Tag: ಹೆಡ್ ಲೈಟ್

  • ವಾಹನ ಸವಾರರೇ ಎಚ್ಚರ- ಹೆಡ್ ಲೈಟ್‌ಗಳಲ್ಲಿ ಹೈ ಬೀಮ್ ಹಾಕಿ ವಾಹನ ಚಲಾಯಿಸಿದರೆ ಕೇಸ್: ಶ್ರೀರಾಮುಲು

    ವಾಹನ ಸವಾರರೇ ಎಚ್ಚರ- ಹೆಡ್ ಲೈಟ್‌ಗಳಲ್ಲಿ ಹೈ ಬೀಮ್ ಹಾಕಿ ವಾಹನ ಚಲಾಯಿಸಿದರೆ ಕೇಸ್: ಶ್ರೀರಾಮುಲು

    ಬೆಂಗಳೂರು: ಯಾವುದೇ ಮಾದರಿಯ ವಾಹನಗಳಲ್ಲಿನ ಹೆಡ್ ಲೈಟ್‌ಗಳಲ್ಲಿ ಹೈ ಬೀಮ್ ಹಾಕಿ ವಾಹನ ಚಾಲನೆ ಮಾಡಿದರೆ ದಂಡ ಹಾಕುವ ಜೊತೆ ಪ್ರಕರಣವನ್ನು ದಾಖಲು ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ವೈ.ಎಂ ಸತೀಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೈ ಬೀಮ್ ಲೈಟ್‌ನಿಂದ ಅಪಘಾತವಾದ ಪ್ರಕರಣಗಳು ಇತ್ತೀಚೆಗೆ ಯಾವುದೂ ನಮ್ಮ ಗಮನಕ್ಕೆ ಬಂದಿಲ್ಲ. ಆದರೂ ನಾವು ಹೈ ಬೀಮ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. 295 ಕೋಟಿ ರೂ. ಹಣ ರಸ್ತೆ ಸುರಕ್ಷತೆಗೆ ಇರಿಸಲಾಗಿದೆ. ಹೈ ಬೀಮ್ ಲೈಟ್ ಹಾಕಿಕೊಂಡು ಬರುವ ಟ್ರಕ್, ಬೈಕ್ ಸವಾರರಿಗೆ 500 ರೂ.ದಂಡ ಹಾಕುವ ಕೆಲಸ ಮಾಡಲಾಗಿದೆ ಎಂದರು. ಇದನ್ನೂ ಓದಿ: ಸಾರಿಗೆ ಇಲಾಖೆ ನೌಕರರಿಗೆ ವೇತನ ಪರಿಷ್ಕರಣೆ ಮಾಡಲು ಸರ್ಕಾರ ಸಿದ್ಧ – ಶ್ರೀರಾಮುಲು

    ರಾಜ್ಯದ ಕೆಲವೊಂದು ಜಾಗ ಬ್ಲಾಕ್ ಸ್ಪಾಟ್ ಎಂದು ಗುರುತಿಸಲಾಗಿದೆ. 342 ಬ್ಲಾಕ್ ಸ್ಪಾಟ್ ಉಳಿದಿವೆ. ಈಗಾಗಲೇ 600 ಬ್ಲಾಕ್ ಸ್ಪಾಟ್ ತೆರವು ಮಾಡಿದ್ದು, ಉಳಿದವನ್ನೂ ತೆಗೆಯುವ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ತಿಂಗಳಾದ್ರೂ ಶಾಲಾ ಆವರಣದ ನೀರು ಹೊರಹಾಕದೇ ನಿರ್ಲಕ್ಷ್ಯ- ಇದು ಹೆಚ್‍ಡಿಕೆ ಸ್ವಕ್ಷೇತ್ರದ ದುಸ್ಥಿತಿ

    ಹೈ ಬೀಮ್ ಹಾಕಿದವರಿಗೆ ದಂಡದ ಜೊತೆ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ಕಳೆದ 3-4 ವರ್ಷಗಳಲ್ಲಿ 8 ಸಾವಿರ ಕೇಸ್ ಇತ್ತು. ಈಗ ಕೇವಲ 703 ಕೇಸ್ ಇದೆ. ಜಾಗೃತಿಯಿಂದ ಕೇಸ್ ಕಡಿಮೆ ಆಗಿದೆ ಅಂತ ಮಾಹಿತಿ ನೀಡಿದರು.

    Live Tv
    [brid partner=56869869 player=32851 video=960834 autoplay=true]