ಧಾರವಾಡ: ಹೆರಿಗೆಗೆಂದು (Delivery) ಗರ್ಭಿಣಿಯನ್ನು (Pregnant) ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅಂಬುಲೆನ್ಸ್‌ನಲ್ಲೇ (Ambulance) ಮಗುವಿಗೆ ಜನ್ಮ ನೀಡಿದ ಪ್ರಸಂಗ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೆನಕುಂಠಿ ಗ್ರಾಮದ ಆಫ್ರೀನ್ ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮವಿತ್ತ ತಾಯಿ. ಗುರುವಾರ ಆಫ್ರೀನ್‌ಗೆ ಹೆರಿಗೆ ನೋವು ಆರಂಭವಾಗಿತ್ತು. ತಕ್ಷಣವೇ ಕುಟುಂಬದವರು 108 ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಅಂಬುಲೆನ್ಸ್ ಸಿಬ್ಬಂದಿ ಕುಂದಗೋಳ ತಾಲೂಕು ಆಸ್ಪತ್ರೆಗೆ ಆಕೆಯನ್ನು ಸಾಗಿಸುತ್ತಿದ್ದ ಸಂದರ್ಭ ಹೆರಿಗೆ ನೋವು ಜೋರಾಗಿದೆ. ಇದನ್ನೂ ಓದಿ: ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ
ಹಾಸನ: ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ (Bus) ಮಹಿಳೆಯೊಬ್ಬರು ಹೆಣ್ಣು ಮಗುವಿಗೆ (Baby) ಜನ್ಮ ನೀಡಿರುವ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ನಡೆದಿದೆ.
ಕೂಲಿ ಕೆಲಸಕ್ಕೆ ಮೂಡುಗೆರೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಬಸ್ ಅನ್ನು ನಿಲ್ಲಿದ್ದಾರೆ. ಬಳಿಕ ಬಸ್‌ನ ನಿರ್ವಾಹಕಿ ಗರ್ಭಿಣಿಗೆ ಹೆರಿಗೆ (Delivery) ಮಾಡಿಸಲು ಸಹಾಯ ಮಾಡಿದ್ದಾರೆ.
ಸರಿಯಾದ ಸಮಯದಲ್ಲಿ ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ಮಾಡಿಸಿ, ಆಸ್ಪತ್ರೆಗೆ ದಾಖಲಿಸಿ, ಆಕೆಗೆ ಹಣದ ಸಹಾಯ ಮಾಡಿರುವ ಬಸ್ ಚಾಲಕ, ನಿರ್ವಾಹಕಿ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ
ಬಳ್ಳಾರಿ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ರಾಜ್ಯಾದ್ಯಂತ ಮತದಾನಕ್ಕೆ (Voting) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯುವ ಮತದಾರರು, ಶತಾಯುಷಿಗಳು, ನವ ವಧು-ವರರು ಮತದಾನ ಮಾಡಿ ಹಕ್ಕು ಚಲಾಯಿಸಿದ್ದಾರೆ. ಇದೇ ರೀತಿ ಮತದಾನಕ್ಕೆಂದು ಬಂದಿದ್ದ ಮಹಿಳೆಗೆ ಮತದಾನ ಕೇಂದ್ರದಲ್ಲೇ ಹೆರಿಗೆ ಮಾಡಿಸಿರುವ ಘಟನೆ ಬಳ್ಳಾರಿಯಲ್ಲಿ (Ballary) ನಡೆದಿದೆ.
ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಪತ್ನಿ ಉಪಾಸನಾ (Upasana) ಹೆರಿಗೆ ವಿಚಾರ ಹಲವು ದಿನಗಳಿಂದ ಚರ್ಚೆ ಆಗುತ್ತಲೇ ಇದೆ. ರಾಮ್ ಚರಣ್ ಕುಟುಂಬಕ್ಕೆ ಯಾವ ಮಗು ಬರಲಿದೆ ಎನ್ನುವ ಪ್ರಶ್ನೆಯನ್ನು ಕೂಡ ಅಭಿಮಾನಿಗಳು ಕೇಳಿದ್ದರು. ಇದೀಗ ಆ ಕುರಿತು ಸ್ವತಃ ಉಪಾಸನಾ ಅವರೇ ಉತ್ತರಿಸಿದ್ದಾರೆ. ಜುಲೈನಲ್ಲಿ (July) ಹೆರಿಗೆ (Delivery) ಆಗಲಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದಾರೆ.
ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ
ಹಾಲಿವುಡ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ರಾಮ್ ಚರಣ್ ಅಮೆರಿಕಾಗೆ ಹೋಗಿದ್ದರು. ಅಲ್ಲಿ ವಾಹಿನಿಯೊಂದರ ಸಂದರ್ಶನದಲ್ಲಿ ಮೊದಲ ಮಗುವಿನ ಜನನದ ಕುರಿತು ಮಾತನಾಡಿದ್ದಾರೆ. ಪತ್ನಿಯ ಹೆರಿಗೆಗಾಗಿ ಸಿದ್ಧರಾಗಿ ಎಂದು ವೈದ್ಯರೊಬ್ಬರಿಗೆ ಹೇಳಿದ್ದರು. ಈ ಕಾರಣದಿಂದಾಗಿಯೇ ಗೊಂದಲ ಮೂಡಿತ್ತು. ಅಮೆರಿಕಾದಲ್ಲೇ ಉಪಾಸನ ಮಗುವಿಗೆ ಜನ್ಮ ನೀಡಲಿದ್ದಾರೆ ಎನ್ನಲಾಗಿತ್ತು.
ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ.
ಶ್ರೀನಗರ: ಭೂಕಂಪನ (Erathquake) ನಡೆಯುತ್ತಿದ್ದಂತೆ ಹೆರಿಗೆ ಮಾಡಿಸಿ ವೈದ್ಯರು ತಾಯಿ-ಮಗುವಿನ ಜೀವವನ್ನು ಉಳಿಸಿದ ಘಟನೆ ಅನಂತ್‍ನಾಗ್ ಆಸ್ಪತ್ರೆಯಲ್ಲಿ ನಡೆದಿದೆ.
ಮಂಗಳವಾರ ಮಹಿಳೆ ಹೆರಿಗೆಗೆಂದು (Delivery) ಬಿಜ್‍ಬೆಹರಾದ ಎಸ್‍ಡಿಹೆಚ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅದರಂತೆ ವೈದ್ಯರು ಹೆರಿಗೆ ಕಾರ್ಯಕ್ಕೆ ಮುಂದಾದ ಸಮಯದಲ್ಲಿ ಭೂಮಿ ಕಂಪಿಸಿದೆ. ಈ ವೇಳೆ ಧೃತಿಗೆಡದ ವೈದ್ಯರು ಲೋವರ್ ಸೆಗ್ಮೆಂಟ್ ಸಿಸೇರಿಯನ್ (Lower Segment Caesarean) ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿ ತಾಯಿ ಹಾಗೂ ಮಗುವಿನ ಜೀವ ಉಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ, ಲೋವರ್ ಸೆಗ್ಮೆಂಟ್ ಸಿಸೇಯರಿನ್ ಮಾಡಿದ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ. ಸಿಬ್ಬಂದಿ ಶಸ್ತ್ರಚಿಕಿತ್ಸೆಯ ದೃಶ್ಯವನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದರು.
ವೀಡಿಯೋದಲ್ಲಿ ವೈದ್ಯರು ಹೆರಿಗೆ ಮಾಡಿಸುತ್ತಿದ್ದ ಸಂದರ್ಭದಲ್ಲಿ ಭೂಮಿ ಕಂಪಿಸುವುದನ್ನು ನೋಡಬಹುದು. ಅಫ್ಘಾನಿಸ್ತಾನದ ಹಿಂಡು ಕುಶ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಪರಿಣಾಮ ಅನಂತ್‍ನಾಗ್ ಕಣಿವೆಯಲ್ಲಿಯೂ ಭೂಮಿ ಕಂಪಿಸಿದೆ. ಭೂಕಂಪನದಿಂದ ಬೆಚ್ಚಿಬಿದ್ದ ಜನ ಮನೆಯಿಂದಾಚೆ ಓಡಿ ಬಂದಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಹಲವು ದಿನಗಳಿಂದ ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದಾರೆ.
ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪವನ್ ಕಲ್ಯಾಣ್ ಚಿತ್ರದಲ್ಲಿ ಸೊಂಟ ಬಳುಕಿಸಲು ಸಜ್ಜಾದ ನಟಿ ಶ್ರೀಲೀಲಾ
ಹಾಲಿವುಡ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ರಾಮ್ ಚರಣ್ ಅಮೆರಿಕಾಗೆ ಹೋಗಿದ್ದರು. ಅಲ್ಲಿ ವಾಹಿನಿಯೊಂದರ ಸಂದರ್ಶನದಲ್ಲಿ ಮೊದಲ ಮಗುವಿನ ಜನನದ ಕುರಿತು ಮಾತನಾಡಿದ್ದಾರೆ. ಪತ್ನಿಯ ಹೆರಿಗೆಗಾಗಿ ಸಿದ್ಧರಾಗಿ ಎಂದು ವೈದ್ಯರೊಬ್ಬರಿಗೆ ಹೇಳಿದ್ದರು. ಈ ಕಾರಣದಿಂದಾಗಿಯೇ ಗೊಂದಲ ಮೂಡಿತ್ತು. ಅಮೆರಿಕಾದಲ್ಲೇ ಉಪಾಸನ ಮಗುವಿಗೆ ಜನ್ಮ ನೀಡಲಿದ್ದಾರೆ ಎನ್ನಲಾಗಿತ್ತು.
ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ.
ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಈಗಾಗಲೇ ಅಮೆರಿಕಾ ತಲುಪಿದ್ದಾರೆ. ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿ ಆಗಲು ಅವರು ಅಮೆರಿಕಾಗೆ ತೆರಳಿದ್ದು, ಈ ಸಂದರ್ಭದಲ್ಲಿ ಅವರು ಅಮೆರಿಕಾದ ಜನಪ್ರಿಯ ಕಾರ್ಯಕ್ರಮ ‘ಗುಡ್ ಮಾರ್ನಿಂಗ್ ಅಮೆರಿಕಾ’ ಶೋನಲ್ಲಿ ಭಾಗಿಯಾಗಿದ್ದಾರೆ. ಈ ಶೋನಲ್ಲಿ ಸಿನಿಮಾ ಕೆರಿಯರ್ ಜೊತೆಗೆ ಹಲವು ವೈಯಕ್ತಿಕ ಸಂಗತಿಗಳನ್ನು ಅವರು ಹಂಚಿಕೊಂಡಿದ್ದಾರೆ.
ರಾಮ್ ಚರಣ್ ಪತ್ನಿ ಉಪಾಸನಾ (Upasana) ಇದೀಗ ಗರ್ಭಿಣಿ. ಅವರ ಹೆರಿಗೆಯನ್ನು ಅಮೆರಿಕಾ ವೈದ್ಯೆಯೊಬ್ಬರು ಮಾಡಲಿದ್ದಾರಂತೆ. ಈ ಸಂಗತಿಯನ್ನು ಸ್ವತಃ ರಾಮ್ ಚರಣ್ ತೇಜ ಅವರೇ ಹೇಳಿದ್ದಾರೆ. ನನ್ನ ಪತ್ನಿಯನ್ನು ಹೆರಿಗೆಯನ್ನು ಮಾಡಲು ಸಿದ್ಧರಿರಿ ಎಂದು ಅವರು ತಿಳಿಸಿದ್ದಾರೆ. ಸದ್ಯದಲ್ಲೇ ಉಪಾಸನಾ ಕೂಡ ಅಮೆರಿಕಾಗೆ ಬರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸೌರವ್ ಗಂಗೂಲಿ ಬಯೋಪಿಕ್‌ಗೆ ಹೀರೋ ಫಿಕ್ಸ್
ಮಾರ್ಚ್ 12ರಂದು ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವಿದ್ದರೂ, ಅದಕ್ಕೂ ಮುನ್ನ ರಾಮ್ ಚರಣ್ ಅಮೆರಿಕಾದಲ್ಲಿದ್ದಾರೆ. ಈ ಸಮಾರಂಭದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಸಿಗಬಹುದಾ ಎನ್ನುವ ನಿರೀಕ್ಷೆಯಲ್ಲೂ ಇದ್ದಾರೆ. ಇದೇ ಕಾರ್ಯಕ್ರಮದಲ್ಲಿ ಆರ್.ಆರ್.ಆರ್ ಸಿನಿಮಾದ ಸಂಗೀತ ನಿರ್ದೇಶಕ ಕೀರವಾಣಿ ಸಂಗೀತ ಕಾರ್ಯಕ್ರಮವನ್ನು ನಡೆಸಿ ಕೊಡಲಿದ್ದಾರೆ.
LIVE TV
[brid partner=56869869 player=32851 video=960834 autoplay=true]
ಧಾರವಾಡ: ವೈದ್ಯೋ ನಾರಾಯಣ ಹರಿ ಎನ್ನುವ ಮಾತಿದೆ. ವೈದ್ಯರು ಎಂದರೆ ದೇವರು ಎಂದು ನಂಬಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಮಾತಿಗೆ ಅನೇಕ ವೈದ್ಯರು (Doctor) ಅಪಚಾರವೆಸಗುವಂತಹ ಕೃತ್ಯ ನಡೆಸುತ್ತಿರುವುದು ಬೆಳಕಿಗೆ ಬರುತ್ತಿವೆ. ಇದೀಗ ಧಾರವಾಡದ (Dharwad) ವೈದ್ಯೆಯೊಬ್ಬರು ಇಂತಹುದೇ ಕೆಲಸ ಮಾಡಿದ್ದು, ಅವರಿಗೆ ನ್ಯಾಯಾಲಯ 11.10 ಲಕ್ಷ ರೂ. ದಂಡ ವಿಧಿಸಿದೆ.
ಧಾರವಾಡದ ಬಾವಿಕಟ್ಟಿ ಪ್ಲಾಟ್ ಬಡಾವಣೆ ನಿವಾಸಿಯಾಗಿರುವ ಪರಶುರಾಮ ಘಾಟಗೆ ಅವರು ತಮ್ಮ ಪತ್ನಿ ಪ್ರೀತಿ ಗರ್ಭವತಿಯಾದಾಗ (Pregnant), 3 ರಿಂದ 9 ತಿಂಗಳಿನವರೆಗೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿರುವ ಪ್ರಶಾಂತ ನರ್ಸಿಂಗ್ ಹೋಮ್‌ನ ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ತೋರಿಸಿದ್ದರು. ಒಟ್ಟು 5 ಬಾರಿ ಸ್ಕ್ಯಾನ್ ಮಾಡಿದ್ದರೂ ಗರ್ಭದಲ್ಲಿನ ಮಗುವಿನ (Baby) ಬೆಳವಣಿಗೆ ಚೆನ್ನಾಗಿದೆ ಎಂದು ವೈದ್ಯೆ ಹೇಳಿದ್ದರು. ಹೆರಿಗೆ ನೋವು ಆರಂಭವಾಗಿ, ಆಸ್ಪತ್ರೆಗೆ ಹೋದಾಗ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲು ಡಾ. ಸೌಭಾಗ್ಯ ಕುಲಕರ್ಣಿ ಸಲಹೆ ನೀಡಿದ್ದರು. ಆದರೆ ಹಣಕಾಸಿನ ತೊಂದರೆಯಿಂದಾಗಿ ಪರಶುರಾಮ ತಮ್ಮ ಪತ್ನಿಯನ್ನು ಧಾರವಾಡದ ಎಸ್‌ಡಿಎಮ್ ಆಸ್ಪತ್ರೆಗೆ ಕರೆದೊಯ್ದಿದ್ದರು.
2019ರ ಜನವರಿ 31 ರಂದು ಪ್ರೀತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗುವನ್ನು ನೋಡಿದ ತಂದೆ-ತಾಯಿಗೆ ಆಘಾತ ಆಗಿತ್ತು. ಏಕೆಂದರೆ ಮಗುವಿನ ಎರಡೂ ಕಾಲುಗಳು ಅಂಗವಿಕಲತೆಯಿಂದ (Disability) ಕೂಡಿದ್ದವು. ಇದನ್ನು ನೋಡಿದ ಪೋಷಕರಿಗೆ ದಿಕ್ಕು ಕಾಣದಂತೆ ಆಗಿತ್ತು. ಬಳಿಕ ದಂಪತಿ ವೈದ್ಯೆ ಸೌಭಾಗ್ಯ ಕುಲಕರ್ಣಿ ಬಳಿ ಹೋಗಿ ಚರ್ಚೆ ಮಾಡಿದ್ದಾರೆ. ಆದರೆ ವೈದ್ಯೆ ತಮ್ಮ ತಪ್ಪೇ ಇಲ್ಲ ಎಂದಿದ್ದರು.
ಬಳಿಕ ಮಗುವಿನ ಪೋಷಕರು ಧಾರವಾಡ ಜಿಲ್ಲಾ ವ್ಯಾಜ್ಯಗಳ ಗ್ರಾಹಕರ ನ್ಯಾಯಾಲದ ಮೊರೆ ಹೋಗಿದ್ದರು. ಇದರಲ್ಲಿ ವೈದ್ಯರ ತಪ್ಪಾಗಿದೆ ಎಂದು ಮನಗಂಡು ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ 11.10 ಲಕ್ಷ ರೂ. ದಂಡ ವಿಧಿಸಿದೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳ ಪ್ರಕಾರ ಹಾಗೂ ಅಲ್ಟ್ರಾಸೌಂಡ್ ಸ್ಕ್ಯಾನ್‌ನ ನಿಯಮಾವಳಿ ಪ್ರಕಾರ ಗರ್ಭಧಾರಣೆಯ 18-20 ವಾರಗಳ ಸ್ಕ್ಯಾನಿಂಗ್‌ನಲ್ಲಿ ಮಗುವಿನ ಆರೋಗ್ಯ, ಅದರ ಅಂಗಾಂಗಗಳು ಸರಿಯಾಗಿ ಇವೆಯೋ ಅಥವಾ ಇಲ್ಲವೋ ಅನ್ನುವ ಬಗ್ಗೆ ತಪಾಸಣೆ ಮಾಡಿದಾಗ ವೈದ್ಯರಿಗೆ ಎಲ್ಲಾ ವಿವರಗಳು ಗೊತ್ತಾಗುತ್ತದೆ. ಆದರೆ ಡಾ. ಸೌಭಾಗ್ಯ ಈ ಎಲ್ಲಾ ವಿಚಾರ ತಿಳಿದಿದ್ದರೂ ದಂಪತಿಗೆ ತಿಳಿಸಿರಲಿಲ್ಲ. ವೈದ್ಯಕೀಯ ನಿರ್ಲಕ್ಷ್ಯ ತೋರಿದ್ದರಿಂದ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಇದರಲ್ಲಿ ಕಂಡು ಬಂದಿದೆ. ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗ, ವೈದ್ಯೆಗೆ 11.10 ಲಕ್ಷ ರೂ. ಪರಿಹಾರವನ್ನು ಒಂದು ತಿಂಗಳೊಳಗಾಗಿ ದೂರುದಾರರಿಗೆ ನೀಡುವಂತೆ ಆದೇಶಿಸಿದೆ. ಈ ಪರಿಹಾರ ನೀಡದಿದ್ದಲ್ಲಿ ಮೊತ್ತದ ಮೇಲೆ ಶೇ.8 ರಷ್ಟು ಬಡ್ಡಿ ಕೊಡುವಂತೆ ತಜ್ಞ ವೈದ್ಯರಿಗೆ ಆಯೋಗ ಆದೇಶಿಸಿದೆ. ಇದನ್ನೂ ಓದಿ: ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್ ವಜಾ, ಇಶಾ ಫೌಂಡೇಷನ್‌ಗೆ ಬಿಗ್ ರಿಲೀಫ್
ಈ ಬಗ್ಗೆ ವೈದ್ಯೆ ಡಾ. ಸೌಭಾಗ್ಯ ಕುಲಕರ್ಣಿ ಅವರನ್ನು ಕೇಳಿದರೆ, ಇದರಲ್ಲಿ ನನ್ನದೇನೂ ತಪ್ಪಿಲ್ಲ. ಕೆಲವೊಮ್ಮೆ ಇಂತಹ ಘಟನೆಗಳು ನಡೆಯುತ್ತವೆ. ಅಪರೂಪದಲ್ಲಿ ಅಪರೂಪದ ಪ್ರಕರಣವಿದು ಎಂದು ಹೇಳಿದ್ದಾರೆ. ದಂಡದ ಮೊತ್ತದಲ್ಲಿ 8 ಲಕ್ಷ ರೂ. ಯನ್ನು ಮಗುವಿನ ಹೆಸರಿನಲ್ಲಿ, ಆಕೆ ವಯಸ್ಕಳಾಗುವವರೆಗೆ ತಂದೆ-ತಾಯಿ ಇಚ್ಚಿಸುವ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಠೇವಣಿಯಾಗಿಡಲು ಮತ್ತು ಪರಿಹಾರದ ಪೂರ್ತಿ ಹಣವನ್ನು ಅಂಗವಿಕಲ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಖರ್ಚು ಮಾಡಲು ಆಯೋಗ ತಿಳಿಸಿದೆ. ಇಂತಹದ್ದೊಂದು ತೀರ್ಪು ನೀಡುವ ಮೂಲಕ ಆಯೋಗ ನಿರ್ಲಕ್ಷ್ಯ ತೋರುವ ವೈದ್ಯರಿಗೆ ಎಚ್ಚರಿಕೆಯನ್ನು ನೀಡಿದಂತಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ
Live Tv
[brid partner=56869869 player=32851 video=960834 autoplay=true]
ಅಂಕಾರ: ಟರ್ಕಿ (Turkey) ಮತ್ತು ಸಿರಿಯಾ (Syria) ಭಾರೀ ಭೂಕಂಪದಿಂದ ನಲುಗಿ ಹೋಗಿದೆ. ಸಾವಿರಾರು ಮಂದಿ ಸಾವನ್ನಪ್ಪಿದ್ದು, ಹಲವರು ಸಾವು- ನೋವಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಅಚ್ಚರಿಯ ಪ್ರಸಂಗವೊಂದು ನಡೆದಿದೆ.
ವೀಡಿಯೋದಲ್ಲಿ ವ್ಯಕ್ತಿಯೊಬ್ಬ ನವಜಾತ ಶಿಶುವನ್ನು ಎತ್ತಿಕೊಂಡು ಓಡುತ್ತಿರುವುದನ್ನು ನಾವು ಕಾಣಬಹುದಾಗಿದೆ. ಈ ವೀಡಿಯೊವನ್ನು ಸಿರಿಯಾದ ಅಲೆಪ್ಪೊದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ರಕ್ಷಿಸಲ್ಪಟ್ಟ ನಂತರ ನವಜಾತ ಗಂಡು ಶಿಶು (Boy Baby) ಬದುಕುಳಿದಿದೆ. ಆದರೆ ಅವಶೇಷಗಳ ಅಡಿಯಲ್ಲಿ ಜನ್ಮ ನೀಡಿದ ತಾಯಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಸೋಮವಾರ ಮುಂಜಾನೆ ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು 2,500ಕ್ಕೂ ಹೆಚ್ಚು ಜನರ ಹತ್ಯೆಗೆ ಕಾರಣವಾಯಿತು. ಟರ್ಕಿ ಸರ್ಕಾರದ ಪ್ರಕಾರ, ಕುಸಿದ ಕಟ್ಟಡಗಳ ಅವಶೇಷಗಳ ನಡುವೆ ರಕ್ಷಕರು ಬದುಕುಳಿದವರನ್ನು ಹುಡುಕುವುದನ್ನು ಮುಂದುವರಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ದೇಶವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತು.
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಪಟ್ಟಣದ ರಾಮಪಟ್ಟಣ ಸರ್ಕಲ್‌ನ ರಸ್ತೆಯ ಫುಟ್‌ಪಾತ್ (Footpath) ಮೇಲೆ ಆಗತಾನೆ ಹೆರಿಗೆ ಆಗಿರುವ ನವಜಾತ ಶಿಶುವಿನ (Newborn Baby) ಶವ ಪತ್ತೆಯಾಗಿದೆ.
ಪಟ್ಟಣದ ವಾರ್ಡ್ ನಂಬರ್ 9ರ ರಾಮಪಟ್ಟಣ ಸರ್ಕಲ್‌ನಲ್ಲಿ ಫುಟ್‌ಪಾತ್ ಮೇಲೆ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ ಪಟ್ಟಣದ ರಾಮಪಟ್ಟಣ ಸರ್ಕಲ್‌ನಲ್ಲಿ ಗುಡಿಬಂಡೆ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರು ಪಟ್ಟಣದಲ್ಲಿ ಕಸ ಗುಡಿಸಲು ಹೋದಾಗ ಶಿಶು ಪತ್ತೆಯಾಗಿದೆ.
ತಕ್ಷಣ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಗುಡಿಬಂಡೆ ಠಾಣೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ನವಜಾತ ಶಿಶುವನ್ನು ಪರಿಶೀಲನೆ ನಡೆಸಿದ್ದಾರೆ. ಆದರೆ ಮಗು ಸಾವನ್ನಪ್ಪಿರುವುದು ತಿಳಿದುಬಂದಿದೆ.