Tag: ಹೆಚ್.ಎಂ.ರೇವಣ್ಣ

  • ಆನಂದ್ ಸಿಂಗ್‍ಗೆ ಅರಣ್ಯ ಖಾತೆ ನೀಡಿದ್ದು ಕಳ್ಳನ ಕೈಗೆ ಕೀ ಕೊಟ್ಟಂತಾಗಿದೆ: ಹೆಚ್.ಎಂ ರೇವಣ್ಣ

    ಆನಂದ್ ಸಿಂಗ್‍ಗೆ ಅರಣ್ಯ ಖಾತೆ ನೀಡಿದ್ದು ಕಳ್ಳನ ಕೈಗೆ ಕೀ ಕೊಟ್ಟಂತಾಗಿದೆ: ಹೆಚ್.ಎಂ ರೇವಣ್ಣ

    ರಾಯಚೂರು: ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ ಆಗಿದೆ ಅಂತ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹೇಳಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಅವರು, ಗಣಿ ವ್ಯವಾಹಾರದಲ್ಲಿ ಸ್ವಲ್ಪ ಅರಣ್ಯ ಅಸ್ತವ್ಯಸ್ತವಾಗುವುದು ಸರಿ ಅಂತ ಹೇಳೋ ಸಚಿವನಿಂದ ಏನನ್ನು ನಿರೀಕ್ಷೆ ಮಾಡಬಹುದು ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದು ನೋಡಿದರೆ ಇಂಥ ಪರಿಸ್ಥಿತಿ ಯಾರಿಗೂ ಬರೋದು ಬೇಡ. ವಿಶ್ವನಾಥ್ ಸ್ಥಿತಿಯಂತೂ ಕೇಳೋದೇ ಬೇಡ ಎಂದಿದ್ದಾರೆ.

    ಸಿದ್ದರಾಮಯ್ಯನವರೇ ಪಕ್ಷದ ಅಧ್ಯಕ್ಷರಾಗಬೇಕಾ..? ಬೇಡವಾ..? ಅನ್ನೋದು ಇನ್ನೊಂದು ವಾರದಲ್ಲಿ ನಿರ್ಧಾರವಾಗಲಿದೆ. ನಾಯಕ ಸಮಾಜ ಹಾಗು ಕುರುಬ ಸಮಾಜದಲ್ಲಿ ವಿರುದ್ಧ ದಿಕ್ಕಿನಲ್ಲಿ ಹೋಗುವ ಪರಿಪಾಠ ನಡೆಯುತ್ತಿದೆ. ಎರಡು ಸಮಾಜದ ಗುರುಗಳ ಹಾಗೂ ಮುಖಂಡರ ಸಭೆ ನಡೆಸಿ ಈ ವೈಷಮ್ಯ ಬಗೆಹರಿಸಲಾಗುವುದು ಅಂತ ಹೇಳಿದರು.

    ಮಾಜಿ ಪ್ರಧಾನಿ ಸಮಯಕ್ಕೆ ಸರಿಯಾಗಿ ಬಣ್ಣ ಬದಲಾಯಿಸಿಕೊಳ್ಳುವಲ್ಲಿ ನಿಸ್ಸೀಮರು ಅಂತ ಕಿಡಿಕಾರಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಅನಿಲ್ ಕುಮಾರ್ ಸ್ಪರ್ಧೆ ಹಿನ್ನೆಲೆ ದಳದವರು ಚರ್ಚಿಸಿ ಈಗ ಅಭ್ಯರ್ಥಿ ನಿಲ್ಲಿಸಿದ್ದಾರೆ. ನಮ್ಮಲ್ಲಿ ಚರ್ಚೆ ಆಗಿಲ್ಲ. ಎರಡೂ ಪಕ್ಷದವರು ಸೇರಿ ಅಭ್ಯರ್ಥಿ ನಿಲ್ಲಿಸಿಲ್ಲ ಅಂತ ರೇವಣ್ಣ ಹೇಳಿದರು.

    ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಬಿಜೆಪಿ ಸರ್ಕಾರದಲ್ಲಿ ಸ್ಥಗಿತಗೊಂಡಿದೆ. ಯಡಿಯೂರಪ್ಪ ಪೆನ್‍ನಲ್ಲಿ ಇಂಕೇ ಇಲ್ಲ ಅನಿಸುತ್ತೆ ಅವರು ಏನು ಬರೆಯುತ್ತಿಲ್ಲ. ಸಂಗೊಳ್ಳಿ ರಾಯಣ್ಣ ಪ್ರಾಧಿಕಾರಕ್ಕೆ ಹಣ ನೀಡುತ್ತಿಲ್ಲ ಹೆಚ್.ಎಂ ರೇವಣ್ಣ ಬೇಸರ ವ್ಯಕ್ತಪಡಿಸಿದರು.

  • ಹೆಚ್‍ಡಿಕೆ ಸರ್ಕಾರ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ- ಹೆಚ್.ಎಂ ರೇವಣ್ಣ

    ಹೆಚ್‍ಡಿಕೆ ಸರ್ಕಾರ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ- ಹೆಚ್.ಎಂ ರೇವಣ್ಣ

    – ಸಿದ್ದು, ಹೆಚ್‍ಡಿಕೆ ಇಬ್ಬರೂ ಕಾರಣ ಅಂದ್ರು ವಿಶ್ವನಾಥ್

    ನವದೆಹಲಿ: ಅಣ್ಣ ಅಣ್ಣ ಅಂತ ಹೇಳಿ ನೀವು ಮಾಡಿದ್ದೇನು..? ತಮ್ಮ ತಪ್ಪನ್ನು ಸಿದ್ದರಾಮಯ್ಯ ಮೇಲೆ ಹಾಕಿದ್ದೆಷ್ಟು ಸರಿ? ಹೆಚ್‍ಡಿಕೆ ಸರಿಯಾಗಿ ನಡೆದುಕೊಂಡಿದ್ರೆ ಏನೂ ಆಗ್ತಿರಲಿಲ್ಲ. ಇದನ್ನು ಜನತಾದಳದ ಪ್ರಮುಖ ನಾಯಕರೇ ಹೇಳ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ ಹೆಚ್.ಎಂ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ. ಚುನಾಯಿತ ಪ್ರತಿನಿಧಿಗಳನ್ನು ಕುಮಾರಸ್ವಾಮಿ ಸರಿಯಾಗಿ ನಡೆಸಿಕೊಂಡಿಲ್ಲ. ಸಿದ್ದರಾಮಯ್ಯ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ನಾನೇ ಏನಾದ್ರೂ ಕೇಳಿದ್ರೆ ಕೆಲಸ ಆಗ್ತಾ ಇರಲಿಲ್ಲ. ನಿಮ್ಮ ಪಕ್ಷದ ಶಾಸಕರನ್ನೇ ಇಟ್ಟುಕೊಳ್ಳಲು ಆಗಲಿಲ್ಲ ಎಂದು ಹೆಚ್‍ಡಿಕೆ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸಾಕಿರೋ ಗಿಣಿ ಅಲ್ಲ, ನನ್ನ ಬೆಳೆಸಿದ್ದು ರಾಮನಗರ ಜನ- ಸಿದ್ದುಗೆ ಹೆಚ್‍ಡಿಕೆ ತಿರುಗೇಟು

    ಇದೇ ವೇಳೆ ಹೆಚ್ ವಿಶ್ವನಾಥ್ ಮಾತನಾಡಿ, ಸಮ್ಮಿಶ್ರ ಸರ್ಕಾರ ಪತನಕ್ಕೆ ಇಬ್ಬರೂ ಕಾರಣ. ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಇಬ್ಬರೂ ಸಮಬಲರು. ಕಾಂಗ್ರೆಸ್ ಶಾಸಕರನ್ನು ಸಿದ್ದರಾಮಯ್ಯ ಕೇಳಲಿಲ್ಲ. ಜೆಡಿಎಸ್ ಶಾಸಕರನ್ನು ಕುಮಾರಸ್ವಾಮಿ ಕೇಳಲಿಲ್ಲ. ಯಾರನ್ನೂ ಹೇಳದೆ ಕೇಳದೆ ಸರ್ಕಾರ ಮಾಡಿದ್ದೀರಿ. ಪಕ್ಷ ರಾಜಕಾರಣ ಇಲ್ಲದೆ ಇರುವುದರಿಂದ ಪಕ್ಷಾಂತರ ಕ್ಕೆ ಕಾರಣವಾಗುತ್ತದೆ. ಪಕ್ಷ ಕುಟುಂಬ, ವ್ಯಕ್ತಿ, ಒಂದು ಗುಂಪಿಗೆ ಸೀಮಿತವಾದರೆ ಪಕ್ಷಾಂತರ ಆಗುತ್ತದೆ ಎಂದು ತಿಳಿಸಿದ್ದಾರೆ.

    ಕಳೆದ ಗುರುವಾರದಿಂದ ಸಮ್ಮಿಶ್ರ ಸರ್ಕಾರ ಪತನಕ್ಕೆ ಯಾರು ಕಾರಣ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಡುವೆ ಟ್ವಿಟ್ಟರ್ ವಾರ್ ನಡೆದಿತ್ತು.

  • ಸಿದ್ದರಾಮಯ್ಯ ಏಕಾಂಗಿ ಅಲ್ಲ, ಅವರು ಮಾಸ್ ಲೀಡರ್: ಹೆಚ್.ಎಂ.ರೇವಣ್ಣ

    ಸಿದ್ದರಾಮಯ್ಯ ಏಕಾಂಗಿ ಅಲ್ಲ, ಅವರು ಮಾಸ್ ಲೀಡರ್: ಹೆಚ್.ಎಂ.ರೇವಣ್ಣ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಏಕಾಂಗಿ ಅಲ್ಲ. ಅವರೊಬ್ಬ ಮಾಸ್ ಲೀಡರ್ ಆಗಿದ್ದು, ರಾಷ್ಟ್ರೀಯ ಪಕ್ಷದ ಮುಖಂಡರು, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಯಾವ ಸಮಯದಲ್ಲಿ ಸಿಎಂ ಆಗುತ್ತೇನೆ ಎಂಬ ವಿಷಯ ಇಲ್ಲಿ ಮುಖ್ಯವಾಗುತ್ತದೆ. ಜನರೊಂದಿಗೆ ಮಾತನಾಡುವ ವೇಳೆ ಮತ್ತೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ ಎಂದು ಮಾಜಿ ಸಚಿವ ಹೆಚ್.ಎಂ.ರೇವಣ್ಣ ಹೇಳಿದ್ದಾರೆ.

    ಜನರೊಂದಿಗೆ ಮಾತನಾಡುವಾಗ ನಾನು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ರೂ, ಚುನಾವಣೆಯಲ್ಲಿ ನಮಗೆ ಬಹುಮತ ಸಿಗಲಿಲ್ಲ. ಆಗ ನೀವು ಮತ್ತೆ ಸಿಎಂ ಆಗಬೇಕು ಅಂದಾಗ ಜನರ ಆಶೀರ್ವಾದ ನಮ್ಮ ಮೇಲಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತೀನಿ ಅಂತಾ ಹೇಳಿದ್ದರು. ಈಗಾಗಲೇ ತಮ್ಮ ಹೇಳಿಕೆಯ ಬಗ್ಗೆ ಮೈಸೂರಿನಲ್ಲಿ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ ಅಂತಾ ತಿಳಿಸಿದರು.

    ರಾಜಕಾರಣದಲ್ಲಿ ಎಲ್ಲರಿಗೂ ಅಧಿಕಾರ ಪಡೆಯಬೇಕೆಂಬ ಆಸೆ ಇದ್ದೆ ಇರುತ್ತದೆ. ಗ್ರಾಮ ಪಂಚಾಯ್ತಿ ಅಧ್ಯಕ್ಷನಿಂದ ಹಿಡಿದು ತಾವು ಅಧಿಕಾರದಲ್ಲಿ ಇರಬೇಕು ಎಂದು ಇಚ್ಛಿಸುತ್ತಾರೆ. ರಾಜಕಾರಣದಲ್ಲಿ ಕಾಂಗ್ರೆಸ್ ಮಾಜಿ ಅಧಕ್ಷೆ ಸೋನಿಯಾ ಗಾಂಧಿ ಅವರನ್ನು ಹೊರತುಪಡಿಸಿ ಎಲ್ಲರಿಗೂ ಅಧಿಕಾರ ಪಡೆಯಬೇಕೆಂಬ ಮನೋಭಾವ ಇರುತ್ತದೆ ಎಂದು ತಿಳಿಸಿದರು.

    ಸಮ್ಮಿಶ್ರ ಸರ್ಕಾರ ಚೆನ್ನಾಗಿ ನಡೆದುಕೊಂಡು ಹೋಗುತ್ತಿದೆ. ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಸಿದ್ದರಾಮಯ್ಯರ ಹೇಳಿಕೆಗೂ ಸಮ್ಮಿಶ್ರ ಸರ್ಕಾರ ರಚನೆಗೆ ಸಂಬಂಧಿಸಿಲ್ಲ. ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇನ್ನು ಮೂರು ತಿಂಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಾಧ್ಯವಿಲ್ಲ ಎಂಬವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೂ ಕೆಲವರು ಕಾಂಗ್ರೆಸ್ ಶಾಸಕರು ನಮ್ಮ ಜೊತೆ ಇದ್ದಾರೆ ಎಂದು ಹೇಳುತ್ತಿದ್ದಾರೆ. ಸೆಪ್ಟೆಂಬರ್ 3ಕ್ಕೆ ಸರ್ಕಾರ ಬೀಳುತ್ತೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, 5 ವರ್ಷ ಪೂರ್ಣ ಮಾಡಲಿದೆ ಎಂದು ಮಾಜಿ ಸಚಿವರು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಂಪುಟ ವಿಸ್ತರಣೆಗೆ ಹೈಕಮಾಂಡ್  ಗ್ರೀನ್ ಸಿಗ್ನಲ್: ಯಾರಿಗೆ ಯಾವ ಖಾತೆ?

    ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಯಾರಿಗೆ ಯಾವ ಖಾತೆ?

    ಬೆಂಗಳೂರು: ಕೊನೆಗೂ ಸಂಪುಟ ವಿಸ್ತರಣೆಯ ಭಾಗ್ಯ ಕೂಡಿ ಬಂದಿದ್ದು, ಮುಂದಿನ ವಾರವೇ ಸಿಎಂ ಕ್ಯಾಬಿನೆಟ್ ವಿಸ್ತರಣೆ ಮಾಡುವ ಸಾಧ್ಯತೆಯಿದೆ.

    ಆಗಸ್ಟ್ 21 ರಂದು ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದ್ದು, ಹೆಚ್ ವೈ ಮೇಟಿ, ಮಹಾದೇವಪ್ರಸಾದ್, ಪರಮೇಶ್ವರ್‍ರಿಂದ ತೆರವಾಗಿರುವ ಸ್ಥಾನಗಳ ಭರ್ತಿಗೆ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ನೀಡಿದೆ.

    ಎಚ್.ಎಂ ರೇವಣ್ಣ, ಆರ್.ಬಿ ತಿಮ್ಮಾಪುರ ಹಾಗೂ ಷಡಕ್ಷರಿ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಹಿಂದುಳಿದ ವರ್ಗ ಕೋಟಾದಡಿ ಹೆಚ್.ಎಂ. ರೇವಣ್ಣ, ಎಸ್‍ಸಿ ಲೆಫ್ಟ್ ಕೋಟಾದಡಿ ಆರ್.ಬಿ. ತಿಮ್ಮಾಪುರ್, ಲಿಂಗಾಯತ ಕೋಟಾದಡಿ ಷಡಕ್ಷರಿ ಅವರಿಗೆ ಸ್ಥಾನ ಸಿಗಲಿದೆ ಎಂದು ಸಿಎಂ ಆಪ್ತ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಹೆಚ್‍ಎಂ ರೇವಣ್ಣ ಅವರಿಗೆ ಅರಣ್ಯ ಖಾತೆ, ಆರ್‍ಬಿ ತಿಮ್ಮಾಪುರ ಅವರಿಗೆ ಅಬಕಾರಿ ಖಾತೆ, ಕೆ ಷಡಕ್ಷರಿ ಅವರಿಗೆ ಸಹಕಾರ ಖಾತೆ ಸಿಗಲಿದೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಕನ್ನಡ ಉಸ್ತುವಾರಿ ಹಾಗೂ ಅರಣ್ಯ ಸಚಿವರಾಗಿರುವ ರಾಮನಾಥ ರೈ ಅವರಿಗೆ ಗೃಹ ಖಾತೆ ಸಿಗುವ ಸಾಧ್ಯತೆಯಿದೆ.

    ತಮ್ಮ ಆಪ್ತರಾಗಿರುವ ಸಿಎಂ ಇಬ್ರಾಹಿಂ ಅವರನ್ನು ಪರಿಷತ್‍ಗೆ ನಾಮ ನಿರ್ದೇಶನ ಮಾಡಲು ಸಿಎಂ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜು- 2 ದಿನದಲ್ಲಿ ಬಿಜೆಪಿ ಬಂಡವಾಳ ಬಯಲು ಮಾಡ್ತೀವಿ ಎಂದ ಕೈ ನಾಯಕರು

    ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜು- 2 ದಿನದಲ್ಲಿ ಬಿಜೆಪಿ ಬಂಡವಾಳ ಬಯಲು ಮಾಡ್ತೀವಿ ಎಂದ ಕೈ ನಾಯಕರು

    ದಾವಣಗೆರೆ/ಬೆಂಗಳೂರು: ತಮ್ಮ ಮೇಲಿನ ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಬಂಡವಾಳ ಬಯಲಾಗುತ್ತೆ ಅಂತಾ ದಾವಣಗೆರೆಯಲ್ಲಿ ವಿಎಸ್ ಉಗ್ರಪ್ಪ ಬಾಂಬ್ ಹಾಕಿದ್ದಾರೆ. ಇನ್ನು ಹೆಚ್‍ಎಂ ರೇವಣ್ಣ ಕೂಡಾ ಬಿಜೆಪಿ ವಿರುದ್ಧ ಡೈರಿ ಬಾಂಬ್ ಸಿಡಿಸೋದಾಗಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ಬಿಜೆಪಿ ಮೇಲೆ ಡೈರಿ ಬಾಂಬ್ ಹಾಕಲು ತಯಾರಿ ನಡೆಸಿದ್ದಾರೆ.

    ಮುಂದಿನ ಎರಡು-ಮೂರು ದಿನಗಳಲ್ಲಿ ಬಿಜೆಪಿಯ ಕರ್ಮಕಾಂಡ ಬಯಲು ಮಾಡುತ್ತೇವೆ. ನಮ್ಮ ಬಳಿಯೂ ಡೈರಿಗಳಿವೆ, ಅವುಗಳನ್ನು ಶೀಘ್ರವೇ ಬಿಡುಗಡೆ ಮಾಡುತ್ತೆವೆ ಎಂದು ಸಿಎಂ ಆಪ್ತ, ಎಂಎಲ್‍ಸಿ ಹೆಚ್.ಎಂ. ರೇವಣ್ಣ ಹೇಳಿದ್ದಾರೆ.

    ನೆಲಮಂಗಲದ ಬೀರೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ರೇವಣ್ಣ, ಐಟಿ ಇಲಾಖೆ ಹಾಗೂ ಒಬ್ಬ ವ್ಯಕ್ತಿಯ ನಡುವಿನ ವಿಷಯ ಹೊರಹಾಕಲು ಬಿಜೆಪಿ ಕುತಂತ್ರ ಮಾಡಿದೆ. ಬಿಜೆಪಿಯವರು ಇಲಾಖೆಯನ್ನ ದುರುಪಯೋಗಪಡಿಸಿಕೊಂಡಿರುವುದು ಈ ಡೈರಿ ಬಿಡುಗಡೆ ವಿಚಾರದಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮಸಿ ಬಳಿಯುವ ನಿಟ್ಟಿನಲ್ಲಿ ಯಡಿಯೂರಪ್ಪ ಹಾಗೂ ಬಿಜೆಪಿ ಹುಟ್ಟುಹಾಕಿರುವ ಕಟ್ಟುಕಥೆಯ ಕುತಂತ್ರ ಎಂದು ರೇವಣ್ಣ ಯಡಿಯೂರಪ್ಪ ವಿರುದ್ಧ ಹರಿಹಾಯ್ದರು.

    ದಾವಣಗೆರೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ಕೂಡ ಇದೇ ರೀತಿ ಬಾಂಬ್ ಸಿಡಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಬಿಜೆಪಿಯವರ ಹಾಗೂ ಯಡಿಯೂರಪ್ಪ ನವರ ಬಂಡವಾಳ ಬಯಲಾಗಲಿದೆ. ಬಿಜೆಪಿಯವರು ಹೈಕಮಾಂಡ್ ಗೆ ಎಷ್ಟು ಹಣವನ್ನು ನೀಡಿದ್ದಾರೆ ಎನ್ನುವ ಮಾಹಿತಿ ಸಹ ಇದೆ. ಬಿಜೆಪಿಯವರ ಡೈರಿಯು ಸಹ ಬಿಡುಗಡೆ ಮಾಡಲಾಗುತ್ತದೆ ಎನ್ನುವ ಸುಳಿವು ನೀಡಿದ್ರು.

    ಕೇಂದ್ರ ಸಚಿವ ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ನಡುವಿನ ಸಂಭಾಷಣೆ ಸ್ಪಷ್ಟವಾಗಿದೆ. ಜನರು ಬುದ್ಧಿವಂತರು, ಮುಂದಿನ ಚುನಾವಣೆಯಲ್ಲಿ ಯಾರು ಯೋಗ್ಯರು ಎನ್ನುವುದನ್ನು ಅವರೇ ನಿರ್ಧಾರ ಮಾಡುತ್ತಾರೆ ಅಂದ್ರು.

    ಗೋವಿಂದರಾಜು ರವರ ಮನೆ ಮೇಲೆ ಐಟಿ ರೇಡ್ ಅಗಿ ಒಂದು ವರ್ಷ ಕಳೆದಿದೆ. ಈಗ ಡೈರಿ ಹೇಗೆ ಸಿಕ್ಕಿತು? ಎನ್ನುವ ಪ್ರಶ್ನೆ ಕಾಡುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಡೀ ದೇಶದಲ್ಲಿ ಚೆಕ್ ಮುಖಾಂತರ ಹಣವನ್ನು ಪಡೆದು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದ ಮುಖ್ಯಮಂತ್ರಿ ಏನಾದ್ರು ಇದ್ದರೆ ಅದು ಯಡಿಯೂರಪ್ಪ ಮಾತ್ರ ಎಂದು ವಿಎಸ್ ಉಗ್ರಪ್ಪ ಲೇವಡಿ ಮಾಡಿದ್ರು.