Tag: ಹೇಮಾವತಿ ಜಲಾಶಯ

  • ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

    ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

    ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು (Heavy Rain) ಯಾವುದೇ ಸಮಯದಲ್ಲಿ ಡ್ಯಾಂನಿಂದ (Hemavati Dam) ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ.

    ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 4,600 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

    ಸದ್ಯ ಈಗ 2,921.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಇನ್ನೂ ಅರ್ಧ ಅಡಿಗಳಷ್ಟು ನೀರನ್ನು ಮಾತ್ರ ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ.  ಇದನ್ನೂ ಓದಿ:  ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

     

    ಈಗಾಗಲೇ ಹವಾಮಾನ ಇಲಾಖೆ (IMD) ಅ.29 ರವರೆಗೆ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರಲಿದೆ. ಹೀಗಾಗಿ ಹೇಮಾವತಿ ನದಿ ಪಾತ್ರ, ನದಿ ದಂಡೆ, ನದಿಯ ಅಸುಪಾಲಿನಲ್ಲಿರುವ ಎಲ್ಲಾ ಗ್ರಾಮಸ್ಥರು, ಸ್ಥಳೀಯರು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಲ್ಲಿ ತಕ್ಷಣವೇ ತೆರಳುವಂತೆ ಸೂಚನೆ ನೀಡಲಾಗಿದೆ.

    ಕಂದಾಯ ಇಲಾಖೆ, ತಹಸೀಲ್ದಾರ್‌ ಸೇರಿದಂತೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಹೇಮಾವತಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಜ್ಯೋತಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ಹೇಮಾವತಿ ಜಲಾಶಯ 37.103 ಟಿಎಂಸಿ ನೀರಿನ ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 36.620 ಟಿಎಂಸಿ ನೀರು ಸಂಗ್ರಹವಾಗಿದೆ.

  • KRS ಭರ್ತಿಗೆ 7 ಅಡಿಗಳಷ್ಟೇ ಬಾಕಿ

    KRS ಭರ್ತಿಗೆ 7 ಅಡಿಗಳಷ್ಟೇ ಬಾಕಿ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ ಡ್ಯಾಂ (KRS Dam) ಭರ್ತಿಗೆ ಕೇವಲ 7 ಅಡಿಗಳಷ್ಟೇ ಬಾಕಿಯಿದೆ.

    ಜಲಾಶಯಕ್ಕೆ 23,473 ಕ್ಯೂಸೆಕ್ ಒಳಹರಿವು ಇದ್ದು, ನಿನ್ನೆಗಿಂತ ಇಂದು ಒಳಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಸದ್ಯ ಡ್ಯಾಂನಲ್ಲಿ 39.847 ಟಿಎಂಸಿ ನೀರು ಸಂಗ್ರಹವಾಗಿದ್ದು, 1,252 ಕ್ಯೂಸೆಕ್ ಒಳಹರಿವು ಇದೆ.ಇದನ್ನೂ ಓದಿ: Air India Crash | 215 ಡಿಎನ್‌ಎ ಮ್ಯಾಚ್‌ – 198 ಮೃತದೇಹ ಹಸ್ತಾಂತರ

    124.80 ಅಡಿಗಳ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ 117.80 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ 7 ಅಡಿಗಳಷ್ಟೇ ಬಾಕಿಯಿದೆ. ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

    ಹಾರಂಗಿ ಜಲಾಶಯ 2849.77 ಅಡಿ ಭರ್ತಿ
    2,859 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಹಾರಂಗಿ ಜಲಾಶಯದಲ್ಲಿ 2849.77 ಅಡಿ ನೀರಿದೆ. ಜಲಾಶಯಕ್ಕೆ ಸದ್ಯ 3,070 ಕ್ಯೂಸೆಕ್ ನೀರಿನ ಒಳಹರಿವಿದ್ದು, 3,070 ಕ್ಯುಸೆಕ್ ಹೊರಹರಿವಿದೆ.

    ಹೇಮಾವತಿಗೆ 13,273 ಕ್ಯೂಸೆಕ್ ಒಳಹರಿವು
    ಇನ್ನೂ 37.103 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ 29.350 ಟಿಎಂಸಿ ನೀರಿದೆ. 2,922 ಅಡಿ ಗರಿಷ್ಠ ಮಟ್ಟದ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಇಂದು 2,913.40 ಅಡಿ ನೀರಿದೆ. ಇಂದು 13,273 ಕ್ಯುಸೆಕ್ ಒಳಹರಿವಿದ್ದು, 4,750 ಕ್ಯೂಸೆಕ್ ಹೊರಹರಿವಿದೆ.ಇದನ್ನೂ ಓದಿ: ದೊಡ್ಡಣ್ಣನ ಎಂಟ್ರಿಯಿಂದ 3ನೇ ಮಹಾಯುದ್ಧದ ಆತಂಕ – ಇರಾನ್ ಬೆಂಬಲಕ್ಕೆ ನಿಂತ ರಷ್ಯಾ

  • ಹಾಸನದಲ್ಲಿ ವರುಣನ ಅಬ್ಬರ – ಹೇಮಾವತಿ ಜಲಾಶಯಕ್ಕೆ 19,546 ಕ್ಯೂಸೆಕ್ ಒಳಹರಿವು

    ಹಾಸನದಲ್ಲಿ ವರುಣನ ಅಬ್ಬರ – ಹೇಮಾವತಿ ಜಲಾಶಯಕ್ಕೆ 19,546 ಕ್ಯೂಸೆಕ್ ಒಳಹರಿವು

    – ಒಂದೇ ದಿನಕ್ಕೆ 11,270 ಕ್ಯೂಸೆಕ್ ಒಳಹರಿವು ಹೆಚ್ಚಳ

    ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಸಕಲೇಶಪುರ, ಆಲೂರು, ಬೇಲೂರಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ (Hemavati Dam) ಇಂದು ಬಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚಿದೆ.

    ಹಾಸನ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಹೇಮಾವತಿ ಜಲಾಶಯಕ್ಕೆ ಒಂದೇ ದಿನದಲ್ಲಿ 11,270 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಸದ್ಯ ಹೇಮಾವತಿ ಜಲಾಶಯಕ್ಕೆ 19,546 ಕ್ಯೂಸೆಕ್ ಒಳಹರಿವಿದೆ. ಇದನ್ನೂ ಓದಿ: ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ನಿಧನ

    ಇಂದಿನ ನೀರಿನ ಮಟ್ಟ:
    ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ
    ಸದ್ಯ ಜಲಾಶಯದಲ್ಲಿರುವ ನೀರು – 27.714 ಟಿಎಂಸಿ
    ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ – 2922.00 ಅಡಿ
    ಇಂದಿನ ನೀರಿನ ಮಟ್ಟ – 2911.35 ಅಡಿ
    ಒಳಹರಿವು – 19,546 ಕ್ಯೂಸೆಕ್
    ಹೊರಹರಿವು – 1,040 ಕ್ಯೂಸೆಕ್

  • ಹಾಸನದಲ್ಲಿ ಮಳೆ ಆರ್ಭಟ – ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

    ಹಾಸನದಲ್ಲಿ ಮಳೆ ಆರ್ಭಟ – ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

    ಹಾಸನ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ (Hemavathi Reservoir) ಒಳಹರಿವು ಹೆಚ್ಚಾಗಿದೆ.ಇದನ್ನೂ ಓದಿ: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ – ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

    ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಹಾಸನ, ಬೇಲೂರು ಭಾಗದಲ್ಲಿ ಬಿರುಗಾಳಿ ಸಹಿತ ವರುಣ ಅಬ್ಬರಿಸುತ್ತಿದ್ದಾನೆ.

    ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಸಕಲೇಶಪುರ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೇಮಾವತಿ ಜಲಾಶಯಕ್ಕೆ ಒಟ್ಟು 8,276 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿ, ನಾಲೆಗಳು ಸೇರಿ ಒಟ್ಟು 350 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.ಇದನ್ನೂ ಓದಿ: Iran-Israel Conflict | ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್

  • ಹಾಸನದಲ್ಲಿ ವರುಣನ ಅಬ್ಬರ – ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

    ಹಾಸನದಲ್ಲಿ ವರುಣನ ಅಬ್ಬರ – ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

    ಹಾಸನ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ (Rain) ಸುರಿಯುತ್ತಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗುತ್ತಿದೆ.

    ಬಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಬಹುತೇಕ ಕಡೆ ಮೋಡಕವಿದ ವಾತಾವರಣವಿದೆ. ಸಕಲೇಶಪುರ, ಚಿಕ್ಕಮಗಳೂರು ಭಾಗದಲ್ಲಿ ಬಾರಿ ಮಳೆ ಹಿನ್ನಲೆಯಲ್ಲಿ ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ (Hemavati Dam) ಒಳಹರಿವು ಹೆಚ್ಚಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಪತನ – 80 ಜನರ ಡಿಎನ್‌ಎ ಮ್ಯಾಚ್, 33 ಮೃತದೇಹಗಳ ಹಸ್ತಾಂತರ

    ಭಾನುವಾರದವರೆಗೂ 1,907 ಕ್ಯೂಸೆಕ್ ಒಳಹರಿವಿದ್ದು, ಇಂದು 4,642 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಹೇಮಾವತಿ ಜಲಾಶಯಕ್ಕೆ ಒಟ್ಟು 6,549 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿ, ನಾಲೆಗಳು ಸೇರಿ ಒಟ್ಟು 350 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದನ್ನೂ ಓದಿ: ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

  • ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

    ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

    ಮೈಸೂರು: ಕಾವೇರಿಕೊಳ್ಳದಲ್ಲಿ ಪೂರ್ವ ಮುಂಗಾರಿನ ಸಂತಸ ಸೃಷ್ಟಿಯಾಗಿದೆ, ಕೇವಲ ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ (Kabini Dam) ಭರ್ತಿಯಾಗುವ ಹಂತಕ್ಕೆ ಬಂದುನಿಂತಿದೆ.

    ಹೆಚ್.ಡಿ ಕೋಟೆ (HD Kote) ತಾಲೂಕು ಬೀಚನಹಳ್ಳಿಯಲ್ಲಿನ ಕಬಿನಿ ಜಲಾಶಯ ಕೇವಲ ಹತ್ತೇ ದಿನದಲ್ಲಿ ಭರ್ತಿಯ ಹಂತಕ್ಕೆ ಬಂದಿದೆ. ಮುಂಜಾಗೃತ ಕ್ರಮವಾಗಿ ಕಬಿನಿ ಜಲಾಶಯದಿಂದ 8 ಸಾವಿರ ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ನಾಲ್ಕು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದನ್ನೂ ಓದಿ: ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

    ಇನ್ನೂ ಕೇರಳದ (Kerala) ವಯನಾಡಿನಲ್ಲಿ ಉತ್ತಮ ಮಳೆ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಬರುವ ಒಳ‌ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

    ಸದ್ಯ ಜಲಾಶಯಕ್ಕೆ 18,018 ಕ್ಯೂಸೆಕ್ ಒಳ ಹರಿವು ಇದೆ. ಒಟ್ಟು 2,284 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2,280 ಅಡಿ ನೀರು ಸಂಗ್ರಹವಾಗಿದೆ.

    ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು:
    ಇನ್ನೂ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಜೀವನದಿ ಹೇಮಾವತಿ ಜಲಾಶಯದ (Hemavati Reservoir) ಒಳಹರಿವಿನಲ್ಲಿ ಏರಿಕೆಯಾಗಿದೆ. ಸಕಲೇಶಪುರ, ಆಲೂರು ಭಾಗದಲ್ಲಿ ಮಳೆಯಾಗುತಿದ್ದು, ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಹಾಸನ, ಬೇಲೂರು, ಅರಕಲಗೂಡು ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಹಾಸನ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವಿದೆ.

    37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಸದ್ಯ 23.661 ಟಿಎಂಸಿ ನೀರು ಸಂಗ್ರಹವಾಗಿದೆ. ನದಿಯಿಂದ 3,875 ಕ್ಯೂಸೆಕ್ ಹೊರಹರಿವಿದೆ. ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2905.85 ಅಡಿಯಿದೆ. ಇದನ್ನೂ ಓದಿ: ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

  • ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

    ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

    ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಜೀವನದಿ ಹೇಮಾವತಿ ಜಲಾಶಯದ (Hemavati Reservior) ಒಳಹರಿವಿನಲ್ಲಿ ಏರಿಕೆಯಾಗಿದೆ.

    ಸಕಲೇಶಪುರ, ಆಲೂರು ಭಾಗದಲ್ಲಿ ಮಳೆಯಾಗುತಿದ್ದು, ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಹಾಸನ, ಬೇಲೂರು, ಅರಕಲಗೂಡು ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಹಾಸನ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವಿದೆ. ಇದನ್ನೂ ಓದಿ: ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

    37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಸದ್ಯ 23.661 ಟಿಎಂಸಿ ನೀರು ಸಂಗ್ರಹವಾಗಿದೆ. ನದಿಯಿಂದ 3,875 ಕ್ಯೂಸೆಕ್ ಹೊರಹರಿವಿದೆ. ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2905.85 ಅಡಿಯಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೋವಿಡ್ ಆಕ್ಟೀವ್ ಕೇಸ್

  • ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

    ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

    ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅಬ್ಬರ ತಗ್ಗಿದೆ. ಇದರ ಪರಿಣಾಮ ಇಂದು ಜಿಲ್ಲೆಯ ಜೀವನದಿ ಹೇಮಾವತಿ ನದಿಯ (Hemavati River) ಒಳಹರಿವು ಸಹ ಇಳಿಕೆಯಾಗಿದೆ.

    ಸಕಲೇಶಪುರ, ಆಲೂರು, ಬೇಲೂರು (Beluru) ಹಾಗೂ ಅರಕಲಗೂಡು ಭಾಗದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಸದ್ಯ, 23.136 ಟಿಎಂಸಿ ನೀರು ಸಂಗ್ರಹವಾಗಿದೆ.

    ಇದೀಗ ಹೇಮಾವತಿ ಜಲಾಶಯಕ್ಕೆ 11,252 ಕ್ಯೂಸೆಕ್ ಒಳಹರಿವಿದ್ದು, ನದಿಯಿಂದ 3,575 ಕ್ಯೂಸೆಕ್ ಹೊರಹರಿವಿದೆ. ಈ ಹೇಮಾವತಿ ಜಲಾಶಯದ (Hemavati Reservoir) ಗರಿಷ್ಠ ಮಟ್ಟ 2,922.00 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 2,905.10 ಅಡಿಗಳಷ್ಟಿದೆ.

  • ಧಾರಾಕಾರ ಮಳೆ – ಹೇಮಾವತಿ ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ

    ಧಾರಾಕಾರ ಮಳೆ – ಹೇಮಾವತಿ ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ

    ಹಾಸನ: ಸಕಲೇಶಪುರ (Sakleshpur) ಹಾಗೂ ಚಿಕ್ಕಮಗಳೂರು (Chikkamgaluru) ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಹಾಸನ (Hassana) ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದ (Hemavati Dam) ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದೆ.

    ಒಂದೇ ದಿನಕ್ಕೆ 6,356 ಕ್ಯುಸೆಕ್‌ ಒಳಹರಿವು ಹೆಚ್ಚಳವಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 37.103 ಟಿಎಂಸಿ ಇದ್ದು ಸದ್ಯ ಜಲಾಶಯದಲ್ಲಿ 19.627 ಟಿಎಂಸಿ ನೀರು ಸಂಗ್ರಹವಾಗಿದೆ.

    ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿ ಇದ್ದು ಇಂದಿನ ನೀರಿನ ಮಟ್ಟ 2899.90 ಅಡಿ ಇದೆ. ಒಳಹರಿವು 9,808 ಕ್ಯುಸೆಕ್‌ ಇದ್ದು , ಹೊರಹರಿವು 3,225 ಕ್ಯುಸೆಕ್‌ ಇದೆ.

  • ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ

    ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ

    ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ (Hemavati River) ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಇಲ್ಲಿನ (Hassan) ಗೊರೂರಿನಲ್ಲಿ (Gorur) ನಡೆದಿದೆ.

    ಮೃತ ಯುವತಿಯನ್ನು ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬವರ ಪುತ್ರಿ ನಿತ್ಯ (19) ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಪೂಜೆಗಾಗಿ ಸಂಬಂಧಿಕರೊಂದಿಗೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯುವತಿ ತೆರಳಿದ್ದಳು. ಈ ವೇಳೆ ಪೂಜೆ ಸಲ್ಲಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಚಾರಣಕ್ಕೆ ತೆರಳಿದ್ದ ಯುವಕ ಬೆಟ್ಟದಲ್ಲೇ ಕುಸಿದು ಬಿದ್ದು ದುರ್ಮರಣ

    ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಸೇನೆ, ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ – ಮೂವರು ನಕ್ಸಲರ ಹತ್ಯೆ