Tag: ಹೈಕೋಟ್

  • ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡುವುದನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ಅರ್ಜಿ ತಿರಸ್ಕೃತ

    ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡುವುದನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ಅರ್ಜಿ ತಿರಸ್ಕೃತ

    ಹುಬ್ಬಳ್ಳಿ: ಈದ್ಗಾ ಮೈದಾನಕ್ಕೆ (Idga Maidana) ರಾಣಿ ಚೆನ್ನಮ್ಮನವರ ಹೆಸರಿಡುವುದನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ಅನ್ನು ಹೈಕೋರ್ಟ್ (High Court) ತಿರಸ್ಕೃತವಾಗಿದೆ.

    ವಾಣಿಜ್ಯನಗರಿ ಹುಬ್ಬಳ್ಳಿಯ (Hubballi) ಈದ್ಗಾ ಮೈದಾನಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ಮೈದಾನ ಎಂಬ ಮರುನಾಮಕರಣಕ್ಕೆ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಉಡುಪಿ (Udupi) ನಿವಾಸಿ ಹುಸೇನ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

    ಈ ಕುರಿತು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆ ನಡೆಸಿತ್ತು.

    ಪಾಲಿಕೆ ಪರವಾಗಿ ವಾದ ಮಂಡಿಸಿದ ಎಸ್.ಎಸ್. ಮಹೇಂದ್ರ, ಮೈದಾನ ಪಾಲಿಕೆಯ ಆಸ್ತಿ. ಇದರ ಮೇಲೆ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಆಕ್ಷೇಪಣೆ ಸ್ವೀಕರಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು, ಈದ್ಗಾ ಮೈದಾನಕ್ಕೆ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಇಡುವ ಬಗ್ಗೆ, ಇತ್ತೀಚೆಗೆ ನಡೆದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿದೆ. ನಂತರ ಆ ಕುರಿತು ಪ್ರಕಟಣೆ ಹೊರಡಿಸಲಾಗಿದೆ. 30 ದಿನಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಆಕ್ಷೇಪಣೆ ಸಲ್ಲಿಕೆ ಮಾಡಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಾದ ಮಂಡಿಸಿದ್ದರು.

    ಅರ್ಜಿಯಲ್ಲಿ ಉಲ್ಲೇಖಿಸಿರುವ ಅಂಶ ಪರಿಶೀಲಿಸಿದ ಪೀಠವು ಈದ್ಗಾ ಮೈದಾನದ ಹೆಸರನ್ನು ಕಿತ್ತೂರು ರಾಣಿ ಚೆನ್ನಮ್ಮ ಮೈದಾನ ಎಂಬುದಾಗಿ ಬದಲಾಯಿಸಲು ಪಾಲಿಕೆ 2022ರ ಆಗಸ್ಟ್ 25ರಂದು ನಿರ್ಣಯ ಕೈಗೊಂಡಿದೆ. ಈ ಸಂಬಂಧ 2023ರ ಫೆಬ್ರವರಿ 8ರಂದು ಸಾರ್ವಜನಿಕರ ಆಕ್ಷೇಪಣೆ ಕೋರಲಾಗಿದೆ. ಅದರಂತೆ ಅರ್ಜಿದಾರರು ಸಹ ಆಕ್ಷೇಪಣೆ ಸಲ್ಲಿಸಿದ್ದಾರೆ. ಆದರೆ, ಈ ಆಕ್ಷೇಪಣೆ ಮೇಲೆ ಪಾಲಿಕೆಯು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅದಕ್ಕೂ ಮುನ್ನವೇ ಈ ಅರ್ಜಿ ಸಲ್ಲಿಸಲಾಗಿದೆ. ಆದ್ದರಿಂದ ಅರ್ಜಿಯು ಅಪಕ್ವವಾಗಿದೆ ಎಂದು ಅಭಿಪ್ರಾಯಪಟ್ಟಿತು.

    ಅಷ್ಟೇ ಅಲ್ಲದೇ ಅಕ್ಷೇಪಣೆ ಕುರಿತು ಪಾಲಿಕೆಯು ವ್ಯತಿರಿಕ್ತ ನಿರ್ಣಯ ಕೈಗೊಂಡರೆ ಅರ್ಜಿದಾರರು ಮತ್ತೆ ಪಿಐಎಲ್ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ನೀಡಿದೆ. ಇದನ್ನು ಒಪ್ಪಿದ ಅರ್ಜಿದಾರ ಅರ್ಜಿಯನ್ನು ಹಿಂಪಡೆದಿದ್ದಾರೆ. ಇದನ್ನೂ ಓದಿ: ಯುಗಾದಿ ಮುನ್ನಾ ದಿನವೇ 2 ಜೀವ ಬಲಿ – ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಸಾವು

    ರಾಣಿ ಚೆನ್ನಮ್ಮ ಹೆಸರಿಡುವ ಬಗ್ಗೆ ಎಐಎಂಐಎಂ ವಿರೋಧ ವ್ಯಕ್ತಪಡಿಸಿದ್ದು, ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿ ಎದುರು ಎಐಎಂಐಎಂ ಕಾರ್ಯಕರ್ತರು ಇತ್ತೀಚೆಗೆ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಹೊನ್ಯಾಳ್ ನೇತೃತ್ವದಲ್ಲಿ ಧರಣಿ ಸಹ ನಡೆಸಿದ್ದರು.

    ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹೀಗಿರುವಾಗ ಮೈದಾನದ ಹೆಸರು ಬದಲಾಯಿಸುವುದು ಸರಿಯಲ್ಲ. ರಾಜಕೀಯ ದುರುದ್ದೇಶದಿಂದ ಹೆಸರು ಬದಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಪಿಸಿ, ಮರುನಾಮಕರಣ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿದ್ದರು. ಇದನ್ನೂ ಓದಿ: ಬಿಜೆಪಿಗೆ ಚಿಂಚನಸೂರ್‌ ರಾಜೀನಾಮೆ ನೀಡಿದ್ಯಾಕೆ?

  • UG-CET ಪರಿಷ್ಕೃತ ಫಲಿತಾಂಶ ಅಕ್ಟೋಬರ್ 1ಕ್ಕೆ ಪ್ರಕಟ

    UG-CET ಪರಿಷ್ಕೃತ ಫಲಿತಾಂಶ ಅಕ್ಟೋಬರ್ 1ಕ್ಕೆ ಪ್ರಕಟ

    ಬೆಂಗಳೂರು: UG-CET ಪರಿಷ್ಕೃತ ಫಲಿತಾಂಶ ಅಕ್ಟೋಬರ್ 1ಕ್ಕೆ ಪ್ರಕಟವಾಗಲಿದೆ ಎಂದು ಕೆಇಎ (KEA) ತಿಳಿಸಿದೆ.

    ಹೈಕೋರ್ಟ್ (High Court) ಆದೇಶದ ಮೇರೆಗೆ ಅಕ್ಟೋಬರ್ 1ಕ್ಕೆ ಕೆಇಎ ಪರಿಷ್ಕೃತ ಫಲಿತಾಂಶ ಪ್ರಕಟ ಮಾಡಲಿದೆ. ಈ ಹಿಂದೆ ಅಕ್ಟೋಬರ್ 3ರಂದು ಪರಿಷ್ಕೃತ ಫಲಿತಾಂಶ ಪ್ರಕಟಕ್ಕೆ ದಿನಾಂಕ ನಿಗದಿಯಾಗಿತ್ತು.

    ಈ ಮೊದಲು ಯುಜಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಶ್ರೇಯಾಂಕಗಳನ್ನು ನಿರ್ಧರಿಸಲು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠಕ್ಕೆ ಸರ್ಕಾರದ ಸಮಿತಿಯು ಎರಡು ಪ್ರಸ್ತಾವನೆಗಳನ್ನು ಒಳಗೊಂಡ ತನ್ನ ವರದಿಯನ್ನು ಸಲ್ಲಿಸಿತ್ತು. ಇದನ್ನೂ ಓದಿ: ಡಾಲರ್ ಎದುರು ರೂಪಾಯಿ ಮೌಲ್ಯ 81.90ಕ್ಕೆ ಕುಸಿತ

    EXAM

    ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ಪಡೆದ ಪಿಯು ಅಂಕಗಳನ್ನು ಪ್ರಸಕ್ತ ಈ ವರ್ಷದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿ ಹೊಸದಾಗಿ ಜೇಷ್ಠತಾ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ಏಕಸದಸ್ಯ ಪೀಠವು ನಿರ್ದೇಶನ ನೀಡಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸಲ್ಲಿಸಿರುವ ಮೇಲ್ಮನವಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಅಕ್ಟೋಬರ್ 1ಕ್ಕೆ ಕೆಇಎ ಪರಿಷ್ಕೃತ ಫಲಿತಾಂಶ ಪ್ರಕಟ ಮಾಡಲಿದೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ಡಿಕೆಶಿಗೆ CBI ಶಾಕ್ – ಆಸ್ತಿ ಮೌಲ್ಯಮಾಪನ

    Live Tv
    [brid partner=56869869 player=32851 video=960834 autoplay=true]

  • ಲೆಸ್ಬಿಯನ್ ದಂಪತಿ ಒಟ್ಟಿಗೆ ವಾಸಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್

    ಲೆಸ್ಬಿಯನ್ ದಂಪತಿ ಒಟ್ಟಿಗೆ ವಾಸಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್

    ತಿರುವನಂತಪುರಂ: ಇನ್ಮುಂದೆ ಲೆಸ್ಬಿಯನ್ ದಂಪತಿ ಒಟ್ಟಿಗೆ ವಾಸಿಸಬಹುದು ಎಂದು ಕೇರಳ ಹೈಕೋರ್ಟ್ ಇಂದು ಅನುಮತಿ ನೀಡಿದೆ.

    ಅಧಿಲಾ ನಸ್ರಿನ್ ಮತ್ತು ಫಾತಿಮಾ ನೂರಾ ಒಟ್ಟಿಗೇ ವಾಸಿಸಲು ಅನುಮತಿ ಕೋರಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಲೆಸ್ಬಿಯನ್ ದಂಪತಿ ಒಟ್ಟಿಗೆ ವಾಸಿಸಲು ಅನುಮತಿ ನೀಡಿದೆ. ಇದನ್ನೂ ಓದಿ: 21 ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ – ಕರ್ನಾಟಕಕ್ಕೆ 8 ಸಾವಿರ ಕೋಟಿ ಬಿಡುಗಡೆ

    ಕಳೆದ ವಾರ ತನ್ನ ಸಂಗಾತಿ ಫಾತಿಮಾಳನ್ನು ಆಕೆಯ ಸಂಬಂಧಿಕರು ಅಪಹರಿಸಿದ್ದಾರೆ ಎಂದು ಅಧಿಲಾ ನಸ್ರಿನ್ ಆರೋಪಿಸಿದ್ದರು. ಈ ಸಂಬಂಧ ಪೊಲೀಸರಿಗೂ ದೂರು ನೀಡಿದ್ದರು.

    22 ವರ್ಷದ ಅಧಿಲಾ ಮತ್ತು 23 ವರ್ಷದ ಫಾತಿಮಾ ಸೌದಿ ಅರೇಬಿಯಾದಲ್ಲಿ ತಮ್ಮ ವಿದ್ಯಾರ್ಥಿ ದಿನಗಳಲ್ಲಿ ಭೇಟಿಯಾಗಿದ್ದರು. ನಂತರ ಅವರು ಒಟ್ಟಿಗೇ ವಾಸಿಸಲು ನಿರ್ಧರಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಕರು ವಿರೋಧ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ನಂತರ ಆದಿಲಾ ಅವರ ಪೋಷಕರು ಇಬ್ಬರನ್ನೂ ಆಲುವಾದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ದಿದ್ದರು. ಆದರೆ ನೂರಾ ಸಂಬಂಧಿಕರು ಅಲುವಾಕ್ಕೆ ಬಂದು ನೂರಾಳನ್ನು ಅಪಹರಿಸಿಕೊಂಡು ಹೋಗಿದ್ದರು. ಆದಿಲಾ ಮೇ 30 ರಂದು ಕೇರಳ ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ, ಒಟ್ಟಿಗೆ ವಾಸಿಸಲು ಅವಕಾಶ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಒಟ್ಟಿಗೆ ವಾಸಿಸಲು ಅನುಮತಿ ನೀಡಿದೆ.

  • ಮತಾಂತರ ನಿಷೇಧ ಕಾಯ್ದೆ ಸೆಕ್ಷನ್‍ಗಳಿಗೆ ತಡೆ – ಸುಪ್ರೀಂ ಮೆಟ್ಟಿಲೇರಿದ ಗುಜರಾತ್ ಸರ್ಕಾರ

    ಮತಾಂತರ ನಿಷೇಧ ಕಾಯ್ದೆ ಸೆಕ್ಷನ್‍ಗಳಿಗೆ ತಡೆ – ಸುಪ್ರೀಂ ಮೆಟ್ಟಿಲೇರಿದ ಗುಜರಾತ್ ಸರ್ಕಾರ

    ಅಹಮದಾಬಾದ್: ಮತಾಂತರ ನಿಷೇಧ ಕಾಯ್ದೆಯ ಅಂತರ್ಧಮೀಯ ವಿವಾಹಗಳಿಗಿದ್ದ ಸೆಕ್ಷನ್‍ಗಳಿಗೆ ಗುಜರಾತ್ ಹೈಕೋರ್ಟ್ ತಡೆ ನೀಡಿದ್ದ ತೀರ್ಪಿನ ವಿರುದ್ಧ ಗುಜರಾತ್ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

    ಅಂತರ್ಧರ್ಮೀಯ ಒತ್ತಾಯದ ವಿವಾಹದ ಮೂಲಕ ನಡೆಯುವ ಮತಾಂತರವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ ಗುಜರಾತ್ ನ ಧಾರ್ಮಿಕ ಸ್ವಾತಂತ್ರ್ಯ (ತಿದ್ದುಪಡಿ) ಕಾಯ್ದೆ, 2021 ಜೂ.15 ರಂದು ಜಾರಿಗೆ ಬಂದಿತ್ತು. ಇದೀಗ ಕಾಯ್ದೆಯ ಕೆಲವು ಪ್ರಮುಖ ಸೆಕ್ಷನ್‍ಗಳಿಗೆ ಹೈಕೋರ್ಟ್ ತಡೆನೀಡಿದೆ. ಇದನ್ನೂ ಓದಿ: ಪ್ರಧಾನಿ ಮೋಧಿ ಭಾವಚಿತ್ರಕ್ಕೆ ಅಪಮಾನ – ದೂರು ದಾಖಲು

    ಸರ್ಕಾರದ ಈ ನಡೆಯ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಗುಜರಾತ್‍ನ ಡಿಸಿಎಂ ನಿತಿನ್ ಪಟೇಲ್, ಹೈಕೋರ್ಟ್ ತಡೆ ನೀಡಿರುವ ಸೆಕ್ಷನ್‍ಗಳು ಮತಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶಗಳು. ಈ ಸೆಕ್ಷನ್ ಗಳನ್ನು ರದ್ದುಗೊಳಿಸಿದರೆ ಸರ್ಕಾರ ಜಾರಿಗೆ ತಂದಿರುವ ಕಾನೂನಿಗೆ ಯಾವುದೇ ಬೆಲೆ ಇಲ್ಲದಂತಾಗುತ್ತದೆ ಎಂದರು.

    ಗುಜರಾತ್ ಸರ್ಕಾರ ಲವ್ ಜಿಹಾದ್ ನ್ನು ತಡೆಗಟ್ಟಲು ಈ ಕಾಯ್ದೆಯನ್ನು ಜಾರಿಗೊಳಿಸುವುದರೊಂದಿಗೆ ರಾಜ್ಯದಲ್ಲಿ ಅಂತರ್ಧರ್ಮೀಯ ವಿವಾಹದ ಮೂಲಕ ಮತಾಂತರ ಮಾಡುವುದು ಅಪರಾಧ ಎಂದು ಕಾನೂನು ರೂಪಿಸಿ ಅಪರಾಧಗಳ ತಡೆಗೆ ಮುಂದಾಗಿತ್ತು. ಆದರೆ ಹೈಕೋರ್ಟ್ ಸೆಕ್ಷನ್‍ಗಳನ್ನು ತಡೆನೀಡಿರುವುದು ಪ್ರಶ್ನೆ ಎತ್ತುವಂತೆ ಮಾಡಿದೆ. ಹೈಕೋರ್ಟ್ ಹೇಳಿರುವಂತೆ “ಯಾವುದೇ ಒತ್ತಾಯ ಪೂರ್ವಕವಲ್ಲದೆ ಅಥವಾ ಮೋಸಗಳಿಲ್ಲದೇ ಅಂತರ್ಧರ್ಮೀಯ ವಿವಾಹ ನಡೆದರೆ ಅದನ್ನು ಮತಾಂತರಕ್ಕಾಗಿಯೇ ಮಾಡಲಾದ ವಿವಾಹ ಎನ್ನುವುದಕ್ಕೆ ಸಾಧ್ಯವಿಲ್ಲ ಆದ್ದರಿಂದ ಈ ಕಾಯ್ದೆಯ ಕಠಿಣ ಸೆಕ್ಷನ್ ಗಳಾದ 3,4,4ಎ ಮತ್ತು 4ಸಿ, 5, 6, 6ಚಿ ಗಳು ಕಾರ್ಯನಿರ್ವಹಿಸುವುದಕ್ಕೆ ತಡೆ ನೀಡಲಾಗುತ್ತಿದೆ” ಎಂದು ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಒಂದೇ ದಿನ 1 ಕೋಟಿ ಲಸಿಕೆ – ದಾಖಲೆ ಬರೆದ ಭಾರತ

    ಹೈಕೋರ್ಟ್‍ನ ಈ ನಡೆಯನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಇದೀಗ ಸುಪ್ರೀಂಕೋರ್ಟ್‍ನಲ್ಲಿ ಮನವಿ ಸಲ್ಲಿಸಿ ಹೈಕೋರ್ಟ್ ನೀಡಿರುವ ತಡೆಯನ್ನು ತೆರವುಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

  • ಜೈಲಿನಿಂದ ಹೊರಬರಲು ವಿನಯ್ ಕುಲಕರ್ಣಿಗೆ ಬೇಕಿದೆ ಇನ್ನೊಂದು ಜಾಮೀನು

    ಜೈಲಿನಿಂದ ಹೊರಬರಲು ವಿನಯ್ ಕುಲಕರ್ಣಿಗೆ ಬೇಕಿದೆ ಇನ್ನೊಂದು ಜಾಮೀನು

    ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನಿನ್ನೆಯಷ್ಟೇ ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕರೂ ಅವರಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ. ಇನ್ನೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಅವರು ಜೈಲಿನಿಂದ ಬಿಡುಗಡೆ ಹೊಂದಬಹುದೆಂದು ವಿನಯ್ ಪರ ವಕೀಲರಾದ ಆನಂದ ಕೊಳ್ಳಿ ತಿಳಿಸಿದ್ದಾರೆ.

    ಈ ವಿಚಾರವಾಗಿ ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ ಕೊಳ್ಳಿ, ಇನ್ನೊಂದು ಪ್ರಕರಣದಲ್ಲಿ ಜಾಮೀನು ಆಗಬೇಕಿದೆ. ಈಗಾಗಲೇ ಆ ಪ್ರಕರಣದ ಜಾಮೀನು ಅರ್ಜಿ ಸಲ್ಲಿಸಲಿದ್ದೇವೆ. ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಾಗಿಟ್ಟುಕೊಂಡು ಈ ಅರ್ಜಿ ಸಲ್ಲಿಸುತ್ತೇವೆ. ವಿನಯ್ ಕುಲಕರ್ಣಿ ಬೆಂಗಳೂರಿನಲ್ಲೇ ಇರುವಂತೆ ಕೋರ್ಟ್ ಆದೇಶ ಮಾಡಿದೆ. ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ, ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಇದೆ ಎಂದರು.

    ವಿನಯ್ ಕುಲಕರ್ಣಿ ಧಾರವಾಡಕ್ಕೆ ಬರಬೇಕೆಂದರೆ ಸುಪ್ರೀಂ ಕೋರ್ಟ್‍ನ ಅನುಮತಿ ಪಡೆಯಬೇಕು. ಅವಶ್ಯಕ ಕಾರಣ ಒದಗಿಸಿ ಅನುಮತಿ ಪಡೆಯಬಹುದಾಗಿದೆ. ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು, ಕಾನೂನು ಪ್ರಕಾರ ಸಿಬಿಐ ನಡೆ ತಪ್ಪು ಎಂದು ನಾವು ವಾದಿಸಿದ್ದೇವು. ನಮ್ಮ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತು, ಹೈಕೋರ್ಟ್‍ನಲ್ಲಿನ ವಿಚಾರಣೆ ಎರಡು ತಿಂಗಳಲ್ಲಿ ಮುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಜಾಮೀನು

    ಈ ಪ್ರಕರಣ ಸಿಬಿಐಗೆ ವಹಿಸಿದ್ದು ಕಾನೂನು ಪ್ರಕಾರ ಸರಿಯೇ ಎನ್ನುವ ವಿಚಾರವಾಗಿ ಅವರು ಮಾತನಾಡಿ, ಅದು ಬೆಂಗಳೂರು ಹೈಕೋರ್ಟ್‍ನ ವಿಚಾರಣೆಯಲ್ಲಿ ನಿರ್ಧಾರ ಆಗಲಿದೆ, ರಾಜ್ಯ ಸರ್ಕಾರ ಮೂರು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ, ಅದರಲ್ಲಿ ಒಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು, ಆಗ ಯೋಗೇಶ್ ಗೌಡ ಅವರ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು, ಹೈಕೋರ್ಟ್ ಅವರ ಅರ್ಜಿಯನ್ನೂ ತಿರಸ್ಕರಿಸಿತ್ತು, ಆದರೂ ಸರ್ಕಾರ ಮತ್ತೆ ಸಿಬಿಐ ನೀಡಿತ್ತು. ಇದನ್ನೇ ಚಾಲೆಂಜ್ ಮಾಡಿ ಜಾಮೀನು ಪಡೆಯಲಾಗಿದೆ ಎಂದು ತಿಳಿಸಿದರು.