ಬೆಂಗಳೂರು: ನಗರದಲ್ಲಿ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದರು.
ನಮ್ಮ ಊರು – ನಮ್ಮ ನಡಿಗೆ – ನಮ್ಮ ಮಾತುಕತೆ
Today’s walk at Cubbon Park marked a meaningful moment in a journey that has truly been close to my heart. Through this series, I have met citizens across the city, listened to their ideas, and shared their hopes for our future. These… pic.twitter.com/hckW2ZUlke
ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಆಸ್ತಿಗಳನ್ನು ʻಎ ಖಾತಾʼ (A Khata) ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನ ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು. ಇದನ್ನೂ ಓದಿ: ನೀರಿನ ಬಿಲ್ 3 ಪಟ್ಟು ಹೆಚ್ಚಳ – ದುಬಾರಿ ಬಿಲ್ ನೋಡಿ ಹೌಹಾರಿದ ಗ್ರಾಹಕರು!
ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ʻಎ ಖಾತಾʼ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನ ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ 6ನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ 5% ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರೀಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ ಎಂದು ನಮಿಸಿದರು.
ಮಂಡ್ಯ: ದೀಪಾವಳಿ ಕೊಡುಗೆ (Deepavali Gift) ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ನೇರ ಆರೋಪ ಮಾಡಿದರು.
ಮಂಡ್ಯ ನಗರದ (Mandya City) ಸಂಜಯ್ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ ದೊಡ್ಡ ಕೊಡುಗೆ ಕೊಡುತ್ತದೆ ಎಂದು ಜನರು ಭಾವಿಸಿದ್ದರು. ದೊಡ್ಡ ದೊಡ್ಡ ಜಾಹೀರಾತುಗಳನ್ನ ನೋಡಿ ನಾನು ಕೂಡ ಹಾಗೆಯೇ ಅಂದುಕೊಂಡಿದ್ದೆ. ಆದರೆ, ಅದು ದೀಪಾವಳಿ ಹೆಸರಿನಲ್ಲಿ ಜನರಿಗೆ ಮಾಡುತ್ತಿರುವ ಮಹಾನ್ ದೋಖಾ ಎಂದು ಕಿಡಿಕಾರಿದರು. ಇದನ್ನೂ ಓದಿ: ನ.1ರಿಂದ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ – ನಿವೇಶನಗಳಿಗಷ್ಟೇ ಎ ಖಾತೆ; ಕಟ್ಟಡಗಳ ಸಕ್ರಮ ಇಲ್ಲ
ಬೆಂಗಳೂರು (Bengaluru) ನಗರದ ಜನರಿಗೆ ದೀಪಾವಳಿ ಕೊಡುಗೆ ನೀಡೋದಕ್ಕೆ ಬದಲಾಗಿ ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ (A Khata) ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ಸರ್ಕಾರ. 30/40 ನಿವೇಶನಕ್ಕೆ 4 ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು 10 ರಿಂದ 13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿದ್ದ ಬೆಂಗಳೂರು ಜನರು ಇನ್ನು ಮುಂದೆ ಲಕ್ಷಗಳಲ್ಲಿ ಹಣ ಏರಬೇಕಿದೆ. ಎ-ಖಾತಾ ದಂಧೆಯ ಮೂಲಕ ರಾಜ್ಯ ಸರ್ಕಾರ 15,000 ಕೋಟಿ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು. ಇದನ್ನೂ ಓದಿ: ಐನಾಕ್ಸ್‌ವಿಂಡ್ ಕಂಪನಿಯಿಂದ ಕುಷ್ಟಗಿಯಲ್ಲಿ 400 ಕೋಟಿ ಹೂಡಿಕೆ: ಎಂಬಿ ಪಾಟೀಲ್
ಹಣ ಮಾಡುವುದಕ್ಕೆಂದೇ ಈ ಸರ್ಕಾರ ಇದೆ
ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡೋದು ಎಂದರೆ ಹೀಗೆನಾ? ಜನರ ಮೇಲೆ ತೆರಿಗೆ ವಿಧಿಸಿ 6ನೇ ಗ್ಯಾರಂಟಿ ಕೊಡಲು ಹೊರಟಿದ್ದಾರೆ. ಈ ಸರ್ಕಾರ ಬಂದ ಮೇಲೆ ನಿರಂತರವಾಗಿ ಸುಲಿಗೆ ಮಾಡುತ್ತಿದೆ. ಕೇವಲ ಹಣ ಮಾಡುವುದಕ್ಕೆ ಸರ್ಕಾರ ಹೊರಟಿದೆ. ಪ್ರತಿಯೊಂದರಲ್ಲೂ ದುಡ್ಡು ಮಾಡುವ ಬಗ್ಗೆಯಷ್ಟೇ ಆಲೋಚನೆ ಮಾಡುತ್ತಿದೆ ಎಂದು ಕಟುವಾಗಿ ಟೀಕಿಸಿದರು. ಇದನ್ನೂ ಓದಿ: ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ
ಈ ಸರ್ಕಾರದಲ್ಲಿ ಹಣ ಇಲ್ಲ. ಅದಕ್ಕೆ ಕಂಡ ಕಂಡ ಕಡೆ ಹಣಕ್ಕೆ ಕೈ ಹಾಕುತ್ತಿದೆ. ಬೆಂಗಳೂರಿನ ಗುಂಡಿ ಮುಚ್ಚೋದು ಇರಲಿ. ರಾಜ್ಯದಲ್ಲಿರುವ ಗುಂಡಿಗಳನ್ನೂ ಮುಚ್ಚೋಕೆ ಇವರಿಂದ ಆಗುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಸಚಿವರು, ಜೆಡಿಎಸ್ ಕೊಡುಗೆ ಏನು ಎಂದು ಹಾಸನದಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ. ನನ್ನ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ದೆಹಲಿಗೆ ಬಂದಿದ್ದರು. 2018ರಲ್ಲಿ ನೀವು ಕೊಟ್ಟ 500 ಕೋಟಿ ರೂಪಾಯಿ ಅನುದಾನದಲ್ಲಿಯೇ ಇನ್ನೂ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳುತ್ತಾರೆ. ಅನುದಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು, ನಾನು ಅಧಿಕಾರದಲ್ಲಿ ಇದ್ದ ಎಷ್ಟು ಕೊಟ್ಟಿದ್ದೇನೆ? ಇವರು ಎಷ್ಟು ಕೊಟ್ಟಿದ್ದಾರೆ? ಎಂಬ ಬಗ್ಗೆ ಜನರ ಮುಂದೆ ದಾಖಲೆ ಇಡಲಿ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.
ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡರು ಹಾಗೂ ಕೇಂದ್ರ ಸಚಿವರ ಸಂಸತ್ ಪ್ರದೇಶಾಭಿವೃದ್ಧಿ ನಿಧಿಯಿಂದ ಈ ಆಟೋ ನಿಲ್ದಾಣ ನಿರ್ಮಾಣ ಮಾಡಿದ್ದೇವೆ. ಇದು ಸುಸಜ್ಜಿತ, ವಿಶಾಲ ಆಟೋ ನಿಲ್ದಾಣ ಆಗಿದ್ದು, ಆಟೋ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಇಲ್ಲಿ ಸುಸಜ್ಜಿತ ಆಟೋ ನಿಲ್ದಾಣ ಬೇಕು ಎನ್ನುವುದು ಬಹಳ ದಿನಗಳ ಬೇಡಿಕೆ ಆಗಿತ್ತು. ಆ ಬೇಡಿಕೆ ಈಡೇರಿಸುವ ಕೆಲಸ ಆಗಿದೆ. ಅಲ್ಪ ಕಾಲದಲ್ಲಿಯೇ ನಿಲ್ದಾಣ ನಿರ್ಮಾಣ ಆಗಿದೆ ಎಂದರು.
ನಗರದಲ್ಲಿ ಆಟೋ ವ್ಯವಸ್ಥೆ ಜನತೆಯ ಸಂಚಾರಕ್ಕೆ ಬಹಳ ಅನುಕೂಲವಾಗಿದೆ. ಆದರೆ, ಆಟೋ ಚಾಲಕರು ಮಳೆ, ಬಿಸಿಲಿನಲ್ಲಿ ಕಷ್ಟ ಅನುಭವಿಸುತ್ತಿದ್ದರು. ನಮಗೊಂದು ಸುಸಜ್ಜಿತ ನಿಲ್ದಾಣ ಮಾಡಿಕೊಡಿ ಎಂದು ಕೇಳಿದ್ದರು. ತಕ್ಷಣವೇ ಅದಕ್ಕೆ ಕ್ರಮ ವಹಿಸಿದ್ದೇವೆ. ದೇವೇಗೌಡರ ಸಂಸತ್ ನಿಧಿ ಹಾಗೂ ನನ್ನ ಪಾಲಿನ ಸಂಸತ್ ನಿಧಿಯ ಅನುದಾನದಿಂದ ಕಾಮಗಾರಿ ಕೈಗೆತ್ತಿಗೊಂಡಿದ್ದೆವು. ಈ ಸಂದರ್ಭದಲ್ಲಿ ಅನುದಾನ ನೀಡಿದ ದೇವೇಗೌಡರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.
– ಜನರ ರಕ್ಷಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೆಚ್‌ಡಿಕೆ ಆಗ್ರಹ
ಬೆಂಗಳೂರು: ಕಲ್ಯಾಣ ಕರ್ನಾಟಕದ (Kalyana Karnataka) ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ ಜೊತೆಗೆ ಸಂತ್ರಸ್ತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇ ಎಂದು ಒತ್ತಾಯಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 28, 2025
ಹೆಚ್‌ಡಿಕೆ ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ಕರ್ನಾಟಕ ಕಾಂಗ್ರೆಸ್ ಸರಕಾರದ ಆದ್ಯ ಕರ್ತವ್ಯ. ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸುತ್ತೇನೆ.
ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. NDRF ಮತ್ತು SDRF ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು.
ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು.
ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ (Farmers) ಸ್ಥಿತಿ ಹೃದಯವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ್ಮ ಜೀವನೋಪಾಯ ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು.
ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು.
ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ.
ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರಕಾರವು ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ (Manjunath Swamy) ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumarswamy) ಭವಿಷ್ಯ ನುಡಿದಿದ್ದಾರೆ.
ಜೆಪಿ ನಗರ ನಿವಾಸದಲ್ಲಿ ಧರ್ಮಸ್ಥಳ ಕೇಸ್ ವಿಚಾರವಾಗಿ ಮಾತನಾಡಿದ ಅವರು, ಧರ್ಮಸ್ಥಳ ಕೇಸ್‌ನಲ್ಲಿ ಈ ಸರ್ಕಾರ ನಡೆದುಕೊಂಡು ರೀತಿಗೆ ನಿಜಕ್ಕೂ ಶಿಕ್ಷೆಯಾಗಬೇಕು. ಮುಂದಿನ ದಿನಗಳಲ್ಲಿ ಈ ಸರ್ಕಾರಕ್ಕೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಅನ್ನೋದು ನನ್ನ ಅಭಿಪ್ರಾಯ. ಈ ಕೇಸ್‌ನಲ್ಲಿ ಸರ್ಕಾರದ ನಡೆವಳಿಕೆ ಸರಿಯಿಲ್ಲ. ಪ್ರಾರಂಭಿಕ ಹಂತದಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ. ನಾನು ಧರ್ಮವನ್ನು ಬೆರೆಸಲು ಹೋಗಲ್ಲ. ಆದರೆ ಸರ್ಕಾರ ನಡೆದುಕೊಂಡ ರೀತಿ ಕ್ಷೇತ್ರಕ್ಕೆ ಅವಮಾನ, ಅನುಮಾನ ಆಗೋ ರೀತಿಯಲ್ಲಿ ಸರ್ಕಾರ ಎಸ್‌ಐಟಿ ತನಿಖೆ ನಾಟಕ ಆಡಿದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಕೆಶಿ
ಈ ಕೇಸ್‌ಲ್ಲಿ ಪ್ರಾರಂಭಿಕ ಹಂತದಲ್ಲಿ ಸರ್ಕಾರಕ್ಕೆ ದೂರು ಕೊಟ್ಟಿದ್ದು ದ್ವಾರಕನಾಥ್. ಸಿಎಂಗೆ ಅವರೇ ದೂರು ಕೊಟ್ಟರು. ಆಗ ಸಿಎಂ ದೂರು ಬಂದ ತಕ್ಷಣ ಕ್ರಮ ತೆಗೆದುಕೊಳ್ಳುವ ವಾತಾವರಣ ನಿರ್ಮಾಣ ಮಾಡಿದರು. ಇದರಲ್ಲಿ ಎಡಪಂಥೀಯ ಶಕ್ತಿಗಳು ಇದೆ ಎಂದು ಹೇಳ್ತಾರೆ. ಯಾರಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಅನುಶ್ರೀ ಕಲ್ಯಾಣದಲ್ಲಿ ರಾರಾಜಿಸಿದ ಅಪ್ಪು ಫೋಟೋ
ನವದೆಹಲಿ: ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದೆ. 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಕಾರ್ಯಸೂಚಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆಯ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumaraswamy) ಹೇಳಿದರು.
ನವದೆಹಲಿಯ (New Delhi) ವಿಜ್ಞಾನ ಭವನದಲ್ಲಿ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳ ಸವಾಲುಗಳ ಕುರಿತು ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಉಕ್ಕು ವಲಯದ ಒಟ್ಟು ಉತ್ಪಾದನೆಯ 50%ರಷ್ಟನ್ನು ಉತ್ಪಾದಿಸುತ್ತಿರುವ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಈ ವಲಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ – ಜೋಶಿ ಆರೋಪ
ಸಣ್ಣ ಗಾತ್ರದ ಉಕ್ಕು ವಲಯವು ಕೇವಲ ಒಂದು ಉದ್ಯಮವಲ್ಲ. ಇದು ದೇಶಿಯ ಕೈಗಾರೀಕರಣದ ಬೆನ್ನೆಲುಬು. ಇದು ಸ್ಥಳೀಯ ಆರ್ಥಿಕತೆಗೆ ಶಕ್ತಿ ನೀಡುತ್ತಿದೆ ಹಾಗೂ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ. ಸಮಗ್ರ ಬೆಳವಣಿಗೆಗೆ ಉತ್ತೇಜನ ನೀಡುತ್ತಿರುವುದು ಮಾತ್ರವಲ್ಲದೆ, ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಭಾರತವನ್ನು ಶೂನ್ಯ ಇಂಗಾಲ ಬಿಡುಗಡೆ ಹಾಗೂ ಉಕ್ಕು ವಲಯದಲ್ಲಿ ಜಾಗತಿಕ ಸುಸ್ಥಿರ ರಾಷ್ಟ್ರವನ್ನಾಗಿ ಹೊರಹೊಮ್ಮಿಸಲು ನಾವು ದೃಢನಿಶ್ಚಯ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಭಾರತೀಯ ಪ್ರಜೆಯಾಗದೇ ಮತದಾರರ ಪಟ್ಟಿಯಲ್ಲಿ ಸೋನಿಯ ಗಾಂಧಿ ಸೇರ್ಪಡೆ; ಮತಗಳವು ಆರೋಪಕ್ಕೆ ಬಿಜೆಪಿ ಪ್ರತ್ಯಾರೋಪ
2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಗುರಿ ಆಗಿದೆ. ಈ ಮೈಲಿಗಲ್ಲುಗಳನ್ನು ಸಾಧಿಸುವಲ್ಲಿ ಸಣ್ಣ ಗಾತ್ರದ ಉಕ್ಕು ವಲಯವು ಪ್ರಮುಖ ಪಾತ್ರವಹಿಸುತ್ತಿದೆ ಎಂದು ತಿಳಿಸಿದರು.
ವಿಶೇಷ ಉಕ್ಕಿಗಾಗಿ ಪಿಎಲ್‌ಐ ಯೋಜನೆ, ಹಸಿರು ಉಕ್ಕು ಪ್ರಮಾಣೀಕರಣ ರೇಟಿಂಗ್ ವ್ಯವಸ್ಥೆ, ಹೈಡ್ರೋಜನ್ ಆಧರಿತ ಉಕ್ಕು ತಯಾರಿಕೆ ಯೋಜನೆಗಳು ಮತ್ತು ಉಕ್ಕಿನ ಸ್ಕ್ರ‍್ಯಾಪ್ ಮರುಬಳಕೆ ನೀತಿ ಸೇರಿದಂತೆ ಪ್ರಮುಖ ಉಪಕ್ರಮಗಳನ್ನು ಸರ್ಕಾರವು ಕೈಗೊಂಡಿದೆ ಎಂದು ವಿವರಿಸಿದರು. ಇದನ್ನೂ ಓದಿ: ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕ ಪಡೆ: ಲಕ್ಷ್ಮಿ ಹೆಬ್ಬಾಳ್ಕರ್
ಸರ್ಕಾರದ ಪೂರ್ವಭಾವಿ ಕ್ರಮಗಳ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು, ಇಂಧನ ದಕ್ಷತೆಯು ಇನ್ನು ಮುಂದೆ ಐಚ್ಛಿಕವಲ್ಲ. ತ್ಯಾಜ್ಯ ಶಾಖ ಹೆಚ್ಚಳ, ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ವ್ಯವಸ್ಥೆ ಮತ್ತು ನವೀಕರಿಸಬಹುದಾದ ಇಂಧನ ಏಕೀಕರಣ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಲ್ಲಿ ನಾವು ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳನ್ನು (ಎಂಎಸ್‌ಎಂಇ) ಉತ್ತೇಜಿಸುತ್ತೇವೆ ಎಂದು ನುಡಿದರು.
ಮನೆ, ಬೃಹತ್ ಕಟ್ಟಡ, ಹೆದ್ದಾರಿ, ಸೇತುವೆ, ರೇಲ್ವೆ, ವಿಮಾನ, ರಾಕೆಟ್ ಸೇರಿದಂತೆ ರಾಷ್ಟ್ರದ ಭವ್ಯ ಇತಿಹಾಸವನ್ನು ನಿರ್ಮಿಸುವ ಉಕ್ಕು ಕ್ಷೇತ್ರವನ್ನು ನಾವು ಮತ್ತಷ್ಟು ಸಶಕ್ತಗೊಳಿಸಬೇಕಿದೆ. ನೀತಿ, ಉದ್ದೇಶ ಮತ್ತು ನಮ್ಮ ಜನರ ಉತ್ಸಾಹದೊಂದಿಗೆ ನಾವು ಭಾರತವನ್ನು ಜಾಗತಿಕ ಉಕ್ಕಿನ ಶಕ್ತಿ ಕೇಂದ್ರವನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
ಇದೇ ವೇಳೆ ಜಾಗತಿಕವಾಗಿ ಭಾರತದ ಉಕ್ಕು ಉದ್ಯಮಕ್ಕೆ ಏಕೀಕೃತ ಗುರುತನ್ನು ಸಂಕೇತಿಸುವ ಭಾರತ್ ಸ್ಟೀಲ್ ಲೋಗೋ ಮತ್ತು ಭಾರತ್ ಸ್ಟೀಲ್ ಅಂತರ್ಜಾಲ ತಾಣವನ್ನು ಸಚಿವರು ಅನಾವರಣಗೊಳಿಸಿದರು. ಉಕ್ಕು ಉತ್ಪಾದನೆಯಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಕನಿಷ್ಠ ಮಟ್ಟಕ್ಕೆ ತಂದಿರುವ ಹಾಗೂ ಉಕ್ಕು ಉತ್ಪಾದನಾ ಮಾನದಂಡಗಳ ಗುರಿಯನ್ನು ಸಾಧಿಸಿದ ಉದ್ಯಮದ ನಾಯಕರಿಗೆ ಗೌರವಿಸಿದರು.
– ಎಲೆಕ್ಟ್ರಿಕ್ ವಾಹನಗಳ ಉತ್ತೇಜನಕ್ಕೆ ಪ್ರಧಾನಿಗಳ ಒತ್ತು
– ಇ-ವಾಹನ ಪೂರಕ ವ್ಯವಸ್ಥೆ ಬಲಪಡಿಸಲು ಕ್ರಮ ಎಂದ ಕೇಂದ್ರ ಸಚಿವರು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿಯ PM E-DRIVE ಯೋಜನೆಯ ಅವಧಿಯನ್ನು 2 ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
2026 ಮಾರ್ಚ್ 31 ರಿಂದ 2028 ಮಾರ್ಚ್ 31ರ ವರೆಗೆ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ನವೀನ ವಾಹನ ಸಂವರ್ಧನೆಯಲ್ಲಿ ಪಿಎಂ ಇ-ಡ್ರೈವ್ (PM E-DRIVE) ಯೋಜನೆಯ ಅವಧಿಯನ್ನು ಎರಡು ವರ್ಷದಿಂದ ನಾಲ್ಕು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
India’s journey towards self-reliance in Rare Earth Permanent Magnet (REPM) manufacturing is gaining momentum under the visionary leadership of Hon’ble PM Shri @narendramodi avaru.@MHI_GoI is putting strong efforts into boosting indigenous REPM production empowering our auto,… pic.twitter.com/Zd5zcfB4Ei
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2025
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತದಲ್ಲಿ ಇ-ಚಲನಶೀಲತೆಯನ್ನು ವೇಗಗೊಳಿಸುವತ್ತ ದೇಶವು ತ್ವರಿತಗತಿಯಲ್ಲಿ ಹೆಜ್ಜೆ ಇಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದ್ದು, ಪಿಎಂ ಇ-ಡ್ರೈವ್ ಯೋಜನೆಯು ತನ್ನ ಹಂತ ಹಂತದ ಉತ್ಪಾದನಾ ಕಾರ್ಯಕ್ರಮದ ಮೂಲಕ ಮೇಕ್ ಇನ್ ಇಂಡಿಯಾವನ್ನ ಸಕ್ರಿಯಗೊಳಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಆದಾಯ ತೆರಿಗೆ ಮಸೂದೆ-2025 ಹಿಂಪಡೆದ ಕೇಂದ್ರ – ಆ.11ರಂದು ಹೊಸ ಆವೃತ್ತಿ ಪರಿಚಯ
ಸಾಂದರ್ಭಿಕ ಚಿತ್ರ
PM E-DRIVE ಯೋಜನೆಯು ಎಲೆಕ್ಟ್ರಿಕ್ ವಾಹನಗಳ (EV) ಅಳವಡಿಕೆಯನ್ನ ವೇಗಗೊಳಿಸಲು ಬಲವಾದ ಚಾರ್ಜಿಂಗ್ ಮೂಲಸೌಕರ್ಯವನ್ನ ಸ್ಥಾಪಿಸಲು ಮತ್ತು ದೇಶದಲ್ಲಿ ಇವಿ ವಾಹನಗಳ ಉತ್ಪಾದನಾ ಪರಿಸರ ವ್ಯವಸ್ಥೆಯನ್ನ ಬಲಪಡಿಸಲು ಉದ್ದೇಶಿಸಿದೆ. ಇ-ಟ್ರಕ್‌ಗಳು, ಇ-ಬಸ್‌ಗಳು ಮತ್ತು ಪರೀಕ್ಷಾ ಏಜೆನ್ಸಿಗಳಿಗೆ ಅವುಗಳ ನಿರ್ದಿಷ್ಟ ಸವಾಲುಗಳಿಂದಾಗಿ ಈ ವಿಸ್ತರಣೆಯ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತಗೊಳಿಸಿಲ್ಲ: ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ
ಇ-ಟ್ರಕ್‌ಗಳ ಮಾರುಕಟ್ಟೆ ಆರಂಭಿಕ ಹಂತದಲ್ಲಿದ್ದು, ಈ ದೃಷ್ಟಿಯಿಂದ ಪೂರ್ಣ ಪ್ರಮಾಣದ ವಾಣಿಜ್ಯ ಉತ್ಪಾದನೆಗೆ ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ. ಅದೇ ರೀತಿ, 14,028 ಘಟಕಗಳನ್ನು ನಿಯೋಜಿಸಲು 4,391 ಕೋಟಿ ರೂ. ಹಂಚಿಕೆಯಿಂದ ಬೆಂಬಲಿತವಾದ ಇ-ಬಸ್‌ಗಳಿಗೆ ಮಾರ್ಚ್ 2026 ರಿಂದ ಆಯ್ಕೆಯ ನಂತರದ ಪ್ರಕ್ರಿಯೆಯ ಅಗತ್ಯವಿದೆ. ಇದಲ್ಲದೆ, ಪರೀಕ್ಷಾ ಏಜೆನ್ಸಿ ಉಪಕರಣಗಳ ಖರೀದಿಗೆ ಈ ವಿಭಾಗಗಳಲ್ಲಿ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನ ಕಾಪಾಡಿಕೊಳ್ಳಲು ಟೆಂಡರ್, ಮೌಲ್ಯಮಾಪನ, ಸಂಗ್ರಹಣೆ ಮತ್ತು ಕಾರ್ಯಾರಂಭಕ್ಕೆ ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
ಬೆಂಗಳೂರು: ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumaraswamy) ಎಕ್ಸ್ ಮೂಲಕ ಕಿಡಿಕಾರಿದ್ದಾರೆ.
ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ.
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ.
ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2025
ಗುರುವಾರ ರಾಹುಲ್‌ಗಾಂಧಿ (Rahul Gandhi) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಚುನಾವಣೆ ಆಯೋಗದ (Election Commission) ಮೇಲೆ ಸುಳ್ಳಿನ ಸುರಿಮಳೆ ಹಾಗೂ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ ಮಾಡುತ್ತಿದ್ದಾರೆ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲು
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿಗಳ ಪಿತೂರಿ ನಡೆಯುತ್ತಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದಿದ್ದಾರೆ. ಇದನ್ನೂ ಓದಿ: ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
ರಾಹುಲ್‌ಗಾಂಧಿ ಅವರ ಆರೋಪವೇನು?
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬರುವ ಮಹಾದೇವಪುರದಲ್ಲಿ (Mahadevapura) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಅಕ್ರಮ ನಡೆದಿದೆ. ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವೆಡೆ ಮತಗಳ್ಳತನ ಆಗಿದೆ. ಕಳೆದ ಐದು ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ ಎಂದು ದಾಖಲೆ ಸಮೇತವಾಗಿ ಆರೋಪಿಸಿದ್ದರು.
ನವದೆಹಲಿ: ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಅವರು ಹೆಚ್.ಡಿ.ಕುಮಾರಸ್ವಾಮಿಯನ್ನು (H D Kumaraswamy) ಛೇಡಿಸಿದ್ದಾರೆ.
ದೆಹಲಿಯ (Delhi) ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ (Nithin Gadkari) ಅವರನ್ನು ಹೆಚ್‌ಡಿಕೆ ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನು ನಾನು ಸ್ವೀಕಾರ ಮಾಡುತ್ತೇನೆ. ಕ್ರೆಡಿಟ್ ಯಾರು ಬೇಕಾದರೂ ಪಡೆದುಕೊಳ್ಳಲಿ ಎಂದಿದ್ದಾರೆ. ಇದನ್ನೂ ಓದಿ: ಕೋರ್ಟ್‌ಗೆ ಹಾಜರಾಗಿ ವಿದೇಶಕ್ಕೆ ಹಾರಲಿರುವ ದರ್ಶನ್
ಸಂಪುಟ ಬದಲಾವಣೆಗಾಗಿ ಸಿಎಂ ದೆಹಲಿ ಭೇಟಿ ನೀಡಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ಧಿ ವಿಚಾರಗಳನ್ನು ಚರ್ಚೆ ನಡೆಸಲು, ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ
ನೀವು ಸೋನಿಯಾ ಗಾಂಧಿ ಹಾಗೂ ಇತರೆ ಹಿರಿಯ ನಾಯಕರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿಲ್ಲ. ಹಿರಿಯ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡದಿದ್ದರೆ ಯಾರನ್ನೂ ಭೇಟಿಯಾಗಲು ಆಗುವುದಿಲ್ಲ. ರಾಹುಲ್ ಗಾಂಧಿ ಅವರು ಪಾಟ್ನಾಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.
ಬೀದರ್‌ನ ಸಣ್ಣ ನೀರಾವರಿ ಇಲಾಖೆಯ ಎಫ್‌ಡಿಎ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನಗೆ ತಿಳಿದಿಲ್ಲ. ಮಾಹಿತಿ ತಿಳಿದು ಮಾತನಾಡುತ್ತೇನೆ ಎಂದಿದ್ದಾರೆ. ಪಾಟ್ನಾದಲ್ಲಿ ರಾಹುಲ್ ಗಾಂಧಿ ಅವರ ಪ್ರತಿಭಟನೆಯನ್ನು ತಡೆದಿರುವ ಬಗ್ಗೆ ಕೇಳಿದಾಗ, ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ. ರಾಹುಲ್ ಗಾಂಧಿ ಅವರು ಮತದಾರರ ಹಕ್ಕುಗಳನ್ನು ರಕ್ಷಿಸಲು ಹೋಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!
ಮಹಾರಾಷ್ಟ್ರದಲ್ಲಿ ಭಾಷಾ ಸಂಘರ್ಷದ ಬಗ್ಗೆ ಉತ್ತರಿಸಿದ ಅವರು, ಇದು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಕನ್ನಡ ಮತ್ತು ಇಂಗ್ಲಿಷ್‌ಗೆ ಪ್ರಾಮುಖ್ಯತೆ ನೀಡುತ್ತೇವೆ ಎಂದು ಹೇಳಿದ್ದಾರೆ. ಕನ್ನಡ ಪರೀಕ್ಷೆ ಅಂಕಗಳನ್ನು 125ರಿಂದ 100 ಕ್ಕೆ ಇಳಿಸಿರುವ ಬಗ್ಗೆ ಬಿಜೆಪಿ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ, ನನ್ನ ಇಲಾಖೆಯ ಬಗ್ಗೆ ನನಗೆ ಪ್ರಶ್ನೆ ಕೇಳಿದರೆ ಉತ್ತರ ಹೇಳಬಹುದು ಎಂದಿದ್ದಾರೆ. ಇದನ್ನೂ ಓದಿ: ವೇಷತೊಟ್ಟು ಜೋಗತಿಯಾದ ನಟ ಶ್ರೀನಗರ ಕಿಟ್ಟಿ
ಟನಲ್ ರಸ್ತೆ ವಿಚಾರವಾಗಿ ಮಾತನಾಡಿದ ಅವರು, ಇದಕ್ಕೆ ಎರಡು-ಮೂರು ದಿನದಲ್ಲಿ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಟೋಲ್ ಇಲ್ಲದೇ ರಸ್ತೆ ಮಾಡಲು ಸಾಧ್ಯವಿಲ್ಲ. ಏರ್‌ಪೋರ್ಟ್, ಮೈಸೂರು ರಸ್ತೆ, ನೈಸ್ ರಸ್ತೆಗಳಲ್ಲಿ ಟೋಲ್ ಇದೆಯಲ್ಲ ಎಂದು ಹೇಳಿದ್ದಾರೆ.
ಸುರ್ಜೇವಾಲ ಅವರ ಕರ್ನಾಟಕ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಪಕ್ಷ ಸಂಘಟನಾ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಜಿಲ್ಲಾ ಅಧ್ಯಕ್ಷರನ್ನು ಕರೆಸಿ ಸಭೆ ನಡೆಸಲಾಗಿದೆ. ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮಾಧ್ಯಮಗಳು ಹೇಳಿದಂತೆ ಯಾವುದೇ ರಾಜಕೀಯ ವಿಚಾರ ಇಲ್ಲಿಲ್ಲ. ಕೇವಲ ಸಂಘಟನೆ ವಿಚಾರ ಎಂದು ವಿವರಿಸಿದ್ದಾರೆ.
ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ರಾಜಕೀಯ ಮಾಡಿಕೊಂಡು ಕೂರಬಾರದು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumaraswamy) ಕೂಡ ಇದನ್ನು ಮನಗಂಡು, ರಚನಾತ್ಮಕವಾಗಿ ಕೆಲಸ ಮಾಡಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ಹೇಳಿದ್ದಾರೆ.
ಕುಮಾರಸ್ವಾಮಿಯವರು ಮೇಕೆದಾಟು ಯೋಜನೆ (Mekedatu Project) ತಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಎಂದಿದ್ದಾರೆ. ಇದು ಸರಿಯಲ್ಲ. ಈ ಯೋಜನೆ ಜಾರಿಯಿಂದ ಸಂಕಷ್ಟದ ಸಮಯದಲ್ಲಿ ನೀರು ಸಿಗುತ್ತದೆ ಎನ್ನುವುದು ತಮಿಳುನಾಡಿನ ರಾಜಕೀಯ ಪಕ್ಷಗಳಿಗೂ ಗೊತ್ತು. ಆದರೆ ಅವರು ಸಹ ರಾಜಕೀಯಕ್ಕಾಗಿ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಇಂತಹ ಧೋರಣೆಗಳನ್ನು ಎಲ್ಲರೂ ಬಿಟ್ಟರೆ ಜನರಿಗೆ ಒಳ್ಳೆಯದಾಗುತ್ತದೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್
ಹಿಂದೆ ಕಾವೇರಿ ವಿವಾದವು ಸುಪ್ರೀಂಕೋರ್ಟ್ ಮುಂದೆ ಬಂದಾಗ ನಾನು ನೀರಾವರಿ ಸಚಿವನಾಗಿದ್ದೆ. ನಮ್ಮ ಪ್ರಯತ್ನದಿಂದ ರಾಜ್ಯಕ್ಕೆ 14 ಟಿಎಂಸಿ ಅಡಿ ನೀರು ಹೆಚ್ಚು ಸಿಕ್ಕಿತ್ತು. ಜೊತೆಗೆ, ಬೆಂಗಳೂರಿಗೂ ಕುಡಿಯುವ ನೀರು ಪೂರೈಸಲು ಕಾವೇರಿ ನೀರನ್ನು ಬಳಸಿಕೊಳ್ಳಲು ಅವಕಾಶ ಸಿಕ್ಕಿತ್ತು. ನಮ್ಮ ರಾಜಧಾನಿಯ ಮೂರನೇ ಎರಡರಷ್ಟು ಭಾಗ ಕಾವೇರಿ ಕೊಳ್ಳದಿಂದ ಹೊರಗಿದೆ ಎಂದು ತಮಿಳುನಾಡಿನವರು ತಕರಾರು ತೆಗೆದಿದ್ದರು. ಆಗ ನಾವು ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳು ಚೆನ್ನೈನ ಕುಡಿಯುವ ನೀರಿನ ಅಗತ್ಯಕ್ಕೆ ಕೃಷ್ಣಾ ಕೊಳ್ಳದಲ್ಲಿನ ತಮ್ಮ ಪಾಲಿನ ತಲಾ 5 ಟಿಎಂಸಿಯಂತೆ ಸೇರಿ ಒಟ್ಟು 15 ಟಿಎಂಸಿ ನೀರನ್ನು ಬಿಟ್ಟುಕೊಟ್ಟಿದ್ದನ್ನು ನೆನಪಿಸಬೇಕಾಯಿತು. ಈ ವಿಚಾರದಲ್ಲಿ ನಮ್ಮ ಪರ ವಕೀಲ ಎಫ್.ಎಸ್ ನಾರಿಮನ್ ಪರಿಣಾಮಕಾರಿಯಾಗಿ ವಾದ ಮಂಡಿಸಿದ್ದರು ಎಂದು ವಿವರಿಸಿದ್ದಾರೆ.
– ಗ್ರೀನ್ ಸ್ಟೀಲ್, ಉನ್ನತ ದರ್ಜೆಯ ಅಲ್ಯೂಮಿನಿಯಂ; ಭಾರತ-ಯುಎಇ ಸಹಯೋಗಕ್ಕೆ ಒತ್ತು
ದುಬೈ: ದುಬೈ ಪ್ರವಾಸದಲ್ಲಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರು ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ ಉನ್ನತ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಈ ಕುರಿತಂತೆ ಯುಎಇ ಹಣಕಾಸು ಸಚಿವ ಹೆಚ್.ಇ ಅಬ್ದುಲ್ಲಾ ಬಿನ್ ತೌಕ್ ಅಲ್ ಮರ್ರಿ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಇದರಲ್ಲಿ ವ್ಯಾಪಾರ ವಿಸ್ತರಣೆ, ಸಂಪನ್ಮೂಲಗಳ ಖಾತರಿ ಮತ್ತು ಉಕ್ಕು ಹಾಗೂ ಅಲ್ಯೂಮಿನಿಯಂನಲ್ಲಿ ಸಹಯೋಗ, ನಾವೀನ್ಯತೆಗಳನ್ನು ಕೇಂದ್ರೀಕೃತವಾಗಿರಿಸಿಕೊಂಡು ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಇಂಡಸ್ಟ್ರಿಯಲ್ಲಿ ನನಗೆ ಯಾರೂ ಫ್ರೆಂಡ್ಸ್ ಇಲ್ಲ… ಹೀಗ್ಯಾಕಂದ್ರು ನಯನತಾರ..?
Had a productive meeting with H.E. Abdulla Bin Touq Al Marri, UAE’s Minister of Economy, to deepen India-UAE industrial and trade cooperation.
We discussed collaboration in green steel production, aligning with our shared vision for sustainable industrial growth. UAE can play a… pic.twitter.com/QsYW5hoOAu
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 1, 2025
ಪ್ರಧಾನಿ ನರೇಂದ್ರ ಮೋದಿ ಅವರು, 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಭಾರತವು ನಿರ್ಣಾಯಕ ಕ್ರಮಗಳ ಮೂಲಕ ಮುನ್ನಡೆಯುತ್ತಿದೆ ಎಂದು ಒತ್ತಿ ಹೇಳಿದ್ದಾರೆ.
ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಸ್ಥಿತಿ ಸ್ಥಾಪಕತ್ವ, ಸಂಪನ್ಮೂಲಗಳ ಖಾತರಿ ಮತ್ತು ಸುರಕ್ಷತೆ, ನಾವೀನ್ಯತೆ ಚಾಲಿತ ಬಲವಾದ ಜಾಗತಿಕ ಕೈಗಾರಿಕಾ ಪಾಲುದಾರಿಕೆಗಳನ್ನು ರೂಪಿಸಿಕೊಳ್ಳಲು ಗಂಭೀರ ಪ್ರಯತ್ನಗಳನ್ನು ಮಾಡುತ್ತಿದೆ. ಈ ಗುರಿ ಮುಟ್ಟಲು ಭಾರತವು ಜಾಗತಿಕವಾಗಿ ಉತ್ತಮ ಪಾಲುದಾರರತ್ತ ಕೈ ಚಾಚಿದೆ ಎಂದು ದ್ವಿಪಕ್ಷೀಯ ಕೈಗಾರಿಕಾ ಸಂಬಂಧಗಳನ್ನು ಬಲಪಡಿಸುವ ಅವಕಾಶವನ್ನು ಮುಕ್ತವಾಗಿ ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಶಿವಕುಮಾರ್ ಸಿಎಂ ಆಗ್ತಾರೆ ಎಂದಿದ್ದ ಇಕ್ಬಾಲ್ ಹುಸೇನ್‌ಗೆ ವಾರ್ನಿಂಗ್ – ಡಿಕೆಶಿಯಿಂದ ನೋಟಿಸ್
ಹಸಿರು ಉಕ್ಕು, ಹೆಚ್ಚಿನ ಮೌಲ್ಯದ ಉತ್ಪಾದನೆ, ಜಾಗತಿಕ ಪೂರೈಕೆ ಮತ್ತು ಸರಪಳಿ ಸ್ಥಿತಿ ಸ್ಥಾಪಕತ್ವಕ್ಕಿರುವ ರಾಷ್ಟ್ರದ ಬದ್ಧತೆಯನ್ನು ವಿವರಿಸಿದ್ದಾರೆ. ಅಲ್ಲದೇ ಭಾರತ ಮತ್ತು ಯುಎಇಯು ಹಸಿರು ಉಕ್ಕು ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಬೆಳವಣಿಗೆಯಲ್ಲಿ ಬಲವಾದ ಪಾಲುದಾರರಾಗಬಹುದು ಹೇಳಿದ್ದಾರೆ.
2030ರ ವೇಳೆಗೆ ಭಾರತವು ತನ್ನ 300 ಮಿಲಿಯನ್ ಟನ್ ಉಕ್ಕು ಉತ್ಪಾದನಾ ಗುರಿಯನ್ನು ತಲುಪಲು ಸಹಾಯ ಮಾಡುವಲ್ಲಿ ಯುಎಇ ಪ್ರಮುಖ ಪಾತ್ರವಹಿಸಬಹುದು. ವಿಶೇಷವಾಗಿ ಕಚ್ಚಾ ವಸ್ತುಗಳ ಖಾತರಿಯನ್ನು ಬೆಂಬಲಿಸುವ ಮೂಲಕ ಮತ್ತು ಇಂಧನ ಪೂರೈಕೆ, ಸಮರ್ಥ ಉತ್ಪಾದನಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಜೊತೆ ಕೈ ಜೋಡಿಸಬಹುದು. ಈ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿರುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಮೋಹನ್‌ಲಾಲ್ ಮಗಳು ವಿಸ್ಮಯ ಚಿತ್ರರಂಗಕ್ಕೆ ಎಂಟ್ರಿ!
ಉನ್ನತ ದರ್ಜೆಯ ಉಕ್ಕು ಮತ್ತು ಅಲ್ಯೂಮಿನಿಯಂ
ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಆಟೋಮೊಬೈಲ್ ಮತ್ತು ಕಾರ್ಯತಂತ್ರದ ವಲಯಗಳಿಗೆ ಅತ್ಯಗತ್ಯವಾದ ಉನ್ನತ ದರ್ಜೆಯ ಉಕ್ಕು ಮತ್ತು ಅಲ್ಯೂಮಿನಿಯಂನ ಜಂಟಿ ಅಭಿವೃದ್ಧಿಯು ಚರ್ಚೆಯ ಪ್ರಮುಖ ಅಂಶಗಳಲ್ಲಿ ಒಂದಾಗಿತ್ತು. ಆಟೋಮೊಬೈಲ್, ಚಲನಶೀಲತೆ ಮತ್ತು ಉನ್ನತ ಮಟ್ಟದ ಉತ್ಪಾದನೆಯಂತಹ ಕ್ಷೇತ್ರಗಳಲ್ಲಿ ಬಳಕೆಗಾಗಿ ಉತ್ತಮ ಗುಣಮಟ್ಟದ ಉಕ್ಕು ಮತ್ತು ಅಲ್ಯೂಮಿನಿಯಂ ಅನ್ನು ಜಂಟಿಯಾಗಿ ಉತ್ಪಾದಿಸುವ ಮತ್ತು ವ್ಯಾಪಾರ ಮಾಡುವಲ್ಲಿ ನಾವು ಸ್ಪಷ್ಟವಾದ ಪಾಲುದಾರಿಕೆಯನ್ನು ಎದುರು ನೋಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: I Love You ಅನ್ನೋದ್ರಲ್ಲಿ ಲೈಂಗಿಕ ಉದ್ದೇಶವಿಲ್ಲ – ಬಾಂಬೆ ಹೈಕೋರ್ಟ್
ಸಾರ್ವಜನಿಕ ವಲಯದ ಉದ್ಯಮಗಳ ತೊಡಗಿಸಿಕೊಳ್ಳುವಿಕೆ
ಭಾರತ-ಯುಎಇ ಕೈಗಾರಿಕಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಭಾರತದ ಸಾರ್ವಜನಿಕ ವಲಯದ ಉದ್ಯಮಗಳ (CPSI) ಸಕ್ರಿಯ ಪಾತ್ರವನ್ನು ಈ ಮಾತುಕತೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಸಿದ್ದಾರೆ. ಮಹಾರತ್ನ ಸಿಪಿಎಸ್‌ಇ ಆಗಿರುವ ಎಸ್‌ಎಐಎಲ್, ಪ್ರಸ್ತುತ ರಾಸ್ ಅಲ್ ಖೈಮಾದ ಸ್ಟೀವಿನ್ ರಾಕ್ ಎಲ್‌ಎಲ್‌ಸಿಯಿಂದ ವಾರ್ಷಿಕವಾಗಿ ಸುಮಾರು 2.5 ಮಿಲಿಯನ್ ಟನ್ ಕಡಿಮೆ ಸಿಲಿಕಾ ಸುಣ್ಣದ ಕಲ್ಲನ್ನು ಆಮದು ಮಾಡಿಕೊಳ್ಳುತ್ತದೆ. ಕಂಪನಿಯು ದೀರ್ಘಾವಧಿಯ ಪೂರೈಕೆ ಒಪ್ಪಂದಗಳು, ಯುಎಇಯ ಮೂಲಸೌಕರ್ಯ ಮತ್ತು ಕೈಗಾರಿಕಾ ವಲಯಗಳಿಗೆ ಪ್ರೀಮಿಯಂ ಭಾರತೀಯ ಉಕ್ಕಿನೊಂದಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಅನ್ವೇಷಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಲ ಬಿಜೆಪಿಯವರು ಸಿಎಂ ಮಾತ್ರ ಅಲ್ಲ, ಪ್ರಧಾನಿಯನ್ನು ಬದಲಾವಣೆ ಮಾಡಬೇಕೆಂದು ಕೇಳ್ತಿದ್ದಾರೆ: ಸಂತೋಷ್ ಲಾಡ್
ಭಾರತದ ಅತಿದೊಡ್ಡ ಕಬ್ಬಿಣದ ಅದಿರು ಉತ್ಪಾದಕ ಸಂಸ್ಥೆ ರಾಷ್ಟ್ರೀಯ ಖನಿಜಾಭಿವೃದ್ಧಿ ಸಂಸ್ಥೆ (NMDC), ಗಣಿಗಾರಿಕೆ ಮೌಲ್ಯ ಸರಪಳಿಯನ್ನು ಅಭಿವೃದ್ಧಿಪಡಿಸುವಲ್ಲಿ ಯುಎಇ ಮೂಲದ ಸಂಸ್ಥೆಗಳೊಂದಿಗೆ ಸಹಕರಿಸಲು ಉತ್ಸುಕವಾಗಿದೆ. ಭಾರತದ ಪ್ರಮುಖ ಎಂಜಿನಿಯರಿಂಗ್ ಸಲಹಾ ಸಂಸ್ಥೆಯಾದ ಮೆಕಾನ್ (MECON), ಕೊಲ್ಲಿ ಭಾಗದಲ್ಲಿ ತೈಲ ಮತ್ತು ಅನಿಲ, ಉಕ್ಕು ಸ್ಥಾವರ ಅಭಿವೃದ್ಧಿ ಮತ್ತು ಸ್ಮಾರ್ಟ್ ಮೂಲಸೌಕರ್ಯ ಯೋಜನೆಗಳಿಗೆ ಕೊಡುಗೆ ನೀಡುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಮೂರು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಾದ ಭಾರತೀಯ ಉಕ್ಕು ಪ್ರಾಧಿಕಾರ (SAIL), ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC), ಮತ್ತು ಮೆಕಾನ್ ಇದೀಗ ದುಬೈನಲ್ಲಿ ಅಂತಾರಾಷ್ಟ್ರೀಯ ಕಚೇರಿಗಳನ್ನು ತೆರೆದಿವೆ. ವ್ಯಾಪಾರ ಸಮನ್ವಯ, ಜಂಟಿ ಉದ್ಯಮಗಳು ಮತ್ತು ತಂತ್ರಜ್ಞಾನ ವಿನಿಮಯಕ್ಕಾಗಿ ಶಾಶ್ವತ ವೇದಿಕೆಯನ್ನು ಸ್ಥಾಪಿಸಿವೆ ಎಂದಿದ್ದಾರೆ. ಇದನ್ನೂ ಓದಿ: `ರಾಮ್‌ಚರಣ್‌ಗೆ ಚಿತ್ರ ಮಾಡಿ ಕೆಟ್ಟೆ’ ಎಂದ ಪ್ರೊಡ್ಯೂಸರ್
ಜಂಟಿ ಕಾರ್ಯಪಡೆ ರಚನೆ
ನಿರ್ದಿಷ್ಟ ಅವಕಾಶಗಳನ್ನು ಗುರುತಿಸಲು, ಸಂಚಾರ ಸೌಕರ್ಯಗಳನ್ನು ಸುಗಮಗೊಳಿಸಲು ಮತ್ತು ಪ್ರಮುಖ ವಲಯಗಳಲ್ಲಿ ದೀರ್ಘಕಾಲೀನ ಸಹಯೋಗವನ್ನು ಉತ್ತೇಜಿಸಲು ಭಾರತೀಯ ಮತ್ತು ಯುಎಇ ಪಾಲುದಾರರ ನಡುವೆ ಜಂಟಿ ಕಾರ್ಯಪಡೆಯನ್ನು ರಚಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅಲ್ಲದೇ ಭಾರತವು ಯುಎಇಯನ್ನು ಕೇವಲ ಮಾರುಕಟ್ಟೆಯನ್ನಾಗಿ ನೋಡುವುದಿಲ್ಲ. ಬದಲಾಗಿ ಜಾಗತಿಕ ಕೈಗಾರಿಕಾ ಭೂಪಟವನ್ನು ಮರು ರೂಪಿಸುವಲ್ಲಿ ಕಾರ್ಯತಂತ್ರದ ಪಾಲುದಾರನಾಗಿ ನೋಡುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಹೆಚ್ಚುತ್ತಿರುವ ಹೃದಯಾಘಾತ – ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ
5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಭಾರತದ ಗುರಿಯೊಂದಿಗೆ ಹೊಂದಿಕೆಯಾಗುವ ಜಂಟಿ ಯೋಜನೆಗಳು ಮತ್ತು ವ್ಯಾಪಾರ ಚೌಕಟ್ಟುಗಳನ್ನು ಮುನ್ನಡೆಸುವ ನಿಟ್ಟಿನಲ್ಲಿ ದುಬೈ ಸಹಕಾರವನ್ನು ವಿಸ್ತೃತ ಮಟ್ಟದಲ್ಲಿ ಪಡೆದುಕೊಳ್ಳುವ ಸಂಕಲ್ಪದೊಂದಿಗೆ ಸಭೆ ಮುಕ್ತಾಯವಾಯಿತು.