Tag: ಹೃದಯಸ್ತಂಭನ

  • ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

    ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

    ಪಣಜಿ: ಹೃದಯಸ್ತಂಭನದಿಂದ (Cardiac Arrest) ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ (Ravi Naik) ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಇದನ್ನೂ ಓದಿ: Mandya | 60 ವರ್ಷದ ಹಿಂದೂ ಸ್ಮಶಾನ ಈಗ ಮುಸ್ಲಿಂ ಮಕಾನ್

    79 ವರ್ಷದ ರವಿ ನಾಯ್ಕ್ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇನ್ನು ರವಿ ನಾಯ್ಕ್ ನಿಧನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ. ರವಿ ನಾಯ್ಕ್ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್ ಸಾವಂತ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕೊಪ್ಪಳ | KPCC ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ – ಪಿಎಸ್‌ಐ ಸಸ್ಪೆಂಡ್

    ಇನ್ನು ರವಿ ನಾಯ್ಕ್ ನಿಧನಕ್ಕೆ ಪ್ರಧಾನಿ ಮೋದಿ ಕೂಡ ಸಂತಾಪ ಸೂಚಿಸಿದ್ದಾರೆ. ಸಚಿವ ರವಿ ನಾಯ್ಕ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕರ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಮೋದಿ ಎಕ್ಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌

  • ಮಧ್ಯಪ್ರದೇಶದಲ್ಲಿ ಲೋಕಸಭಾ ಅಭ್ಯರ್ಥಿ ನಿಧನ- ಚುನಾವಣೆ ಮುಂದೂಡಿಕೆ

    ಮಧ್ಯಪ್ರದೇಶದಲ್ಲಿ ಲೋಕಸಭಾ ಅಭ್ಯರ್ಥಿ ನಿಧನ- ಚುನಾವಣೆ ಮುಂದೂಡಿಕೆ

    ಭೋಪಾಲ್:‌ ಮಧ್ಯಪ್ರದೇಶದ ಬೆತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ (BSP) ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ (Ashok Bhalawi) ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

    ಪಕ್ಷದ ಪ್ರಕಾರ, ಭಾಲವಿಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ವಿಚಾರವನ್ನು ಬೆತುಲ್ ಡಿಎಂ ನರೇಂದ್ರ ಕುಮಾರ್ ಸೂರ್ಯವಂಶಿ ಖಚಿತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದೇವೆ. ಹೀಗಾಗಿ ಏಪ್ರಿಲ್‌ 26ರಂದು ನಡೆಯಬೇಕಿದ್ದ ಎರಡನೇ ಹಂತದ ಮತದಾನವನ್ನು ಮುಂದೂಡಿದ್ದೇವೆ ಎಂದು ಹೇಳಿದರು.

    ಇತ್ತ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನರೇಂದ್ರ ಸಿಂಗ್ ರಘುವಂಶಿ ಪ್ರತಿಕ್ರಿಯಿಸಿ, ಪ್ರಜಾಪ್ರತಿನಿಧಿ ಕಾಯ್ದೆಯಡಿ ಚುನಾವಣಾ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ಬೇತುಲ್‌ನ ಹಾಲಿ ಸಂಸದ ದುರ್ಗಾ ದಾಸ್ ಉಯಿಕೆ ಅವರನ್ನು ಬಿಜೆಪಿ ಮತ್ತೊಮ್ಮೆ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಕಾಂಗ್ರೆಸ್ ರಾಮು ಟೇಕಂ ಅವರನ್ನು ಕಣಕ್ಕಿಳಿಸಿದೆ. ಏಪ್ರಿಲ್ 26 ರಂದು ಟಿಕಮ್‌ಗಢ್, ದಾಮೋಹ್, ಖಜುರಾಹೊ, ಸತ್ನಾ, ರೇವಾ ಮತ್ತು ಹೊಶಂಗಾಬಾದ್ ಸ್ಥಾನಗಳೊಂದಿಗೆ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಬೇತುಲ್ ಮತದಾನ ಮಾಡಲು ನಿರ್ಧರಿಸಲಾಗಿತ್ತು.