ಲಕ್ನೋ: ಈ ಬಾರಿ ಉತ್ತರ ಪ್ರದೇಶವು (Uttar Pradesh) ವಾರ್ಷಿಕ GDP ಗಿಂತ (ರಾಷ್ಟ್ರೀಯ ಉತ್ಪನ್ನ) ಹೆಚ್ಚಿನ ಹೂಡಿಕೆ ಪ್ರಸ್ತಾಪಗಳನ್ನು ಪಡೆಯಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ವಿಶ್ವಾಸ ವ್ಯಕ್ಯಪಡಿಸಿದ್ದಾರೆ.
ನಾನು 2018ರಲ್ಲೂ ಅದೇ ವಿಷಯ ಹೇಳಿದ್ದೆ. 2018ರಲ್ಲಿ ಜಿಡಿಪಿ 4.28 ಲಕ್ಷ ಕೋಟಿ ಇದ್ದರೆ, ಯುಪಿ 4.68 ಲಕ್ಷ ಕೋಟಿ ಹೂಡಿಕೆ ಪ್ರಸ್ತಾಪ ಪಡೆದುಕೊಂಡಿತ್ತು. ಈ ಬಾರಿ 23 ಲಕ್ಷ ಕೋಟಿ ಜಿಡಿಪಿ ಇದ್ದು, ಅದಕ್ಕಿಂತ ಹೆಚ್ಚಿನ ಹೂಡಿಕೆ ಪ್ರಸ್ತಾವನೆ ಪಡೆದೇ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಿಲಿಯಲ್ಲಿ ಕಾಡ್ಗಿಚ್ಚು: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ – 13 ಮಂದಿ ಸಾವು
ಡಬಲ್ ಇಂಜಿನ್ ಸರ್ಕಾರ ಮಾಡಿದ ಕೆಲಸಗಳು ಕಳೆದ 6 ವರ್ಷಗಳಲ್ಲಿ ರಾಜ್ಯವನ್ನ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ. 2018 ರಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ (Global Investors Summit) 4 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೂಡಿಕೆಗಳನ್ನು ಸ್ವೀಕರಿಸಲಾಗಿದೆ. ಇದರೊಂದಿಗೆ ಕಳೆದ 6 ವರ್ಷಗಳಲ್ಲಿ ಉತ್ತರ ಪ್ರದೇಶದ (Uttar Pradesh) ಆರ್ಥಿಕ ಬೆಳವಣಿಗೆಯು ಅಸಾಧಾರಣವಾಗಿದ್ದು, ಭಾರತದ ಪ್ರಮುಖ ಹೂಡಿಕೆ ತಾಣಗಳಲ್ಲಿ ಒಂದಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯವು ಹೆಚ್ಚಿನ ಆದಾಯ, ಫಲವತ್ತಾದ ಭೂಮಿ, ಉತ್ತಮ ಆಡಳಿತ, ಕಾನೂನು ಸುವ್ಯವಸ್ಥೆ, ಮಾನವ ಸಂಪತ್ತು, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ನೆಲೆಯನ್ನು ಹೊಂದಿದೆ. ಎಂಎಸ್‌ಎಂಇಗಳು (MSME) ಉತ್ತರಪ್ರದೇಶವನ್ನು ರಫ್ತು ಕೇಂದ್ರವಾಗಿ ಪರಿವರ್ತಿಸಿವೆ. ಅಲ್ಲದೇ ಕಳೆದ 6 ವರ್ಷಗಳಲ್ಲಿ ಹೊಸ ಎಕ್ಸ್‌ಪ್ರೆಸ್ ವೇಗಳು, ವಿಮಾನ ನಿಲ್ದಾಣಗಳು ಮತ್ತು ಮೆಟ್ರೋಗಳ ನಿರ್ಮಾಣವು ಹೂಡಿಕೆದಾರರನ್ನು ಹೆಚ್ಚಾಗಿ ಆಕರ್ಷಿಸುವಂತೆ ಮಾಡಿದೆ ಎಂದು ಶ್ಲಾಘಿಸಿದ್ದಾರೆ.
ಇದೇ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ `ಎಸ್ಪಿ ಸರ್ಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ’ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಎಸ್‌ಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೇ ಸ್ಯಾಮ್‌ಸಂಗ್ (Samsung) ಮತ್ತು TCS (ಟಾಟಾ ಕನ್ಸಲ್ಟೆನ್ಸಿ ಸರ್ವೀಸ್) ನಂತಹ ಕಂಪನಿಗಳು ರಾಜ್ಯವನ್ನು ತೊರೆಯುತ್ತಿದ್ದವು. ನಾನು ಅಧಿಕಾರಕ್ಕೆ ಬಂದ ನಂತರ ನಾನು ಎರಡೂ ಸಂಸ್ಥೆಗಳ ಅಧಿಕಾರಿಗಳನ್ನು ಕರೆದು ಸಮಸ್ಯೆ ಬಗೆಹರಿಸಿದೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
– ವೈಭವೀಕರಣ ಇಲ್ಲವೇ ತೋರ್ಪಡೆಗಾಗಿ ಒಪ್ಪಂದ ಮಾಡಿಕೊಂಡಿಲ್ಲ
– ಹಿಂದಿನ ಸರ್ಕಾರದ ನೀತಿಯಿಂದಾಗಿ ಯೋಜನೆಗಳ ಅನುಷ್ಠಾನ ವಿಳಂಬ
– ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ
– 59 ಯೋಜನೆ, 20,627.88 ಕೋಟಿ ಬಂಡವಾಳ ಹೂಡಿಕೆ, 80,764 ಜನರಿಗೆ ಉದ್ಯೋಗ
ಬೆಂಗಳೂರು: ನವೆಂಬರ್ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Global Investors Meet) ಮಾಡಿಕೊಂಡಿರುವ ಒಪ್ಪಂದಗಳು ಮುಂದಿನ 5 ವರ್ಷಗಳಲ್ಲಿ ಶೇ. 75ರಷ್ಟು ಅನುಷ್ಠಾನಕ್ಕೆ ಬರಲಿದ್ದು, ಯಾವುದೇ ರೀತಿಯ ಅನುಮಾನ ಬೇಡ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ (Murugesh Nirani) ಭರವಸೆ ನೀಡಿದರು.
ಮಂಗಳವಾರ ಬೆಂಗಳೂರು (Bengaluru) ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾವು ಕೇವಲ ವೈಭವೀಕರಣ ಮಾಡಿಕೊಳ್ಳಲು ಅಥವಾ ಬಂಡವಾಳ ಹೆಚ್ಚಿಸಿಕೊಳ್ಳಲು ಇಲ್ಲವೇ ಅಂಕಿ-ಸಂಖಿಗಳನ್ನು ತೋರಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿಲ್ಲ. ಯೋಜನೆಗಳನ್ನು ರಾಜ್ಯದಲ್ಲಿ ಪ್ರಾರಂಭಿಸುವವರಿಗೆ ಮಾತ್ರ ಅನುಮೋದನೆ ನೀಡಿದ್ದೇವೆ. ಇನ್ನು 5 ವರ್ಷದೊಳಗೆ ಶೇ. 75ರಷ್ಟು ಎಂಒಯು ಅನುಷ್ಠಾನಕ್ಕೆ ಬರಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ನವೆಂಬರ್ ತಿಂಗಳಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 9.81 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿವೆ. ಉದ್ದಿಮೆಗಳಿಗೆ ಬೇಕಾದ ನೀರು, ಭೂಮಿ, ವಿದ್ಯುತ್, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಮಿತಿಯನ್ನು ರಚಿಸಿದ್ದೇವೆ. ಇದು ನಮ್ಮ ನಿರೀಕ್ಷೆಗೂ ಮೀರಿ ಅನುಷ್ಠಾನವಾಗುತ್ತದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.
ರಾಜ್ಯದಲ್ಲಿ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದರೂ ನಾವು ಅವರ ಜೊತೆ ಎಂಒಯು ಮಾಡಿಕೊಂಡಿಲ್ಲ. ಈಗಾಗಲೇ ಮಾಡಿಕೊಂಡಿರುವ ತಿಳುವಳಿಕೆ ಒಪ್ಪಂದ ಪತ್ರಕ್ಕೆ (ಎಂಒಯು) ಆದ್ಯತೆ ಕೊಡುತ್ತೇವೆ. ಕೇವಲ ಅಂಕಿ-ಸಂಖ್ಯೆಗಳನ್ನು ಹೆಚ್ಚಿಸಲು ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ. ಅಂದರೆ ಯಾರು ನಮ್ಮ ರಾಜ್ಯದಲ್ಲಿ ಖಚಿತವಾಗಿ ಹೂಡಿಕೆ ಮಾಡಿ ಉದ್ಯಮಗಳನ್ನು ಆರಂಭಿಸುತ್ತಾರೋ ಅಂತಹವರಿಗೆ ಮಾತ್ರ ಆದ್ಯತೆ ಕೊಟ್ಟಿದ್ದೇವೆ. ಹಿಂದಿನ ಸರ್ಕಾರಗಳ ಕೆಲವು ತಪ್ಪುಗಳಿಂದಾಗಿ ಯೋಜನೆಗಳು ಅನುಷ್ಠಾನವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಶೇ. 90ರಷ್ಟು ಟಯರ್-2 ಮತ್ತು 3 ನಗರಗಳಲ್ಲಿ ಹೂಡಿಕೆಯಾಗಿವೆ. 2 ಮತ್ತು 3ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಗಮನಹರಿಸಿದ್ದೇವೆ ಎಂದರು.
ಕೈಗಾರಿಕಾ ಉದ್ದೇಶಗಳಿಗೆ ನಾವು ಯಾವುದೇ ಒಬ್ಬೇ ಒಬ್ಬ ರೈತರಿಂದಲೂ ಬಲವಂತವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳುತ್ತಿಲ್ಲ. ಸ್ವಯಂಪ್ರೇರಿತರಾಗಿ ಯಾರು ಜಮೀನು ಕೊಡಲು ಬರುತ್ತಾರೋ ಅಂತಹವರಿಗೆ ಮಾತ್ರ ಸ್ವಾಧೀನ ಪಡಿಸಿಕೊಳ್ಳುತ್ತಿದ್ದೇವೆ. ಕೃಷಿ ಯೋಗ್ಯ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.
ಕೆಲವು ಕಡೆ ರೈತರು ಸ್ವಯಂಪ್ರೇರಿತರಾಗಿ ಬಂದು ತಮ್ಮ ಜಮೀನನ್ನು ಮಾರುಕಟ್ಟೆ ದರದಂತೆ ಖರೀದಿ ಮಾಡಬೇಕೆಂದು ಮನವಿ ಮಾಡಿದ್ದಾರೆ. ಕೆಲವು ಕಡೆ ಜಮೀನೇ ಇಲ್ಲದ ರೈತರು ಪ್ರತಿಭಟನೆ ನಡೆಸುತ್ತಾರೆ. ಇದರ ಹಿಂದೆ ರಾಜಕೀಯ ಉದ್ದೇಶವೂ ಇದೆ. ರಾಜ್ಯದಲ್ಲಿ ಇದುವರೆಗೂ ನಾವು ಕೈಗಾರಿಕೆಗಳಿಗೆ ಕೇವಲ ಶೇ. 0.61 ಭೂಮಿಯನ್ನು ಮಾತ್ರ ಬಳಸಿಕೊಂಡಿದ್ದೇವೆ ಎಂದು ಅಂಕಿ ಸಂಖ್ಯೆಗಳನ್ನು ವಿವರಿಸಿದರು.
ಉದ್ಯೋಗ ಸೃಷ್ಟಿ: ಮಂಗಳವಾರ ಕರ್ನಾಟಕ ಉದ್ಯೋಗ ಮಿತ್ರದಲ್ಲಿ ನಡೆದ 136ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ 59 ಯೋಜನೆಗಳಿಂದ 20,627.88 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದ್ದು, ಇದರಿಂದ 80,764 ಜನರಿಗೆ ಉದ್ಯೋಗಾವಕಾಶ ಲಭಿಸಲಿವೆ. 50 ಕೋಟಿಗೂ ರೂ. ಹೆಚ್ಚು ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮದ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, 852.06 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 3,560 ಜನರಿಗೆ ಉದ್ಯೋಗ ಅವಕಾಶ ಲಭಿಸಲಿದೆ ಎಂದು ತಿಳಿಸಿದರು.
15 ಕೋಟಿ ರೂ. 50 ಕೋಟಿ ರೂ.ಯೊಳಗಿನ 48 ಹೊಸ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದ್ದು, ಒಟ್ಟು 923.9 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 4,444 ಜನರಿಗೆ ಉದ್ಯೋಗಗಳು ಸಿಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ನಾಲ್ಕು ಯೋಜನೆಗಳಿಂದ 852.73 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 1,460 ಜನರಿಗೆ ಉದ್ಯೋಗ ಅವಕಾಶ ಸಿಗಲಿವೆ ಎಂದು ವಿವರಿಸಿದರು.
ಎಥನಾಲ್ ಬಳಕೆಗೆ ಹೆಚ್ಚು ಒತ್ತು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೊರೆಯನ್ನು ತಗ್ಗಿಸಿ ಎಥನಾಲ್ ಬಳಕೆಗೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ಇದರಿಂದ ಪರಿಸರ ಮತ್ತು ನಾಗರಿಕ ಸಮಾಜದ ಮೇಲೆ ಉಂಟಾಗುತ್ತಿದ್ದ ದುಷ್ಪರಿಣಾಮಗಳು ಕಡಿಮೆ ಆಗಲಿವೆ ಎಂದು ನಿರಾಣಿ ಅವರು ತಿಳಿಸಿದರು.
ಈಗಾಗಲೇ ಡೀಸೆಲ್ ಇಂಜಿನ್ ವಾಹನಗಳ ಅಮದನ್ನು ಬಂದ್ ಮಾಡಲಾಗಿದೆ. ವಾಹನಗಳನ್ನು ಬಯೋ ಫ್ಯೂಲ್ ಅಂದರೆ ಸ್ಥಳೀಯವಾಗಿ ದೊರೆಯುವ ಎಥನಾಳ ತೈಲದಿಂದ ವಾಹನಗಳನ್ನು ಚಾಲನೆ ಮಾಡಲು ಒತ್ತು ನೀಡಲಾಗುವುದು ಎಂದರು.
ಆಮದನ್ನು ಕಡಿಮೆ ಮಾಡಿ ರಫ್ತು ಹೆಚ್ಚಿಸಲು ಒತ್ತು ನೀಡುತ್ತಿದ್ದು ಮೇಕ್ ಇನ್ ಇಂಡಿಯಾಗೆ ಅನುವು ಮಾಡಿ ಕೊಡುವುದರಿಂದ ರಾಜ್ಯ ಇಡೀ ಪ್ರಪಂಚದಲ್ಲಿ ಬಲಿಷ್ಠವಾಗಿ ಹೊರ ಹಿಮ್ಮಲಿದೆ ಎಂದು ಹೇಳಲು ಹರ್ಷಿಸುತ್ತೇನೆ. ಸರ್. ಎಂ. ವಿಶ್ವೇಶ್ವರಯ್ಯ ಅವರ ಕನಸನ್ನು ಸಾಕಾರ ಮಾಡುವತ್ತ ನಮ್ಮ ಸರ್ಕಾರ ಸಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಳ್ಳಿಹಕ್ಕಿ ಮರಳಿ ಗೂಡು ಸೇರುತ್ತಾ? ನಿನ್ನೆ ಖರ್ಗೆ, ಇವತ್ತು ಸಿದ್ದು ಭೇಟಿಯ ಗುಟ್ಟೇನು?
ಎಲ್ಲರಿಗೂ ಮೀಸಲಾತಿ ಸಿಗಲಿ : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ಸರ್ಕಾರ ಸಕಾರಾತ್ಮಕವಾದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗ ನೀಡುವ ವರದಿ ಮೇಲೆ ಮುಂದಿನ ಕ್ರಮವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಪಂಚಮಸಾಲಿ ಸಮುದಾಯದ ಜೊತೆಗೆ ವೀರಶೈವ, ಲಿಂಗಾಯತ ಸಮುದಾಯದಲ್ಲಿರುವ ಸಣ್ಣ ಸಣ್ಣ ಸಮುದಾಯಕ್ಕೂ ಮೀಸಲಾತಿ ಸಿಗಬೇಕೆಂಬುದು ನಮ್ಮ ಆಶಯ. ಈಗಲೂ ನಮ್ಮ ಸಮುದಾಯದಲ್ಲಿ ಕೆಲವರಿಗೆ ಸೂಕ್ತವಾದ ಸಂವಿಧಾನ ಬದ್ಧ ಸ್ಥಾನಮಾನಗಳು ಸಿಕ್ಕಿಲ್ಲ. ನನ್ನ ಪ್ರಕಾರ ಸಮಸ್ತ ವೀರಶೈವ ಸಮುದಾಯಕ್ಕೆ ಮೀಸಲಾತಿ ಅಗತ್ಯ ಎಂದು ನಿರಾಣಿ ಅಭಿಪ್ರಾಯಪಟ್ಟರು. ಹಿಂದುಳಿದ ವರ್ಗಗಳ ಆಯೋಗ ವರದಿ ಕೊಟ್ಟ ತಕ್ಷಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಒಂದೇ ವರ್ಷದಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಭಾರೀ ಏರಿಕೆ!
ಕಮಿಷನ್ ಆರೋಪ ರಾಜಕೀಯ ಆರೋಪ ಕುರಿತಾಗಿ ಮಾತನಾಡಿದ ಅವರು, ಇದೊಂದು ಆಧಾರರಹಿತ ಆರೋಪ. ಇದರಲ್ಲಿ ಸತ್ಯಾಂಶ ಇಲ್ಲ ಎಂದು ಪರೋಕ್ಷವಾಗಿ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು. ಮಾಧ್ಯಮ ಸಂವಾದದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್, ಪ್ರಧಾನ ಕರ್ಯದರ್ಶಿ ಬಿ.ಪಿ.ಮಲ್ಲಪ್ಪ , ಖಜಾಂಚಿ ಮೋಹನ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಹಾಜರಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ವಾಣಿಜ್ಯ ಕಲ್ಲಿದ್ದಲು ಬ್ಲಾಕ್‌ಗಳ ಹರಾಜು ಹಾಗೂ ಗಣಿಗಾರಿಕೆಯಲ್ಲಿ ಹೂಡಿಕೆ ಅವಕಾಶಗಳ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ನಡೆಯುತ್ತಿರುವ ಹೂಡಿಕೆದಾರರ ಸಮಾವೇಶವನ್ನು ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಉದ್ಘಾಟಿಸಿದರು. ಈ ವೇಳೆ ಹೂಡಿಕೆದಾರರನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಜಿಡಿಪಿಗೆ ಗಣಿಗಾರಿಕೆಯಿಂದಲೇ ಶೇ. 2.5ರಷ್ಟು ಕೊಡುಗೆ ನೀಡಲಿದ್ದೇವೆ ಎಂದು ಹೇಳಿದರು.
ಭಾರತದ (India) ಆರ್ಥಿಕತೆ ವೇಗವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ ಕಲ್ಲಿದ್ದಲು ಸೇರಿದಂತೆ ಗಣಿಗಾರಿಕೆಯಲ್ಲಿ ಹೂಡಿಕೆಗೆ ಸಾಕಷ್ಟು ಅವಕಾಶಗಳಿವೆ. 2047ರ ವೇಳೆಗೆ ಭಾರತ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಲಿದ್ದು, ಹೇರಳವಾದ ವಿದ್ಯುತ್ ಉತ್ಪಾದನೆ ಅಗತ್ಯವಾಗಿದೆ. ಸಹಜವಾಗಿ ಕಲ್ಲಿದ್ದಲು ಬೇಡಿಕೆ ಕೂಡ ಹೆಚ್ಚಲಿದ್ದು, ಹೂಡಿಕೆದಾರಿಗೆ ಕಲ್ಲಿದ್ದಲು ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದೇಶದ ಇಂಧನ ಹಾಗೂ ಖನಿಜ ಸಂಪತ್ತಿನ ಸುರಕ್ಷತೆಯನ್ನು ಕಾಪಾಡಲು ನಮ್ಮಲ್ಲಿರುವ ಕಲ್ಲಿದ್ದಲು ಹಾಗೂ ಖನಿಜ ಸಂಪನ್ಮೂಲದ ಸುಸ್ಥಿರ ಉಪಯೋಗ ಅವಶ್ಯಕವಾಗಿದೆ. ಈ ದೃಷ್ಟಿಯಿಂದ ಈ ಕ್ಷೇತ್ರದಲ್ಲಿ ಹೂಡಿಕೆಯ ಅವಶ್ಯಕತೆ ಇದ್ದು, ಆಸಕ್ತ ಹೂಡಿಕೆದಾರರೊಂದಿಗೆ ನಾವು ನಿರಂತರ ಚರ್ಚೆಯಲ್ಲಿ ತೊಡಗುವ ಉದ್ದೇಶದಿಂದಲೇ ಈ ಹೂಡಿಕೆದಾರರ ಸಮಾವೇಶ ನಡೆಸುತ್ತಿದ್ದೇವೆ ಎಂದು ಹೇಳಿದರು.
ಪ್ರಸ್ತುತ ನಡೆಯುತ್ತಿರುವ ಕಲ್ಲಿದ್ದಲು ಹಾಗೂ ಖನಿಜಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಹೂಡಿಕೆದಾರರಿಗೆ ಮುಕ್ತ ಆಹ್ವಾನ ನೀಡಲಾಗಿದೆ. ಸದ್ಯ ರಾಜ್ಯದಲ್ಲಿ 7 ಕಲ್ಲಿದ್ದಲು ಬ್ಲಾಕ್‌ಗಳ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಆರನೇ ಕಂತಿನ 141 ಕಲ್ಲಿದ್ದಲು ಬ್ಲಾಕ್‌ಗಳು ಕೂಡ ಹರಾಜಿಗೆ ಲಭ್ಯವಿದೆ ಎಂದರು ತಿಳಿಸಿದರು. ಇದನ್ನೂ ಓದಿ: ಕೇಸರಿ ಶಲ್ಯ ಹಾಕಿಕೊಂಡು ಸಿ.ಟಿ ರವಿ ಮನೆಗೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು: ಇದೇ ತಿಂಗಳ 3ರಂದು ಬೆಂಗಳೂರಿನಲ್ಲಿ (Bengaluru) ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.
ಮುಂಬೈನಲ್ಲಿ ಇಂದು ಕಲ್ಲಿದ್ದಲು ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬೈನಲ್ಲಿ (Mumbai) ನಡೆದ ಕಲ್ಲಿದ್ದಲು ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಇದೇ ಶನಿವಾರ ಬೆಂಗಳೂರಿನಲ್ಲಿ ಗಣಿಗಾರಿಕೆ ಕುರಿತಂತೆ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿದೆ. ಆಸಕ್ತರು ಸಮಾವೇಶದಲ್ಲಿ ಭಾಗವಹಿಸುವಂತೆ ಕೇಂದ್ರ ಸಚಿವ ಹೂಡಿಕೆದಾರರಿಗೆ ಆಹ್ವಾನಿಸಿದ್ದಾರೆ. ಮುಂಬೈ, ಬೆಂಗಳೂರಿನ ಹೂಡಿಕೆದಾರರ ಸಮಾವೇಶಗಳು ಭಾರತದಲ್ಲಿನ ಗಣಿಗಾರಿಕೆ ಕ್ಷೇತ್ರದ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು.
ವಾಣಿಜ್ಯ ಗಣಿ ಹರಾಜು ಮತ್ತು ದೇಶದ ಗಣಿಗಾರಿಕೆ ವಲಯದಲ್ಲಿ ವಿವಿಧ ಅವಕಾಶಗಳ ಕುರಿತು ಸಮಾವೇಶವನ್ನು ನಡೆಸಲಾಗುತ್ತಿದೆ. ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು, ವಿವಿಧ ವಾಣಿಜ್ಯ ಗಣಿಗಳ ಮೆಗಾ ಹರಾಜು ಕುರಿತು ಹೂಡಿಕೆದಾರರಿಗೆ ಮಾಹಿತಿ ಒದಗಿಸುವುದಾಗಿ ತಿಳಿಸಿದರು.
ಭಾರತವು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ವಿದ್ಯುತ್ ಉತ್ಪಾದನೆ ಅವಶ್ಯಕವಾಗಿದೆ. ವಿದ್ಯುತ್ ಉತ್ಪಾದನೆಗೆ ಬೇಕಾದ ಕಲ್ಲಿದ್ದಲು ಉತ್ಪಾದನೆ ಹೆಚ್ಚಳಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ಮುಂಬೈನಲ್ಲಿ ನಡೆದ ಸಮಾವೇಶದಲ್ಲಿ ಮಹಾರಾಷ್ಟ್ರಕ್ಕೆ 13 ಕಲ್ಲಿದ್ದಲು ಬ್ಲಾಕ್ಸ್‌ಗಳನ್ನು ನೀಡಲಾಗಿದೆ. ಇದರಲ್ಲಿ 5 ಗಣಿ ಬ್ಲಾಕ್ಸ್‌ಗಳು ಸಂಪೂರ್ಣವಾಗಿ ಅನ್ವೇಷಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕಿವಿಯ ಉದ್ದನೆಯ ಕೂದಲಿಗಾಗಿ ಗಿನ್ನಿಸ್ ವರ್ಲ್ಡ್ ದಾಖಲೆ ಬರೆದ ನಿವೃತ್ತ ಶಿಕ್ಷಕ
ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಬಳಕೆಯನ್ನು ಇನ್ನಷ್ಟು ಸುಧಾರಿಸುವ ಮಾರ್ಗಗಳ ಅಧಿಕಾರಿಗಳೊಂದಿಗೆ ಇದೇ ವೇಳೆ ಜೋಶಿ ಸಭೆ ನಡೆಸಿದರು. ಕಲ್ಲಿದ್ದಲು ವ್ಯಾಗನ್‌ಗಳ ಇಳಿಸುವಿಕೆಯ ಸಮಯವನ್ನು ಸುಧಾರಿಸಲು ಒತ್ತು ಸೇರಿದಂತೆ, ದೀರ್ಘಾವಧಿಯ ಕಲ್ಲಿದ್ದಲು ದಾಸ್ತಾನು ನಿರ್ಮಿಸಲು ಆರ್‌ಎಸ್‌ಆರ್ (ರೈಲ್ ಕಮ್ ಸೀ) ಮೋಡ್ ಅನ್ನು ಅನ್ವೇಷಿಸಲು ಸೂಚನೆ ನೀಡಿದರು. ಜೊತೆಗೆ ರೋಡ್ ಮೋಡ್ ಮತ್ತು ರೋಪ್‌ವೇ ಮೂಲಕ 40,000 TPD ಕಲ್ಲಿದ್ದಲನ್ನು ಎತ್ತಬಹುದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರತರಾಗುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದನ್ನೂ ಓದಿ: ಕರ್ತವ್ಯ ನಿರತ ಪೊಲೀಸ್ ಮುಖ್ಯಪೇದೆ ಹೃದಯಾಘಾತದಿಂದ ಸಾವು
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮೂರು ದಿನ ಬೆಂಗಳೂರಿನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶ(Global Investors Meet) ಕರ್ನಾಟಕ ಸರ್ಕಾರದ( Karnataka Government) ನಿರೀಕ್ಷೆ ಮೀರಿ ಯಶಸ್ವಿಯಾಗಿದೆ. ರಾಜ್ಯದಲ್ಲಿ 10.5 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆಯ ಒಪ್ಪಂದಗಳು ಏರ್ಪಟ್ಟಿದೆ.
"In 2000, investment signed Rs. 27,057 Cr, 44% realised. In 2010, MOU for Rs 3,94,768 Cr signed,14% realised. In 2012, Rs 6,77,158 Cr signed, 8% realized. In 2016, Rs 3.05 lakh Cr promised, 15% realized. Invest Karnataka won’t let it happen. 1/2 pic.twitter.com/KfaI0dptNj
ಈ ಪೈಕಿ 2.83 ಲಕ್ಷ ಕೋಟಿ ಮೊತ್ತದ ಯೋಜನೆಗಳ ಜಾರಿಗೆ ಏಕಗವಾಕ್ಷಿ ಯೋಜನೆಯಡಿ ರಾಜ್ಯ ಸರ್ಕಾರ ತಕ್ಷಣ ಅನುಮೋದನೆ ನೀಡಿದೆ. ಈ ಜಿಮ್(GIM) ಸಮಾವೇಶದಲ್ಲಿ 7 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುವ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿತ್ತು. ಇದನ್ನೂ ಓದಿ: ಜಿಮ್ ಸಮಾವೇಶ – ಮೊದಲ ದಿನವೇ ಕರ್ನಾಟಕದಲ್ಲಿ ಬಂಪರ್ ಹೂಡಿಕೆ
"We have a very good team of honest & experienced officers who have not only laid foundation for growth in future but have fired up our energies. From 50 km we would be surging ahead with a speed of 140km." CM : @BSBommai#InvestKarnataka2022#GIM2022pic.twitter.com/EOEB3FoDkL
ಕೊನೆಯ ದಿನವಾದ ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಖುಷಿ ಹಂಚಿಕೊಂಡರು.
ಬೊಮ್ಮಾಯಿ ಮಾತನಾಡಿ, ಕನ್ನಡಿಗರು ಬಂಡವಾಳ ಹೂಡಿ ಬಿಸ್ನೆಸ್ ಮ್ಯಾನ್ ಆಗಿ ವಿಶ್ವವಿಖ್ಯಾತರಾಗಬೇಕೆಂಬುದು ನಮ್ಮ ಆಶಯ. ಆ ಸಾಮರ್ಥ್ಯ ಕನ್ನಡಿಗರಲ್ಲಿ ಬರಬೇಕು ಎಂಬುದು ನಮ್ಮ ಉದ್ದೇಶ ಎಂದರು.
ಈ ಹೂಡಿಕೆಯಿಂದ 5 ಲಕ್ಷ ಜನರಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಮಾಡಲಾಗಿದೆ. ಜಿಮ್ ಸಮಾವೇಶದಲ್ಲಿ ಮೊದಲ ದಿನವೇ ಭರಪೂರ ಬಂಡವಾಳ ಹೂಡಿಕೆ ಹರಿದು ಬಂದಿತ್ತು. ಮೊದಲ ದಿನ 4.5 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತದ ಒಡಂಬಡಿಕೆಗಳಿಗೆ ಸಹಿ ಹಾಕಲಾಗಿತ್ತು.
Live Tv
[brid partner=56869869 player=32851 video=960834 autoplay=true]
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಬಗ್ಗೆ ಚಿತ್ರರಂಗದವರು ಮೆಚ್ಚುಗೆ ವ್ಯಕ್ತ ಪಡಿಸಿದ್ದು ವಿಶೇಷವಾದರೂ, ಅದಕ್ಕಿಂತ ವಿಶೇಷ ಅನಿಸಿದ್ದು ಕೇಂದ್ರ ಸಚಿವ ಪಿಯೂಶ್ ಗೋಯಲ್ (Piyush Goyal) ಮೆಚ್ಚಿಕೊಂಡ ರೀತಿಗೆ. ಜೊತೆಗೆ ಅದನ್ನು ಸ್ಪೂರ್ತಿಯಾಗಿ ತಗೆದುಕೊಳ್ಳುವಂತೆ ಹೂಡಿಕೆದಾರರಿಗೆ ಹೇಳಿದ್ದು. ಬೆಂಗಳೂರಿನಲ್ಲಿ (Bangalore) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶದಲ್ಲಿ ಸಚಿವರು ಚಿತ್ರವನ್ನು ಉದಾಹರಣೆಯಾಗಿ ನೀಡಿದ್ದಾರೆ.
ಜಾಗತಿಕ ಬಂಡವಾಳ ಹೂಡಿಕೆದಾರರ (Investors Conference) ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್, ‘ಕಾಂತಾರ ಸಿನಿಮಾವನ್ನು ಉಲ್ಲೇಖ ಮಾಡಿದ್ದಲ್ಲದೇ, ಚಿತ್ರವನ್ನು ಹೊಗಳಿದರು. ಇದೊಂದು ಸಣ್ಣ ಬಂಡವಾಳದಲ್ಲಿ ನಿರ್ಮಿಸಿದ ಚಿತ್ರ. ಸೂಪರ್ ಹಿಟ್ ಆಗಿದೆ. ಬ್ಲಾಕ್ ಬಸ್ಟರ್ ಚಿತ್ರ ಎನಿಸಿಕೊಂಡಿದೆ. ನೂರಾರು ಕೋಟಿ ಬಿಸ್ನೆಸ್ ಮಾಡಿದೆ’ ಎಂದು ಅವರು ಉಲ್ಲೇಖಿಸಿದರು. ಇದನ್ನೂ ಓದಿ:ಹೈವೋಲ್ಟೇಜ್ ಆ್ಯಕ್ಷನ್ ʻಪಠಾಣ್ʼ ಟೀಸರ್‌ನಲ್ಲಿ ಶಾರುಖ್ ಖಾನ್ ಗ್ರ್ಯಾಂಡ್ ಎಂಟ್ರಿ
ಹೂಡಿಕೆದಾರರ ಜೊತೆ ಮಾತನಾಡಿದ ಸಚಿವರು, ‘ಸ್ಥಳೀಯ ಸಂಸ್ಕೃತಿ, ಆಚರಣೆಯ ಕಥಾಹಂದರ ಇರುವ ಚಿತ್ರ ಈ ಚಿತ್ರದ ತಯಾರಿಕೆಗೆ ಸಣ್ಣ ಬಂಡವಾಳವನ್ನೇ ಹೂಡಲಾಗಿದೆ. ಆದರೆ, ಈಗ ಆ ಚಿತ್ರ 300 ಕೋಟಿಗೂ ಹೆಚ್ಚು ಗಳಿಸಿದೆ. ಕಾಂತಾರ ಚಿತ್ರವನ್ನು ನಾನೂ ವೀಕ್ಷಿಸಿದ್ದೇನೆ. ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸ್ಥಳಿಯ ಕಥೆಯನ್ನೇ ಜಾಗತಿಕ ಮಟ್ಟದಲ್ಲಿ ಹೇಳುವಂತೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ’ ಎಂದು ವಿವರಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರೋಗಗ್ರಸ್ಥ ನಿಗಮಗಳಲ್ಲಿ ಬಂಡವಾಳವನ್ನು ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ ಲಾಭದತ್ತ ಕೊಂಡೊಯ್ಯಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಡಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಸಿಮೆಂಟ್ ಕಾರ್ಪೋರೇಷನ್, ಮೈಶುಗರ್, ಮೈಸೂರು ಪೇಪರ್ ಮಿಲ್ಸ್ ಸೇರಿದಂತೆ ಹಲವಾರು ನಿಗಮಗಳು ಮತ್ತು ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ತಾವು ಎರಡು ದಿನಗಳ ಹಿಂದೆ ದೆಹಲಿಗೆ ಭೇಟಿ ನೀಡಿದ ವೇಳೆ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಇವುಗಳನ್ನು ಯಾವ ರೀತಿ ಪುನಶ್ಚೇತನ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.
ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಕೈಗಾರಿಕೆಗಳನ್ನು ಮುಚ್ಚಲು ಅವಕಾಶ ನೀಡುವುದಿಲ್ಲ. ಸಾಧ್ಯವಾದಷ್ಟು ಕೈಗಾರಿಕೆಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ರಾಜ್ಯದಲ್ಲಿರುವ ಎಲ್ಲ ನೈಸರ್ಗಿಕ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಕೈಗಾರಿಕಾ ಉದ್ಯೋಗ ಕ್ರಾಂತಿ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಜಮೀನನ್ನು ಉದ್ಯಮಿಗಳು ಯಾವ ಕಾರಣಕ್ಕೆ ಪಡೆದಿದ್ದಾರೋ ಅದೇ ಉದ್ದೇಶಕ್ಕೆ ಬಳಸಬೇಕು. ಒಂದು ವೇಳೆ ಇದು ಎಲ್ಲಿಯಾದರೂ ದುರುಪಯೋಗವಾಗಿದ್ದರೆ ಸಮೀಕ್ಷೆ ನಡೆಸಲು ಸೂಚನೆ ನೀಡಿರುವುದಾಗಿ ತಿಳಿಸಿದರು. ಕೆಐಎಡಿಬಿಯಿಂದ ಪಡೆದುಕೊಂಡಿರುವ ಜಮೀನನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ಬಳಸಲು ಅವಕಾಶವಿಲ್ಲ. ಅದನ್ನು ನಾವು ಸೇಲ್ ಡೀಡ್ ಮಾಡಿರುವುದಿಲ್ಲ. ಒಂದು ವೇಳೆ ಅನ್ಯ ಕಾರಣಗಳಿಗೆ ಜಮೀನನ್ನು ಬಳಸಿಕೊಂಡಿದ್ದರೆ ತನಿಖೆಗೆ ಆದೇಶಿಸುತ್ತೇನೆ ಎಂದು ನಿರಾಣಿ ಪ್ರಕಟಿಸಿದರು.
ಕೆಜಿಎಫ್‍ನಲ್ಲಿ ಕೈಗಾರಿಕಾ ಟೌನ್‍ಶಿಪ್: ಮುಂದಿನ ದಿನಗಳಲ್ಲಿ ಉತ್ತಮವಾದ ಕೈಗಾರಿಕಾ ವಾತಾವರಣ ಮೂಡಿಸುವ ಸಂಬಂಧ ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕೋಲಾರ ಜಿಲ್ಲೆ ಕೆಜಿಎಫ್ ಬಳಿ 3 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಇದೆ. ಈ ಹಿಂದೆ ಇಲ್ಲಿ ಹೆಚ್ಚಿನ ಪ್ರಮಾಣದ ಬಂಗಾರ ಚಿನ್ನ ಸಿಗುತ್ತಿತ್ತು. ಒಂದು ಟನ್ ಗಣಿಗಾರಿಕೆಗೆ 40 ಗ್ರಾಂ ಚಿನ್ನ ಸಿಗುತ್ತಿತ್ತು. ಈಗ ಅದರ ಪ್ರಮಾಣ ಕಡಿಮೆಯಾಗಿದೆ. ಸುಮಾರು 3,200 ಎಕರೆ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇಲ್ಲ ಎಂದು ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ. ಹೀಗಾಗಿ ಜಮೀನನ್ನು ನಮಗೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಬಂದಿದೆ. ಕೈಗಾರಿಕೆ ಬಳಕೆಗೆ ನೀಡಿದರೆ ನಾವು ಕೈಗಾರಿಕಾ ಟೌನ್‍ಶಿಪ್ ಮಾಡಲಿದ್ದೇವೆ ಎಂದು ಘೋಷಿಸಿದರು.
ಈ ಹಿಂದೆ ನಾನು ಐದು ವರ್ಷ ಕೈಗಾರಿಕಾ ಸಚಿವನಾಗಿದ್ದ ವೇಳೆ ಉತ್ತಮವಾದ ಕೆಲಸ ಮಾಡಿದ್ದೇನೆ. ದೇಶದಲ್ಲೇ ಮೊದಲ ಬಾರಿಗೆ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗಿತ್ತು. ಸುಮಾರು 11.8 ಲಕ್ಷ ಕೋಟಿ ರೂ. ಬಂಡವಾಳವನ್ನು ಹೂಡಲಾಗಿತ್ತು. ಇದರಿಂದ 15 ಲಕ್ಷ ವಿದ್ಯಾವಂತ ಯುವಕರಿಗೆ ಉದ್ಯೋಗ ನೀಡಲಾಗಿದೆ. ಮೊದಲ ಬಾರಿಗೆ ಲ್ಯಾಂಡ್ ಬ್ಯಾಂಕ್ ಸ್ಥಾಪಿಸಿ ಕೃಷಿಗೆ ಯೋಗ್ಯವಲ್ಲದ ಜಮೀನನ್ನು ವಶಪಡಿಸಿಕೊಂಡು ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತಿದ್ದೇವೆ. ಸುಮಾರು 1.25 ಲಕ್ಷ ರೂ. ಪರಿಹಾರವನ್ನು ನೀಡಲಾಗುತ್ತಿತ್ತು. ಇದರ ಪರಿಣಾಮ ಉದ್ದಿಮೆದಾರರಿಗೆ ಸುಲಭವಾಗಿ ಬಂಡವಾಳ ಹೂಡಿಕೆ ಮಾಡಲು ಅನುಕೂಲವಾಯಿತು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಮಟ್ಟದಲ್ಲಿ ಕೈಗಾರಿಕಾ ಅದಾಲತ್ ಗಳನ್ನು ನಡೆಸಲಾಗುವುದು. ನಮ್ಮ ಸರ್ಕಾರ ಉದ್ದಿಮೆದಾರರ ಮನೆ ಬಾಗಿಲಿಗೆ ಹೋಗಲಿದೆ. ಉದ್ದಿಮೆಯಾಗಿ ಉದ್ಯೋಗ ಎಂಬ ಕೈಗನ್ನಡಿಯೊಂದಿಗೆ ಐಟಿಐ, ಬಿಎ, ಬಿಕಾಂ, ಬಿಎಸ್ಸಿ, ಎಂಸ್ಸಿ, ಎಂಕಾಮ್, ಪಿಎಚ್‍ಡಿ ವಿದ್ಯಾವಂತರಿಗೆ ಉದ್ಯೋಗ ನೀಡುವುದೇ ನನ್ನ ಮೊದಲ ಗುರಿ ಎಂದು ಹೇಳಿದರು.
ಕೇಂದ್ರ ಸರ್ಕಾರವು ಇನ್ವೆಸ್ಟ್ ಇಂಡಿಯಾ ಎಂಬ ವಿನೂತನ ಯೋಜನೆಯನ್ನು ಆರಂಭಿಸಿದೆ. ದೇಶ, ವಿದೇಶಗಳಿಂದ ಬಂಡವಾಳ ಹೂಡಿಕೆ ಮಾಡಲು ಬರುವವರಿಗೆ ಇಲ್ಲಿ ಸಮಗ್ರವಾದ ಮಾಹಿತಿಯನ್ನು ನೀಡಲಾಗುತ್ತದೆ. ರಾಜ್ಯದಿಂದಲೂ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳು, ಇಲ್ಲಿನ ಮೂಲಭೂತ ಸೌಕರ್ಯ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಒದಗಿಸಲಾಗುವುದು. ಕರ್ನಾಟಕ ಕೂಡ ಇನ್ವೆಸ್ಟ್ ಇಂಡಿಯಾದಲ್ಲಿ ಪಾಲುದಾರ ರಾಜ್ಯವಾಗಿದೆ ಎಂದು ಮಾಹಿತಿ ಒದಗಿಸಿದರು.
ನಾನು ಇಂದು ವಿಧಾನಸೌಧದ ನನ್ನ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಕಾರ್ಯಾರಂಭ ಮಾಡುವ ಸಂದರ್ಭದಲ್ಲಿ ನನ್ನ ಸಹೋದ್ಯೋಗಿಗಳಾದ ಶಾಸಕರು, ವಿಧಾನಪರಿಷತ್ ಸದಸ್ಯರು, ಹಿರಿಯರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು, ಸೇರಿದಂತೆ ಅನೇಕರು ಆಗಮಿಸಿ ಶುಭಕೋರಿದ್ದು,ನನ್ನ ಜವಾಬ್ದಾರಿಯನ್ನು ಹೆಚ್ಚಿಸಿತು. @NiraniMurugeshpic.twitter.com/1RPHCipRaB
ಮೈಸೂರು ಲ್ಯಾಂಪ್ಸ್ ಬಳಿ 21 ಎಕರೆ ಜಾಗವಿದ್ದು, ಅಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದ್ದು, ಇದೇ 19ರಂದು ಭೂಮಿ ಪೂಜೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಎನ್‍ಜಿಎನಲ್ಲಿ ಜಮೀನಿದ್ದು, ಅಲ್ಲಿ ಪಾರ್ಕ್ ಮಾಡುವ ಉದ್ದೇಶವಿದೆ ಎಂದು ಹೇಳಿದರು. ಇದನ್ನೂ ಓದಿ: ಕ್ರಿಕೆಟ್ ಕಾಶಿ ಲಾರ್ಡ್ಸ್ನಲ್ಲಿ ಕನ್ನಡಿಗ ರಾಹುಲ್ ಅಬ್ಬರ
It was good to know senior officials & the responsibilities they hold in the Industries department. Held meeting with them at Karnataka Udyog Mitra office and discussed industrial rejuvenation, attracting investments, jobs to locals, reviving sick industries among other issues. pic.twitter.com/Y2YyJBxl2V
ಕೈಗಾರಿಕಾ ಇಲಾಖೆಯಲ್ಲಿ ನನ್ನ ಅನುಭವದ ಜತೆಗೆ ಹಿಂದಿನ ಸಚಿವರಾದ ಜಗದೀಶ್ ಶೆಟ್ಟರ್ ಅವರ ಅನುಭವದ ಮಾರ್ಗದರ್ಶನ ಪಡೆದುಕೊಂಡು ಉತ್ತಮವಾಗಿ ನಿರ್ವಹಣೆ ಮಾಡಲಾಗುವುದು. 2008 ಮತ್ತು 2013ರಲ್ಲಿ ಇಡೀ ಜಗತ್ತು ಕರ್ನಾಟಕದತ್ತ ನೋಡುವಂತೆ ಕೈಗಾರಿಕೆಯನ್ನು ನಿರ್ವಹಣೆ ಮಾಡಿದ್ದೆವು ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಉಳಿದ 20 ತಿಂಗಳ ಅವಧಿಯಲ್ಲಿ ಉತ್ತಮ ಕೆಲಸ ಮಾಡುತ್ತೇವೆ ಎಂದು ಹೇಳಿದ ಅವರು, ಗುಡಿ ಕೈಗಾರಿಕೆಯಿಂದ ಬೃಹತ್ ಕೈಗಾರಿಕೆವರೆಗೆ ಹೆಚ್ಚು ಆದ್ಯತೆ ಕೊಡಲಾಗುತ್ತದೆ. ಪ್ರಧಾನಿ ಮೋದಿ ಅವರು ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ಸ್ಟಾರ್ಟಪ್ ಗಳಿಗೆ ಉತ್ತೇಜನ ನೀಡಿದ್ದಾರೆ. ಅದೇ ನಿಟ್ಟಿನಲ್ಲಿ ನಾವು ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದು ಶಪಥ ಮಾಡಿದರು. ಇದನ್ನೂ ಓದಿ: ಸದ್ಯದಲ್ಲೇ ಕೆಜಿಎಫ್ ಬಳಿ ತಲೆ ಎತ್ತಲಿರುವ ಬೃಹತ್ ಕೈಗಾರಿಕಾ ಟೌನ್‍ಶಿಪ್
Assumed charge as Large and Medium Industries Minister at my office in Vidhana Soudha today after performing puja. I seek the support and cooperation of everyone. pic.twitter.com/3QcDzUCEHO
ಹೂಡಿಕೆದಾರರ ಸಮಾವೇಶ ಮುಂದೂಡಿಕೆ?: ರಾಜ್ಯದಲ್ಲಿ ಕೋವಿಡ್-19 ಇರುವ ಕಾರಣ ಬಹುನಿರೀಕ್ಷಿತ ಬಂಡವಾಳದಾರರ ಸಮಾವೇಶ ಮುಂದೂಡುವ ಮುನ್ಸೂಚನೆಯನ್ನು ಸಚಿವ ಮುರುಗೇಶ್ ನಿರಾಣಿ ನೀಡಿದ್ದಾರೆ. ಈಗಾಗಲೇ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಆರು ತಿಂಗಳ ಅವಧಿಯಲ್ಲಿ ಯಶಸ್ವಿಯಾಗಿ ಮಾಡಲು ಆಗುತ್ತದೆಯೋ ಇಲ್ಲವೋ ಎಂಬ ಅನುಮಾನುವನ್ನು ವ್ಯಕ್ತಪಡಿಸಿದರು. ಈ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.