Tag: ಹೇಮಾ ಚೌಧರಿ

  • ಡಿಸಿಎಂಗೆ ಜವಾಬ್ದಾರಿ ಇದೆ: ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಹೇಮಾ ಚೌಧರಿ ರಿಯಾಕ್ಷನ್

    ಡಿಸಿಎಂಗೆ ಜವಾಬ್ದಾರಿ ಇದೆ: ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಹೇಮಾ ಚೌಧರಿ ರಿಯಾಕ್ಷನ್

    ಸಿನಿಮಾ ನಟರಿಗೆ ನಟ್ಟು ಬೋಲ್ಟು ಟೈಟ್ ಮಾಡುವುದು ಗೊತ್ತಿದೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆಶಿ (DK Shivakumar) ಮಾತಿಗೆ ಹಿರಿಯ ನಟಿ ಹೇಮಾ ಚೌಧರಿ (Hema Choudhary) ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆಶಿ ಅವರಿಗೆ ಜವಾಬ್ದಾರಿ ಇದೆ ಎಂದು ನಟಿ ಹೇಮಾ ಚೌಧರಿ ಅವರು ಡಿಸಿಎಂ ಹೇಳಿಕೆ ಸಮರ್ಥಿಸಿ ಮಾತನಾಡಿದ್ದಾರೆ. ಇದನ್ನೂ ಓದಿ:ಡಿಸಿಎಂ ಅಧಿಕಾರ ದರ್ಪದಿಂದ ಹೇಳಿರಬಹುದು- ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಫಿಲ್ಮ್ಂ ಚೇಂಬರ್ ಅಧ್ಯಕ್ಷ ಅಸಮಾಧಾನ

    ಡಿಕೆ ಶಿವಕುಮಾರ್ ಅವರು ಈ ನಾಡಿನ ಡೆಪ್ಯೂಟಿ ಸಿಎಂ ಆಗಿದ್ದಾರೆ. ಅವರಿಗೂ ಜವಾಬ್ದಾರಿತನ ಇದೆ. ಅಷ್ಟೆಲ್ಲ ಹಣ ಬಿಡುಗಡೆ ಮಾಡಿ ಫಿಲ್ಮ್ಂ ಫೆಸ್ಟಿವಲ್ ಮಾಡುವಾಗ ಚಿತ್ರರಂಗದವರು ಬರಬೇಕು. ಬ್ಯುಸಿ ಇರುವವರ ಬಗ್ಗೆ ಹೇಳಲ್ಲ. ಬ್ಯುಸಿ ಇಲ್ಲದೇ ಇರುವವರು ಬರಬೇಕು ಎಂದು ಡಿಕೆಶಿ ಪರ ನಟಿ ಬ್ಯಾಟ್ ಬೀಸಿದ್ದಾರೆ.

    ನಟರಿಗೆ ನಟ್ಟು ಬೋಲ್ಟು ಟೈಟ್ ಮಾಡುವುದು ಗೊತ್ತಿದೆ ಅಂತ ಅವರು ಬೇಕು ಅಂತಾ ಹೇಳಿಲ್ಲ. ಮಾತಿನ ಭರದಲ್ಲಿ ಆಗಿದೆ. ನಾವು ಮಾತಾಡುವಾಗ ಕೈಕಾಲು ಮುರಿತಿನಿ ಅಂತ ಹೇಳುತ್ತೇವೆ. ಹಾಗಂತ ಕೈ ಕಾಲು ಮುರಿದೇ ಹಾಕ್ತಿವಾ? ಎಂದು ನಟಿ ಪ್ರಶ್ನಿಸಿದ್ದಾರೆ. ಮಾತಿನ ಭರದಲ್ಲಿ ಡಿಕೆಶಿ ಅವರು ಹೇಳಿದ್ದಾರೆ. ಆದರೆ ಅವರ ಮಾತಿನಲ್ಲಿ ಅರ್ಥವಿದೆ ಎಂದು ಹೇಮಾ ಚೌಧರಿ ಮಾತನಾಡಿದ್ದಾರೆ.

    ಅಂದಹಾಗೆ, ನಿನ್ನೆ ನಡೆದ 16ನೇ ಅಂತಾರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಡಿಕೆ ಶಿವಕುಮಾರ್ ಮಾತನಾಡಿ, ಸಿನಿಮಾಗೆ ಯಾವುದೇ ಎಲ್ಲೆ ಇಲ್ಲ. ಎಲ್ಲಿ ಬೇಕಾದರೂ ಬೆಳೆಯಬಹುದು. ನೀವೆಲ್ಲ ಬಣ್ಣ ಹಾಕಿಕೊಂಡು ಸಿನಿಮಾ ಮಾಡ್ತೀರಾ. ನಾವು ಬಣ್ಣ ಹಾಕದೇ ಸಿನಿಮಾ ಮಾಡ್ತೀವಿ ಅಷ್ಟೆ ಎಂದು ರಾಜಕೀಯದ ಬಗ್ಗೆ ಹೇಳಿದರು.

    ನನಗೆ ಚಲನಚಿತ್ರ ವಾಣಿಜ್ಯ ಮಂಡಳಿ, ಈ ಸಿನಿಮಾ ನಟರ ಬಗ್ಗೆ ನನಗೆ ಬಹಳ ಸಿಟ್ಟು ಬಂದುಬಿಟ್ಟಿದೆ, ಏಕೆಂದರೆ, ಕೋವಿಡ್ ಮುಗಿದ ಸಮಯದಲ್ಲಿ ನಾವು ನಮ್ಮ ಜಲ ನಮ್ಮ ಹಕ್ಕು ಎಂಬ ಜಾಥಾ ಮಾಡಿದ್ದೆವು, ನಮ್ಮ ಜನರಿಗೆ ನೀರು ಕೊಡುವ ಉದ್ದೇಶದಿಂದಾಗಿ ನಾವು, ಸಿದ್ದರಾಮಯ್ಯನವರು ಪಾದಯಾತ್ರೆ ಮಾಡಿದ್ದೆವು. ಆದರೆ ಆಗ ಯಾವ ನಟರೂ ಸಹ ನಮಗೆ ಬೆಂಬಲ ಕೊಡಲಿಲ್ಲ, ಸಾಧು ಕೋಕಿಲ ಮತ್ತು ದುನಿಯಾ ವಿಜಿ ಬಿಟ್ಟರೆ ಇನ್ಯಾರೂ ಸಹ ನಮಗೆ ಬೆಂಬಲ ಕೊಡಲಿಲ್ಲ. ಅನುಮತಿ ಕೊಡಲಿಲ್ಲ ಅಂದ್ರೆ ಶೂಟಿಂಗ್ ಮಾಡೋಕೆ ಆಗಲ್ಲ, ಯಾರು ಯಾರಿಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಅಂತ ಗೊತ್ತಿದೆ ಎಂದು ಕಾರ್ಯಕ್ರಮದಲ್ಲಿ ಎಚ್ಚರಿಕೆ ನೀಡಿದ್ದರು.

  • ಹೇಮಾ ಚೌಧರಿ, ನರಸಿಂಹಮೂರ್ತಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    ಹೇಮಾ ಚೌಧರಿ, ನರಸಿಂಹಮೂರ್ತಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಹಿರಿಯ ನಟಿ ಹೇಮಾ ಚೌಧರಿ(Hema Chaudhary), ಎಂ.ಎಸ್ ನರಸಿಂಹಮೂರ್ತಿಗೆ (M.S Narasimhamurthy) ನ.1ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ:ಮಗಳ ಜೊತೆ ದೀಪಾವಳಿ ಆಚರಿಸಿದ ಅದಿತಿ ಪ್ರಭುದೇವ

    ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಹಿರಿಯ ನಟಿ ಹೇಮಾ ಚೌಧರಿ, ಎಂ.ಎಸ್ ನರಸಿಂಹಮೂರ್ತಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪುರಸ್ಕೃತರಿಗೆ ಶಾಲಿನ ಜೊತೆ ಹೂವಿನ ಹಾರ ಹಾಕಿ, ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.

    ಅಂದಹಾಗೆ, ಹೇಮಾ ಚೌಧರಿ ಅವರು ತೆಲುಗಿನ ಸ್ಟಾರ್ ನಟ ಎನ್‌ಟಿ ರಾಮರಾವ್, ವರನಟ ರಾಜ್‌ಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್, ಶಂಕರ್ ನಾಗ್ ಸೇರಿದಂತೆ ಅನೇಕರ ಜೊತೆ ತೆರೆಹಂಚಿಕೊಂಡಿದ್ದಾರೆ. 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿ ಬಣ್ಣ ಹಚ್ಚಿದ್ದಾರೆ. ಕಿರುತೆರೆಯಲ್ಲಿ ಜನಪ್ರಿಯ ಅಮೃತವರ್ಷಿಣಿ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ.

    ಇನ್ನೂ ನಟ, ಬರಹಗಾರರಾಗಿ ಗುರುತಿಸಿಕೊಂಡಿರುವ ಎಂ.ಎಸ್ ನರಸಿಂಹಮೂರ್ತಿ ಅವರು ಸಿಲ್ಲಿ ಲಲ್ಲಿ, ಪಾಪ ಪಾಂಡು ಸೀರಿಯಲ್‌ಗೆ 12 ಸಾವಿರ ಎಪಿಸೋಡ್‌ಗಳನ್ನು ಬರೆದಿದ್ದರು.

  • ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

    ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

    ನ್ನಡದ ಹೆಸರಾಂತ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ (Health) ಮತ್ತಷ್ಟು ಚೇತರಿಕೆ ಕಂಡಿದೆ. ಈ ಕುರಿತಂತೆ ನಿನ್ನೆಯಷ್ಟೇ ಅವರ ಪುತ್ರ ಮಾತನಾಡಿದ್ದರು. ಅಮ್ಮನಿಗೆ ರೆಸ್ಟ್ ಬೇಕಾಗಿದೆ. ಹಾಗಾಗಿ ಅವರಿಗೆ ತೊಂದರೆ ಮಾಡಲಿಕ್ಕೆ ಹೋಗಲಿಲ್ಲ. ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ನಿನ್ನೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಜೊತೆಗೆ ದೊಡ್ಡಣ್ಣ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

    ರಡು ದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ (Brain Hemorrhage) ಗೆ ತುತ್ತಾಗಿದ್ದ ಹಿರಿಯ ನಟಿ ಹೇಮಾ ಚೌಧರಿ (Hema Chaudhary) ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ನಗರ ಪ್ರತಿಷ್ಠಿತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ನಿನ್ನೆ ಬೆಳಗ್ಗೆಗಿಂತ ಸಂಜೆ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ.

    ನಿನ್ನೆ ಬೆಳಗ್ಗೆ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೂರು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು,  ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.

     

    ನಾಲ್ಕು ದಿನಗಳ ಹಿಂದೆಯಷ್ಟೇ ಅವರು ಲೀಲಾವತಿ ಅವರ 11ನೇ ದಿನದ ಕಾರ್ಯದಲ್ಲಿ ಭಾಗಿಯಾಗಿದ್ದರು. ವಿನೋದ್ ರಾಜ್ ಅವರಿಗೆ ಸಾಂತ್ವನ ಕೂಡ ಹೇಳಿದ್ದರು. ಆಸಮಯದಲ್ಲಿ ಆರೋಗ್ಯವಾಗಿದ್ದ ಹೇಮಾ ಅವರು, ಅಲ್ಲಿಂದ ಬಂದ ನಂತರ ಏಕಾಏಕಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ಹೇಳಲಾಗುತ್ತಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

  • ಚಿಕಿತ್ಸೆಗೆ ಸ್ಪಂದಿಸಿದ ನಟಿ ಹೇಮಾ ಚೌಧರಿ : ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ

    ಚಿಕಿತ್ಸೆಗೆ ಸ್ಪಂದಿಸಿದ ನಟಿ ಹೇಮಾ ಚೌಧರಿ : ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ

    ರಡು ದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ (Brain Hemorrhage) ಗೆ ತುತ್ತಾಗಿದ್ದ ಹಿರಿಯ ನಟಿ ಹೇಮಾ ಚೌಧರಿ (Hema Chaudhary) ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ನಗರ ಪ್ರತಿಷ್ಠಿತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಬೆಳಗ್ಗೆಗಿಂತ ಈಗ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ.

    ಬೆಳಗ್ಗೆ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು,  ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.

    ಮೂರು ದಿನಗಳ ಹಿಂದೆಯಷ್ಟೇ ಅವರು ಲೀಲಾವತಿ ಅವರ 11ನೇ ದಿನದ ಕಾರ್ಯದಲ್ಲಿ ಭಾಗಿಯಾಗಿದ್ದರು. ವಿನೋದ್ ರಾಜ್ ಅವರಿಗೆ ಸಾಂತ್ವನ ಕೂಡ ಹೇಳಿದ್ದರು. ಆಸಮಯದಲ್ಲಿ ಆರೋಗ್ಯವಾಗಿದ್ದ ಹೇಮಾ ಅವರು, ಅಲ್ಲಿಂದ ಬಂದ ನಂತರ ಏಕಾಏಕಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ಹೇಳಲಾಗುತ್ತಿದೆ.

     

    ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ಐರ್ಲೆಂಡ್ ನಲ್ಲಿ ಇದ್ದು, ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರ ಪುತ್ರನೇ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

    ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

    ನ್ನಡದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ (Hema Chaudhary) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ (Brain Hemorrhage) ಆಗಿತ್ತು ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಮೂರು ದಿನಗಳ ಹಿಂದೆಯಷ್ಟೇ ಅವರು ಲೀಲಾವತಿ ಅವರ 11ನೇ ದಿನದ ಕಾರ್ಯದಲ್ಲಿ ಭಾಗಿಯಾಗಿದ್ದರು. ವಿನೋದ್ ರಾಜ್ ಅವರಿಗೆ ಸಾಂತ್ವನ ಕೂಡ ಹೇಳಿದ್ದರು. ಆಸಮಯದಲ್ಲಿ ಆರೋಗ್ಯವಾಗಿದ್ದ ಹೇಮಾ ಅವರು, ಅಲ್ಲಿಂದ ಬಂದ ನಂತರ ಏಕಾಏಕಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ಹೇಳಲಾಗುತ್ತಿದೆ.

     

    ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ಐರ್ಲೆಂಡ್ ನಲ್ಲಿ ಇದ್ದಾರೆ. ಅವರು ಅಲ್ಲಿಂದ ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ.

  • ನಟಿ ಲೀಲಾವತಿ ಮನೆಗೆ ಭೇಟಿ ಕೊಟ್ಟ ನಟಿಯರು

    ನಟಿ ಲೀಲಾವತಿ ಮನೆಗೆ ಭೇಟಿ ಕೊಟ್ಟ ನಟಿಯರು

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ಕಲಾವಿದೆ ಲೀಲಾವತಿ ಅವರ ಮನೆಗೆ ಸ್ಯಾಂಡಲ್‍ವುಡ್ ಸ್ಟಾರ್ ನಟಿಯರು ಭೇಟಿ ಕೊಟ್ಟಿದ್ದಾರೆ.

    ಮತ್ತೊಂದು ಅವಿಸ್ಮರಣೆಯ ದಿನ ಎಂದು ಬರೆದುಕೊಂಡು ಹಿರಿಯ ನಟಿ ಜೊತೆಗೆ ಕೆಲವು ಸಮಯ ಕಳೆದಿರುವ ಸುಂದರ ಕ್ಷಣಗಳನ್ನು ನಟಿ ಶ್ರುತಿ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಾದಕ ನೋಟದಿಂದ ನಿದ್ದೆಗೆಡಿಸಿದ ನಟಿ ಶುಭ್ರ ಅಯ್ಯಪ್ಪ

    ಕಳೆದ ಕೆಲವು ದಿನಗಳ ಹಿಂದೆ ನಟಿ ಶ್ರುತಿ, ಸುಧಾರಾಣಿ, ಮಾಳವಿಕಾ ಅವಿನಾಶ್ ಲೀಲಾವತಿ ಅವರ ಮನೆಗೆ ಭೇಟಿಕೊಟ್ಟಿದ್ದರು. ಇದೀಗ ಮತ್ತೊಮ್ಮೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ಭಾರತಿ ವಿಷ್ಣು ವರ್ಧನ್, ಹೇಮಾ ಚೌಧರಿ, ಶ್ರುತಿ ಮೂವರು ಸೇರಿ ಹೋಗಿದ್ದಾರೆ ಪಾರ್ಟಿ ಮಾಡಿದ್ದಾರೆ.

     

    View this post on Instagram

     

    A post shared by Shruthi (@shruthi__krishnaa)

    ಹೇಮಾ ಚೌಧರಿ, ಲೀಲಾವತಿ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ. ಶ್ರುತಿ, ಲೀಲಾವತಿ ಅವರ ಮನೆಯಲ್ಲಿ ಬಿರಿಯಾನಿ ಮಾಡಿ, ಊಟವನ್ನು ಬಡಿಸಿದ್ದಾರೆ. ನಂತರ ಲೀಲಾವತಿ ಅವರು ಒಂದು ಹಾಡನ್ನು ಹಾಡಿದ್ದಾರೆ. ಕೊನೆಯಲ್ಲಿ ಎಲ್ಲರೂ ಒಟ್ಟಿಗೆ ಕುಳಿತು ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.