Tag: ಹೃದಯ ಜ್ಯೋತಿ

  • ಹೃದಯಾಘಾತದಿಂದ ಸಾವು ತಡೆಗೆ ಸಿಗಲಿದೆ ಇಂಜಕ್ಷನ್: ಪುನೀತ್‌ ಹೆಸರಲ್ಲಿ ʻಹೃದಯ ಜ್ಯೋತಿʼ ಯೋಜನೆ ಜಾರಿ!

    ಹೃದಯಾಘಾತದಿಂದ ಸಾವು ತಡೆಗೆ ಸಿಗಲಿದೆ ಇಂಜಕ್ಷನ್: ಪುನೀತ್‌ ಹೆಸರಲ್ಲಿ ʻಹೃದಯ ಜ್ಯೋತಿʼ ಯೋಜನೆ ಜಾರಿ!

    ಧಾರವಾಡ: ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ಎಲ್ಲ ವಯೋಮಾನದವರಲ್ಲಿ ಹೃದಯಾಘಾತ (Heart Attack) ಕಾಣಿಸಿಕೊಂಡು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಸಾವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ದಿ. ಪುನೀತ್ ರಾಜಕುಮಾರ್‌ (Puneeth Rajkumar) ಅವರ ಹೆಸರಿನಲ್ಲಿ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ.

    ರಾಜ್ಯ ಸರ್ಕಾರ ಡಾ.ಪುನೀತ್ ರಾಜಕುಮಾರ್‌ ಅವರ ಹೆಸರಿನಲ್ಲಿ ʻಹೃದಯ ಜ್ಯೋತಿʼ (Hrudaya Jyoti) ಯೋಜನೆ ಜಾರಿಗೆ ತಂದಿದ್ದು, 2ನೇ ಹಂತದ ಈ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಧಾರವಾಡದ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಇದನ್ನೂ ಓದಿ: ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಇಂದೇ ಅಂತಿಮ? – ಯದುವೀರ್ ವಿರುದ್ಧ ಯಾರು ಕಣಕ್ಕೆ? 

    ಹೃದಯಾಘಾತವಾದ ಕೆಲವೇ ಸಮಯದಲ್ಲಿ ಬಡವರಿಗೂ ಲಭ್ಯವಾಗುವ ರೀತಿಯಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 28,000 ರೂ. ಮೌಲ್ಯದ Tenecteplase ಇಂಜಕ್ಷನ್‌ ಅನ್ನು ಉಚಿತವಾಗಿ ನೀಡುವ ಯೋಜನೆ ಇದಾಗಿದೆ. ಹೃದಯಾಘಾತವಾದ ಕೆಲ ಸಮಯದಲ್ಲಿ ತಕ್ಷಣ ಇಸಿಜಿ ಮಾಡುವ ಸ್ಟೆಮಿ ಕಿಟ್‌ ಅನ್ನೂ ಈ ಯೋಜನೆಯಡಿ ನೀಡಲಾಗುತ್ತಿದೆ. ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ಈ ಯೋಜನೆ ಜಾರಿ ಮಾಡಲಾಗಿದೆ.

    ಈಗಾಗಲೇ ರಾಜ್ಯದ 15 ಜಿಲ್ಲೆಯ 71 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ. 2ನೇ ಹಂತದಲ್ಲಿ ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ ಸೇರಿದಂತೆ 36 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಈ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು. ಇದನ್ನೂ ಓದಿ: ರಾಜಕೀಯ ಪಕ್ಷಗಳಿಗೆ 1,368 ಕೋಟಿ ನೀಡಿದ ಲಾಟರಿ ಕಿಂಗ್‌ ಪಿನ್‌ ಮಾರ್ಟಿನ್‌ ಯಾರು?

    ಹೃದಯಾಘಾತವಾದ ವ್ಯಕ್ತಿಗೆ Tenecteplase ಇಂಜಕ್ಷನ್ ನೀಡಿದರೇ ವ್ಯಕ್ತಿ ಬದುಕುವಂತೆ ಮಾಡುತ್ತದೆ, ನಂತರ ಆ ವ್ಯಕ್ತಿಗೆ ಮುಂದಿನ ಚಿಕಿತ್ಸೆ ನೀಡಬಹುದಾಗಿದೆ. ಇಂತಹ ಇಂಜಕ್ಷನ್ ಬಡವರಿಗೂ ಸಿಗಲಿ ಎಂದು ಈ ಯೋಜನೆ ಜಾರಿ ಮಾಡಲಾಗಿದೆ. ಬರುವ ದಿನಗಳಲ್ಲಿ ಈ ಇಂಜಕ್ಷನ್‌ ಅನ್ನು ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲೂ ಇಡುವ ಯೋಜನೆ ಸರ್ಕಾರದ ಮುಂದೆ ಇದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

  • ಪುನೀತ್‌ ಹೆಸರಲ್ಲಿ ಯೋಜನೆ ಜಾರಿ- Heart Attack ಆದ್ರೆ ಗೋಲ್ಡನ್  Hourನಲ್ಲಿ ಟ್ರೀಟ್ಮೆಂಟ್

    ಪುನೀತ್‌ ಹೆಸರಲ್ಲಿ ಯೋಜನೆ ಜಾರಿ- Heart Attack ಆದ್ರೆ ಗೋಲ್ಡನ್ Hourನಲ್ಲಿ ಟ್ರೀಟ್ಮೆಂಟ್

    –  ಚಿಕಿತ್ಸೆ ಹೇಗೆ?, ಖರ್ಚು ಎಷ್ಟು?, ಎಲ್ಲೆಲ್ಲಿ ಹಬ್‍ಗಳಿವೆ?

    ಬೆಂಗಳೂರು: ಇತ್ತಿಚೆಗೆ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿರುವುದೇ ಹೆಚ್ಚು. ಅಧ್ಯಯನದ ಪ್ರಕಾರ, ಹೃದಯಾಘಾತಕ್ಕೆ ಈಡಾಗುವರಲ್ಲಿ 35% ರಷ್ಟು ಮಂದಿ 40ರ ಆಸುಪಾಸಿನ ವಯಸ್ಸಿನವರು ಎಂಬುದು ಕಳವಳಿಕಾರಿ ಸಂಗತಿಯಾಗಿದೆ. ಹೃದಯಾಘಾತ (Heart Attack) ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸಬೇಕು. ಮತ್ತೆ ಗೋಲ್ಡನ್ ಹವರ್ ಒಳಗೆ, ಸಕಾಲಕ್ಕೆ ಅವರಿಗೆ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ (Health Department) ಮಹತ್ವದ ಹೆಜ್ಜೆಯಿಟ್ಟಿದೆ.

    ಪುನೀತ್ ರಾಜಕುಮಾರ್ (Dr. Puneeth Raj Kumar) ಅವರ ಹೆಸರಿನಲ್ಲೇ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನ ಅನುಷ್ಠಾನಕ್ಕೆ ತರಲಾಗುತ್ತಿದೆ. ಎರಡು ರೀತಿಯಲ್ಲಿ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದೆ. Hub & Spoke ಮಾದರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ AED ಸಾಧನಗಳಗಳನ್ನ ಅಳವಡಿಸುವ ಯೋಜನೆಯನ್ನು ಇಲಾಖೆ ಇಟ್ಟುಕೊಂಡಿದೆ.

    ಚಿಕಿತ್ಸೆ ಹೇಗೆ?, ಖರ್ಚು ಎಷ್ಟು..?: ಯಾರಿಗೆ ಎದೆನೋವು ಕಾಣಿಸಿಕೊಂಡ್ರೂ, ಅವರು Spoke ಕೇಂದ್ರಗಳಿಗೆ ಭೇಟಿ ನೀಡಿದರೆ ತಕ್ಷಣ ECG ಮಾಡಲಾಗುತ್ತೆ. ಜೊತೆಗೆ AIತಂತ್ರಜ್ಞಾನದ ಮೂಲಕ ಅವರ ಪರಿಸ್ಥಿತಿ ಕ್ರಿಟಿಕಲ್ ಇದೆಯಾ, ಇಲ್ವಾ ಅನ್ನೋದನ್ನ ಸ್ಥಳದಲ್ಲಿಯೇ ನಾಲ್ಕರಿಂದ ಐದು ನಿಮಿಷದೊಳಗೆ ಪತ್ತೆ ಹಚ್ಚಲಾಗುತ್ತೆ. Tricog ಸಂಸ್ಥೆಯವರ AI ತಂತ್ರಜ್ಞಾನದ ಸಹಾಯ ಪಡೆದು ಕ್ರಿಟಿಕಲ್ ಅಥವಾ ನಾನ್ ಕ್ರಿಟಿಕಲ್ ಅನ್ನೋದನ್ನ ಪತ್ತೆ ಹಚ್ಚುವ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದನ್ನೂ ಓದಿ: BMTC ಸಾರಥಿಗಳ ಹಾರ್ಟ್ ಇನ್ ಡೇಂಜರ್- ಜಯದೇವ ವೈದ್ಯರ ವರದಿಯಲ್ಲಿ ಬಹಿರಂಗ

    ಯಾರು ಕ್ರಿಟಿಕಲ್ ಹಂತದಲ್ಲಿದ್ದಾರೆ, ಅವರಿಗೆ  ಸ್ಫೋಕ್ ಕೇಂದ್ರಗಳಲ್ಲೇ ಅಂದ್ರೆ ತಾಲೂಕು ಆಸ್ಪತ್ರೆಗಳಲ್ಲೇ ಉಚಿತವಾಗಿ Tenecteplase ಇಂಜೆಕ್ಷನ್ ನ ಕೊಡಲಾಗುತ್ತೆ. ಈ ಇಂಜೆಕ್ಷನ್ ಹಠಾತ್ ಹೃದಯಾಘಾತ ಆಗುವುದನ್ನ ತಡೆಯುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಹೀಗಾಗಿ ಕ್ರಿಟಿಕಲ್ ಹಂತದಲ್ಲಿ ಇರುವವರಿಗೆ ತಕ್ಷಣಕ್ಕೆ ಹಾರ್ಟ್ ಅಟ್ಯಾಕ್ ಆಗದಂತೆ ನೋಡಿಕೊಳ್ಳುವಲ್ಲಿ ಈ ಚಿಕಿತ್ಸೆ ಸಹಕಾರಿಯಾಗಲಿದೆ. ಒಂದು Tenecteplase‌ ಚುಚ್ಚುಮದ್ದಿಗೆ ಖಾಸಗಿ ಆಸ್ಪತ್ರೆಗಳಲ್ಲಿ 30 ರಿಂದ 45 ಸಾವಿರ ಚಾರ್ಜ್ ಮಾಡ್ತಿದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಇಂಜೆಕ್ಷನ್ ಅನ್ನ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

    ತಾಲೂಕು ಅಥವಾ ಜಿಲ್ಲಾಸ್ಪತ್ರೆಯ ಸ್ಪೋಕ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗೆ ನಾವು ಸೂಪರ್ ಸ್ಪಾಷಾಲಿಟಿ ಆಸ್ಪತ್ರೆಯ ಹಬ್ ಕೇಂದ್ರಗಳಿಗೆ ಅಂಬುಲೆನ್ಸ್ ಸಹಾಯದೊಂದಿಗೆ ಕಳಿಸಿಕೊಡುವುದು. ಅಲ್ಲಿ ರೋಗಿಗಳಿಗೆ ಹೆಚ್ಚಿನ ವೈದ್ಯಕೀಯ ಸೇವೆಯನ್ನ ಕಲ್ಪಿಸಲಾಗುತ್ತೆ. ಆಂಜಿಯೋಗ್ರಾಮ್ ಅಥವಾ ಆಂಜಿಯೋಪ್ಲ್ಯಾಸ್ಟಿ, ಸೇರಿದಂತೆ ಉನ್ನತ ಮಟ್ಟದ ಹೃದಯ ಚಿಕಿತ್ಸೆಯನ್ನ ಈ Hub ಕೇಂದ್ರಗಳಲ್ಲಿ ಪಡೆಯಬಹುದಾಗಿದೆ.

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ Hub ಗಳಲ್ಲೂ ಕೂಡಾ ಬಿ.ಪಿ.ಎಲ್ ಕಾರ್ಡುದಾರರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. APL ಕಾರ್ಡುದಾರರು ಆರೋಗ್ಯ ಕರ್ನಾಟಕ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಅಡಿಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಜಯದೇವ ಹೃದ್ರೋಗ ಸಂಸ್ಥೆಯ ಬೆಂಗಳೂರು, ಮೈಸೂರು ಮತ್ತು ಕಲಬುರಗಿ ಆಸ್ಪತ್ರೆಗಳ ಮೂರು ಹಬ್ ಗಳ ವ್ಯಾಪ್ತಿಗೆ 45 ಸ್ಪೋಕ್ ಕೇಂದ್ರಗಳನ್ನ ಸಂಪರ್ಕಿಸಲಾಗಿದೆ. ಇವುಗಳಲ್ಲಿ 35 ತಾಲೂಕು ಆಸ್ಪತ್ರೆಗಳು ಮತ್ತು 10 ಜಿಲ್ಲಾಸ್ಪತ್ರೆಗಳು ಸೇರಿವೆ.

    ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಧಾರವಾಡ,  ಬಾಗಲಕೋಟೆ, ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಕಲಬುರಗಿಯಲ್ಲಿ ಹಬ್‌ಗಳಿವೆ. ಒಟ್ಟಾರೆ ರಾಜ್ಯದ 31 ಜಿಲ್ಲೆಗಳ ವ್ಯಾಪ್ತಿಯಲ್ಲಿ 10 ಹಬ್ಸ್, ಹಾಗೂ 85 ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಸ್ಪೋಕ್ ಕೇಂದ್ರಗಳನ್ನ ರೂಪಿಸುವ ಮೂಲಕ, ಹಠಾತ್ ಹೃದಯಘಾತಕ್ಕೆ ಒಳಗಾಗುವವರ ಜೀವ ಉಳಿಸುವಂತ ಒಂದು ಪರಿಣಾಮಕಾರಿ ಚಿಕಿತ್ಸಾ ಕಾರ್ಯಕ್ರಮವನ್ನ ಪುನಿತ್ ರಾಜಕುಮಾರ್ ಹೆಸರಿನಲ್ಲಿ ಜಾರಿಗೆ ತರುತ್ತಿದೆ.

    ಪುನೀತ್ ರಾಜಕುಮಾರ್ ಹೃದಯಜ್ಯೋತಿ ಕಾರ್ಯಕ್ರಮದ ಇನ್ನೊಂದು ಭಾಗವಾಗಿ 2 ಕೋಟಿ ವೆಚ್ಚದಲ್ಲಿ AED (Automated External Defibrillator) ಸಾಧನಗಳನ್ನ ಅಳವಡಿಸಲು ನಿರ್ಧರಿಸಲಾಗಿದೆ. ಬಸ್ ಸ್ಟಾಂಡ್, ರೈಲ್ವೇ ಸ್ಟೇಷನ್ಸ್, ಏರ್ ಪೋರ್ಟ್, ವಿಧಾನಸೌಧ, ಕೋರ್ಟ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಯಂ ಚಾಲಿತ ಡಿಫಿಬ್ರಿಲೇಟರ್ ಗಳನ್ನ ಅಳವಡಿಸಲಾಗುತ್ತಿದೆ. ಒಂದು AED ಸಾಧನ ಖರೀದಿಗೆ 1 ಲಕ್ಷದ 10 ಸಾವಿರದ ವರೆಗೆ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಈ ಸಾಧನಗಳನ್ನ ಖರೀದಿ ಪ್ರಗತಿಯಲ್ಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]