Tag: ಹೆರಿಗೆ

  • ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು

    ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು

    – ಹಣ್ಣು ಕೊಡುವುದಾಗಿ ಕರೆದೊಯ್ದು ಕೃತ್ಯ, ಆರೋಪಿ ಅರೆಸ್ಟ್

    ಲಕ್ನೋ: 11 ವರ್ಷದ ಬಾಲಕಿ ಮೇಲೆ 2 ಮಕ್ಕಳ ತಂದೆ ನಿರಂತರ ಅತ್ಯಾಚಾರವೆಸಗಿದ್ದು, ಹೆರಿಗೆಯಾದ ಅರ್ಧ ಗಂಟೆಯಲ್ಲಿ ನವಜಾತ ಶಿಶು (Infant) ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ (Bareilly) ನಡೆದಿದೆ.

    ಆರೋಪಿ ರಶೀದ್ (31) ಅಪ್ರಾಪ್ತೆಯನ್ನು ಬೆದರಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಆರರಿಂದ ಏಳು ತಿಂಗಳ ಹಿಂದೆ ರಶೀದ್ ಬಾಲಕಿಯನ್ನು ತನ್ನ ಮನೆಗೆ ಹಣ್ಣು ಕೊಡಿಸುವುದಾಗಿ ಕರೆದೊಯ್ದಿದ್ದ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಆಕೆಯ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಅವಳನ್ನು ಹಲವು ಬಾರಿ ಬ್ಲ್ಯಾಕ್‌ಮೇಲ್ ಮಾಡಲು ವೀಡಿಯೋ ಕೂಡ ಮಾಡಿದ್ದಾನೆ ಎಂದು ಬಾಲಕಿಯ ಅಣ್ಣ ಹೇಳಿದ್ದಾನೆ. ಇದನ್ನೂ ಓದಿ: ಬಿಡಿಎ ಫ್ಲಾಟ್ / ವಿಲ್ಲಾ ಖರೀದಿಸಿ ನೋಂದಣಿಗಾಗಿ ಕಾಯುತ್ತಿರುವ ಹಂಚಿಕೆದಾರರಿಗೆ ಸುವರ್ಣಾವಕಾಶ

    ಗುರುವಾರ ಬಾಲಕಿ ನಿರಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರಿಣಾಮ ಆಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ಪರೀಕ್ಷೆಯಲ್ಲಿ ಆಕೆ ಏಳು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಆಕೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಬಾಲಕಿ ಅದೇ ದಿನ ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳಲ್ಲೇ ಹೆರಿಗೆಯಾಗಿದ್ದು, ಅರ್ಧ ಗಂಟೆಯ ಬಳಿಕ ಮಗು ಮೃತಪಟ್ಟಿದೆ. ಇದನ್ನೂ ಓದಿ: ಚಾಮರಾಜನಗರ | ಲಾರಿ, ಕಾರು ಮೊಪೆಡ್ ನಡುವೆ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ

    ಘಟನೆ ಸಂಬಂಧ ಎರಡು ಮಕ್ಕಳ ತಂದೆ ರಶೀದ್ ವಿರುದ್ಧ ದೂರು ದಾಖಲಾಗಿದ್ದು, ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ನವಾಬ್‌ಗಂಜ್ ಠಾಣೆಯ ಅಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ಶುಕ್ರವಾರ ರಶೀದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಅಲ್ಲದೇ ಆರೋಪಿಯೊಂದಿಗೆ ಹೊಂದಾಣಿಕೆಯಾಗಲು ಮಗುವಿನಿಂದ ಡಿಎನ್‌ಎ ಮಾದರಿಯನ್ನು ತೆಗೆದುಕೊಳ್ಳಲಾಗಿದೆ ಎಂದು ಅರುಣ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗ ಪಾಕ್‌ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

  • ಬೆಂಗಳೂರು | ರೈಲ್ವೇ ಪ್ಲಾಟ್​ಫಾರ್ಮ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಬೆಂಗಳೂರು | ರೈಲ್ವೇ ಪ್ಲಾಟ್​ಫಾರ್ಮ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಬೆಂಗಳೂರು: ನಗರದ ರೈಲು ನಿಲ್ದಾಣದ (Railway Station) ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಪ್ಲಾಟ್​ಫಾರ್ಮ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.

    ಗುರುವಾರ (ಜು.31) ರೈಲಿಗಾಗಿ ಕಾಯುತ್ತಿದ್ದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೇ ಪೊಲೀಸರು, ಸಿಬ್ಬಂದಿಯ ಸಹಾಯದೊಂದಿಗೆ ಪ್ಲಾಟ್‌ಫಾರ್ಮ್‌ನಲ್ಲೇ (Railway Platform) ಹೆರಿಗೆ ಮಾಡಿಸಲಾಗಿದೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿ ಅವಘಡ; ಮಹತ್ವದ ದಾಖಲೆಗಳು ಭಸ್ಮ

    ತಾಯಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೈಲ್ವೆ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ ‌ರಹಸ್ಯ ಬಯಲು; ವಾರಸುದಾರರು ಪತ್ತೆ

  • ಕೆಕೆಆರ್‌ಟಿಸಿ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

    ಕೆಕೆಆರ್‌ಟಿಸಿ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

    ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಮುದಗಲ್ ಬಳಿ ಕೆಕೆಆರ್‌ಟಿಸಿ ಬಸ್‌ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಯಾದಗಿರಿಯ (Yadagiri) ಸುರಪುರ ತಾಲೂಕಿನ ಹೊಂಬಳಕಲ್ ಗ್ರಾಮದ ಶಾಂಭವಿ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ. ಇದನ್ನೂ ಓದಿ: ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

    ಕಾರವಾರಕ್ಕೆ ಕೂಲಿ ಕೆಲಸಕ್ಕಾಗಿ ಗುಳೆ ಹೋಗಿದ್ದ ದಂಪತಿ ವಾಪಾಸ್ ಗ್ರಾಮಕ್ಕೆ ಮರಳುತ್ತಿದ್ದಾಗ ಬಸ್‌ನಲ್ಲೇ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಮೇರಿ ಎಂಬುವವರು ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ – ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

    ಹೆರಿಗೆ ಬಳಿಕ ಅಂಬ್ಯುಲೆನ್ಸ್ ಮೂಲಕ ಬಾಣಂತಿಯನ್ನು ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಕೆಕೆಆರ್‌ಟಿಸಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

  • ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮಾಸುವ ಮುನ್ನವೇ ಹೆರಿಗೆ ಬಳಿಕ ಮಗು ಸಾವು!

    ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮಾಸುವ ಮುನ್ನವೇ ಹೆರಿಗೆ ಬಳಿಕ ಮಗು ಸಾವು!

    ಬಳ್ಳಾರಿ: ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ (BIMS) ಹೆರಿಗೆ ಬಳಿಕ ಮಗು ಮೃತಪಟ್ಟಿದೆ.

    ಸಿರಗುಪ್ಪ ತಾಲೂಕಿನ ಸಿರಗೇರಿ ಗ್ರಾಮದ ಬಾಣಂತಿ (Pregnant Women) ಗಂಗೋತ್ರಿ ನಾರ್ಮಲ್ ಹೆರಿಗೆ ಮಾಡಿಸಲು ದಾಖಲಾಗಿದ್ದರು. ಆದರೆ ವೈದ್ಯರು ಸಿಸೇರಿಯನ್‌ ಮಾಡಿದ್ದಾರೆ. ಹೆರಿಗೆ ಬಳಿಕ ಆರಂಭದಲ್ಲಿ ಗಂಡು ಮಗು ಆರೋಗ್ಯವಾಗಿದೆ ಎಂದಿದ್ದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು – ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ: ಜನಾಕ್ರೋಶ

     

    ಗಂಡು ಮಗುವಿನ ಜನನವಾಯಿತು ಎಂದು ಗಂಗೋತ್ರಿ ಕುಟುಂಬಸ್ಥರು ಸಂತಸ ಪಟ್ಟಿದ್ದರು. ಆದರೆ ಮಧ್ಯಾಹ್ನ 12 ಗಂಟೆಯ ಬಳಿಕ ಮಗು (Baby) ಏಕಾಏಕಿ ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ.

    ಈಗ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವಾಗಿದೆ ಅಂತಾ ಪೋಷಕರು ಆರೋಪಿಸಿದ್ದಾರೆ. ವೈದ್ಯರು ಅವೈಜ್ಞಾನಿಕವಾಗಿ ಹೆರಿಗೆ ಮಾಡಿದ್ದಕ್ಕೆ ಮಗು ಸಾವಾಗಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗರ್ಭದಲ್ಲಿ ಮಲ ತಿಂದು ಮಗುವಿಗೆ ಶ್ವಾಸಕೋಶದ ತೊಂದರೆಯಾಗಿತ್ತು. ಇದೇ ಕಾರಣಕ್ಕೆ ಮಗು ಸಾವನ್ನಪ್ಪಿದೆ ಅಂತಾ ವೈದ್ಯರು ಸಮಜಾಯಿಷಿ ನೀಡಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಈ ರೀತಿಯ ದುರ್ಘಟನೆಗಳು ಪದೇ ಪದೇ ನಡೆಯುತ್ತಿರುವ ಕಾರಣ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗಿದ್ದಾರೆ.

     

  • ಹೆರಿಗೆಗಾಗಿ ಲಂಡನ್‌ಗೆ ಹಾರಲಿದ್ದಾರೆ ದೀಪಿಕಾ ಪಡುಕೋಣೆ

    ಹೆರಿಗೆಗಾಗಿ ಲಂಡನ್‌ಗೆ ಹಾರಲಿದ್ದಾರೆ ದೀಪಿಕಾ ಪಡುಕೋಣೆ

    ಹುಭಾಷಾ ನಟಿ ದೀಪಿಕಾ ಪಡುಕೋಣೆ (Deepika Padukone) ಹಾಗೂ ರಣವೀರ್ ಸಿಂಗ್ (Ranveer Singh) ಇದೇ ವರ್ಷ ಫೆಬ್ರವರಿಯಲ್ಲಿ ಮೊದಲ ಪ್ರೆಗ್ನೆನ್ಸಿ ಬಗ್ಗೆ ಜಗಜ್ಜಾಹೀರ್ ಮಾಡುವ ಮೂಲಕ ಖುಷಿಯನ್ನ ಹಂಚಿಕೊಂಡಿದ್ದರು ಈ ತಾರಾ ದಂಪತಿ. ಕೊನೆಯದಾಗಿ ದೀಪಿಕಾ ಕಲ್ಕಿ 2898 ಎಡಿ ಸಿನಿಮಾದಲ್ಲಿ ನಟಿಸಿ, ಸಿನಿಮಾ ರಂಗದಿಂದ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷಯಲ್ಲಿದ್ದಾರೆ.

    ಮೊದಲ ಮಗುವಿನ ನಿರೀಕ್ಷಯಲ್ಲಿರುವ ದೀಪಿಕಾ ಹೆರಿಗೆ ಬಗ್ಗೆ ಗಾಳಿಸುದ್ದಿ ಹರಿದಾಡುತ್ತಿದೆ. ಹೌದು, ದೀಪಿಕಾ ಡಿಲೆವರಿಗಾಗಿ ಲಂಡನ್‌ಗೆ (London) ಹೋಗ್ತಾರೆ ಅಂತಾ ಸುದ್ದಿ ಹರಿದಾಡ್ತಿತ್ತು. ಆದ್ರೆ, ಈ ಸುದ್ದಿ ಸುಳ್ಳು, ಸೌತ್ ಬಾಂಬೆಯಲ್ಲೇ ಹೆರಿಗೆ ಮಾಡಿಕೊಳ್ಳುತ್ತಿದ್ದಾರಂತೆ ದೀಪಿಕಾ. ಜೊತೆಗೆ ತಾಯಿತನದ ಕ್ಷಣವನ್ನ ಅನುಭವಿಸಲು ಈಗಿನಿಂದಲೇ ಕಾತುರದಿಂದ ಕಾಯ್ತಿದ್ದು, ಹೆರಿಗೆಗಾಗಿ ಲಂಡನ್‌ಗೆ ಹೋಗ್ತಿರುವ ಸುದ್ದಿ ಸುಳ್ಳುಂತೆ. ಇದೇ ಸೆಪ್ಟಂಬರ್‌ನಲ್ಲಿ ಮೊದಲ ಮಗುವಿನ ನಿರೀಕ್ಷಯಲ್ಲಿದೆ ರಣ್ವೀರ್ ಹಾಗೂ ದೀಪಿಕಾ ಜೋಡಿ.

    ದೀಪಿಕಾ ಪಡುಕೋಣೆ 2025ರಲ್ಲಿ ಸಿನಿಮಾಗಳಲ್ಲಿ ತೊಡಗಿಸಿಕೊಳ್ಳಲಿದ್ದಾರಂತೆ. ಸದ್ಯ ದೀಪಿಕಾಗಾಗಿ ಕಲ್ಕಿ 2898 ಎಡಿ ಸಿನಿಮಾದ ಸೀಕ್ವೆಲ್ ಪ್ರಾಜೆಕ್ಟ್ ವೇಟ್ ಮಾಡ್ತಿದೆ. ಮೆಟರ್ನಿಟಿ ರಜೆ ಮುಗಿತಿದ್ದಂತೆ ಪ್ರಭಾಸ್, ಅಮಿತಾಬ್ ಬಚ್ಚನ್ ನಟನೆಯ ಸಿನಿಮಾದಲ್ಲಿ ದೀಪಿಕಾ ತೊಡಗಿಸಿಕೊಳ್ಳಲಿದ್ದಾರಂತೆ.

  • ಹೆರಿಗೆ ವೇಳೆ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಮಗು ಸಾವು

    ಹೆರಿಗೆ ವೇಳೆ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಮಗು ಸಾವು

    ಉಡುಪಿ: ಹೆರಿಗೆ ವೇಳೆ ಮಗು ಮೃತಪಟ್ಟಿದ್ದು, ಉಡುಪಿ (Udupi) ಜಿಲ್ಲೆ ಕುಂದಾಪುರ ಸರ್ಕಾರಿ ಆಸ್ಪತ್ರೆ ಮುಂದೆ ಕುಟುಂಬಸ್ಥರು ಅಹೋ ರಾತ್ರಿ ಪ್ರತಿಭಟನೆ ಮಾಡಿದರು. ಬೈಂದೂರಿನ ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಮತ್ತು ಜ್ಯೋತಿ ದಂಪತಿಯ ಮಗು ಹೆರಿಗೆ ಸಂದರ್ಭದಲ್ಲೇ ಸಾವನ್ನಪ್ಪಿದೆ. ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ದೂರು ಕೇಳಿಬಂದಿದೆ.

    ನವೆಂಬರ್ 17 ರಂದು ಹೆರಿಗೆ ನೋವಿನ ಹಿನ್ನೆಲೆ ಕುಂದಾಪುರ ತಾಲೂಕು ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಜ್ಯೋತಿಯವರನ್ನು ದಾಖಲು ಮಾಡಲಾಗಿತ್ತು. ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದು, ಕುಟುಂಬ ನೋವಿನಿಂದ ಆಕ್ರೋಶಗೊಂಡಿದೆ. ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಬೇಕು, ಡಿಸಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರಲು ಆಗ್ರಹಿಸಿದೆ.

    ಡಿಸಿ ಸ್ಥಳಕ್ಕಾಗಮಿಸಿ ಕುಟುಂಬದ ಮತ್ತು ವೈದ್ಯರ ಜೊತೆ ಮಾತಕತೆ ಮಾಡಿದ್ದಾರೆ. ಮಗುವಿನ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಹೆರಿಗೆ ಮಾಡಿಸಲಾಗಿದೆ ಎಂದು ಕುಟುಂಬ ಆರೋಪಿಸಿದ್ದು, ಡಿಸಿ ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದ್ದಾರೆ. ತನಿಖಾ ಸಮಿತಿ ರಚನೆ ಮಾಡುವ ತೀರ್ಮಾನಕ್ಕೆ ಬಂದಿದ್ದು, ಕುಟುಂಬಸ್ಥರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಮ್ಯಾಚ್ ವೇಳೆ ಟಿವಿ ಆಫ್ ಮಾಡಿದ್ದಕ್ಕೆ ಮಗನ ಕೊಲೆಗೈದ ತಂದೆ!

  • ಅಂಬುಲೆನ್ಸ್‌ನಲ್ಲಿಯೇ ಡ್ರೈವರ್, ಸಿಬ್ಬಂದಿಯಿಂದ ಮಹಿಳೆಗೆ ಹೆರಿಗೆ

    ಅಂಬುಲೆನ್ಸ್‌ನಲ್ಲಿಯೇ ಡ್ರೈವರ್, ಸಿಬ್ಬಂದಿಯಿಂದ ಮಹಿಳೆಗೆ ಹೆರಿಗೆ

    ಗದಗ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಆಸ್ಪತ್ರೆ ತೆರಳುವ ವೇಳೆ ಮಾರ್ಗಮಧ್ಯೆಯೇ ಅಂಬುಲೆನ್ಸ್‌ನಲ್ಲಿ (Ambulance) ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಬಳಗಾನೂರ ಬಳಿ ನಡೆದಿದೆ.

    ತಾಲೂಕಿನ ಬಳಗಾನೂರು ಗ್ರಾಮದ ಸಲೀಮಾ ಮೆಹಬೂಬಸಾಬ್ ಮುದೆಪ್ಪನವರ್ 108 ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬೆಳಗ್ಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆ ತರುವ ವೇಳೆ ಮಾರ್ಗಮಧ್ಯದಲ್ಲಿ ಹೆರಿಗೆಯಾಗಿದೆ.

    ರಕ್ಷಾಬಂಧನ ದಿನದಂದು ಈ ಹಣ್ಣು ಮಗುವಿಗೆ 108 ಸಿಬ್ಬಂದಿ ರವಿ ಬಡಿಗೇರ್ ಹಾಗೂ ಚಾಲಕ ದಸ್ತಗೀರ್ ಸಾಬ್ ಸುಲಭ ಹೆರಿಗೆ (Delivery) ಮಾಡಿಸಿದ್ದಾರೆ. ಈ ಮೂಲಕ ರಕ್ಷಾ ಬಂಧನದ ದಿನ ಮಹಿಳೆಗೆ ಅಣ್ಣಂದಿರಾಗಿ ರಕ್ಷಣೆಯಾಗಿದ್ದಾರೆ. ತಂಗಿಯಂಥಾ ಸಲೀಮಾಗೆ ನೋವಿನಿಂದ ಮುಕ್ತಿ ನೀಡಿದ್ದಾರೆ. ಇದನ್ನೂ ಓದಿ: ಹೆಚ್‌ಡಿ ಕುಮಾರಸ್ವಾಮಿ ತಡರಾತ್ರಿ ಆಸ್ಪತ್ರೆಗೆ ದಾಖಲು

    ಇದೀಗ ಸಲೀಮಾ ಹಾಗೂ ಮಗುವನ್ನು ನಗರದ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಸ್ತೆಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಡೆಲಿವರಿ ಮಾಡಿಸಿದ ಸರ್ಕಾರಿ ವೈದ್ಯ

    ರಸ್ತೆಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಡೆಲಿವರಿ ಮಾಡಿಸಿದ ಸರ್ಕಾರಿ ವೈದ್ಯ

    ಚಿಕ್ಕಮಗಳೂರು: ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

    ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋದಾಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರುವ ಯಶೋದಾ ಚಿಕಿತ್ಸೆಗೆಂದು ಶಿವಮೊಗ್ಗ (Shivamogga) ದ ಮೆಗ್ಗಾನ್ ಆಸ್ಪತ್ರೆಗೆ ಹೊರಟಿದ್ದರು. ಆಕೆ ಜೊತೆ ಬೇರೊಬ್ಬ ಮಹಿಳೆ ಕೂಡ ಇದ್ದರು. ಅಜ್ಜಂಪುರದಿಂದ ತರೀಕೆರೆಗೆ ಬಂದು ಶಿವಮೊಗ್ಗ ತೆರಳಲು ಬಸ್ ಕಾಯುವಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಸ್ಥಳದಲ್ಲಿದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ.

    ಮಹಿಳೆ ಆಸ್ಪತ್ರೆ ಮುಟ್ಟುವ ಮುನ್ನವೇ ಆಸ್ಪತ್ರೆಯ ತುಸು ದೂರದಲ್ಲಿ ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ತಾಲೂಕು ವೈದ್ಯಾಧಿಕಾರಿ ಹಾಗೂ ಮೂಳೆ ತಜ್ಞ ಆರ್. ದೇವರಾಜ್ ಆಕೆಯನ್ನ ಆಸ್ಪತ್ರೆಗೆ ಸೇರಿಸಿ ಪ್ರಸೂತಿ ವೈದ್ಯ ನಟರಾಜ್ (Doctor Nataraj) ಅವರನ್ನ ಕರೆಸಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಹಾಗೂ ಹೆಣ್ಣು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.  ಇದನ್ನೂ ಓದಿ: ನನ್ನನ್ನು ಎದುರು ಹಾಕೊಂಡು ಯಾರೂ ಗೆಲ್ಲೋಕ್ಕಾಗಲ್ಲ- ಕೆ.ಎನ್.ರಾಜಣ್ಣ ದರ್ಪದ ಮಾತು ವೈರಲ್

    ಯಶೋದಾ ಬಿ ನೆಗೆಟಿವ್ ಸಿಗುವುದು ತುಂಬಾ ಕಡಿಮೆ ಎಂದು ರಕ್ತಕ್ಕಾಗಿಯೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ವೈದ್ಯರು ನಿನಗೆ ಯಾವುದೇ ಸಮಸ್ಯೆ ಆಗುವುದಿಲ್ಲ, ನಾವಿದ್ದೇವೆ ಎಂದು ಧೈರ್ಯ ತುಂಬಿ ಹೆರಿಗೆ ಮಾಡಿಸಿದ್ದಾರೆ. ಆರಂಭದ ಮೂರು ತಿಂಗಳು ಖಾಸಗಿ ಆಸ್ಪತ್ರೆಗೆ ತೋರಿಸಿದ್ದ ಯಶೋದಾ ಅಲ್ಲಿ ಹೆರಿಗೆಗೆ 30,000 ಹಣ ಕೇಳಿದರು ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯರ ಕೆಲಸಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಶೋದಾ ಕೂಡ ತರೀಕೆರೆ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಮಗುವನ್ನು ಮನೆಗೆ ಕರೆತಂದ ನಟ ರಾಮ್ ಚರಣ್-ಉಪಾಸನಾ

    ಮಗುವನ್ನು ಮನೆಗೆ ಕರೆತಂದ ನಟ ರಾಮ್ ಚರಣ್-ಉಪಾಸನಾ

    ಮೂರು ದಿನಗಳ ಹಿಂದೆಯಷ್ಟೇ ನಟ ರಾಮ್ ಚರಣ್  (Ram Charan) ಅವರ ಪತ್ನಿ ಉಪಾಸನಾ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆ ಮಗುವನ್ನು ಮನೆಗೆ ಕರೆತರಲು ರಾಮ್ ಚರಣ್ ಕುಟುಂಬ ಕಾಯುತ್ತಿತ್ತು. ಇದೀಗ ಪತ್ನಿ ಮತ್ತು ಮಗುವನ್ನು ಮನೆಗೆ ಕರೆತಂದಿದ್ದಾರೆ ರಾಮ್ ಚರಣ್. ಮಗುವಿಗೆ ಹಾರೈಸಿದ ಎಲ್ಲರಿಗೂ ಇದೇ ಸಂದರ್ಭದಲ್ಲಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

    ಜೂನ್ 20ರಂದು ಹೈದರಾಬಾದ್ ನ ಜುಬ್ಲಿ ಹಿಲ್ಸ್ ಅಪೋಲೊ ಆಸ್ಪತ್ರೆಯಲ್ಲಿ ಉಪಾಸನಾ (Upasana) ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದರು. ಈ ದಂಪತಿಯ ಪುಟಾಣಿ ಮಗುವಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Photo, Viral) ಆಗಿತ್ತು. ಮಗುವಿಗೆ ಹಾರೈಕೆಯ ಮಹಾಪುರವೇ ಹರಿದು ಬಂದಿತ್ತು.

    ಎರಡು ವಾರಗಳ ಹಿಂದೆಯಷ್ಟೇ ತಮ್ಮ ಕುಟುಂಬದ ಕುಡಿಗಾಗಿ ಶಾಪಿಂಗ್ ಮಾಡುತ್ತಿರುವ ವಿಷಯವನ್ನು ಹಾಗೂ ಪ್ರಜ್ವಲ್ ಫೌಂಡೇಶನ್ ತಮ್ಮ ಮಗುವಿಗಾಗಿ ಸ್ಪೆಷಲ್ ತೊಟ್ಟಿಲನ್ನು ಗಿಫ್ಟ್ ನೀಡಿರುವುದಾಗಿ ಉಪಾಸನಾ ತಿಳಿಸಿದ್ದರು. ಪ್ರಜ್ವಲ್ ಫೌಂಡೇಶನ್ ನಲ್ಲಿ ಕೆಲಸ ಮಾಡುವ ಮಹಿಳೆಯರೇ ಈ ಸ್ಪೆಷಲ್ ತೊಟ್ಟಿಲನ್ನು ರೆಡಿ ಮಾಡಿದ್ದು, ಅದು ಮರದ ತೊಟ್ಟಿಲಾಗಿದೆ. ಉಪಾಸನಾ ಮಗುವಿಗಾಗಿಯೇ ಅದನ್ನು ಸಿದ್ಧ ಮಾಡಲಾಗಿದೆ ಎಂದು ತಿಳಿಸಲಾಗಿತ್ತು. ಅದೊಂದು ತೂಗು ತೊಟ್ಟಿಲಾಗಿದ್ದು ಕುಸುರಿ ಕೆಲಸವನ್ನೂ ಹೊಂದಿದೆ. ಇದನ್ನೂ ಓದಿ:‘ಕಾಂತಾರ’ 2ಗಾಗಿ ಕುದುರೆ ಸವಾರಿ, ಕಳರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಶೆಟ್ಟಿ ಬ್ಯುಸಿ

    ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದರು.

    ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ತಿಳಿಸಿದ್ದರು.

     

    ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ. ಕೊನೆಗೂ ತಮ್ಮದೇ ಆಸ್ಪತ್ರೆಯಲ್ಲಿ ಅವರು ಮಗುವಿಗೆ ಜನ್ಮ ನೀಡಿದ್ದರು.

  • ಮಾರ್ಗ ಮಧ್ಯೆಯೇ ಅಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಿಳೆ

    ಮಾರ್ಗ ಮಧ್ಯೆಯೇ ಅಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಿಳೆ

    ರಾಯಚೂರು: ಅಂಬುಲೆನ್ಸ್‌ನಲ್ಲಿ (Ambulence) ಮಧ್ಯರಾತ್ರಿ ಮಾರ್ಗ ಮಧ್ಯೆಯೇ ಮಹಿಳೆಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ರಾಯಚೂರಿನ (Raichur) ಸಿರವಾರ (Siravara) ತಾಲೂಕಿನ ಕುರಕುಂದ ಗ್ರಾಮದಲ್ಲಿ ನಡೆದಿದೆ.

    ಕುರಕುಂದ ಗ್ರಾಮದ ರೇಣುಕಾ ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮವಿತ್ತ ಮಹಿಳೆ. ಈಕೆ ಮಧ್ಯರಾತ್ರಿ ಹೆರಿಗೆ (Delivery) ನೋವಿನಿಂದ ಬಳಲುತ್ತಿದ್ದರು. ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವ ಸಲುವಾಗಿ ಆರೋಗ್ಯ ಕವಚ 108 ಅಂಬುಲೆನ್ಸ್ ಬಂದಿತ್ತು. ಈಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆಯೇ ಹೆರಿಗೆಯಾಗಿದೆ. ಇದನ್ನೂ ಓದಿ: ಕರ್ತವ್ಯ ಸಮಯದಲ್ಲಿ ಲಂಚ ಪಡೆದ ಮಹಿಳಾಧಿಕಾರಿ – ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

    ಹೆರಿಗೆ ನೋವು ಹೆಚ್ಚಾದ ಹಿನ್ನೆಲೆ ಶುಶ್ರೂಷಕಿ ಲಕ್ಷ್ಮೀ ಅಂಬುಲೆನ್ಸ್‌ನಲ್ಲಿಯೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ನಂತರ ತಾಯಿ ಮಗುವನ್ನು ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. 108 ಅಂಬುಲೆನ್ಸ್ ಸಿಬ್ಬಂದಿಯಾದ ಚಾಲಕ ಯಾಸಿನ್ ಬಿ. ಗಣೇಕಲ್ ಮತ್ತು ಶುಶ್ರೂಷಕಿ ಲಕ್ಷ್ಮೀ ಅವರಿಗೆ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಒಂದು ಸಣ್ಣ ಆ್ಯಕ್ಸಿಡೆಂಟ್‌.. ರಕ್ತನೂ ಬರಲಿಲ್ಲ, ಆದ್ರೆ ಬ್ರೈನ್ ಡೆಡ್!