Tag: ಹೈ ಕಮಾಂಡ್

  • ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಆಯ್ಕೆ – ಗ್ಯಾರಂಟಿ ಘೋಷಣೆ ಕೂಗಿ ಸಂಭ್ರಮಿಸಿದ ಅಭಿಮಾನಿಗಳು

    ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಆಯ್ಕೆ – ಗ್ಯಾರಂಟಿ ಘೋಷಣೆ ಕೂಗಿ ಸಂಭ್ರಮಿಸಿದ ಅಭಿಮಾನಿಗಳು

    ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ (Delhi) ರಾಹುಲ್ ಗಾಂಧಿ (Rahul Gandhi) ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಸಿದ್ದರಾಮಯ್ಯ (Siddaramaiah) ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಮನೆಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಸಿದ್ದರಾಮಯ್ಯ ಮನೆಮುಂದೆ ಘೋಷಣೆಗಳನ್ನು ಕೂಗುತ್ತಾ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ವರುಣಾ (Varuna) ಕ್ಷೇತ್ರದಲ್ಲೂ ಸಹಾ ಸಂಭ್ರಮ ಮನೆ ಮಾಡಿದೆ. ಇದನ್ನೂ ಓದಿ: ಅಣ್ಣ ಬಹಳ ಕಷ್ಟಪಟ್ಟಿದ್ದಾನೆ, ನಾವ್ಯಾವತ್ತೂ ವಿಧಾನಸೌಧಕ್ಕೆ ಹೋಗಲ್ಲ: ಸಿದ್ದರಾಮಯ್ಯ ಸಹೋದರ

    ಸಿದ್ದರಾಮಯ್ಯ ಸಿಎಂ ಆಗಲು ಹೈಕಮಾಂಡ್ (High Command) ಒಪ್ಪಿಗೆ ಸೂಚಿಸಿದ ಹಿನ್ನೆಲೆ ಅವರ ಅಭಿಮಾನಿಗಳು ಕರೆಂಟ್ ಫ್ರೀ, ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಫ್ರೀ, ಗೃಹಿಣಿಯರಿಗೆ 2 ಸಾವಿರ ರೂ. ದುಡ್ಡು ಎಂದು ಅನೇಕ ಘೋಷಣೆಗಳನ್ನು ಕೂಗಿ ಸಿದ್ದರಾಮಯ್ಯನವರಿಗೆ ಜೈಕಾರ ಹಾಕಿ ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳಿಗೆ ಷರತ್ತಲ್ಲ, ಮಾನದಂಡ: ಉಲ್ಟಾ ಹೊಡೆದ ಪರಮೇಶ್ವರ್‌

    ಡಿಕೆ ಶಿವಕುಮಾರ್ (D.K.Shivakumar) ಉಪಮುಖ್ಯಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲು ರಾಹುಲ್ ನಿವಾಸಕ್ಕೆ ಆಗಮಿಸಿದ್ದಾರೆ. ಇದನ್ನೂ ಓದಿ: Exclusive – ಮತ್ತೆ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್‌ ಡಿಸಿಎಂ

    ಇಲ್ಲಿಯವರೆಗೆ ಎಐಸಿಸಿ ಅಧಿಕೃತವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬುದನ್ನು ತಿಳಿಸಿಲ್ಲ. ಡಿಕೆಶಿ ಜೊತೆಗಿನ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನದಿಂದ ವೈಎಸ್‌ವಿ ದತ್ತ ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆ

  • ರಮೇಶ್ ಜಿಗಜಿಣಗಿಗೆ ಹೈಕಮಾಂಡ್ ಬುಲಾವ್

    ರಮೇಶ್ ಜಿಗಜಿಣಗಿಗೆ ಹೈಕಮಾಂಡ್ ಬುಲಾವ್

    ವಿಜಯಪುರ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಸಂಸದ ರಮೇಶ್ ಜಿಗಜಿಣಗಿಯವರಿಗೆ ಹೈ ಕಮಾಂಡ್‍ನಿಂದ ಬುಲಾವ್ ಬಂದಿದ್ದು, ದೆಹಲಿಗೆ ತೆರಳಲು ಸಿದ್ಧವಾಗಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನಗೂ ನಾಡಿದ್ದು ದೆಹಲಿಗೆ ಬರುವಂತೆ ಮೆಸೇಜ್ ಬಂದಿದೆ. ಕೇಂದ್ರದ ಹಿರಿಯ ನಾಯಕರಿಂದ ಮೆಸೇಜ್ ಬಂದಿದೆ. ಕಾರಣ ಏನೆಂದು ತಿಳಿಸಿಲ್ಲ, ಕೇವಲ ದೆಹಲಿಗೆ ಬರುವಂತೆ ಕರೆದಿದ್ದಾರೆ ಅಷ್ಟೆ ಎಂದರು. ಇದನ್ನೂ ಓದಿ: ಗುರುವಾರ ಮೋದಿ ಕ್ಯಾಬಿನೆಟ್ ಪುನರ್‌ರಚನೆ – ಸ್ಪರ್ಧೆಯಲ್ಲಿ ಯಾರಿದ್ದಾರೆ?

    ಸಚಿವ ಸ್ಥಾನ ನೀಡುವ ಬಗ್ಗೆ ಸಹ ಮಾತನಾಡಿಲ್ಲ, ಜುಲೈ 8ಕ್ಕೆ ದೆಹಲಿ ಬನ್ನಿ ಎಂದಿದ್ದಾರೆ ಅಷ್ಟೆ. ಹೀಗಾಗಿ ನಾನು ಹೋಗುತ್ತೇನೆ. ಸಚಿವ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

  • ನನ್ನನ್ನು ಮುಂದಿನ ಸಿಎಂ ಎನ್ನಬೇಡಿ, ಆ ಪದವೇ ನನಗೆ ಡೇಂಜರ್ ಆಗುತ್ತೆ – ಪರಮೇಶ್ವರ್

    ನನ್ನನ್ನು ಮುಂದಿನ ಸಿಎಂ ಎನ್ನಬೇಡಿ, ಆ ಪದವೇ ನನಗೆ ಡೇಂಜರ್ ಆಗುತ್ತೆ – ಪರಮೇಶ್ವರ್

    ತುಮಕೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಬಿರುಸಾಗುತ್ತಿದೆ. ಸಹಜವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಹೆಸರು ಮುಂಚೂಣಿಯಲ್ಲಿದೆ. ಆದರೆ ಸಮಾರಂಭವೊಂದರಲ್ಲಿ “ನನ್ನನ್ನು ಮುಂದಿನ ಸಿಎಂ ಎಂದು ಹೇಳಬೇಡಿ, ಆ ಪದವೇ ನನಗೆ ಡೇಂಜರ್ ಆಗುತ್ತದೆ” ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

    ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಗಂಕಾರನಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಸಭಿಕರೊಬ್ಬರು ‘ಮುಂದಿನ ಸಿಎಂ ಪರಮೇಶ್ವರ್’ ಎಂದು ಘೋಷಣೆ ಕೂಗಿದ್ದಾರೆ. ಈ ಮಾತಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ‘ಸಿಎಂ ಪದ ಹೇಳಬೇಡಿ, ನನಗೆ ಡೇಂಜರ್ ಆಗುತ್ತದೆ’ ಎಂದು ಹೇಳಿದ್ದಾರೆ.

    ಚುನಾವಣೆಗೆ ಎರಡು ವರ್ಷ ಬಾಕಿ ಇದೆ, ಈಗಲೇ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಶುರುವಾದರೆ, ಪಕ್ಷದ ನಾಯಕರಲ್ಲಿ ಶೀಥಲ ಸಮರಕ್ಕೆ ಕಾರಣವಾಗುತ್ತದೆ. ಇದು ಮುಂದೆ ತಮ್ಮ ಚುನಾವಣೆಗೆ ತೊಡಕಾಗಬಹುದು ಎಂಬ ಆತಂಕವೂ ಪರಮೇಶ್ವರ್ ಮನಸ್ಸಿನಲ್ಲಿದೆ. ಹೀಗಾಗಿಯೇ ಪರಮೇಶ್ವರ್ ಈಗಲೇ ತಮ್ಮನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸದಂತೆ ಮನವಿ ಮಾಡಿದ್ದಾರೆ. ಆದರೆ ಮುಖ್ಯಮಂತ್ರಿ ರೇಸ್ ನಲ್ಲಿ ಸ್ಥಾನ ಕಾಯ್ದುಕೊಂಡಿದ್ದು, ಮುಂದಿನ ಬೆಳವಣಿಗೆಯನ್ನು ಕಾದು ನೋಡಬೇಕಿದೆ.  ಇದನ್ನೂ ಓದಿ: ಕಾಂಗ್ರೆಸ್ ಸಿಎಂ ಫೈಟ್ ಕತ್ತಲ ಕೋಣೆಯಲ್ಲಿ ಇಲ್ಲದ ಕರಿಬೆಕ್ಕಿನ ಹುಡುಕಾಟದಂತಿದೆ: ಈಶ್ವರಪ್ಪ

  • ಸಿಎಂ ಬಿಎಸ್‍ವೈ ವಿರುದ್ಧ ಹೈಕಮಾಂಡ್‍ಗೆ ಈಶ್ವರಪ್ಪ ದೂರು

    ಸಿಎಂ ಬಿಎಸ್‍ವೈ ವಿರುದ್ಧ ಹೈಕಮಾಂಡ್‍ಗೆ ಈಶ್ವರಪ್ಪ ದೂರು

    – ಪ್ರಧಾನಿ ಮೋದಿ, ಅಮಿತ್ ಶಾ, ರಾಜ್ಯಪಾಲರಿಗೆ ಪತ್ರ

    ಬೆಂಗಳೂರು: ಬಿಜೆಪಿಯಲ್ಲಿ ನಿಧಾನವಾಗಿ ಸಿಎಂ ವಿರುದ್ಧ ಆಕ್ರೋಶ ಭುಗಿಲೇಳುತ್ತಿದೆಯೇ ಎಂಬ ಅನುಮಾನ ಇದೀಗ ಶುರುವಾಗಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ಹೇಳಿಕೆ ನೀಡುತ್ತಿರುವಾಗಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೈಕಮಾಂಡ್ ಹಾಗೂ ರಾಜ್ಯಪಾಲರಿಗೆ ದೂರು ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ದೂರು ನೀಡಿದ್ದಾರೆ. ಈ ಮೂಲಕ ಬಿಎಸ್‍ವೈ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯ ಪಾಲರಿಗೆ ಮಾತ್ರವಲ್ಲದೆ ಹೈಕಮಾಂಡ್‍ಗೂ ಪತ್ರ ಬರೆದಿದ್ದು, ಗಮನಕ್ಕೆ ತಾರದೇ ನನ್ನ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಹಸ್ತಕ್ಷೇಪ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ಲಿಖಿತ ರೂಪದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಎರಡು ಪುಟಗಳ ಪತ್ರ ಬರೆದು ಅಸಮಧಾನ ತೋಡಿಕೊಂಡಿದ್ದಾರೆ.

    ಪತ್ರದಲ್ಲಿ ಏನಿದೆ?
    ಗಮನಕ್ಕೆ ತರದೇ ನನ್ನ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡಿದ್ದು, ಇಲಾಖೆಯ ಹಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಕೆಲ ಪ್ರಮುಖ ನಿರ್ಧಾರಗಳಲ್ಲಿ ಹಿರಿಯ ಸಚಿವರಾದ ನನ್ನನ್ನು ಪರಿಗಣಿಸಿಲ್ಲ. ಸಚಿವರ ಅಧಿಕಾರ ಮೊಟಕುಗೊಳಿಸಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕೂಡಲೇ ಮಧ್ಯ ಪ್ರವೇಶ ಮಾಡಿ ಇದಕ್ಕೆ ಬ್ರೇಕ್ ಹಾಕಬೇಕು.

    ಬೆಂಗಳೂರು ನಗರ ಜಿ.ಪಂ ಅಧ್ಯಕ್ಷ ಮರಿಸ್ವಾಮಿ, ಸಿಎಂ ಯಡಿಯೂರಪ್ಪರಿಗೆ ಬೀಗರೂ ಹೌದು. ಹಣಕಾಸು ಇಲಾಖೆಯ ಪತ್ರದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ಪ್ರತಿನಿಧಿಸುವ ದಾಸರಹಳ್ಳಿ ಜಿಲ್ಲಾ ಪಂಚಾಯತ್‍ಗೆ 65 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದನ್ನು ಸಚಿವರ ಗಮನಕ್ಕೆ ತರುವುದು ಎಂದು ಮರಿಸ್ವಾಮಿ ಸರ್ಕಾರದ ಆದೇಶ ಮಾಡಿಸಿಕೊಂಡಿದ್ದಾರೆ. ಮರಿಸ್ವಾಮಿ ತಮ್ಮ ಸಂಬಂಧಿ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂಬ ಕಾರಣಕ್ಕೆ ಇಷ್ಟು ದೊಡ್ಡ ಪ್ರಮಾಣದ ಹಣ ಅನುದಾನದ ರೂಪದಲ್ಲಿ ಬಿಡುಗಡೆಯಾಗಿದೆ.

    ಜಿ.ಪಂ.ಗಳಿಗೆ 2019-20ರಲ್ಲಿ 1 ಅಥವಾ 2 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆದರೆ ಇದೀಗ ರಾಜ್ಯದ ಯಾವುದೇ ಜಿಲ್ಲಾ ಪಂಚಾಯತ್‍ಗೂ ಬಿಡುಗಡೆಯಾಗದ ದೊಡ್ಡ ಪ್ರಮಾಣದ ಅನುದಾನದ ಕೇವಲ ಇದೊಂದೇ ಜಿಲ್ಲಾ ಪಂಚಾಯತ್‍ಗೆ ಬಿಡುಗಡೆಯಾಗಿದೆ. ಹೀಗೆ ಸಾಲು ಸಾಲು ವಿಚಾರಗಳಲ್ಲಿ ಸಿಎಂ ಯಡಿಯೂರಪ್ಪ ನಮ್ಮ ಇಲಾಖೆಯ ಕೆಲಸ, ಕಾರ್ಯಗಳಲ್ಲಿ ಮೂಗು ತೂರಿಸುತ್ತಿದ್ದಾರೆ.

    2020-21ರ ವರ್ಷದಲ್ಲಿ ಘೋಷಿತ ಗ್ರಾಮೀಣಾಭಿವೃದ್ಧಿ ಇಲಾಖೆ ಯೋಜನೆಗಳಿಗೆ ಅನುದಾನ ಕೊಟ್ಟಿಲ್ಲ. ಕಳೆದೊಂದು ವರ್ಷದಲ್ಲಿ ವಿಶೇಷ ಅನುದಾನದ ಹೆಸರಲ್ಲಿ 1,439 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಹಣ ಬಜೆಟ್ ನಲ್ಲಿ ಘೋಷಣೆ ಮಾಡಿರಲಿಲ್ಲ. ಕಳೆದ ಫೆಬ್ರವರಿಯಲ್ಲಿ ಆರ್ಥಿಕ ಇಲಾಖೆಯು 81 ಶಾಸಕರ ಕ್ಷೇತ್ರಗಳಿಗೆ 775 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಹಣವೂ ಬಜೆಟ್‍ನಲ್ಲಿ ಘೋಷಣೆ ಮಾಡಿರಲಿಲ್ಲ.

    ಬಜೆಟ್ ನಲ್ಲಿ ಘೋಷಣೆ ಮಾಡದೇ ಅನುದಾನ ನೀಡಲಾಗಿದ್ದು, ಇದರಿಂದ ಬಜೆಟ್ ಯೋಜನೆಗಳಿಗೆ ತೊಡಕಾಗುತ್ತದೆ. ಶಾಸಕರ ಕ್ಷೇತ್ರಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಅನುದಾನ ಕೊಡಬೇಕಿತ್ತು. ಆದರೆ ಆರ್ಥಿಕ ಇಲಾಖೆ ನೇರವಾಗಿ ಅನುದಾನ ಕೊಟ್ಟಿರುವುದು ಸರಿಯಲ್ಲ. ಕೇವಲ 5 ಲಕ್ಷಕ್ಕೂ ಕಡಿಮೆ ಮೊತ್ತದ ರಸ್ತೆ ಕಾಮಗಾರಿಗಳಿಗೂ ಮನವಿ ಸ್ವೀಕರಿಸಲಾಗಿದೆ. ಇಷ್ಟು ಕಮ್ಮಿ ಮೊತ್ತದಲ್ಲಿ ಗುಣಮಟ್ಟದ ರಸ್ತೆಗಳ ನಿರ್ಮಾಣ ಸಾಧ್ಯವೇ? ಗ್ರಾಮೀಣಾಭಿವೃದ್ಧಿ ಇಲಾಖೆಗೆ ಒಟ್ಟು 3995.56 ಕೋಟಿ ರೂ. ಮೀಸಲಿರಿಸಲಾಗಿದೆ. ಈ ಪೈಕಿ 1600.42 ಕೋಟಿ ರೂ. ಮಾತ್ರ ಬಿಡುಗಡೆ ಆಗಿದೆ. ಉಳಿದ ಹಣ ವಿಶೇಷ ಅನುದಾನದ ರೂಪದಲ್ಲಿ ಶಾಸಕರ ಕ್ಷೇತ್ರಗಳಿಗೆ ಬಿಡುಗಡೆ ಮಾಡಲಾಗಿದೆ. ನನ್ನ ಇಲಾಖೆಯಲ್ಲಿ ಆರ್ಥಿಕ ಇಲಾಖೆ ಹಸ್ತಕ್ಷೇಪದಿಂದ ನನಗೆ ಮುಜುಗರವಾಗಿದೆ. ಈ ರೀತಿಯ ಆಡಳಿತ ವ್ಯವಸ್ಥೆ ಸರಿಯಾದುದಲ್ಲ. ಈ ಥರದ ಆಡಳಿತ ಶೈಲಿ ಬದಲಾಯಿಸಿಕೊಡಿ.

  • ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳ್‍ಗೆ ಶೋಕಾಸ್ ನೋಟಿಸ್ ಜಾರಿ

    ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳ್‍ಗೆ ಶೋಕಾಸ್ ನೋಟಿಸ್ ಜಾರಿ

    ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.

    ಸಿಎಂ ಯಡಿಯೂರಪ್ಪ ನಾಯಕತ್ವದ ವಿರುದ್ಧ ಹೇಳಿಕೆ, ಸರ್ಕಾರದ ವಿರುದ್ಧ ಬಹಿರಂಗ ಹೇಕೆ ಕುರಿತು ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಈಗ ಅಳೆದು ತೂಗಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ನೀಡಿದೆ.

    ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಉಲ್ಲೇಖಿಸಿ ನೋಟೀಸ್ ಜಾರಿ ಮಾಡಿದೆ. ನಾಯಕತ್ವ ವಿಚಾರ, ಸಿಎಂ ಬದಲಾವಣೆ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಟೀಕೆಗಾಗಿ ಶೋಕಾಸ್ ನೋಟಿಸ್ ನೀಡಲಾಗಿದೆ.

    ಶಾಸಕ ಬಸನಗೌಡ ಯತ್ನಾಳ್ ಗೆ ಮೂಗುದಾರ ಹಾಕುವಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದರು. ಕೇಂದ್ರ ಶಿಸ್ತು ಸಮಿತಿ ಕ್ರಮಕ್ಕೆ ಸಿಎಂ ಆಗ್ರಹಿಸಿದ್ದರು. ನಾಯಕತ್ವ ಬದಲಾವಣೆ ವಿಚಾರದಲ್ಲಿ ಪದೇ ಪದೇ ಮಾತನಾಡುತ್ತಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಯತ್ನಾಳ್ ಬಿಜೆಪಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಹೈಕಮಾಂಡ್ ಬಿ ಫಾರಂ ನೀಡಿದೆ. ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಯೇ ನಿರ್ಧರಿಸಬೇಕು. ಹೀಗಾಗಿ ರಾಜ್ಯ ಬಿಜೆಪಿ ಇಷ್ಟು ದಿನ ಕೈ ಕಟ್ಟಿ ಕುಳಿತಿತ್ತು.

    ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಗೆ ಒಟ್ಟು ಎರಡು ಸಲ ಶೋಕಾಸ್ ನೋಟಿಸ್ ನೀಡಿದಂತಾಗಿದೆ. 2019ರ ಅಕ್ಟೋಬರ್‍ನಲ್ಲಿ ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಬೇಸರದಿಂದ ದೆಹಲಿ ವರಿಷ್ಠರ ವಿರುದ್ಧವೇ ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಕೇಂದ್ರದ ಶಿಸ್ತು ಸಮಿತಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಈ ವೇಳೆ ನಾನು ನನ್ನ ಇತಿಮಿತಿಯಲ್ಲೇ ಮಾತಾಡಿದ್ದೇನೆ, ಯಾರ ವಿರುದ್ಧವೂ ಮಾತಾಡಿಲ್ಲ, ಜನರ ಬವಣೆ ನೋಡಿ ಮಾತಾಡಿದೆ ಎಂದು ಯತ್ನಾಳ್ ಕಾರಣ ಕೊಟ್ಟಿದ್ದರು.

  • ನಾಳೆ ದೆಹಲಿಗೆ ತೆರಳುವ ಮುನ್ನ ರೇಣುಕಾಚಾರ್ಯ ಮೆಗಾ ಬಾಂಬ್!

    ನಾಳೆ ದೆಹಲಿಗೆ ತೆರಳುವ ಮುನ್ನ ರೇಣುಕಾಚಾರ್ಯ ಮೆಗಾ ಬಾಂಬ್!

    ಬೆಂಗಳೂರು: ಸಚಿವ ಸ್ಥಾನ ತಪ್ಪಿದ್ದಕ್ಕೆ ಶಾಸಕ ರೇಣುಕಾಚಾರ್ಯ ತೀವ್ರ ಬೇಸರಗೊಂಡಿದ್ದು, ವರಿಷ್ಠರ ಭೇಟಿ ಮಾಡಲು ನಾಳೆ ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದಾರೆ. ಇದಕ್ಕೂ ಮುನ್ನ ಮೆಗಾ ಬಾಂಬ್ ಸ್ಫೋಟಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ನಾಳೆ ಬೆಳಗ್ಗೆ 8.20ರ ಫ್ಲೈಟ್‍ನಲ್ಲಿ ರೇಣುಕಾಚಾರ್ಯ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ನೂತನ ಸಚಿವರೊಬ್ಬರ ವಿರುದ್ಧ ಮೆಗಾ ಬಾಂಬ್ ಸಿಡಿಸಲಿದ್ದಾರೆ ಎನ್ನಲಾಗಿದೆ. ಹಲವರು ಬ್ಲ್ಯಾಕ್‍ಮೇಲ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಿರುವ ಅವರು, ಈ ಕುರಿತು ಹೈಕಮಾಂಡ್ ಗೆ ದೂರು ನೀಡಲು ದೆಹಲಿ ಯಾತ್ರೆ ನಡೆಸುತ್ತಿದ್ದಾರೆ. ರೇಣುಕಾಚಾರ್ಯ ಅವರ ಬಾಂಬ್ ಕುರಿತು ಭಾರೀ ಚರ್ಚೆ ನಡೆಯುತ್ತಿದ್ದು, ನಾಳೆ ಬಿಜೆಪಿಯಲ್ಲಿ ಆ ಬಾಂಬ್ ಅಲ್ಲೋಲ್ಲ ಕಲ್ಲೋಲ ಸೃಷ್ಟಿಸುತ್ತಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಸೋತವರಿಗೆ ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ವರಿಷ್ಠರ ಜೊತೆ ಮತ್ತೆ ಕೂಲಂಕುಷವಾಗಿ ಚಚಿ೯ಸುತ್ತೇನೆ.

    ಜಾತಿ…

    Posted by MP Renukacharya on Wednesday, January 13, 2021

    ಈ ಕುರಿತು ಫೇಸ್ಬುಕ್‍ನಲ್ಲಿ ಸಹ ಬರೆದುಕೊಂಡಿರುವ ಅವರು, ಸಚಿವ ಸ್ಥಾನ ಸಿಗಲಿಲ್ಲವೆಂದು ಸಹಜವಾಗಿ ಅಘಾತವಾಗಿದೆ. ನಾಯಕತ್ವ ಮತ್ತು ಪಕ್ಷದ ಮೇಲೆ ಹೆಚ್ಚು ವಿಶ್ವಾಸವಿಟ್ಟಿದ್ದೇನೆ. ಮುಂದೆಯೂ ಇಡುತ್ತೇನೆ. ನನ್ನ ಹೋರಾಟ ಪಕ್ಷ ಮತ್ತು ನಾಯಕತ್ವದ ವಿರುದ್ಧವಲ್ಲ. ಈಗ ಸರ್ಕಾರದಲ್ಲಾಗಿರುವ ತಪ್ಪು ವ್ಯವಸ್ಥೆಯ ವಿರುದ್ಧ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಗೆದ್ದ ಶಾಸಕರಿಗೆ ಮತ್ತು ಮತದಾನ ಮಾಡಿದ ಮತದಾರರಿಗೆ ಮಾಡಿದ ಅವಮಾನವಿದು. ಕರ್ನಾಟಕ ಸರ್ಕಾರ ಕೇವಲ 2 ಜಿಲ್ಲೆಗೆ ಮಾತ್ರ ಸೀಮಿತವಾಗಬಾರದು. ನಾಯಕತ್ವ ಮತ್ತು ಸಂಘಟನೆ ನನಗೆ ಎಲ್ಲಾ ಸ್ಥಾನ-ಮಾನ ನೀಡಿದೆ ಎಂದಿದ್ದಾರೆ.

    ಸಚಿವ ಸ್ಥಾನ ಸಿಗಲಿಲ್ಲವೆಂದು ಸಹಜವಾಗಿ ಅಘಾತವಾಗಿದೆ. ನಾಯಕತ್ವ ಮತ್ತು ಪಕ್ಷದ ಮೇಲೆ ಹೆಚ್ಚು ವಿಶ್ವಾಸವಿಟ್ಟಿದ್ದಿನಿ ಮುಂದೆಯು…

    Posted by MP Renukacharya on Wednesday, January 13, 2021

    ಸೋತವರಿಗೆ, ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ವರಿಷ್ಠರ ಜೊತೆ ಮತ್ತೆ ಕೂಲಂಕುಷವಾಗಿ ಚರ್ಚಿಸುತ್ತೇನೆ. ಜಾತಿ ರಾಜಕೀಯ ಮಾಡಿ ನನಗೆ ಅಭ್ಯಾಸವಿಲ್ಲ. ಸೋತವರಿಗೆ ಸಚಿವ ಸ್ಥಾನ ನೀಡಿರುವುದು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸರ್ವ ಜನಾಂಗದ ಮತದಾರರಿಗೆ ಮಾಡಿದ ಅಪಮಾನ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಬರೆದುಕೊಂಡಿದ್ದಾರೆ.

  • ಹೈಕಮಾಂಡ್ ಬಿಎಸ್‍ವೈಗೆ ತುಂಬಾ ಟೈಟ್ ಮಾಡ್ತಿರೋದು ನಿಜ – ವಿಜಯೇಂದ್ರ

    ಹೈಕಮಾಂಡ್ ಬಿಎಸ್‍ವೈಗೆ ತುಂಬಾ ಟೈಟ್ ಮಾಡ್ತಿರೋದು ನಿಜ – ವಿಜಯೇಂದ್ರ

    ತುಮಕೂರು: ಹೈಕಮಾಂಡ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತುಂಬಾ ಟೈಟ್ ಮಾಡುತ್ತಿರುವುದು ನಿಜ ಎಂದು ಬಿಎಸ್‍ವೈ ಪುತ್ರ, ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ಸ್ಪಷ್ಟಪಡಿಸಿದರು.

    ನಗರದ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರುವರೆ ವರ್ಷ ಅವರೇ ಮುಖ್ಯಮಂತ್ರಿಯಾಗಿರಬೇಕು, ಒಳ್ಳೆಯ ಸರ್ಕಾರ ನೀಡಬೇಕೆಂದು ಬಿಗಿ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಇನ್ನು ಯಾವುದೇ ರೀತಿಯ ಟೈಟ್ ಯಡಿಯೂರಪ್ಪನವರಿಗೆ ಇಲ್ಲ ಎಂದು ತಿಳಿಸಿದರು.

    ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದಗಂಗಾ ಶ್ರೀಗಳ ಕ್ಷೇತ್ರದಲ್ಲಿ ನಿಂತು ಮಾತನಾಡುತಿದ್ದೇನೆ ನಾನು ಯಾವುದೇ ಕಾರಣಕ್ಕೂ ಸಿಎಂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಯಡಿಯೂರಪ್ಪನವರು ಪುಕ್ಸಟ್ಟೆ ಮುಖ್ಯಮಂತ್ರಿ ಆದವರಲ್ಲ. 30-40 ವರ್ಷಗಳ ಹೋರಾಟ ಮಾಡಿ ಸಿಎಂ ಆದವರು. ಹಾಗಾಗಿ ಆ ಸ್ಥಾನದ ಮಹತ್ವ ನನಗೆ ಗೊತ್ತಿದೆ. ಪ್ರತಿ ಪಕ್ಷಗಳ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದರು.

    ಕೇಂದ್ರದಿಂದ ನೆರೆ ಪರಿಹಾರ ಬರುವುದು ತಡವಾಗಿದ್ದು ನಿಜ. ಕೇಂದ್ರದಿಂದ ಪರಿಹಾರ ಹಣ ಬಂದಿಲ್ಲ ಎಂದು ಯಾವುದೇ ಕೆಲಸಗಳು ಸ್ಥಗಿತಗೊಂಡಿಲ್ಲ. ರಾಜ್ಯ ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ ಎಂದು ಇದೇ ವೇಳೆ ತಿಳಿಸಿದರು.

    ಬಿಬಿಎಂಪಿ ಮಹಾಪೌರರ ಆಯ್ಕೆ ಬಗ್ಗೆ ಸಿಎಂ ಬಳಿ ನಳಿನ್ ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದರು. ಈ ವಿಷಯದಲ್ಲಿ ಮುಖ್ಯಮಂತ್ರಿಗಳನ್ನು ಕಡೆಗಣಿಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಯಡಿಯೂರಪ್ಪನವರ ಮಾರ್ಗದರ್ಶನದ ಮೇರೆಗೆ ಮೇಯರ್ ಆಯ್ಕೆ ಮಾಡಲಾಗಿದೆ. ಅನರ್ಹ ಶಾಸಕರು ಯಾರು ಕೂಡ ಬಿಜೆಪಿ ಪಕ್ಷ ಸೇರಿಲ್ಲ. ಅನರ್ಹ ಶಾಸಕರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂಬ ಪರಿಸ್ಥಿತಿ ನಿರ್ಮಾಣವಾದಾಗ ಸಿಎಂ ಹಾಗೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

  • ನಾಲ್ಕು ಬಾರಿ ಸಿಎಂ ನಂತರ ಬಿಎಸ್‍ವೈ ಮತ್ತೊಂದು ದಾಖಲೆ

    ನಾಲ್ಕು ಬಾರಿ ಸಿಎಂ ನಂತರ ಬಿಎಸ್‍ವೈ ಮತ್ತೊಂದು ದಾಖಲೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದಾಖಲೆಗಳ ಮೇಲೆ ದಾಖಲೆ ಸೃಷ್ಟಿಸುತ್ತಿದ್ದು, ನಾಲ್ಕು ಬಾರಿ ಸಿಎಂ ಆದ ದಾಖಲೆ ನಂತರ ಇದೀಗ ಮತ್ತೊಂದು ದಾಖಲೆಗೆ ಪಾತ್ರರಾಗುತ್ತಿದ್ದಾರೆ.

    ಈ ಹಿಂದೆ 2007ರಲ್ಲಿ 7 ದಿನ, 2018ರಲ್ಲಿ 3ದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಈಗ ಕ್ಯಾಬಿನೆಟ್ ಇಲ್ಲದೆ ಸ್ವಾತಂತ್ರೋತ್ಸವ ಆಚರಣೆ ಮಾಡುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ.

    ರಾಜ್ಯ ರಾಜಕಾರಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ಯಾಬಿನೆಟ್ ಇಲ್ಲದೆ ಮುಖ್ಯಮಂತ್ರಿಗಳು ಸ್ವಾತಂತ್ರೋತ್ಸವ ಆಚರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದರೆ, ಅದೇ ರೀತಿ ಆಯಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಜಿಲ್ಲೆಯ ಅಭಿವೃದ್ಧಿ ಕುರಿತು ಹಾಗೂ ಕಾರ್ಯಕ್ರಮಗಳ ಕುರಿತು ಭಾಷಣ ಮಾಡುತ್ತಿದ್ದರು. ಆದರೆ, ಈ ಬಾರಿ ಮುಖ್ಯಮಂತ್ರಿಗಳನ್ನು ಹೊರತು ಪಡಿಸಿ ಯಾವುದೇ ಸಚಿವರು ಇಲ್ಲ ಕಾರಣ, ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.

    ರಾಷ್ಟ್ರಪತಿ ಅಳ್ವಿಕೆ ಇದ್ದಾಗ ಮಾತ್ರ ಜಿಲ್ಲಾಧಿಕಾರಿಗಳು ಧ್ವಜ ಹಾರಿಸಲು ಅನುಮತಿ ಇತ್ತು. ಈ ಬಾರಿ ಸರ್ಕಾರವಿದ್ದರೂ ಸಹ ಸಚಿವ ಸಂಪುಟ ರಚನೆಯಾಗದ ಕಾರಣ ಜಿಲ್ಲಾಧಿಕಾರಿಗಳೇ ಆಯಾ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. ಹೀಗಾಗಿ ಪ್ರಪ್ರಥಮ ಬಾರಿಗೆ ಇಂಥಹದ್ದೊಂದು ಸ್ಥಿತಿಗೆ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಸಾಕ್ಷಿಯಾಗಿದೆ.

    ಸಂಪುಟ ರಚನೆ ಕುರಿತು ಕೇಂದ್ರ ನಾಯಕರು ಸ್ಪಷ್ಟಪಡಿಸಿದ್ದು, ಸ್ವಾತಂತ್ರ್ಯ ದಿನಾಚರಣೆ ನಂತರವೇ ಸಚಿವ ಸಂಪುಟ ರಚನೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಮಿತ್ ಶಾ ತಿಳಿಸಿದ್ದಾರೆ. ಹೀಗಾಗಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

  • ಕೈ ಬಂಡಾಯ ಶಾಸಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ

    ಕೈ ಬಂಡಾಯ ಶಾಸಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ

    ಬೆಂಗಳೂರು: ಕಾಂಗ್ರೆಸ್‍ನಲ್ಲಿ ಬಂಡಾಯದ ಬಿಸಿ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಶಮನ ಮಾಡಲು ಹೈಕಮಾಂಡ್ ಮುಂದಾಗಿದ್ದು ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ.

    ಈಗ 15 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಏಳು ಮಂದಿಗೆ ಸಚಿವರಾಗಲು ಅವಕಾಶವಿದೆ. ಇದೇ ರೀತಿಯಾಗಿ ಅಸಮಾಧಾನವನ್ನು ಹೊರಹಾಕಿದರೆ ಖಾಲಿ ಇರುವ ಏಳು ಸಚಿವ ಸ್ಥಾನದಿಂದ ಹಾಗೂ ನಿಗಮ ಮಂಡಳಿ ಸ್ಥಾನ ಹಂಚಿಕೆಯಲ್ಲಿ ಅವಕಾಶ ವಂಚಿತರಾಗುತ್ತಾರೆ. ಇದನ್ನು ಬಂಡಾಯ ಶಾಸಕರಿಗೆ ಗಮನಕ್ಕೆ ತರುವಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸೂಚಿಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿ ತಿಳಿಸಿವೆ.

    ಸಚಿವ ಸ್ಥಾನದಿಂದ ವಂಚಿತರಾಗಿರುವ ಅನೇಕ ಹಿರಿಯ ಶಾಸಕರು ಹೋಟೆಲ್ ನಲ್ಲಿ ಪ್ರತ್ಯೇಕ ಸಭೆ ನಡೆಸಿದ್ದರು. ಅಲ್ಲದೇ ಸಚಿವ ಸ್ಥಾನ ವಂಚಿತ ಆಕಾಂಕ್ಷಿಗಳು ಸಭೆಯಲ್ಲಿ ಭಾಗವಹಿಸಬಹುದೆಂದು ಆಹ್ವಾನ ನೀಡಿದ್ದರು. ಈ ಬೆಳವಣಿಗೆಯಿಂದ ರಾಜ್ಯ ಸರ್ಕಾರಕ್ಕೆ ಕುತ್ತು ಬರಬಹುದು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ಶಾಸಕರಿಗೆ ಎಚ್ಚರಿಕೆ ನೀಡಿದೆ.

    ಹೈಕಂಮಾಡ್ ವಿವಿಧ ಮೂಲಗಳಿಂದ ಪಕ್ಷ ವಿರೋಧಿ ಚಟುವಟಿಕೆ ನಡೆಸುವುದು, ಪ್ರತ್ಯೇಕ ಸಭೆ ನಡೆಸುವುದು, ಹಾಗೂ ಹೈ ಕಮಾಂಡ್ ವಿರುದ್ಧ ಮಾತನಾಡುವ ಶಾಸಕರ ಮಾಹಿತಿ ಕಲೆ ಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಅಂತಾ ಶಾಸಕರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

    ಲಿಂಗಪ್ಪಗೆ ಶೋಕಾಸ್ ನೋಟಿಸ್:
    ರಾಮನಗರದಲ್ಲಿ ಮಂಗಳವಾರ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರು, ರಾಮನಗರ ಕ್ಷೇತ್ರವನ್ನು ಪರಮೇಶ್ವರ್ ಮಾರಾಟಕ್ಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೇ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

    ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಲಿಂಗಣ್ಣ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಬುಧವಾರ ಶೋಕಾಸ್ ನೋಟಿಸ್ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾಧ್ಯಮಗಳ ಮುಂದೆ ಲಘುವಾಗಿ ಮಾತನಾಡಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದೀರಿ. ರಾಮನಗರ ಉಪ ಚುನಾವಣೆಯ ಕುರಿತು ಪಕ್ಷ ಸಭೆಯಲ್ಲಿ ಚರ್ಚಿಸಬಹುದಿತ್ತು. ಆದರೆ ನೀವು ಹಾಗೇ ಮಾಡಲಿಲ್ಲ. ನಿಮ್ಮ ತಪ್ಪಿಗೆ ಏಳು ದಿನಗಳಲ್ಲಿ ಉತ್ತರ ನೀಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿದೆ.