Tag: ಹೆಣ್ಣುಮಕ್ಕಳು

  • ಅಮೃತಹಳ್ಳಿಯ ದಾಸರಹಳ್ಳಿಯಲ್ಲಿ ಜೋಡಿ ಕೊಲೆ – ಮಲತಂದೆಯಿಂದಲೇ ಇಬ್ಬರು ಹೆಣ್ಣು ಮಕ್ಕಳ ಹತ್ಯೆ!

    ಅಮೃತಹಳ್ಳಿಯ ದಾಸರಹಳ್ಳಿಯಲ್ಲಿ ಜೋಡಿ ಕೊಲೆ – ಮಲತಂದೆಯಿಂದಲೇ ಇಬ್ಬರು ಹೆಣ್ಣು ಮಕ್ಕಳ ಹತ್ಯೆ!

    ಬೆಂಗಳೂರು: ಮಲತಂದೆಯಿಂದಲೇ ಇಬ್ಬರು ಹೆಣ್ಣುಮಕ್ಕಳ ದಾರುಣ ಕೊಲೆಯಾಗಿರುವ ಘಟನೆ ಬೆಂಗಳೂರಿನ (Bengaluru) ಅಮೃತಹಳ್ಳಿ ದಾಸರಹಳ್ಳಿಯಲ್ಲಿ (Amruthahalli Dasarahalli) ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ.

    ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವ ಉತ್ತರ ಭಾರತ (North India) ಮೂಲದ ಮಹಿಳೆಯ ಮನೆಯಲ್ಲಿ ಘಟನೆ ನಡೆದಿದೆ. ಸ್ವತಃ ಮಲತಂದೆಯೇ ಸುಮಾರು 14 ಹಾಗೂ 16 ವರ್ಷದ ಹೆಣ್ಣು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ, ಎಸ್ಕೇಪ್‌ ಆಗಿದ್ದಾನೆ. ಸುಮಿತ್‌ ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಮಲತಂದೆ. ಸೃಷ್ಠಿ (14) ಮತ್ತು ಸೋನಿಯಾ(16) ಕೊಲೆಯಾದ ಅಪ್ರಾಪ್ತ ಮಕ್ಕಳು ಪೊಲೀಸ್‌ ಮೂಲಗಳು ತಿಳಿಸಿವೆ.

    ಸದ್ಯ ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು, ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಡಾಗ್ ಸ್ಕ್ವಾಡ್, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಹಾಗೂ ಸೊಕೊ ಟೀಂ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇಬ್ಬರು ಹೆಣ್ಣುಮಕ್ಕಳ ಜೋಡಿ ಜೊಲೆ ಏರಿಯಾ ಜನರನ್ನ ಭಯಭೀತಗೊಳಿಸಿದೆ.

    ಪ್ರಕರಣದ ಕುರಿತು ಮಾಹಿತಿ ನೀಡಿದ ಈಶಾನ್ಯ ವಿಭಾಗ ಡಿಸಿಪಿ ಸುಜೀತ್, ಶನಿವಾರ ಮಧ್ಯಾಹ್ನ 3:30ರ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಮಕ್ಕಳನ್ನು ಮಲತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಯಿ ಅನಿತಾ ದೂರು ಕೊಟ್ಟಿದ್ದಾರೆ. ಅಮೃತಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಾಯಿ ಅನಿತಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮಲ ತಂದೆ ಸುಮಿತ್ ಪುಡ್ ಡಿಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಎಂದು ತಿಳಿಸಿದ್ದಾರೆ.

    ಅಲ್ಲದೇ ಆರೋಪಿ ಯಾವ ಕಾರಣಕ್ಕೆ ಮಕ್ಕಳನ್ನ ಕೊಲೆ ಮಾಡಿದ್ದಾನೆ ಅನ್ನೋದು ತಿಳಿದುಬಂದಿಲ್ಲ. ಸದ್ಯ ಆರೋಪಿ ತಲೆಮರಿಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.

  • ದಲಿತ ಹೆಣ್ಣುಮಕ್ಕಳನ್ನ ಮುಸ್ಲಿಂಗೆ ಮತಾಂತರ ಮಾಡುವ ಕೆಲಸ ಆಗುತ್ತಿದೆ: ಮುನಿರತ್ನ ಆರೋಪ

    ದಲಿತ ಹೆಣ್ಣುಮಕ್ಕಳನ್ನ ಮುಸ್ಲಿಂಗೆ ಮತಾಂತರ ಮಾಡುವ ಕೆಲಸ ಆಗುತ್ತಿದೆ: ಮುನಿರತ್ನ ಆರೋಪ

    ಬೆಂಗಳೂರು: ದಲಿತ ಹೆಣ್ಣುಮಕ್ಕಳನ್ನ (Dalit Woman) ಮುಸ್ಲಿಂಗೆ (Muslim) ಮತಾಂತರ (Conversion) ಮಾಡುವ ಕೆಲಸ ಆಗುತ್ತಿದೆ. ಇತ್ತೀಚಿಗೆ ಬಾಲಕಿಯೊಬ್ಬಳನ್ನು ಮತಾಂತರ ಮಾಡಿ ಮುಮ್ತಾಜ್ ಎಂಬ ಹೆಸರಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ (Munirathna) ಆರೋಪಿಸಿದ್ದಾರೆ.

    ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೋಲಿ ಆಟವಾಡಿ ಮನೆಗೆ ಬರುವಾಗ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಮುಸ್ಲಿಂ ಯುವಕನಿಂದ ಕೃತ್ಯ ನಡೆದಿದೆ. ಮೋಹನ್ ನಗರದಲ್ಲಿ ಘಟನೆ ನಡೆದಿದೆ. ಆ ವಿಡಿಯೋ ನಂದಿನಿ ಲೇಔಟ್ ಪೊಲೀಸರಿಗೆ ಕಳುಹಿಸಿದ ಬಳಿಕ ಆರೋಪಿಯನ್ನು ಅರೆಸ್ಟ್ ಮಾಡಿದ್ದಾಗಿ ಹೇಳಿದ್ದಾರೆ ಎಂದರು. ಇದನ್ನೂ ಓದಿ: ಮತದಾನ ವೇಳೆ ಗುಂಡಿನ ದಾಳಿ, ಇವಿಎಂ ಧ್ವಂಸ – ಮಣಿಪುರದ 11 ಮತಗಟ್ಟೆಗಳಲ್ಲಿ ಮರು ಮತದಾನ

    ಈ ಪ್ರಕರಣವನ್ನು ವಾಪಸ್ ಪಡೆಯದೆ ಹೋದರೆ ಜೈಲಿನಿಂದ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಬಾಲಕಿ ಎಂಟನೇ ತರಗತಿ ಫಸ್ಟ್ ಕ್ಲಾಸ್ ಬಂದಿದೆ. ಆಕೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರೇಪ್ ಮಾಡಲಾಗಿದೆ. ರೇಪ್ ಮಾಡಿದವನಿಗೆ ಮೂರು ಮದುವೆ ಆಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ನಮ್ಮ ಕ್ಷೇತ್ರದಲ್ಲಿ ವೀಲ್ಹಿಂಗ್, ರೇಪ್, ದಬ್ಬಾಳಿಕೆ ನಡೆಯುತ್ತಿದೆ. 50 ರೂ. ಪಡೆಯೋ ಜಾಗಕ್ಕೆ 500 ರೂ. ಪಡೆಯಲಾಗಿದೆ. ಮೂರು ವಾರ್ಡ್‌ನಲ್ಲಿ ದಿನನಿತ್ಯ ಒಂದಲ್ಲ ಒಂದು ಘಟನೆಗಳು ನಡೆಯುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಮಂಡ್ಯದಿಂದ ಸುಮಲತಾ ದೂರ; ಹೆಚ್‌ಡಿಕೆ ಪರ ಪ್ರಚಾರಕ್ಕಿಳಿಯದ ಸಂಸದೆ – ಬರ್ತಾರೆ ನೋಡೋಣ ಎಂದ ಮಾಜಿ ಸಿಎಂ

    ಯುವತಿ ಕೇಸ್ ವಾಪಸ್ ಪಡೆಯೋದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ನಂದಿನಿ ಲೇಔಟ್ ಇನ್ಸ್ಪೆಕ್ಟರ್ ವರ್ಗಾವಣೆಗೆ ಹಲವು ಬಾರಿ ಪತ್ರ ಬರೆದರೂ ಪ್ರಯೋಜನ ಆಗಿಲ್ಲ. ಏ.4ರಂದು ಘಟನೆ ನಡೆದಿದೆ. 11 ಗಂಟೆ 34 ನಿಮಿಷಕ್ಕೆ ಡಿಸಿಪಿಗೆ ವೀಡಿಯೋ ಕಳುಹಿಸಿಕೊಟ್ಟೆ. ನಾನು ವೀಡಿಯೋ ಕಳುಹಿಸಿದ ಮೂರ್ನಾಲ್ಕು ದಿನದ ಹಿಂದೆ ಘಟನೆ ನಡೆದಿದೆ. ವೀಡಿಯೋ ಕಳುಹಿಸಿದ ಬಳಿಕ ಎಫ್‌ಐಆರ್ ಮಾಡಿ ಅರೆಸ್ಟ್ ಮಾಡಿದ್ದಾರೆ. ಕೇಸ್ ವಾಪಸ್ ಪಡೆಯುವಂತೆ ಒತ್ತಾಯ ಮಾಡಲಾಗುತ್ತಿದೆ. ಆರೋಪಿಗಳನ್ನು ಕಾಂಗ್ರೆಸ್‌ನವರು ರಕ್ಷಣೆ ಮಾಡುತ್ತಿದ್ದಾರೆ. ಆರೋಪಿಗಳು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು ಎಂದು ಆರೋಪ ಮಾಡಿದರು. ಇದನ್ನೂ ಓದಿ: ಇಂದು ಹುಬ್ಬಳ್ಳಿಗೆ ಜೆಪಿ ನಡ್ಡಾ – ನೇಹಾ ಕುಟುಂಬಸ್ಥರ ಭೇಟಿ ಸಾಧ್ಯತೆ

    ಲೆಕ್ಕ ಇಲ್ಲದಷ್ಟು ಮಂದಿ ಮುಸ್ಲಿಂಗೆ ಮತಾಂತರ ಆಗುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಹೆಚ್ಚು ಮತಾಂತರ ಮಾಡಲಾಗಿದೆ. ಇದೇ ರೀತಿ ಇನ್ನೊಂದು ಕೇಸ್ ಇದೆ. ಆ ಕುಟುಂಬ ಹೊರಗಡೆ ಬರೋದಕ್ಕೆ ಭಯ ಪಡುತ್ತಿದ್ದಾರೆ. ರಂಜಾನ್ ಹಬ್ಬದ ದಿನ ಘಟನೆ ನಡೆದಿದೆ. ಅದನ್ನು ಬೆಳಕಿಗೆ ತರುತ್ತೇವೆ. ಹುಬ್ಬಳಿಯಲ್ಲಿ ಆಗಿರೋ ನೇಹಾ ಮರ್ಡರ್‌ನಿಂದ ಜನರು ಭಯಪಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಹೋಗಿ ಮತ್ತೆ ಡಿಸಿಎಂ ಕಾಲು ಹಿಡಿದುಕೊಳ್ಳುತ್ತೇನೆ ಎಂದರು. ಇದನ್ನೂ ಓದಿ: ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ – ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಶ್ವಾಸ

  • ನಾಗರಪಂಚಮಿ ಹಬ್ಬ ಹೆಣ್ಣುಮಕ್ಕಳಿಗೆ ವಿಶೇಷ ಯಾಕೆ?

    ನಾಗರಪಂಚಮಿ ಹಬ್ಬ ಹೆಣ್ಣುಮಕ್ಕಳಿಗೆ ವಿಶೇಷ ಯಾಕೆ?

    ಇಂದು ನಾಗರಪಂಚಮಿ (Nagarapanchami). ನಾಡಿನಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಾಗ ದೇವನಿಗೆ ಹಾಲೆರೆಯುವ ಮೂಲಕ ನಾಡಿನಾದ್ಯಂತ ಸುಖ-ಸಮೃದ್ಧಿಯನ್ನು ಬೆಳಗಿಸಿಕೊಡುವಂತೆ ಪ್ರಾರ್ಥಿಸಲಾಗುತ್ತಿದೆ. ಅಂತೆಯೇ ನಾಗರಪಂಚಮಿಯನ್ನು ಹೆಣ್ಣು ಮಕ್ಕಳ ಹಬ್ಬವೆಂದೂ ಕರೆಯುತ್ತಾರೆ. ಹಾಗಾದ್ರೆ ನಾಗರಪಂಚಮಿಗೂ ಹೆಣ್ಣು ಮಕ್ಕಳಿಗೂ ಇರುವ ಸಂಬಂಧವೇನು..? ಈ ಹಬ್ಬ ಅಣ್ಣ-ತಂಗಿಯರಿಗೆ ಯಾಕೆ ವಿಶೇಷ ಎಂಬುದನ್ನು ಮುಂದೆ ಓದಿ..

    ಸ್ಕಂದ ಪುರಾಣದಲ್ಲಿ ಶ್ರೀಕೃಷ್ಣನ ಮಗನಾದ ಸಾಂಬನು ಶಿವಸುತ ಸುಬ್ರಹ್ಮಣ್ಯನಲ್ಲಿ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಎಂದು ಪ್ರಶ್ನೆ ಕೇಳುತ್ತಾನೆ. ಆಗ ಆತ ಒಂದು ಕಥೆಯನ್ನು ಹೇಳುತ್ತಾನೆ. ಇದನ್ನೂ ಓದಿ: Nagara Panchami: ಮಹಾರಾಷ್ಟ್ರದಲ್ಲಿ ನಾಗರಪಂಚಮಿ ಆಚರಣೆ ಹೇಗೆ?

    ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ ಓರ್ವ ಹೆಣ್ಣು ಹಾಗೂ 8 ಮಂದಿ ಗಂಡು ಮಕ್ಕಳಿದ್ದರು. ಒಂದು ದಿನ ಗರುಡನಿಂದ ಹೆದರಿದ್ದ ನಾಗರವೊಂದು ಈ ಹೆಣ್ಣುಮಗಳ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಕೂಡಲೇ ಈಕೆ ಭಕ್ತಿಯಿಂದ ನಾಗನಿಗೆ ಹಾಲು, ಫಲವಸ್ತುಗಳನ್ನು ಇಟ್ಟು ಸಾಕುತ್ತಾಳೆ. ಹೀಗೆ ಸಾಕಿ-ಸಲಹಿದ ಹೆಣ್ಣು ಮಗಳಿಗೆ ನಾಗನು ಪ್ರತಿದಿನ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರುವಾಗ ಒಂದು ದಿನ 8 ಮಂದಿ ಗಂಡು ಮಕ್ಕಳಲ್ಲಿ ಓರ್ವ ನನಗೆ ಚಿನ್ನ ಬೇಕು ಎಂದು ನಾಗರಾಜನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ.

    ಇದರಿಂದ ಕೋಪಗೊಂಡ ನಾಗಪ್ಪ, ಈತನ ಜೊತೆ ಉಳಿದ 7 ಮಂದಿಯನ್ನೂ ಕೊಂದು ಹೊರಟು ಹೋಗುತ್ತದೆ. ಇತ್ತ ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣವೆಂದು ಆಕೆ ದೇವರ ಎದುರಿನಲ್ಲಿಯೇ ಶಿರಚ್ಛೇದನಕ್ಕೆ ಮುಂದಾಗುತ್ತಾಳೆ. ಈ ವೇಳೆ ನಾರಾಯಣ ದೇವ ಪ್ರತ್ಯಕ್ಷವಾಗಿ ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆಕೆ ಯಶಸ್ವಿಯಾಗುತ್ತಾಳೆ. ಈ ದಿನವನ್ನೇ ಇಂದು ನಾವು ನಾಗರ ಪಂಚಮಿ ಹಬ್ಬವಾಗಿ ಆಚರಿಸುತ್ತೇವೆ. ಈ ಹಿನ್ನೆಲೆಯಿಂದಾಗಿ ನಾಗರಪಂಚಮಿ ಹೆಣ್ಣುಮಕ್ಕಳಿಗೆ ವಿಶೇಷವೂ ಆಗಿದೆ. ಇದನ್ನೂ ಓದಿ: Nagara Panchami: ಕರ್ನಾಟಕದ 10 ಪುಣ್ಯ ನಾಗಕ್ಷೇತ್ರ

    ನಾಗರ ಪಂಚಮಿ ನಾಡಿಗೆ ದೊಡ್ಡ ಹಬ್ಬ, ಅಣ್ಣ ಬರಲಿಲ್ಲಾ ಕರಿಯಾಕ ಅಂತ ಜಾನಪದ ಗೀತೆಯಿದೆ. ಉತ್ತರ ಕರ್ನಾಟಕ ಭಾಗದ ಹಬ್ಬಗಳ ಹೆಬ್ಬಾಗಿಲಾಗಿರುವ ಶ್ರಾವಣ ಮಾಸದಲ್ಲಿ ಆಚರಿಸುವ ಬಹು ದೊಡ್ಡ ಹಬ್ಬ ಇದು. ಈ ಹಬ್ಬಕ್ಕೆ ಮದುವೆಯಾದ ಹೆಣ್ಣು ಮಕ್ಕಳನ್ನು ತವರಿಗೆ ಕರೆದುಕೊಂಡು ಬರುವ ಪದ್ಧತಿ ಉತ್ತರ ಕರ್ನಾಟಕದಲ್ಲಿ ಇಂದಿಗೂ ಪ್ರಚಲಿತದಲ್ಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5,000 ವಿದ್ಯಾರ್ಥಿಗಳಿಗೆ ವಿಷವುಣಿಸಿದ ಬಳಿಕ ಇರಾನ್‌ನಲ್ಲಿ ಕಿಡಿಗೇಡಿಗಳ ಬಂಧನ ಪ್ರಾರಂಭ

    5,000 ವಿದ್ಯಾರ್ಥಿಗಳಿಗೆ ವಿಷವುಣಿಸಿದ ಬಳಿಕ ಇರಾನ್‌ನಲ್ಲಿ ಕಿಡಿಗೇಡಿಗಳ ಬಂಧನ ಪ್ರಾರಂಭ

    ಟೆಹ್ರಾನ್: ಕಳೆದ ವರ್ಷ ನವೆಂಬರ್‌ನಿಂದ ಇರಾನ್‌ನಲ್ಲಿ (Iran) ಹೆಣ್ಣುಮಕ್ಕಳಿಗೆ ಶಾಲೆಗೆ ಹೋಗದಂತೆ ತಡೆಯಲು ನಿಗೂಢವಾಗಿ ವಿಷವುಣಿಸಲಾಗುತ್ತಿತ್ತು. ದೇಶಾದ್ಯಂತ ಸುಮಾರು 5,000 ವಿದ್ಯಾರ್ಥಿಗಳು (Students) ವಿಷಪ್ರಾಶನಕ್ಕೊಳಗಾಗಿ (Poisoning) ಅಸ್ವಸ್ಥರಾದ ಬಳಿಕ ಇದೀಗ ಅಲ್ಲಿನ ಗುಪ್ತಚರ ಸಂಸ್ಥೆ ಘಟನೆಗೆ ಸಂಬಂಧಪಟ್ಟಂತೆ ಮೊದಲ ಬಾರಿ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ.

    ಇರಾನ್‌ನ ಸುಮಾರು 6 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಆರೋಪದ ಮೇಲೆ ಕೆಲ ವಿದ್ಯಾರ್ಥಿನಿಯರ ಪೋಷಕರು ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ವರದಿಗಳ ಪ್ರಕಾರ, ಇರಾನ್‌ನ ಉಪ ಆಂತರಿಕ ಸಚಿವ ಮಜಿದ್ ಮಿರಹ್ಮಾಡಿ, ಗುಪ್ತಚರ ಸಂಸ್ಥೆಗಳು ಆರೋಪಿಗಳ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ. ಹಲವರನ್ನು ಈಗಾಗಲೇ ಬಂಧನ ಮಾಡಲಾಗಿದೆ. ಸಂಬಂಧಿತ ಏಜೆನ್ಸಿಗಳು ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

    ಖುಜೆಸ್ತಾನ್, ಪಶ್ಚಿಮ ಅಜೆರ್ಬೈಜಾನ್, ಫಾರ್ಸ್, ಕೆರ್ಮಾನ್ಶಾ, ಖೊರಾಸನ್ ಹಾಗೂ ಅಲ್ಬೋರ್ಜ್ ಪ್ರದೇಶಗಳಲ್ಲಿ ಹಲವರ ಬಂಧನವಾಗಿದೆ. ನವೆಂಬರ್‌ನಲ್ಲಿ ಹಿಜಬ್ ಅನ್ನು ಸರಿಯಾಗಿ ಧರಿಸದೇ ಇದ್ದುದಕ್ಕೆ ಮಹ್ಸಾ ಅಮಿನಿ ಎಂಬ ಯುವತಿ ಬಂಧನವಾಗಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಳು. ಈ ಸಾವಿನ ಬಳಿಕ ಇರಾನ್‌ನಾದ್ಯಂತ ಭಾರೀ ಪ್ರತಿಭಟನೆ ನಡೆದು, ಹಲವರು ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗದಂತೆ ತಡೆಯಲು ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿದೆ.

    ಕಳೆದ ವರ್ಷ ನವೆಂಬರ್ ಅಂತ್ಯದ ವೇಳೆಗೆ ಇರಾನ್‌ನ ಶಿಯಾ ಮುಸ್ಲಿಂ ನಗರವಾದ ಕೋಮ್‌ನಲ್ಲಿ ಮೊದಲ ಬಾರಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿರುವ ಘಟನೆ ವರದಿಯಾಗಿತ್ತು. ಪ್ರಾರಂಭದಲ್ಲಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿಲ್ಲ, ಇದು ಆಕಸ್ಮಿಕ ಎಂದು ಹೇಳಲಾಯಿತಾದರೂ ಬಳಿಕ ಇಂತಹುದೇ ಘಟನೆ ದೇಶದೆಲ್ಲೆಡೆ ವರದಿಯಾಗುತ್ತಲೇ ಹೋಯಿತು. ಇದರಿಂದ ವಿದ್ಯಾರ್ಥಿನಿಯರು ಶಾಲೆಗೆ ಹೋಗುವುದನ್ನು ತಡೆಯಲು ಈ ಕೃತ್ಯ ಮಾಡಲಾಗುತ್ತಿದೆ ಎಂಬುದು ಬಯಲಿಗೆ ಬಂದಿತು. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    ಇರಾನ್‌ನ 31 ಪ್ರಾಂತ್ಯಗಳ ಪೈಕಿ 25 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿರುವ ಪ್ರಕರಣ ವರದಿಯಾಗಿದೆ. ಸುಮಾರು 230 ಶಾಲೆಗಳಲ್ಲಿ 5,000 ವಿದ್ಯಾರ್ಥಿಗಳಿಗೆ ವಿಷಪ್ರಾಶನ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಷ ಸೇವಿಸಿದ ವಿದ್ಯಾರ್ಥಿನಿಯರಲ್ಲಿ ಯಾರೂ ಇಲ್ಲಿಯವರೆಗೆ ಸಾವನ್ನಪ್ಪಿಲ್ಲ. ಆದರೆ ಅವರಲ್ಲಿ ಉಸಿರಾಟದ ತೊಂದರೆ, ವಾಕರಿಕೆ, ತಲೆತಿರುಗುವಿಕೆಗಳಂತಹ ಸಮಸ್ಯೆಗಳು ಕಂಡುಬಂದಿದೆ. ಇದನ್ನೂ ಓದಿ: ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

  • ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ ತಾಲಿಬಾನ್‌ ವಕ್ತಾರ

    ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ ತಾಲಿಬಾನ್‌ ವಕ್ತಾರ

    ಕಾಬೂಲ್: ಆಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿರುವ ಹೊತ್ತಿನಲ್ಲೇ ತಾಲಿಬಾನ್‌ ವಕ್ತಾರ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

    ತಾಲಿಬಾನ್‌ ವಕ್ತಾರ ಸುಹೇಲ್ ಶಾಹೀನ್ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ್ದಾರೆ. ಈ ಕುರಿತು ಟಿವಿ ಸಂದರ್ಶನದಲ್ಲಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಹೊಸ ಸರ್ಕಾರ ರಚನೆಗೆ ವಿಪಕ್ಷ ನಾಯಕ ಒಪ್ಪಿಗೆ

    ಅವರು ಹಿಜಾಬ್‌ಗೆ ಆದ್ಯತೆ ನೀಡುತ್ತಾರೆ. ನಾವು ನಮ್ಮ ಜನರನ್ನು ನಿರಾಕರಿಸಿಲ್ಲ ಎಂದು ಶಾಹೀನ್‌ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ದೂರದರ್ಶನ ವರದಿಗಾರರೊಬ್ಬರು ಸಂದರ್ಶನದ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

    ಇದಕ್ಕೆ ಅನೇಕರು ಟೀಕೆ ಹಾಗೂ ವ್ಯಂಗ್ಯಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಸುಹೇಲ್ ಶಾಹೀನ್ ಅವರದ್ದು ಬೂಟಾಟಿಕೆ ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ. ನಿಜಕ್ಕೂ ಇದು ಬೂಟಾಟಿಕೆ. ತಾಲಿಬಾನ್‌ಗಳು ತಮ್ಮ ಮಕ್ಕಳಿಗೆ ಶಾಲೆಗೆ ಹೋಗಲು ಅವಕಾಶ ಮಾಡಿಕೊಡುತ್ತಾರೆ. ಆದರೆ ಇತರರಿಗೆ ಶಿಕ್ಷಣವನ್ನು ನಿಷೇಧಿಸುತ್ತಾರೆ ಎಂದು ಮತ್ತೊಬ್ಬರು ಕಾಮೆಂಟ್‌ ಮಾಡಿ ಟೀಕಿಸಿದ್ದಾರೆ. ಇದನ್ನೂ ಓದಿ: ಉತ್ತರ ಕೊರಿಯಾದಲ್ಲಿ ಮೊದಲ ಬಾರಿಗೆ ಕೊರೊನಾ ಪ್ರಕರಣ ಪತ್ತೆ- ಕಟ್ಟುನಿಟ್ಟಿನ ಲಾಕ್‌ಡೌನ್‌ ಘೋಷಣೆ

    ಈ ವ್ಯಕ್ತಿಯ ಹೆಣ್ಣುಮಕ್ಕಳು ಹಿಜಬ್‌ಗೆ ಆದ್ಯತೆ ನೀಡಿ ಶಿಕ್ಷಣವನ್ನು ಪಡೆಯುತ್ತಾರೆ. ಈ ವ್ಯಕ್ತಿಯ ಒಬ್ಬ ಮಗಳು ಕತಾರಿ ಫುಟ್ಬಾಲ್ ತಂಡದಲ್ಲಿ ಆಡುತ್ತಾಳೆ. ಈ ವ್ಯಕ್ತಿಯ ಇನ್ನೊಬ್ಬ ಮಗಳಿಗೆ ಕತಾರಿ ಬಾಯ್‌ಫ್ರೆಂಡ್ ಇದ್ದಾನೆ. ಆಫ್ಘನ್ ಹುಡುಗಿಯರೂ ಹಿಜಬ್‌ಗೆ ಆದ್ಯತೆ ನೀಡುತ್ತಾರೆ. ಆದರೆ 6 ನೇ ತರಗತಿಯ ನಂತರ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅವರು ಕ್ರೀಡೆಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಇನ್ನೊಬ್ಬರು ಕುಟುಕಿದ್ದಾರೆ.

  • ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ

    ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ

    ಶಿವಮೊಗ್ಗ: ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ನಿಯಮಿತವಾಗಿ ಆರೋಗ್ಯ ಮೇಳಗಳನ್ನು ಆಯೋಜಿಸಬೇಕು. ಅದರಲ್ಲೂ ತಮ್ಮ ಆರೋಗ್ಯ ವಿಷಯದಲ್ಲಿ ಹಿಂಜರಿಯುವ ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ ಏರ್ಪಡಿಸಿಲಾಗಿತ್ತು. ಇದನ್ನೂ ಓದಿ: ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಆಪ್ತ?

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಸಚಿವರು, ಹೆಣ್ಣು ಮಕ್ಕಳು ಗರ್ಭಕೋಶದ ಸಮಸ್ಯೆ ಬಗ್ಗೆ ವೈದ್ಯರಲ್ಲಿ ತೋರಿಸಿಕೊಳ್ಳಲು ಹಿಂಜರಿಯುತ್ತಾರೆ. ಮಂಡ್ಯದಲ್ಲಿ ಆಯೋಜಿಸಿದ್ದ ಆರೋಗ್ಯ ಮೇಳ ಒಂದರಲ್ಲಿ 900 ಗರ್ಭಕೋಶದ ಸಮಸ್ಯೆಗಳು ವರದಿಯಾಗಿವೆ. ಆದ್ದರಿಂದ ಹೆಣ್ಣುಮಕ್ಕಳ ಗರ್ಭಕೋಶದ ಸಮಸ್ಯೆಗಳು ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳ ಬಗ್ಗೆ ಇಂತಹ ಮೇಳಗಳು ಮತ್ತು ವಿವಿಧ ಆರೋಗ್ಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

    ಎಲ್ಲೆಡೆ ಕಣ್ಣಿನ ದೃಷ್ಟಿ ಸಮಸ್ಯೆ ಹೆಚ್ಚಾಗಿದ್ದು, ಹೋಬಳಿ ಮಟ್ಟದಲ್ಲಿ ಈ ಸಮಸ್ಯೆಗಳ ತಪಾಸಣೆ ನಡೆಯಬೇಕು. ನಮ್ಮ ಪ್ರಧಾನಿಯವರು ಉತ್ತಮ ಆರೋಗ್ಯಕ್ಕೆ ಪೂರಕವಾಗಿರುವ ಯೋಗಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕ್ರೀಡಾ ವಲಯದಲ್ಲಿ, ಹಳ್ಳಿ ಹಳ್ಳಿಯಲ್ಲಿ ಯೋಗಾ ಕೇಂದ್ರ ತೆರೆಯುವ ಬಗ್ಗೆ ಚಿಂತಿಸಲಾಗುತ್ತಿದೆ. ಕೋವಿಡ್‍ನಂತಹ ಸಂಕಷ್ಟ ಮತ್ತೊಮ್ಮೆ ಬರಬಾರದೆಂದು ನಮ್ಮ ಪ್ರಧಾನಿಯವರು ಮನೆ ಮನೆಗೆ ತೆರಳಿ ಲಸಿಕೆ ನೀಡುವಂತಹ ವ್ಯವಸ್ಥೆ ಮಾಡಿದ್ದಾರೆ. ಆರೋಗ್ಯ ಸೇವೆ ನೀಡುತ್ತಿರುವ ವೈದ್ಯರು, ಕಾರ್ಯಕರ್ತರು ರಾಜ್ಯಕ್ಕೆ ಗೌರವ ತರುವ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಪೊಲೀಸರ ಮೇಲೆ ಕೈ ಮಾಡೋದು, ಠಾಣೆಗೆ ನುಗ್ಗೋ ಪ್ರಯತ್ನ ಮಾಡೋದು ಅಕ್ಷಮ್ಯ ಅಪರಾಧ: ಬಿಎಸ್‍ವೈ

    ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಪಾಟೀಲ್, ಸೇರಿದಂತೆ ಇತರರು ಹಾಜರಿದ್ದರು.

  • 18ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹೆಣ್ಣಿಗೆ ಬಾಳ ಸಂಗಾತಿ ಹೊಂದುವ ಹಕ್ಕು ಯಾಕಿಲ್ಲ: ಓವೈಸಿ ಪ್ರಶ್ನೆ

    18ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹೆಣ್ಣಿಗೆ ಬಾಳ ಸಂಗಾತಿ ಹೊಂದುವ ಹಕ್ಕು ಯಾಕಿಲ್ಲ: ಓವೈಸಿ ಪ್ರಶ್ನೆ

    ನವದೆಹಲಿ: 18ನೇ ವಯಸ್ಸಿಗೆ ಹೆಣ್ಣುಮಕ್ಕಳು ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕಿದೆ ಎಂದ ಮೇಲೆ, ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾಕಿಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 20ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಮಾತನಾಡಿದ ಓವೈಸಿ, ಮದುವೆ ವಯಸ್ಸನ್ನು ಹೆಚ್ಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿಲುವು ಪುರುಷ ಪ್ರಧಾನ ವ್ಯವಸ್ಥೆ ಬಗ್ಗೆ ಒಲವು ಹೊಂದಿದೆ ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ

    ಭಾರತೀಯ ನಾಗರಿಕ ತನಗೆ 18 ವರ್ಷ ತುಂಬಿದ ಮೇಲೆ ಯಾವುದೇ ಒಪ್ಪಂದಕ್ಕೆ ಸಹಿ ಹಾಕಬಹುದು, ಉದ್ಯಮ ನಡೆಸಬಹುದು, ಪ್ರಧಾನಿ ಹಾಗೂ ಸಂಸದರು, ಶಾಸಕರನ್ನೂ ಆಯ್ಕೆ ಮಾಡಬಹುದು. ಆದ್ದರಿಂದ ಕಾನೂನಿನಲ್ಲಿ ಈಗ ಇರುವ ಪುರುಷರ ಮದುವೆಯ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಬೇಕು ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದ್ದಾರೆ.

    ಭಾರತದಲ್ಲಿ ಬಾಲ್ಯ ವಿವಾಹಗಳು ಕಡಿಮೆಯಾಗಿರುವುದು ಕ್ರಿಮಿನಲ್ ಕಾನೂನಿನಿಂದಲ್ಲ, ಶಿಕ್ಷಣ ಮತ್ತು ಆರ್ಥಿಕ ಪ್ರಗತಿಯಿಂದಾಗಿ. ಹೀಗಿದ್ದೂ ಸುಮಾರು 1.2 ಕೋಟಿ ಮಕ್ಕಳ ಬಾಲ್ಯ ವಿವಾಹಗಳು ನಡೆದಿವೆ. ಈ ಸರ್ಕಾರ ಮಹಿಳೆಯರ ಏಳಿಗೆಗಾಗಿ ಏನನ್ನೂ ಮಾಡಿಲ್ಲ. 2005ರ ಹೊತ್ತಿಗೆ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.26ರಷ್ಟು ಇದ್ದದ್ದು, 2020ರ ವೇಳೆಗೆ ಶೇ.16ಕ್ಕೆ ಕುಸಿದಿದೆ ಎಂದು ಟೀಕಿಸಿದ್ದಾರೆ.

    ವೈಯಕ್ತಿಕ ಮಾಹಿತಿ ರಕ್ಷಣಾ ಮಸೂದೆಯಲ್ಲಿ, ಮಾಹಿತಿಯನ್ನು ಹಂಚಿಕೊಳ್ಳಬಹುದಾದ ನಾಗರಿಕರಿಗೆ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳುವ ಹಕ್ಕಿಲ್ಲ. ಇದೆಂತಹ ಲಾಜಿಕ್? ಕೇಂದ್ರ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ ಎಂಬುದು ನನ್ನ ಭಾವನೆ. 21 ವರ್ಷ ದಾಟಿದ್ದರೆ ಅಂತಹವರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು. ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಯಾರನ್ನು ಮದುವೆಯಾಗಬೇಕು, ಯಾವಾಗ ಮಗುವನ್ನು ಪಡೆಯಬೇಕು ಎಂಬುದು ಸಹ ಆಯ್ಕೆಯ ವಿಚಾರವಾಗಿದೆ. ಹೀಗಿದ್ದರೂ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಏನನ್ನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಕಾಲಿಗೆ ನಮಸ್ಕರಿಸಿದ ಮೋದಿ

    ಅಮೆರಿಕದಲ್ಲಿ 14 ವಯಸ್ಸಿನವರೂ ಮದುವೆಯಾಗಲು ಅವಕಾಶ ಇದೆ. ಬ್ರಿಟನ್, ಕೆನಡಾ ದೇಶಗಳು ಮದುವೆ ಕನಿಷ್ಠ ವಯಸ್ಸನ್ನು 16 ವರ್ಷಕ್ಕೆ ನಿಗದಿಪಡಿಸಿವೆ ಎಂದು ಓವೈಸಿ ಉದಾಹರಣೆ ಸಹಿತ ವಿವರಿಸಿದ್ದಾರೆ.

  • ಪುರುಷನಿಗೆ ಅರಿಶಿನ ಕುಂಕುಮ, ಹೂ ಮುಡಿಸಿ ಶಾಸ್ತ್ರ ಮಾಡಿದ್ರು!

    ಪುರುಷನಿಗೆ ಅರಿಶಿನ ಕುಂಕುಮ, ಹೂ ಮುಡಿಸಿ ಶಾಸ್ತ್ರ ಮಾಡಿದ್ರು!

    ಬೆಂಗಳೂರು: ಹೆಣ್ಣುಮಕ್ಕಳಿಗೆ ಹಾಗೂ ಮಹಿಳೆಯರಿಗೆ ನಮ್ಮ ದೇಶದಲ್ಲಿ ಬಗೆಬಗೆಯ ಶಾಸ್ತ್ರ ಸಂಪ್ರದಾಯ ಮಾಡುವುದು ಸರ್ವೆ ಸಾಮಾನ್ಯ. ಆದರೆ ಇಲ್ಲೊಂದು ಗ್ರಾಮದಲ್ಲಿ ಪುರುಷನಿಗೆ ಮಹಿಳೆಯರಿಗೆ ಮಾಡುವ ಶಾಸ್ತ್ರ ಸಂಪ್ರದಾಯ ಮಾಡಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ದೃಶ್ಯ ಕಳೆದ ಮೂರು ದಿನದ ಹಿಂದೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಭಕ್ತನಪಾಳ್ಯದಲ್ಲಿ ನಡೆದಿದೆ. ಈ ಗ್ರಾಮದ ಲೋಕೇಶ್ ಎಂಬುವವರ ಮನೆಯಲ್ಲಿ ಯುವತಿಗೆ ಆರತಿ ಶಾಸ್ತ್ರವನ್ನ ಹಮ್ಮಿಕೊಂಡಿದ್ದರು.

    ಈ ಹಿಂದೆಯೂ ಈ ಕುಟುಂಬದಲ್ಲಿ ಈ ಸಂಪ್ರದಾಯ ಮಾಡಲಾಗಿತ್ತು. ಹೀಗಾಗಿ ಕುಟುಂಬದಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನ ಉಳಿಸುವ ನಿಟ್ಟಿನಲ್ಲಿ ಈ ರೀತಿಯಲ್ಲಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಲೋಕೇಶ್ ಎಂಬುವವರಿಗೆ ಅರಿಶಿನ ಕುಂಕುಮ, ಹೂ ಮುಡಿಸಿ ಮಹಿಳೆಯರಿಗೆ ಮಾಡುವ ಎಲ್ಲಾ ರೀತಿಯ ಶಾಸ್ತ್ರವನ್ನ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಒಂದು ರೀತಿಯಲ್ಲಿ ನೋಡುಗರಲ್ಲಿ ಕುತೂಹಲ ಮೂಡಿಸಿದೆ.

    https://www.youtube.com/watch?v=rvN29942JPg

  • ಕಲ್ಯಾಣ ಮಂಟಪಕ್ಕೆ ಜೀನ್ಸ್ ಪ್ಯಾಂಟ್ ಹಾಕ್ಕೊಂಡು ಬಂದ ಹುಡ್ಗಿಯನ್ನ ಯಾರಾದ್ರು ಮದ್ವೆ ಆಗ್ತಾರಾ: ಕೇಂದ್ರ ಸಚಿವ

    ಕಲ್ಯಾಣ ಮಂಟಪಕ್ಕೆ ಜೀನ್ಸ್ ಪ್ಯಾಂಟ್ ಹಾಕ್ಕೊಂಡು ಬಂದ ಹುಡ್ಗಿಯನ್ನ ಯಾರಾದ್ರು ಮದ್ವೆ ಆಗ್ತಾರಾ: ಕೇಂದ್ರ ಸಚಿವ

    ಲಕ್ನೋ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಖಾತೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಅವರು ಹೆಣ್ಣು ಮಕ್ಕಳ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಮದುವೆ ಮಂಟಪಕ್ಕೆ ಹೆಣ್ಣುಮಕ್ಕಳು ಜೀನ್ಸ್ ಪ್ಯಾಂಟ್ ಹಾಕಿಕೊಂಡು ಬಂದಲ್ಲಿ ಯಾವ ಹುಡುಗನೂ ಆಕೆಯನ್ನು ಮದುವೆಯಾಗಲು ಒಪ್ಪಲ್ಲ ಅಂತ ಹೇಳಿದ್ದಾರೆ.

    ಗೊರಖ್ ಪುರದ ಮಹರಾಣಾ ಪ್ರತಾಪ್ ಶಿಕ್ಷಾ ಪರಿಷದ್ ನಲ್ಲಿ ನಡೆದ ಸ್ಥಾಪನಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಸಚಿವರು ಈ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ಭಾಷಣದ ವೇಳೆ ಭಾರತೀಯ ಸಂಸ್ಕೃತಿಗೆ ಹೆಚ್ಚಿನ ಮಹತ್ವ ನೀಡುವ ಭರದಲ್ಲಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮದುವೆ ದಿನ ಲೆಹೆಂಗಾ ಬದಲು ಶಾರ್ಟ್ಸ್ ತೊಟ್ಟ ವಧು- ಫೋಟೋ ವೈರಲ್

    ಯಾರಾದರೂ ದೇವಾಲಯದ ಪೂಜಾರಿಗೆ ಪ್ಯಾಂಟ್ ಧರಿಸಿ ಪೂಜೆ ಮಾಡು ಎಂದರೆ ಜನರು ಆತನನ್ನು ಹೇಗೆ ಪೂಜಾರಿಯಾಗಿ ನೋಡುವುದಿಲ್ಲವೋ ಅದೇ ರೀತಿಯಾಗಿ ಮದುವೆ ಮಂಟಪಕ್ಕೆ ಜೀನ್ಸ್ ಧರಿಸಿ ಹುಡುಗಿ ಬಂದರೆ ಯಾಕೆಯನ್ನು ಮದುವೆಯಾಗಲು ಯಾರಾದರೂ ಮುಂದೆ ಬರುತ್ತಾರಾ ಎಂದು ಪ್ರಶ್ನಿಸಿದ್ದಾರೆ.

    ಸಚಿವರು ಈ ಹೇಳಿಕೆ ನೀಡಿದ ಸಂದರ್ಭದಲ್ಲಿ ವೇದಿಕೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಇದ್ದರು.