Tag: ಹೆಚ್‌ಸಿ ಮಹದೇವಪ್ಪ

  • ಸಂಪುಟ ಸಭೆಯಲ್ಲಿ ಮಹದೇವಪ್ಪ ಕೂಗಾಟ, ಬಾಕಿ ಕೇಳಿದ್ದಕ್ಕೆ ಜಾರ್ಜ್ ಮೇಲೆ ಸಿಟ್ಟು – ಸಿಎಂ ಹೇಳಿದ್ದೇನು?

    ಸಂಪುಟ ಸಭೆಯಲ್ಲಿ ಮಹದೇವಪ್ಪ ಕೂಗಾಟ, ಬಾಕಿ ಕೇಳಿದ್ದಕ್ಕೆ ಜಾರ್ಜ್ ಮೇಲೆ ಸಿಟ್ಟು – ಸಿಎಂ ಹೇಳಿದ್ದೇನು?

    ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಇವತ್ತು ಸಿಎಂ ಆಪ್ತ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ರೋಷಾವೇಶ ಜೋರಾಗಿತ್ತು ಎನ್ನಲಾಗಿದೆ. ಇಬ್ಬರು ಸಿಎಂ ಆಪ್ತ ಸಚಿವರ ನಡುವೆ ಕಾವೇರಿದ ಚಕಮಕಿ ಆಗಿದ್ದು, ಸಿಎಂ (Siddaramaiah) ಇಬ್ಬರನ್ನ ಸಮಾಧಾನಪಡಿಸಿದ್ರು ಎಂದು ಮೂಲಗಳಿಂದ ಗೊತ್ತಾಗಿದೆ.p

    ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಜಟಾಪಟಿ ನಡೆದಿದ್ದು, ನಾನು ಎದ್ದು ಹೊರಟೇ ಬಿಡುತ್ತೇನೆ ಎಂದು ಹೆಚ್.ಸಿ ಮಹದೇವಪ್ಪ ಕೂಗಾಡಿದ್ದಾರೆ. ಎಸ್‌ಸಿಪಿ, ಟಿಎಸ್‌ಪಿ ಹಣ ಸರಿಯಾಗಿ ಬಳಕೆ ಆಗುತ್ತಿಲ್ಲ, ಹಂಚಿಕೆ ಆದ ಹಣವನ್ನ ಬೇರೆ ಕಡೆ ಬಳಕೆ ಮಾಡುತ್ತಿದ್ದೀರಿ. ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ. ಈಗ ಹಣ ಕೊಡಿ ಅಂದ್ರೆ ಅಂತಾ ಜೋರು ದ್ಚನಿಯಲ್ಲಿ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ

    ಸ್ವತಃ ಸಿಎಂ ಅವರ ಬಳಿಯೂ ಕೂಗಾಡಿದ್ದಾರೆ ಎನ್ನಲಾಗಿದೆ. ಏಕಾಏಕಿ ಮಹದೇವಪ್ಪ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆಗಿದ್ದರು. ಆದಾದ ಬಳಿಕ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ ನಾವು ಮೂವರು ಕುಳಿತು ಮಾತಾಡೋಣ. ವಿದ್ಯುತ್ ಶುಲ್ಕ ಹೆಚ್ಚಳದ ಬಗ್ಗೆ ತೀರ್ಮಾನ ಮಾಡೋಣ ಎಂದು ಹೇಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉಡುಪಿ ಸೇರಿ ಹಲವೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು: ಕ್ಯಾಬಿನೆಟ್ ಅಸ್ತು

  • ಕಾಂಗ್ರೆಸ್‌ನಲ್ಲಿ ಏನೇ ಆದರೂ ಹೈಕಮಾಂಡ್ ತೀರ್ಮಾನವೆ ಅಂತಿಮ: ಹೆಚ್.ಸಿ ಮಹದೇವಪ್ಪ

    ಕಾಂಗ್ರೆಸ್‌ನಲ್ಲಿ ಏನೇ ಆದರೂ ಹೈಕಮಾಂಡ್ ತೀರ್ಮಾನವೆ ಅಂತಿಮ: ಹೆಚ್.ಸಿ ಮಹದೇವಪ್ಪ

    ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಏನೇ ತೀರ್ಮಾನ ಆಗಬೇಕಾದರೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ (HC Mahadevappa) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಭೇಟಿ ಬಳಿಕ ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಹಾಗೂ ನಮ್ಮ ಸಂಬಂಧ ಮೂವತ್ತು ವರ್ಷಕ್ಕಿಂತ ಹೆಚ್ಚಿನದು. ಸತೀಶ್ ಜಾರಕಿಹೊಳಿ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿ ಮಾಡಿ ಟನಲ್ ಬಗ್ಗೆ ಎಲ್ಲಾ ಚರ್ಚೆ ಮಾಡಿದರು. ದೆಹಲಿಗೆ ಹೋದಾಗ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವುದು ಎಲ್ಲಾ ಸಹಜ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪವರ್ ಶೇರಿಂಗ್ ಏನೇ ಅಂದರು ಹೈಕಮಾಂಡ್ ಏನು ಅಭಿಪ್ರಾಯ ಹೇಳುತ್ತೋ ಅದೇ ಅಂತಿಮ. ನಮ್ಮಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು. ಇದನ್ನೂ ಓದಿ: ಸಿಎಸ್‌ಕೆ ಸೋಲಿಸಿ ಬೆಂಗಳೂರಿಗೆ ಆರ್‌ಸಿಬಿ ಟೀಂ ಗ್ರ್ಯಾಂಡ್‌ ಎಂಟ್ರಿ – ಏರ್‌ಪೋರ್ಟ್‌ನಲ್ಲಿ ಫ್ಯಾನ್ಸ್ ಜಯಘೋಷ

    ರಾಜೇಂದ್ರ ಅವರು ಕಂಪ್ಲೆಂಟ್ ಕೊಟ್ಟಿದ್ದಾರೆ. ಪ್ರಭಾವಿ ಯಾರೂ ಎಂದು ನಾನು ಹೇಗೆ ಹೇಳೋಕಾಗುತ್ತದೆ. ತನಿಖೆ ಆಗಲಿ, ಸತ್ಯಾಸತ್ಯತೆ ಗೊತ್ತಾಗುತ್ತದೆ. ಸಂಪುಟ ಪುನರ್ ರಚನೆ ಹೈಕಮಾಂಡ್‌ಗೆ ಬಿಟ್ಟಿದ್ದು. ಶುಕ್ರವಾರ ಸಿಎಂ ಭೇಟಿ ಮಾಡಿದ್ದೆ. ದಲಿತ ಸಮಾವೇಶದ ಬಗ್ಗೆ ಚರ್ಚೆ ಆಗಿಲ್ಲ, ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಮಾತನಾಡಿದೆ ಅಷ್ಟೇ ಎಂದು ತಿಳಿಸಿದರು. ಇದನ್ನೂ ಓದಿ: ಯುಗಾದಿ, ರಾಮನವಮಿ ಹಲಾಲ್ ಮುಕ್ತ ಆಗಲಿ: ಪ್ರಮೋದ್ ಮುತಾಲಿಕ್

  • ಫೆ.10, 11, 12ರಂದು ಟಿ.ನರಸೀಪುರದಲ್ಲಿ ಕುಂಭಮೇಳ: ಹೆಚ್‌ಸಿ ಮಹದೇವಪ್ಪ

    ಫೆ.10, 11, 12ರಂದು ಟಿ.ನರಸೀಪುರದಲ್ಲಿ ಕುಂಭಮೇಳ: ಹೆಚ್‌ಸಿ ಮಹದೇವಪ್ಪ

    ಮೈಸೂರು: ಫೆ.11, 11 ಮತ್ತು 12ರಂದು ಮೂರು ನದಿಗಳ ಸಂಗಮದ ಸ್ಥಳವಾದ ಟಿ.ನರಸೀಪುರದಲ್ಲಿ (T Narasipura) ಕುಂಭಮೇಳ (Kumbh Mela) ನಡೆಯಲಿದೆ ಎಂದು ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ಹೇಳಿದ್ದಾರೆ.

    ಟಿ.ನರಸೀಪುರದಲ್ಲಿ ಕುಂಭಮೇಳ ಹಿನ್ನೆಲೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭಮೇಳ ಜರುಗಲಿದೆ. ಕುಂಭಮೇಳಕ್ಕೆ 10 ಕೋಟಿ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಸಲ್ಲಿಸಿದೆ. ಕಳೆದ ಬಾರಿ 4 ಕೋಟಿ ಕೊಟ್ಟಿದ್ದರು. ಈ ಬಾರಿ 5 ರಿಂದ 6 ಕೋಟಿ ಸರ್ಕಾರ ಕೊಡಬಹುದು. ಮೂರು ದಿನಗಳ ಕಾಲ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಇದನ್ನೂ ಓದಿ: ಬಿಜೆಪಿಯಲ್ಲಿ ತೀವ್ರಗೊಂಡ ಬಣ ಕಚ್ಚಾಟ – ವಸ್ತುಸ್ಥಿತಿ ವರದಿ ಪಡೆಯಲು ರಾಜ್ಯಕ್ಕೆ ಬಿಎಲ್ ಸಂತೋಷ್ ಎಂಟ್ರಿ

    ಪುಣ್ಯಸ್ನಾನಕ್ಕೆ ನೀವು ಭಾಗಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಡೈಲಿ ಪುಣ್ಯ ಸ್ನಾನ ಮಾಡುತ್ತಿದ್ದೇನೆ. ಧಾರ್ಮಿಕ ಆಚರಣೆಗಳಿಗೆ ವೈಯಕ್ತಿಕ ವಿರೋಧ ಇಲ್ಲ. ಅವರವರ ಧಾರ್ಮಿಕ ನಂಬಿಕೆ ಆಚರಿಸುವುದು ಸಂವಿಧಾನತ್ಮಕ ಹಕ್ಕು ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ವಾರದಲ್ಲಿ ಇಬ್ಬರಿಗೆ ಕೆಎಫ್‌ಡಿ ಸೋಂಕು – ಆತಂಕದಲ್ಲಿ ಕಾಫಿನಾಡ ಜನ

  • ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆ ನಡೆದಿಲ್ಲ: ಪರಮೇಶ್ವರ್

    ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆ ನಡೆದಿಲ್ಲ: ಪರಮೇಶ್ವರ್

    ಮೈಸೂರು: ಮಹದೇವಪ್ಪ (HC Mahadevappa) ಮನೆಯಲ್ಲಿ ಡಿನ್ನರ್ ಮೀಟಿಂಗ್ (Dinner Meeting) ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಮನೆಯಲ್ಲಿ ಡಿನ್ನರ್ ಏರ್ಪಾಡು ಮಾಡಲಾಗಿತ್ತು. ಊಟಕ್ಕೆ ಹೋಗಿದ್ದೆವು. ಯಾವ ಮೀಟಿಂಗ್ ಇಲ್ಲ, ಡಿನ್ನರ್ ಅಷ್ಟೇ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತಾ? ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಸಹಜವಾಗಿ ಊಟಕ್ಕೆ ಸೇರಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: BBMP ವ್ಯಾಪ್ತಿಯ 110 ಹಳ್ಳಿ ನಿವಾಸಿಗಳಿಗೆ ಗುಡ್‌ನ್ಯೂಸ್; ದಸರಾ ಮುಗಿದ ಬೆನ್ನಲ್ಲೇ ಹರಿಯಲಿದೆ ಕಾವೇರಿ

    ಡಿನ್ನರ್‌ನಲ್ಲಿ ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಶಾಸಕ ಎ.ಆರ್ ಕೃಷ್ಣ ಮೂರ್ತಿ ಭಾಗಿಯಾಗಿದ್ದೆವು. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಊಟದ ವೇಳೆ ಸಿಎಂ ಬದಲಾವಣೆ ಅದು ಇದು ಯಾವ ವಿಚಾರವೂ ಚರ್ಚೆ ಮಾಡಿಲ್ಲ. ವಿರೋಧ ಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ. ಕಾಂಗ್ರೆಸ್‌ನಲ್ಲಿ ಯಾವ ಬದಲಾವಣೆ ಬಗ್ಗೆಯೂ ಚರ್ಚೆ ಆಗಿಲ್ಲ ಎಂದರು. ಇದನ್ನೂ ಓದಿ: `ಅಹಿಂದ’ ನಾಯಕರ ಡಿನ್ನರ್‌ ಮೀಟಿಂಗ್‌ – ರಾಜ್ಯ ರಾಜಕೀಯದಲ್ಲಿ ಸಂಚಲನ

    ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ನಾವು ಆಗಾಗ ಈ ರೀತಿ ಸೇರುತ್ತಿರುತ್ತೇವೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು. ದಲಿತ ಸಿಎಂ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿ, ಸದ್ಯ ಈ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೋಲಾರ| ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ತಾಯಿ, ಮಗ ಸಾವು

  • ಮುಂದಿನ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಪೂಜೆ ಆರಂಭ – ವಿಶೇಷ ಪಾಸ್ ರದ್ದು

    ಮುಂದಿನ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಪೂಜೆ ಆರಂಭ – ವಿಶೇಷ ಪಾಸ್ ರದ್ದು

    ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hills) ಮುಂದಿನ ಶುಕ್ರವಾರದಿಂದ ಆಷಾಢ ಪೂಜೆಗಳು (Ashada Pooja) ಶುರುವಾಗಲಿವೆ. ಇದಕ್ಕೆ ಮೈಸೂರು (Mysuru) ಜಿಲ್ಲಾಡಳಿತ ಭರ್ಜರಿ ತಯಾರಿಗಳನ್ನು ನಡೆಸಿದೆ.

    ಈ ಬಾರಿ ದೇವಿ ದರ್ಶನಕ್ಕೆ ವಿಶೇಷ ಪಾಸ್ ವಿತರಿಸದಿರಲು ಜಿಲ್ಲಾಡಳಿತ ತೀರ್ಮಾನಿಸಿದೆ. ಅಲ್ಲದೇ ವಿಶೇಷ ಪಾಸ್ ವ್ಯವಸ್ಥೆಯನ್ನೇ ರದ್ದು ಮಾಡಿದೆ. ಇಷ್ಟು ಮಾತ್ರವಲ್ಲದೆ ಮೈಸೂರು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಕೆರೆ ಕಟ್ಟೆ ತುಂಬಿಸಲು ನಾಳೆ ಸಂಜೆಯಿಂದ ಕೆಆರ್‌ಎಸ್‌ನಿಂದ ವಿ.ಸಿ.ನಾಲೆಗೆ ನೀರು

    ಎಲ್ಲರೂ ಕೂಡ ಉಚಿತ ಬಸ್‌ನಲ್ಲೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಂಸದ ಸುಧಾಕರ್ ಅಭಿನಂದನಾ ಸಮಾವೇಶದಲ್ಲಿ ಎಣ್ಣೆ, ಬಾಡೂಟಕ್ಕೆ ಮುಗಿಬಿದ್ದ ಜನ

  • ಬಿಜೆಪಿಯ ಸಂವಿಧಾನ ವಿರೋಧಿ ನೀತಿಗಳಿಗೆ ಜನ ಎಚ್ಚರಿಕೆ ನೀಡಿದ್ದಾರೆ: ಹೆಚ್.ಸಿ.ಮಹದೇವಪ್ಪ

    ಬಿಜೆಪಿಯ ಸಂವಿಧಾನ ವಿರೋಧಿ ನೀತಿಗಳಿಗೆ ಜನ ಎಚ್ಚರಿಕೆ ನೀಡಿದ್ದಾರೆ: ಹೆಚ್.ಸಿ.ಮಹದೇವಪ್ಪ

    ಬೆಂಗಳೂರು: ಬಿಜೆಪಿಯ (BJP) ಸಂವಿಧಾನದ ವಿರೋಧಿ ನೀತಿಗಳಿಗೆ ಜನ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಬೇರೆ ಪಕ್ಷಗಳನ್ನು ಆಶ್ರಯಿಸಿಯೇ ಸರ್ಕಾರ ಮಾಡಬೇಕು. ಬಿಜೆಪಿ ಹಿಡನ್ ಅಜೆಂಡಾ ಜಾರಿ ಮಾಡುವುದು ಸುಲಭವಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ (HC Mahadevappa) ಹೇಳಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಮತದಾರರು ಶಾಂತಿಯುತ ಮತದಾನ ಮಾಡಿದ್ದಾರೆ. 70% ಮತದಾನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ 100% ಆಗಲಿ. ಮತದಾನ ಮಾಡಿದವರಿಗೆ ಧನ್ಯವಾದಗಳು. 2019ರಲ್ಲಿ ಒಂದು ಸ್ಥಾನ ಗೆದ್ದಿದ್ದು, ಈ ಬಾರಿ 9 ಸ್ಥಾನ ಗೆದ್ದಿದ್ದೇವೆ. ಕನಿಷ್ಠ 12-14 ಸ್ಥಾನ ಗೆಲ್ಲಬೇಕಿತ್ತು. ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ಮತಗಳ ಧ್ರುವೀಕರಣ ಆಗಿದೆ. ಇದರಿಂದಾಗಿ 5-6 ಕ್ಷೇತ್ರಗಳಲ್ಲಿ ಹಿನ್ನಡೆ ಆಗಿದೆ ಎಂದರು. ಇದನ್ನೂ ಓದಿ: ಸಚಿವರ ಮೌಲ್ಯಮಾಪನದ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಎಂ.ಬಿ ಪಾಟೀಲ್

    ಸಚಿವ ಕ್ಷೇತ್ರದಲ್ಲಿ ಹಿನ್ನಡೆ ಆಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಬಿಜೆಪಿ- ಜೆಡಿಎಸ್ ರಾಜಕೀಯ ಒಡಂಬಡಿಕೆ ಮತಗಳು ಧ್ರುವೀಕರಣ ಆಯಿತು. ಮೇಲ್ಜಾತಿಯವರು ಒಂದಾದರು. ಅಹಿಂದ ವರ್ಗದವರು ಒಂದಾದರು. ಹಾಗಾಗಿ ನಾವು 9 ಸ್ಥಾನ ಗೆದ್ದಿದ್ದೇವೆ. ಒಳ್ಳೆಯ ಕಾರ್ಯ ಆಗಿದೆ. ಆದರೆ ನಿರೀಕ್ಷೆ ಹುಸಿಯಾಗಿದೆ. ಏನು ಕಾರಣ, ವೋಟ್ ಪ್ಯಾಟರ್ನ್ ಏನು ಎಂದು ಚರ್ಚೆ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ನೇಮಕಕ್ಕೆ CWC ನಿರ್ಣಯ ಅಂಗೀಕಾರ

    ಸಮುದಾಯವಾರು ಡಿಸಿಎಂ ಸೃಷ್ಟಿ ಆಗಬೇಕು ಎಂಬ ಪ್ರಶ್ನೆಗೆ ಉತ್ತರಿಸಿ, ಅದು ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗಬೇಕು. ಹುದ್ದೆ ಸೃಷ್ಟಿ ಆಗಬೇಕೋ ಬೇಡವೋ ಎಂದು ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗಲಿದೆ. ಸದ್ಯಕ್ಕೆ ಯಾವುದೇ ಚರ್ಚೆ ಇಲ್ಲ. ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆಯಿಲ್ಲ. ಪಕ್ಷವನ್ನು ಹೇಗೆ ಸಂಘಟಿಸಬೇಕು ಎಂದು ಚರ್ಚೆ ಆಗಲಿದೆ. ಸದ್ಯಕ್ಕೆ ನನ್ನ ಮುಂದೆ ಪ್ರಸ್ತಾಪ ಇಲ್ಲ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು. ಇದನ್ನೂ ಓದಿ: ಡಿಕೆಸು ಸೋಲಿಗೆ ಸಿದ್ದರಾಮಯ್ಯ & ಟೀಂ ಕಾರಣ: ಹೊಸ ಬಾಂಬ್ ಸಿಡಿಸಿದ ಸುರೇಶ್ ಗೌಡ

    ಮೈಸೂರಿನಲ್ಲಿ ನಮಗೆ ಹಿನ್ನಡೆ ಆಗಿಲ್ಲ. ನನ್ನ ಕ್ಷೇತ್ರ, ಸಿಎಂ ಕ್ಷೇತ್ರ ಅಲ್ಲಿ ಬರಲಿದೆ. ಅಹಿಂದ ಮತಗಳು ಸಾಲಿಡ್ ಆಗಿ ಮತ ಹಾಕಿದ್ದಾರೆ. ಅವರು (ಒಕ್ಕಲಿಗರು) ಒಂದಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಂತ್ಯಕ್ರಿಯೆ ವೇಳೆ ಶವದ ಮೇಲೆ ಕುಳಿತು ಅಚ್ಚರಿ ಮೂಡಿಸಿದ ಮಂಗ!

    ವಾಲ್ಮೀಕಿ ನಿಗಮದ ಹಗರಣದ ವಿಚಾರದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದೆ. ಸಿಬಿಐ ಕೂಡ ಇಂಟರ್ ಫಿಯರ್ ಆಗಿದೆ. ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ಆಗಲಿದೆ. ತನಿಖಾ ಹಂತದಲ್ಲಿದ್ದಾಗ ನಾನು ಹೆಚ್ಚು ಮಾತಾಡಲ್ಲ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಚೀಟಿ ದುಡ್ಡಿಗಾಗಿ ವ್ಯಕ್ತಿಯನ್ನು ತುಂಡಾಗಿ ಕತ್ತರಿಸಿ ಹತ್ಯೆ – 3 ಬ್ಯಾಗ್‌ಗಳಲ್ಲಿ ದೇಹ ವಿಲೇವಾರಿ

  • ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ

    ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ

    ಧಾರವಾಡ: ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ಅವರು ಅಂಗರಕ್ಷಕನಿಂದ (Bodyguard) ಶೂ (Shoe) ಹಾಕಿಸಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಬಳಿಕ ಸಚಿವರು ಸ್ಪಷ್ಟನೆ ನೀಡಿದ್ದಾರೆ.

    ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನನಗೆ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಅಲುಗಾಡಿಸದಂತಾಗಿತ್ತು. ಅಂದಿನಿಂದ ಸಮಸ್ಯೆ ಇದೆ. ಹೀಗಾಗಿ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವುದಾಗಿ ಸಮರ್ಥನೆ ನೀಡಿದ್ದಾರೆ.

    ಈ ಬಗ್ಗೆ ವಿವರಿಸಿದ ಅವರು, ಕುಳಿತರೆ ಬೇಗ ಏಳಲು ಆಗೋದಿಲ್ಲ, ಬಗ್ಗಲು ಕೂಡ ಸಾಧ್ಯವಾಗೋದಿಲ್ಲ. ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂದು ಹೇಳಿದರು.

    ಆಪರೇಷನ್ ಕಮಲ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮಹದೇವಪ್ಪ, ನಮ್ಮ ಅಧ್ಯಕ್ಷರಿಗೆ ಮಾಹಿತಿ ಇರುತ್ತೆ. ಹೀಗಾಗಿ ಅವರು ಹೇಳಿರುತ್ತಾರೆ. ನಾನು ಅಧಿಕಾರಿಗಳ ಸಭೆಯಲ್ಲಿದ್ದೇನೆ. ಹೀಗಾಗಿ ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಮಗಿಂತ ಮಾಧ್ಯಮಗಳಿಗೇ ಹೆಚ್ಚು ಮಾಹಿತಿ ಇದೆ ಎಂದರು. ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಡಿವಿಎಸ್

    ಬಹುಮತವಿಲ್ಲದೇ ಬಿಜೆಪಿ 2 ಸಲ ಅಧಿಕಾರಕ್ಕೆ ಬಂದಿದೆ. ಅದು ಹೇಗೆ ಬಂದಿದ್ದು ಅನ್ನೋದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಇತಿಹಾಸವೇ ಹಾಗಿದೆ. ಆ ಇತಿಹಾಸವನ್ನು ಮಾಧ್ಯಮದವರೇ ಹೇಳಲಿ ಎಂದರು.

    ಇನ್ನು ಬಿಜೆಪಿ ಶಾಸಕರ ಬಗ್ಗೆ ಎಸ್‌ಟಿ ಸೋಮಶೇಖರ್ ಬರದ ಬಗ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸೋಮಶೇಖರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಆ ಬಗ್ಗೆ ಕರಾರುವಕ್ಕಾಗಿ ಹೇಳಿದ್ದಾರೆ. ಕೇಂದ್ರಕ್ಕೆ ಹೋಗಿ ಹೇಳಿ ಅಂದಿದ್ದಾರೆ. ಇನ್ನು ಬರದ ಎಲ್ಲ ವರದಿಯನ್ನು ನೀಡಲಾಗಿದೆ. ರಾಜ್ಯದ ಜನರ ಹಿತ ಕಾಯಬೇಕೆಂದಿದ್ದರೆ ಕೇಂದ್ರಕ್ಕೆ ಕೇಳಲಿ. ಸಂಕಷ್ಟದಲ್ಲಿರೋ ರೈತರಿಗೆ ಪರಿಹಾರ ಕೊಡಬೇಕೆಂದರೆ ಕೇಂದ್ರವನ್ನು ಕೇಳಲಿ. 4,000 ಕೋಟಿ ರೂ. ಹಣ ಕೇಳಲಾಗಿದೆ. ದಯವಿಟ್ಟು ಆ ಹಣವನ್ನು ನೀಡುವಂತೆ ಕೇಳಲಿ ಎಂದು ಅವರು ಹೇಳಿದರು. ಇದನ್ನೂ ಓದಿ: ನವೆಂಬರ್ ಒಳಗೆ ಜಾತಿ ಜನಗಣತಿ ಬಿಡುಗಡೆ ಮಾಡದಿದ್ರೆ ಸಿಎಂಗೆ ಸಾಧು ಸಂತರ ಶಾಪ: ಈಶ್ವರಪ್ಪ

  • ಒಗ್ಗಟ್ಟು, ಸಹಮತ, ಹೊಂದಾಣಿಕೆ, ನಾಯಕತ್ವ ಇಲ್ಲದ ಬಿಜೆಪಿ ಪಕ್ಷ: ಹೆಚ್‌ಸಿ ಮಹದೇವಪ್ಪ

    ಒಗ್ಗಟ್ಟು, ಸಹಮತ, ಹೊಂದಾಣಿಕೆ, ನಾಯಕತ್ವ ಇಲ್ಲದ ಬಿಜೆಪಿ ಪಕ್ಷ: ಹೆಚ್‌ಸಿ ಮಹದೇವಪ್ಪ

    ಗದಗ: ಬಿಜೆಪಿ (BJP) ಅವರಿಗೆ ಇಲ್ಲಿಯವರೆಗೆ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗಲಿಲ್ಲ. ಇದರ ಮೇಲೆ ಬಿಜೆಪಿ ಎಷ್ಟು ಪ್ರಭಲ ಇದೆ ಅಂತ ಗೊತ್ತಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ವ್ಯಂಗ್ಯವಾಡಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಒಗ್ಗಟ್ಟು ಇಲ್ಲ, ಸಹಮತವಿಲ್ಲ, ಹೊಂದಾಣಿಕೆ ಇಲ್ಲ, ನಾಯಕತ್ವ ಇಲ್ಲ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟ ನಾಯಕತ್ವ ವಹಿಸಿದ ಪಕ್ಷ. ಕಾಂಗ್ರೆಸ್ (Congress) ಪಕ್ಷಕ್ಕೆ ದೊಡ್ಡ ಇತಿಹಾಸ, ಸಿದ್ಧಾಂತವಿದೆ. ಪಂಚವಾರ್ಷಿಕ ಯೋಜನೆ ಮೂಲಕ ಅನೇಕ ಸಾಧನೆಗಳನ್ನು ಮಾಡಿದ್ದೇವೆ. 140 ಕೋಟಿ ಜನರ ಆಹಾರ ಸ್ವಾವಲಂಬನೆ ಸಾಧನೆ ಮಾಡುವುದು ಸಾಮಾನ್ಯ ಮಾತಲ್ಲ ಎಂದರು.

    ನಮ್ಮ ಪಕ್ಷಕ್ಕೆ ಯಾರು ಬರ್ತಾರೆ ಅವರಿಗೆ ಕಾಂಗ್ರೆಸ್ ಬಾಗಿಲು ತೆರೆದಿರುತ್ತದೆ. ಕಾಂಗ್ರೆಸ್ ತಾನಾಗಿಯೇ ಬನ್ನಿ ಬನ್ನಿ ಅಂತ ಕರೆಯುವ ಪರಿಸ್ಥಿತಿಯಲ್ಲಿ ಇಲ್ಲ. ಇನ್ನು ಒಬ್ಬರು ಹೋದರೆ 40 ಜನರನ್ನು ತರುತ್ತೇವೆ ಎಂದ ಬಿಎಲ್ ಸಂತೋಷ್‌ಗೆ ಜನ ಉತ್ತರ ಕೊಟ್ಟಿದಾರೆ. ನಿಮ್ಮ ಯೋಗ್ಯತೆ ಏನು ಅಂತ ರಾಜ್ಯದ ಜನ ತಿಳಿಸಿದ್ದಾರೆ. ಕಾಂಗ್ರೆಸ್‌ನಿಂದ ಯಾರೂ ಬಿಜೆಪಿಗೆ ಹೋಗಲ್ಲ ಎಂದರು. ಇದನ್ನೂ ಓದಿ: ಬಿಎಸ್‍ವೈ ಕಡೆಗಣನೆಯಿಂದ ಬಿಜೆಪಿ ಅವನತಿ, ಆಪರೇಷನ್ ಆಗಲು ನನಗೆ ಕ್ಯಾನ್ಸರ್ ಗಡ್ಡೆ ಬೆಳೆದಿಲ್ಲ: ರಾಜೂಗೌಡ

    ಕಾವೇರಿ ವಿವಾದ ನೂರು ವರ್ಷಗಳಿಂದ ಇರುವ ಒಂದು ಸಮಸ್ಯೆ. ಕಾನೂನಾತ್ಮಕ ಹೋರಾಟಕ್ಕೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮಳೆ ಇಲ್ಲ, ಜಲಾಶಯದಲ್ಲಿ ನೀರಿನ ಸಂಗ್ರಹಣೆ ಇಲ್ಲ. ನಮ್ಮ ರೈತರ ಹಿತ ಕಾಪಾಡದೆ, ಬೇರೆಯವರಿಗೆ ನೀರು ಕೊಡುವ ಪರಿಸ್ಥಿತಿಯಲ್ಲಿ ನಾವಿಲ್ಲ. ಕುಡಿಯಲು ನೀರು ಮತ್ತು ರೈತರ ಹಿತ ಕಾಪಾಡಲು ಆದ್ಯತೆ ಕೊಡುತ್ತೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಸಚಿವ ಹೆಚ್‌ಸಿ ಮಹದೇವಪ್ಪ ಹೇಳಿದರು. ಈ ವೇಳೆ ಕಾಂಗ್ರೆಸ್‌ನ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ: ಎಂಬಿ ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • E-Rupi ಪೈಲಟ್ ಪ್ರಾಜೆಕ್ಟ್‌ಗೆ ಅನುಮತಿ ನೀಡಲು ಹೆಚ್.ಸಿ ಮಹದೇವಪ್ಪ ಮನವಿ

    E-Rupi ಪೈಲಟ್ ಪ್ರಾಜೆಕ್ಟ್‌ಗೆ ಅನುಮತಿ ನೀಡಲು ಹೆಚ್.ಸಿ ಮಹದೇವಪ್ಪ ಮನವಿ

    ನವದೆಹಲಿ: ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮ ಸೇರಿದಂತೆ ಕೇಂದ್ರ ಪ್ರಾಯೋಜಕತ್ವದಲ್ಲಿ ರಾಜ್ಯದಲ್ಲಿ ಅನುಷ್ಠಾನ ಮಾಡಲಾಗುತ್ತಿರುವ ಇಲಾಖಾ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ (H.C.Mahadevappa) ಒತ್ತಾಯಿಸಿದ್ದಾರೆ.

    ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಕಾರ್ಯದರ್ಶಿ ಸೌರಭ್ ಗಾರ್ಗ್ ಭೇಟಿ ಮಾಡಿದ ಅವರು ಇ – ರುಪಿ ಯೋಜನೆಯ ಪೈಲಟ್ ಪ್ರಾಜೆಕ್ಟ್‌ಗೆ ಅನುಮತಿ ನೀಡಲು ಹಾಗೂ ರಾಜ್ಯದ ಹಲವು ಯೋಜನೆಗಳಿಗೆ ಅನುದಾನ ನೀಡುವ ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು

    ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ವಿದ್ಯಾರ್ಥಿಗಳಿಗೆ 60:40 ಅನುಪಾತದಲ್ಲಿ ವಿದ್ಯಾರ್ಥಿ ವೇತನ (Scholorship) ನೀಡಲಾಗುತ್ತಿದೆ. ಕೇಂದ್ರ ಸರ್ಕಾರವು ತನ್ನ ಪಾಲಿನ 60% ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಬಿಡುಗಡೆ ಮಾಡುತ್ತಿರುವ ಹಿನ್ನಲೆ ವಿದ್ಯಾರ್ಥಿಗಳು ಕಾಲೇಜಿಗೆ ಪಾವತಿಸಬೇಕಾದ ಶುಲ್ಕುವನ್ನು ನೀಡುತ್ತಿಲ್ಲ ಎಂದರು. ಇದನ್ನೂ ಓದಿ: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

    ಈ ಹಿಂದೆ ಸ್ಕಾಲರ್‌ಶಿಪ್ ಹಣವನ್ನು ಇಲಾಖೆಯಿಂದ ಕಾಲೇಜು ಶುಲ್ಕ ಪಾವತಿಗೆ ವರ್ಗಾಯಿಸಲಾಗುತ್ತಿತ್ತು. ಆದರೆ 2021-22ರಿಂದ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿರುವ ಹಿನ್ನಲೆ ವಿದ್ಯಾರ್ಥಿಗಳು ಶುಲ್ಕ ಪಾವತಿ ಮಾಡುತ್ತಿಲ್ಲ. ಈ ಬಗ್ಗೆ ದೂರುಗಳು ಹೆಚ್ಚುತ್ತಿದೆ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ದಾಖಲಾತಿ ಸಂದರ್ಭದಲ್ಲಿ ಪೂರ್ಣ ಪ್ರಮಾಣ ಶುಲ್ಕ ಪಾವತಿಸಲು ಶಿಕ್ಷಣ ಸಂಸ್ಥೆಗಳು ಸೂಚಿಸಿದ್ದು, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳಾಗುವ ಸಾಧ್ಯತೆಗಳಿದೆ. ಈ ಹಿನ್ನಲೆ ಇ- ರುಪಿ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಕಟ್ಟಲು ನೀವೂ ಕೊಡಿ ಸಲಹೆ: ಸಾರ್ವಜನಿಕರಲ್ಲಿ ಡಿಕೆಶಿ ಮನವಿ

    ಕರ್ನಾಟಕದಲ್ಲಿ ಇ – ರುಪಿ ಈಗಾಗಲೇ ಕೊಪ್ಪಳ (Koppal) ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕ ಪ್ರಯೋಗ ಮಾಡುತ್ತಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಪ್ರಾಯೋಗಿಕ ಪ್ರಯೋಗ ಕರ್ನಾಟಕದಲ್ಲಿ ಮಾಡಬೇಕು. ಬಳಿಕ ಎಲ್ಲ ರಾಜ್ಯಗಳಿಗೂ ಇದನ್ನು ವಿಸ್ತರಿಸಬಹುದು. ಈ ಹಿನ್ನಲೆ ಪೈಲಟ್ ಪ್ರಾಜೆಕ್ಟ್ ನೀಡುವಂತೆ ಅವರು ಮನವಿ ಮಾಡಿದರು. ಇದನ್ನೂ ಓದಿ: ಸರ್ವರ್ ಹ್ಯಾಕ್ ಹೇಳಿಕೆ – ರಾಜಕೀಯದಲ್ಲಿ ಇಂತಹ ಸ್ಟೇಟ್‌ಮೆಂಟ್‌ಗಳು ಇದ್ದೇ ಇರುತ್ತೆ: ಸತೀಶ್ ಜಾರಕಿಹೊಳಿ ಯೂಟರ್ನ್

    ಬಾಬು ಜಗಜೀವನ್ ರಾಮ್ ಛಾತ್ರವಾಸ್ ಯೋಜನೆ ಅಡಿಯಲ್ಲಿ ನೂರು ವಿದ್ಯಾರ್ಥಿಗಳ ವಸತಿ ನಿಲಯಕ್ಕೆ 3 ಕೋಟಿಯಂತೆ ಅನುದಾನ ನೀಡಲಾಗುತ್ತಿದೆ. ರಾಜ್ಯ ಲೋಕೋಪಯೋಗಿ ಇಲಾಖೆಯಿಂದ 6.50 ಕೋಟಿ ರೂ. ಅನುದಾನ ನಿಗದಿ ಮಾಡಿದ್ದು, ಕೇಂದ್ರದಿಂದ 6.50 ಕೋಟಿ ರೂ. ನೀಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಿದರು. ಇದನ್ನೂ ಓದಿ: ಅಕ್ಕಿ ಕೊಡಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಿ: ಕಾಂಗ್ರೆಸ್ ವಿರುದ್ಧ ಶೋಭಾ ಕಿಡಿ

  • ಮಹದೇವಪ್ಪಗೆ ಸಚಿವರಾಗಿ ಕೆಲಸ ಮಾಡೋದಕ್ಕಿಂತ ಬೇರೆಯದ್ದರ ಬಗ್ಗೆಯೇ ಆಸಕ್ತಿ ಜಾಸ್ತಿ: ಡಿಕೆ ಸುರೇಶ್ ಟಾಂಗ್

    ಮಹದೇವಪ್ಪಗೆ ಸಚಿವರಾಗಿ ಕೆಲಸ ಮಾಡೋದಕ್ಕಿಂತ ಬೇರೆಯದ್ದರ ಬಗ್ಗೆಯೇ ಆಸಕ್ತಿ ಜಾಸ್ತಿ: ಡಿಕೆ ಸುರೇಶ್ ಟಾಂಗ್

    ಬೆಂಗಳೂರು: ಹೆಚ್‌ಸಿ ಮಹದೇವಪ್ಪ (HC Mahadevappa) ಅವರಿಗೆ ಸಚಿವರಾಗಿ ಕೆಲಸ ಮಾಡುವುದಕ್ಕಿಂತ ಬೇರೆ ವಿಷಯಗಳ ಬಗ್ಗೆಯೇ ಆಸಕ್ತಿ ಜಾಸ್ತಿ ಎಂದು ಸಂಸದ ಡಿಕೆ ಸುರೇಶ್ (DK Suresh) ವ್ಯಂಗ್ಯವಾಡಿದ್ದಾರೆ.

    ಸಿದ್ದರಾಮಯ್ಯನವರೇ (Siddaramaiah) ಸಿಎಂ ಆಗಿ ಮುಂದುವರಿಯುತ್ತಾರೆ ಎಂಬ ಡಾ.ಹೆಚ್‌ಸಿ ಮಹದೇವಪ್ಪ ಹೇಳಿಕೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಸದಾಶಿವನಗರದಲ್ಲಿ ಮಾತನಾಡಿದ ಡಿಕೆ ಸುರೇಶ್, ಮಹದೇವಪ್ಪ ಹಿರಿಯರಿದ್ದಾರೆ. ಯಾವ ಯಾವ ಸಂದರ್ಭದಲ್ಲಿ ಯಾರ್ಯಾರಿಗೆ ಏನೇನು ಮಾಡಿದ್ದಾರೆ ಎಂಬುದು ಅವರಿಗೆ ಗೊತ್ತಿದೆ. ಮಹದೇವಪ್ಪ ಯಾಕೆ ಈ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಅವರು ಸಾಕಷ್ಟು ಐಡಿಯಾಲಜಿ ಹೊಂದಿದವರು. ಅವರದ್ದೇ ಆದ ರಾಜಕೀಯ ಶಕ್ತಿ ಇಟ್ಟುಕೊಂಡಿದ್ದಾರೆ. ಹಿರಿಯ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಚಿವರಾಗಿ ಕೆಲಸ ಮಾಡುವುದಕ್ಕಿಂತ ಬೇರೆಯದ್ದರ ಬಗ್ಗೆ ಆಸಕ್ತಿ ಜಾಸ್ತಿ ಇದೆ ಎಂದು ಮಹದೇವಪ್ಪ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

    ಮತ್ತೆ ರಾಜಕೀಯ ವೈರಾಗ್ಯದ ಮಾತು:
    ರಾಜಕೀಯ ನನಗೆ ಸರಿ ಎನಿಸುತ್ತಿಲ್ಲ. ಕೆಲಸ ಮಾಡಲು ನೆಮ್ಮದಿಯಿಲ್ಲ. ನನಗೆ ರೆಸ್ಟ್ ಬೇಕು. ನಾನು ಅಧಿಕಾರ ಬೇಡ ಎಂದು ಚುನಾವಣಾ ಕಣದಿಂದ ಹಿಂದೆ ಸರಿಯಬೇಕು ಎಂದುಕೊಂಡಿದ್ದೇನೆ. ರಾಜಕಾರಣಿಗಳ ಬಗ್ಗೆ ಜನರಲ್ಲೂ ಮರ್ಯಾದೆ ಇಲ್ಲ, ಒಳಗಡೆಯೂ ಮರ್ಯಾದೆ ಇಲ್ಲ. ನಾನು ಅರ್ಜಿ ಹಾಕಿದರೆ ಪಕ್ಷ ಟಿಕೆಟ್ ಕೊಡುತ್ತದೆ. ಇಲ್ಲ ಎಂದರೆ ಬೇರೆಯವರಿಗೆ ಕೊಡುತ್ತದೆ. ಅವರು ಅಧಿಕಾರಕ್ಕಾಗಿ ಪರಿತಪಿಸುತ್ತಿದ್ದಾರೆ. ಇದು ಪಕ್ಕಾ ರಾಜಕಾರಣಿಗೆ ಸೆಟ್ ಆಗುತ್ತೆ ಎಂದು ತಿಳಿಸಿದ್ದಾರೆ.

    ನಾನು ನನ್ನ ಮನಸ್ಸಿನಲ್ಲಿರುವ ವಿಚಾರವನ್ನು ಕಾರ್ಯಕರ್ತರ ಬಳಿ ತಿಳಿಸಿದ್ದೇನೆ. ಬೇರೆಯವರಿಗೆ ಅವಕಾಶ ಆಗಬೇಕು ಎಂಬ ಉದ್ದೇಶ ನನಗಿದೆ. ಇದಕ್ಕೆ ಸಾಕಷ್ಟು ಜನ ನಾಯಕರು ಇದ್ದಾರೆ. ನಾನು ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ. ಇನ್ನೂ ಚುನಾವಣೆಗೆ 11 ತಿಂಗಳ ಅವಕಾಶ ಇದೆ. ಕ್ಷೇತ್ರದ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದು ನುಡಿದರು. ಇದನ್ನೂ ಓದಿ: ಸಿದ್ದು ಪರ ಮಹದೇವಪ್ಪ ಬಾಂಬ್‌ – ಕಾಂಗ್ರೆಸ್‍ನಲ್ಲಿ ಮತ್ತೆ ಸಿಎಂ ಕುರ್ಚಿ ಕಚ್ಚಾಟ

    ಪಕ್ಷ ಸಂಘಟನೆ ಒಂದು ಭಾಗ, ಚುನಾವಣಾ ಸ್ಪರ್ಧೆ ಮಾಡಿ ಗೆಲ್ಲೊದು ಇನ್ನೊಂದು ಭಾಗ. ನನಗೆ ಕೆಲಸ ಮಾಡಿರುವ ಬಗ್ಗೆ ತೃಪ್ತಿಯಿದೆ. ಸಾಕಷ್ಟು ಜನ ನಾಯಕರು, ಪಕ್ಷ ಸಂಘಟನೆ ಮಾಡಿರುವ ಹಿರಿಯರು ಇದ್ದಾರೆ. ಅವರಿಗೆ ಅವಕಾಶ ಆಗಬೇಕು. ಈ ವಿಚಾರದಲ್ಲಿ ನನಗೆ ಬೇಸರವಿಲ್ಲ ಎಂದಿದ್ದಾರೆ.

    ಕ್ಷೇತ್ರದ ಜನರ ಜೊತೆ ಖುಷಿಯಿಂದ ಕೆಲಸ ಮಾಡುತ್ತಾ ಇದ್ದೇನೆ. ವೈರಾಗ್ಯ ಎನ್ನುವುದು ನನಗೆ ಬಂದಿಲ್ಲ. ಪಕ್ಷ ಅಧಿಕಾರಕ್ಕೆ ಬರಲು ನಮ್ಮ ಶ್ರಮವಿಲ್ಲ. ಅಧಿಕಾರದಲ್ಲಿರುವವರ ಶ್ರಮವಿದೆ. ಎಲ್ಲಾ ಸಚಿವರು, ಶಾಸಕರ ಶ್ರಮವಿದೆ. ಅವರು ನೆಮ್ಮದಿಯಾಗಿ ಎಂಜಾಯ್ ಮಾಡಲಿ ಎಂದು ಹೇಳಿದರು. ಇದನ್ನೂ ಓದಿ: ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ: ಯಡಿಯೂರಪ್ಪ