Tag: ಹೆಸರು ಬದಲಾವಣೆ

  • ರಾಮನಗರ ಜಿಲ್ಲೆ ಹೆಸರು ಬದಲಾವಣೆ ಹಿಂದೆ ತುಷ್ಟೀಕರಣ ಅಜೆಂಡಾ: ನಿಖಿಲ್ ಕುಮಾರಸ್ವಾಮಿ

    ರಾಮನಗರ ಜಿಲ್ಲೆ ಹೆಸರು ಬದಲಾವಣೆ ಹಿಂದೆ ತುಷ್ಟೀಕರಣ ಅಜೆಂಡಾ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು/ರಾಮನಗರ: ರಾಮನಗರ (Ramanagara) ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಿರೋಧ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂಗೆ ಮಹಿಳೆ ಬಲಿ

    ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರದ ಕರಾಳಮುಖ. ಕೆಲವರ ತುಷ್ಟೀಕರಣದ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಕಟುವಾಗಿ ಟೀಕಿಸಿದರು. ಇದನ್ನೂ ಓದಿ: ಖರ್ಗೆಗೆ ಒಂದು ಕಡೆ ಲ್ಯಾಂಡ್‌ ಅಲಾಟ್‌ ಆಗಿದೆಯಂತೆ: ರಮೇಶ್‌ ಜಿಗಜಿಣಗಿ ಹೊಸ ಬಾಂಬ್‌

    ವಿಧಾನಸೌಧದ ಶಿಲ್ಪಿ ಕೆಂಗಲ್ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಹೆಚ್.ಡಿ.ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. ನಮ್ಮ ರಾಮನಗರ ನಮ್ಮ ಹೆಮ್ಮೆ ಎಂದು ಹೇಳಿದರು. ಇದನ್ನೂ ಓದಿ: ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

  • ಐತಿಹಾಸಿಕ ಸಿಂಗಾಪುರ ಕೆರೆ ಮರುನಾಮಕರಣಕ್ಕೆ ಭಾರೀ ವಿರೋಧ

    ಐತಿಹಾಸಿಕ ಸಿಂಗಾಪುರ ಕೆರೆ ಮರುನಾಮಕರಣಕ್ಕೆ ಭಾರೀ ವಿರೋಧ

    ಬೆಂಗಳೂರು: ಅದು ನೂರಾರು ವರ್ಷಗಳ ಸುದೀರ್ಘ ಅಸ್ತಿತ್ವ ಹೊಂದಿರುವ ಐತಿಹಾಸಿಕ ಪ್ರದೇಶ. ದಶಕಗಳ ಹಿಂದೆಯೇ ಇತಿಹಾಸಕಾರರು ಇದನ್ನು ಕೋಟೆಯ ಪಟ್ಟಣ ಎಂದು ಕರೆದಿದ್ದರು. ಇದೀಗ ಕೆರೆಗೆ ಇದ್ದ ಊರಿನ ಹೆಸರಿನ ಬದಲಾವಣೆ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದ್ದು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ.

    16 ನೇ ಶತಮಾನದ ಆರಂಭದಿಂದಲೂ ಜನವಸತಿ ಪ್ರದೇಶವಾಗಿದೆ. ಈಗ ವಿಚಾರ ಏನಂದ್ರೆ, ಐತಿಹಾಸಿಕ ಸಿಂಗಾಪುರ ಕೆರೆ (Singapura Lake) ಯ ಹೆಸರನ್ನ ಬದಲಾವಣೆ ಮಾಡಿದ್ದರ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾವರ್ಕರ್ ವಿರುದ್ಧ ಹೇಳಿಕೆ – ರಾಹುಲ್ ಗಾಂಧಿ ವಿರುದ್ಧ ಪೊಲೀಸರಿಗೆ ದೂರು

    ಸಿಂಗಾಪುರ ಕೆರೆಗೆ ಭಗವಾನ್ ಬುದ್ದ, ಅಂಬೇಡ್ಕರ್ ಕೆರೆ ಎಂದು ಮರುನಾಮಕರಣ ಮಾಡಿರೋದು ಈಗ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ನವೆಂಬರ್ 6ರಂದು ಸಿಎಂ ಬೊಮ್ಮಾಯಿ (Basavaraj Bommai) ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ್ದಾರೆ. ಸಾರ್ವಜನಿಕರು ಇದರ ವಿರುದ್ಧ ತಿರುಗಿ ಬಿದ್ದಿದ್ದು, ಯಾವುದೇ ಕೆರೆಯನ್ನ ಬದಲಿಸುವ ಅಧಿಕಾರ ಬಿಬಿಎಂಪಿಗೆ ಇಲ್ಲ. ನಗರದ ಇತರೆ ಕೆರೆಗಳಿಗೆ ಊರಿನ ಹೆಸರನ್ನೇ ಇಡಲಾಗಿದೆ. ಸಿಂಗಾಪುರಕ್ಕೆ ಇರುವ ಐತಿಹಾಸಿಕ ಕೆರೆಯ ಪ್ರತಿಮೆಯನ್ನ ಹಾಳು ಮಾಡುವ ಕೆಲಸ ಆಗ್ತಿದೆ. ಕೂಡಲೇ ಇದನ್ನ ಹಿಂಪಡೆದು ಐತಿಹಾಸಿಕವಾಗಿದ್ದ ಸಿಂಗಾಪುರ ಕೆರೆ ಅಂತಲೇ ಮುಂದುವರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ಎಲ್ಲಿಯೂ ಸಹ ಜೀವಂತ ಕೆರೆಗೆ ‘ಪಾರ್ಕ್’ (Park) ಅಂತ ಯಾರೂ ಕರೆದಿರಲಿಲ್ಲ. ಆದರೆ ಈಗ ನೂರಾರು ವರ್ಷಗಳ ಇತಿಹಾಸವಿರುವ ಕೆರೆಗೆ ಈ ರೀತಿ ಪಾರ್ಕ್ ಅಂತ ಹೆಸರು ಬದಲಿಸಿದ್ದಾರೆ. ರಾಜಕೀಯ ದುರುದ್ದೇಶಕ್ಕೆ ಹೀಗೆ ಮಾಡಲಾಗ್ತಿದೆ. ನಾವು ಅಂಬೇಡ್ಕರ್ ಹೆಸರಿಗೆ ವಿರೋಧ ಮಾಡ್ತಿಲ್ಲ, ಊರಿಗೆ ಹಿರಿಮೆಗಾಗಿ ಸಿಂಗಾಪುರ ಹೆಸರನ್ನೇ ಕೆರೆಗೆ ಮುಂದುವರಿಸಬೇಕು. ಇಲ್ಲವಾದರೆ ಕಾನೂನಾತ್ಮಕವಾಗಿ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

    ಒಟ್ಟಾರೆ, 16ನೇ ಶತಮಾನದಿಂದಲೂ ಜನವಸತಿ ಪ್ರದೇಶವಾಗಿರುವ ಸಿಂಗಾಪುರ ಗ್ರಾಮದ ಇತಿಹಾಸ ಮರೆಮಾಚಲು ರಾಜಕೀಯ ಬಳಸಲಾಗ್ತಿದೆ. ಕೆರೆಯ ಹೆಸರನ್ನ ಬದಲಿಸಿದ್ದರ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆಯನ್ನ ಸಿಂಗಾಪುರ ಗ್ರಾಮಸ್ಥರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಸಣ್ಣತನದ ಪರಮಾವಧಿ: ಕೆ.ಎನ್ ರಾಜಣ್ಣ

    ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಸಣ್ಣತನದ ಪರಮಾವಧಿ: ಕೆ.ಎನ್ ರಾಜಣ್ಣ

    – ಸಿಟಿ ರವಿ ನಾಲಿಗೆಯನ್ನ ಇಟ್ಟಿಗೆಯಿಂದ ಉಜ್ಜಿ ಪಾವನ ಮಾಡ್ಬೇಕು

    ತುಮಕೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವುದು ಸಣ್ಣತನದ ಪರಮಾವಧಿ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಕಿಡಿಕಾರಿದ್ದಾರೆ.

    ಮಧುಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ರಾಜ್ಯ ಸರ್ಕಾರದ ವಿರುದ್ಧ ಗರಂ ಆದರು. ಕ್ಯಾಂಟೀನ್ ಹೆಸರು ಬದಲಾಯಿಸೋದನ್ನ ಬಿಟ್ಟು ಅದೇ ಹೆಸರಲ್ಲಿ ಬೇರೆ ಯಾವುದಾದರೂ ಬಡವರ ಪರ ಕಾರ್ಯಕ್ರಮ ರೂಪಿಸಲಿ. ಖೇಲ್ ರತ್ನಗೆ ರಾಜೀವ್ ಗಾಂಧಿ ಹೆಸರು ತೆಗೆಯುವಂತಹದ್ದು ಅಪಚಾರ ಮಾಡಿದ ಹಾಗೆ. ಇಂದಿರಾ ಗಾಂಧಿಯವರ ಹೆಸರು ಇಡೀ ಪ್ರಪಂಚವೇ ನೆನಪಿಸಿಕೊಳ್ಳುವಂತಹದ್ದು ಎಂದು ಬಣ್ಣಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಇಂಡಿಯಾ ಎಂದರೆ ಇಟ್ ಇಸ್ ಇಂದಿರಾ ಎಂದರ್ಥ. ಸಿಟಿ ರವಿ ಯಾರ್ರೀ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಇವರು ಹುಟ್ಟೇ ಇರಲಿಲ್ಲ ಈ ಗಿರಾಕಿ. ಸ್ವಾತಂತ್ರ್ಯ ತರಲಿಕ್ಕೆ ಎಷ್ಟು ಕಷ್ಟ ಅನುಭವಿಸಿದ್ದಾರೆ ಗೊತ್ತಾ ಇವರಿಗೆ. ಆರ್ ಎಸ್ ಎಸ್ ಟ್ರೇನಿಂಗ್ ಭಾಷಣ ಮಾಡೋದು ಹೇಳಿಕೊಟ್ಟಿದ್ದಾರೆ, ಭಾಷಣ ಮಾಡ್ಕೊಂಡು ತಿರುಗ್ತಾರೆ. ಅವರ ನಾಲಿಗೆಗೆ ಸ್ವಲ್ಪ ಇಟ್ಟಿಗೆ ತಗೊಂಡು ಉಜ್ಜಿ ಪಾವನ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು.

    ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ:
    ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ.

  • ಬಿಬಿಎಂಪಿ ಶಾಲೆಗಳಿಗೆ ಕೆಂಪೇಗೌಡ ಹೆಸರು ನಾಮಕರಣ

    ಬಿಬಿಎಂಪಿ ಶಾಲೆಗಳಿಗೆ ಕೆಂಪೇಗೌಡ ಹೆಸರು ನಾಮಕರಣ

    ಬೆಂಗಳೂರು: ಬಿಬಿಎಂಪಿ ಶಾಲೆಗಳಿಗೆ ಕೆಂಪೇಗೌಡರ ಹೆಸರು ಇಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ನಾರಾಯಣ್ ಸ್ವಾಮಿ ಹೇಳಿದ್ದಾರೆ.

    ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸ್ಥಾಯಿ ಸಮಿತಿ ಹಾಗೂ ನಗರ ಜಿಲ್ಲಾ ಪಂಚಾಯತ್ ಶಿಕ್ಷಣ ಅಧ್ಯಕ್ಷ ನರಸಿಂಹಮೂರ್ತಿ ಗುರುವಾರ ನಡೆಸಿದ ಜಂಟಿ ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ತಿಳಿಸಿದರು. ಈ ಬಗ್ಗೆ ಮಾತನಾಡಿದ ನರಸಿಂಹಮೂರ್ತಿ ಅವರು, ಬೆಂಗಳೂರಿನಲ್ಲಿರುವ ಸರ್ಕಾರಿ ಶಾಲೆ, ಪಾಲಿಕೆ ಶಾಲೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಮಾಡಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಹಣಕಾಸಿನ ವ್ಯವಸ್ಥೆ ಇಲ್ಲ. ಇದಕ್ಕೆ ಪಾಲಿಕೆ ಶಿಕ್ಷಣ ಸಮಿತಿಯಲ್ಲಿ ಮನವಿ ಮಾಡಿದ್ದೆವು. ಇದಕ್ಕೆ ಸ್ಪಂದಿಸಿದ ಪಾಲಿಕೆ ಶಿಕ್ಷಣ ಸಮಿತಿ ಈ ಬಜೆಟ್‍ನಲ್ಲಿ ಮೂಲಭೂತ ಸೌಕರ್ಯ ಕೊಡುವ ಭರವಸೆ ನೀಡಿದೆ ಎಂದರು.

    ಜೊತೆಗೆ ಪಾಲಿಕೆ ವ್ಯಾಪ್ತಿಯಲ್ಲಿ 529 ಸರ್ಕಾರಿ ಶಾಲೆಗಳಿವೆ. ನೀರು ಮತ್ತು ವಿದ್ಯುತ್ ಉಚಿತ ಹಾಗೂ ಮೂಲಸೌಕರ್ಯವೂ ಬಿಬಿಎಂಪಿ ಒದಗಿಸಲಿದೆ. 30 ಕೋಟಿ ರೂ. ವೆಚ್ಚದಲ್ಲಿ ಈ ಬಗ್ಗೆ ಬಜೆಟ್‍ನಲ್ಲಿ ಪ್ರಸ್ತಾವನೆ ಇಡಲಾಗಿದೆ. 529 ಸರ್ಕಾರಿ ಶಾಲೆಗಳ ನಿರ್ವಹಣೆಗೆ ಬಿಬಿಎಂಪಿ ಹಾಗೂ ಜಿಲ್ಲಾ ಪಂಚಾಯತ್‍ಗೆ ಕೇವಲ 75 ಲಕ್ಷ ರೂ. ಅನುದಾನ ಇದೆ. 1,300 ಕ್ಕೂ ಹೆಚ್ಚು ಶಾಲೆಗಳಿವೆ. ಬರೀ ಸಂಬಳ ಕೊಡೋಕೆ ಹಣ ಸಾಕಾಗ್ತಿದೆ. ನಮಗೆ ಸಣ್ಣ ವಾಹನದ ವ್ಯವಸ್ಥೆಯೂ ಇಲ್ಲ. ಇಲಾಖೆ ಖರ್ಚು ವೆಚ್ಚಕ್ಕೆ 75 ಲಕ್ಷ ಸಾಲುತ್ತಿಲ್ಲ ಎಂದು ಮಂಜುಳಾ ನಾರಾಯಣಸ್ವಾಮಿ ಹೇಳಿದರು.

    ಕೆಂಪೇಗೌಡರು ಕಟ್ಟಿರುವ ನಾಡು ಇದು. ಹೀಗಾಗಿ ಪಾಲಿಕೆ ಶಾಲೆಗಳಿಗೂ ಕೆಂಪೇಗೌಡ ಹೆಸರಿಡಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೌನ್ಸಿಲ್‍ನಲ್ಲಿ ಪ್ರಸ್ತಾವನೆ ಇಡಲಾಗುವುದು ಎಂದರು. ಪಾಲಿಕೆ ಶಾಲೆಗಳ ಗುಣಮಟ್ಟವನ್ನೂ ಹೆಚ್ಚಳ ಮಾಡ್ತೇವೆ. ಮೂಲಭೂತ ಸೌಕರ್ಯಗಳಾದ ನೀರು, ಶೌಚಾಲಯ, ವಿದ್ಯುತ್ ನೀಡದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.