Tag: ಹೆಬ್ಬಗೋಡಿ ಪೊಲೀಸ್‌

  • ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು

    ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು

    ಆನೇಕಲ್: ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಆರೋಪಿಯು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ (Tirupalya) ನಡೆದಿದೆ.

    ಮಂದಿರ ಮಂಡಲ್ (27) ಕೊಲೆಯಾದ ಮಹಿಳೆ ಹಾಗೂ ಸುಮನ್ ಮಂಡಲ್ (28) ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಪತಿಯ ಸ್ನೇಹಿತನೇ ಮಹಿಳೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ಬಿಎಸ್ಸಿ ಪದವೀಧರೆ ನಾಪತ್ತೆ – ಲವ್ ಜಿಹಾದ್ ಆರೋಪ, ಕೇಸ್‌ ದಾಖಲು

    ಕಳೆದ 8 ವರ್ಷದ ಹಿಂದೆ ಬಿಜೋನ್ ಮಂಡಲ್ ಎಂಬಾತನನ್ನು ಮಹಿಳೆ ವಿವಾಹವಾಗಿದ್ದಳು. ದಂಪತಿಗೆ ಆರು ವರ್ಷದ ಗಂಡು ಮಗನಿದ್ದ. ಎರಡು ವರ್ಷಗಳಿಂದ ಪತಿ, ಪತ್ನಿ ಇಬ್ಬರೂ ಬೇರ್ಪಟ್ಟಿದ್ದರು. ಬಳಿಕ ಮಹಿಳೆಯು ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಇದನ್ನೂ ಓದಿ: ಕೊಪ್ಪಳ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ – ಟ್ರಯಾಂಗಲ್ ಲವ್ ಸ್ಟೋರಿಗೆ ಹೆಣವಾದ್ನಾ?

    ಆರೋಪಿ ಸುಮನ್ ಮಂಡಲ್ ಕೊಲೆಯಾದ ಮಹಿಳೆ ಪತಿಯ ಸ್ನೇಹಿತನಾಗಿದ್ದ. ಒಂದು ವರ್ಷದ ಹಿಂದೆ ಬಿಜೋನ್ ಮಂಡಲ್, ಸುಮನ್ ಮಂಡಲ್ ಕೆಲಸಕ್ಕಾಗಿ ಅಂಡಮಾನ್‌ಗೆ ಹೋಗಿದ್ದರು. ಕಳೆದ 15 ದಿನಗಳ ಹಿಂದೆ ಆರೋಪಿಯು ವಾಪಸ್ ಆಗಿದ್ದ. ಮಂಗಳವಾರ ಸಂಜೆ ಮಹಿಳೆಯ ಮನೆಗೆ ಆರೋಪಿ ಹೋಗಿದ್ದ. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದು, ಆರೋಪಿ ಸುಮನ್ ಮಂಡಲ್ ಮನೆಯಲ್ಲಿದ್ದ ಚಾಕುವಿನಿಂದ ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿದ್ದ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ಕೊಲೆಯ ಬಳಿಕ ಆತನೂ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದೀಗ ಪೋಲೀಸರು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.

  • ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬನ ಕಾಲು ಕಟ್

    ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬನ ಕಾಲು ಕಟ್

    ಆನೇಕಲ್: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ (Two Bike Head-on collision) ವ್ಯಕ್ತಿ ಒಬ್ಬ ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ಶನಿವಾರ ತಡರಾತ್ರಿ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಜಿಗಣಿ ಲಿಂಕ್ ರಸ್ತೆಯಲ್ಲಿ ನಡೆದಿದೆ.

    ಭದ್ರಾವತಿ ಮೂಲದ ಶಶಾಂಕ್ (20) ಮೃತ ಬೈಕ್ ಸವಾರನಾಗಿದ್ದು ರಿನಿತ್ (22) ಎಂಬ ವ್ಯಕ್ತಿಗೆ ಕಾಲು ಕಟ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಬೆಂಗಳೂರಿನ ಹೊಂಗಸಂದ್ರ ನಿವಾಸಿಯಾಗಿರುವ ರಿನಿತ್ ನಿನ್ನೆ ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದಾಗ ಎಂಟಿಆರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಶಾಂಕ್ ಬೈಕ್ ನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದಾರೆ. ಇದರಿಂದ ಶಶಾಂಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು ರಿನಿತ್‌ಗೆ ಕಾಲು ಕಟ್ ಆಗಿದೆ. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಇನ್ನೆರಡು ದಿನ ಬಾಕಿ – ಬೆಂಗಳೂರಲ್ಲಿ ಸಿದ್ಧತೆ ಹೇಗಿದೆ?

    ಸದ್ಯ ರಿನೀತ್ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌ಇದನ್ನೂ ಓದಿ: ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಕ್ರಿಕೆಟ್ ಆಟವನ್ನ ರಾಜಕಾರಣಿಗಳಿಂದ ದೂರವಿಡಿ – ಡಿಕೆಶಿ

  • ಗಂಡನನ್ನ ಬಿಟ್ಟು ಮತ್ತೊಬ್ಬನನ್ನ ಮದುವೆಯಾದ್ಳು, ಅವನಿಂದಲೇ ಕೊಲೆಯಾದ್ಳು

    ಗಂಡನನ್ನ ಬಿಟ್ಟು ಮತ್ತೊಬ್ಬನನ್ನ ಮದುವೆಯಾದ್ಳು, ಅವನಿಂದಲೇ ಕೊಲೆಯಾದ್ಳು

    ಆನೇಕಲ್: ಮದುವೆಯಾಗಿದ್ದರೂ (Marriage) ಗಂಡನಿಂದ ದೂರವಾಗಿದ್ದ ವಿವಾಹಿತೆಯೊಬ್ಬಳು ಮತ್ತೊಬ್ಬನನ್ನ ಮದುವೆಯಾಗಿ ರಾಜರೋಷವಾಗಿ ಓಡಾಡಿಕೊಂಡಿದ್ದಳು. ಕೊನೆಗೆ ಅವನಿಂದಲೇ ಕೊಲೆಯಾಗಿರುವ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿ (Hebbagodi) ವ್ಯಾಪ್ತಿಯಲ್ಲಿ ನಡೆದಿದೆ.

    ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ನಿರ್ಜನ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಮಂಜುಳಾ (32) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೊನೆಯದ್ದು ಅಂತ 92ನೇ ವಯಸ್ಸಿನಲ್ಲಿ ಪ್ಲಾನ್‌ ಮಾಡಿದ್ದ 5ನೇ ಮದುವೆ ರದ್ದುಪಡಿಸಿದ ಮುರ್ಡೋಕ್

    ಕೆಲ ದಿನಗಳ ಹಿಂದೆಯಷ್ಟೇ ಮಂಜುಳಾ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿತ್ತು. ಇತ್ತೀಚೆಗೆ 2ನೇ ಪತಿ ನಾರಾಯಣ ಜೊತೆ ಹೊರಗೆ ಹೋಗಿದ್ದ ಮಂಜುಳಾ ಮತ್ತೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡಿದ್ದ ಕುಟುಂಬಸ್ಥರು ಹೆಬ್ಬಗೋಡಿ ಠಾಣೆಯಲ್ಲಿ (Hebbagodi Police) ದೂರು ದಾಖಲಿಸಿದ್ದರು. ನಿರ್ಜನ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ದೊರೆತಾಗ ಗುರುತು ಪತ್ತೆಗಾಗಿ ಮಂಜುಳಾ ತಂಗಿ ಲಕ್ಷ್ಮಿಯನ್ನ ಕರೆಸಲಾಗಿತ್ತು. ಆಕೆ ಕಿವಿಯೋಲೆ, ಕೊರಳಲ್ಲಿದ್ದ ಸರ ನೋಡಿ ಗುರುತು ಪತ್ತೆಹಚ್ಚಿದ್ದಾರೆ. ಇದನ್ನೂ ಓದಿ: ಶೀಘ್ರವೇ ಬರಲಿದೆ ವಾಟ್ಸಪ್ ಚಾಟ್ ಲಾಕ್ ಮಾಡೋ ಹೊಸ ಫೀಚರ್

    ಮದುವೆಯಾಗಿದ್ದರೂ ಸಲುಗೆ ಬೆಳೆಸಿದ್ದ ಮಂಜುಳಾ: ಕಳೆದ 10 ವರ್ಷಗಳ ಹಿಂದೆ ಇಲ್ಲಿನ ಸಂಪಿಗೆನಗರದ ನಿವಾಸಿ ನಾರಾಯಣಪ್ಪ ಹಾಗೂ ಮಂಜುಳಾ ನಡುವೆ ಸ್ನೇಹ ಬೆಳೆದಿತ್ತು. ಮದುವೆಯಾಗಿದ್ದರೂ ಗಂಡನಿಂದ ದೂರವಾಗಿದ್ದ ಮಂಜುಳಾ ರಾಜಾರೋಷವಾಗಿ ನಾರಾಯಣಪ್ಪ ಜೊತೆಗೆ ಸಲುಗೆಯಿಂದ ಓಡಾಡಿಕೊಂಡಿದ್ದಳು. ಹಲವು ಬಾರಿ ಇವರಿಬ್ಬರ ಮಧ್ಯೆ ಕಿರಿಕ್‌ ಆದಾಗ ಠಾಣೆಯಲ್ಲೇ ನಾರಾಯಣಪ್ಪ ಮದುವೆ ಆಗಿದ್ದ. ಕೆಲ ದಿನಗಳವರೆಗೆ ಎಲ್ಲವೂ ಚೆನ್ನಾಗಿಯೇ ಇತ್ತು. ಆ ನಂತರ ದುಡ್ಡು ಕೊಡುವಂತೆ ನಾರಾಯಣಪ್ಪ, ಮಂಜುಳಾ ಜೊತೆ ಕಿರಿಕ್‌ ಮಾಡುತ್ತಿದ್ದ. ಅಲ್ಲದೇ ನಿನ್ನನ್ನ ಸುಟ್ಟುಹಾಕಿಬಿಡುತ್ತೇನೆ ಎಂದು ಸಂಬಂಧಿಕರ ಮಧ್ಯೆಯೇ ಬೆದರಿಕೆ ಹಾಕಿದ್ದ.

    ಕಳೆದ ಮಾರ್ಚ್‌ 29 ರಂದು ನಾರಾಯಣಪ್ಪ ಆಕ್ಟೀವಾದಲ್ಲಿ ಮಂಜುಳಾಳನ್ನ ಕರೆದುಕೊಂಡು ಹೋಗಿದ್ದನು, ಇದೇ ವೇಳೆ ಆಕೆಯನ್ನ ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಸುಟ್ಟುಹಾಕಿದ್ದಾನೆ ಎನ್ನಲಾಗಿದೆ. ಕೆಲ ಗಂಟೆಗಳ ಬಳಿಕ ತಾನೊಬ್ಬನೆ ಮನೆಗೆ ಹಿಂದಿರುಗಿದ್ದಾನೆ ಎಂದು ತಿಳಿದುಬಂದಿದೆ. ಈಗಾಗಲೇ ನಾರಾಯಣಪ್ಪನನ್ನ ಬಂಧಿಸಿರುವ ಹೆಬ್ಬಗೋಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.