Tag: ಹೆಚ್.ಆಂಜನೇಯ

  • ಎಡ ಸಮುದಾಯಕ್ಕೆ 7% ಒಳಮೀಸಲಾತಿ ಕೊಡಬೇಕು – ಆಂಜನೇಯ

    ಎಡ ಸಮುದಾಯಕ್ಕೆ 7% ಒಳಮೀಸಲಾತಿ ಕೊಡಬೇಕು – ಆಂಜನೇಯ

    ಬೆಂಗಳೂರು: ಒಳಮೀಸಲಾತಿ (Internal Reservation) ಕೊಡುವ ಸಂಬಂಧ ನ್ಯಾ. ನಾಗಮೋಹನ್ ದಾಸ್ ಆಯೋಗ ಇವತ್ತು ವರದಿ ಕೊಡ್ತಿದ್ದು, ಮಾದಿಗರಿಗೆ ನ್ಯಾಯ ಸಿಗೋ ವಿಶ್ವಾಸ ಇದೆ. ಮಾದಿಗರಿಗೆ 7% ಆದರೂ ಒಳಮೀಸಲಾತಿ ಕೊಡಬೇಕು ಎಂದು ಮಾಜಿ ಸಚಿವ ಆಂಜನೇಯ (H Anjaneya) ಒತ್ತಾಯ ಮಾಡಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ವರದಿ ಕೊಡುತ್ತಿರುವುದರಿಂದ ಆತಂಕ, ಕುತೂಹಲ, ಸಂತೋಷ ಎಲ್ಲಾ ಆಗುತ್ತಿದೆ. ಒಳಮೀಸಲಾತಿ ಬೇಕು ಅಂತ 35 ವರ್ಷಗಳ ಹೋರಾಟ ಮಾಡುತ್ತಿದ್ದೇವೆ. ಮಾದಿಗರಿಗೆ ಸರಿಯಾದ ಸವಲತ್ತು ಇದೂವರೆಗೂ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್ ಒಳಮೀಸಲಾತಿ ಕೊಡಿ ಅಂತ ಆದೇಶ ಬಂದ ಮೇಲೆ ನಮಗೆ ಧೈರ್ಯ ಬಂತು. ಈವರೆಗೂ ನಮಗೆ ಸಿಗೋ ಸವಲತ್ತು ಸಿಕ್ಕಿಲ್ಲ. ಮಾದಿಗರು ಅವಕಾಶದಿಂದ ವಂಚನೆ ಆಗುತ್ತಿದ್ದಾರೆ. ಒಳಮೀಸಲಾತಿಯ ವರದಿ ಕೊಡುತ್ತಿದ್ದಾರೆ. ಒಳಮೀಸಲಾತಿ ವರದಿ ಕೊಡ್ತಿರೋದ್ರಿಂದ ಮಾದಿಗರು ಬದುಕಬಹುದು ಎಂಬ ನಂಬಿಕೆ ಬಂದಿದೆ ಎಂದರು. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್‌ ಸೂಚನೆ

    ನಾವು ಅಸ್ಪೃಶ್ಯರು ಅಂತ ಸರಿಯಾಗಿ ಸರ್ಕಾರದ ಸವಲತ್ತು ಸಿಕ್ಕಿರಲಿಲ್ಲ. ಸಿದ್ದರಾಮಯ್ಯ (Siddaramaiah) ಸಾಮಾಜಿಕ ನ್ಯಾಯದ ಹರಿಕಾರ ಒಳಮೀಸಲಾತಿ ಜಾತಿಗೆ ಆಯೋಗ ರಚನೆ ಮಾಡಿದ್ರು. ಆಯೋಗ ರಾಜ್ಯಾದ್ಯಂತ ಸಮೀಕ್ಷೆ ಮಾಡಿದೆ. ವರದಿ ಚೆನ್ನಾಗಿ ಇದೆ ಅನ್ನೋ ವಿಶ್ವಾಸ ಇದೆ. ನಮಗೆ ಸಿಗಬೇಕಾದ ಸವಲತ್ತು ಸಿಗೋ ವಿಶ್ವಾಸ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಸಹಮತದಿಂದ ಒಳಮೀಸಲಾತಿ ಹಂಚಿಕೆ – ಪರಮೇಶ್ವರ್ ಹೇಳಿಕೆಗೆ ಗೋವಿಂದ ಕಾರಜೋಳ ಆಕ್ರೋಶ

    ಸದಾಶಿವ ಆಯೋಗ ಎಡ ಸಮುದಾಯಕ್ಕೆ 6% ಒಳಮೀಸಲಾತಿ ಕೊಟ್ಟಿದ್ದರು. ಮಾಧುಸ್ವಾಮಿ ಅವರು 6% ಕೊಡಬೇಕು ಅಂತ ಹೇಳಿದ್ರು. ಈಗ 7% ಮೀಸಲಾತಿಯಾದ್ರು ಮಾದಿಗರಿಗೆ ಸರ್ಕಾರ ಕೊಡಬೇಕು. 15% ಮೀಸಲಾತಿ ಇದ್ದಾಗ 6% ಶಿಫಾರಸು ಮಾಡಿದ್ರು. ಈಗ 17% ಮೀಸಲಾತಿ ಇದೆ. ಈಗ 7% ಆದ್ರು ಮೀಸಲಾತಿ ಎಡ ಸಮುದಾಯಕ್ಕೆ ಕೊಡಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ:  ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

  • ಅಶ್ಲೀಲ ಪದ ಬಳಸಿ ದೌರ್ಜನ್ಯ ಆರೋಪ – ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

    ಅಶ್ಲೀಲ ಪದ ಬಳಸಿ ದೌರ್ಜನ್ಯ ಆರೋಪ – ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

    ನವದೆಹಲಿ: ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿಶೇಷ ಕರ್ತವ್ಯಾಧಿಕಾರಿ ಮೋಹನ್ ಕುಮಾರ್, ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರ ವಿಶೇಷ ಅಧಿಕಾರಿ ಹೆಚ್.ಆಂಜನೇಯ ನಡುವೆ ಜಗಳ ತಾರಕಕ್ಕೇರಿರುವ ಹೊತ್ತಲ್ಲೇ ಹೆಚ್.ಆಂಜನೇಯ (H Anjaneya) ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ.

    ಕರ್ನಾಟಕ ಭವನದಲ್ಲಿ ಉಪ ಸಮನ್ವಯಾಧಿಕಾರಿ ಮತ್ತು ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕುಸುಮಾ ನಂದರಿಗಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ (Karanataka State Commission for Womens) ದೂರು ನೀಡಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಹೆಚ್.ಆಂಜನೇಯ ಕರ್ನಾಟಕ ಭವನದ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದು, ಅಸಭ್ಯ ವರ್ತನೆಯ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

    ಹೆಚ್.ಆಂಜನೇಯ ಅವರು ಪ್ರಸ್ತುತ ಕರ್ನಾಟಕ ಭವನದಲ್ಲಿ ಕಛೇರಿ ಅಧೀಕ್ಷಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಚೇರಿಯ ವಿಚಾರದಲ್ಲಿ ಲೆಕ್ಕ ಶಾಖೆಯ ಸಿಬ್ಬಂದಿಯನ್ನು ಕರೆದು ಬಾಯಿಗೆ ಬಂದ ಹಾಗೆ ಮಾತನಾಡುವುದಲ್ಲದೇ `ಲೆಕ್ಕಾಧಿಕಾರಿ ಏನು ಕತ್ತೆ ಕಾಯುತ್ತಿದ್ದಾಳಾ’ ಎಂದು ಆಗೌರವದಿಂದ ಮಾತನಾಡಿದ್ದಾರೆ. ನಿಮ್ಮನ್ನು ಅಮಾನತು ಮಾಡಿಸುತ್ತೇನೆ. ವಜಾ ಮಾಡಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

    ಅಶ್ಲೀಲ ಅಸಭ್ಯ ಪದಗಳನ್ನು ಬಳಸಿ ಬೈಯುತ್ತಾ ಅಧಿಕಾರ ದರ್ಪ ತೋರುತ್ತಿದ್ದಾರೆ. ಅಲ್ಲದೇ ಮಹಿಳಾ ನೌಕರರ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಧಿಕಾರ ಬಳಸಿಕೊಂಡು ನನ್ನ ಭಡ್ತಿಯನ್ನು ತಡೆಯುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ

    ಈ ಬಗ್ಗೆ ಸಿಎಂಗೆ ದೂರು ನೀಡಿದ್ದು, ಪರಿಶೀಲಿಸಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇತ್ತ ಮಹಿಳಾ ಆಯೋಗದಿಂದ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಬೆಳವಣಿಗೆಗೂ ಮುನ್ನ ಮೋಹನ್ ಕುಮಾರ್ ಮತ್ತು ಹೆಚ್.ಆಂಜನೇಯ ನಡುವಿನ ಜಗಳ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.

  • ಕೆಲವರು ಅಪಾರ್ಟ್ಮೆಂಟ್ ಒಳಗೂ ಬಿಟ್ಟುಕೊಳ್ಳದೇ ಜಾತಿ ಹೇಳಲು ಹಿಂದೇಟು: ಹೆಚ್.ಆಂಜನೇಯ

    ಕೆಲವರು ಅಪಾರ್ಟ್ಮೆಂಟ್ ಒಳಗೂ ಬಿಟ್ಟುಕೊಳ್ಳದೇ ಜಾತಿ ಹೇಳಲು ಹಿಂದೇಟು: ಹೆಚ್.ಆಂಜನೇಯ

    – ಸರ್ವೆ ದಿನಾಂಕ ವಿಸ್ತರಿಸದಂತೆ ಸಿಎಂಗೆ ಆಗ್ರಹ

    ಬೆಂಗಳೂರು: ಕೆಲವರು ಜಾತಿ ಹೆಸರು ಹೇಳಲು ಹಿಂದೇಟು ಹಾಕ್ತಿದ್ದಾರೆ. ಅಪಾರ್ಟ್ಮೆಂಟ್, ದೊಡ್ಡ ದೊಡ್ಡ ಕಟ್ಟಡಗಳಲ್ಲಿ ವಾಸ ಮಾಡೋರು ಒಳಗೆ ಬಿಟ್ಟುಕೊಳ್ಳಲ್ಲ ಎಂದು ಮಾಜಿ ಸಚಿವ ಹೆಚ್.ಆಂಜನೇಯ (H Anjaneya) ಹೇಳಿದ್ದಾರೆ.

    ಸರ್ವೆ ಮಾಡದೇ ಸ್ಟಿಕ್ಕರ್ ಅಂಟಿಸೋದು ಸರಿ ಅಲ್ಲ. ಸರ್ವೆ ಮಾಡಿದ್ಮೇಲೆ ಸ್ಟಿಕ್ಕರ್ ಹಾಕಬೇಕಿತ್ತು. ಸಾಮೂಹಿಕವಾಗಿ ಸ್ಟಿಕ್ಕರ್ ಹಾಕಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಒಳ ಮೀಸಲಾತಿ ಸರ್ವೆ ಗೊಂದಲದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ಸರ್ವೆ ದಿನಾಂಕ ವಿಸ್ತರಣೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಸಿಬ್ಬಂದಿ ಇಲ್ಲ ಅಂತೇಳಿ ಎಲ್ಲರ ಹತ್ರ ಸರ್ವೆ ಮಾಡಿಸ್ತಿದ್ದಾರೆ. ಬೆಂಗಳೂರಲ್ಲಿ 100% ಸರ್ವೆ ಸಾಧ್ಯವಿಲ್ಲ. ಬೆಂಗಳೂರಲ್ಲಿ 110 ಬಡಾವಣೆಗಳಲ್ಲಿ ಹೆಚ್ಚು ಎಸ್‌ಸಿ ಸಮುದಾಯವರು ಇದ್ದಾರೆ. ಅಲ್ಲಿ ಚೆನ್ನಾಗಿ ಸರ್ವೆ ಮಾಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮ್ಮ, ಸೋದರನಿಗೆ ಡ್ರಗ್ಸ್ ಚಟ | ಬಾಲಕನಿಗೆ ನಾಯಿಗಳೇ ಆಸರೆ – ಬೊಗಳುವ ಮೂಲಕ ಮಾತ್ರ ಸಂವಹನ!

    ಅಪಾರ್ಟ್ಮೆಂಟ್, ದೊಡ್ಡ ದೊಡ್ಡ ಕಟ್ಟಡಗಳಲ್ಲಿ ವಾಸ ಮಾಡೋರು ಒಳಗೆ ಬಿಟ್ಟುಕೊಳ್ಳಲ್ಲ. ಕೆಲವರು ಜಾತಿ ಹೆಸರು ಹೇಳಲು ಹಿಂದೇಟು ಹಾಕ್ತಿದ್ದಾರೆ. ನೀವು ಹಿಂದೇಟು ಹಾಕಬೇಡಿ, ಆನ್‌ಲೈನ್‌ನಲ್ಲಿ ಮಾಡ್ರಪ್ಪ. ಜುಲೈ 6ಕ್ಕೆ ಒಳಮೀಸಲಾತಿ ಸರ್ವೆ ಮುಕ್ತಾಯ ಆಗಬೇಕು. ಈ ತಿಂಗಳ ಒಳಗೆ ಒಳಮೀಸಲಾತಿ ಜಾರಿ ಆಗಬೇಕು ಅಂತಾ ಆಗ್ರಹಿಸಿದ್ದಾರೆ.

  • ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್‌. ಆಂಜನೇಯ

    ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್‌. ಆಂಜನೇಯ

    -ನಮ್ಮ ರಾಮ ನಮ್ಮ ಎದೆಯಲ್ಲಿದ್ದಾನೆ, ನಾನು ಆಂಜನೇಯ ಎಂದ ಮಾಜಿ ಸಚಿವ

    ಚಿತ್ರದುರ್ಗ: ಅಯೋಧ್ಯೆಯಲ್ಲಿರುವುದು (Ayodhya) ಬಿಜೆಪಿಯ ರಾಮ, ನಮ್ಮ ರಾಮ ಸಿದ್ದರಾಮಯ್ಯ (Siddaramaiah) ಎಂದು ಕಾಂಗ್ರೆಸ್ ಮಾಜಿ ಸಚಿವ ಹೆಚ್. ಆಂಜನೇಯ (H Anjaneya) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿಎಂ ಸಿದ್ದರಾಮಯ್ಯಗೆ ರಾಮಮಂದಿರ (Ram Mandir) ಉದ್ಘಾಟನೆಗೆ ಆಹ್ವಾನವಿಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದೆ ಇದ್ದಿದ್ದೇ ಒಳ್ಳೆಯದಾಯಿತು. ಸ್ವತಃ ಸಿದ್ದರಾಮಯ್ಯ ಅವರೇ ರಾಮ, ಹೀಗಿರುವಾಗ ಆ ರಾಮನಿಗೇಕೆ ಹೋಗಿ ಅವರು ಪೂಜಿಸಬೇಕು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಐಷಾರಾಮಿಯಷ್ಟೇ ದುಬಾರಿ ಅಯೋಧ್ಯಾ ಟೆಂಟ್‌ ಹೌಸ್ – ಒಂದು ದಿನಕ್ಕೆ ಎಷ್ಟು ಹಣ ಗೊತ್ತಾ?

    ಸಿದ್ದರಾಮಯ್ಯ ಅವರ ತವರು ಸಿದ್ಧರಾಮನಹುಂಡಿಯಲ್ಲೇ ಶ್ರೀರಾಮನ ದೇವಸ್ಥಾನ ಇದೆ, ಅವರು ಅಲ್ಲೇ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ ಹೀಗಾಗಿ ಬಿಜೆಪಿಯವರನ್ನ ಕರೆಸಿಕೊಂಡು ಅಲ್ಲಿ ಭಜನೆ ಮಾಡುತ್ತಾರೆ. ಆದ್ರೆ ನಮ್ಮ ರಾಮ ಎಲ್ಲಾ ಕಡೆ ಇದ್ದಾನೆ, ನಮ್ಮ ಎದೆಯಲ್ಲಿಯೂ ಇದ್ದಾನೆ. ನಾನು ಆಂಜನೇಯ, ಗೊತ್ತಲ್ವಾ ಆಂಜನೇಯ ಏನು ಮಾಡಿದ ಅಂತಾ? ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಭಕ್ತರಿಗೆ ಮಾತ್ರ ಅಯೋಧ್ಯೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

    ಅಲ್ಲದೇ ನಮ್ಮ ಸಮುದಾಯದವರು ರಾಮ ಹಾಗೂ ಆಂಜನೇಯ, ಹನುಮಂತ ಎಂಬ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಆದರೆ ಬಿಜೆಪಿ ಅವರದ್ದು ಧರ್ಮಗಳನ್ನು ಒಡೆದಾಳುವ ನೀತಿಯಾಗಿದೆ. ಒಂದು ಧರ್ಮದ ವಿರುದ್ಧ ಟೀಕಿಸಿ ಮತ ಬ್ಯಾಂಕ್ ಸೃಷ್ಟಿಸುವ ಭ್ರಮೆ ಬಿಜೆಪಿಯವರಿಗಿದೆ. ಅವರ ಆಡಳಿತದಲ್ಲಿ ಯಾರಿಗೆ ಅನುಕೂಲ ಆಗಿದೆ? ಹಿಂದೂ ಯುವಕರಿಗೆ ಬಿಜೆಪಿ ಆಡಳಿತದಿಂದ ಅನುಕೂಲ ಆಗಿದೆಯೆ? ನಾವೂ ಹಿಂದೂಗಳು, ಆದ್ರೆ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನ ಬಿಜೆಪಿ ಕೊಂಡುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

    ಬಿಜೆಪಿಯವರು ಮಂದಿ ನಿರ್ಮಾಣ ಮಾಡಿದ್ದು ಸಾಕು, ದೇಶದಲ್ಲಿ ಮನೆ-ಮನಗಳನ್ನು ಕಟ್ಟುವ ಕೆಲಸ ಆಗಬೇಕು. ದೇಶದಲ್ಲಿ ಕೆಲವರು ಈಗಲೂ ಪ್ರಾಣಿಗಳ ರೀತಿ, ಯೋಗ್ಯವಲ್ಲದ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಅಂತಹವರಿಗೆ ಸೂರು ಒದಗಿಸಿ ರಕ್ಷಣೆ ಕೊಡಬೇಕು. ದೇಶದಲ್ಲಿ ಮನೆ ಇಲ್ಲದವರಿಗೆ, ಮನೆ ಕಟ್ಟಿಸಿಕೊಟ್ಟು ಅದಕ್ಕೆ ರಾಮಮಂದಿರ ಅಂತ ಹೆಸರಿಟ್ಟರೆ, ಆಗ ನಿಜವಾದ ಶ್ರೀರಾಮ ಬಂದು ಎಲ್ಲರನ್ನು ಆಶೀರ್ವದಿಸುತ್ತಾನೆ. ಹಾಗಾಗಿ ಮತಕ್ಕಾಗಿ ಬಿಜೆಪಿ ರಾಮನನ್ನ ಮಾಡುವುದು ಬೇಡ ಹೆಚ್. ಆಂಜನೇಯ ಕಿಡಿ ಕಾರಿದ್ದಾರೆ.

  • ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲು ಬಂದ್ ಎಂಬ ಸಂದೇಶ ರವಾನೆ: ಆಂಜನೇಯ

    ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲು ಬಂದ್ ಎಂಬ ಸಂದೇಶ ರವಾನೆ: ಆಂಜನೇಯ

    ಚಿತ್ರದುರ್ಗ: ತೆಲಂಗಾಣ (Telangana) ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ (Congress) ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

    ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ನೆರೆದಿದ್ದ ಕಾರ್ಯಕರ್ತರು ಮಾಜಿ ಸಚಿವ ಹೆಚ್. ಆಂಜನೇಯ (H.Anjaneya) ನೇತೃತ್ವದಲ್ಲಿ ಸಿಹಿಹಂಚಿ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನೃತ್ಯ ಮಾಡಿ ಸಂಭ್ರಮಿಸಿದ ದೃಶ್ಯ ಎಲ್ಲರ‌ ಕಣ್ಮನ ಸೆಳೆಯಿತು. ಬಳಿಕ ಮಾದ್ಯಮಗಳೊಂದಿಗೆ ಮಾಜಿ ಸಚಿವ ಆಂಜನೇಯ ಮಾತನಾಡಿದರು. ಇದನ್ನೂ ಓದಿ: RSS, ABVP ಕಾರ್ಯಕರ್ತ ರೇವಂತ್‌ ರೆಡ್ಡಿ ಈಗ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ – ತೆಲಂಗಾಣಕ್ಕೆ ಸಿಎಂ ಯಾರು?

    ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಬಂದ್ ಎಂದು ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ತೋರಿಸಿದೆ. ನಾವು ತೆಲಂಗಾಣ ರಾಜ್ಯ ನಿರ್ಮಾಣಕ್ಕೆ ಶ್ರಮಿಸಿದ ಹಿನ್ನೆಲೆಯಲ್ಲಿ ಈ ಬಾರಿ ನಮ್ ‘ಕೈ’ ಹಿಡಿದಿದ್ದಾರೆ. ಈ ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಬಿಟ್ಟಿ ಕಾರ್ಯಕ್ರಮ ಎಂದಿದ್ದರು. ಆದರೆ ಮದ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಬಿಟ್ಟಿ ಕಾರ್ಯಕ್ರಮ ಕೊಟ್ಟಿದ್ದೇಕೆ ಎಂದು ಪ್ರಶ್ನಿಸಿದರು.

    ಅಲ್ಲದೇ ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಅನುಸರಿಸಿದೆ. ನಾವು ಗ್ಯಾರಂಟಿ ಭಾಗ್ಯ ಘೋಷಿಸಿದಾಗ, ಉಚಿತ ಯೋಜನೆಯಿಂದ ರಾಜ್ಯ ದಿವಾಳಿ ಎಂದು ಬಿಜೆಪಿಗರು ಹೇಳಿದ್ದರು. ಆದರೆ ಈಗ ಉಚಿತ ಯೋಜನೆ ಘೋಷಿಸಿ ಬಿಜೆಪಿಯವರು ದ್ವಂದ್ವ ನೀತಿ ಅನುಸರಿಸಿದ್ದಾರೆ ಎಂದು ಕಾಲೆಳೆದರು. ಇದನ್ನೂ ಓದಿ: 51,000 ಮತಗಳ ಅಂತರದ ಜಯ – ಗೆಲುವನ್ನು ಮೋದಿಗೆ ಅರ್ಪಿಸಿದ ವಸುಂಧರಾ ರಾಜೆ

    ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿ ವಾಮ ಮಾರ್ಗಗಳನ್ನು ಅನುಸರಿಸಿ, ಬಿಜೆಪಿಯು ವಾಮ ಮಾರ್ಗದಿಂದಲೇ ಮದ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಗೆದ್ದಿದ್ದಾರೆಂದು ಆರೋಪಿಸಿದರು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ‌ ತಾಜ್ ಪೀರ್‌ ಇದ್ದರು.

  • ರೇಣುಕಾಚಾರ್ಯ ಹೇಳಿಕೆಯಲ್ಲಿ ತಪ್ಪಿಲ್ಲ ಎಂದ ಹೆಚ್ ಆಂಜನೇಯ

    ರೇಣುಕಾಚಾರ್ಯ ಹೇಳಿಕೆಯಲ್ಲಿ ತಪ್ಪಿಲ್ಲ ಎಂದ ಹೆಚ್ ಆಂಜನೇಯ

    ಕೊಪ್ಪಳ: ಹೆಣ್ಣು ಮಕ್ಕಳ ಉಡುಪುಗಳೇ ಪ್ರಚೋದನೆಗೆ ಕಾರಣ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಮಾಜಿ ಸಚಿವ ಎಚ್ ಆಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ.

    ಕಾಲೇಜು ಮುಂದೆ ಹೋಗಿ ನೋಡಿ ಮುಸ್ಲಿಂ ಹೆಣ್ಣು ಮಕ್ಕಳ ಉಡುಪು ಪ್ರಚೋದನೆ ಕೊಡುತ್ತೋ ಅಥವಾ ನಮ್ಮ ಮಕ್ಕಳ ಉಡುಪು ಪ್ರಚೋದನೆ ಕೊಡುತ್ತೋ ಎಂದು. ರೇಣುಕಾಚಾರ್ಯ ಬಹಳ ಒಳ್ಳೇ ಮಾತು ಹೇಳಿದ್ದಾರೆ ಎಂದು ಆಂಜನೇಯ ಪರೋಕ್ಷವಾಗಿ ಹಿಜಬ್‍ಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ

    ಮುಸ್ಲಿಂ ಮಹಿಳೆಯರು ಹಿಜಬ್ ಧರಿಸುತ್ತಾರೆ ಹೀಗಾಗಿ ಅವರನ್ನು ಯಾರೂ ನೋಡಲ್ಲ. ಮೊದಲು ಚುನಾವಣೆಗೆ ಗಲಾಟೆ ನಡೆಯುತ್ತಿತ್ತು. ಇದೀಗ ಕಾಲೇಜು ಮಕ್ಕಳು ಬೀದಿಗಿಳಿದಿದ್ದಾರೆ. ಮಕ್ಕಳ ಕೈಯಲ್ಲಿ ಕಲ್ಲು, ಚಾಕು ಕೊಟ್ಟಿರುವುದು ಬಿಜೆಪಿಯವರು ಎಂದು ಹೇಳಿದರು.

    ನಾವು ಎತ್ತಿ ಕಟ್ಟೋ ಕೆಲಸ ಮಾಡಲ್ಲ. ಇದು ಬಿಜೆಪಿಯವರು ಮಾಡಿದ್ದು. ನಾವು ಅವರ ಹಿಂದಿದ್ದರೆ ಅವರಿಗೆ ಕಾಂಗ್ರೆಸ್ ಧ್ವಜ ಕೊಡುತ್ತಿದ್ದೆವು. ಹಿಜಬ್ ಗಲಾಟೆಗೆ ಬಿಜೆಪಿ ಕಾರಣ ಎಂದರು. ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೋರಿದ ರೇಣುಕಾಚಾರ್ಯ

    ಮೊದಲು ಇದ್ದ ಪದ್ಧತಿಯೇ ಮುಂದೆಯೂ ಇರಲಿ. ಅವರು ನೂರಾರು ವರ್ಷಗಳಿಂದ ಹೇಗೆ ಇದ್ದರು ಹಾಗೇ ಇರಲಿ. ಬಟ್ಟೆ ಇದನ್ನೇ ಹಾಕಬೇಕು ಎನ್ನುವುದು ಯಾವ ನ್ಯಾಯ? ಬಿಜೆಪಿಯವರು ಶಾಲು, ಪೇಟಾ ವಿತರಣೆ ಮಾಡಿದ್ದಾರೆ ಎಂದು ಆಂಜನೇಯ ಆರೋಪಿಸಿದರು.

  • ಮೋದಿಗೆ ಮಾತ್ರ ಅಚ್ಛೇ ದಿನ್ ಬಂದಿದೆ ಜನರಿಗಲ್ಲ: ಆಂಜನೇಯ

    ಮೋದಿಗೆ ಮಾತ್ರ ಅಚ್ಛೇ ದಿನ್ ಬಂದಿದೆ ಜನರಿಗಲ್ಲ: ಆಂಜನೇಯ

    – ಮೋದಿ ಓರ್ವ ಸುಳ್ಳುಗಾರ ನಾಟಕಕಾರ

    ಚಿತ್ರದುರ್ಗ: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಅಂಜುಮನ್ ಸಮಿತಿ ನೇತೃತ್ವದಲ್ಲಿ ಮುಸ್ಲಿಂ ಭಾಂದವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

    ನಗರದ ಗಾಂಧಿ ವೃತ್ತದಿಂದ ಓಬವ್ವ ವೃತ್ತದವರೆಗೆ ಹಮ್ಮಿಕೊಂಡಿದ್ದ ಮೆರವಣಿಗೆಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು. ವಂದೇ ಮಾತರಂ ಹಾಗೂ ಭೋಲೋ ಭಾರತ್ ಮಾತಾಕಿ ಜೈ ಘೋಷಣೆ ಮೊಳಗಿಸಿದ ಪ್ರತಿಭಟನಾಕಾರರು ಈ ದೇಶ್ ಅಮರ್ ರಹೇ ಎಂದು ಘೋಷಣೆ ಕೂಗಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್. ಆಂಜನೇಯ, ಸ್ವತಂತ್ರ ಬರುವುದಕ್ಕೂ ಮೊದಲು ದೇಶ ಬ್ರಿಟಿಷರ ಗುಲಾಮಗಿರಿಯಲ್ಲಿ ಇತ್ತು. ಸಾಕಷ್ಟು ಮಹಾನ್ ನಾಯಕರು ಹೋರಾಟ ಹಾಗೂ ಬಲಿದಾನದಿಂದ ದೇಶಕ್ಕೆ ಸ್ವತಂತ್ರ ತಂದು ಕೊಟ್ಟರು. ಇದರಲ್ಲಿ ಮುಸ್ಲಿಮರು ಇದ್ದಾರೆ ಇದನ್ನು ಮೋದಿ ಅರಿತುಕೊಳ್ಳಬೇಕು. ಹೃದಯವಂತಿಕೆ ಇಲ್ಲದ ಪ್ರಧಾನಿ ಮೋದಿ ದೇಶಕ್ಕಾಗಿ ಒಂದು ಒಳ್ಳೆಯ ಕೆಲಸ ಮಾಡಲಿಲ್ಲ. ಅವರು ಕೇವಲ ಶ್ರೀಮಂತರ ಪರವಾಗಿ ಕೆಲಸ ಮಾಡಿದ್ದು, ಪ್ರಶ್ನೆ ಮಾಡುವ ವ್ಯಕ್ತಿಗಳನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

    ಪೌರತ್ವ ಕಾಯ್ದೆಯನ್ನು ಕೂಡಲೇ ಕೇಂದ್ರ ಸರ್ಕಾರ ಹಿಂಪಡೆಯಬೇಕು. ಮಹಾತ್ಮಾ ಗಾಂಧಿ, ಬಸವಣ್ಣ, ಮಹಮ್ಮದ್ ಪೈಗಂಬರ್ ಹುಟ್ಟಿರುವ ಈ ನೆಲದಲ್ಲಿ ಹಿಂಸೆಗೆ ಅವಕಾಶ ಕೊಡದೆ ಎಲ್ಲಾ ವರ್ಗದ ಜನರ ಹಿತ ಕಾಪಾಡಬೇಕು ಎಂದು ಸಲಹೆ ನೀಡಿದರು. ಈ ದೇಶ ಏಕಧರ್ಮದ ದೇಶವಲ್ಲ. ಹಿಂದೂ ಮುಸ್ಲಿಂ, ಪಾರ್ಸಿ, ಸಿಖ್ ಸೇರಿದಂತೆ ವಿವಿಧ ಧರ್ಮಗಳಿವೆ. ಹೀಗಾಗಿ ಭಾರತ ಸರ್ವಧರ್ಮದ ರಾಷ್ಟ್ರವಾಗಿದ್ದು, ಆಳುವ ಸರ್ಕಾರ ಎಲ್ಲರನ್ನು ಒಂದೇ ಎಂಬ ಭಾವನೆಯಿಂದ ಕಾಣಬೇಕು ಎಂದು ಸಲಹೆ ನೀಡಿದರು.

    ಬಿಜೆಪಿಯವರ ಅಧಿಕಾರವನ್ನು ಪ್ರಶ್ನಿಸಿದವರನ್ನು ಬಂಧಿಸುತ್ತಿದ್ದಾರೆ. ಐಟಿ ಭಯ ಹುಟ್ಟಿಸುತ್ತಿದ್ದಾರೆ. ಆದರೆ ನಾವು 70 ವರ್ಷ ಆಳ್ವಿಕೆ ನಡೆಸಿದರೂ ಇಂತಹ ಏಕಪಕ್ಷೀಯ ಆಡಳಿತ ಮಾಡಿಲ್ಲ ಎಂದು ತಮ್ಮ ಪಕ್ಷದ ಆಡಳಿತವನ್ನು ಸಮರ್ಥಿಸಿಕೊಂಡ ಅವರು, ಅಚ್ಛೇ ದಿನ್ ಮೋದಿಗೆ ಬಂದಿದೆ. ಜನರಿಗಲ್ಲ ಸಬ್ ಕಾ ಸಾಥ್ ಸಭ್ ಕಾ ವಿಕಾಸ್ ನಹಿ ಆಯ. ಪ್ರಧಾನಿ ಮೋದಿ ಓರ್ವ ಸುಳ್ಳುಗಾರ, ನಾಟಕಕಾರ ಎಂದು ವಾಗ್ದಾಳಿ ನಡೆಸಿದರು.

    ಪ್ರತಿಭಟನೆಯಲ್ಲಿ ಮಾಜಿ ಸಂಸದ ಚಂದ್ರಪ್ಪ, ಚಳ್ಳಕೆರೆ ಶಾಸಕ ರಘುಮೂರ್ತಿ, ಉಮಾಪತಿ, ಬಿ.ಕೆ.ರಹಮತ್ ಉಲ್ಲಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್ ಪೀರ್, ಹನುಮಲಿ ಷಣ್ಮುಖಪ್ಪ, ಮುರುಘರಾಜೇಂದ್ರ ಒಡೆಯರ್, ಶಿವುಯಾದವ್, ನರೇನಹಳ್ಳಿ ಅರುಣ್ ಕುಮಾರ್, ಅಬ್ದುಲ್ ಜಬ್ಬರ್, ಸಂಪತ್ ಸೇರಿದಂತೆ ಇತರರು ಹಾಜರಿದ್ದರು.

  • ಅನ್ನ ಉಂಡ ಜನ ನಮಗೆ ಮತ ಹಾಕ್ಲಿಲ್ಲ, ಅನ್ನ ನೀಡದ ಬಿಜೆಪಿ ಗೆಲ್ಲಿಸಿದ್ರು: ಹೆಚ್.ಆಂಜನೇಯ

    ಅನ್ನ ಉಂಡ ಜನ ನಮಗೆ ಮತ ಹಾಕ್ಲಿಲ್ಲ, ಅನ್ನ ನೀಡದ ಬಿಜೆಪಿ ಗೆಲ್ಲಿಸಿದ್ರು: ಹೆಚ್.ಆಂಜನೇಯ

    ದಾವಣಗೆರೆ: ನಾವು ನೀಡಿದ ಅನ್ನ ಉಂಡ ಜನ ನಮಗೆ ಮತ ಹಾಕಲಿಲ್ಲ. ಅನ್ನ ನೀಡದ ಬಿಜೆಪಿಯನ್ನು ಗೆಲ್ಲಿಸಿದರು ಎಂದು ಮಾಜಿ ಸಚಿವ ಹೆಚ್ ಆಂಜನೇಯ ಬೇಸರ ವ್ಯಕ್ತಪಡಿಸಿದ್ದಾರೆ.

    ನಗರದ ಅಥಿತಿ ಗೃಹದಲ್ಲಿ ಮಾತನಾಡಿದ ಮಾಜಿ ಸಚಿವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನ್ನಭಾಗ್ಯ ಯೋಜನೆ ಮೂಲಕ ಬಡವರ ಹೊಟ್ಟೆ ತುಂಬಿಸಿದ್ವಿ, ಬಡ ಮಕ್ಕಳಿಗೆ ಶಿಕ್ಷಣ, ಶೂ ಭಾಗ್ಯ, ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದ್ವಿ. ಜನರ ಏಳಿಗೆಗಾಗಿ ಶ್ರಮಿಸಿದ್ದೇವು. ಆದರೆ ಮತದಾರರು ಕಾಂಗ್ರೆಸ್ ಕೈ ಬಿಟ್ಟು ಬಿಜೆಪಿಯನ್ನು ಗೆಲ್ಲಿಸಿದರು ಎಂದರು.

    ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಬೇಕಾಗಿತ್ತಾ? ಈ 15 ಜನ ಅನರ್ಹ ಶಾಸಕರ ರಾಜೀನಾಮೆ ಹಿಂದೆ ಸ್ವಾರ್ಥ, ಅಧಿಕಾರ ದಾಹ, ಹಣದ ಆಸೆ ಇದೆ. ಪಕ್ಷಕ್ಕೆ ದ್ರೋಹ ಮಾಡಿ ರಾಜೀನಾಮೆ ನೀಡಿ ಈಗ ಚುನಾವಣೆಗೆ ನಿಂತಿದ್ದಾರೆ. ಅವರನ್ನು ಜನರು ಸೋಲಿಸಿ, ತಕ್ಕ ಪಾಠ ಕಲಿಸುತ್ತಾರೆ. ಅಲ್ಲದೆ ಸುಪ್ರೀಂಕೋರ್ಟ್ ಉತ್ತಮ ತೀರ್ಪು ನೀಡಿದೆ. ಇಲ್ಲವಾದರೆ ಅನರ್ಹರು ಸಚಿವರಾಗಿ ನಂತರ ಚುನಾವಣೆಗೆ ಹೋಗುತ್ತಿದ್ದರು. ಪ್ರಜಾಪ್ರಭುತ್ವ ಉಳಿಸಬೇಕು ಎಂದರೆ ಅನರ್ಹರು ಅರ್ಹರರಾಗಿಯೇ ಉಳಿಯುವಂತೆ ಮಾಡಬೇಕು ಎಂದು ಹೇಳಿದರು.

    ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಬಫೂನ್ ಎಂದು ನಿಂದಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಆಂಜನೇಯ ಅವರು, ರೇಣುಕಾಚಾರ್ಯ ಬಫೂನ್ ಇರಬೇಕು. ಅದಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ. ಯಾರನ್ನು ಕೂಡ ಟೀಕೆ ಮಾಡಬಾರದು. ಟೀಕೆ ಮಾಡಿದರೆ ಅದು ಆರೋಗ್ಯಕರವಾಗಿರಬೇಕು ಎಂದು ತಿಳಿಸಿದರು.

  • ಜನರನ್ನ ವಶೀಕರಣ ಮಾಡ್ಕೊಂಡು ಮೋದಿ ಗೆದ್ದಿದ್ದಾರೆ – ದೋಸ್ತಿ ವಿರುದ್ಧ ಆಂಜನೇಯ ಕಿಡಿ

    ಜನರನ್ನ ವಶೀಕರಣ ಮಾಡ್ಕೊಂಡು ಮೋದಿ ಗೆದ್ದಿದ್ದಾರೆ – ದೋಸ್ತಿ ವಿರುದ್ಧ ಆಂಜನೇಯ ಕಿಡಿ

    ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಸರಿಯಲ್ಲವೆಂದು ಮಾಜಿ ಸಚಿವ ಹಾಗೂ ಸಿದ್ದರಾಮಯ್ಯನವರ ಆಪ್ತ ಹೆಚ್. ಆಂಜನೇಯ ಅವರು ದೋಸ್ತಿ ಸರ್ಕಾರದ ವಿರುದ್ಧ ಅಪಸ್ವರ ಎತ್ತಿದ್ದಾರೆ.

    ಚಿತ್ರದುರ್ಗ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ ಮಾಜಿ ಸಂಸದ ಚಂದ್ರಪ್ಪನೊಂದಿಗೆ ಇಂದು ಆಂಜನೇಯ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಆಂಜನೇಯ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಎರಡು ಪಕ್ಷಗಳ ಮೈತ್ರಿ ಕೇವಲ ಸರ್ಕಾರಕ್ಕೆ ಸೀಮಿತವಾಗಬೇಕಿತ್ತು. ಲೋಕಸಭಾ ಚುನಾವಣೆಗೆ ಈ ಮೈತ್ರಿ ಅಗತ್ಯವಿರಲಿಲ್ಲ. ಮೈತ್ರಿಯಿಂದ ಕಾಂಗ್ರೆಸ್ಸಿಗೆ ಆಗಲಿ, ಜೆಡಿಎಸ್‍ಗೆ ಆಗಲಿ ಯಾವುದೇ ಫಲ ಸಿಕ್ಕಿಲ್ಲ ಎಂದು ಕಿಡಿಕಾರಿದರು.

    ಈ ಮೈತ್ರಿ ಕೇವಲ ಕಾಂಗ್ರೆಸ್ ಹಾಗು ಜೆಡಿಎಸ್ ಪಕ್ಷಗಳ ವರಿಷ್ಟರ ಮಟ್ಟದಲ್ಲಿ ಮಾತ್ರ ಆಗಿದೆಯೇ ಹೊರತು, ಎರಡು ಪಕ್ಷಗಳ ಕಾರ್ಯಕರ್ತರು ಮತ್ತು ಮುಖಂಡರ ಮಟ್ಟದಲ್ಲಿ ಮೈತ್ರಿಯಾಗಿಲ್ಲ. ಹೀಗಾಗಿ ನಾವು ಈ ಚುನಾವಣೆಯಲ್ಲಿ ಸೋತಿದ್ದೇವೆ. ಆದ್ದರಿಂದ ಎರಡು ಪಕ್ಷಗಳು ಪರಸ್ಪರ ಅವಲೋಕನ ಮಾಡಿಕೊಳ್ಳಬೇಕಿದ್ದು, ಈ ಮೈತ್ರಿಯಿಂದ ಎರಡೂ ಪಕ್ಷಗಳ ಮೇಲು ಎಫೆಕ್ಟ್ ಆಗಿದೆ ಎಂದು ಅಸಮಾಧಾನ ಹೊರಹಾಕಿದರು.

    ಇದೇ ವೇಳೆ ಪ್ರಧಾನಿ ಗೆಲುವಿನ ನಾಗಲೋಟದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಜನರನ್ನು ಮೋದಿ ವಶೀಕರಣ ಮಾಡಿಕೊಂಡು ಈ ಚುನಾವಣೆ ಗೆದ್ದಿದ್ದಾರೆ. ಇದು ನಿಜವಾದ ಗೆಲುವಲ್ಲ. ಈ ಕೇಂದ್ರ ಸರ್ಕಾರ 2014ರಲ್ಲಿ ಕೊಟ್ಟ ಭರವಸೆಗಳನ್ನೇ ಈಡೇರಿಸಿಲ್ಲ. ಆದರೆ ಈ ಚುನಾವಣೆಯಲ್ಲಿ ಬಂಡವಾಳ ಶಾಹಿಗಳ ಹಣದಿಂದ ಮಾರ್ಕೆಟಿಂಗ್ ಮಾಡಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸಿದೆ ಅಂತ ಆರೋಪಿಸಿದರು.

    ಬಣ್ಣ ಬಣ್ಣದ ಮಾತುಗಳನ್ನು ಆಡಿ ಗೆದ್ದಿರೋ ಮೋದಿ, ತಾವು ಪ್ರಚೋದನೆ ಮಾಡಲು ಮಾತನಾಡಿದಂತೆ ಆಡಳಿತ ನಡೆಸಲಿ. ರಾಜಕೀಯಕ್ಕಾಗಿ ದೇಶದ ಜನರನ್ನ ಪ್ರಚೋದಿಸಿದರೆ ಸರಿಯಿರಲ್ಲ ಎಂದು ಆಂಜನೇಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

  • ರಾಜ್ಯದ ಜನತೆ ಡೀಲ್ ಪಾರ್ಟಿಗೆ ಸ್ಪಷ್ಟ ಅಧಿಕಾರ ನೀಡಿಲ್ಲ: ಹೆಚ್.ಆಂಜನೇಯ

    ರಾಜ್ಯದ ಜನತೆ ಡೀಲ್ ಪಾರ್ಟಿಗೆ ಸ್ಪಷ್ಟ ಅಧಿಕಾರ ನೀಡಿಲ್ಲ: ಹೆಚ್.ಆಂಜನೇಯ

    ಚಿತ್ರದುರ್ಗ: ಕರ್ನಾಟಕ ಜನತೆ ಡೀಲ್ ಪಾರ್ಟಿಗೆ ಸ್ಪಷ್ಟ ಅಧಿಕಾರ ನೀಡಿಲ್ಲ. ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಗಳ ವಿರುದ್ಧ ಅಪಪ್ರಚಾರ ಮಾಡಲಾಯಿತು. ಪ್ರಧಾನಿ ಮೋದಿ ಕೂಡ ಆಧಾರ ರಹಿತವಾಗಿ ಆರೋಪ ಮಾಡಿದ್ರು ಅಂತಾ ಮಾಜಿ ಸಮಾಜ ಕಲ್ಯಾಣ ಸಚಿವ ಆಂಜನೇಯ ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿಗೆ ಬಹುಮತ ಸಿಗದಿರುವುದು ನಮಗೆ ನೆಮ್ಮದಿ ತಂದಿದೆ. ವಾಮ ಮಾರ್ಗದ ಮೂಲಕ ಗೆಲುವು ಸಾಧಿಸಲು ಹೊರಟ್ಟಿದ್ದ ಬಿಜೆಪಿ ಯತ್ನಕ್ಕೆ ವಿಫಲವಾಗಿದೆ. ಪ್ರಜಾಪ್ರಭುತ್ವಕ್ಕೆ ಅಪಚಾರವೆಸಗಿ, ಅಪಕೀರ್ತಿಗೆ ಒಳಗಾಗಿರುವ ಬಿಜೆಪಿಗೆ ಅಧಿಕಾರ ನೀಡದಿರುವುದು ಸ್ವಾಗತಾರ್ಹ. ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಸಲ್ಲಿಸಿದ್ರು.

    ಚುನಾವಣೆಯಲ್ಲಿ ಸೋಲು-ಗೆಲುವನ್ನು ಎರಡನ್ನೂ ಸಮಾನಾಗಿ ಸ್ವೀಕರಿಸುತ್ತೇವೆ. ಮುಂದಿನ ದಿನಗಳಲ್ಲಿ ಹೋರಾಟ ಮಾಡಲಿದ್ದು, ನಮ್ಮ ಬೆಂಬಲವನ್ನು ಜೆಡಿಎಸ್ ಗೆ ನೀಡುತ್ತೇವೆ ಅಂತಾ ತಿಳಿಸಿದ್ರು.

    ಈ ಬಾರಿ ಹೆಚ್. ಆಂಜನೇಯ ಹೊಳಲ್ಕರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ರು. ಆದ್ರೆ ಬಿಜೆಪಿ ಅಭ್ಯರ್ಥಿ ಎಂ.ಚಂದ್ರಪ್ಪ ವಿರುದ್ಧ 40 ಸಾವಿರ ಮತಗಳಿಂದ ಪರಾಭವಗೊಂಡಿದ್ದಾರೆ.