ಬೆಂಗಳೂರು: ದೇವರ ಅನುಗ್ರಹದಿಂದ ಸರ್ಕಾರ ನಡೆಯುತ್ತಿದೆ ಎಂದು ಹೇಳಿಕೊಂಡು ಬಂದಿರುವ ಸಚಿವ ಹೆಚ್.ಡಿ.ರೇವಣ್ಣ ಭಾನುವಾರ ಶಾಸಕಾಂಗ ಸಭೆಗೆ ಬರಿಗಾಲಿನಲ್ಲಿ ಆಗಮಿಸಿದ್ದಾರೆ.
ಇಂದು ಜೆಪಿ ಭವನದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯುತ್ತಿದೆ. ಜೆಡಿಎಸ್‍ನ ಎಲ್ಲ ಶಾಸಕರು, ವಕ್ತಾರರು ಜೆಪಿ ಭವನಕ್ಕೆ ಆಗಮಿಸಿದ್ದು, ಸಿಎಂ ಬರುವಿಕೆಗಾಗಿ ಕಾಯುತ್ತಿದ್ದಾರೆ. ವಿದೇಶ ಪ್ರವಾಸದಿಂದ ಆಗಮಿಸಿರುವ ಸಿಎಂ ನೇರವಾಗಿ ತಾಜ್ ವೆಸ್ಟ್ ಎಂಡ್ ಹೋಟೆಲ್‍ಗೆ ತೆರಳಿದ್ದು ಕೆಲವೇ ಕ್ಷಣಗಳಲ್ಲಿ ಜೆಪಿ ಭವನಕ್ಕೆ ಆಗಮಿಸಲಿದ್ದಾರೆ.
ಜೆಪಿ ಭವನಕ್ಕೆ ದೇವೇಗೌಡರು ಆಗಮಿಸುತ್ತಿದ್ದಂತೆ ಕೆಲ ಜೆಡಿಎಸ್ ಕಾರ್ಯಕರ್ತರು ರಾಜೀನಾಮೆ ನೀಡಿರುವ ಹೆಚ್.ವಿಶ್ವನಾಥ್, ನಾರಾಯಾಣ ಗೌಡ ಮತ್ತು ಗೋಪಾಲಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು. ದೇವೇಗೌಡರು ಎಲ್ಲ ಕಾರ್ಯಕರ್ತರಿಗೂ ಶಾಂತವಾಗಿರುವಂತೆ ಸೂಚಿಸಿ ಒಳನಡೆದರು.
ಹಾಸನ: ಒಂದು ವರ್ಷದಿಂದ ಸರ್ಕಾರ ಆಗ ಬೀಳುತ್ತೆ ಈಗ ಬೀಳುತ್ತೆ ಎಂದು ಎಲ್ಲಾ ಹೇಳಿದರು. ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡಿತ್ತೀವಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಜಿಲ್ಲೆಯಲ್ಲಿ ತಣ್ಣೀರುಹಳ್ಳದಲ್ಲಿರುವ ಚೆಸ್ಕಾಂ ಮುಖ್ಯ ಕಾರ್ಯಪಾಲನಾ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2006ರಲ್ಲಿ ನಮ್ಮ ಸರ್ಕಾರದಲ್ಲಿ ಗ್ಯಾಂಗ್ ಮ್ಯಾನ್ ಗಳನ್ನು ನೇಮಕ ಮಾಡಿದ್ದೇವು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದೆ ಶೋಭಕ್ಕ ಸೇರಿ ಇವರೆಲ್ಲರೂ ರೇವಣ್ಣನ ಕಡೆಯವರು ಎಂದು ಲೈನ್‍ಮೆನ್ ನೇಮಕಾತಿಯನ್ನು ವಜಾ ಮಾಡಿದರು ಎಂದು ಆರೋಪಿಸಿದರು.
2006ರಲ್ಲಿ ನಮ್ಮ ಸರ್ಕಾರದಲ್ಲಿ 450 ಚೆಸ್ಕಾಂ ಸಬ್ ಸ್ಟೇಷನ್ ಮಾಡಿದ್ದೆ. ಈಗ ಎಲ್ಲಾ ಆನ್ ಲೈನ್ ಗೀನ್ ಲೈನ್ ಅಂತಾರೆ ಆಗ ಯಾವುದೂ ಇರಲಿಲ್ಲ. ಈ ವಿಚಾರವಾಗಿ ಹಿಂದಿನ ಸರ್ಕಾರ ಏನು ಮಾಡಿದೆ ಎಂದು ಹೇಳಲಿ ನೋಡೋಣ. ಈ ಹಿಂದೆ ಕೆಇಬಿಗೆ 200 ಕೋಟಿ ಅನುದಾನ ಕೊಡಿಸಿದ್ದಕ್ಕೆ ನನಗೆ 10 ಕೋಟಿ ಲಂಚ ಕೊಡೋಕೆ ಬಂದಿದ್ದರು. ನಾನು ಲಂಚ ತೆಗೆದುಕೊಳ್ಳಲಿಲ್ಲಾ ಆದರ ಬದಲಾಗಿ ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಬ್ಲಾಕ್ ಮಾಡಿ ಎಂದು ಮಾಡಿಸಿದ್ದೀನಿ ಎಂದು ತಿಳಿಸಿದರು.
ಕಳೆದ 2006ರಲ್ಲಿ ನಾವು ಚನ್ನರಾಯಪಟ್ಟಣ, ಹೊಳೆನರಸೀಪುರಕ್ಕೆ 35 ಸಾವಿರ ಟ್ರಾನ್ಸ್ ಫಾರ್ಮರ್ ಗಳನ್ನು ತರಿಸಿದ್ದೇವು. ಸರ್ಕಾರ ಬಿದ್ದ ತಕ್ಷಣ ಎಲ್ಲಾ ಟ್ರಾನ್ಸ್ ಫಾರ್ಮರ್ ಗಳನ್ನು ತುಂಬಿಕೊಂಡು ಹೋಗಿದ್ದರು. ಈಗ ರೈತರು ಯಾರೆಲ್ಲ ಟ್ರಾನ್ಸ್ ಫಾರ್ಮರ್ ಕೇಳಿದರೆ ಎಲ್ಲರಿಗೂ ಕೊಡಿ ಎಂದು ಹೇಳಿದರು.
ತುಮಕೂರಿಗೆ 25 ಟಿಎಂಸಿ ನೀರು ಮೊದಲು ನೀಡಿದ್ದು ನಾವು ಈಗ ಹೊಸ ಎಂಪಿ ಬಂದಿದ್ದಾರೆ ಹೇಗೆ ನೀರು ಕೊಡಿಸುತ್ತಾರೆ ನೋಡೋಣ. ಇಡೀ ರಾಜ್ಯದಲ್ಲಿ ನನ್ನ ಮೇಲೆ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಪತ್ರ ಬರೆದ ಏಕೈಕ ಪ್ರತಿನಿಧಿ ನಾನು, ಯಡಿಯೂರಪ್ಪ ಸರ್ಕಾರದಲ್ಲಿ ನನ್ನ ಮೇಲೆ ತನಿಖೆ ಮಾಡಿದರು. ನನ್ನ ಜೊತೆ ಕೆಲ ಒಳ್ಳೆಯ ಅಧಿಕಾರಿಗಳ ಮೇಲೆ ತನಿಖೆ ಮಾಡಿಸಿದರಿ ಎಂದು ಕಿಡಿಕಾರಿದರು.
ಖಾಸಗಿಯವರ ಪೈಪೋಟಿ ಮೇಲೆ ನಾವು ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುತ್ತಿದ್ದೇವೆ. ಈ ಬಾರಿ 1000 ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭ ಮಾಡಿದ್ದೇವೆ. ಕಳೆದ ಐದು ವರ್ಷದಲ್ಲಿ ಕೇಂದ್ರ ಸರ್ಕಾರ ಜನರಿಗೆ ಏನು ಮಾಡಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕಲಬುರಗಿ: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷರಾಗಲು ಸಚಿವ ಹೆಚ್.ಡಿ ರೇವಣ್ಣ ಇದೀಗ ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಸಚಿವರ ಕನಸಿಗೆ ಬ್ರೇಕ್ ನೀಡಲು ರಣತಂತ್ರ ರೂಪಿಸುತ್ತಿದೆ ಎಂಬ ಮಾಹಿತಿ ಮೈತ್ರಿ ಅಂಗಳದಲ್ಲಿ ಹರಿದಾಡುತ್ತಿದೆ.
ಅಧ್ಯಕ್ಷ ಸ್ಥಾನ ಮತ್ತೆ ಪಡೆಯಲು ರಾಜ್ಯದ ಒಟ್ಟು 13 ಹಾಲು ಒಕ್ಕೂಟ ಮಂಡಳಿಗಳಿಂದ ತಮಗೇ ಬೆಂಬಲಿಸುವರನ್ನೇ ರಾಜ್ಯ ಮಟ್ಟದ ನಿರ್ದೇಶಕರನ್ನಾಗಿ ನೇಮಕ ಮಾಡಿ ಕಳುಹಿಸುವಂತೆ ಹೆಚ್.ಡಿ.ರೇವಣ್ಣ ಮಾಸ್ಟರ್ ಪ್ಲಾನ್ ಮಾಡಿದ್ದಾರಂತೆ. ಈ ಮೂಲಕ ಅಧ್ಯಕ್ಷ ಪಟ್ಟಕ್ಕಾಗಿ ರೇವಣ್ಣ ಲಾಬಿ ಜೋರಾಗಿ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಇದರ ಮೊದಲ ಹೆಜ್ಜೆ ಎಂಬಂತೆ ಕಲಬುರಗಿ ಹಾಲು ಒಕ್ಕೂಟದಿಂದ ಸಚಿವ ಬಂಡೆಪ್ಪ ಖಾಶಂಪುರ ಸಹೋದರ ಮಾರುತಿ ಖಾಶಂಪುರ ಅವರನ್ನು ರಾಜ್ಯ ಮಟ್ಟದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇನ್ನು ಮೈತ್ರಿ ಧರ್ಮದಂತೆ ಕೆಎಂಎಫ್ ಅಧ್ಯಕ್ಷ ಪಟ್ಟ ಕಾಂಗ್ರೆಸ್‍ಗೇ ಸಿಗಬೇಕು. ಈ ಕಾರಣಕ್ಕೆ ಕಾಂಗ್ರೆಸ್‍ಗೆ ಅಧ್ಯಕ್ಷ ಸ್ಥಾನ ಕೊಡಿಸಲು ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಅಖಾಡಕ್ಕೆ ಇಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಳ್ಳಾರಿ ಹಾಲು ಒಕ್ಕೂಟದಿಂದ ಶಾಸಕ ಭೀಮಾನಾಯ್ಕ್ ರನ್ನು ರಾಜ್ಯಮಟ್ಟಕ್ಕೆ ನಿರ್ದೇಶಕರಾಗಿ ನೇಮಕ ಮಾಡಿಸಿ ಕಳುಹಿಸಿದ್ದು, ಯಾವುದೇ ಕಾರಣಕ್ಕೂ ಅಧ್ಯಕ್ಷ ಪಟ್ಟ ರೇವಣ್ಣರಿಗೆ ಸಿಗದಂತೆ ಕೈ ನಾಯಕರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯದ ಎಲ್ಲ ಒಕ್ಕೂಟದ ನಿರ್ದೇಶಕರಿಗೆ ಕೈ ಪಕ್ಷದ ಬೆಂಬಲಿತ ನಿರ್ದೇಶಕರನ್ನೆ ರಾಜ್ಯ ಮಟ್ಟದ ನಿರ್ದೇಶಕ ಹುದ್ದೆಗೆ ಆಯ್ಕೆ ಮಾಡಿ ಕಳುಹಿಸುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಮೂಲಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೂಡಿದ್ದ ಬಿರುಕು, ಈಗ ಕೆಎಂಎಫ್ ಅಧ್ಯಕ್ಷ ಪಟ್ಟ ವಿಷಯದಲ್ಲಿ ಮೈತ್ರಿ ಸರ್ಕಾರಕ್ಕೆ ಬಿಸಿ ತುಪ್ಪವಾಗುವ ಸಾಧ್ಯತೆಗಳಿವೆ.
ಬೆಂಗಳೂರು: ಸಿಎಂ ಹುದ್ದೆ ವಿಚಾರದಲ್ಲಿ ಖರ್ಗೆ ಪರ ಬ್ಯಾಟ್ ಬೀಸಿದ್ದ ಎಚ್‍ಡಿಕೆಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದರು. ಕೇವಲ ಕಾಂಗ್ರೆಸ್‍ನಲ್ಲಿ ಮಾತ್ರವಲ್ಲ ಜೆಡಿಎಸ್ ನಲ್ಲಿಯೂ ಸಿಎಂ ಅರ್ಹ ವ್ಯಕ್ತಿಗಳಿದ್ದಾರೆ. ಸಚಿವ ಹೆಚ್.ಡಿ.ರೇವಣ್ಣ ಸಹ ಸಿಎಂ ಅರ್ಹತೆಯ ವ್ಯಕ್ತಿ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದರು. ಮಾಧ್ಯಮಗಳ ಮೇಲೆ ಮುನಿಸಿಕೊಂಡು ದೂರವಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯರಿಗೆ ಉತ್ತರ ನೀಡಿದ್ದಾರೆ.
ಹೆಚ್‍ಡಿಕೆ ಟ್ವೀಟ್: ನಾಡಿನ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಬೇಕಿತ್ತು ಎಂಬ ನನ್ನ ಹೇಳಿಕೆ ಕರ್ನಾಟಕದ ಹಲವು ದಶಕಗಳ ರಾಜಕೀಯ ವಾಸ್ತವತೆಯನ್ನು ಆಧರಿಸಿದ ಮನದಾಳದ ಮಾತು. ಈ ಹೇಳಿಕೆಗೆ ರಾಜಕೀಯದ ಬಣ್ಣಕಟ್ಟಿ ಅಪಾರ್ಥ ಕಲ್ಪಿಸುವಂತೆ ವಿಶ್ಲೇಷಿಸುವುದು ಆರೋಗ್ಯಕರವಲ್ಲ. ಈ ಹೇಳಿಕೆಯ ಮೂಲಕ ರಾಜಕೀಯ ಲಾಭ ಪಡೆಯುವ ಕೀಳು ಅಭಿರುಚಿ ನನ್ನದಲ್ಲ. ಖರ್ಗೆಯವರದು ಪಕ್ಷ, ಜಾತಿ ಎಲ್ಲವನ್ನೂ ಮೀರಿದ ಮಹೋನ್ನತ ವ್ಯಕ್ತಿತ್ವ ಎನ್ನುವುದನ್ನು ನಾವು ಮರೆಯಬಾರದು.
ನಾಡಿನ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಬೇಕಿತ್ತು ಎಂಬ ನನ್ನ ಹೇಳಿಕೆ ಕರ್ನಾಟಕದ ಹಲವು ದಶಕಗಳ ರಾಜಕೀಯ ವಾಸ್ತವತೆಯನ್ನು ಆಧರಿಸಿದ ಮನದಾಳದ ಮಾತು. ಈ ಹೇಳಿಕೆಗೆ ರಾಜಕೀಯದ ಬಣ್ಣಕಟ್ಟಿ ಅಪಾರ್ಥ ಕಲ್ಪಿಸುವಂತೆ ವಿಶ್ಲೇಷಿಸುವುದು ಆರೋಗ್ಯಕರವಲ್ಲ.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 16, 2019
ಸಿದ್ದರಾಮಯ್ಯ ಟ್ವೀಟ್: ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎಂದು ಬರೆದುಕೊಂಡಿದ್ದಾರೆ.
ಈ ಹೇಳಿಕೆಯ ಮೂಲಕ ರಾಜಕೀಯ ಲಾಭ ಪಡೆಯುವ ಕೀಳು ಅಭಿರುಚಿ ನನ್ನದಲ್ಲ. ಖರ್ಗೆಯವರದು ಪಕ್ಷ , ಜಾತಿ ಎಲ್ಲವನ್ನೂ ಮೀರಿದ ಮಹೋನ್ನತ ವ್ಯಕ್ತಿತ್ವ ಎನ್ನುವುದನ್ನು ನಾವು ಮರೆಯಬಾರದು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 16, 2019
ಹಾಸನದ ಹೊಳೆನರಸೀಪುರದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಡಿ.ರೇವಣ್ಣ, ಸಿದ್ದರಾಮಯ್ಯರಿಗೆ ನನ್ನ ಮೇಲೆ ಅಭಿಮಾನವಿದೆ ಮತ್ತು ಒಲವಿದೆ. ಆದ್ರೆ ಸಿಎಂ ಸ್ಥಾನ ಸದ್ಯ ಖಾಲಿ ಇಲ್ಲ. ನಮ್ಮ ಪಕ್ಷದ ವರಿಷ್ಠರಾದ ದೇವೇಗೌಡರು ಹೇಳಿದಂತೆ ನಾವು ಕೇಳುತ್ತೇವೆ. ಹಾಗಾಗಿ ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆ ಉದ್ಭವಿಸಲ್ಲ. ನನ್ನ ಮತ್ತು ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ನನ್ನ ಮೇಲಿನ ಅಭಿಮಾನದಿಂದ ಸಿದ್ದರಾಮಯ್ಯ ಈ ರೀತಿ ಹೇಳಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು.
-ಹೆಚ್‍ಡಿಕೆ ವಿರುದ್ಧ ಸಿದ್ದು ಟ್ವೀಟಾಸ್ತ್ರ!
-ಹೆಚ್‍ಡಿಕೆ ವಿರುದ್ಧ ರೇವಣ್ಣರನ್ನ ಎತ್ತಿಕಟ್ಟಿದ್ರಾ ಮಾಜಿ ಸಿಎಂ!
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಈ ಹಿಂದೆ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ.
ಟ್ವೀಟ್: ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎಂದು ಬರೆದುಕೊಂಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು.
ಈ ಹಿಂದೆ ಸಿಎಂ ಕುಮಾರಸ್ವಾಮಿ ಉಪ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಮಾತಿನ ಚಾಟಿ ಬೀಸಿದ್ದರು. ಈ ಹೇಳಿಕೆಯ ಮೂಲಕ ಸಿದ್ದರಾಮಯ್ಯ ಮತ್ತೆ ಸಿಎಂ ಕೂಗಿಗೆ ಟಾಂಗ್ ನೀಡಿದ್ದರು. ಇದೀಗ ಸಿಎಂ ಮಾತಿನೇಟಿಗೆ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್‍ನಲ್ಲಿ ಹೇಗೆ ಸಿಎಂ ಸ್ಥಾನಕ್ಕಾಗಿ ಹಲವು ಆಕಾಂಕ್ಷಿಗಳಿದ್ದಾರೋ ಹಾಗೆಯೇ ಜೆಡಿಎಸ್ ನಲ್ಲಿಯೂ ಸಿಎಂ ಸ್ಥಾನಕ್ಕೆ ಹೆಚ್.ಡಿ.ರೇವಣ್ಣ ಅರ್ಹರಿದ್ದಾರೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಒಬ್ಬರೇ ಸಿಎಂ ಸ್ಥಾನಕ್ಕೆ ಸೂಕ್ತ ನಾಯಕ ಅಲ್ಲ ಎಂಬ ಸಂದೇಶವನ್ನು ಟ್ವೀಟ್ ಮೂಲಕ ಹೇಳಿದಂತೆ ಆಗಿದೆ ಎಂಬ ಚರ್ಚೆಗಳು ದೋಸ್ತಿ ಅಂಗಳದಲ್ಲಿ ಆರಂಭಗೊಂಡಿವೆ.
ಹಾಸನ: ಎಲೆಕ್ಷನ್ ಶುರುವಾದಾಗಿನಿಂದ ಗೌಡರ ಫ್ಯಾಮಿಲಿಗೆ ಟೆನ್ಶನ್ ಕಡಿಮೆಯಾದಂತೆ ಕಾಣಿಸ್ತಿಲ್ಲ. ಇಷ್ಟು ದಿನ ಮಂಡ್ಯ ಟೆನ್ಶನ್‍ನಲ್ಲಿ ಸಿಎಂ ಕುಮಾರಸ್ವಾಮಿ ದೇವಸ್ಥಾನವೆಲ್ಲಾ ಸುತ್ತಿದ್ದಾರೆ. ಇದೀಗ ಸಚಿವ ಹೆಚ್.ಡಿ.ರೇವಣ್ಣ ಸಹ ಫುಲ್ ಟೆನ್ಶನ್ ಆಗಿದ್ದಾರೆ.
ಮಂಡ್ಯ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಂಡು ರಾಜ್ಯದಲ್ಲಿರೋ ದೇವಸ್ಥಾನಗಳಲ್ಲದೆ ಹೊರ ರಾಜ್ಯದ ದೇವಸ್ಥಾನವನ್ನು ಸುತ್ತಿದ್ದ ದೇವೇಗೌಡರ ಕುಟುಂಬಕ್ಕೆ ಈಗ ಹಾಸನದ ಟೆನ್ಶನ್ ಆರಂಭವಾಗಿದೆ. ಸುಳ್ಳು ಅಫಿಡವಿಟ್ ಸಲ್ಲಿಕೆ ಮಾಡಿದ ಆರೋಪದ ಮೇರೆಗೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಆರ್.ಪಿ ಆಕ್ಟ್ 125ಎ ಪ್ರಕಾರ ಕ್ರಮಕೈಗೊಳ್ಳುವಂತೆ ಮುಖ್ಯ ಚುನಾವಣಾ ಅಧಿಕಾರಿ ಇದೀಗ ಹಾಸನದ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಪ್ರಜ್ವಲ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿರೋ ದೂರುದಾರ ದೇವರಾಜೇಗೌಡ, ಪ್ರಜ್ವಲ್ ವಿರುದ್ಧ ಕ್ರಮಕೈಗೊಳ್ಳುವವರೆಗು ಮತ ಎಣಿಕೆಯನ್ನೇ ಮಾಡದಂತೆ ಮನವಿ ಮಾಡಿಕೊಳ್ಳಲಿದ್ದಾರೆ. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅಫಿಡವಿಟ್ ಏನೆಲ್ಲ ತಪ್ಪಾಗಿದೆ ಎಂಬುವುದು ಈ ಕೆಳಗಿನಂತಿದೆ
1. ಪ್ರಜ್ವಲ್ ರೇವಣ್ಣ ನಿಯಮದ ಪ್ರಕಾರ ಕನಿಷ್ಠ 5 ವರ್ಷ ಐಟಿ ರಿರ್ಟನ್ ಫೈಲ್ ಮಾಡಿಲ್ಲ. 2. ಚೆನ್ನಾಂಬಿಕ ಕನ್ವೆಂಷನ್ ಹಾಲ್‍ಗೆ ಸಾಲ ಪಡೆದುದ್ದಾಗಿ ಹೇಳಿದ್ದು. ಆದರೆ ಐಟಿ ಫೈಲ್ ಮಾಡದೇ ಸಾಲ ಸಿಕ್ಕಿದ್ದು ಹೇಗೆ? 3. ಚೆನ್ನಾಂಬಿಕ ಕನ್ವೆಂಷನ್ ಹಾಲ್‍ನ ಇಂದಿನ ಮಾರುಕಟ್ಟೆ ಬೆಲೆ ಘೋಷಣೆ ಮಾಡಿಲ್ಲ. 4. ಸಿಎನ್‍ಡಿ ಎಂಟರ್ ಪ್ರೈಸಸ್ ಪ್ರೈವೇಟ್ ಲಿಮಿಟೆಟ್‍ನಲ್ಲಿ ಹೂಡಿಕೆ ತೋರಿಸಿದ್ದು, ಲಾಭ-ಬಡ್ಡಿ ಲೆಕ್ಕ ತೋರಿಸಿಲ್ಲ.
5. ತಂದೆಯಿಂದ ಬಂದ ಆಸ್ತಿಯ ಮಾರುಕಟ್ಟೆ ಮೌಲ್ಯ ಪಡೆಯಬೇಕು. 6. ಪ್ರಜ್ವಲ್ ಅನೇಕರಿಗೆ ಸಾಲ ನೀಡಿದ್ದು, ಅದರ ಬಗ್ಗೆ ಘೋಷಣೆ ಮಾಡಿಲ್ಲ. 7. ಪ್ರಜ್ವಲ್‍ಗೆ ದೇವೇಗೌಡರು 23 ಲಕ್ಷ ಸಾಲ ನೀಡಿದ್ದಾಗಿ ತಮ್ಮ ನಾಮಿನೇಷನ್‍ನಲ್ಲಿ ಹೇಳಿದ್ದಾರೆ. ಆ ಬಗ್ಗೆ ಪ್ರಜ್ವಲ್ ಉಮೇದುವಾರಿಕೆಯಲ್ಲಿ ಉಲ್ಲೇಖಿಸಿಲ್ಲ.
ಒಟ್ಟಿನಲ್ಲಿ ಸದಾ ಒಂದಲ್ಲ ಒಂದು ಟೆನ್ಶನ್‍ನಲ್ಲಿರೋ ಸಿಎಂ ಜೊತೆಗೆ ಇದೀಗ ರೇವಣ್ಣಗೆ ಹಾಸನದ ಟೆನ್ಶನ್ ಶುರುವಾಗಿದೆ. ಒಂದು ವೇಳೆ ಕ್ರಮ ಕೈಗೊಂಡ್ರೆ ಫಲಿತಾಂಶ ಘೋಷಣೆ ಮಾಡುವುದು ಅನುಮಾನ ಎಂದು ಹೇಳಲಾಗುತ್ತದೆ. ಒಂದು ವೇಳೆ ಆರೋಪ ಸಾಬೀತಾದ್ರೆ 125ಎ ಆರ್‍ಪಿ ಆಕ್ಟ್ ಪ್ರಕಾರ 6 ತಿಂಗಳು ಶಿಕ್ಷೆ ಮತ್ತು ದಂಡ ಕೂಡ ವಿಧಿಸಬಹುದು.
ಬೆಂಗಳೂರು: ಬುಧವಾರ ಸಚಿವ ಹೆಚ್.ಡಿ.ರೇವಣ್ಣ ಹಾಸನದಲ್ಲಿ ಗೋಲಿಬಾರ್ ಆದ್ರೆ ನಾನು ಕಾರಣನಲ್ಲ ಎಂಬ ಹೇಳಿಕೆಗೆ ಇಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಹಾಸನದ ಡಿಸಿ ಮತ್ತು ಸಚಿವರಿಗೂ ಡಿಶುಂ ಡಿಶುಂ ಎಂದು ಬಿತ್ತರವಾಗುತ್ತಿದೆ. ಯಾರ ಜೊತೆಗೂ ವೈಯಕ್ತಿಕವಾಗಿ ಡಿಶು ಡಿಶುಂ ಮಾಡುವ ಅವಶ್ಯಕತೆ ನನಗಿಲ್ಲ ಎಂದು ಸಚಿವ ರೇವಣ್ಣ ಹೇಳಿದ್ದಾರೆ.
ಬರ ನಿರ್ವಹಣೆಗಾಗಿ 10 ಕೋಟಿ ಮತ್ತು ಕುಡಿಯುವ ನೀರಿಗಾಗಿ 5 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯ್ತಿ ಸಿಇಓರನ್ನು ಕೇಳಿದ್ರೆ ಹಣ ಜಿಲ್ಲಾಧಿಕಾರಿಗಳ ಬಳಿಯಲ್ಲಿದೆ ಎಂದ್ರು. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿರಲಿಲ್ಲ. ಈಗ ಆಯೋಗ ನೀತಿ ಸಂಹಿತೆ ಸಡಿಲಿಸಿದೆ ಹಣ ಖರ್ಚು ಮಾಡಬಹುದು ಎಂದರು.
ಹಾಸನ ಡಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಬರ ನಿಭಾಯಿಸಲು ಈವರೆಗೆ ಒಂದೇ ಒಂದು ಪೈಸೆ ಹಣ ಬಿಡುಗಡೆ ಮಾಡಿಲ್ಲ. ಒಂದೇ ವೇಳೆ ಗೋಲಿಬಾರ್ ಆದ್ರೆ ಅದಕ್ಕೆ ಡಿಸಿ ನೇರ ಹೊಣೆಯಾಗುತ್ತಾರೆ ಎಂದು ರೇವಣ್ಣ ಹೇಳಿದ್ದರು. ಸಚಿವರ ಹೇಳಿಕೆಗೆ ತಿರುಗೇಟು ನೀಡಿದ್ದ ಡಿಸಿ ಪ್ರಿಯಾಂಕಾ, ತಹಶೀಲ್ದಾರರಿಗೆ ಬರ ನಿರ್ವಹಣೆಯ ಹಣ ಸರಿಯಾಗಿ ಬಿಡುಗಡೆಯಾಗುತ್ತಿದೆ. ಬಿತ್ತನೆ ಆಲೂಗೆಡ್ಡೆಗೆ ಸಬ್ಸಿಡಿ ಕುರಿತು ಶೀಘ್ರವಾಗಿ ನಿರ್ದೇಶನದಂತೆ ನೀಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದರು.
ಹಾಸನ: ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿದ್ದ 1.20 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.
ಹಾಸನ ಜಿಲ್ಲೆ ಹೊಳೆನರಸೀಪುರದ ಚನ್ನಾಂಬಿಕಾ ಚಿತ್ರಮಂದಿರ ಮುಂಭಾಗ ಹಣವನ್ನು ಜಪ್ತಿ ಮಾಡಲಾಗಿದೆ. ಚನ್ನಾಂಬಿಕಾ ಚಿತ್ರಮಂದಿರ ಸಚಿವ ಹೆಚ್.ಡಿ ರೇವಣ್ಣ ಮನೆಯ ಪಕ್ಕದಲ್ಲಿದ್ದು, ಚುನಾವಣಾಧಿಕಾರಿಗಳ ತಪಾಸಣೆ ನಡೆಸುವ ವೇಳೆ ಆ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ವಾಹನದಲ್ಲಿ ಬೆಂಗಾವಲು ಪಡೆ ಚಾಲಕ ಚಂದ್ರಯ್ಯ, ಪೊಲೀಸ್ ಸಿಬ್ಬಂದಿ ಮತ್ತು ರವಿ ಇದ್ದರು. ಮಂಗಳವಾರ ತಡರಾತ್ರಿ 12.45ರ ಸಮಯದಲ್ಲಿ ತಪಾಸಣೆ ನಡೆಸಿ ಹಣವನ್ನು ಜಪ್ತಿ ಮಾಡಲಾಗಿದೆ.
ಸದ್ಯ ಬೆಂಗಾವಲುಪಡೆ ವಾಹನದಲ್ಲಿದ್ದ ಚಂದ್ರಯ್ಯ ಮತ್ತು ರವಿ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಚುನಾವಣಾಧಿಕಾರಿ ವಿಕಾಸ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಹರದನಹಳ್ಳಿ ದೇವೇಗೌಡರ ಅಡ್ಡಾದಲ್ಲಿ ಈಗ ಕದನ ಕುತೂಹಲ. ದೇಶಕ್ಕೆ ಪ್ರಧಾನಿಮಂತ್ರಿಯನ್ನ ಕಾಣಿಕೆಯಾಗಿ ಕೊಟ್ಟ ಜಿಲ್ಲೆಯಲ್ಲೀಗ ರಾಜಕೀಯ ಕಾಳಗ ಪಲ್ಲಟವಾಗಿದೆ. ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆಗಳನ್ನ ಹೊಂದಿರುವ ಹಾಸನದಲ್ಲಿ ಹೇಮಾವತಿ ಜೀವ ನದಿ. ಈ ಹೇಮಾವತಿಯ ಒಡಲಲ್ಲಿ ಸಾಕಷ್ಟು ನೀರು ಹರಿದು ಹೋಗಿದೆ. ಗೌಡರ ರಾಜಕೀಯ ಗಾಲಿಯೂ ಉರುಳಿ ಹೋಗಿದೆ.
5 ಬಾರಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದ ಗೌಡರು 6ನೇ ಬಾರಿ ಹಾಸನದಿಂದ ಸ್ಪರ್ಧಿಸದೇ ತುಮಕೂರಿಗೆ ಹೋಗಿದ್ದಾರೆ. ಮೊಮ್ಮಗ ಪ್ರಜ್ವಲ್ ರಾಜಕೀಯ ಭವಿಷ್ಯಕ್ಕಾಗಿ ತಮ್ಮ ರಾಜಕೀಯ ಭವಿಷ್ಯದ ಕಡೇ ಆಟವನ್ನೇ ಸವಾಲಿಗಿಟ್ಟಿದ್ದಾರೆ ದೊಡ್ಡ ಗೌಡರು. ಕಳೆದ ಬಾರಿ ದೇವೇಗೌಡರ ವಿರುದ್ಧವೇ ತೊಡೆತಟ್ಟಿದ್ದ ಎ.ಮಂಜು ಈ ಬಾರಿ ಮೊಮ್ಮಗನ ವಿರುದ್ಧವೂ ತೊಡೆ ತಟ್ಟಿದ್ದಾರೆ. ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಬಿಜೆಪಿಯಿಂದ ಅಖಾಡಕ್ಕಿಳಿರುವುದು ಕುತೂಹಲ ಮೂಡಿಸಿದೆ. ಜೆಡಿಎಸ್ ಭದ್ರಕೋಟೆಯಾಗಿದ್ದರೂ, ಎರಡು ಕಡೆ ಕಮಲ ಅರಳಿರುವುದರಿಂದ ಏನೂ ಬೇಕಾದರೂ ಆಗಬಹುದು. ಒಕ್ಕಲಿಗ ಮತಗಳೇ ನಿರ್ಣಾಯಕವಾಗಿದ್ದರೂ, ಅಹಿಂದ ಮತಗಳನ್ನು ಪಡೆದರೂ ಸಾಕು ಅಭ್ಯರ್ಥಿ ಸುಲಭವಾಗಿ ಗೆದ್ದು ಬಿಡಬಹುದು.
ಹಾಸನ ಕ್ಷೇತ್ರದ ಮತದಾರರು: 16,29,587 ಒಟ್ಟು ಮತದಾರರನ್ನು ಹಾಸನ ಲೋಕ ಅಖಾಡ ಹೊಂದಿದೆ. ಇದರಲ್ಲಿ 8,07,188 ಮಹಿಳಾ ಮತದಾರರು ಮತ್ತು 8,22,399 ಪುರುಷ ಮತದಾರರಿದ್ದಾರೆ. ಒಕ್ಕಲಿಗ ಸಮುದಾಯ 5 ಲಕ್ಷ, ಎಸ್‍ಸಿ+ಎಸ್‍ಟಿ ಸಮುದಾಯ 3 ಲಕ್ಷ, ಲಿಂಗಾಯಿತ ಸಮುದಾಯ 2.50 ಲಕ್ಷ, ಮುಸ್ಲಿಂ ಸಮುದಾಯ 2 ಲಕ್ಷ, ಕುರುಬ ಸಮುದಾಯ 1.50 ಲಕ್ಷ ಮತ್ತು ಇತರೆ ಸಮುದಾಯ 2 ಲಕ್ಷ ಮಂದಿ ಇದ್ದಾರೆ.
2014ರ ಫಲಿತಾಂಶ: 2014ರ ಲೋಕ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ದೇವೇಗೌಡರು 1,00,462(8.76%) ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎ.ಮಂಜು ವಿರುದ್ಧ ಗೆಲುವು ಕಂಡಿದ್ದರು. ದೇವೇಗೌಡರು 5,09,841 (44.47%), ಎ.ಮಂಜು 4,09,378 (35.67%) ಮತ್ತು ಬಿಜೆಪಿಯ ಸಿ.ಎಚ್.ವಿಜಯಶಂಕರ್ 1,65,688 (14.44%) ಮತಗಳನ್ನು ಪಡೆದುಕೊಂಡಿದ್ದರು.
ಜೆಡಿಎಸ್ ಪ್ರಾಬಲ್ಯ: ಹಾಸನ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, 6 ಕ್ಷೇತ್ರದಲ್ಲಿ ಜೆಡಿಎಸ್ ಮತ್ತು 2 ಕ್ಷೇತ್ರದಲ್ಲಿ ಬಿಜೆಪಿಯ ಶಾಸಕರಿದ್ದಾರೆ. ಹಾಸನ-ಪ್ರೀತಂಗೌಡ(ಬಿಜೆಪಿ), ಬೇಲೂರು – ಲಿಂಗೇಶ್(ಜೆಡಿಎಸ್), ಸಕಲೇಶಪುರ – ಹೆಚ್.ಕೆ.ಕುಮಾರಸ್ವಾಮಿ(ಜೆಡಿಎಸ್), ಅರಕಲಗೂಡು – ಎ.ಟಿ.ರಾಮಸ್ವಾಮಿ (ಜೆಡಿಎಸ್), ಹೊಳೇನರಸೀಪುರ – ಹೆಚ್.ಡಿ.ರೇವಣ್ಣ(ಜೆಡಿಎಸ್), ಶ್ರವಣಬೆಳಗೊಳ – ಸಿಎನ್ ಬಾಲಕೃಷ್ಣ (ಜೆಡಿಎಸ್), ಅರಸೀಕೆg- ಶಿವಲಿಂಗೇಗೌಡ (ಜೆಡಿಎಸ್) ಮತ್ತು ಕಡೂರು- ಬೆಳ್ಳಿ ಪ್ರಕಾಶ್ (ಬಿಜೆಪಿ) ಆಯ್ಕೆಯಾಗಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳು ಪ್ರಜ್ವಲ್ ರೇವಣ್ಣ : ದೇವೇಗೌಡರು ಮೊಮ್ಮಗನಿಗಾಗಿ ಕ್ಷೇತ್ರವನ್ನು ಬಿಟ್ಟುಕೊಟ್ಟ ಪರಿಣಾಮ ಪ್ರಜ್ವಲ್ ಕಣದಲ್ಲಿ ನಿಂತಿದ್ದಾರೆ.
ಪ್ಲಸ್ ಪಾಯಿಂಟ್: ಹಾಸನ ಜಿಲ್ಲೆಯ ಮೇಲೆ ಮಾಜಿ ಪ್ರಧಾನಿ ದೇವೇಗೌಡರ ಪಾರುಪತ್ಯ, ಹಿಡಿತವನ್ನು ಹೊಂದಿದ್ದಾರೆ. ತಂದೆ ಹೆಚ್.ಡಿ.ರೇವಣ್ಣ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಕೈಗೊಂಡಿರೋ ಅಭಿವೃದ್ಧಿ ಕಾರ್ಯಗಳು ಪ್ರಜ್ವಲ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಲಿವೆ. 6 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರನ್ನು ಹೊಂದಿದ್ದು, ಹಾಸನದಲ್ಲಿ ಯುವ ಕಾರ್ಯಕರ್ತರ ಪಡೆಯನ್ನ ಕಟ್ಟಲಾಗಿದೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿಯಾಗಿ ಒಟ್ಟಾಗಿ ಕಣಕ್ಕಿಳಿದಿರೋದು ಮತಗಳ ಕ್ರೋಢಿಕರಣ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಚುನಾವಣೆಗೂ ಮುನ್ನವೇ ಕಾರ್ಯಕರ್ತರೊಂದಿಗಿನ ಒಡನಾಟ ಹೊಂದಿದ್ದು ಮತ್ತೊಂದು ಪ್ಲಸ್ ಪಾಯಿಂಟ್.
ಮೈನಸ್ ಪಾಯಿಂಟ್: ಕುಟುಂಬ ರಾಜಕಾರಣದ ಆರೋಪ ಹೊತ್ತಿರುವುದರ ಜೊತೆಗೆ ರಾಜಕೀಯ ಅನುಭವದ ಕೊರತೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿಯಲ್ಲಿ ಒಳಗೊಳಗೆ ಕುದಿಯುತ್ತಿರುವ ಅಸಮಾಧಾನ ಹೊಡೆತ ನೀಡಬಹುದು. ಎ.ಮಂಜು ಬಿಜೆಪಿಯಿಂದ ಪ್ರಬಲ ಅಭ್ಯರ್ಥಿ ಆಗಿರುವ ಕಾರಣ ನೇರ ಹಣಾಹಣಿ ನಡೆಯಲಿದೆ.
ಎ.ಮಂಜು: 2014ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ದೇವೇಗೌಡರ ವಿರುದ್ಧ ಸ್ಪರ್ಧಿಸಿ ಎ.ಮಂಜು ಸೋತಿದ್ದರು. ಮೈತ್ರಿ ಧರ್ಮ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಬಂಡಾಯದ ಬಾವುಟ ಹಾರಿಸಿ ಎ. ಮಂಜು ಬಿಜೆಪಿ ಸೇರ್ಪಡೆಗೊಂಡು ಕಮಲ ಹಿಡಿದು ಸ್ಪರ್ಧೆ ಮಾಡಿದ್ದಾರೆ.
ಪ್ಲಸ್ ಪಾಯಿಂಟ್: 2014ರಲ್ಲಿ ದೇವೇಗೌಡರ ವಿರುದ್ಧ ಸೋತ ಅನುಕಂಪದ ಅಲೆ ಕೆಲಸ ಮಾಡಬಹುದು. ಮೈತ್ರಿಯ ಸ್ಥಳೀಯ ಕಚ್ಚಾಟದ ಲಾಭ ಪಡೆಯಲು ಎ.ಮಂಜು ಪ್ರಯತ್ನಿಸುತ್ತಿದ್ದಾರೆ. ದೇವೇಗೌಡರ ಕುಟುಂಬ ಕಡು ವಿರೋಧಿಗಳು ಒಂದಾಗುವ ಲಕ್ಷಣಗಳು ಕಾಣುತ್ತಿವೆ. ಈ ಬಾರಿ 2 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಹೊಂದಿದ್ದು, ಮಾಜಿ ಸಿಎಂ ಯಡಿಯೂರಪ್ಪ ಬೆನ್ನಿಗೆ ನಿಂತಿರೋದು ಎ. ಮಂಜು ಅವರಿಗೆ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.
ಮೈನಸ್ ಪಾಯಿಂಟ್: ಗ್ರಾಮಾಂತರ ಭಾಗದಲ್ಲಿ ಜೆಡಿಎಸ್ ಪ್ರಬಲವಾಗಿರೋದು ಮೊದಲ ಹೊಡೆತ. ಮೈತ್ರಿಯಿಂದಾಗಿ ಅಹಿಂದ ಮತಗಳು ಒಟ್ಟಾಗುವ ಆತಂಕ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಪ್ರಜ್ವಲ್ ಪರ ಸಚಿವರುಗಳು, ಶಾಸಕರು ದಂಡು ಪ್ರಚಾರ ನಡೆಸುತ್ತಿರೋದು. ಕಾಂಗ್ರೆಸ್ ಬಿಟ್ಟು ಕಡೇ ಕ್ಷಣದಲ್ಲಿ ಬಿಜೆಪಿಗೆ ಜಿಗಿದು ಅಭ್ಯರ್ಥಿಯಾಗಿದ್ದು ಆಂತರಿಕ ಅಸಮಾಧಾನದ ಬಿಸಿ ತಾಗುವ ಸಾಧ್ಯತೆಗಳಿವೆ.
ಬೆಂಗಳೂರು: ಹಾಸನ ರಾಜಕಾರಣದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ರಾಜಿ ಸಂಧಾನದ ಮಾತುಕತೆಗೆ ಕುಳಿತುಕೊಳ್ಳಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಸಂಧಾನ ನಡೆಯುತ್ತಿದ್ದು, ಹಳೆಯ ದ್ವೇಷ ಮರೆತು ಜೆಡಿಎಸ್ ಬೆಂಬಲಿಸುವಂತೆ ಮನವೊಲಿಸಲು ಮುಂದಾಗಿದ್ದಾರೆ.
ಸಚಿವ ಹೆಚ್.ಡಿ.ರೇವಣ್ಣರ ಸಮ್ಮುಖದಲ್ಲಿ ಜೆಡಿಎಸ್ ನಾಯಕರಿಂದ ಕಾಂಗ್ರೆಸ್ ಮುಖಂಡರುಗಳಿಗೆ, ಕಾರ್ಯಕರ್ತರಿಗೆ ಏನೆಲ್ಲಾ ಸಮಸ್ಯೆ ಆಗುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ. ಈ ವೇಳೆ ವಿಪರೀತ ದೇವರನ್ನು ನಂಬುವ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಂದೆ ಯಾವುದೇ ತೊಂದರೆ ಕೊಡಲ್ಲ ಅಂತ ಸಚಿವರು ಆಣೆ ಪ್ರಮಾಣ ಮಾಡಲಿ ಎಂದು ಒತ್ತಾಯಿಸಲು ಕೈ ಪಡೆ ಸಜ್ಜುಗೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇತ್ತ ದೋಸ್ತಿಗಳು ಕೈ ಕೊಟ್ಟರೆ ಮಗನ ಗೆಲುವು ಕಷ್ಟ ಎಂದು ಭಾವಿಸಿದ ರೇವಣ್ಣ ಸಿದ್ದರಾಮಯ್ಯ ನಿವಾಸದಲ್ಲಿ ಇಂದು ರಾಜೀ ಪಂಚಾಯ್ತಿಗೆ ಹಾಜರಾಗಲು ಒಪ್ಪಿದ್ದಾರೆ. ಕೇವಲ ಬಾಯಿ ಮಾತಿಗೆ ಹಾಸನದ ದಶಕದ ರಾಜಕೀಯ ದ್ವೇಷ ಕೊನೆಯಾಗುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.