Tag: ಹೇಮಂತ್ ರಾವ್

  • ಮತ್ತೆ ಮುಂದಕ್ಕೆ ಹೋಗುತ್ತಾ ರಕ್ಷಿತ್ ಶೆಟ್ಟಿ ನಟನೆಯ ಸಿನಿಮಾ

    ಮತ್ತೆ ಮುಂದಕ್ಕೆ ಹೋಗುತ್ತಾ ರಕ್ಷಿತ್ ಶೆಟ್ಟಿ ನಟನೆಯ ಸಿನಿಮಾ

    ಪ್ತಸಾಗರದಾಚೆ ಎಲ್ಲೋ ಸಿನಿಮಾದ ರಿಲೀಸ್ (, Released)ಡೇಟ್ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗುತ್ತಿಲ್ಲ ಚಿತ್ರತಂಡವೇ ಹೇಳಿಕೊಂಡಿತ್ತು.

    ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದರು. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ ಎಂದು ನಿಗದಿ ಆಗಿತ್ತು. ಇದೀಗ ಅದು ಕೂಡ ಮುಂದೆ ಹೋಗಿದೆ ಎಂದು ಹೇಳಲಾಗುತ್ತಿದೆ. ನವೆಂಬರ್ 10ಕ್ಕೆ ಬಿಡುಗಡೆ ಪ್ಲ್ಯಾನ್ ಮಾಡಲಾಗುತ್ತಿವೆ ಎನ್ನುತ್ತವೆ ಮೂಲಗಳು. ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಚಿತ್ರತಂಡದಿಂದ ಬಂದಿಲ್ಲ.

    ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

    ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದಾರೆ.

     

    ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದಾರೆ. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸಪ್ತಸಾಗರ’ ಮೆಚ್ಚಿ ಮನಸಾರೆ ಹೊಗಳಿದ ನಟ ಪ್ರಕಾಶ್ ರಾಜ್

    ‘ಸಪ್ತಸಾಗರ’ ಮೆಚ್ಚಿ ಮನಸಾರೆ ಹೊಗಳಿದ ನಟ ಪ್ರಕಾಶ್ ರಾಜ್

    ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದಾರೆ.

    ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದಾರೆ. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದಾರೆ.

    ಪಾರ್ಟ್ 2 ಯಾವಾಗ?

    ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿತ್ತು. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗುತ್ತಿಲ್ಲ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ಮೂಡಿದೆ.

    ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ.

    ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

     

    ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಪ್ತ ಸಾಗರದಾಚೆ ಎಲ್ಲೋ ‘ಹೋರಾಟ’ ಮಾಡುತ್ತಿರುವ ರಕ್ಷಿತ್ ಶೆಟ್ಟಿ

    ಸಪ್ತ ಸಾಗರದಾಚೆ ಎಲ್ಲೋ ‘ಹೋರಾಟ’ ಮಾಡುತ್ತಿರುವ ರಕ್ಷಿತ್ ಶೆಟ್ಟಿ

    ಕ್ಷಿತ್ ಶೆಟ್ಟಿ (Rakshit Shetty)  ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagarachache Yallo) ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೈಡ್ 1 ಸೆಪ್ಟೆಂಬರ್ 1 ರಂದು ಬಿಡುಗಡೆಯಾದರೆ,  ಸೈಡ್ 2 ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

    ಹೇಮಂತ್ ಎಂ ರಾವ್  (Hemant Rao) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿ ವಲಯ ಕಾತುರದಿಂದ ಕಾಯುತ್ತಿದೆ.  ಇದನ್ನೂ ಓದಿ:‘ಹಿರಣ್ಯಕಶ್ಯಪ’ನಾಗಿ ಎಂಟ್ರಿ ಕೊಟ್ಟ ರಾಣಾ ದಗ್ಗುಬಾಟಿ ಮೇಲೆ ಶಾಕುಂತಲಂ ನಿರ್ದೇಶಕ ಗರಂ

    ಸದ್ಯ ಈ ಚಿತ್ರಕ್ಕಾಗಿ ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ ‘ಹೋರಾಟ’ ಎಂಬ ಹಾಡಿನ ಲಿರಿಕಲ್ ವಿಡಿಯೋ ಪರಂವಃ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಎಂ.ಸಿ.ಬಿಜ್ಜು(ರಾಪರ್) ಹಾಗೂ ಕೀರ್ತನ್ ಹೊಳ್ಳ ಹಾಡಿರುವ ಈ ಹಾಡು ಎಲ್ಲರ ಪ್ರಶಂಸೆಗೆ ಪಾತ್ರವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು.

    ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರ ಜೆ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯತಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಅಚ್ಚರಿಯ ಉಡುಗೊರೆ : ಸಪ್ತಸಾಗರದ ರಹಸ್ಯ

    ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಅಚ್ಚರಿಯ ಉಡುಗೊರೆ : ಸಪ್ತಸಾಗರದ ರಹಸ್ಯ

    ಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ಹೇಮಂತ್ ರಾವ್ (Hemant Rao) ಕಾಂಬಿನೇಷನ್ ನ ‘ಸಪ್ತಸಾಗರದಾಚೆ ಎಲ್ಲೋ’  ಸಿನಿಮಾ ಟೀಮ್ ನಿಂದ ಅಚ್ಚರಿಯ ಸುದ್ದಿಯೊಂದು ಬಂದಿದೆ. ಇಂದು ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬ. ಈ ಸಂದರ್ಭದಲ್ಲಿ ಚಿತ್ರತಂಡ ಹೊಸ ವಿಷಯವೊಂದನ್ನು ಹೊರ ಹಾಕಿದ್ದು, ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಎರಡು ಭಾಗವಾಗಿ ಮೂಡಿ ಬರಲಿದೆಯಂತೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುರಿತು ಈ ತಿಂಗಳು 15 ರಂದು ಹೇಳಲಿದ್ದಾರಂತೆ ನಿರ್ದೇಶಕ ಹೇಮಂತ್.

    ಸಿಂಪಲ್ ಸ್ಟಾರ್ ರಕ್ಷಿತ್ ಇದೀಗ `ಸಪ್ತಸಾಗರದಾಚೆ ಎಲ್ಲೋ’ (Saptasagaradache Yello) ಚಿತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ. ರಕ್ಷಿತ್‌ಗೆ ನಾಯಕಿಯರಾಗಿ ರುಕ್ಮಿಣಿ ವಸಂತ್ (Rukmini Vasanth) ಮತ್ತು ಚೈತ್ರಾ ಆಚಾರ್ (Chaitra Achar) ನಟಿಸಿದ್ದಾರೆ. ಇನ್ನೂ ಬರೋಬ್ಬರಿ 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕಡಲ ತಡಿಯಲ್ಲಿ ಪೂಜೆ ಸಲ್ಲಿಸಿ ಚಿತ್ರತಂಡ ಕುಂಬಳ ಕಾಯಿ ಒಡೆದಿದೆ. ಈ ವಿಚಾರವನ್ನು ನಟ ರಕ್ಷಿತ್ ಶೆಟ್ಟಿ ವಿಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆ ಹಂಚಿಕೊಂಡಿದ್ದರು. ಇದನ್ನೂ ಓದಿ:ಅಂಬಿ ಪುತ್ರನ ಮದುವೆ ಸಂಭ್ರಮದಲ್ಲಿ ಮಿಂಚಿದ ಯಶ್, ರಾಧಿಕಾ ಜೋಡಿ

    `ಕವಲು ದಾರಿ’ (Kavaludari) ಚಿತ್ರದ ನಂತರ ನಿರ್ದೇಶಕ ಹೇಮಂತ್ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೈಗೆತ್ತಿಕೊಂಡಿದ್ದರು. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್‌ಗೆ ಒಂದಷ್ಟು ದಿನ ವರ್ಕ್ಶಾಪ್ ನಡೆಸಿ ನಂತರ ಚಿತ್ರೀಕರಣ ಆರಂಭಿಸಿದ್ದರು. ಚಿತ್ರದಲ್ಲಿ 2 ಭಿನ್ನ ಶೇಡ್‌ಗಳಿರೋ ಪಾತ್ರದಲ್ಲಿ ರಕ್ಷಿತ್ ನಟಿಸಿದ್ದಾರೆ.

     

    ತನ್ನ ಪಾತ್ರಕ್ಕಾಗಿ ರಕ್ಷಿತ್ 15 ರಿಂದ 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತೆ ತೂಕ ಇಳಿಸಿಕೊಂಡು ಕಸರತ್ತು ಕೂಡ ಮಾಡಿದ್ದಾರೆ. ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ. `777 ಚಾರ್ಲಿ’ ಸಿನಿಮಾದ ಸೂಪರ್ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಅವರನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್‌ಗೆ ಎದುರು ನೋಡ್ತಿದ್ದಾರೆ.

  • ಏಪ್ರಿಲ್ 7ಕ್ಕೆ ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಟೀಸರ್ ರಿಲೀಸ್

    ಏಪ್ರಿಲ್ 7ಕ್ಕೆ ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಟೀಸರ್ ರಿಲೀಸ್

    ಗುಲ್ಟು ಖ್ಯಾತಿಯ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ (Janardhan Chikkanna) ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ (Hemanth Rao) ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಅಜ್ಞಾತವಾಸಿ’ (Ajnathavasi) ಸಿನಿಮಾದ ಟೀಸರ್ (Teaser) ಇದೇ ಏಪ್ರಿಲ್ 7ರಂದು ರಿಲೀಸ್ ಆಗಲಿದೆ. ಜನಾರ್ದನ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಹೇಮಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಈ ಕಾರಣದಿಂದಾಗಿಯೇ ಸಿನಿಮಾ ಕುತೂಹಲ ಮೂಡಿಸಿದೆ.

    ಈ ಸಿನಿಮಾದಲ್ಲಿ ರಂಗಾಯಣ ರಘು (Rangayana Raghu) ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು, ರಂಗಾಯಣ ರಘು ಅವರೊಂದಿಗೆ ನಟಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ ತಾರಾಗಣದಲ್ಲಿ ಇದ್ದಾರೆ. ರಂಗಾಯಣ ರಘು   ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರೆ,  ಸಿದ್ದು ಮೂಲಿಮನಿ ಹಾಗೂ ಪಾವನ ಗೌಡ ಅವರ ಪಾತ್ರವೂ ವಿಶೇಷವಾಗಿದೆಯಂತೆ. ಇದನ್ನೂ ಓದಿ:‘ವೀರಂ’ ಮೂಲಕ ವಿಷ್ಣುವರ್ಧನ್ ಅಭಿಮಾನಿಯಾದ ಪ್ರಜ್ವಲ್ ದೇವರಾಜ್

    ಈ ಕುರಿತು ಮಾತನಾಡಿದ ಜನಾರ್ದನ್ ಚಿಕ್ಕಣ್ಣ, ‘ನನ್ನ ಗುರುಗಳಾದ ಕೃಷ್ಣರಾಜ್ ಅವರು ಕಥೆ ಬರೆದಿದ್ದಾರೆ. 1997 ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಅವರು ಕಥೆ ಹೇಳಿದ ರೀತಿ ತುಂಬಾ ಹಿಡಿಸಿತು.  ನನಗೆ ತಿಳಿದ ಹಾಗೆ ಇದೊಂದು ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಅನ್ನಬಹುದು. ಆನಂತರ ಹೇಮಂತ್ ರಾವ್ ಅವರನ್ನು ಭೇಟಿಯಾಗಿ ಕಥೆ ಹೇಳಿದಾಗ ಕೇವಲ ಅರ್ಧಗಂಟೆಯಲ್ಲಿ ನಿರ್ಮಾಣಕ್ಕೆ ಒಪ್ಪಿಕೊಂಡರು.  ಅದ್ವೈತ ಛಾಯಾಗ್ರಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ’ ಎನ್ನುತ್ತಾರೆ.

  • ಕನ್ನಡ ಸಿನಿಮಾದಲ್ಲಿ ನಟಿಸಿದ್ರಾ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ?: ರಕ್ಷಿತ್ ಶೆಟ್ಟಿ ಸಿನಿಮಾದಲ್ಲಿ ಮಾಜಿ ಕ್ರಿಕೆಟ್ ನಾಯಕ

    ಕನ್ನಡ ಸಿನಿಮಾದಲ್ಲಿ ನಟಿಸಿದ್ರಾ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ?: ರಕ್ಷಿತ್ ಶೆಟ್ಟಿ ಸಿನಿಮಾದಲ್ಲಿ ಮಾಜಿ ಕ್ರಿಕೆಟ್ ನಾಯಕ

    ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಮೊದಲ ಹಂತದ ಶೂಟಿಂಗ್ ಮುಗಿದಿದೆ. ಎರಡನೇ ಹಂತದ ಚಿತ್ರೀಕರಣಕ್ಕಾಗಿ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದ್ದು , ಈ ಸಿನಿಮಾದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ, ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ನಟಿಸುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ಸಿನಿಮಾದ ಟೈಟಲ್ ಹೊಂದಿರುವ ಪೋಸ್ಟರ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ಸೋನಮ್ ಕಪೂರ್ ಬೇಬಿ ಬಂಪ್

    ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ನಾಯಕ ರಕ್ಷಿತ್ ಶೆಟ್ಟಿ. ಈ ಸಿನಿಮಾದ ಮುಂದಿನ ಹಂತದ ಶೂಟಿಂಗ್ ಗಾಗಿ ಅವರು ಕೊಂಚ ದಪ್ಪ ಆಗುತ್ತಿದ್ದಾರೆ. ತೂಕ ಹೆಚ್ಚಿಸಿಕೊಳ್ಳಲೆಂದೇ ಶೂಟಿಂಗ್ ನಿಲ್ಲಿಸಲಾಗಿದೆ. ಈ ಮಧ್ಯ ವಿರಾಟ್ ಕೊಹ್ಲಿ ಇರುವ ಪೋಸ್ಟರ್ ವೊಂದು ರಿಲೀಸ್ ಆಗಿ ಭಾರೀ ಕುತೂಹಲವಂತೂ ಮೂಡಿಸಿದೆ.

    ವಿರಾಟ್ ಕೊಹ್ಲಿ ಬೀಚ್ ದಂಡೆಯಲ್ಲಿ ಕೇವಲ ಚಡ್ಡಿ ಮೇಲೆ ಕುಳಿತಿರುವ ಫೋಟೋ ಅದಾಗಿದ್ದು, ಈ ಹಿಂದೆ ಸಿನಿಮಾ ತಂಡವು ಪೋಸ್ಟರ್ ಗಳನ್ನು ರಿಲೀಸ್ ಮಾಡಿದಂತೆಯೇ ಈ ಪೋಸ್ಟರ್ ಕೂಡ ಇದೆ. ಹೀಗಾಗಿ ಹಲವರು ಈ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಈ ಕುರಿತು ಹೇಮಂತ್ ರಾವ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ರಣ್‌ಬೀರ್ ಕಪೂರ್ ಒಬ್ಬರೇ ನನ್ನನ್ನು ಹಾಗೆ ಕರೆಯುತ್ತಾರೆ ಎಂದ ರಶ್ಮಿಕಾ

    ಅಂದಹಾಗೆ ಇದು ಸಿನಿಮಾದ ಪೋಸ್ಟರ್ ಅಲ್ಲ. ಯಾರೋ ಫ್ಯಾನ್ಸ್ ಸಿನಿಮಾದ ಟೈಟಲ್ ಬಳಸಿಕೊಂಡು ಈ ಪೋಸ್ಟರ್ ರೆಡಿ ಮಾಡಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿಗೂ ಕೂಡ ಟ್ಯಾಗ್ ಮಾಡಿದ್ದಾರೆ. ಮೊನ್ನೆಯಷ್ಟೇ ಹೆಂಡತಿಯ ಜೊತೆ ಟ್ರಿಪ್ ನಲ್ಲಿರುವ ವಿರಾಟ್, ಈ ಫೋಟೋವನ್ನು ಹಂಚಿಕೊಂಡಿದ್ದರು. ಅದನ್ನೇ ಫ್ಯಾನ್ಸ್ ಪೋಸ್ಟರ್ ಮಾಡಿದ್ದಾರೆ.

  • ಅಜ್ಞಾತವಾಸಿಯಾದ ರಂಗಾಯಣ ರಘು ಮತ್ತು ಪಾವನಾ

    ಅಜ್ಞಾತವಾಸಿಯಾದ ರಂಗಾಯಣ ರಘು ಮತ್ತು ಪಾವನಾ

    ‘ಗೋಧಿಬಣ್ಣ‌ ಸಾಧಾರಣ ಮೈಕಟ್ಟು’ ಚಿತ್ರ ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದಲ್ಲಿ ಹೊಸ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈ ಚಿತ್ರಕ್ಕೆ  ಗುಲ್ಟು  ಚಿತ್ರ ಖ್ಯಾತಿಯ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಮಾಡುತ್ತಿದ್ದಾರೆ. ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರಕ್ಕೆ ಅಜ್ಞಾತವಾಸಿ ಎಂದು ಹೆಸರಿಡಲಾಗಿದೆ. ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ ಸಹ ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ : ಲಾಕಪ್ ನಲ್ಲಿ ಗಳಗಳನೆ ಅತ್ತ ಪೂನಂ: ಈ ನಟಿಗೆ ಅದೆಂಥ ಅವಮಾನ?

    ನನ್ನ ಗುರುಗಳಾದ ಕೃಷ್ಣರಾಜ್ ಅವರು ಕಥೆ ಬರೆದಿದ್ದಾರೆ. 1997 ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಅವರು ಕಥೆ ಹೇಳಿದ ರೀತಿ ತುಂಬಾ ಹಿಡಿಸಿತು.  ನನಗೆ ತಿಳಿದ ಹಾಗೆ ಇದೊಂದು ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಅನ್ನಬಹುದು. ಆನಂತರ ಹೇಮಂತ್ ರಾವ್ ಅವರನ್ನು ಭೇಟಿಯಾಗಿ ಕಥೆ ಹೇಳಿದಾಗ ಕೇವಲ ಅರ್ಧಗಂಟೆಯಲ್ಲಿ ನಿರ್ಮಾಣಕ್ಕೆ ಒಪ್ಪಿಕೊಂಡರು. ರಂಗಾಯಣ ರಘು ಸರ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಿದ್ದು ಮೂಲಿಮನಿ, ಪಾವನ ಗೌಡ ಅವರ ಪಾತ್ರ ಕೂಡ ಜನಮನಸೂರೆಗೊಳ್ಳಲಿದೆ.  ಅದ್ವೈತ ಛಾಯಾಗ್ರಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇನ್ನೆರಡು ದಿನಗಳಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ತಿಳಿಸಿದರು.‌ ಇದನ್ನೂ ಓದಿ : ಪುನೀತ್ ಬ್ಯಾನರ್ ಗಾಗಿ ನಡೆಯಿತು ಮಾರಾಮಾರಿ : ರಾಡ್ ಹಿಡಿದುಕೊಂಡು ಗಲಾಟೆ

    ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ರಂಗಾಯಣ ರಘು ಅವರ ಅಭಿನಯವನ್ನು ನೋಡಲು ನಾನು ನಿರ್ಮಾಪಕನಿಗಿಂತ ಹೆಚ್ಚಾಗಿ ಅಭಿಮಾನಿಯಾಗಿ ಕಾಯುತ್ತಿದ್ದೇನೆ.  “ಕವಲುದಾರಿ” ಸಿನಿಮಾ ಸಂದರ್ಭದಲ್ಲಿ ಪುನೀತ್ ಸರ್ ರಂಗಾಯಣ ರಘು ಬಗ್ಗೆ ಹೇಳಿದ ಮಾತು ಇನ್ನೂ ಕಿವಿಯಲ್ಲೇ ಇದೆ.‌ ಈ ಚಿತ್ರ ನಿರ್ಮಾಣಕ್ಕೆ ಅವರೆ ಸ್ಪೂರ್ತಿ ಎನ್ನಬಹುದು ಎಂದರು ನಿರ್ಮಾಪಕ ಹೇಮಂತ್ ರಾವ್. ಇದನ್ನೂ ಓದಿ : ಕೆಜಿಎಫ್ 2 : ನಾಲ್ಕೇ ದಿನಕ್ಕೆ 550 ಕೋಟಿ ಬಾಚಿದ ರಾಕಿಭಾಯ್

    ನಾನು ಟಿವಿ ಜ್ಯೋತಿಷಿಗಳಿಗಿಂತ ಹೆಚ್ಚಾಗಿ ಜನಾರ್ದನ ಚಿಕ್ಕಣ್ಣ ಅವರನ್ನು ನಂಬುತ್ತೇನೆ. ಏಕೆಂದರೆ “ಗುಲ್ಟು” ಚಿತ್ರದಲ್ಲಿ ಅವರು ಹೇಳಿದ್ದ ಒಂದು ಹಗರಣದ ವಿಷಯ ನಂತರ ನಿಜವಾಯಿತು. ಹೇಮಂತ್ ರಾವ್ ಕೂಡ ಹಾಗೆ ಈ ಯುವ ನಿರ್ದೇಶಕರ ಯೋಚನಾಶೈಲಿಯೇ ಬೇರೆ. ನನಗೆ ಉತ್ತಮ ಪಾತ್ರ ನೀಡಿದ್ದಾರೆ‌. ಇಡೀತಂಡಕ್ಕೆ ಒಳ್ಳೆಯದಾಗಲಿ ಎಂದು ರಂಗಾಯಣ ರಘು ಹಾರೈಸಿದರು. ಇದನ್ನೂ ಓದಿ : ಕ್ಷಮಿಸಿ ಬಿಡು ಬಸವಣ್ಣ : ವಿಡಿಯೋ ರಿಲೀಸ್ ಮಾಡಿದ ಹಂಸಲೇಖ

    ಚಿತ್ರದಲ್ಲಿ ನಟಿಸುತ್ತಿರುವ ಪಾವನ ಗೌಡ, ಸಿದ್ದು ಮೂಲಿಮನಿ‌ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತದ ಕುರಿತು ಹಾಗೂ ಅದ್ವೈತ ಛಾಯಾಗ್ರಹಣದ ಬಗ್ಗೆ ಮಾತನಾಡಿದರು.