Tag: ಹೆಡ್‍ಕಾನ್‍ಸ್ಟೇಬಲ್

  • ಚಿಕ್ಕಬಳ್ಳಾಪುರ | ಆನ್‌ಲೈನ್‌ ಜೂಜಿಗೆ ದಾಸನಾಗಿದ್ದ ಹೆಡ್ ಕಾನ್‌ಸ್ಟೆಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಚಿಕ್ಕಬಳ್ಳಾಪುರ | ಆನ್‌ಲೈನ್‌ ಜೂಜಿಗೆ ದಾಸನಾಗಿದ್ದ ಹೆಡ್ ಕಾನ್‌ಸ್ಟೆಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಹೆಡ್‌ ಕಾನ್ಸ್‌ಟೇಬಲ್‌ (Head Constable) ಒಬ್ಬರು ಪೊಲೀಸ್‌ ಠಾಣೆ ಆವರಣದಲ್ಲೇ ಇರುವ ಕ್ವಾಟ್ರಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.

    ಮಂಚೇನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ರಾಜಶೇಖರ್ (45) ಆತ್ಯಹತ್ಯೆ ಮಾಡಿಕೊಂಡವರು. ಠಾಣಾ ಆವರಣದಲ್ಲಿದ್ದ ಕ್ವಾಟ್ರಸ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆಶಿ ಇಬ್ಬರೂ ಪಾಲಿಸುತ್ತೇವೆ – ಮತ್ತೆ ಸಿಎಂ ಸ್ಪಷ್ಟನೆ

    ಕಾರಣ ಏನು?
    ಮೊಬೈಲ್ ಆನ್‌ಲೈನ್ ಜೂಜಾಟಗಳಿಗೆ (Online gambling) ದಾಸನಾಗಿದ್ದ ಕಾನ್ಸ್‌ಟೇಬಲ್‌ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಹಲವರ ಬಳಿ ಬಡ್ಡಿಗೆ ಕೈಸಾಲ ಮಾಡಿಕೊಂಡಿದ್ದರು. ಈ ಬಗ್ಗೆ ತನ್ನ ಪೋಷಕರ ಬಳಿ ಕಷ್ಟ ಹೇಳಿಕೊಂಡಿದ್ದರು. ಜೊತೆಗೆ ಪತ್ನಿಯ ಚಿನ್ನಾಭರಣವನ್ನ ಸಾಲ ತೀರಿಸಲು ಅಡವಿಟ್ಟಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಹೈಕೋರ್ಟ್‌ನಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

  • ಗುತ್ತಿಗೆದಾರ ಸಚಿನ್ ಅತ್ಮಹತ್ಯೆ ಕೇಸ್‌ – ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಸಸ್ಪೆಂಡ್‌

    ಗುತ್ತಿಗೆದಾರ ಸಚಿನ್ ಅತ್ಮಹತ್ಯೆ ಕೇಸ್‌ – ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಸಸ್ಪೆಂಡ್‌

    ಬೀದರ್‌: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ (Contractor Sachin Panchal Suicide Case) ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಬೀದರ್ (Bidar) ಗಾಂಧಿಗಂಜ್ ಪೊಲೀಸ್ ಠಾಣೆಯ ಇಬ್ಬರು ಹೆಡ್ ಕಾನ್‌ಸ್ಟೇಬಲ್‌ಗಳನ್ನು (Head Constable) ಸಸ್ಪೆಂಡ್ ಮಾಡಲಾಗಿದೆ.

    ಶ್ಯಾಮಲಾ ಮತ್ತು ರಾಜೇಶ್‌ ಅವರನ್ನು ಎಸ್‌ಪಿ ಎಸ್‌ಪಿ ಪ್ರದೀಪ್ ಗುಂಟಿ ಅಮಾನತುಗೊಳಿಸಿ (Suspend) ಆದೇಶ ಹೊರಡಿಸಿದ್ದಾರೆ.

    ಗುರುವಾರ (ಡಿ.26) ಡೆತ್‌ನೋಟ್ ಬರೆದು ಗುತ್ತಿಗೆದಾರ ಸಚಿನ್ ಪಾಂಚಾಳ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಡೆತ್‌ನೋಟ್ (Death Note) ನೋಡಿ ಗಾಬರಿಯಾದ ಕುಟುಂಬಸ್ಥರು ಬೀದರ್‌ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಧಾವಿಸಿದ್ದರು. ಇದನ್ನೂ ಓದಿ: ಭಾರತದ 130 ಟನ್ ಚಿನ್ನ ಅಡ ಇಟ್ಟ ಭೀಕರ ಪರಿಸ್ಥಿತಿಯಲ್ಲಿ ದೇಶಕ್ಕಾಗಿ ಸಿಂಗ್ ಕೆಲಸ ಮಾಡಿದ್ರು: ಹೆಚ್‌ಡಿಡಿ ಸ್ಮರಣೆ

    ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರು
    ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರು

    ಸಚಿನ್‌ ಪತ್ತೆ ಮಾಡುವಂತೆ ದೂರು ನೀಡಿದ್ದರೂ ಹೆಡ್ ಕಾನ್‌ಸ್ಟೇಬಲ್‌ ಸರಿಯಾಗಿ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರು ದೂರು ದಾಖಲಿಸಿಕೊಳ್ಳದೇ ನಿರ್ಲಕ್ಷ್ಯಿಸಿದ್ದಕ್ಕೆ ನಮ್ಮಣ್ಣ ಸಾವನ್ನಪ್ಪಿದ್ದಾನೆ ಎಂದು ಎಸ್‌ಪಿ ಮುಂದೆ ಅಳಲು ತೋಡಿಕೊಂಡಿದ್ದರು.

    ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ಕಾನ್‌ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಪಬ್ಲಿಕ್ ಟಿವಿಗೆ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾಹಿತಿ ನೀಡಿದ್ದಾರೆ.

    ಏನಿದು ಪ್ರಕರಣ?
    ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಪ್ತ ರಾಜು ಕಪನೂರು ಸೇರಿದಂತೆ ಎಳು ಜನರ ಮೇಲೆ ಗಂಭೀರ ಆರೋಪ ಮಾಡಿ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುರುವಾರ ಬೀದರ್ ನಗರ ಬಸವೇಶ್ವರ ವೃತ್ತದ ಬಳಿಯ ರೈಲ್ವೇ ಹಳಿಗೆ ತಲೆ ಕೊಟ್ಟಿದ್ದರು.

    ಡೆತ್​ ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದರು. 5 ಲಕ್ಷ ರೂ. ಹೆಚ್ಚು ಹಣ ಪಡೆದು ಟೆಂಡರ್ ನೀಡದೇ ವಂಚನೆ ಮಾಡಲಾಗಿದೆ.  ಅಷ್ಟೇ ಅಲ್ಲದೇ  1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಜು ಕಪನೂರು ವಿರುದ್ಧ ಆರೋಪಿಸಲಾಗಿದೆ. ಡೆತ್ ನೋಟ್​ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ.

     

  • ಹೆಂಡತಿ, ಮಾವನ ಕಿರುಕುಳಕ್ಕೆ ಹೆಡ್‌ಕಾನ್‌ಸ್ಟೇಬಲ್ ಬಲಿ – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

    ಹೆಂಡತಿ, ಮಾವನ ಕಿರುಕುಳಕ್ಕೆ ಹೆಡ್‌ಕಾನ್‌ಸ್ಟೇಬಲ್ ಬಲಿ – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

    ಬೆಂಗಳೂರು: ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್‌ಕಾನ್‌ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್. ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸಿವಿ ರಾಮನ್ ನಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

    ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಿಪ್ಪಣ್ಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಡೆತ್‌ನೋಟ್‌ನಲ್ಲಿ ಏನಿದೆ?
    ನಾನು ನನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿಯ ತಂದೆಯಾದ ಯಮುನಪ್ಪ ಇವನು ನನಗೆ ಜೀವ ಬೆದರಿಕೆ ಹಾಕಿರುತ್ತಾನೆ. ಡಿ.12 ರಂದು ದೂರವಾಣಿ ಕರೆ ಮಾಡಿ ಮಾತನಾಡಿ ಬೆದರಿಕೆ ಹಾಕಿರುತ್ತಾನೆ. ಬೆಳಗ್ಗೆ ನಾನು ಕಾಲ್ ಮಾಡಿದಾಗಲೂ ಕೂಡ, ‘ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಬೈದಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

  • ಮೀಸಲು ಪಡೆಯ ಹೆಡ್‌ಕಾನ್‌ಸ್ಟೇಬಲ್ ಹೃದಯಾಘಾತದಿಂದ ಸಾವು

    ಮೀಸಲು ಪಡೆಯ ಹೆಡ್‌ಕಾನ್‌ಸ್ಟೇಬಲ್ ಹೃದಯಾಘಾತದಿಂದ ಸಾವು

    ಧಾರವಾಡ: ಮೀಸಲು ಪಡೆಯ ಹೆಡ್‌ಕಾನ್‌ಸ್ಟೇಬಲ್ (Headconstable) ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ಶಹರ ಸಶಸ್ತ್ರ ಮೀಸಲು ಪಡೆಯ ಹೆಡ್‌ಕಾನ್‌ಸ್ಟೇಬಲ್ ಭೀಮಣ್ಣ ಸತ್ಯಪ್ಪನವರ (56) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ರಾತ್ರಿ ಧಾರವಾಡ (Dharawada) ಜಿಲ್ಲಾಡಳಿತದ ಎಲೆಕ್ಷನ್ ಸೆಲ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಭೀಮಣ್ಣ ಬೆಳಗ್ಗೆ ಮನೆಗೆ ಹೋದಾಗ ಹೃದಯಾಘಾತವಾಗಿದೆ. ಇದನ್ನೂ ಓದಿ: ಬುಧವಾರ ಜಮೀರ್ ಜೊತೆ ತೆರಳಿ ನಾಮಪತ್ರ ವಾಪಸ್ ಪಡೆಯುತ್ತೇನೆ: ಅಜ್ಜಂಪೀರ್ ಖಾದ್ರಿ

    ಮಾಜಿ ಯೋಧರಾಗಿದ್ದ ಭೀಮಣ್ಣ ಸೇನೆಯ ಸೇವೆಯ ಬಳಿಕ ಪೊಲೀಸ್ ಇಲಾಖೆ ಸೇರಿದ್ದರು. ಇವರು 2016ರಲ್ಲಿ ಪೊಲೀಸ್ ಸೇವೆಗೆ ಭರ್ತಿಯಾಗಿದ್ದರು. ಇದನ್ನೂ ಓದಿ: ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣ ಪರಿಚಯಿಸಿದ್ದೇ ಕಾಂಗ್ರೆಸ್: ಬೊಮ್ಮಾಯಿ

  • ಅಮಾಯಕ ವ್ಯಾಪಾರಿ ಮೇಲೆ ಕಳ್ಳತನ ಆರೋಪ ಹೊರಿಸಿ ಲಾಠಿಯಿಂದ ಹಲ್ಲೆ – ಹೆಡ್‌ಕಾನ್‌ಸ್ಟೇಬಲ್ ಅಮಾನತು

    ಅಮಾಯಕ ವ್ಯಾಪಾರಿ ಮೇಲೆ ಕಳ್ಳತನ ಆರೋಪ ಹೊರಿಸಿ ಲಾಠಿಯಿಂದ ಹಲ್ಲೆ – ಹೆಡ್‌ಕಾನ್‌ಸ್ಟೇಬಲ್ ಅಮಾನತು

    ಹಾಸನ: ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕ ವ್ಯಾಪಾರಿಯನ್ನು ಕರೆದೊಯ್ದು ಕಳ್ಳತನ ಆರೋಪ ಹೊರಿಸಿ ಲಾಠಿಯಿಂದ ಹಲ್ಲೆ ಮಾಡಿದ ಹೆಡ್‌ಕಾನ್‌ಸ್ಟೇಬಲ್‌ನನ್ನು (Head Constable) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅಮಾನತು ಮಾಡಿದ್ದಾರೆ.

    ಹಾಸನ (Hassan) ಜಿಲ್ಲೆ, ಸಕಲೇಶಪುರ ತಾಲೂಕಿನ, ಯಸಳೂರು ಪೊಲೀಸ್ ಠಾಣೆಯ ಮಣಿಕುಮಾರ್ ಅಮಾನತಾದ ಹೆಡ್‌ಕಾನ್‌ಸ್ಟೇಬಲ್. ಪ್ಲಾಸ್ಟಿಕ್ ಟೇಬಲ್ ಮಾರಾಟ ಮಾಡಲು ಯಸಳೂರು ರಸ್ತೆಯಲ್ಲಿ ಕೂಗಿಕೊಂಡು ಹೋಗುತ್ತಿದ್ದ ಗದಗ ಮೂಲದ ಅರ್ಜುನ್ ಎಂಬಾತನನ್ನು ರಸ್ತೆ ಬಳಿ ನಿಂತಿದ್ದ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಮಣಿಕುಮಾರ್ ಕರೆದು ಒಂದು ಪ್ಲಾಸ್ಟಿಕ್ ಟೇಬಲ್‌ಗೆ ಎಷ್ಟು ಎಂದು ಕೇಳಿದ್ದ. ಒಂದು ಟೇಬಲ್‌ಗೆ 2,500 ರೂ. ಎಂದು ವ್ಯಾಪಾರಿ ಹೇಳಿದ್ದು, 1,800 ರೂ.ಗೆ ಪ್ಲಾಸ್ಟಿಕ್ ಟೇಬಲ್ ಕೊಡುವಂತೆ ಮಣಿಕುಮಾರ್ ಕೇಳಿದ್ದಾನೆ.

    ಅಷ್ಟು ಹಣಕ್ಕೆ ಬರಲ್ಲ ನೀವೇ ಒಂದು ರೇಟ್ ಹೇಳಿ ಪ್ಲಾಸ್ಟಿಕ್ ಟೇಬಲ್ ತೆಗೆದುಕೊಳ್ಳಿ ಎಂದು ಬಡ ವ್ಯಾಪಾರಿ ಅರ್ಜುನ್ ಮಣಿಕುಮಾರ್‌ಗೆ ಹೇಳಿದ್ದಾನೆ. ಇದರಿಂದ ಕೋಪಗೊಂಡ ಹೆಡ್‌ಕಾನ್‌ಸ್ಟೇಬಲ್ ಅರ್ಜುನ್‌ನನ್ನು ಯಸಳೂರಿನ ಕೆನರಾಬ್ಯಾಂಕ್‌ನ ಕಟ್ಟಡದ ಮೇಲ್ಭಾಗಕ್ಕೆ ಕರೆದುಕೊಂಡು ಹೋಗಿ ಪ್ಲಾಸ್ಟಿಕ್ ಟೇಬಲ್ ಕಳ್ಳತನ ಮಾಡಿಕೊಂಡು ಬಂದಿದ್ದಿಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಲಂಚಕ್ಕೆ ಬೇಡಿಕೆಯಿಟ್ಟು ಕೇರಳದಲ್ಲಿ ಅರೆಸ್ಟ್‌ ಆಗಿರುವ ಬೆಂಗಳೂರು ನಾಲ್ವರು ಪೊಲೀಸರು ಸಸ್ಪೆಂಡ್‌

    ಇದರಿಂದ ಮನನೊಂದ ಅರ್ಜುನ್ ಯಸಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಣಿಕುಮಾರ್‌ನನ್ನು ಎಸ್‌ಪಿ ಹರಿರಾಂ ಶಂಕರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆಯೂ ಯಸಳೂರಿನಲ್ಲಿ ಮಣಿಕುಮಾರ್ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪವೂ ಕೇಳಿ ಬಂದಿತ್ತು. ಇದನ್ನೂ ಓದಿ: ಬಾಸ್ ಎಂದು ಕರೆಯದ್ದಕ್ಕೆ ಯುವಕನ ಮೇಲೆ ಪುಡಿರೌಡಿಗಳಿಂದ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೊಲೀಸ್ ಠಾಣೆಯಲ್ಲೇ ಅರೆನಗ್ನವಾಗಿ ಓಡಾಡಿದ ಹೆಡ್‍ಕಾನ್‍ಸ್ಟೇಬಲ್

    ಪೊಲೀಸ್ ಠಾಣೆಯಲ್ಲೇ ಅರೆನಗ್ನವಾಗಿ ಓಡಾಡಿದ ಹೆಡ್‍ಕಾನ್‍ಸ್ಟೇಬಲ್

    ಲಕ್ನೋ: ಉತ್ತರ ಪ್ರದೇಶದ ಪೋಲಿಸ್ ಠಾಣೆಯೊಂದರಲ್ಲಿ ಹೆಡ್‍ಕಾನ್‍ಸ್ಟೇಬಲ್ ಒಬ್ಬ ಒಳಉಡುಪಿನಲ್ಲಿಯೇ ತಿರುಗಾಡುತ್ತಿದ್ದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೋ ನೋಡಿದ ಠಾಣೆಯ ಎಸ್‍ಪಿ ಪೇದೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ವೈರಲ್ ಆದ ವೀಡಿಯೋ ನೌತನ್ವಾ ಪೊಲೀಸ್ ಠಾಣೆಯದ್ದಾಗಿದ್ದು, ಹೆಡ್‍ಕಾನ್‍ಸ್ಟೇಬಲ್ ಗಂಗೋತ್ರಿ ಯಾದವ್ ಎಂದು ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಸೀಬೆ ಹಣ್ಣು ಕೀಳಲು ಹೋಗಿ ಪ್ರಾಣ ಕಳೆದುಕೊಂಡ ಸಹೋದರಿಯರು

    ಭಾನುವಾರ ಸಂಜೆ ಇದ್ದಕ್ಕಿದ್ದಂತೆ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿತು. ವೀಡಿಯೋದಲ್ಲಿ ಪೊಲೀಸ್ ಠಾಣೆಯ ಹೆಡ್‍ಕಾನ್‍ಸ್ಟೇಬಲ್ ಒಳಉಡುಪು ಧರಿಸಿ ಆವರಣದಲ್ಲಿ ಓಡಾಡುತ್ತಿದ್ದನು. ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸರನ್ನೂ ನಿಯೋಜಿಸಲಾಗಿದೆ. ಇದಲ್ಲದೇ ಮಹಿಳಾ ದೂರುದಾರರೂ ಅಲ್ಲಿಗೆ ಬರುತ್ತಿರುತ್ತಾರೆ. ಹೀಗಿರುವಾಗ ಆತ ಈ ರೀತಿ ಅರೆ ನಗ್ನವಾಗಿ ಓಡಾಡಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

    ವೀಡಿಯೋದಲ್ಲಿ, ಆತ ಪೊಲೀಸ್ ಠಾಣೆಯ ಕಚೇರಿಯ ಕಡೆಗೆ ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಸ್ವಲ್ಪ ಸಮಯದ ನಂತರ ಅವನು ಕಚೇರಿಯಿಂದ ಹೊರನಡೆದಿದ್ದಾನೆ. ವಿಷಯ ತಿಳಿದ ಎಸ್‍ಪಿ ಡಾ.ಕೌಸ್ತುಭ್ ಅವರು, ತಕ್ಷಣವೇ ಪೇದೆ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: 5 ದಿನವಾದ್ರೂ ಸಿಗದ ಆ್ಯಸಿಡ್ ನಾಗನ ಸುಳಿವು- ಪಾಗಲ್ ಪ್ರೇಮಿಯ ಪ್ರೀಪ್ಲ್ಯಾನ್ ಕೇಳಿ ಪೊಲೀಸ್ರೇ ಶಾಕ್

    ಈ ಕುರಿತು ಎಸ್‍ಪಿ ಅವರು, ಎಲ್ಲ ಪೊಲೀಸರಿಗೂ ಸಮವಸ್ತ್ರ ಧರಿಸಿ ಶಿಸ್ತಿನಿಂದ ಇರುವಂತೆ ಸೂಚಿಸಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಠಾಣೆ ಆವರಣದಲ್ಲಿ ಒಳ ಉಡುಪು ಧರಿಸುವುದು ಸಲ್ಲದು. ಅಲ್ಲಿಗೆ ಮಹಿಳೆಯರೂ ದೂರುಗಳೊಂದಿಗೆ ಬರುತ್ತಲೇ ಇರುತ್ತಾರೆ. ವೀಡಿಯೋ ಆಧಾರದ ಮೇಲೆ ಪೇದೆಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.