Tag: ಹೆಜ್ಜೇನು ದಾಳಿ

  • ಗದಗ: ಮಾನವ ಸರಪಳಿ ವೇಳೆ ಜನರ ಮೇಲೆ ಹೆಜ್ಜೇನು ದಾಳಿ – ಸ್ಥಳದಿಂದ ಚದುರಿದ ಜನ

    ಗದಗ: ಮಾನವ ಸರಪಳಿ ವೇಳೆ ಜನರ ಮೇಲೆ ಹೆಜ್ಜೇನು ದಾಳಿ – ಸ್ಥಳದಿಂದ ಚದುರಿದ ಜನ

    ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿದ್ದ ಬೀದರ್‌ನಿಂದ (Bidar) ಚಾಮರಾಜನಗರದವರೆಗೆ (Chamarajanagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwar) ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಈಗ ಸೇವೆಗಳಲ್ಲಿ ಸ್ವಾರ್ಥ ಬಂದಿದೆ: ಹೆಚ್‌.ಆರ್‌.ರಂಗನಾಥ್‌ ಬೇಸರ

    ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ ಹಾಗೂ ಸರೋಜಾ ದಿಂಡೂರು ಎಂಬ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮುಖ, ತಲೆ, ಮೈ, ಕೈಗೆ ತೀವ್ರವಾಗಿ ಕಚ್ಚಿವೆ. ನೋವಿನ್ನು ಸಹಿಸಲಾಗದೇ ಅಸ್ವಸ್ಥಗೊಂಡಿದ್ದಾರೆ.

    ತಕ್ಷಣವೇ ಇಬ್ಬರು ಶಿಕ್ಷಕಿಯರಿಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ತಮ್ಮ ಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಪೆಟ್ಟಾ’ ಚಿತ್ರದ ನಟಿ ಮೇಘಾ

  • ಮೇಲುಕೋಟೆ ಜಾತ್ರೆಯಲ್ಲಿ ಹೆಜ್ಜೇನು ದಾಳಿ- 30ಕ್ಕೂ ಹೆಚ್ಚು ಜನರಿಗೆ ಗಾಯ, 17 ಮಂದಿ ಅಸ್ವಸ್ಥ

    ಮೇಲುಕೋಟೆ ಜಾತ್ರೆಯಲ್ಲಿ ಹೆಜ್ಜೇನು ದಾಳಿ- 30ಕ್ಕೂ ಹೆಚ್ಚು ಜನರಿಗೆ ಗಾಯ, 17 ಮಂದಿ ಅಸ್ವಸ್ಥ

    ಮಂಡ್ಯ: ಮೇಲುಕೋಟೆಯ (Melukote) ತೊಟ್ಟಿಲುಮಡು ಜಾತ್ರೆಯ (Thottilamadu Jathre) ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ.

    ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ. ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದಾರೆ. ಇದನ್ನೂ ಓದಿ: ವಿಚ್ಛೇದನ ತೀರ್ಪಿನ ದಿನವೇ ಪತ್ನಿಗೆ ಮಚ್ಚೇಟು – ಆರೋಪಿ ಅರೆಸ್ಟ್


    ಜೇನು ದಾಳಿಗೆ ಒಳಗಾದವರನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಗ್ಯಾಸ್ ಗೀಸರ್ ಲೀಕ್‍ನಿಂದ ಪತ್ನಿ ಸಾವು ಎಂದ ಪತಿ- ಕೊಲೆ ಆರೋಪ

  • ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – ಓರ್ವ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

    ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – ಓರ್ವ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

    ಚಾಮರಾಜನಗರ: ಶವಸಂಸ್ಕಾರಕ್ಕೆ (Cremation) ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ (Honeybee Attack) ನಡೆಸಿ ಓರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ (Kollegala) ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಚೆನ್ನಪ್ಪ (60) ಎಂಬವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಸ್ಮಶಾನದಲ್ಲಿ ಶವಕ್ಕೆ ಪೂಜೆ ಸಲ್ಲಿಸಿ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು ದಾಳಿ ಮಾಡಿವೆ. ಇದನ್ನೂ ಓದಿ: ತುಂಗಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

    ಈ ಪೈಕಿ ಚೆನ್ನಪ್ಪ ಅವರು ಹೆಜ್ಜೇನು ದಾಳಿಗೆ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಅಸುನೀಗಿದ್ದಾರೆ. ಉಳಿದ 10 ಮಂದಿ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಪೈಕಿ ಒಬ್ಬರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ – ಇಬ್ಬರು ಗಂಭೀರ

    ಸಿನಿಮಾ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ – ಇಬ್ಬರು ಗಂಭೀರ

    ಕಾರವಾರ: ಕನ್ನಡ ಸಿನಿಮಾ ‘ಭಾವಪೂರ್ಣ’ಚಿತ್ರೀಕರಣದ ಸಂದರ್ಭದಲ್ಲಿ ಹೆಜ್ಜೇನು ದಾಳಿಯಾಗಿ (Honey Bee Attack) ಇಬ್ಬರು ಲೈಟಿಂಗ್ ಸಹಾಯಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದ ಘಟನೆ ಉತ್ತರ ಕನ್ನಡ (ಜಿಲ್ಲೆಯ ಅಂಕೋಲ ತಾಲೂಕಿನ ಜಮಗೋಡಿನ ರೈಲ್ವೆ ನಿಲ್ದಾಣ ರಸ್ತೆಯ ಕ್ರಾಸ್ ಬಳಿ ಸೋಮವಾರ ನಡೆದಿದೆ.

    ಮಂಡ್ಯ ಮೂಲದ ರಮೇಶ್ ಮತ್ತು ರಾಮು ಹೆಜ್ಜೇನು ಕಡಿತಕ್ಕೊಳಗಾದ ಲೈಟಿಂಗ್ ಸಹಾಯಕರು. ಹೆಜ್ಜೇನು ದಾಳಿ ಮಾಡುತ್ತಲೇ ಸ್ಥಳದಲ್ಲಿದ್ದ ಚಿತ್ರತಂಡದ ಕೆಲಸಗಾರರು, ತಂತ್ರಜ್ಞರು, ನಟರು ಕಾಲ್ಕಿತ್ತಿದ್ದಾರೆ. ಈ ವೇಳೆ ಇಬ್ಬರ ಮೇಲೆ ನೂರಾರು ಜೇನು ನೊಣಗಳು ದಾಳಿ ನಡೆಸಿವೆ. ಇದರಿಂದ ಇಬ್ಬರೂ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಅವರಿಗೆ ಇತರರು ಸಹಾಯ ಮಾಡಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಕೆಜಿಎಫ್‌ ಮ್ಯೂಸಿಕ್‌ ಬಳಕೆ – ಕಾಂಗ್ರೆಸ್‌ ಟ್ವಿಟ್ಟರ್‌ ಖಾತೆ ಬ್ಲಾಕ್‌ ಮಾಡುವಂತೆ ಕೋರ್ಟ್‌ ಆದೇಶ

    ಘಟನೆಯ ಬಳಿಕ ಸ್ಥಳೀಯ ಆಟೋ ಚಾಲಕನ ಸಹಾಯದಿಂದ 108ಕ್ಕೆ ಕರೆ ಮಾಡಿದ್ದು, ಗಾಯಾಳುಗಳನ್ನು ರಕ್ಷಿಸಿ ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯದಲ್ಲಿ ಆಡಳಿತ ಪಕ್ಷವೂ ಇಲ್ಲ, ವಿರೋಧ ಪಕ್ಷವೂ ಇಲ್ಲ: ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

  • ಖಾಸಗಿ ಶಾಲೆಯಲ್ಲಿ 40 ಕ್ಕೂ ಅಧಿಕ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದ ಹೆಜ್ಜೇನು

    ಖಾಸಗಿ ಶಾಲೆಯಲ್ಲಿ 40 ಕ್ಕೂ ಅಧಿಕ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದ ಹೆಜ್ಜೇನು

    ಹಾವೇರಿ: ಬಿಸಿಲಿನ ತಾಪಮಾನ ಹೆಚ್ಚಳಗೊಂಡ ಪರಿಣಾಮ ಖಾಸಗಿ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.

    ಹಾವೇರಿಯ ವಿದ್ಯಾನಗರದಲ್ಲಿರೋ ಕೆ.ಎಲ್.ಇ ಶಿಕ್ಷಣಸಂಸ್ಥೆಯ ಕಟ್ಟಡದಲ್ಲಿರೋ ಜೇನುಹುಳುಗಳು ದಾಳಿ ಮಾಡಿ 40 ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಒಂದು, ಎರಡು ಹಾಗೂ ಮೂರನೇ ತರಗತಿಯ ವಿದ್ಯಾರ್ಥಿಗಳ ಕೊಠಡಿ ಬಳಿ ಇರೋ ಹೆಜ್ಜೇನು ಮಕ್ಕಳಿಗೆ ಕಚ್ಚಿ ಗಾಯಗೊಳಿಸಿವೆ.

    ಕೂಡಲೇ ವಿದ್ಯಾರ್ಥಿಗಳನ್ನ ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಶಾಲೆಯ ಮುಂದೆ ಪೋಷಕರು ಜಮಾವಣೆಗೊಂಡಿದ್ದಾರೆ. ನಗರಸಭೆಯ ಸಿಬ್ಬಂದಿ ಹೆಜ್ಜೇನು ಇರೋ ಕಡೆ ಫಾಗಿಂಗ್ ವ್ಯವಸ್ಥೆ ಮಾಡಿ ಹೆಜ್ಜೇನು ನಿಯಂತ್ರಣ ಮಾಡುವ ವ್ಯವಸ್ಥೆ ಮಾಡಿದ್ದಾರೆ.

    ಈ ಘಟನೆಯಲ್ಲಿ ಯಾವುದೇ ಮಕ್ಕಳಿಗೆ ಪ್ರಾಣಾಪಾಯವಾಗಿಲ್ಲ. ಕೆಲಕಾಲ ಪೋಷಕರು ಆತಂಕಕ್ಕೆ ಒಳಗಾಗಿ, ಮಕ್ಕಳನ್ನ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದಾರೆ.

  • ಬಯೋ ಪಾರ್ಕ್ ಉದ್ಘಾಟನೆಯಲ್ಲಿ ಸಚಿವ ರಮಾನಾಥ ರೈ ಮೇಲೆ ಹೆಜ್ಜೇನು ದಾಳಿ

    ಬಯೋ ಪಾರ್ಕ್ ಉದ್ಘಾಟನೆಯಲ್ಲಿ ಸಚಿವ ರಮಾನಾಥ ರೈ ಮೇಲೆ ಹೆಜ್ಜೇನು ದಾಳಿ

    ಬೆಳಗಾವಿ: ಅರಣ್ಯ ಸಚಿವ ರಮಾನಾಥ ರೈ ಮೇಲೆ ಹೆಜ್ಜೆನು ದಾಳಿ ಮಾಡಿದ್ದು, ಎದ್ನೋ ಬಿದ್ನೋ ಅಂತ ಓಡಿ ಹೋದ ಘಟನೆ ನಡೆದಿದೆ.

    ಬೆಳಗಾವಿಯ ಬಯೋ ಪಾರ್ಕ್ ಉದ್ಘಾಟನೆಗೆ ಸಚಿವ ರಮಾನಾಥ ರೈ, ಸಂಸದ ಸುರೇಶ್ ಅಂಗಡಿ ಸೇರಿದಂತೆ ಅರಣ್ಯ ಇಲಾಖೆಯ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದರು.

    ಸಮಾರಂಭದಲ್ಲಿ ಸುರೇಶ್ ಅಂಗಡಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ಹೆಜ್ಜೆನು ದಾಳಿ ನಡೆಸಿದೆ. ಡ್ರೋನ್ ಕ್ಯಾಮರಾ ಸದ್ದಿನಿಂದ ಮರದಲ್ಲಿ ಕುಳಿತಿದ್ದ ಹೆಜ್ಜೆನ್ನು ಸಮಾರಂಭದಲ್ಲಿ ಪಾಲ್ಗೊಂಡವರ ಮೇಲೆ ದಾಳಿ ನಡೆಸಿದೆ. ಹೀಗಾಗಿ ಏಕಾಏಕಿ ಸಚಿವ ರಮಾನಾಥ ರೈ ಸೇರಿ ಎಲ್ಲರೂ ಸಮಾರಂಭ ಬಿಟ್ಟು ಅರ್ಧದಲ್ಲಿ ಓಡಿ ಹೋಗಿದ್ದಾರೆ.

    ಘಟನೆಯಲ್ಲಿ 6ಕ್ಕೂ ಹೆಚ್ಚು ಜನರಿಗೆ ಹೆಜ್ಜೇನು ಕಡಿದು ಗಾಯವಾಗಿದೆ. ಗಾಯಾಳುಗಳಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಿಸಲಾಗಿದೆ.

  • ದೇವರ ಹರಕೆ ಸೇವೆ ತೀರಿಸಲು ಹೋದವರಿಗೆ ಕಚ್ಚಿತು ಹೆಜ್ಜೇನು: 20 ಮಂದಿಗೆ ಗಾಯ

    ದೇವರ ಹರಕೆ ಸೇವೆ ತೀರಿಸಲು ಹೋದವರಿಗೆ ಕಚ್ಚಿತು ಹೆಜ್ಜೇನು: 20 ಮಂದಿಗೆ ಗಾಯ

    ರಾಮನಗರ: ದೇವರ ಹರಕೆಯ ಸೇವೆ ತೀರಿಸುವ ವೇಳೆ ಅಡುಗೆ ಮಾಡಲು ಹಾಕಿದ್ದ ಬೆಂಕಿಯ ಹೊಗೆಯಿಂದ ಹೆಜ್ಜೇನು ಹಿಂಡು ದಾಳಿ ನಡೆಸಿ 20 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಅವ್ವೇರಹಳ್ಳಿಯಲ್ಲಿ ನಡೆದಿದೆ.

    ಅವ್ವೇರಹಳ್ಳಿ ಗ್ರಾಮದ ಹೊನ್ನಾದೇವಿ ದೇವತೆಯ ಸೇವೆಯನ್ನು ನಡೆಸಲಾಗುತ್ತಿತ್ತು. ಅಡುಗೆ ಮಾಡಲು ಬೆಂಕಿ ಹಾಕಿದ್ರಿಂದ ಹೊಗೆಯಿಂದ ಹೆಜ್ಜೇನುಗಳು ದಾಳಿ ನಡೆಸಿವೆ. ಘಟನೆಯಲ್ಲಿ 21 ಜನರಿಗೆ ಹೆಜ್ಜೇನು ಕಡಿತವಾಗಿದ್ರೆ ಏಳು ಜನರಿಗೆ ಕಡಿತದಿಂದ ತೀವ್ರವಾಗಿ ಗಾಯವಾಗಿದೆ.

    ಹೆಚ್ಚಿನ ಹೆಜ್ಜೇನು ಕಡಿತಕ್ಕೆ ಒಳಗಾದವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ರೆ, ಉಳಿದವರಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗ್ತಿದೆ.