Tag: ಹೈಟೆಕ್ ಬಸ್

  • ಬೆಂಗಳೂರು ಏರ್‌ಪೋರ್ಟ್ ಟರ್ಮಿನಲ್-2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆ

    ಬೆಂಗಳೂರು ಏರ್‌ಪೋರ್ಟ್ ಟರ್ಮಿನಲ್-2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆ

    ಬೆಂಗಳೂರು: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪನವರು‌ (KH Muniyappa) ಕೆಎಸ್‍ಆರ್ ಟಿಸಿ (KSRTC) ಮತ್ತು ಬಿಎಂಟಿಸಿ (BMTC) ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು. ಜೊತೆಗೆ ಬಸ್‍ಗಳಿಗೆ ಹಸಿರು ನಿಶಾನೆ ತೋರಿದರು.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (Bengaluru Airport) ಅತ್ಯಾಧುನಿಕ ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು, ಇದು ಎಲ್ಲಾ ವಿಮಾನ ನಿಲ್ದಾಣಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣವಾಗಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು ಬಿಎಂಟಿಸಿ ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್‍ಗಳ ಸೇವೆಯನ್ನು ಕಲ್ಪಿಸಲಾಗಿದೆ. ಜೊತೆಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆಯನ್ನು ನೀಡಿದರು.

    ಈಗಾಗಲೇ ಟರ್ಮಿನಲ್ 1 ರಲ್ಲಿ ಸುಸಜ್ಜಿತ ಬಸ್ ನಿಲ್ದಾಣವಿದ್ದು, ಟರ್ಮಿನಲ್ 2 ರಲ್ಲಿ ನಿಲ್ದಾಣ ಇರಲಿಲ್ಲ. ಹೀಗಾಗಿ ಪ್ರಯಾಣಿಕರು ಟರ್ಮಿನಲ್ 2 ರಿಂದ ಟರ್ಮಿನಲ್ 1 ಗೆ ಬೇರೆ ಬಸ್ ಮೂಲಕ ಆಗಮಿಸಿ ನಂತರ ವಾಯುವಜ್ರ ಬಸ್ ಏರಬೇಕಿತ್ತು. ಆದರೆ ಈಗ ಟರ್ಮಿನಲ್ 2 ರಲ್ಲೇ ಸುಸಜ್ಜಿತ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣವಾಗಿದ್ದು, ಪ್ರಯಾಣಿಕರಿಗೆ ಅನೂಕೂಲಕರವಾಗಿದೆ. ಇದನ್ನೂ ಓದಿ: ಅಂಬಾರಿ ಆನೆ ‘ಅರ್ಜುನ’ಗೆ ಕಾಟೇರ ಸಿನಿಮಾ ಅರ್ಪಣೆ

    ಇದೇ ವೇಳೆ ದೇವನಹಳ್ಳಿ ತಾಲೂಕಿನ ತೂಬಗೆರೆ ಪಂಚಾಯ್ತಿಗೆ ಬಸ್‍ಗಳ ಅನಾನುಕೂಲ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿಯನ್ನು ನೀಡಲಾಯಿತು. ದೊಡ್ಡಬಳ್ಳಾಪುರ ತಾಲೂಕಿನ ಎಸ್‍ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದೂ ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು.

  • ಹೆಚ್‍ಡಿಕೆ ಚುನಾವಣಾ ಪ್ರಚಾರಕ್ಕೆ 1 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್: ಒಳಗಡೆ ಏನೆಲ್ಲಾ ಇದೆ ಗೊತ್ತಾ!

    ಹೆಚ್‍ಡಿಕೆ ಚುನಾವಣಾ ಪ್ರಚಾರಕ್ಕೆ 1 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್: ಒಳಗಡೆ ಏನೆಲ್ಲಾ ಇದೆ ಗೊತ್ತಾ!

    ಬೆಂಗಳೂರು: ರಾಜ್ಯ ಚುನಾವಣೆ ಗೆಲ್ಲಲು ಜೆಡಿಎಸ್ ಭರದ ಸಿದ್ಧತೆ ಕೈಗೊಂಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಅವರ ಚುನಾವಣಾ ಪ್ರಚಾರಕ್ಕಾಗಿ ಹೈಟೆಕ್ ಬಸ್ ನಿರ್ಮಾಣವಾಗಿದೆ.

    2018ರ ಚುನಾವಣಾ ಪ್ರಚಾರಕ್ಕೆ ಹೆಚ್ಚು ಕಡಿಮೆ ಒಂದು ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಹೈಟೆಕ್ ಬಸ್ ಸಿದ್ಧವಾಗಿದೆ. ತಮಿಳುನಾಡಿನಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಅಶೋಕ ಲೈಲೆಂಡ್ ಬಸ್ಸನ್ನು ಮಾಡಿಫೈ ಮಾಡಲಾಗಿದೆ. ಈ ಹೈಟೆಕ್ ಬಸ್ ತಯಾರಿಕೆ ಜುಲೈನಲ್ಲಿಯೇ ಆರಂಭವಾಗಿದ್ದು, ಮುಂದಿನ ತಿಂಗಳು ನವೆಂಬರ್‍ನಲ್ಲಿ ಈ ಬಸ್‍ಗೆ ಚಾಲನೆ ನೀಡಲಾಗುತ್ತದೆ.

    ಬಸ್‍ನಲ್ಲಿದೆ ಹೈಟೆಕ್ ವ್ಯವಸ್ಥೆ: ಈ ಬಸ್‍ನಲ್ಲಿ ಏನುಂಟು, ಏನಿಲ್ಲ. ಇದನ್ನು ಚಲಿಸುವ ಅರಮನೆ ಎಂದರೂ ತಪ್ಪಿಲ್ಲ. ಈ ಬಸ್‍ನಲ್ಲಿ ಐಷಾರಾಮಿ ಬೆಡ್ ರೂಮ್ ಇದೆ. ಒಂದು ಚಿಕ್ಕ ಮೀಟಿಂಗ್ ಹಾಲ್, ಅಡುಗೆ ರೂಮ್, ಶೌಚಾಲಯವಿದೆ. ಅಲ್ಲದೆ ಹೈಡ್ರೋಲಿಕ್ ಲಿಫ್ಟ್, ಸನ್ ರೂಫ್, ಎಸಿ, ಟಿವಿ ಮತ್ತು ಕುಳಿತುಕೊಳ್ಳಲು ಸೋಫಾ ಇತ್ಯಾದಿ ವ್ಯವಸ್ಥೆಗಳಿವೆ. ಪ್ರಚಾರದ ಸಮಯದಲ್ಲಿ ನಾಲ್ಕು ಮಂದಿ ಬಸ್ ಒಳಗೆ ನಿಲ್ಲಬಹುದಾಗಿದೆ. ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೋಹಿತ್ ಅಲ್ತಾಫ್ ನೇತೃತ್ವದಲ್ಲಿ ಈ ಬಸ್ ತಯಾರಾಗುತ್ತಿದೆ.

    ಈ ಬಸ್‍ನಲ್ಲಿ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರವನ್ನು ಮಾಡಲಿದ್ದು, ಗ್ರಾಮ ವಾಸ್ತವ್ಯ ಸೇರಿದಂತೆ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದಾರೆ. ಮೊದಲಿಗೆ ಮೈಸೂರಿನ ಚಾಮುಂಡೇಶ್ವರಿ ತಾಯಿಗೆ ನಮಿಸಿ ನಂತರ ಪ್ರಚಾರವನ್ನು ಆರಂಭಿಸುತ್ತಾರೆ ಎನ್ನಲಾಗಿದೆ.

    https://www.youtube.com/watch?v=kgc3R7fTvW4