Tag: ಹೆಚ್ ಡಿ ಕುಮಾರಸ್ವಾಮಿ

  • ಬಿಎಸ್‍ವೈ ಭಾವನಾತ್ಮಕ ಮಾತುಗಳು ಬರಿ ನಾಟಕೀಯ – ಹೆಚ್‍ಡಿಕೆ

    ಬಿಎಸ್‍ವೈ ಭಾವನಾತ್ಮಕ ಮಾತುಗಳು ಬರಿ ನಾಟಕೀಯ – ಹೆಚ್‍ಡಿಕೆ

    ಬೆಂಗಳೂರು: ಭಾವನಾತ್ಮಕ ಮಾತುಗಳ ಮೂಲಕ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ನಾಡಿನ ಜನತೆಯಲ್ಲಿ ಅನುಕಂಪ ಮೂಡಿಸಲು ಮುಂದಾಗಿದ್ದಾರೆ. ಇದು ನಾಟಕೀಯ ಬೆಳವಣಿಗೆಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

    ಕಲಾಪದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಅಭಿವೃದ್ಧಿಯ ಬಗ್ಗೆ ಅವರು ಮಾತನಾಡಿದ ಪ್ರತಿ ಮಾತುಗಳು ನಾಟಕೀಯವಾಗಿದೆ. ಈ ಬೆಳವಣಿಗೆ ಅವರ ಮುಖ ಭಾವದಲ್ಲಿ ಎದ್ದು ಕಾಣುತ್ತಿತ್ತು. 2008ರಲ್ಲಿ ಅನುಕಂಪದ ಮೂಲಕ ಅವಕಾಶ ಗಿಟ್ಟಿಸಿಕೊಂಡ ಅಧಿಕಾರಕ್ಕೆ ಬಂದಿದ್ದರು. ಆದರೆ ಅದು ಈ ಬಾರಿ ನಡೆಯುವುದಿಲ್ಲ ಎಂದು ಹೇಳಿದರು.

    ಸುಪ್ರೀಂ ಕೋರ್ಟ್ 24 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸಬೇಕು ಎಂದು ಆದೇಶ ನೀಡದಿದ್ದರೆ ರಾಜ್ಯದ ಪರಿಸ್ಥಿತಿ ಹದಗೆಡುತ್ತಿತ್ತು. ಒಂದು ವೇಳೆ ಬಿಜೆಪಿಯವರು 15 ದಿನ ಅಧಿಕಾರದಲ್ಲಿದ್ದರೆ ಕುದುರೆ ವ್ಯಾಪಾರ ಮಾಡುತ್ತಿದ್ದರು ಎಂದು ಆರೋಪಿಸಿದರು.

    ನಮ್ಮ ಶಾಸಕರಿಗೆ ನಾವು ಅವರ ಕುಟುಂಬದವರ ಜೊತೆ ಮಾತನಾಡಲು ಬಿಡಲಿಲ್ಲ ಎಂದು ಆರೋಪಿಸಿ, ಅನುಕಂಪ ಗಿಟ್ಟಿಸಿಕೊಳ್ಳಲು ಪ್ರತ್ನಿಸಿದ್ದಾರೆ. ಆದರೆ, ಈ ಬೆಳವಣಿಗೆಗೆ ತಾವೇ ಕಾರಣ ಎನ್ನುವುದನ್ನು ಮರೆತಿದ್ದಾರೆ ಎಂದು ಆರೋಪಿಸಿದರು.

  • ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ತುರ್ತು ಸಭೆ

    ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ತುರ್ತು ಸಭೆ

    ಬೆಂಗಳೂರು: ಹೈದರಾಬಾದ್‍ನಿಂದ ಆಗಮಿಸಿದ್ದ ಕಾಂಗ್ರೆಸ್ ಶಾಸಕರು ಕೆಜೆ ಜಾರ್ಜ್ ಒಡೆತನದ ಎಂಬೆಸಿ ಗಾಲ್ಫ್ ಬಿಸಿನೆಸ್ ಹೋಟೆಲ್ ನಲ್ಲಿ ತಂಗಿದ್ದರೆ, ಜೆಡಿಎಸ್ ಶಾಸಕರು ಲೆ ಮೆರಿಡಿಯನ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಈ ಹೋಟೆಲ್ ನಲ್ಲಿ ಜೆಡಿಎಸ್ ತುರ್ತು ಸಭೆಯಲ್ಲಿ ಕರೆದಿದ್ದು, ಶಾಸಕಾಂಗ ಪಕ್ಷದ ನಾಯಕ ಹೆಚ್‍ಡಿ ಕುಮಾರಸ್ವಾಮಿ ನಾಯಕರ ಜೊತೆ ಮಾತನಾಡಿದ್ದಾರೆ.

    ಬೆಳಿಗ್ಗೆ 11 ಗಂಟೆಗೆ ಬಸ್ ನಲ್ಲಿ ವಿಧಾನ ಸೌಧಕ್ಕೆ ಹೋಗೋಣ. ಯಾವುದೇ ಕಾರಣಕ್ಕೂ ಅಡ್ಡ ಮತದಾನಕ್ಕೆ ಅವಕಾಶವಿಲ್ಲ. ಸದನದಲ್ಲಿ ಗದ್ದಲ ಗಲಾಟೆ ಮಾಡದೇ ನಾವು ಬಹುಮತವನ್ನು ಸಾಬೀತು ಪಡಿಸೋಣ. ಬಿಜೆಪಿಯವರು ಸ್ವಲ್ಪ ಮಾತನಾಡಿ ರಾಜೀನಾಮೆ ಕೊಡುವುದಷ್ಟೆ ಅವರಿಗೆ ಉಳಿದಿರುವ ವಿಚಾರ ಎಂದು ಎಚ್‍ಡಿಕೆ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

    ಧಾರವಾಡ ನವಲಗುಂದ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್ ಅಭ್ಯರ್ಥಿ ಕೋನರೆಡ್ಡಿ ಪ್ರತಿಕ್ರಿಯಿಸಿ, ಜೆಡಿಎಸ್ ಶಾಸಕರು ನಮ್ಮ ಜೊತೆಯಲ್ಲಿದ್ದಾರೆ. ಯಾರೂ ಬಿಟ್ಟು ಹೋಗಲ್ಲ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವುದು ಖಚಿತ. ಯಾರೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ.

  • ಊಹಿಸಲೂ ಸಾಧ್ಯವಾಗದಷ್ಟು ಬಹುಮತ ಸಾಬೀತುಪಡಿಸುತ್ತೇವೆ: ಶ್ರೀರಾಮುಲು

    ಊಹಿಸಲೂ ಸಾಧ್ಯವಾಗದಷ್ಟು ಬಹುಮತ ಸಾಬೀತುಪಡಿಸುತ್ತೇವೆ: ಶ್ರೀರಾಮುಲು

    ಬೆಂಗಳೂರು: ನಾವು ಸದನದ ಒಳಗೆ ಬಹುಮತ ಸಾಬೀತು ಪಡಿಸಿ ತೋರಿಸುತ್ತೇವೆ ಅಂತ ಶಾಸಕ ಶ್ರೀರಾಮುಲು ಸವಾಲೆಸೆದಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವೂ ಊಹಿಸಲೂ ಕೂಡ ಸಾಧ್ಯವಿಲ್ಲ, ಅಷ್ಟು ಶಾಸಕರು ಬಿಜೆಪಿ ತೆಕ್ಕೆಗೆ ಬರಲಿದ್ದಾರೆ. ಪಕ್ಷೇತರ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ. ಬೇರೆ ಪಕ್ಷಗಳ ಶಾಸಕರೂ ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಅಂತ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.

    ಚುನಾವಣಾ ಫಲಿತಾಂಶಕ್ಕೂ ಮೊದಲೇ ಮೇ 17ರಂದು ಪ್ರಮಾಣ ವಚನ ಸ್ವೀಕಾರ ಮಾಡಿಯೇ ಮಾಡುತ್ತೇನೆ ಎಂದಿದ್ದ ಬಿಎಸ್ ಯಡಿಯೂರಪ್ಪ ಅವರು ಕೊನೆಗೂ ಇಂದು ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಈ ಬೆನ್ನಲ್ಲೇ ಇತ್ತ ರೆಸಾರ್ಟ್ ಗೆ ತೆರಳಿದ್ದ ಕಾಂಗ್ರೆಸ್- ಜೆಡಿಎಸ್ ಶಾಸಕರು ಹಾಗೂ ಮುಖಂಡರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

    ಈ ಮಧ್ಯೆ ಬಳ್ಳಾರಿಯ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ನಾಯಕರ ಕೈಗೆ ಸಿಗುತ್ತಿಲ್ಲ, ಇವರ ಜೊತೆ ಇನ್ನೊಬ್ಬ ಶಾಸಕ ಪ್ರತಾಪ್ ಗೌಡ ಕೂಡ ನಾಟ್ ರೀಚೆಬಲ್ ಆಗಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ ಮುಖಂಡರಲ್ಲಿ ಆತಂಕಕ್ಕೀಡು ಮಾಡಿದೆ. ಈ ಬಗೆ ಕುಮಾರಸ್ವಾಮಿ ಕಿಡಿಕಾರಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸಂವಿಧಾನದ ವಿರುದ್ಧ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾರವರ ಮೇಲೆ ಕೇಂದ್ರ ಒತ್ತಡ ಹಾಕಿದೆ ಅಂತ ಕೇಂದ್ರದ ವಿರುದ್ಧ ಗಂಭೀರ ಆರೋಪ ಮಾಡಿದ್ರು.

    2008 ರಿಂದ 2013ರಲ್ಲಿ ಬಿಜೆಪಿ ಮಾಡಿದ ಹಗರಣಗಳನ್ನು ನಾಡಿನ ಜನತೆ ನೆನಪು ಮಾಡಿಕೊಳ್ಳಬೇಕಿದೆ. ಭ್ರಷ್ಟಾಚಾರ ನಡೆಸುವುದು ಬಿಜೆಪಿಯ ಹುಟ್ಟುಗುಣ ಅದು ಅವರನ್ನು ಬಿಟ್ಟು ಹೋಗಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಉಳಿಸುವ ಸಲುವಾಗಿ ನಾಡಿನ ಜನರ ಬೀದಿಗಿಳಿದು ಶಾಂತಿಯುತ ಹೋರಾಟ ನಡೆಸಬೇಕೆಂದು ಇದೇ ವೇಳೆ ಹೆಚ್‍ಡಿಕೆ ಕರೆಕೊಟ್ಟಿದ್ದರು.

  • ಬಹುಮತ ಸಾಬೀತುಪಡಿಸಲು 15 ದಿನದ ಕಾಲಾವಕಾಶ ಕೊಟ್ಟಿದ್ದು ದೇಶದಲ್ಲಿ ಇದೇ ಮೊದಲು: ಹೆಚ್‍ಡಿಕೆ

    ಬಹುಮತ ಸಾಬೀತುಪಡಿಸಲು 15 ದಿನದ ಕಾಲಾವಕಾಶ ಕೊಟ್ಟಿದ್ದು ದೇಶದಲ್ಲಿ ಇದೇ ಮೊದಲು: ಹೆಚ್‍ಡಿಕೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಅಧಿಕಾರದ ದುರಪಯೋಗ ಮಾಡಿಕೊಳ್ಳುತ್ತಿದೆ. ಸಂವಿಧಾನದ ವಿರುದ್ಧ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾರವರ ಮೇಲೆ ಕೇಂದ್ರ ಒತ್ತಡ ಹಾಕಿದೆ ಅಂತಾ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿಗೆ ಬಹುಮತ ಸಾಬೀತು ಮಾಡಲು 15 ದಿನದ ಕಾಲಾವಕಾಶ ನೀಡಿದ್ದು, ದೇಶದಲ್ಲಿಯೇ ಮೊದಲಾಗಿದೆ. ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ರಾಜ್ಯಪಾಲರು 4ರಿಂದ5 ದಿನದ ಅವಕಾಶ ಕೊಡುವುದನ್ನು ಕೇಳಿದ್ದೇವೆ ಮತ್ತು ನೋಡಿದ್ದೇವೆ. 15 ದಿನದ ಅವಕಾಶ ಪಡೆದುಕೊಂಡ ಬಿಜೆಪಿ ಕುದುರೆ ವ್ಯಾಪಾರಕ್ಕೆ ಮುಂದಾಗಲಿದೆ ಅಂತಾ ಅಸಮಧಾನ ವ್ಯಕ್ತಪಡಿಸಿದ್ರು.

    ವಿಧಾನಸೌಧದ ಬಳಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಸಹ ಭಾಗಿಯಾಗಲಿದ್ದಾರೆ. ದೇಶದ ಎಲ್ಲ ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆದು ಪ್ರತಿಭಟನೆಯ ಮುಂದಾಳತ್ವವನ್ನು ತೆಗೆದುಕೊಳ್ಳಬೇಕೆಂದು ನಾನು ನಮ್ಮ ತಂದೆಯವರಲ್ಲಿ ಮನವಿ ಮಾಡಿಕೊಳ್ಳಲಿದ್ದೇನೆ. ದೇಶದ ರಕ್ಷಣೆಗಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಬಿಎಸ್‍ಪಿ ನಾಯಕಿ ಮಾಯಾವತಿ, ಚಂದ್ರಬಾಬು ನಾಯ್ಡು, ಚಂದ್ರಶೇಖರ್ ರಾವ್ ಸೇರಿದಂತೆ ಎಲ್ಲ ನಾಯಕರ ಬೆಂಬಲಕ್ಕೆ ಮನವಿ ಮಾಡಿಕೊಳ್ಳುತ್ತೇವೆ ಅಂತಾ ತಿಳಿಸಿದ್ರು.

    2008 ರಿಂದ 2013ರಲ್ಲಿ ಬಿಜೆಪಿ ಮಾಡಿದ ಹಗರಣಗಳನ್ನು ನಾಡಿನ ಜನತೆ ನೆನಪು ಮಾಡಿಕೊಳ್ಳಬೇಕಿದೆ. ಭ್ರಷ್ಟಾಚಾರ ನಡೆಸುವುದು ಬಿಜೆಪಿಯ ಹುಟ್ಟುಗುಣ ಅದು ಅವರನ್ನು ಬಿಟ್ಟು ಹೋಗಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಉಳಿಸುವ ಸಲುವಾಗಿ ನಾಡಿನ ಜನರ ಬೀದಿಗಿಳಿದು ಶಾಂತಿಯುತ ಹೋರಾಟ ನಡೆಸಬೇಕೆಂದು ಕರೆ ಕೊಟ್ಟರು.

  • ಎರಡೂವರೆ ವರ್ಷಗಳ ಬಳಿಕ ಕುಮಾರಸ್ವಾಮಿ-ಜಮೀರ್ ಅಹ್ಮದ್ ಮುಖಾಮುಖಿ

    ಎರಡೂವರೆ ವರ್ಷಗಳ ಬಳಿಕ ಕುಮಾರಸ್ವಾಮಿ-ಜಮೀರ್ ಅಹ್ಮದ್ ಮುಖಾಮುಖಿ

    ಬೆಂಗಳೂರು: ಜೆಡಿಎಸ್ ನಿಂದ ಹೊರಬಂದ ನಂತರ ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಶಾಸಕ ಜಮೀರ್ ಅಹ್ಮದ್ ಹಾಗು ಹೆಚ್.ಡಿ.ಕುಮಾರಸ್ವಾಮಿ ಮುಖಾಮುಖಿ ಆಗಿದ್ದಾರೆ. ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದರಿಂದ ಕಾಂಗ್ರೆಸ್ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಬೆಂಬಲ ನೀಡಿದೆ.

    ರಾಜ್ಯದಲ್ಲಿ ರೆಸಾರ್ಟ್ ರಾಜಕಾರಣ ಮುಂದುವರೆದಿದ್ದು, ಕಾಂಗ್ರೆಸ್ ತನ್ನ ಎಲ್ಲ ಶಾಸಕರನ್ನು ರಾಮನಗರ ಜಿಲ್ಲೆಯ ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಇರಿಸಲಾಗಿದೆ. ಈ ವೇಳೆಯಲ್ಲಿ ಕುಮಾರಸ್ವಾವಿ ಮತ್ತು ಜಮೀರ್ ಅಹ್ಮದ್ ಮುಖಾಮುಖಿ ಆಗಿದ್ದಾರೆ.

    ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಕುಮಾರಸ್ವಾಮಿ ಅವರನ್ನು ರಾಜಕೀಯದಲ್ಲಿ ನಾನು ಅವರನ್ನ ವಿರೋಧ ಮಾಡಿದ್ದೆ, ಅವರು ನನ್ನನ್ನು ವಿರೋಧ ಮಾಡಿದ್ದರು ಅಷ್ಟೇ. ಈಗ ಜೆಡಿಎಸ್ ಜೊತೆಗೆ ಸರ್ಕಾರ ರಚಿಸಲು ಪಕ್ಷ ತೀರ್ಮಾನಿಸಿದೆ. ನಾವು ಅದಕ್ಕೆ ಒಪ್ಪಿಕೊಂಡಿದ್ದೇವೆ. ವೇಳೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಲ್ಲ. ಇದೇ ಪಕ್ಷದಲ್ಲೇ ಇರುತ್ತೇನೆ ಅಂತ ಜಮೀರ್ ಸ್ಪಷ್ಟಪಡಿಸಿದ್ರು.

    ಚುನಾವಣಾ ಫಲಿತಾಂಶದ ದಿನದಂದು ಗೆಲುವಿನ ಬಳಿಕ ಜಮೀರ್ ಅಹ್ಮದ್, ನಾನು ಇಂದು ಜೆಡಿಎಸ್ ಬಿಟ್ಟು ಬಂದಿದ್ದರ ಬಗ್ಗೆ ಸಮರ್ಥಿಸಿಕೊಳ್ಳುತ್ತೇನೆ. ಕ್ಷೇತ್ರದ ಜನ ನನ್ನನ್ನು ರಾಜಕೀಯ ವ್ಯಕ್ತಿಯಾಗಿ ನೋಡಿಲ್ಲ, ಮನೆಯ ಮಗನಂತೆ ನೋಡಿ ಆಶೀರ್ವದಿಸಿ ಗೆಲ್ಲಿಸಿದ್ದಾರೆ ಅಂತಾ ಹೇಳಿದ್ರು.

  • 11.30ಕ್ಕೆ ಸರಿಯಾಗಿ ಎಚ್‍ಡಿಕೆಯನ್ನು ಆಯ್ಕೆ ಮಾಡಿದ್ದು ಯಾಕೆ: ರೇವಣ್ಣ ಹೇಳ್ತಾರೆ ಓದಿ

    11.30ಕ್ಕೆ ಸರಿಯಾಗಿ ಎಚ್‍ಡಿಕೆಯನ್ನು ಆಯ್ಕೆ ಮಾಡಿದ್ದು ಯಾಕೆ: ರೇವಣ್ಣ ಹೇಳ್ತಾರೆ ಓದಿ

    ಬೆಂಗಳೂರು: ಜೆಡಿಎಸ್‍ನ ಎಲ್ಲ ಸದಸ್ಯರು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನಮ್ಮ ಪಕ್ಷದ ಶಾಸಕಾಂಗ ಸಭೆಯ ನಾಯಕರನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ.

    ಶಾಂಗ್ರಿಲಾ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಸಭೆ ಬಳಿಕ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಎಚ್‍ಡಿ. ರೇವಣ್ಣ ಇಂದು “11.30ಕ್ಕೆ ಸರಿಯಾಗಿ” ಹೆಚ್ ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಅಂತ ಹೇಳಿದ್ರು. ಈ ವೇಳೆ ಅದ್ಯಾಕೆ 11.30ಕ್ಕೆ ಆಯ್ಕೆ ಮಾಡಿದ್ದು ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ರೇವಣ್ಣ, ಏಯ್.. ಅದೆಲ್ಲಾ ಗೊತ್ತಲ್ಲ ನಿಮಗೆ. ಈವಾಗ ಎಲ್ಲ ಟೈಂ ನೋಡಿಕೊಂಡು ಕುತ್ಕೊತ್ತಾರ ಎಂದು ಹಾಸ್ಯದ ಧಾಟಿಯಲ್ಲಿ ಉತ್ತರ ನೀಡಿದರು.

    ಇದಕ್ಕೂ ಮುನ್ನ, ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ನಿವಾಸಕ್ಕೆ ರೇವಣ್ಣ ಭೇಟಿ ನೀಡಿದ್ದರು. ಈ ವೇಳೆ ಅವರು, ಯಾವುದೇ ಹೈಜಾಕ್ ಆಗಲಿ ಏನೇ ಆಗಲಿ, ಹೆಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಸರ್ಕಾರ ರಚನೆಯಾಗುತ್ತದೆ. ಅವರೇ ಸಿಎಂ ಆಗುವುದು ನಿಶ್ಚಿತ ಎಂದರು.

    ಈ ಬಾರಿ ನಮ್ಮ ಪಕ್ಷದಿಂದ ಆಯ್ಕೆಯಾದ 38 ಶಾಸಕರು ಎಲ್ಲಿಯೂ ಹೋಗುವುದಿಲ್ಲ. ನಿಷ್ಠೆಯಿಂದ ಪಕ್ಷದ ಜೊತೆಗಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗೋದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ದೇವೇಗೌಡರು ಈಗಾಗಲೇ ಜೆಡಿಎಸ್ ಶಾಸಕರ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಬೇಕು ಎಂದು ಶ್ರೀಕಂಠೇಗೌಡರಿಗೆ ನಿರ್ದೇಶನ ನೀಡಿದ್ದಾರೆ. ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೇಳಿಬಂದಿದೆ.

    ಮೇ 18ರಂದು ಎಚ್‍ಡಿ ದೇವೇಗೌಡ 85ನೇ ವರ್ಷದ ಹುಟ್ಟುಹಬ್ಬವನ್ನು ಆಚಿರಿಸಕೊಳ್ಳಲಿದ್ದಾರೆ. ಹೀಗಾಗಿ ಚುನಾವಣೆಗೂ ಮುನ್ನ ನಡೆದ ಪ್ರಚಾರ ಕಾರ್ಯಕ್ರಮಗಳಲ್ಲಿ ಮೇ 18 ಶುಕ್ರವಾರದಂದು ನಾನು ಪ್ರಮಾಣವಚನ ಸ್ವೀಕರಿಸುತ್ತೇನೆ. ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದ್ದರು.

    https://www.youtube.com/watch?v=YO0Wcn5mxCM

  • ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಳಿಕ ಬಿಜೆಪಿಯ ನಡೆ ನಿಗೂಢ!

    ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಳಿಕ ಬಿಜೆಪಿಯ ನಡೆ ನಿಗೂಢ!

    ಬೆಂಗಳೂರು: ರಾಜ್ಯ ಚುನಾವಣಾ ಫಲಿತಾಂಶದ ಬಳಿಕ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯ ಮುಂದಿನ ನಡೆ ಏನೆಂಬುದರ ಬಗ್ಗೆ ತೀವ್ರ ಕೂತುಹಲವನ್ನು ಹುಟ್ಟುಹಾಕಿದೆ.

    ಆಪರೇಷನ್ ಕಮಲ ಮಾಡಲು ಮುಂದಾಗಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ದಕ್ಷಿಣ ಭಾರತದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಶತಾಗತಯ ಪ್ರಯತ್ನ ಮಾಡುತ್ತಿದೆ. ಇತ್ತ ರಾಜ್ಯಪಾಲರ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸರ್ಕಾರ ರಚನೆಗೆ ಎರಡು ದಿನಗಳ ಕಾಲಾವಕಾಶ ಕೋರಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಕಾಂಗ್ರೆಸ್-ಜೆಡಿಎಸ್ ನಾಯಕರ ನಿಯೋಗ ಜೊತೆಯಾಗಿ ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಡಿವೆ.

    ಸರ್ಕಾರ ರಚಿಸಲು ಬಿಜೆಪಿಯ ಮುಂದಿನ ನಡೆ ಏನು?
    * ದೊಡ್ಡ ಪಕ್ಷವಾಗಿದ್ದಕ್ಕೆ ಸರ್ಕಾರ ರಚನೆಗೆ ಅವಕಾಶ ಕೋರಿಕೆ.
    * ಒಂದು ವಾರದೊಳಗೆ ಸಂಖ್ಯಾಬಲವನ್ನು ಹೊಂದಿಸಲು ಯತ್ನ.
    * ಸರ್ಕಾರ ರಚಿಸಿದ ಬಳಿಕ ಬಹುಮತ ಸಾಬೀತುಪಡಿಸಲು ತೆಗೆದುಕೊಳ್ಳಬಹುದು.
    * ಬಹುಮತ ಸಾಬೀತಿನ ಸಮಯದಲ್ಲಿ ಜೆಡಿಎಸ್- ಕಾಂಗ್ರೆಸ್‍ನ 15ಕ್ಕೂ ಹೆಚ್ಚು ಶಾಸಕರು ಗೈರಾಗುವಂತೆ ನೋಡಿಕೊಳ್ಳುವುದು.
    * ಸಾಂವಿಧಾನಿಕ ಮತ್ತು ಕಾನೂನಾತ್ಮಕವಾಗಿ ಮುಂದಿನ ಹೆಜ್ಜೆ.
    * ಸುಪ್ರೀಂಕೋರ್ಟ್ ಆದೇಶವನ್ನು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಉಲ್ಲೇಖ.
    * ಜೆಡಿಎಸ್ ಅಥವಾ ಕಾಂಗ್ರೆಸ್ ಶಾಸಕರಿಗೆ ಗಾಳ..?
    * ಮುಖ್ಯವಾಗಿ ಲಿಂಗಾಯತ ಶಾಸಕರನ್ನು ಸೆಳೆಯಲು ಪ್ಲಾನ್.
    * ಜೆಡಿಎಸ್- ಕಾಂಗ್ರೆಸ್ ಮೈತ್ರಿಗೆ ಅಸಮಾಧಾನ ತೋರುವವರ ಮೇಲೆ ಕಣ್ಣು.
    * ಜೆಡಿಎಸ್- ಕಾಂಗ್ರೆಸ್ ಸಂಧಾನದವರೆಗೆ ಕಾದು ನೋಡುವ ತಂತ್ರ.

  • ನಾವ್ಯಾಕೆ ರೆಸಾರ್ಟ್ ಗೆ ಹೋಗೋಣ: ಸಿದ್ದರಾಮಯ್ಯ

    ನಾವ್ಯಾಕೆ ರೆಸಾರ್ಟ್ ಗೆ ಹೋಗೋಣ: ಸಿದ್ದರಾಮಯ್ಯ

    ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸರ್ಕಾರ ರಚನೆ ಮಾಡಲಿದೆ. ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಮಾಹಿತಿ ನನಗಿಲ್ಲ. ನಾವ್ಯಾಕೆ ರೆಸಾರ್ಟ್ ಗೆ ಹೋಗಬೇಕೆಂದು ಹಂಗಾಮಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಬುಧವಾರ ಕಾಂಗ್ರೆಸ್-ಜೆಡಿಎಸ್ ಶಾಸಕಾಂಗದ ಸಭೆ ನಡೆಯಲಿದೆ. ಸಭೆಯಲ್ಲಿ ಒಮ್ಮತದ ತೀರ್ಮಾಣ ತೆಗೆದುಕೊಳ್ಳಲಾಗುವುದು. ಈಗಾಗಲೇ ರಾಜ್ಯಪಾಲರಿಗೆ ಸರ್ಕಾರ ರಚನೆ ಮಾಡಲಿದ್ದೇವೆ ಅಂತಾ ಪತ್ರ ಬರೆಯಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ದೇವೇಗೌಡರಿಗೂ ನಮ್ಮ ಬೆಂಬಲವಿದೆ ಅಂತಾ ಪತ್ರದ ಮೂಲಕ ತಿಳಿಸಿದ್ದೇವೆ ಅಂತಾ ಸ್ಪಷ್ಟಪಡಿಸಿದರು. ಇದನ್ನೂ ಓದಿ: ರಾಜ್ಯಪಾಲರ ಅಂಗಳದಲ್ಲೀಗ ಸರ್ಕಾರದ ಚೆಂಡು: ಯಾವ ಸಮಯದಲ್ಲಿ ಏನಾಯ್ತು?

    ಇನ್ನು ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ಆರೋಪಗಳಿಗೆ ಪ್ರತಿಕ್ರಿಯಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪ ಮಾಡೋದು ಸಹಜ. ಆದ್ರೆ ಆ ವಿಚಾರ ಈಗ ಅಪ್ರಸ್ತುತ. ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ. ಸರ್ಕಾರ ರಚನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ. ಯಾವ ಆಪರೇಷನ್ ಕಮಲ ಕೂಡ ನಡೆಯಲ್ಲ ಅಂತಾ ತಿಳಿಸಿದ್ದಾರೆ.

  • ಆಪರೇಷನ್ ಕಮಲ ಗಾಳಿ ಸುದ್ದಿ – ಎಚ್‍ಡಿಕೆ

    ಆಪರೇಷನ್ ಕಮಲ ಗಾಳಿ ಸುದ್ದಿ – ಎಚ್‍ಡಿಕೆ

    ಬೆಂಗಳೂರು: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ತಿಳಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.

    ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಸರ್ಕಾರ ರಚನೆ ಮಾಡಲು ಕಾಂಗ್ರೆಸ್ ಬೆಂಬಲದ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ನೀಡಿದ್ದಾರೆ. ಇಂದು ರಾಜ್ಯಪಾಲರಿಗೆ ಎರಡೂ ಪಕ್ಷದ ನಿಯೋಗದಿಂದ ಸರ್ಕಾರ ರಚಿಸಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದೇವೆ ಎಂದರು.

    ಆಪರೇಷನ್ ಕಮಲದ ಬಗ್ಗೆ ಕೇಳಿದ ಪ್ರಶ್ನೆಗೆ, ಬಿ.ಎಸ್.ಯಡಿಯೂರಪ್ಪ ಯಾವ ಕಾರಣಕ್ಕೆ ಎರಡು ದಿನಗಳ ಕಾಲಾವಕಾಶ ಕೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಆಪರೇಷನ್ ಕಮಲದ ಬಗ್ಗೆ ಗಾಳಿ ಸುದ್ದಿಗಳು ಕೇಳಿ ಬರ್ತೀವಿ ಎಂದರು.

    ಸಿದ್ದರಾಮಯ್ಯ ಮಾತನಾಡಿ, ಜೆಡಿಎಸ್ ಗೆ ಸರ್ಕಾರ ರಚನೆ ಮಾಡಲು ಕಾಂಗ್ರೆಸ್ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ. ಕಾಂಗ್ರೆಸ್ ತೀರ್ಮಾನವನ್ನು ಪತ್ರದ ಮೂಲಕ ರಾಜ್ಯಪಾಲರಿಗೆ ತಿಳಿಸಿದ್ದೇವೆ. ನಮ್ಮ ಪಕ್ಷದ ತೀರ್ಮಾನವನ್ನು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೂ ಪತ್ರದ ಮೂಲಕ ತಿಳಿಸಲಾಗಿದೆ. ಸರ್ಕಾರ ರಚನೆ ಮಾಡಲು ಬೇಕಾದ ಬಹುಮತ ನಮ್ಮಲಿದೆ ಅಂತಾ ತಿಳಿಸಿದ್ರು.

    ನಾವು ನಮ್ಮ ಪಕ್ಷದ ಎಲ್ಲ ನಾಯಕರೊಂದಿಗೆ ಬಂದಿದ್ದು, ಹಾಗೆಯೇ ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಿಯೋಗದಿಂದ ಬಂದು ಎರಡೂ ಪಕ್ಷಗಳಿಂದ ಒಂದೊಂದು ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಪತ್ರದಲ್ಲಿ ನಾವು ಜೆಡಿಎಸ್‍ಗೆ ಸರ್ಕಾರ ರಚಿಸಲು ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ.ಕಾಂಗ್ರೆಸ್ ಮನವಿಗೆ ಜೆಡಿಎಸ್ ಸಹ ಬೆಂಬಲ ನೀಡಿದೆ ಎಂದರು.