Tag: ಹೆಚ್.ಡಿ.ದೇವೇಗೌಡ

  • ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

    ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

    – ಗ್ರಾಮೀಣ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ದಾದಿಯರ ವೇತನ ಹೆಚ್ಚಳಕ್ಕೆ ಸಲಹೆ
    – ರಾಜ್ಯಸಭೆಯಲ್ಲಿ ಆರೋಗ್ಯ ಕ್ಷೇತ್ರದ ಬಗ್ಗೆ ಮಾಜಿ ಪ್ರಧಾನಿಗಳ ಚರ್ಚೆ
    – ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ 99,058 ಕೋಟಿಗೆ ಏರಿಕೆ; ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಪ್ರಧಾನಿ

    ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದರು.

    ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು, ಹೃದಯಾಘಾತ ಮತ್ತು ಪಾರ್ಶ್ವವಾಯುನಿಂದ ಮರಣ ಹೊಂದುವವರು ಭಾರತದಲ್ಲಿ ಹೆಚ್ಚುತ್ತಿದ್ದಾರೆ. ಪ್ರತಿ ವರ್ಷ ನಾವು ಲಕ್ಷಾಂತರ ಜನರನ್ನು ಕಳೆದುಕೊಳ್ಳುತ್ತಿದ್ದೇವೆ ಮತ್ತು ದುರದೃಷ್ಟವಶಾತ್ ಶೇ.30 ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಸಂಭವಿಸುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

    ಗ್ರಾಮೀಣ ಪ್ರದೇಶದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿರುವ ಸಲುವಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ 18,000 ರೂ.ಗೆ ರಕ್ತ ಹೆಪ್ಪುಗಟ್ಟುವಿಕೆ ಕರಗಿಸುವ ಇಂಜೆಕ್ಷನ್‌ಗಳು ಲಭ್ಯವಾಗುವಂತೆ ಮಾಡಬೇಕೆಂದು ಕೋರಿದರು. ಹೀಗೆ ಮಾಡುವುದರಿಂದ ಗೋಲ್ಡನ್. ಅವರ್ ನಲ್ಲಿಯೇ, ಆರು ಗಂಟೆಗಳ ಒಳಗಾಗಿ ಜೀವಗಳನ್ನು ಉಳಿಸಬಹುದು. ಆರಂಭಿಕವಾಗಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟಂಟ್ ಅಳವಡಿಸುವುದಕ್ಕಾಗಿ ರೋಗಿಗಳನ್ನು ಹತ್ತಿರದ ನಗರಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಒಳಗೊಳ್ಳಲ್ಪಟ್ಟಿದ್ದರೂ ಜೀವ ರಕ್ಷಕ ಔಷಧಿಗಳನ್ನು ಸಹ ಈ ಯೋಜನೆಯಲ್ಲಿ ಸೇರಿಸಬೇಕು ಎಂದು ಮನವಿ ಮಾಡಿದರು.

    ಕಳೆದ ಹತ್ತು ವರ್ಷಗಳಲ್ಲಿ ರಾಷ್ಟ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತೀವ್ರಗತಿಯ ಸುಧಾರಣೆಗೆಲೈ ಆಗುತ್ತಿವೆ. 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ 37,000 ಕೋಟಿ ರೂ.ಗಳಷ್ಟಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಈ ಹಂಚಿಕೆ 99,058 ಕೋಟಿ ರೂ.ಗಳಿಗೆ ಏರಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು. ಎನ್‌ಡಿಎ ಹಾಗೂ ಯುಪಿಎ ಸರ್ಕಾರಗಳ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆಯನ್ನು ಹೋಲಿಸಿ ಮಾತನಾಡಿದರು.

    ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ದಾದಿಯರ ಕೊರತೆ ನೀಗಿಸಿ
    ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳಕ್ಕೆ ದೇವೇಗೌಡರು ಬಲವಾಗಿ ಪ್ರತಿಪಾದಿಸಿದರು. ಗ್ರಾಮೀಣ ವೈದ್ಯರು ಪ್ರಸ್ತುತ ತಿಂಗಳಿಗೆ 50,000-60,000 ರೂ. ವೇತನ ಪಡೆಯುತ್ತಿದ್ದಾರೆ. ಕಡಿಮೆ ಸಂಬಳದಿಂದಾಗಿ ವೈದ್ಯರು ಸಹ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿಲ್ಲ. ಪಿಎಚ್‌ಸಿಗಳು, ಸಿಎಚ್‌ಸಿಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ವೃತ್ತಿಪರರನ್ನು ಆಕರ್ಷಿಸಲು ಸರ್ಕಾರ ಅವರ ವೇತನವನ್ನು ಕನಿಷ್ಠ 80,000-90,000 ರೂ.ಗೆ ಹೆಚ್ಚಿಸಬೇಕು ಎಂದು ಮಾಜಿ ಪ್ರಧಾನಿಗಳು ಒತ್ತಾಯಿಸಿದರು.

    ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡಬೇಕು. ಗ್ರಾಮೀಣ ಆರೋಗ್ಯವನ್ನು ನಾವು ಸುಧಾರಿಸದೇ ಇದ್ದರೆ, ನಮ್ಮ ಹಳ್ಳಿಗಳು ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಬಳಲುತ್ತಲೇ ಇರುತ್ತವೆ ಎಂದು ಅವರು ಎಚ್ಚರಿಸಿದರು.

    ಅದೇ ರೀತಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ದಾದಿಯರಿಗೆ ಕಡಿಮೆ ಸಂಬಳದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಅವರಿಗೆ ಪ್ರಸ್ತುತ ತಿಂಗಳಿಗೆ ಕೇವಲ 13,000 ರೂ. ವೇತನ ನೀಡಲಾಗುತ್ತದೆ. ಈ ವೇತನವು ದೈನಂದಿನ ವೇತನ ಮಾನದಂಡಕ್ಕಿಂತ ಕಡಿಮೆಯಾಗಿದೆ. ದಾದಿಯರು ತಮ್ಮ ಕುಟುಂಬಗಳನ್ನು ಉಳಿಸಿಕೊಳ್ಳಲು ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದನ್ನು ಮುಂದುವರಿಸಲು ವೇತನವನ್ನು ಕನಿಷ್ಠ 20,000-28,000 ರೂ.ಗೆ ಹೆಚ್ಚಿಸಬೇಕು ಎಂದು ಕೋರಿದರು.

    HPV ಲಸಿಕೆ ಮತ್ತು ಕ್ಯಾನ್ಸರ್ ತಡೆಗಟ್ಟುವಿಕೆ
    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಲ್ಲಿ HPV ಲಸಿಕೆಯನ್ನು ಸೇರಿಸಬೇಕೆಂದು ದೇವೇಗೌಡರು ಮನವಿ ಮಾಡಿದರು. ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. HPV ಲಸಿಕೆಯು ಅದರ ಸಂಭವವನ್ನು ಶೇ.80-90ರಷ್ಟು ಕಡಿಮೆ ಮಾಡುತ್ತದೆ. ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದ ಭಾಗವಾಗಿ ಪ್ರೌಢಶಾಲಾ ಹುಡುಗಿಯರಿಗೆ ಲಸಿಕೆ ಹಾಕುವುದು ಉತ್ತಮ ಪರಿಹಾರೋಪಾಯ ಆಗಿದೆ ಅವರು ಒತ್ತಿ ಹೇಳಿದರು.

    ಗ್ರಾಮೀಣ ಆರೋಗ್ಯ ರಕ್ಷಣೆಯಲ್ಲಿ ಖಾಸಗಿ ವಲಯದ ಹೂಡಿಕೆಯನ್ನು ಪ್ರೋತ್ಸಾಹಿಸಿ
    ಸೇವೆಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಸುಧಾರಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ವಿಶೇಷ ಕೇಂದ್ರಗಳನ್ನು ಸ್ಥಾಪಿಸುವ ಖಾಸಗಿ ಆಸ್ಪತ್ರೆಗಳಿಗೆ ಐದು ವರ್ಷಗಳ ತೆರಿಗೆ ವಿನಾಯಿತಿ ನೀಡುವ ಬಗ್ಗೆ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

    ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉತ್ತಮ ಆರ್ಥಿಕ ನೆರವು ನೀಡಬೇಕೆಂದು ಅವರು ಒತ್ತಾಯಿಸಿದ ಅವರು, ಈ ಕಾರ್ಯಕರ್ತರು ನಮ್ಮ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಜನರಿಗೆ ಸೇವೆ ಸಲ್ಲಿಸಲು ಅವರ ಪ್ರೇರಣೆ ಮತ್ತು ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅವರ ಗೌರವಧನವನ್ನು ನಿಯತಕಾಲಿಕವಾಗಿ ಪರಿಷ್ಕರಿಸಬೇಕು ಎಂದು ಅವರು ಸರ್ಕಾರದ ಗಮನ ಸೆಳೆದರು.

    ಆಯುಷ್ಮಾನ್ ಭಾರತ್ ಯೋಜನೆ ಬಲಪಡಿಸಿ
    ಆಯುಷ್ಮಾನ್ ಭಾರತ್ ಯೋಜನೆಯ ಯಶಸ್ಸನ್ನು ದೇವೇಗೌಡರು ಶ್ಲಾಘಿಸಿದರು. ಭಾರತದ ಜನಸಂಖ್ಯೆಯ ಶೇ.70ಕ್ಕೂ ಹೆಚ್ಚು ಜನರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 2018ರಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪ್ರಾರಂಭಿಸಲಾದ ಈ ಉಪಕ್ರಮವು ಲಕ್ಷಾಂತರ ಜನರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಿದೆ. ಬಡ ನಾಗರಿಕರು ಸಹ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮತ್ತು ಆರೋಗ್ಯ ಸಚಿವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

  • ಕೊನೆ ಉಸಿರಿರೋವರೆಗೂ ಜನರಿಗಾಗಿ ಕೆಲಸ ಮಾಡಲು ಶಕ್ತಿ ಕೊಡು: ದೇವರಲ್ಲಿ ಪ್ರಾರ್ಥಿಸಿದ ಹೆಚ್‌ಡಿಡಿ

    ಕೊನೆ ಉಸಿರಿರೋವರೆಗೂ ಜನರಿಗಾಗಿ ಕೆಲಸ ಮಾಡಲು ಶಕ್ತಿ ಕೊಡು: ದೇವರಲ್ಲಿ ಪ್ರಾರ್ಥಿಸಿದ ಹೆಚ್‌ಡಿಡಿ

    ಚಿಕ್ಕಬಳ್ಳಾಪುರ: ನನ್ನ ಕೊನೆ ಉಸಿರು ಇರೋವರೆಗೂ ನನ್ನ ಜನರಿಗಾಗಿ ಕೈಲಾದ ಕೆಲಸ ಮಾಡಲು ಶಕ್ತಿ ಕೊಡು ಎಂದು ಭಗವಂತನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (H.D Devegowda) ಪ್ರಾರ್ಥಿಸಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ನಗರದ ಆದಿಚುಂಚನಗಿರಿ ಶಾಖಾ ಮಠದ (Adhichunchanagiri Math) ಮುಂಭಾಗದ ಸೂಲಾಲಪ್ಪನದಿನ್ನೆಯ ಶ್ರೀವೀರಾಂಜನೇಯಸ್ವಾಮಿ ದೇವಾಲಯದ ಬಳಿ ನಡೆದ ಕುಂಭಾಭಿಷೇಕ, ಬಾಲಗಂಗಾಧರನಾಥಶ್ರೀಗಳ 80ನೇ ಜಯಂತೋತ್ಸವ ಹಾಗೂ ನಿರ್ಮಲಾನಂದನಾಥ ಶ್ರೀಗಳ 12ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ರೈತನ ಮಗ, ನನ್ನ ಕೊನೆ ಉಸಿರು ಹೋಗುವವರೆಗೂ, ನನ್ನ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ. ನಾನು ಕುಳಿತುಕೊಳ್ಳುವ ವ್ಯಕ್ತಿಯಲ್ಲ. ನಾನು ಯಾರ ಬಗ್ಗೆಯೂ ಮಾತನಾಡಲ್ಲ ಎಂದಿದ್ದಾರೆ.

    ಯಾವುದೆ ಪಕ್ಷ ಯಾವುದೇ ಜಾತಿ ನಾಯಕರು ಇದ್ರೂ ಲಘುವಾಗಿ ಮಾತನಾಡಿಲ್ಲ. ನನ್ನ ಉಸಿರು ಇರುವಾಗಲೇ ರಾಜ್ಯಕ್ಕೆ ಏನಾದ್ರೂ ಒಳ್ಳೆಯದು ಮಾಡಬೇಕು. ಕೆಂಪು ಕೋಟೆಯ ಮೇಲೆ ಒಂದು ಸಲ ಬಾವುಟ ಹಾರಿಸಿದ್ದೇನೆ ಅಂತ ಶ್ರೀಗಳು ಹೇಳ್ತಿದ್ರು. ನನ್ನ ಶಕ್ತಿ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಆಗಿದ್ರು. ಆದರೆ ಸ್ವಲ್ಪ ವ್ಯತ್ಯಾಸವಾದ ಕಾರಣ ತಕ್ಷಣ ನಾನೇ ಬಗೆಹರಿಸಿಕೊಂಡೆ ಎಂದಿದ್ದಾರೆ.

    ನನ್ನ ಜನರಿಗಾಗಿ ಪಾರ್ಲಿಮೆಂಟ್‌ನಲ್ಲಿ ಹೋರಾಟ ಮಾಡುವ ಶಕ್ತಿ ಕೊಡು ಎಂದು ಕುಲದೇವರು ಈಶ್ವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.

  • ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

    ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

    – ಮೇಕೆದಾಟು, ಮಹದಾಯಿ ದೇವೇಗೌಡರ ಹೋರಾಟವಲ್ಲ, ರಾಜ್ಯದ ಹೋರಾಟ ಎಂದ ಡಿಸಿಎಂ

    ಬೆಂಗಳೂರು: ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ (Elections) ಅವರು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದರು.

    ಕೆಪಿಸಿಸಿ (KPCC) ಕಚೇರಿಯಲ್ಲಿಂದು ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ, ಎಲ್.ಎಸ್. ಚೇತನ್ ಗೌಡ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು. ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಇದನ್ನೂ ಓದಿ: ಪ್ಲಾಟ್‌ಫಾರ್ಮ್ ಮೆಟ್ಟಿಲಿನಿಂದ ಪ್ರಯಾಣಿಕ ಜಾರಿ ಬಿದ್ದಿದ್ದು ಕಾಲ್ತುಳಿತಕ್ಕೆ ಕಾರಣ: ರೈಲ್ವೆ ಅಧಿಕಾರಿ

    ಮುಂದಿನ ಚುನಾವಣೆಗೂ ಸಿಎಂ ಬೇಕೆ ಬೇಕು ಎನ್ನುವ ಸಚಿವರುಗಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ (Siddaramaiah) ನಮ್ಮ ಮುಖ್ಯಮಂತ್ರಿಗಳು, ನಮ್ಮ ನಾಯಕರು. ಎಲ್ಲಾ ಚುನಾವಣೆಗಳಿಗೂ ಅವರು ಬೇಕು. ಕಾಂಗ್ರೆಸ್ ಪಕ್ಷ ಎರಡು ಬಾರಿ ಸಿಎಂ ಆಗುವ ಅವಕಾಶ ಕೊಟ್ಟಿದೆ. ದಿನ ಬೆಳಗಾದರೇ ಅವರ ಸುದ್ದಿ ಎತ್ತಿಕೊಂಡು ಅವರ ಹೆಸರು ದುರುಪಯೋಗ ಮಾಡೋದು ಬೇಡ. ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಸಿಎಂ ಸಿದ್ದರಾಮಯ್ಯ ಬೇಕು ಎಂದು ಹೇಳಿದರು

    ಸಿದ್ದರಾಮಯ್ಯನವರು ಎರಡನೇ ಬಾರಿಯೂ ಸಿಎಂ ಆಗಿ ಒಳ್ಳೆ ಕೆಲಸ ಮಾಡ್ತಾ ಇದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿ ಆಹಾರ ಆಗಬಾರದು, ನಮ್ಮಲ್ಲಿ ಗೊಂದಲದ ಯಾವ ಹೇಳಿಕೆಯೂ ಇಲ್ಲ. ಕಾಂಗ್ರೆಸ್ ಪಕ್ಷ ಎಲ್ಲವನ್ನು ಗಮನಿಸುತ್ತಿದೆ ಎಂದರು. ಇದನ್ನೂ ಓದಿ: ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ – ‘ಡೆವಿಲ್’ ಸಿನಿಮಾದ ಟೀಸರ್ ರಿಲೀಸ್

    ಅಧಿಕಾರದಲ್ಲಿದ್ದು ಹೋರಾಟ ಯಾಕೆ ಮಾಡ್ತಾರೆ?
    ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ (HD Devegowda) ಹೇಳಿಕೆ ಬಗ್ಗೆ ಕೇಳಿದಾಗ, ರಾಜ್ಯದ ನೆಲ, ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಮಹದಾಯಿ ವಿಚಾರವಾಗಿ ನಾವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟವಲ್ಲ. ರಾಜ್ಯದ ಹೋರಾಟ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು? ಎಂದು ಪ್ರಶ್ನಿಸಿದರು.

    ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನಮಗೆ ಅದರ ಅಗತ್ಯವೂ ಇಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂದು ನೋಡಿದ್ದೇವೆ. ನಾವು ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ, ಅದನ್ನು ಕೊಟ್ಟಿಲ್ಲ ಎಂದು ಅವರು ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು, ಕುಮಾರಸ್ವಾಮಿ, ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ. ಅವರು ಯೋಜನೆ ತರಲಿ. ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ.. ನಾವು ನೀಡುತ್ತೇವೆ. ಇಲ್ಲಿಂದಲೇ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತೇವೆ ಎಂದರು.

    ಬೆಂಗಳೂರಿನ ನೀರಿನ ವಿಚಾರವಾಗಿ ಮಾತನಾಡಿದ್ದಾರೆ ಎಂದು ಕೇಳಿದಾಗ, ಅವರ ಪಕ್ಷದ ನಾಯಕರಿಂದ ಗೊಂದಲದ ಹೇಳಿಕೆ ಕೊಡಿಸುತ್ತಿದ್ದಾರೆ. ಡಿ.ಸಿ ತಮ್ಮಣ್ಣ ಅವರಿಗೆ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಡಿಪಿಆರ್ ಸಿದ್ಧಪಡಿಸಿದ್ದಾರೆ ಅಷ್ಟೇ. ಇನ್ನೂ ತೀರ್ಮಾನ ಮಾಡಿಲ್ಲ, ನಾನು ಅಧಿಕಾರಕ್ಕೆ ಬಂದ ತಕ್ಷಣವೇ ಬೆಂಗಳೂರಿಗೆ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಮೆಟ್ಟಿಲುಗಳ ಮೇಲೆ ಉಸಿರು ಚೆಲ್ಲಿದ ಪ್ರಯಾಣಿಕರು – ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತಕ್ಕೆ ಕಾರಣವೇನು?

  • ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು: ಹೆಚ್.ಡಿ.ದೇವೇಗೌಡ

    ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು: ಹೆಚ್.ಡಿ.ದೇವೇಗೌಡ

    ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು ಅಂತ ಮಾಜಿ ಪ್ರಧಾನಿ ದೇವೇಗೌಡ ಪುನರುಚ್ಚಾರ ಮಾಡಿದ್ದಾರೆ.

    ಸಂಸತ್ ಅಧಿವೇಶನದಲ್ಲಿ ಇದೇ ವಿಷಯ ಪ್ರಸ್ತಾಪ ಮಾಡಿದ್ದ ದೇವೇಗೌಡರು ಇಂದು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ ಮಾಡಿದ್ರು. ಗೋದಾವರಿ-ಕೃಷ್ಣ-ಕಾವೇರಿ ಯೋಜನೆ ವಿಚಾರವಾಗಿ ನೀರು ಹೆಚ್ಚಳ ಮಾಡುವಂತೆ ನಾನು ಪ್ರಧಾನಿಗಳು, ಕೇಂದ್ರ ನೀರಾವರಿ ಸಚಿವರಿಗೆ 2022 ಮತ್ತು 2024 ರಲ್ಲಿ ಪತ್ರ ಬರೆದಿದ್ದೆ. ಸದ್ಯ ನಮಗೆ 15.891 TMC ನೀರು ಹಂಚಿಕೆ ಮಾಡಲಾಗಿದೆ. ಆದರೆ, ಈ ಪ್ರಮಾಣವನ್ನು 25 TMC ಗೆ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದ್ದಾರೆ.

    ಸಂಸತ್‌ನಲ್ಲಿ ಈ ಬಗ್ಗೆ ನಾನು ಮಾತಾಡಿದ್ದೇನೆ. ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಅವರು ಪ್ರಧಾನಿ ಮೋದಿ ಅವರ ಬಳಿ ಮಾತಾಡ್ತಾರೆ. ಮೋದಿ ಅವರು ನಮಗೆ ಹತ್ತಿರ ಇರೋದ್ರಿಂದ ಈ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ಮಾಡ್ತೀನಿ. ನೀರಾವರಿ ವಿಚಾರವಾಗಿ ನಮ್ಮಲ್ಲಿ ಯಾವುದೇ ರಾಜಕೀಯ ಇಲ್ಲ. ಸಿದ್ದರಾಮಯ್ಯ, ಡಿಕೆಶಿವಕುಮಾರ್, ಕಾಂಗ್ರೆಸ್ ಸಂಸದರು ಎಲ್ಲರ ಜೊತೆ ನಾನು ನೀರಾವರಿ ವಿಚಾರವಾಗಿ ಮಾತಾಡೋಕೆ ಸಿದ್ಧ. ನಮಗೆ ಸಮಸ್ಯೆ ಪರಿಹಾರ ಆಗಬೇಕು. ಇದಕ್ಕೆ ನನ್ನ ಹೋರಾಟ ಮುಂದುವರೆಸುತ್ತೇನೆ ಅಂತ ತಿಳಿಸಿದ್ದಾರೆ.

    ನಾನು ಇನ್ನು ನಾಕಾರು ವರ್ಷ ಬದುಕಿರುತ್ತೇನೆ. ಅಷ್ಟರಲ್ಲಿ ಈ ನೀರಾವರಿ ಸಮಸ್ಯೆಗೆ ಪರಿಹಾರ ಕಂಡುಕೊಡುವ ಪ್ರಯತ್ನ ಮಾಡ್ತೀನಿ. ನೀರಾವರಿ ವಿಚಾರದಲ್ಲಿ ರಾಜಕೀಯ ಮಾಡೊಲ್ಲ. ರಾಜ್ಯ ಸರ್ಕಾರದ ಜೊತೆಗೆ ಕೆಲಸ ಮಾಡ್ತೀನಿ. ಹಿಂದೊಮ್ಮೆ ಸಿದ್ದರಾಮಯ್ಯ ಜೊತೆ ಸಂಬಂಧ ಸರಿಯಿಲ್ಲದ ವೇಳೆ ಸಿದ್ದರಾಮಯ್ಯ ಅವರೇ ನಮ್ಮ ಮನೆಗೆ ಬಂದಿದ್ದರು. ನೀರಾವರಿ ವಿಷಯ ಆದ ಹಿನ್ನೆಲೆ ‌ನಾನು ಅವರ ಜೊತೆ ಸಹಕಾರ ಕೊಟ್ಡಿದ್ದೆ ಅನ್ನೋ ಮೂಲಕ ನೀರಾವರಿ ವಿಷಯದಲ್ಲಿ ರಾಜಕೀಯ ಮಾಡೊಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯಕ್ಕೆ 25 TMC ನೀರು ತರುವ ಪ್ರಯತ್ನವನ್ನು ಮಾಡ್ತೀನಿ ಅಂತ ಭರವಸೆ ನೀಡಿದ್ದಾರೆ.

  • ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆ: ಹೆಚ್‌ಡಿಡಿ

    ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆ: ಹೆಚ್‌ಡಿಡಿ

    – ಬೆಂಗಳೂರಿಗೆ 50ಕ್ಕೂ ಅಧಿಕ ಟಿಎಂಸಿ ನೀರಿನ ಅಗತ್ಯವಿದೆ ಎಂದ ಗೌಡರು
    – ಕಾವೇರಿ, ಮಹದಾಯಿ ಸಮಸ್ಯೆ ಬಗೆಹರಿಸಲು ಮನಮೋಹನ್‌ಸಿಂಗ್‌ ಬಳಿ ಭಿಕ್ಷೆ ಬೇಡಿದ್ದೆ

    ನವದೆಹಲಿ: ಬೆಂಗಳೂರಿಗೆ (Bengaluru) ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ (HD Devegowda) ಅವರು ಹೇಳಿದರು.

    ರಾಷ್ಟ್ರಪತಿಗಳ (President) ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಗೌಡರು, ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನಸಂಖ್ಯೆ ಇದೆ. ನಮಗೆ 20 ಟಿಎಂಸಿ ನೀರು ಸಿಗುತ್ತಿದ್ದು, 50ಕ್ಕೂ ಅಧಿಕ ಟಿಎಂಸಿ ನೀರಿನ ಅಗತ್ಯವಿದೆ. ಕಾವೇರಿ, ಮಹದಾಯಿ, ಕೃಷ್ಣ ಮೂರು ಅಂತರ ರಾಜ್ಯ ವಿವಾದದಲ್ಲಿದೆ. ಮುಂದಿನ ತಿಂಗಳು ನೀರಿನ ಕೊರತೆಯಾಗಲಿದೆ ಎಂದರು.

    ಕುಡಿಯುವ ನೀರಿನ ಅಗತ್ಯ ಬೆಂಗಳೂರಿಗೆ ಇದೆ, ಎಲ್ಲಿಂದ ತರುವುದು? ಮೋದಿ ಅವರು ಮಾತ್ರ ಈ ಸಮಸ್ಯೆ ಬಗೆಹರಿಸಲು ಸಾಧ್ಯ. ನಾನು ಮನಮೋಹನ್ ಸಿಂಗ್ ಅವರಿಗೆ ಭಿಕ್ಷೆ ಬೇಡಿದೆ, ಅದ್ರೆ ಅವರು ಆಗಲ್ಲ ಅಂದುಬಿಟ್ಟರು. ಮೋದಿ ಅವರು ಈ ಸಮಸ್ಯೆ ಬಗೆಹರಿಸಬಹುದು. ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ನುಡಿದರು. ಇದನ್ನೂ ಓದಿ: ತರಬೇತಿ‌ ವೇಳೆ IAFನ ಮಿರಾಜ್-2000 ಯುದ್ಧ ವಿಮಾನ ಪತನ – ಇಬ್ಬರು ಪೈಲಟ್‌ ಸೇಫ್‌

    ಮೋದಿ ಸರ್ಕಾರ 5 ವರ್ಷ ಗ್ಯಾರಂಟಿ:
    ಮೋದಿ 2ನೇ ಅವಧಿಯಲ್ಲೂ ಬಹುಮತ ಪಡೆದು ಪ್ರಧಾನಿಯಾದರು. ಮೂರನೇ ಅವಧಿಯಲ್ಲಿ ಬಹುಮತ ಬರದಿದ್ದರೂ ವಿಪಕ್ಷಗಳು ಬೆಂಬಲ ನೀಡಿದವು. ರಾಷ್ಟ್ರಪತಿಗಳ ಭಾಷಣದ ಮೇಲೆ ಮಾತನಾಡಲು ಸಾಕಷ್ಟು ಅಂಶಗಳಿವೆ. ಬಡವರು, ಮಧ್ಯಮ ವರ್ಗ, ಯುವಕರು ಮತ್ತು ಮಹಿಳೆಯರಿಗೆ ಮೋದಿ ಸರ್ಕಾರ ಆದ್ಯತೆ ನೀಡಿದೆ. ಒಂದು ಸುಸ್ಥಿರ ಸರ್ಕಾರ ಇದನ್ನು ಮಾಡುತ್ತಿದೆ. ಈ ಸರ್ಕಾರ 5 ವರ್ಷ ಮುಂದುವರಿಯಲಿದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಮೋದಿ ಗುಣಗಾನ:
    ಮುಂದುರಿದು.. ನಾನು ಪ್ರಧಾನಿ ಅವರಿಂದ ಯಾವ ಲಾಭ ಪಡೆದಿಲ್ಲ. ನಾನು ಯಾವತ್ತೂ ಅವರ ಮನೆಯ ಬಾಗಿಲಿಗೆ ಹೋಗಿಲ್ಲ. ಸಭಾಧ್ಯಕ್ಷರು ಒಬ್ಬ ರೈತರು, ನಾನು ಜಾಟ್ ಸಮುದಾಯಕ್ಕೆ ಮೀಸಲಾತಿ ನೀಡಿದೆ. ದೇಶವನ್ನು ಹೇಗೆ ನಡೆಸಬೇಕು ನನಗೆ ಗೊತ್ತಿದೆ. ಆದ್ರೆ ಇಂದು ದೇವೇಗೌಡ ಅಥವಾ ಇನ್ಯಾರದು ಹೆಸರಿನಿಂದ ಭಾರತವನ್ನು ಜಾಗತಿಕ ದೇಶಗಳು ಗುರುತಿಸಿಲ್ಲ. ಮೋದಿ ಅವರಂತಹ ಅಗ್ರಗಣ್ಯ ನಾಯಕನಿಂದ ಇಡೀ ವಿಶ್ವ ಭಾರತವನ್ನು ಗುರುತಿಸಿದೆ ಎಂದು ಗುಣಗಾನ ಮಾಡಿದರು.  ಇದನ್ನೂ ಓದಿ: ಭಾರತೀಯರ ಮೇಲೆ ದೌರ್ಜನ್ಯ ನಡೆಯದಂತೆ ನೋಡಿಕೊಳ್ಳಲು ಅಮೆರಿಕದೊಂದಿಗೆ ಮಾತುಕತೆ: ಜೈಶಂಕರ್

  • ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ – ಹೆಚ್‌ಡಿಡಿ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ

    ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ – ಹೆಚ್‌ಡಿಡಿ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ

    – ಹೊಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ತಮಿಳುನಾಡು ಆಗ್ರಹ

    ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ (Airport) ನಗರಕ್ಕೆ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಪ್ರತಿಪಾದಿಸಿದರು.

    ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, ಕರ್ನಾಟಕ ಸರ್ಕಾರ ಈಗಾಗಲೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರ ಈಗಾಗಲೇ ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿ ಈ ಬಗ್ಗೆ ಚರ್ಚೆ ನಡೆಸಿದೆ. ಬೆಂಗಳೂರು ನಗರಕ್ಕೆ, ಅದರಲ್ಲಿಯೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಒತ್ತಿ ಹೇಳಿದರು.

    ಈ ನಿಟ್ಟಿನಲ್ಲಿ ಕೇಂದ್ರವು ಕರ್ನಾಟಕದಲ್ಲಿ ಮತ್ತೊಂದು ವಿಮಾನ ನಿಲ್ದಾಣವನ್ನು ನಿರ್ಮಿಸುವ ಬಗ್ಗೆ ಗಮನ ಹರಿಸಬೇಕು. ಕರ್ನಾಟಕಕ್ಕೆ ಸಂಬಂಧಿಸಿ ನಾನು ಮಂಜೂರು ಮಾಡಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈಗ ಪ್ರಯಾಣಿಕರ ದಟ್ಟಣೆಯಿಂದ ವಿಪರೀತ ಒತ್ತಡ ಎದುರಿಸುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಇನ್ನೂ ಒಂದು ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಅವರು ಹೇಳಿದರು.

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಅಗತ್ಯವಿದೆ ಎಂಬ ಮಾಜಿ ಪ್ರಧಾನಿಗಳ ಮಾತಿಗೆ ವಿಮಾನಯಾನ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಮ್ಮತಿ ಸೂಚಿಸಿದರು.

    ಮಾಜಿ ಪ್ರಧಾನಿಗಳ ಮಾತಿಗೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದ ಕೇಂದ್ರದ ನಾಗರಿಕ ವಿಮಾನಯಾನ ಖಾತೆ ಸಚಿವ ರಾಮಮೋಹನ್ ನಾಯ್ಡು ಅವರು, ಬೆಂಗಳೂರು ವಿಮಾನ ನಿಲ್ದಾಣವು ದಿನದಿಂದ ದಿನಕ್ಕೆ ಬಹಳಷ್ಟು ಪ್ರಯಾಣಿಕರ ದಟ್ಟಣೆಯನ್ನು ಎದುರಿಸುತ್ತಿದೆ. ಇದನ್ನು ನಾವೆಲ್ಲರೂ ಒಪ್ಪುತ್ತೇವೆ. ಕರ್ನಾಟಕ ಸರ್ಕಾರವು ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಬಯಸಿದೆ. ಅದಕ್ಕೆ ಸೂಕ್ತ ಸ್ಥಳ ಗುರುತಿಸಿ, ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಿದರೆ ಆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತವೆ ಎಂದು ಭರವಸೆ ನೀಡಿದರು.

    ಹೊಸೂರಿನಲ್ಲಿ ವಿಮಾನ ನಿಲ್ದಾಣ:
    ಬೆಂಗಳೂರು ವಿಮಾನ ನಿಲ್ದಾಣಕ್ಕೆ ಜನದಟ್ಟಣೆಯ ಹೆಚ್ಚಾಗಿದೆ, ಹೀಗಾಗಿ ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ಒತ್ತಡ ಬರುತ್ತಿದೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಅಗತ್ಯವಿದೆ ಎಂದು ಎಐಡಿಎಂಕೆ ಸಂಸದ ತಂಬಿದೊರೈ ಆಗ್ರಹಿಸಿದರು.

    ವಿಮಾನ ನಿಲ್ದಾಣದ ಚರ್ಚೆಯಲ್ಲಿ ಮಾತನಾಡಿದ ಅವರು, ದೆಹಲಿ ನೊಯ್ಡಾ ರೀತಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬಹುದು, 25 ವರ್ಷಗಳೊಗೆ ಮತ್ತೊಂದು ವಿಮಾನ ನಿಲ್ದಾಣ ಮಾಡಬಾರದು ಎನ್ನುವ ನಿಯಮ ಸಡಿಲಗೊಳಿಸಬೇಕು, ಹೊಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ತಮಿಳುನಾಡು ಸರ್ಕಾರ ಕೂಡಾ ಶಿಫಾರಸು ಮಾಡಿದೆ ಎಂದರು.

    ತಂಬಿದೊರೈ ಪ್ರಶ್ನೆಗೆ ಉತ್ತರಿಸಿದ ವಿಮಾನಯಾನ ಸಚಿವ ರಾಮಮೋಹನಗ ನಾಯ್ಡು, ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣ ಆಗಬೇಕು ಎನ್ನುವ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರ ಕೂತು ಈ ಸಮಸ್ಯೆ ಬಗೆಹರಿಸಬೇಕು, ಹೊಸ ವಿಮಾನ ನಿಲ್ದಾಣ ಮಾಡುವುದು ನಮ್ಮ ಉದ್ದೇಶವಿದೆ ಆದರೆ 150km ವ್ಯಾಪ್ತಿಯಲ್ಲಿ ಮತ್ತೊಂದು ನಿಲ್ದಾಣ ಮಾಡಬಾರದು ಎನ್ನುವ ನಿಯಮ ಇದೆ ಹೀಗಾಗಿ ಕೂತು ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಬೇಕಿದೆ ಎಂದರು.

  • ದೇವೇಗೌಡರ ಆಪ್ತ ಪಟೇಲ್ ಶಿವರಾಂ ನಿಧನ

    ದೇವೇಗೌಡರ ಆಪ್ತ ಪಟೇಲ್ ಶಿವರಾಂ ನಿಧನ

    ಹಾಸನ: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಪೆಕ್ಸ್ ಬ್ಯಾಂಕ್ ಹಾಲಿ ನಿರ್ದೇಶಕ ಪಟೇಲ್ ಶಿವರಾಂ (75) (Patel Shivaram) ವಿಧಿವಶರಾಗಿದ್ದಾರೆ.

    ನಗರದ (Hassan) ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 2010-2016 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಅವರು ಸೇವೆಸಲ್ಲಿಸಿದ್ದರು. ಅಲ್ಲದೇ ಹೆಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕ, ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

    ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (H.D Devegowda ) ಹಾಗೂ ಅವರ ಕುಟುಂಬಕ್ಕೆ ಪಟೇಲ್ ಆಪ್ತರಾಗಿದ್ದರು. ಈ ಮೂಲಕ ಹಾಸನ ಜಿಲ್ಲೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದರು. ಸುಮಾರು ನಾಲ್ಕು ದಶಕಗಳಿಂದ ಜೆಡಿಎಸ್‌ನಲ್ಲಿ (JDS) ಸಕ್ರಿಯರಾಗಿದ್ದರು.

  • ಭಾರತದ 130 ಟನ್ ಚಿನ್ನ ಅಡ ಇಟ್ಟ ಭೀಕರ ಪರಿಸ್ಥಿತಿಯಲ್ಲಿ ದೇಶಕ್ಕಾಗಿ ಸಿಂಗ್ ಕೆಲಸ ಮಾಡಿದ್ರು: ಹೆಚ್‌ಡಿಡಿ ಸ್ಮರಣೆ

    ಭಾರತದ 130 ಟನ್ ಚಿನ್ನ ಅಡ ಇಟ್ಟ ಭೀಕರ ಪರಿಸ್ಥಿತಿಯಲ್ಲಿ ದೇಶಕ್ಕಾಗಿ ಸಿಂಗ್ ಕೆಲಸ ಮಾಡಿದ್ರು: ಹೆಚ್‌ಡಿಡಿ ಸ್ಮರಣೆ

    ಬೆಂಗಳೂರು: ಆಗ ನಮ್ಮ ದೇಶದ 130 ಟನ್ ಚಿನ್ನವನ್ನು ಅಡ ಇಟ್ಟಿದ್ದ ಭೀಕರ ಪರಿಸ್ಥಿತಿಯಲ್ಲಿ ಹಣಕಾಸು ಮಂತ್ರಿಯಾಗಿ ಮನಮೋಹನ್ ಸಿಂಗ್ (Manmohan Singh) ಅವರು ದೇಶಕ್ಕಾಗಿ ಕೆಲಸ ಮಾಡಿದ್ದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve Gowda) ಸ್ಮರಿಸಿದರು.

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಜೆಡಿಎಸ್ ಕಚೇರಿಯಲ್ಲಿ ಸಂತಾಪ ಸೂಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೆಚ್‌ಡಿಡಿ ಮಾತನಾಡಿದರು. ಇವತ್ತು ಅತ್ಯಂತ ದುಃಖದ ದಿವಸ. ಮನಮೋಹನ್ ಸಿಂಗ್ ಅವರನ್ನು ನಾನು ನೋಡಿದ್ದು ಲೋಕಸಭೆಯಲ್ಲಿ. 1991 ರಲ್ಲಿ ನಾನು ಕರ್ನಾಟಕದಿಂದ ಮೊದಲ ಬಾರಿಗೆ ಲೋಕಸಭೆಗೆ ಹೋದಾಗಿ ನೋಡಿದ್ದೆ. ಅವರು ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಮಂತ್ರಿ ಆಗಿದ್ರು. ಅದಕ್ಕೂ ಮುಂಚೆ ಹಲವಾರು ಹುದ್ದೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಪ್ರಯತ್ನ ಮಾಡಿದ್ದಾರೆ ಎಂದು ನೆನೆದರು. ಇದನ್ನೂ ಓದಿ: ಅಮೆರಿಕದಲ್ಲಿ ಅವಮಾನ – ಸಿಂಗ್‌ ಬೆಂಬಲಿಸಿ ಪಾಕ್‌ ಪ್ರಧಾನಿ ಷರೀಫ್‌ ವಿರುದ್ಧ ಗುಡುಗಿದ್ದ ಮೋದಿ

    ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದರು. ವಿಶ್ವಸಂಸ್ಥೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡಿದ್ರು. ಅವರ ತಂದೆ ಪಾಕಿಸ್ತಾನದಿಂದ ಬಂದವರು. ಸಿಂಗ್ ಅವರು ಆರ್ಥಿಕವಾಗಿ ತುಂಬಾ ಬುದ್ದಿವಂತರು. ಅವರಿಗೆ ಬಹಳ ಅನುಭವ ಆರ್ಥಿಕ ವಿಚಾರದಲ್ಲಿ ಇತ್ತು. ನರಸಿಂಹ ರಾವ್ ಪ್ರಧಾನಿ ಆದಾಗ ದೇಶದ ಸ್ಥಿತಿ ತುಂಬಾ ಹದಗೆಟ್ಟಿತ್ತು. ಆಗ ನಮ್ಮ ದೇಶದ 130 ಟನ್ ಚಿನ್ನವನ್ನ ಅಡ ಇಡುತ್ತಾರೆ. ಅಂತಹ ಭೀಕರ ಪರಿಸ್ಥಿತಿ ಅವತ್ತು ಇತ್ತು. ಅಂತಹ ಸನ್ನಿವೇಶದಲ್ಲಿ ಹಣಕಾಸು ಮಂತ್ರಿಯಾಗಿ ಕೆಲಸ ಮಾಡಿದ್ರು. ಈ ದೇಶವನ್ನ, ದೇಶದ ಗೌರವ ಉಳಿಸಲು ಆರ್ಥಿಕ ತಜ್ಞರಾಗಿ ತಮ್ಮ ಪ್ರಯತ್ನ ಪ್ರಾರಂಭ ಮಾಡಿದ್ರು ಎಂದು ನೆನಪಿಸಿಕೊಂಡರು.

    ನಾನು ತುಂಬಾ ಕ್ರಿಟಿಸೈಸ್ ಮಾಡಿದ್ದೇನೆ. ಉದಾರೀಕರಣ, ಖಾಸಗೀಕರಣ, ಎಫ್‌ಡಿಐ ನೀತಿ ಮಾರ್ಪಾಡು ಹೀಗೆ ಅನೇಕ ಸುಧಾರಣೆಗಳನ್ನ ಅವರು ತಂದರು. ನಾನು ಆಗ ನಡೆದ ಬೇರೆ ಬೇರೆ ಘಟನೆ ಹೇಳೊಲ್ಲ. ಇವತ್ತು ಅವೆಲ್ಲ ಹೇಳಬಾರದು. ಅವರು ನಮ್ಮನ್ನ ಅಗಲಿ ಹೋಗಿದ್ದಾರೆ. ಹೀಗಾಗಿ ಅವರ ಕಾಲದಲ್ಲಿ ಅವರು ನಮ್ಮ ಸ್ಥಿತಿ ಹೇಗಿತ್ತು. ಅದನ್ನ ಸರಿ ಮಾಡೋಕೆ ಸರ್ವ ಪ್ರಯತ್ನ ಸಿಂಗ್ ಮಾಡಿದ್ರು. ಪ್ರತಿಯೊಬ್ಬರು ಹೇಳೋದು ಈ ದೇಶ ಸಂಕಷ್ಟದಲ್ಲಿ ಇದ್ದಾಗ ಹಲವಾರು ಕ್ರಮ ತೆಗೆದುಕೊಂಡರು ಅಂತ. ಅನೇಕ ಸುಧಾರಣೆ ಕ್ರಮ ತೆಗೆದುಕೊಂಡರು. ಅದಾದ ಮೇಲೆ ಅವರೇ ಪ್ರಧಾನಿ ಆದ್ರು. 10 ವರ್ಷ ಪ್ರಧಾನಿ ಆಗಿ ದೇಶ ಆಳಿದ್ರು. ನೆಹರೂ, ಇಂದಿರಾ ಗಾಂಧಿ ಬಿಟ್ಟರೆ ಅವರೇ 10 ವರ್ಷ ಪ್ರಧಾನಿ ಆಗಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿ ಎಂದು ಮಾತನಾಡಿದರು. ಇದನ್ನೂ ಓದಿ: ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ರಾಹುಲ್‌, ಸೋನಿಯಾ ಗಾಂಧಿ

    ಅವರೊಬ್ಬ ದೇಶದ ಪ್ರಧಾನಿ ಆಗಿದ್ದವರು. ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಪಕ್ಷದ ಪರವಾಗಿ, ವಯಕ್ತಿಕವಾಗಿ ಗೌರವ ಸಲ್ಲಿಸಿದ್ದಾರೆ. ಇವತ್ತು ನಮ್ಮ ಪಕ್ಷದ ಸಂಘಟನೆ ಸಭೆ ಇತ್ತು. ಇದೊಂದು ಶೋಕ ದಿನ. 7 ದಿನ ಶೋಕಾಚರಣೆ ಮಾಡಲಾಗ್ತಿದೆ. ಸಿಂಗ್ ಅವರ ಗೌರವಾರ್ಥವಾಗಿ ಯಾವುದೇ ಸರ್ಕಾರಿ ಕೆಲಸ ಮಾಡಬಾರದು. ಭಾರತದ ಬಾವುಟ ಅರ್ಧಕ್ಕೆ ಇಳಿಸಬೇಕು. 10 ವರ್ಷ ಪ್ರಧಾನಿ, 5 ವರ್ಷ ಹಣಕಾಸು ಮಂತ್ರಿಯಾಗಿ, ಆರ್‌ಬಿಐ ಗವರ್ನರ್ ಆಗಿ ದೇಶಕ್ಕೆ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಅವರು ನಮ್ಮನ್ನ ಅಗಲಿ ಹೋಗಿದ್ದಾರೆ. ಸಿಂಗ್ ಅವರ ಬಗ್ಗೆ ವೈಯಕ್ತಿಕವಾಗಿ ಗೌರವ ಇದೆ. ಅವರ ಆತ್ಮಕ್ಕೆ ಭಗವಂತ ಮೋಕ್ಷ ಕೊಡಲಿ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ದೇವರು ಕೊಡಲಿ. ಈ ದೇಶದ ಆರ್ಥಿಕತೆಗೆ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ. ಅವರೊಬ್ಬ ಉತ್ತಮ ಆರ್ಥಿಕ ತಜ್ಞ. ಅವರು ಮಾಡಿರೋ ಸೇವೆ ನಾವು ಸ್ಮರಣೆ ಮಾಡಿಕೊಳ್ಳಬೇಕು. ಅವರ ಆತ್ಮಕ್ಕೆ ಚಿರಶಾಂತಿ ದೇವರು ಕೊಡಲಿ ಎಂದು ಪ್ರಾರ್ಥಿಸಿದರು.

  • ಮಾಜಿ ಪಿಎಂ ದೇವೇಗೌಡರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ಡಾಲಿ

    ಮಾಜಿ ಪಿಎಂ ದೇವೇಗೌಡರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ಡಾಲಿ

    ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ (Daali Dhananjay) ಅವರು ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡರನ್ನು ಮದುವೆಯ (Wedding) ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ.

    ಭಾವಿ ಪತ್ನಿ ಧನ್ಯತಾ ಜೊತೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡ (H. D. Deve Gowda) ನಿವಾಸಕ್ಕೆ ಭೇಟಿ ನೀಡಿ, ಮದುವೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಚಿತ್ರರಂಗದ ವರ್ತನೆಗೆ ಆಕ್ಷೇಪ- ತೆಲುಗು ನಟರ ಕಿವಿ ಹಿಂಡಿದ ಸಿಎಂ ರೇವಂತ್ ರೆಡ್ಡಿ

    ಅಂದಹಾಗೆ, ಇತ್ತೀಚೆಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್‌ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಕೂಡ ಭಾವಿ ಪತ್ನಿಯ ಜೊತೆ ಭೇಟಿಯಾಗಿ ಮದುವೆಗೆ ಆಹ್ವಾನ ನೀಡಿದ್ದರು.

    ಇನ್ನೂ ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಮದುವೆಯಾಗುತ್ತಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಈ ಮದುವೆಯಲ್ಲಿ ಸ್ಯಾಂಡಲ್‌ವುಡ್ ಕಲಾವಿದರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

  • ಅಮಿತ್ ಶಾರ ಭಾಷಣ ತಿರುಚಿ ಅಪಪ್ರಚಾರ: ಕಾಂಗ್ರೆಸ್ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

    ಅಮಿತ್ ಶಾರ ಭಾಷಣ ತಿರುಚಿ ಅಪಪ್ರಚಾರ: ಕಾಂಗ್ರೆಸ್ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

    – ಬಿ.ಎಲ್.ಸಂತೋಷ್ ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ: ಹೊಗಳಿದ ಮಾಜಿ ಪ್ರಧಾನಿ
    – ಅಟಲ್ ಪುರಸ್ಕಾರ ಸ್ವೀಕರಿಸಿದ ದೇವೇಗೌಡರು

    ಬೆಂಗಳೂರು: ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು.

    ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಹಿನ್ನೆಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೆಚ್‌ಡಿಡಿ ಪಾಲ್ಗೊಂಡಿದ್ದರು. ಅಟಲ್ ಪುರಸ್ಕಾರ ಸ್ವೀಕರಿಸಿ ನಂತರ ಮಾತನಾಡಿದರು.

    ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ತಿದ್ದಾರೆ ಅಂದರೆ ದೇಶದ ಜನರು ತಲೆ ತಗ್ಗಿಸಬೇಕು ಹಾಗೆ ಮಾಡ್ತಾರೆ. ಅಧಿವೇಶನದಲ್ಲಿ ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಗೃಹ ಸಚಿವ ಅಮಿತ್ ಶಾ ಭಾಷಣ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದು ಗರಂ ಆದರು.

    ಅಟಲ್ ಜೀ ವಿರೋಧ ಪಕ್ಷದಲ್ಲಿ ಇದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳ್ತಿದ್ದೆ. ಅಟಲ್ ಜೀ ಭಾಷಣ ಕೇಳಿ, ನಾನು ವಿರೋಧ ಪಕ್ಷ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ. 186 ಪಕ್ಷದ ಶಕ್ತಿ ಪಡೆದ ನಾಯಕ ಅಟಲ್ ಜೀ. ನಾನು ವಿರೋಧ ಪಕ್ಷದಲ್ಲಿ ಇದ್ದಾಗ ಅವರು ತುಂಬಾ ಗೌರವದಿಂದ ಕಾಣ್ತಿದ್ರು. ನಿಮ್ಮ ಹಿಂದಿ ದೇಶದ ಸಮಸ್ಯೆ ಬಗೆ ಹರಿಸಲ್ಲ ಅಂತ ಅಟಲ್ ಜೀಗೆ ನಾನು ಹೇಳಿದ್ದೆ. ತಮಾಷೆಗೆ ಹೇಳಿದ್ದೆ ನಾನು ಎಂದು ನೆನಪಿಸಿಕೊಂಡರು.

    ಎಲ್ಲ ರಾಜ್ಯಗಳಲ್ಲಿ ಸುಶಾಸನ ದಿನಾಚರಣೆ ನಡೀತಾ ಇದೆ. ಅನಾರೋಗ್ಯ ಕಾರಣ ಕಾರ್ಯಕ್ರಮಕ್ಕೆ ಬರಲು ಆಗಲ್ಲ ಎಂದಿದ್ದೆ. ಆದ್ರೆ ತುಂಬ ಒತ್ತಾಯ ಮಾಡಿದ ಕಾರಣ ಬಂದೆ. ಅಟಲ್ ಅವರ ಹೆಸರಲ್ಲಿ ನಡೆಯುವ ಕಾರ್ಯಕ್ರಮ ತಪ್ಪಿಸಿಕೊಳ್ಳಬಾರದು ಎಂದು ಬಂದೆ. ಒಂದು ಗಂಟೆಗೂ ಹೆಚ್ಚುಕಾಲ ಸಂತೋಷ್ ಅವರು ಮಾತಾಡಿದ್ದಾರೆ. ಪ್ರಜಾಪ್ರಭುತ್ವ, ಅಂಬೇಡ್ಕರ್ ಹಾಗೂ ಕಾಂಗ್ರೆಸ್ ಬಗ್ಗೆ ಮಾತಾಡಿದ್ದಾರೆ. ಅನಾವಶ್ಯಕ ಬಿಜೆಪಿ ಬಗ್ಗೆ ಟೀಕೆ ಮಾಡ್ತಾರೆ, ಆ ಎಲ್ಲ ವಿಷಯದ ಬಗ್ಗೆ ಮಾತಾಡಿದ್ದಾರೆ. ವಾಜಪೇಯಿ ಅವರ ಕೊಡುಗೆ ಬಗ್ಗೆ ಎಳೆಎಳೆಯಾಗಿ ಹೇಳಿದ್ದಾರೆ. ನಾನು ಆಳುವ ಪಕ್ಷದಲ್ಲಿದ್ದೆ, ವಾಜಪೇಯಿ ವಿಪಕ್ಷ ನಾಯಕ ಎಂದು ಮೆಲುಕು ಹಾಕಿದರು.

    ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷ ನಾಯಕನಾಗಿ ನಾನು ಹೇಗೆ ನಡೆದುಕೊಳ್ಳಬೇಕು ಎಂದು ತಿಳಿದುಕೊಳ್ಳಲು ವಾಜಪೇಯಿ ಅವರ ಭಾಷಣ ಕೇಳ್ತಿದ್ದೆ. ವಾಜಪೇಯಿ ವಿಪಕ್ಷ ನಾಯಕನಾಗಿ ಹೇಗೆ ನಡೆದುಕೊಂಡ್ರು ಅನ್ನೋದನ್ನ ಎಲ್ಲರು ಓದಬೇಕು. ನಿಮ್ಮ ಹಿಂದಿ ಈ ದೇಶದ ಸಮಸ್ಯೆ ಬಗೆಹರಿಸಲ್ಲ ಎಂದು ನಾನು ಅವರಲ್ಲಿ ತಮಾಷೆ ಮಾಡ್ತಿದ್ದೆ, ಗ್ರೇಟ್ ಮ್ಯಾನ್. ಒಂದು ವೋಟ್‌ನಲ್ಲಿ 13 ತಿಂಗಳ ಸರ್ಕಾರ ಬಿತ್ತು. ಕಾಂಗ್ರೆಸ್‌ನವರು ಮಂತ್ರಿಯಾಗಿದ್ದವರನ್ನ ತಂದು ವೋಟ್ ಮಾಡಿಸಿದ್ದರು ಎಂದು ನೆನಪಿಸಿಕೊಂಡರು.

    ಬಿ.ಎಲ್.ಸಂತೋಷ್ ಯಾವುದೇ ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆ ಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದು ಹಾಡಿ ಹೊಗಳಿದರು. ಅಶ್ವತ್ಥನಾರಾಯಣ್ ನೀನು ಹಠಮಾರಿಯಪ್ಪ. ನಿನ್ ಮಾತಿಗೆ ಬೆಲೆ ಕೊಟ್ಟು ಬಂದಿದ್ದೀನಿ. ಆರೋಗ್ಯ ಸರಿ ಇಲ್ಲ ಆದರೂ ಬಂದಿದ್ದೀನಿ ಎಂದರು. ಇದೇ ವೇಳೆ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ವಿಶ್ರಾಂತ ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಅವರಿಗೆ ಅಟಲ್ ಪುರಸ್ಕಾರ ಪ್ರದಾನ ಮಾಡಲಾಯಿತು.