Tag: ಹೆಚ್‌ಎಸ್‌ಆರ್‌ಪಿ

  • HSRP ಅಳವಡಿಕೆಗೆ ವಿಧಿಸಿದ್ದ ಗಡುವು ಮತ್ತೆ ವಿಸ್ತರಣೆ

    HSRP ಅಳವಡಿಕೆಗೆ ವಿಧಿಸಿದ್ದ ಗಡುವು ಮತ್ತೆ ವಿಸ್ತರಣೆ

    – ಡಿ.31 ರ ವರೆಗೆ ಅವಧಿ ವಿಸ್ತರಿಸಿದ ಸರ್ಕಾರ

    ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದೆ.

    ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಈಗ ಡಿಸೆಂಬರ್ 31 ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ – ಅಶೋಕ್‌ಗೆ ಡಿಕೆಶಿ ಪ್ರಶ್ನೆ

    ಇದೀಗ ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದ ವರೆಗೆ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು.

    ಸದ್ಯ 55 ಲಕ್ಷ ವಾಹನಗಳು ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿದ್ದಾರೆ. ಈ ಮೂಲಕ ಐದನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಿಸಿರುವ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ‘ಪಬ್ಲಿಕ್ ಟಿವಿ’ಗೆ ಮಾಹಿತಿ ಕೊಟ್ಟಿದ್ದಾರೆ. ಇದನ್ನೂ ಓದಿ: `ನಮ್ಮ ಮೆಟ್ರೋ’ದಿಂದ ಬಿಗ್ ಅಪ್ಡೇಟ್ – ಒಂದೂವರೆ ವರ್ಷದೊಳಗೆ ಬರಲಿದ್ಯಾ ಹೆಬ್ಬಾಳ-ಏರ್‌ಪೋರ್ಟ್ ಮೆಟ್ರೋ?

  • HSRP ನಂಬರ್‌ ಪ್ಲೇಟ್‌ ಅಳವಡಿಕೆ – ನ.20 ರವರೆಗೆ ಅವಧಿ ವಿಸ್ತರಣೆ

    ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್‌ ಸಿಕ್ಕಿದೆ. ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

    ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.

    ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್‌ ತಪ್ಪಿದೆ.

  • ಸೆ.16ರಿಂದ HSRP ಕಡ್ಡಾಯ – ನಂಬರ್‌ಪ್ಲೇಟ್ ಅಳವಡಿಸದಿದ್ದರೇ 500 ರೂ. ದಂಡ

    ಸೆ.16ರಿಂದ HSRP ಕಡ್ಡಾಯ – ನಂಬರ್‌ಪ್ಲೇಟ್ ಅಳವಡಿಸದಿದ್ದರೇ 500 ರೂ. ದಂಡ

    ಬೆಂಗಳೂರು: ಇಷ್ಟು ದಿನ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ (HSRP Number Plate) ಸರ್ಕಾರ ಮತ್ತು ಕೋರ್ಟ್ ಗಡುವು ನೀಡಿತ್ತು. ಪದೇ ಪದೇ ಗಡುವು ವಿಸ್ತರಣೆಯಾಗುತ್ತಾ ಬಂದಿತ್ತು. ಇದೀಗ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ನೀಡಿರುವ ಡೆಡ್ ಲೈನ್‌ಗೆ ಕೇವಲ ಒಂದು ವಾರ ಮಾತ್ರ ಬಾಕಿ ಇದೆ.

    ಸೆಪ್ಟೆಂಬರ್ 15ಕ್ಕೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊಟ್ಟಿರುವ ಡೆಡ್‌ಲೈನ್ ಮುಗಿಯಲಿದೆ. ರಾಜ್ಯದಲ್ಲಿ ಒಟ್ಟಾರೆ 2 ಕೋಟಿಯಷ್ಟು ವಾಹನಗಳಿದ್ದು, ಇದರಲ್ಲಿ ಇಲ್ಲಿಯವರೆಗೆ 51 ಲಕ್ಷ ವಾಹನಗಳು ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಹಾಕಿಸಿದ್ದಾರೆ. ಉಳಿದ 1.49 ಕೋಟಿ ವಾಹನಗಳು ಇನ್ನೂ ಹೆಚ್‌ಎಸ್‌ಆರ್‌ಪಿ ಹಾಕಿಸಿಲ್ಲ. ಸೆ.16ರಿಂದಲೇ ನಮ್ಮ ಇಲಾಖೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಸ್ಪೆಷಲ್‌ ಡ್ರೈವ್  ಮಾಡಿ 500 ರೂ. ದಂಡ ಹಾಕುತ್ತೇವೆ. ಮೊದಲ ಸಲ 500 ರೂ. ದಂಡ ವಿಧಿಸಿದರೇ ಎರಡನೇ ಸಲಕ್ಕೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ (Department of Transport)‌ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತ

    ಕೇಂದ್ರ ಸರ್ಕಾರ ಇಡೀ ದೇಶದಲ್ಲೇ ಏಕ ಮಾದರಿಯ ನಂಬರ್ ಪ್ಲೇಟ್ ಇರಬೇಕೆಂಬ ದೃಷ್ಟಿಯಿಂದ ಮತ್ತು ಅಪರಾಧ ಕೃತ್ಯಗಳ ಬಗ್ಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್‌ನಿಂದ ಮಾಹಿತಿ ಸಿಗಲಿದೆ ಎಂಬ ಉದ್ದೇಶದಿಂದ ಹೆಚ್‌ಎಸ್‌ಆರ್‌ಪಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದನ್ನು ಜನ ಇನ್ನೂ ತಮ್ಮ ವಾಹನಗಳಿಗೆ ಹಾಕಿಸಿಕೊಳ್ಳದೇ ಸುಮ್ಮನೇ ಇದ್ದು ಕೊನೇ ಗಳಿಗೆಯಲ್ಲಿ ಆನ್‌ಲೈನ್‌ನಲ್ಲಿ ಬುಕ್ ಮಾಡೋದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಒಂದು ವಾರ ಕಾಲಾವಕಾಶ ಇದೆ.ಬಳಿಕ ನಾವು ದಂಡ ಹಾಕುತ್ತೇವೆ. ಜೊತೆಗೆ ಟ್ರಾಫಿಕ್ ಪೊಲೀಸರೂ (Traffic Police) ಸಹ ಇದಕ್ಕೆ ದಂಡ ಹಾಕುತ್ತಾರೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಇದನ್ನೂ ಓದಿ: 3 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ