Tag: ಹೇಮಾವತಿ ಲಿಂಕ್‌ ಕೆನಾಲ್‌

  • ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

    ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

    – ಕೇಂದ್ರ ಸಚಿವ ಸೋಮಣ್ಣ ಮನವಿ ಮೇರೆಗೆ ಜು.4-5ಕ್ಕೆ ಮುಂದೂಡಿಕೆ

    ಬೆಂಗಳೂರು: ಕೇಂದ್ರ ಸಚಿವ ಸೋಮಣ್ಣ (V.Somanna) ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ (Hemavathi Link Canal) ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ತಿಳಿಸಿದರು.

    ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

    ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ
    ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ ಎಂದು ಹೇಳಿದರು.

    ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ, ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಈ ಯೋಜನೆಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ನಾನು ತುಮಕೂರಿಗೆ ಭೇಟಿ ನೀಡಿದ್ದೇನೆ ಎಂದರು. ಇದನ್ನೂ ಓದಿ: ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

    ನಾನು ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

  • 2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ

    2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಆರ್ ಅಶೋಕ್ ಆಗ್ರಹ

    – ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್ ಫೋರ್ಸ್ ರಚನೆ; ಕಿಡಿ

    ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು (Hemavati Water) ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ ಮನವರಿಕೆ ಮಾಡುವ ಬದಲು ಬೆದರಿಕೆ ಹಾಕುವುದು ಒಳ್ಳೆಯದಲ್ಲ. ಎಲ್ಲ ರೈತರನ್ನು ಸಮಭಾವದಿಂದ ನೋಡಬೇಕೇ ಹೊರತು, ಮಠಾಧೀಶರ ಮೇಲೆ, ಜನಪ್ರತಿನಿಧಿಗಳ ಮೇಲೆ ಕೇಸ್ ಹಾಕಬಾರದು. ಕಾಂಗ್ರೆಸ್‌ನ ಶಾಸಕರೇ ಆದ ಗುಬ್ಬಿ ಶ್ರೀನಿವಾಸ್ ಕೂಡ ಇದರ ವಿರುದ್ಧ ನಿಂತಿದ್ದಾರೆ ಎಂದರು. ಇದನ್ನೂ ಓದಿ: ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

    ರೈತರ ವಿರುದ್ಧ ಪ್ರಕರಣ ದಾಖಲಿಸುವುದು ಅಕ್ಷಮ್ಯ ಅಪರಾಧವಾಗಿದೆ. ರೈತರ ಜೊತೆಗೆ ಚರ್ಚಿಸಿ ಸಮನ್ವಯ ಸಾಧಿಸಬೇಕು. ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರ ಕುರ್ಚಿ ಹೋದರೆ ಅಧಿಕಾರವೇ ಇರುವುದಿಲ್ಲ. ರಾಜ್ಯ ಸರ್ಕಾರ ಎರಡು ಜಿಲ್ಲೆಗಳ ಸರ್ವಪಕ್ಷ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಅಲ್ಲದೇ ಕೇಸ್ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

    ಹಿಂದೂಗಳೇ ಗುರಿ:
    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್. ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಅಪಾದನೆ ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼ ವೇಳೆ ಭಾರತ ಧ್ವಂಸಗೊಳಿಸಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ತಲೆಎತ್ತಿದ ಲಷ್ಕರ್‌ ಗುಂಪು; ವಿಡಿಯೋ ವೈರಲ್‌

    ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಭಾಗಕ್ಕೆ ಹಣ ಬರುತ್ತಿಲ್ಲ. ಕಾಂಗ್ರೆಸ್‌ನ ಭಿಕ್ಷೆಯಿಂದ ಅಲ್ಲಿನ ಜನರು ಬದುಕುತ್ತಿಲ್ಲ. ಜನರ ಹಣದಲ್ಲೇ ಕಾಂಗ್ರೆಸ್ ನಾಯಕರು ಬದುಕುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಕರಾವಳಿ ಜನರ ಬಳಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

    ರಸ್ತೆ ದುರಸ್ತಿಯ ಯೋಗ್ಯತೆ ಇಲ್ಲದ ಸರ್ಕಾರ:
    ಗ್ರೇಟರ್ ಬೆಂಗಳೂರು (Greater Bengaluru) ರಚನೆ ಮಾಡಿದ ನಂತರ ಅಭಿವೃದ್ಧಿ ಕಾರ್ಯ ಆಗಿದೆಯೇ ಎಂದು ನೋಡಬೇಕು. ಬೆಂಗಳೂರಿನಲ್ಲಿ ಎಲ್ಲ ರಸ್ತೆಗಳಲ್ಲಿ ಗುಂಡಿಗಳಿವೆ. ರಸ್ತೆಗಳನ್ನು ದುರಸ್ತಿ ಮಾಡುವ ಯೋಗ್ಯತೆಯೇ ಸರ್ಕಾರಕ್ಕೆ ಇಲ್ಲ. ಕಸ ವಿಲೇವಾರಿ ಮಾಡಲು ಗುತ್ತಿಗೆದಾರರಿಗೆ ಜನವರಿಯಿಂದಲೇ ಬಿಲ್ ಪಾವತಿ ಮಾಡಿಲ್ಲ. ಹೊರರಾಜ್ಯದವರಿಗೆ ಗುತ್ತಿಗೆ ನೀಡಿ ಕಸದ ಲಾಬಿ ಸೃಷ್ಟಿ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ಚುನಾವಣೆ ಮಾಡಿದರೆ ಯಾವ ಮುಖ ಇಟ್ಟುಕೊಂಡು ಜನರ ಬಳಿಗೆ ಹೋಗುತ್ತಾರೆ ಎಂದು ಪ್ರಶ್ನಿಸಿದರು.

    ಮೇಕೆದಾಟು ಯೋಜನೆಗೆ ಆಗ್ರಹಿಸಿ ತಮಿಳುನಾಡು ಸರ್ಕಾರದ ಮುಂದೆ ಪ್ರತಿಭಟಿಸಲು, ಕಲ್ಲು ಹೊಡೆಯಲು ನಾವು ಸಿದ್ಧರಿದ್ದೇವೆ. ಡಿಸಿಎಂ ಡಿ.ಕೆ ಶಿವಕುಮಾರ್ ಇದಕ್ಕೆ ಸಿದ್ಧರಿದ್ದಾರೆಯೇ? ಇಲಾಖೆಗಳಿಗೆ ಅನುದಾನ ನೀಡದೆಯೇ ಸಚಿವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಕೆಎಸ್‌ಆರ್‌ಟಿಸಿಗೆ ಹಣ ನೀಡಿಲ್ಲ. ಜೋಳ ಖರೀದಿ ಕೇಂದ್ರಗಳಿಗೆ ಹಣ ನೀಡಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ಸಂಬಳಕ್ಕೆ ಹಣ ಕೊಟ್ಟಿಲ್ಲ ಕಿಡಿಕಾರಿದರು. ಇದನ್ನೂ ಓದಿ: ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್

    ನಟ ಕಮಲ್ ಹಾಸನ್ (Kamal Haasan) ಅವರ ಯಾವುದೇ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡದ ವಿಚಾರಕ್ಕೆ ಬಂದಾಗ ಎಲ್ಲರೂ ಸ್ಪಷ್ಟವಾಗಿರಬೇಕು. ಕನ್ನಡದ ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತಾಡಬೇಕು ಎಂದರು.

  • ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

    ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

    ಬೆಂಗಳೂರು: ತಾಂತ್ರಿಕ ಸಮಿತಿ ವರದಿ ಆಧರಿಸಿ ಹೇಮಾವತಿ ಕೆನಾಲ್ ನಿರ್ಮಾಣದ (Hemavati Link Canal) ಕೆಲಸ ಪ್ರಾರಂಭ ಮಾಡಿದ್ದೇವೆ. ಈಗ ಬಿಜೆಪಿ (BJP) ಶಾಸಕರು ಗಲಾಟೆ ಮಾಡಿಸುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಆರೋಪ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೇಮಾವತಿ ಕೆನಾಲ್ ಮಾಡುವುದಕ್ಕೆ ತಾಂತ್ರಿಕ ಸಮಿತಿ ರಚನೆ ಮಾಡಿ ವರದಿ ಕೇಳಿದ್ದೆವು. ಯೋಜನೆ ಮಾಡಿ ಯಾವುದೇ ತೊಂದರೆ ಇಲ್ಲ ಎಂದು ವರದಿ ಹೇಳಿತ್ತು. ವರದಿ ಮುಂದಿಟ್ಟುಕೊಂಡು ಕೆಲಸ ಆರಂಭ ಮಾಡಲಾಗಿದೆ. ಈಗ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಚಪ್ಪಲಿಯಿಂದ ಹೊಡೆದಿದ್ದು ತುಂಬಾ ಬೇಜಾರಾಗಿದೆ, ಯಾವ್ದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ: ಆಟೋ ಚಾಲಕ

    ಈಗ ನಾನು ತುಮಕೂರಿಗೆ ಹೋಗುತ್ತಿದ್ದೇನೆ. ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ. ಯಾವುದೇ ಸಮಸ್ಯೆ ಇಲ್ಲದೇ ಕೆಲಸ ಮುಂದುವರಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

    ಕೆನಾಲ್ ಯೋಜನೆ ವಿರುದ್ಧ ಪ್ರತಿಭಟನೆ ಮಾಡಿದ ಸ್ವಾಮೀಜಿಗಳ ಮೇಲೆ ಎಫ್‌ಐಆರ್ ದಾಖಲು ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದಕ್ಕಾಗಿಯೇ ಈಗ ತುಮಕೂರಿಗೆ ಹೊರಟಿದ್ದೇನೆ. ಅಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಈ ಸಲ ಕಪ್ ನಮ್ದು, ಒನ್‌ ಡೇ ಪಾನಿಪುರಿ ನಿಮ್ದು..!- RCB ಅಭಿಮಾನಿಯಿಂದ ಫ್ರೀ ಚಾಟ್ಸ್

    ತುಮಕೂರಿನ ತರಕಾರಿ ಮಾಗಡಿಯಲ್ಲಿ ಮಾರಾಟ ಮಾಡಲು ಬಿಡಲ್ಲ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಒಬ್ಬೊಬ್ಬ ಶಾಸಕರು ಒಂದೊಂದು ರೀತಿ ಮಾತನಾಡುತ್ತಿದ್ದಾರೆ. ಆ ರೀತಿಯಲ್ಲಿ ಯಾರೂ ಮಾತನಾಡಬಾರದು. ಎಲ್ಲಾ ಶಾಸಕರು ಸಂಯಮದಿಂದ ಹೋಗಬೇಕು ಎಂದು ಹೇಳಿದರು. ಇದನ್ನೂ ಓದಿ: ಜೂ.8ರವರೆಗೆ ರಾಜ್ಯದಲ್ಲಿ ಸಾಧಾರಣ ಮಳೆ

  • ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

    ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

    ತುಮಕೂರು: ಹೇಮಾವತಿ ಲಿಂಕ್ ಕೆನಾಲ್ (Hemavati Link Canal) ಕಾಮಗಾರಿ ವಿರೋಧಿಸಿ ಶನಿವಾರ ರೈತರು ಪ್ರತಿಭಟನೆ ನಡೆಸಿದ ಹಿನ್ನೆಲೆ ಇಬ್ಬರು ಸ್ವಾಮೀಜಿಗಳು ಸೇರಿದಂತೆ ನೂರಾರು ರೈತರ ವಿರುದ್ಧ ಗುಬ್ಬಿ ಪೊಲೀಸರು (Gubbi Police) 11 ಎಫ್‌ಐಆರ್ (FIR)ದಾಖಲಿಸಿದ್ದಾರೆ.

    ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ನಿಷೇಧಾಜ್ಞೆಯ ನಡುವೆಯೂ ರೈತರು, ರಾಜಕೀಯ ಮುಖಂಡರು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದ ಪ್ರಸಂಗವೂ ನಡೆಯಿತು. ಈ ಬೆನ್ನಲ್ಲೇ ನೀರಿಗಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ಗುಬ್ಬಿ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ. ಇದನ್ನೂ ಓದಿ: Video | ಹೇಮಾವತಿ ಕೆನಾಲ್‌ ಕಾಮಗಾರಿ ವಿರೋಧಿಸಿ ಪ್ರತಿಭಟನೆ; ನೂರಾರು ರೈತಹೋರಾಟಗಾರರ ವಿರುದ್ಧ FIR

    ಪ್ರತಿಭಟನೆ ವೇಳೆ ಎಸ್ಪಿ ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಅಲ್ಲದೇ ಹಿಟಾಚಿಗಳನ್ನು ತಾವೇ ಚಾಲನೆ ಮಾಡಿ ಬೃಹತ್ ಗಾತ್ರದ ಪೈಪ್‌ಗಳನ್ನು ಪುಡಿಪುಡಿ ಮಾಡಿದ್ದರು. ಈ ಹಿನ್ನೆಲೆ ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ, ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಾಕ್ಷ್ಯಧಾರದ ಮೇಲೆ ಮತ್ತಷ್ಟು ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: 100ಕ್ಕೂ ಹೆಚ್ಚು ಆತ್ಮಾಹುತಿ ಡ್ರೋನ್ ಸಾಗಿಸಬಲ್ಲ `ಬಾಹುಬಲಿ’ ಡ್ರೋನ್ ಸಿದ್ಧಪಡಿಸಿದ ಚೀನಾ!

  • ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

    ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

    – ರಾಮನಗರಕ್ಕೆ ಹೇಮಾವತಿ ನೀರು ಹರಿಸಲು ತುಮಕೂರು ರೈತರ ವಿರೋಧ

    ತುಮಕೂರು: ಹೇಮಾವತಿ ನದಿಯ (Hemavati River) ಗೊರೂರು ಡ್ಯಾಮ್ ನೀರಿಗಾಗಿ ತುಮಕೂರು ಹಾಗೂ ರಾಮನಗರ (Ramanagara) ಜಿಲ್ಲೆಗಳ ನಡುವೆ ಕಿತ್ತಾಟ ಶುರುವಾಗಿದೆ.

    ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ (Hemavati Express Link Canal) ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಶ್ರೀರಂಗ ಏತ ನೀರಾವರಿಗೆ ನೀರು ಹರಿಸಲು ತುಮಕೂರಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಕಳೆದ 30 ವರ್ಷದ ಹಿಂದೆ ಹೇಮಾವತಿ ನೀರು ತರಲು ನಡೆಸಿದ ತೀವ್ರ ಹೋರಾಟದ ಮಾದರಿಯಲ್ಲೇ ಈಗ ಅದೇ ಹೇಮೆಯ ನೀರು ಉಳಿಸಿಕೊಳ್ಳಲು ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ

    ಏನಿದು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ ವಿವಾದ?
    ಹಾಸನದ ಗೊರೂರು ಜಲಾಶಯದಿಂದ ಹೇಮಾವತಿ ನೀರನ್ನು ಬೃಹತ್ ಕೆನಾಲ್ ಮೂಲಕ ತುಮಕೂರು-ಕುಣಿಗಲ್ ಮೂಲಕ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿಗೆ ಹರಿಸುವುದು ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆಯ ಸಾರವಾಗಿದೆ. ಇದರಿಂದ ಗುಬ್ಬಿ, ತುರುವೇಕೆರೆ, ತುಮಕೂರು, ತುಮಕೂರು ಗ್ರಾಮಾಂತರ, ಚಿಕ್ಕನಾಯಕನಹಳ್ಳಿಗೆ ದೊಡ್ಡ ಹೊಡೆತ ಬೀಳಲಿದೆ. ನೀರು ಕುಣಿಗಲ್ ಮೂಲಕ ಯೋಜನೆ ಅಂತ್ಯದ ಮಾಗಡಿ ತಲುಪುವಷ್ಟರಲ್ಲಿ ಕೊರತೆಯಾದರೆ ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ ಭಾಗಕ್ಕೂ ತೊಂದರೆಯಾಗಲಿದೆ. ಆ ಭಾಗದಲ್ಲಿ ಮದಲೂರು ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ಹರಿಯದು. ಇದನ್ನೂ ಓದಿ: ‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್

    ಅಷ್ಟಕ್ಕೂ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಶ್ರೀರಂಗ ಏತ ನೀರಾವರಿಗೆ ಹೇಮಾವತಿ ನೀರು ನಿಗದಿಯಾಗಿಲ್ಲ. ನಿಗದಿಯಾಗಿದ್ದರೆ ಸುತ್ತಿ ಬಳಸಿ ತೆಗೆದುಕೊಂಡು ಹೋಗುವುದಕ್ಕಿಂತ ನೇರವಾಗಿ ಗೊರೂರು ಜಲಾಶಯದಿಂದಲೇ ತೆಗೆದುಕೊಂಡು ಹೋಗಲಿ ಎಂಬುದು ತುಮಕೂರು ರೈತರು, ಹೋರಾಟಗಾರರ ಆಗ್ರಹವಾಗಿದೆ.

    ಸದ್ಯ ಈ ಕೆನಾಲ್ ಯೋಜನೆಯಡಿ 1,289 ಕ್ಯೂಸೆಕ್ಸ್ ನೀರು, ತುಮಕೂರಿನ 5 ತಾಲೂಕುಗಳಿಗೆ ನಿಗದಿಯಾಗಿದೆ. ತುಮಕೂರು, ತುಮಕೂರು ಗ್ರಾಮಾಂತರ, ಗುಬ್ಬಿ ಹಾಗೂ ತುರುವೇಕೆರೆಗೆ 901 ಕ್ಯೂಸೆಕ್ಸ್ ನೀರು ಹಾಗೂ ಕುಣಿಗಲ್ ತಾಲೂಕಿಗೆ 388 ಕ್ಯೂಸೆಕ್ಸ್ ನೀರು ನಿಗದಿಯಾಗಿದೆ. ನೀರು ಹಂಚಿಕೆಯೂ ಪೂರ್ಣವಾಗಿದೆ. ಇದನ್ನೂ ಓದಿ: ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

    ಈಗ ರಾಮನಗರಕ್ಕೆ ಎಲ್ಲಿಂದ ನೀರು ಕೊಡ್ತೀರಿ? ಹಂಚಲು ಹೆಚ್ಚುವರಿ ನೀರು ಇಲ್ಲ. ಆದರೂ ಇದೇ ನೀರನ್ನು ರಾಮನಗರಕ್ಕೆ ಹರಿಸಲು ಡಿಸಿಎಂ ಡಿ ಕೆ ಶಿವಕುಮಾರ್ ಹಠ ಯೋಗಿ ಥರ ಮುಂದಾಗಿದ್ದಾರೆ. ತುಮಕೂರಿನ ಗುಬ್ಬಿಯಿಂದಲೇ ಪೈಪ್‌ಲೈನ್ ಮೂಲಕ ರಾಮನಗರಕ್ಕೆ ನೀರು ಕೊಂಡೊಯ್ಯುವ ಯತ್ನ ನಡೆದಿದೆ. ಇದಕ್ಕೆ ದೊಡ್ಡ ದೊಡ್ಡ ಪೈಪ್‌ಗಳನ್ನು ಹಾಕಿ ಕಾಮಗಾರಿ ನಡೆಸಲಾಗ್ತಿದೆ. ಈ ಯೋಜನೆ ಮುಗಿಸಲು 2 ವರ್ಷದ ಗಡುವು ಕೊಡಲಾಗಿದೆ. ಇದನ್ನೂ ಓದಿ: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

    ಇನ್ನು ಆರಂಭದಲ್ಲಿ ಈ ಕೆನಾಲ್ ಯೋಜನೆಗೆ ತುಮಕೂರು ಭಾಗದ ಕಾಂಗ್ರೆಸ್‌ನವರ ವಿರೋಧವೂ ಇತ್ತು. ಆದರೆ ಡಿಕೆಶಿ ಹಠ, ಒತ್ತಡಕ್ಕೆ ಕೈ ನಾಯಕರು ಮಣಿದಿದ್ದಾರೆ ಅನ್ನೋದು ಬಿಜೆಪಿಯವರ ಆರೋಪವಾಗಿದೆ. ಈಗ ತಾಂತ್ರಿಕ ಸಮಿತಿ ವರದಿಯಲ್ಲಿ ತುಮಕೂರಿಗೆ ಯಾವುದೇ ನೀರಿನ ತೊಂದರೆ ಆಗೋದಿಲ್ಲ ಎನ್ನುವ ಕಾರಣವನ್ನು ಗೃಹ ಸಚಿವ ಪರಮೇಶ್ವರ್ ಕೊಟ್ಟಿದ್ದಾರೆ.