Tag: ಹೆಡ್ಗೆವಾರ್

  • RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು

    RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು

    – ಈ ಬಾರಿಯ ವಿಜಯದಶಮಿ ಅತ್ಯಂತ ವಿಶೇಷ
    – ಶತಮಾನೋತ್ಸವ ಸಂಭ್ರಮದಲ್ಲಿರುವ ಆರ್‌ಎಸ್‌ಎಸ್‌ ಹಾಡಿಹೊಗಳಿದ ಪ್ರಧಾನಿ

    ನವದೆಹಲಿ: ಆರ್‌ಎಸ್‌ಎಸ್‌ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು (Nation First) ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶ್ಲಾಘಿಸಿದ್ದಾರೆ.

    ತಮ್ಮ 126ನೇ ಮನ್‌ ಕೀ ಬಾತ್‌ (Man Ki Baat) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶತಮಾನೋತ್ಸವ ಸಂಭ್ರಮದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಹಾಡಿಹೊಗಳಿದರು. ಇದನ್ನೂ ಓದಿ: ಮನ್ ಕೀ ಬಾತ್‌ನಲ್ಲಿ ಅಕ್ಷರ ಮಾಂತ್ರಿಕ ಎಸ್‌.ಎಲ್‌ ಭೈರಪ್ಪರನ್ನ ನೆನೆದ ಮೋದಿ

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ನನ್ನ ಪ್ರೀತಿಯ ದೇಶವಾಸಿಗಳೇ, ಇನ್ನು ಕೆಲವೇ ದಿನಗಳಲ್ಲಿ ನಾವು ವಿಜಯದಶಮಿ (Vijayadashami) ಆಚರಿಸಲಿದ್ದೇವೆ. ಈ ಬಾರಿಯ ವಿಜಯದಶಮಿ ಮತ್ತೊಂದು ಕಾರಣದಿಂದ ಬಹಳ ವಿಶೇಷವೆನಿಸುತ್ತದೆ. ಇದೇ ದಿನದಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪನೆಯ 100ನೇ ವರ್ಷವೂ ಆಗಿದೆ. ಒಂದು ಶತಮಾನದ ಈ ಪ್ರಯಾಣವು ಎಷ್ಟು ಅದ್ಭುತ, ಅಭೂತಪೂರ್ವವಾಗಿದೆ ಮತ್ತು ಅಷ್ಟೇ ಸ್ಫೂರ್ತಿದಾಯಕವಾಗಿದೆ. ಇದನ್ನೂ ಓದಿ: ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    100 ವರ್ಷಗಳ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನೆಯಾದಾಗ, ದೇಶವು ಶತಮಾನಗಳ ಗುಲಾಮಗಿರಿಯ ಸರಪಣಿಯಲ್ಲಿ ಬಂಧಿಸಲ್ಪಟ್ಟಿತ್ತು. ಶತಮಾನಗಳ ಈ ಗುಲಾಮಗಿರಿಯು ನಮ್ಮ ಸ್ವಾಭಿಮಾನ ಮತ್ತು ಆತ್ಮವಿಶ್ವಾಸಕ್ಕೆ ಆಳವಾದ ಗಾಯವುಂಟು ಮಾಡಿತ್ತು. ವಿಶ್ವದ ಅತ್ಯಂತ ಪ್ರಾಚೀನ ನಾಗರಿಕತೆಯ ಮುಂದೆ ಸ್ವಯಂ ಗುರುತು ಇಲ್ಲದಂತಹ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ದೇಶವಾಸಿಗಳು ಕೀಳರಿಮೆಯ ಬಲಿಪಶುಗಳಾಗುತ್ತಿದ್ದರು. ಆದ್ದರಿಂದಲೇ ದೇಶದ ಸ್ವಾತಂತ್ರ್ಯದೊಂದಿಗೆ ಸೈದ್ಧಾಂತಿಕ ಗುಲಾಮಗಿರಿಯಿಂದಲೂ ಮುಕ್ತವಾಗುವುದು ಅಗತ್ಯವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಪರಮಪೂಜ್ಯ ಡಾ. ಹೆಡ್ಗೆವಾರ್ ಅವರು ಈ ವಿಷಯ ಕುರಿತು ಚಿಂತಿಸಲಾರಂಭಿಸಿದರು ಮತ್ತು ಈ ಭಗೀರಥ ಕಾರ್ಯಕ್ಕಾಗಿ ಅವರು 1925 ರಲ್ಲಿ ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ‘ರಾಷ್ಟ್ರೀಯ ಸ್ವಯಂಸೇವಕ ಸಂಘ’ ಸ್ಥಾಪಿಸಿದರು.

    ಡಾಕ್ಟರ್ ಹೆಡ್ಗೆವಾರ್ ಅವರ ನಿಧನಾನಂತರ, ಪರಮಪೂಜ್ಯ ಗುರೂಜಿ ಅವರು ರಾಷ್ಟ್ರ ಸೇವೆಯ ಈ ಮಹಾಯಜ್ಞವನ್ನು ಮುನ್ನಡೆಸಿದರು. ಪರಮ ಪೂಜ್ಯ ಗುರೂಜಿಯವರು ʻರಾಷ್ಟ್ರಾಯ ಸ್ವಾಹಾ, ರಾಷ್ಟ್ರಾಯ ಇದಂ ನ ಮಮʼ ಎನ್ನುತ್ತಿದ್ದರು. ಅಂದ್ರೆ, ಇದು ನನ್ನದಲ್ಲ, ಇದು ರಾಷ್ಟ್ರದ್ದು ಎಂದರ್ಥ. ಇದರಲ್ಲಿ ಸ್ವಾರ್ಥವನ್ನು ತೊರೆದು ರಾಷ್ಟ್ರಕ್ಕಾಗಿ ಸಮರ್ಪಣಾ ಭಾವದಿಂದ ಕೆಲಸ ಮಾಡುವಂತಹ ಪ್ರೇರಣೆ ಅಡಗಿದೆ. ಗುರೂಜಿ ಗೋಲ್ವಾಲ್ಕರ್ ಅವರ ಈ ವಾಕ್ಯವು ಲಕ್ಷಾಂತರ ಸ್ವಯಂ ಸೇವಕರಿಗೆ ತ್ಯಾಗ ಮತ್ತು ಸೇವೆಯ ಹಾದಿ ತೋರಿಸಿತು. ಏಕೆಂದ್ರೆ ತ್ಯಾಗ ಮತ್ತು ಸೇವಾ ಭಾವನೆ ಹಾಗೂ ಶಿಸ್ತಿನ ಬೋಧನೆಯ ಸಂಘದ ನಿಜವಾದ ಶಕ್ತಿಯಾಗಿದೆ. ಇಂದು RSS ನೂರು ವರ್ಷಗಳಿಂದ ಅವಿಶ್ರಾಂತವಾಗಿ, ಅವಿರತವಾಗಿ ರಾಷ್ಟ್ರದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ಆದ್ದರಿಂದಲೇ ದೇಶದಲ್ಲಿ ಯಾವುದೇ ನೈಸರ್ಗಿಕ ವಿಕೋಪ ಎಲ್ಲಿಯೇ ಎದುರಾಗಲಿ, RSSನ ಸ್ವಯಂಸೇವಕರು ಎಲ್ಲರಿಗಿಂತ ಮೊದಲು ಅಲ್ಲಿಗೆ ತಲುಪುತ್ತಾರೆ ಎಂಬುದನ್ನು ನಾವು ನೋಡುತ್ತೇವೆ. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

    ಲಕ್ಷಾಂತರ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು (nation first) ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ. ರಾಷ್ಟ್ರಸೇವೆಯ ಮಹಾಯಜ್ಞದಲ್ಲಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳುತ್ತಿರುವ ಪ್ರತಿಯೊಬ್ಬ ಸ್ವಯಂಸೇವಕರಿಗೂ ನನ್ನ ಶುಭಹಾರೈಕೆಗಳನ್ನು ತಿಳಿಸುತ್ತಿದ್ದೇನೆ.

  • ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ

    ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ

    ನವದೆಹಲಿ: ಡಾ.ಹೆಡ್ಗೆವಾರ್ (Dr.Hedgewar) ಮತ್ತು ಸ್ವತಂತ್ರ ವೀರ ಸಾವರ್ಕರ್ (Veer Savarkar) ಅವರ ಅಧ್ಯಾಯಗಳನ್ನು ಪಠ್ಯಪುಸ್ತಕಗಳಿಂದ (Textbook) ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿಕೆ ನೀಡಿದ್ದಾರೆ.

    ಶನಿವಾರ ನಡೆದ ವಿಡಿ ಸಾವರ್ಕರ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ (Textbook Revise) ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಟೀಕಿಸಿದರು. ಅಲ್ಲದೇ ಇದಕ್ಕಿಂತ ನೋವಿನ ಸಂಗತಿ ಇನ್ನೊಂದಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ಅವಧಿಯ ಪಠ್ಯಗಳಿಗೆ ಸರ್ಕಾರ ಕತ್ತರಿ- ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಠ್ಯಕ್ಕೆ ಬ್ರೇಕ್

    TEXTBOOK

    ಕರ್ನಾಟಕ ಸರ್ಕಾರ 6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಮತ್ತು ಕನ್ನಡ ಪಠ್ಯಪುಸ್ತಕಗಳ ಪರಿಷ್ಕರಣೆಯಲ್ಲಿ ಆರ್‌ಎಸ್‌ಎಸ್ (RSS) ಸಂಸ್ಥಾಪಕ ಹೆಡ್ಗೆವಾರ್ ಮತ್ತು ಹಿಂದುತ್ವದ ಸಿದ್ಧಾಂತವನ್ನು ಹೊಂದಿದ್ದ ವಿಡಿ ಸಾವರ್ಕರ್ ಅವರ ಅಧ್ಯಾಯಗಳನ್ನು ಕೈಬಿಡಲು ಕರ್ನಾಟಕ ಕ್ಯಾಬಿನೆಟ್ ಗುರುವಾರ ಅನುಮೋದನೆ ನೀಡಿದ ಬಳಿಕ ನಿತಿನ್ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ 2 ರಾಜ್ಯಗಳು – ಸರ್ಕಾರಕ್ಕೆ ಮತ್ತಷ್ಟು ತಲೆನೋವು

    ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಶಾಲಾ ಪಠ್ಯಕ್ರಮದಿಂದ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡ್ಗೆವಾರ್ ಮತ್ತು ವಿಡಿ ಸಾವರ್ಕರ್ ಅವರ ಪಠ್ಯಗಳನ್ನು ಕೈಬಿಡುವುದಾಗಿ ಜೂನ್ 15ರಂದು ಘೋಷಣೆ ಮಾಡಿದ್ದರು. ಕೆಬಿ ಹೆಡ್ಗೆವಾರ್ ಅವರ ಪಠ್ಯಕ್ರಮವನ್ನು ಕೈಬಿಡಲಾಗಿದೆ. ಕಳೆದ ವರ್ಷ ಬಿಜೆಪಿ (BJP) ಸರ್ಕಾರ ಏನೇ ಬದಲಾವಣೆಗಳನ್ನು ತಂದಿದ್ದರೂ ಸಹಿತ ನಾವು ಅದನ್ನು ಬದಲಾಯಿಸಿ ಮರುಪರಿಚಯಿಸಿದ್ದೇವೆ. ಎಲ್ಲಾ ವಿವರಗಳು ಶೀಘ್ರವೇ ಲಭ್ಯವಾಗಲಿದೆ ಎಂದರು. ಇದನ್ನೂ ಓದಿ: PublicTV Explainer: ಗೃಹಜ್ಯೋತಿ ಗ್ಯಾರಂಟಿ- ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ ಶಾಲಾ ಪಠ್ಯಪುಸ್ತಕಗಳ ಪಠ್ಯಕ್ರಮಗಳನ್ನು ಪರಿಷ್ಕರಣೆ ಮಾಡುವ ಸಲುವಾಗಿ ಸಂಪುಟ ಸಭೆ ನಡೆಸಿದ್ದು, 10ನೇ ತರಗತಿ ಕನ್ನಡ ಪಠ್ಯಪುಸ್ತಕದಿಂದ ಹೆಡ್ಗೆವಾರ್ ಮತ್ತು ಸಾವರ್ಕರ್ ಅಧ್ಯಾಯಗಳನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರೋದೇ ಲೇಸು ಎಂದಿದ್ದೆ: ನಿತಿನ್ ಗಡ್ಕರಿ

  • ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ

    ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ

    ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‍ಎಸ್) ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು 2022-23ನೇ ಸಾಲಿನ ಹತ್ತನೆಯ ತರಗತಿಯ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಲಾಗಿದೆ. ಇದು ಶಿಕ್ಷಣದ ಕೇಸರೀಕರಣದ ಮುಂದುವರಿದ ಭಾಗವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ವಿರೋಧಿಸಿದೆ.

    ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂಬ ತಲೆಬರಹದಲ್ಲಿ ಹೆಡ್ಗೆವಾರ್ ಭಾಷಣವನ್ನು ಹತ್ತನೇ ತರಗತಿಯ ಕನ್ನಡ ಗದ್ಯಪುಸ್ತಕದಲ್ಲಿ ಐದನೇ ಪಠ್ಯವಾಗಿ ಸೇರಿಸಿದೆ. ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರ್‌ಎಸ್‍ಎಸ್ ಸಂಸ್ಥಾಪಕ ಹೆಡ್ಗೆವಾರ್ ಹೇಗೆ ಆದರ್ಶ ಪುರುಷನಾಗಲು ಸಾಧ್ಯ ಎಂದು ಕ್ಯಾಂಪಸ್ ಫ್ರಂಟ್ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೆವಾರ್ ಭಾಷಣವನ್ನು ಓದಲಿದ್ದಾರೆ ವಿದ್ಯಾರ್ಥಿಗಳು

    ಕಾರಣವೇನು?
    ಹೆಗ್ಡೆವಾರ್ ಅವರ ಶಿಕ್ಷಣದ ನಂತರ ಬಂಗಾಳದಲ್ಲಿ ಅನುಶೀಲನ್ ಸಮಿತಿ(ಹಿಂದೂ ಕ್ರಾಂತಿಕಾರಿಗಳು) ಅದರ ಭಾಗವಾಗಿದ್ದರು. 1920ರ ದಶಕದಲ್ಲಿ ಕಾಂಗ್ರೆಸ್‍ಗೆ ಸೇರಿದರು. ಆದರೆ ಹಿಂದೂ ಮತ್ತು ಮುಸಲ್ಮಾನರ ನಡುವೆ ಐಕ್ಯತೆಯ ನೀತಿಯನ್ನು ಕಾಂಗ್ರೆಸ್ ಪಾಲಿಸುತ್ತಿದೆಯೆಂದು ಅದನ್ನು ತೊರೆದರು. ಖಿಲಾಫತ್ ಹೋರಾಟದಿಂದಾಗಿ ಮಹಾತ್ಮ ಗಾಂಧಿಯವರು ಆರಂಭಿಸಿದ ಅಸಹಕಾರ ಚಳುವಳಿಯನ್ನು ಹೆಡ್ಗೆವಾರ್ ಒಪ್ಪಲಿಲ್ಲ, ನಂತರ ಹಿಂದೂ ರಾಷ್ಟ್ರದ ಗುರಿಗಾಗಿ 1925ರಲ್ಲಿ ಆರ್‌ಎಸ್‌ಎಸ್‌ ಸ್ಥಾಪಿಸಿದರು.

    1929ರಲ್ಲಿ ಲಾಹೋರ್ ಅಧಿವೇಶನದಲ್ಲಿ ಕಾಂಗ್ರೆಸ್ ಪೂರ್ಣ ಸ್ವರಾಜ್ ಅಂಗೀಕರಿಸಿತು. ಕಾಂಗ್ರೆಸ್ ತ್ರಿವರ್ಣ ಧ್ವಜವನ್ನು ಹಾರಿಸಿದಾಗ ಅವರು ಭಗವಾಧ್ವಜವನ್ನು ಹಾರಿಸಲು ಆರ್‌ಎಸ್‍ಎಸ್ ಕಾರ್ಯಕರ್ತರನ್ನು ಒತ್ತಾಯಿಸಿದರು. ಸಂಘದ ಯಾವುದೇ ಜವಾಬ್ದಾರಿಯುತ ಕಾರ್ಯಕರ್ತರು 1930ರ ದಶಕದಲ್ಲಿ ನಡೆದ ಗಾಂಧೀಜಿಯವರ ದಂಡಿಯಾತ್ರೆ ಅಥವಾ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಬಾರದು ಎಂದು ಸಿ.ಪಿ.ಭಿಷಿಕರ್ ಬರೆದ ಹೆಡ್ಗೆವಾರ್‌ ಅವರ ಅಧಿಕೃತ ಜೀವನ ಚರಿತ್ರೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

    ಇಂತಹ ದೇಶದ್ರೋಹಿಯ ಭಾಷಣವನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದು ಶಿಕ್ಷಣದಲ್ಲಿ ಹಿಂದುತ್ವ ಸಿದ್ಧಾಂತದ ಹೇರಿಕೆಯೆಂಬುದು ಸ್ಪಷ್ಟವಾಗಿದೆ. ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ವಿರೋಧಿಸಿದೆ. ಈ ಹೆಡ್ಗೆವಾರ್ ಭಾಷಣವನ್ನು ಶೀಘ್ರವೇ ಪಠ್ಯಕ್ರಮದಿಂದ ಕೈ ಬಿಡಬೇಕೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.