Tag: ಹೈ ಕಮಾಂಡ್ ಗುಂಡ್ಲುಪೇಟೆ

  • ಸಿಎಂ ಯಡಿಯೂರಪ್ಪ ಬದಲಾವಣೆಯಿಲ್ಲ: ನಿರಂಜನ್ ಕುಮಾರ್

    ಸಿಎಂ ಯಡಿಯೂರಪ್ಪ ಬದಲಾವಣೆಯಿಲ್ಲ: ನಿರಂಜನ್ ಕುಮಾರ್

    ಚಾಮರಾಜನಗರ: ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಮೂಹೂರ್ತ ನಿಗದಿಯಾಗಿದೆ ಎನ್ನುವ ರೀತಿಯ ಚರ್ಚೆ ಜೋರಾಗಿದೆ. ಈ ಕುರಿತು ಯಡಿಯೂರಪ್ಪ ಆಪ್ತ ಬಣದ ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ್ ಕುಮಾರ್ ರಾಜ್ಯದಲ್ಲಿ ಸಿಎಂ ಬದಲಾವಣೆಯಿಲ್ಲ, ಈ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

    ಯಡಿಯೂರಪ್ಪ ಬದಲಾವಣೆ ವಿಚಾರ ಕೇವಲ ಊಹಾಪೋಹಾ. ರಾಜ್ಯದಲ್ಲಿ ಯಡಿಯೂರಪ್ಪ ಬದಲಾವಣೆಯಿಲ್ಲ. ಯಡಿಯೂರಪ್ಪ ಬದಲಾವಣೆ ಬಗ್ಗೆ ಹೈಕಮಾಂಡ್, ರಾಜ್ಯಾಧ್ಯಕ್ಷರಾಗಲಿ,ಶಾಸಕರಾಗಲಿ, ಸಚಿವರಾಗಲಿ ಯಾರೂ ಕೂಡ ಚಕಾರವೆತ್ತಿಲ್ಲ. ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಪ್ರಶ್ನಾತೀತ ನಾಯಕರಾಗಿದ್ದಾರೆ. ನಾನು ಕೂಡ ನಿನ್ನೆ ಸಿಎಂ ಭೇಟಿ ಮಾಡಿದ್ದೆ. ಅವರ ಮನೆಯಲ್ಲಿ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿ ಅನುದಾನ ಕೊಡುವ ಭರವಸೆ ಕೊಟ್ಟಿದ್ದಾರೆ.

    ನಮ್ಮ ಪಕ್ಷದ 120 ಮಂದಿ ಶಾಸಕರಲ್ಲಿ ಇಬ್ಬರು ಸಿಎಂ ಬದಲಾವಣೆ ಬಗ್ಗೆ ಮಾತನಾಡಿದರೆ ಯಾವುದೇ ಬೆಲೆ ಸಿಗಲ್ಲ. ಉಳಿದೆಲ್ಲ ಶಾಸಕರು ಕೂಡ ಯಡಿಯೂರಪ್ಪ ಪರ ಇದ್ದಾರೆ. ರಾಜ್ಯಾಧ್ಯಕ್ಷ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಇದು ನಕಲಿ ಆಡಿಯೋ ಅಂತ ಕಟೀಲ್ ಕೂಡ ಹೇಳಿದ್ದಾರೆ. ಈ ಬಗ್ಗೆ ದೂರು ಸಹ ಕೊಟ್ಟಿದ್ದಾರೆ. ತನಿಖೆ ನಂತರ ಗೊತ್ತಾಗುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಯಡಿಯೂರಪ್ಪರನ್ನು ಗೌರವದಿಂದ ನಡೆಸಿಕೊಳ್ಳಿ, ಇಲ್ಲ ಬಿಜೆಪಿಗೆ ನಷ್ಟ: ಮುರುಘಾ ಶರಣರು