ಹೇಗ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ನೆದರ್‍ಲೆಂಡ್‍ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದೆ.
ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದ್ದು, ಕುಲಭೂಷಣ್ ಜಾಧವ್ ಅವರಿಗೆ ಭಾರತ ರಾಜತಾಂತ್ರಿಕ ನೆರವನ್ನು ನೀಡಬೇಕು ಎಂದು ಸೂಚಿಸಿದ್ದಾರೆ.
ಭಾರತದ ಪರ ಹಿರಿಯ ವಕೀಲ ದೀಪಕ್ ಮಿತ್ತಲ್ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ವಾದ ಮಂಡಿಸಿದ್ದರು.
ಮೂಲಭೂತ ಹಕ್ಕಿಗಾಗಿ ನಾವು ಹೋರಾಡುತ್ತಿದ್ದೇವೆ. ಜಾಧವ್ ಅವರನ್ನು ಬಿಡುಗಡೆ ಮಾಡಬೇಕು ಅಂತ ಭಾರತ ವಾದ ಮಂಡಿಸಿದ್ದರೆ, ಆದರೆ ಪಾಕಿಸ್ತಾನ ಭಾರತದ ವಾದವನ್ನು ಒಪ್ಪದೇ ಮೊಂಡಾಟ ಮಾಡ್ತು. ಭಾರತ ಅಂತಾರಾಷ್ಟ್ರೀಯ ಕೋರ್ಟನ್ನ ರಾಜಕೀಯ ಥಿಯೇಟರ್ ಥರ ಬಳಸ್ತಿದೆ ಅಂತಾ ವಾದ ಮಂಡಿಸಿತ್ತು.
ಭಾರತದ ವಾದ ಹೀಗಿತ್ತು
– ಜಾಧವ್ ವಿಚಾರಣೆ ವೇಳೆ ಪಕ್ಷಪಾತ ನಡೆದಿದ್ದು, ಪಾಕಿಸ್ತಾನ ಜಾಧವ್‍ಗೆ ರಾಜತಾಂತ್ರಿಕ ನೆರವು ನೀಡಲು ನಿರಾಕರಿಸಿದೆ.
– ಅಕ್ರಮವಾಗಿ ಜಾಧವ್ ಬಂಧಿಸಿ ವಿಯೆನ್ನಾ ಒಪ್ಪಂದ ಮುರಿದಿದೆ.
– ಪಾಕಿಸ್ತಾನದಿಂದ ಸತ್ಯದ ಸಮಾಧಿ ಮಾಡೋ ಪ್ರಯತ್ನ ಮಾಡುತ್ತಿದೆ.
– ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ
– ಮೂಲಭೂತ ಹಕ್ಕಿಗಾಗಿ ನಾವು ಹೋರಾಡ್ತಿದ್ದೇವೆ, ಜಾಧವ್ ಬಿಡುಗಡೆ ಮಾಡಿ
ಪಾಕಿಸ್ತಾನದ ವಾದ ಹೀಗಿತ್ತು
– ಜಾಧವ್ ನಮ್ಮ ಬಳಿ ತಪ್ಪೊಪ್ಪಿಕೊಂಡಿದ್ದಾರೆ
– ಜಾಧವ್ ಗಲ್ಲಿಗೇರಿಸಲು ನಮಗೆ ಆತುರ ಇಲ್ಲ
– ಭಾರತದ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ
– ಭಾರತ ನ್ಯಾಯಾಲಯವನ್ನು ರಾಜಕೀಯ ನ್ಯಾಯಾಲಯವನ್ನಾಗಿ ಬಳಕೆ ಮಾಡ್ತಿದೆ
– ರಾಜತಾಂತ್ರಿಕ ನೆರವಿಗೆ ಜಾಧವ್ ಅರ್ಹನಲ್ಲ
– ಪಾಸ್‍ಪೋರ್ಟ್‍ನಲ್ಲಿ ಜಾಧವ್ ಅಂತಾ ಹೆಸರಿಲ್ಲ, ಮುಸ್ಲಿಂ ವ್ಯಕ್ತಿಯ ಹೆಸರು ಇದೆ
ಏನಿದು ಪ್ರಕರಣ?
ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.
ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.
ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು.ಆದರೆ ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನ್ಯಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್‍ನಲ್ಲಿ ಭಾರತ ಮಂಡಿಸಿತ್ತು.