಯಲ್ಲಿ ರೋಡ್ ಶೋ ಆಯೋಜಿಸುತ್ತಿದೆ ಎಂದು ಕಲ್ಲಿದ್ದಲು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

    ರೋಡ್ ಶೋ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕಲ್ಲಿದ್ದಲು ಕಾರ್ಯದರ್ಶಿ ಅಮೃತ್ ಲಾಲ್ ಮೀನಾ, ಗೌರವ ಅತಿಥಿಯಾಗಿ ಹೆಚ್ಚುವರಿ ಕಾರ್ಯದರ್ಶಿ ಎಂ.ನಾಗರಾಜು ಭಾಗವಹಿಸಲಿದ್ದಾರೆ ಎಂದು ಕಲ್ಲಿದ್ದಲು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ನಮ್ಮ ಎದೆ ಬಗೆದ್ರೆ ಶ್ರೀರಾಮ, ಸಿದ್ದರಾಮಯ್ಯ, ಅಂಬೇಡ್ಕರ್, ಸಿದ್ದಗಂಗಾ ಶ್ರೀಗಳೂ ಕಾಣ್ತಾರೆ: ಪ್ರದೀಪ್ ಈಶ್ವರ್

    ಕಲ್ಲಿದ್ದಲು ಗಣಿಗಳ ವಾಣಿಜ್ಯ ಹರಾಜಿನಲ್ಲಿ 8 ಸುತ್ತುಗಳ ವಾಣಿಜ್ಯ ಹರಾಜುಗಳ ಅಡಿಯಲ್ಲಿ 39 ಕಲ್ಲಿದ್ದಲು ಗಣಿಗಳನ್ನು ಮತ್ತು 9ನೆಯ ಅಡಿಯಲ್ಲಿ 31 ಕಲ್ಲಿದ್ದಲು ಗಣಿಗಳನ್ನು ಮಾರಾಟ ಮಾಡಲು ಸರ್ಕಾರ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ 70 ಕಲ್ಲಿದ್ದಲು ಗಣಿಗಳು ಕಲ್ಲಿದ್ದಲು ಹೊಂದಿರುವ ರಾಜ್ಯಗಳಾದ ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಿಂದ ಬಂದಿವೆ. ಇದನ್ನೂ ಓದಿ: ಟ್ರಾಫಿಕ್ ರೂಲ್ಸ್ ಪಾಲಿಸದವರಿಗೆ ಚಿತ್ರಗುಪ್ತನ ಲೆಕ್ಕ, ಯಮನ ಪಾಠ!

    ಈ ಗಣಿಗಳಲ್ಲಿ 27 ಸಂಪೂರ್ಣವಾಗಿ ಪರಿಶೋಧಿತವಾಗಿವೆ ಮತ್ತು 43 ಭಾಗಶಃ ಪರಿಶೋಧಿಸಲ್ಪಟ್ಟಿವೆ. ಏಳು ಕೋಕಿಂಗ್ ಕಲ್ಲಿದ್ದಲು ಗಣಿಗಳಾಗಿವೆ. ಆದರೆ ಉಳಿದವುಗಳು ಅಲ್ಲ ಎಂದು ಕೇಂದ್ರ ಗಣಿ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಸೋಮವಾರ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರ ದೇಗುಲ

    ಸಮಗ್ರ ಚರ್ಚೆಯ ನಂತರ ಗಣಿಗಳನ್ನು ಮತ್ತು ಗಣಿ ಹರಾಜು ಪ್ರಕ್ರಿಯೆ ಅಂತಿಮಗೊಳಿಸಲಾಗಿದೆ ಮತ್ತು ಸಂರಕ್ಷಿತ ಪ್ರದೇಶಗಳು, ವನ್ಯಜೀವಿ ಅಭಯಾರಣ್ಯಗಳು, ನಿರ್ಣಾಯಕ ಆವಾಸ ಸ್ಥಾನಗಳು, ಶೇ.40ಕ್ಕಿಂತ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಮತ್ತು ಹೆಚ್ಚು ನಿರ್ಮಿಸಲಾದ ಪ್ರದೇಶವನ್ನು ಹೊರಗಿಡಲಾಗಿದೆ ಎಂದು ಕೇಂದ್ರ ಗಣಿ ಸಚಿವಲಯ ತಿಳಿಸಿದೆ. ಇದನ್ನೂ ಓದಿ: ರಾಮಮಂದಿರಕ್ಕೆ ಹೋಗಿ ಪಾಪ ತೊಳೆದುಕೊಂಡು ಬನ್ನಿ – ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

  • 2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ – ಸಮಾವೇಶದಲ್ಲಿ ಹೂಡಿಕೆದಾರರ ಗಮನ ಸೆಳೆದ ಜೋಶಿ

    2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ – ಸಮಾವೇಶದಲ್ಲಿ ಹೂಡಿಕೆದಾರರ ಗಮನ ಸೆಳೆದ ಜೋಶಿ

    ಬೆಂಗಳೂರು: ಬಂಡವಾಳ ಹೂಡಿಕೆಗೆ ಕಲ್ಲಿದ್ದಲು (Coal)  ಕ್ಷೇತ್ರದಲ್ಲಿ ಉತ್ತಮ ಅವಕಾಶ ಕಲ್ಪಿಸಲಾಗಿದ್ದು, 2025ರ ಸಾಲಿನಲ್ಲಿ 1 ಬಿಲಿಯನ್‌ ಟನ್‌ (ಶತಕೋಟಿ) ನಷ್ಟು ಕಲ್ಲಿದ್ದಲು ಉತ್ಪಾದಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಬುಧವಾರ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಡೊಮೆಸ್ಟಿಕ್ ಕೋಲ್ ಪ್ರೊಡಕ್ಷನ್ (Domestic Coal Production) 900 ದಶಲಕ್ಷ ಟನ್ ತಲುಪಿದೆ. 2025ರ ಸಾಲಿನಲ್ಲಿ ಕೋಲ್ ಇಂಡಿಯಾ (Coal India) 1 ಬಿಲಿಯನ್‌ ಟನ್‌ ನಷ್ಟು ಕಲ್ಲಿದ್ದಲು ಉತ್ಪಾದಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಶ್ಲೀಲ ದೃಶ್ಯ ನೋಡಿ ಪ್ರಚೋದನೆ – ಅಪ್ರಾಪ್ತನಿಂದ ಬಾಲಕಿಯ ಮೇಲೆ ರೇಪ್‌, ಕೊಲೆ

    ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶಗಳಿವೆ. ಅದಕ್ಕಾಗಿ ಉದ್ಯಮಸ್ನೇಹಿ ವಾತಾವರಣ ಕಲ್ಪಿಸಲಾಗಿದೆ. ಕಲ್ಲಿದ್ದಲು ಕ್ಷೇತ್ರದಿಂದ ದೇಶದ ಜಿಡಿಪಿಗೆ (GDP) ಶೇ 2.5 ರಷ್ಟು ಕೊಡುಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿರ್ದೇಶನ ನೀಡಿದ್ದಾರೆ. ಈ ಗುರಿ ಮುಟ್ಟುವತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಗುರುವಾರ (ನವೆಂಬರ್‌ 3) 124 ಕಲ್ಲಿದ್ದಲು ಗಣಿ ಹರಾಜು ಪ್ರಕ್ರಿಯೆ ನಡೆಯಲಿದೆ. ಯಾರು ಬೇಕಾದರು ಪಾಲ್ಗೊಳ್ಳಬಹುದು. ಗಣಿಗಾರಿಕೆಗೆ (Mining) ಬೇಕಾದ 21 ಕ್ಲಿಯರೆನ್ಸ್ ಗಳನ್ನ ಸುಲಲಿತವಾಗಿ ವರ್ಗಾಯಿಸುವ ನಿಯಮಗಳನ್ನೂ ಜಾರಿಗೆ ತರಲಾಗಿದೆ. ಇದರ ಪರಿಣಾಮವಾಗಿ ಕಲ್ಲಿದ್ದಲು ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಯಾಗುತ್ತಿದೆ. ಉತ್ಪಾದನೆ ಕೂಡ ಹೆಚ್ಚಿದೆ ಹೆಚ್ಚಾಗಿದೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಹೆಣ ಬೀಳಬೇಕು?: ಸುಂದರೇಶ್

    ಪ್ರಧಾನಿ ಮೋದಿ ಅವರ 5 ಲಕ್ಷಕೋಟಿ ಡಾಲರ್ ಆರ್ಥಿಕತೆಯ ಗುರಿ ತಲುಪುವಲ್ಲಿ ಕರ್ನಾಟಕ ಕೂಡ ಹೆಚ್ಚಿನ ಕೊಡುಗೆ ನೀಡಲಿದೆ ಎಂದು ಭಾವಿಸಿದ್ದಾರೆ. ಪ್ರಗತಿ ಹೊಂದಿರುವ ರಾಜ್ಯ ಕರ್ನಾಟಕದಲ್ಲೂ ಹೆಚ್ಚಿನ ಹೂಡಿಕೆಗೆ ಹೂಡಿಕೆದಾರರು ಮುಂದೆ ಬರಬೇಕು ಎಂದು ಹೇಳಿದ್ದಾರೆ

    Live Tv
    [brid partner=56869869 player=32851 video=960834 autoplay=true]

  • 29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಅರೆಸ್ಟ್

    29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಅರೆಸ್ಟ್

    ಮುಂಬೈ: 29 ಹೊಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಮಹಾರಾಷ್ಟ್ರದ ಥಾಣೆ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.

    ಸುಳಿವಿನ ಆಧಾರ ಮೇರೆಗೆ ಥಾಣೆಯ ಆರ್ಥಿಕ ಅಪರಾಧ ವಿಭಾಗ(EOW) ಪುಣೆಯ ದೇಹು ರಸ್ತೆಯಲ್ಲಿದ್ದ ಶ್ರದ್ಧಾ ಶ್ರೀಕಾಂತ್ ಪಲಾಂಡೆ ಮಹಿಳೆಯನ್ನು ಬಂಧಿಸಿದೆ ಎಂದು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಪನ್ಹಾಲೆ ತಿಳಿಸಿದರು.

    CRIME 2

    ಎಂಟು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಶ್ರದ್ಧಾ ಮತ್ತು ಆಕೆಯ ಪತಿ ಶ್ರೀಕಾಂತ್ ಪಾಂಡುರಂಗ ಪಲಾಂಡೆ ವಿರುದ್ಧ ಕಾಸರವಾಡವಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಎಂಪಿಐಡಿಎಯ ಸೆಕ್ಷನ್ 420(ವಂಚನೆ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ದಾಳಿ ವೇಳೆ ಶ್ರದ್ಧಾ ಸಿಕ್ಕಿದ್ದು, ಶ್ರೀಕಾಂತ್ ಪರಾರಿಯಾಗಿದ್ದಾನೆ ಎಂದು ವಿವರಿಸಿದರು. ಇದನ್ನೂ ಓದಿ: ಮಹಿಳಾ ಶೌಚಾಲಯ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡ 

    ನಡೆದಿದ್ದೇನು?
    ದಂಪತಿ ಸಲಹಾ ಸಂಸ್ಥೆಯನ್ನು ಸ್ಥಾಪಿಸಿದ್ದು, ವಿದೇಶಿ ವಿನಿಮಯ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತೆ ಎಂದು ಆದಾಯದ ಭರವಸೆ ನೀಡುವ ಮೂಲಕ ಹೂಡಿಕೆದಾರರನ್ನು ಆಕರ್ಷಿಸಿದ್ದರು. ಈ ಹಿನ್ನೆಲೆ ಇವರ ಮಾತಿಗೆ ನಂಚಿಕೆಯಿಟ್ಟು ಇಬ್ಬರು ಹೂಡಿಕೆದಾರರು ಹಣವನ್ನು ಕೊಟ್ಟಿದ್ದರು. ಆದರೆ ದಂಪತಿ ಹೂಡಿಕೆದಾರರ ಬಡ್ಡಿಯನ್ನು ಮತ್ತು ಅಸಲು ಮೊತ್ತವನ್ನು ಹಿಂದಿರುಗಿಸದೆ ಪರಾರಿಯಾಗಿದ್ದಾರೆ. ಇದೇ ರೀತಿ ಇವರು ಸುಮಾರು 29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ್ದರು.

    ಆರೋಪಿ ಮಹಿಳೆಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆಕೆಯನ್ನು ಮೇ 31 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆಕೆಯ ಪತಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದರು.

  • ದಾವೋಸ್‍ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆ ಉದ್ಘಾಟನೆ- ಮೊದಲ ದಿನದಲ್ಲೇ ಭರ್ಜರಿ ಹೂಡಿಕೆ ಮಾತುಕತೆಗೆ ಸಿಎಂ ಚಾಲನೆ

    ದಾವೋಸ್‍ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆ ಉದ್ಘಾಟನೆ- ಮೊದಲ ದಿನದಲ್ಲೇ ಭರ್ಜರಿ ಹೂಡಿಕೆ ಮಾತುಕತೆಗೆ ಸಿಎಂ ಚಾಲನೆ

    ದಾಮೋಸ್: ಸ್ವಿಟ್ಜರ್ಲೆಂಡ್‍ನ ದಾವೋಸ್‍ನಲ್ಲಿ ಇಂದಿನಿಂದ 4 ದಿನಗಳ ವಿಶ್ವ ಆರ್ಥಿಕ ಶೃಂಗ ಸಭೆಗೆ ಚಾಲನೆ ಕೊಡಲಾಯ್ತು. ಕರ್ನಾಟಕದಿಂದ ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ಮೊದಲ ದಿನದಿಂದಲೇ ಜಾಗತಿಕ ಮಟ್ಟದ ಉದ್ಯಮಿಗಳ ಜೊತೆ ಯಶಸ್ವಿಯಾಗಿ ಹೂಡಿಕೆ ಕುರಿತು ಮಾತುಕತೆ ಆರಂಭಿಸಿತು. ಕರ್ನಾಟಕದಲ್ಲಿ ಸೆಂಟರ್ ಫಾರ್ ಇಂಟರ್ ನೆಟ್ ಆಫ್ ಎಥಿಕಲ್ ಥಿಂಗ್ಸ್ ಪ್ರಾರಂಭಿಸಲು ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ರಾಜ್ಯದಲ್ಲಿ ಹೂಡಿಕೆದಾರರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ರಾಜ್ಯದ ನಿಯೋಗ ಪ್ರಮುಖ ಹೆಜ್ಜೆಯಿಟ್ಟಿದೆ.

    ದಾವೋಸ್‍ನಲ್ಲೇ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೂರಟ್ ಸಾನ್ಮೆಝ್ ಅವರು ಮಾತನಾಡುತ್ತ, ವ್ಯಾಪಾರ ವಹಿವಾಟಿನಲ್ಲಿ ನೈತಿಕತೆಯು ಕಡಿಮೆಯಾಗುತ್ತಿರುವ ಕುರಿತು ಹೂಡಿಕೆದಾರರು ಕಳವಳ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಗಳು ಸೆಂಟರ್ ಫಾರ್ ಇಂಟರ್ ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ ಎಂದು ವಿವರಿಸಿದರು. ಕರ್ನಾಟಕ ರಾಜ್ಯವು ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸುವುದಾದರೆ, ಈ ಕೇಂದ್ರವನ್ನು ಕೂಡಲೇ ಸ್ಥಾಪಿಸುವಂತೆ ಸಲಹೆ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಕೇಂದ್ರವನ್ನು ಸ್ಥಾಪಿಸುವ ಭರವಸೆ ನೀಡಿದರು.

    ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರು ಸುಲಲಿತ ವಹಿವಾಟು ನಡೆಸಲು ಸರ್ಕಾರ ಹೂಡಿಕೆದಾರರಿಗೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಅಭಿವೃದ್ಧಿಯ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಲು ರಾಜ್ಯ ಸರ್ಕಾರ ಉತ್ಸುಕವಾಗಿದ್ದು, ಜಾಗತಿಕ ಮಟ್ಟದಲ್ಲಿ ಕರ್ನಾಟಕ ಮುಂಚೂಣಿಗೆ ಬರಲು ನೆರವಾಗುವ ಅಧ್ಯಯನಗಳನ್ನು ಕೈಗೊಳ್ಳಲು ಆಸಕ್ತಿ ವಹಿಸಿದೆ ಎಂದು ತಿಳಿಸಿದರು.

    ಸುಸ್ಥಿರ ಕೈಗಾರಿಕೆಗಳನ್ನು ರೂಪಿಸುವ ಮೂಲಕ ಕರ್ನಾಟಕ ರಾಜ್ಯವು ವರ್ಲ್ಡ್ ಎಕನಾಮಿಕ್ ಫೋರಂ 2020ರ ಗುರಿ ಸಾಧನೆಗೆ ಸಕ್ರೀಯವಾಗಿ ಶ್ರಮಿಸಲಿದೆ. ಭಾರತದ ಪ್ರಮುಖ ಕೈಗಾರಿಕಾ ರಾಜ್ಯವಾಗಿ ಹೊರಹೊಮ್ಮುವ ಮೂಲಕ ಜಾಗತಿಕ ಮಟ್ಟದಲ್ಲಿಯೂ ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ರಾಜ್ಯ ಪ್ರಮುಖ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

    ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಹಿಮಾಲ್ ಅಡ್ವೈಸರಿ ಕಂಪನಿ ದೋಖಾ- ಅಧಿಕ ಬಡ್ಡಿ ಆಸೆ ತೋರಿಸಿ ಚಿಪ್ಪು ಕೊಟ್ಳು ವಂಚಕಿ

    ಹಿಮಾಲ್ ಅಡ್ವೈಸರಿ ಕಂಪನಿ ದೋಖಾ- ಅಧಿಕ ಬಡ್ಡಿ ಆಸೆ ತೋರಿಸಿ ಚಿಪ್ಪು ಕೊಟ್ಳು ವಂಚಕಿ

    ಬೆಂಗಳೂರು: ಹಿಮಾಲ್ ಅಡ್ವೈಸರಿ ಕಂಪನಿ ಹೆಸರಿನಲ್ಲಿ ಸಾರ್ವಜನಿಕರಿಗೆ ಅಧಿಕ ಬಡ್ಡಿ ಆಸೆ ತೋರಿಸಿ ಅವರಿಂದ ಕೋಟ್ಯಂತರ ರೂ. ಹಣ ದೋಚಿಕೊಂಡು ಮಹಿಳೆಯೊಬ್ಬಳು ಪರಾರಿಯಾಗಿರುವ ಘಟನೆ ಸಿಲಿಕಾನ್ ಸಿಟಿಯ ಆರ್.ಟಿ ನಗರದಲ್ಲಿ ನಡೆದಿದೆ.

    ಹಿಮಾಲ್ ಅಡ್ವೈಸರಿ ಕಂಪನಿ ನಡೆಸುತ್ತಿದ್ದ ನಾಝಿಯಾ ಜನರ ಹಣಕ್ಕೆ ಮೋಸ ಮಾಡಿದ ಖತರ್ನಾಕ್ ಮಹಿಳೆ. ಜನರಿಗೆ ಅಧಿಕ ಬಡ್ಡಿ ನೀಡುವ ಆಸೆ ತೋರಿಸಿ ಕೋಟಿಗಟ್ಟಲೇ ಹೂಡಿಕೆ ಮಾಡಿಸಿಕೊಂಡ ನಾಝಿಯಾ ಈಗ ಎಸ್ಕೇಪ್ ಆಗಿದ್ದಾಳೆ. ಅಧಿಕ ಬಡ್ಡಿ ಆಸೆಯ ಕನಸು ಕಂಡು ಕೂತಿದ್ದ ಜನರಿಗೆ ಪಂಗನಾಮ ಹಾಕಿದ್ದಾಳೆ.

    ಆರ್ ಟಿ ನಗರದಲ್ಲಿ ಹಿಮಾಲ್ ಅಡ್ವೈಸರಿ ಕಂಪನಿ ಎಂಬ ಹೆಸರಿನ ಕಚೇರಿಯಲ್ಲಿ ನಾಝಿಯಾ ತನ್ನ ವ್ಯವಹಾರ ನಡೆಸುತ್ತಿದ್ದಳು. 15 ರಿಂದ 20% ಬಡ್ಡಿ ಕೊಡುತ್ತೇನೆ ಹೂಡಿಕೆ ಮಾಡಿ ಎಂದು ಜನರನ್ನು ನಂಬಿಸುತ್ತಿದ್ದಳು. ಬ್ಯುಸಿನೆಸ್‍ನಲ್ಲಿ ನಿಮ್ಮ ಹಣ ತೊಡಗಿಸ್ತೀನಿ, ಟ್ರೇಡ್ ಮಾರ್ಕೆಟ್‍ನಲ್ಲೂ ನಿಮ್ಮ ಹಣ ಹೂಡಿ ಲಾಭ ಕೊಡುತ್ತೇವೆ ಎಂದಿದ್ದಳು. ಈಕೆ ಮಾತಿಗೆ ಮರುಳಾದ ಜನರು ಆಕೆಯನ್ನು ನಂಬಿ ಹಿಮಾಲ್ ಅಡ್ವೈಸರಿ ಕಂಪನಿಯಲ್ಲಿ ಹಣ ಹೂಡುತ್ತಿದ್ದರು. ಬಡ್ಡಿ ಆಸೆಗೆ ನಾ ಮುಂದು ತಾ ಮುಂದು ಎಂದು ಜನರು ಹೂಡಿಕೆ ಮಾಡಿದರು. ಮೊದಲ ಒಂದೆರಡು ತಿಂಗಳು ನಾಝಿಯಾ ಹೂಡಿಕೆದಾರರಿಗೆ ಹಣವನ್ನು ನೀಡಿದ್ದಾಳೆ. ಹೀಗೆ ವಿಶ್ವಾಸ ಗಿಟ್ಟಿಸಿಕೊಂಡು ಅವರ ಸ್ನೇಹಿತರಿಗೂ ಕಂಪನಿಯಲ್ಲಿ ಹೂಡಿಕೆ ಮಾಡಲು ಹೇಳಿ ಎಂದು ಬಲೆ ಬೀಸುತ್ತಿದ್ದಳು.

    5 ಲಕ್ಷ ಹೂಡಿದರೆ 5 ತಿಂಗಳಿಗೆ ಬಡ್ಡಿ ಜೊತೆ ಆಲ್ಟೋ ಕಾರನ್ನೂ ಕೊಡೋದಾಗಿ, 50 ಲಕ್ಷ ಹೂಡಿಕೆ ಮಾಡಿದರೆ ಬೆಂಗಳೂರಲ್ಲಿ ಒಂದು ಫ್ಲಾಟ್ ಆಫರ್ ನೀಡ್ತೀನಿ ಹೂಡಿಕೆದಾರರಿಗೆ ನಾಝಿಯಾ ನಂಬಿಸಿದ್ದಳು. ಕೆಲ ದಿನ ಸರಿಯಾಗಿ ವ್ಯವಹಾರ ಮಾಡಿ, ಬಳಿಕ ವಂಚಕಿ ತನ್ನ ಅಸಲಿ ಮುಖವನ್ನ ಜನರಿಗೆ ತೋರಿಸಿದ್ದಾಳೆ. ತಮ್ಮ ಹಣ ಕೇಳೋಕೆ ಹೋದವರ ಮೇಲೆ ರೌಡಿಗಳನ್ನ ಬಿಟ್ಟು ಬೆದರಿಕೆ ಹಾಕಿಸಿದ್ದಾಳೆ.

    ಅಷ್ಟೇ ಅಲ್ಲದೆ ಹೂಡಿಕೆದಾರರು ಕೊಟ್ಟಿರುವ ಹಣ ಕೇಳಿದರೆ ಟಾರ್ಚರ್ ಕೊಡ್ತಿದ್ದಾರೆ ಎಂದು ವಂಚಕಿ ಪೊಲೀಸರಿಗೆ ಕಂಪ್ಲೆಂಟ್ ಕೂಡ ಕೊಟ್ಟಿದ್ದಾಳೆ. ಅದೆಷ್ಟೋ ಅಮಾಯಕರು ನಾಝಿಯಾಳ ಮಾತಿಗೆ ಮರುಳಾಗಿ ಹಣ ಹೂಡಿ ಬೀದಿಗೆ ಬಂದಿದ್ದಾರೆ. ಸದ್ಯ ಆರ್.ಟಿ ನಗರ ಕಚೇರಿಗೆ ಬೀಗ ಹಾಕಿ ಎಸ್ಕೇಪ್ ಆಗಿರುವ ನಾಝಿಯಾ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ನೊಂದವರು ದೂರು ನೀಡಿದ್ದು, ವಂಚಕಿಯನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.