Tag: ಹೈ ಕೋರ್ಟ್

  • ಒಪ್ಪಿತ ಸೆಕ್ಸ್ ವಯೋಮಿತಿ 18 ರಿಂದ 16 ಕ್ಕೆ ಇಳಿಸಿ: ಕೇಂದ್ರಕ್ಕೆ ಹೈಕೋರ್ಟ್ ಒತ್ತಾಯ

    ಒಪ್ಪಿತ ಸೆಕ್ಸ್ ವಯೋಮಿತಿ 18 ರಿಂದ 16 ಕ್ಕೆ ಇಳಿಸಿ: ಕೇಂದ್ರಕ್ಕೆ ಹೈಕೋರ್ಟ್ ಒತ್ತಾಯ

    ಭೂಪಾಲ್: ಲೈಂಗಿಕತೆಯ ಸಮ್ಮತಿ ವಯೋಮಿತಿಯನ್ನು ಈಗಿರುವ 18 ವರ್ಷದಿಂದ 16 ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ (Central Government) ಮಧ್ಯಪ್ರದೇಶ ಹೈಕೋರ್ಟ್ (Madhya Pradesh High Court) ಹೇಳಿದೆ.

    ಕ್ರಿಮಿನಲ್ ಕಾನೂನು (ತಿದ್ದುಪಡಿ) ಕಾಯ್ದೆ 2013ನ್ನು ಜಾರಿಗೊಳಿಸಿದ್ದರಿಂದಾಗಿ ಹುಡುಗಿಯರ ಲೈಂಗಿಕ ಕ್ರಿಯೆಗೆ ಸಮ್ಮತಿಸುವ ವಯಸ್ಸನ್ನು 16ರಿಂದ 18 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಸಮ್ಮತಿಯ ಲೈಂಗಿಕತೆ ವಯೋಮಿತಿಯನ್ನು 18 ವರ್ಷಕ್ಕೆ ಹೆಚ್ಚಿಸಿರುವುದು ಹದಿಹರೆಯದ ಹುಡುಗರನ್ನು ಸಮಾಜದಲ್ಲಿ ಅಪರಾಧಿಗಳೆಂದು ಪರಿಗಣಿಸುವಂತೆ ಮಾಡಿದೆ. ಇದು ಸಮ್ಮತಿಯ ಲೈಂಗಿಕ ಸಂಬಂಧ ಬೆಳೆಸುವ ಹದಿಹರೆಯದ ಹುಡುಗರಿಗೆ ಅನ್ಯಾಯವಾಗಿ ಪರಿಣಮಿಸಿದೆ ಎಂದು ನ್ಯಾಯಮೂರ್ತಿ ದೀಪಕ್ ಕುಮಾರ್ ಅಗರ್‌ವಾಲ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಮಗನನ್ನು ಹೊಡೆದು ಕೊಂದು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!

    ಹದಿಹರೆಯದಲ್ಲಿ ಹುಡುಗ ಹುಡುಗಿಯರು ಸ್ನೇಹ ಬೆಳೆಸುತ್ತಾರೆ. ಬಳಿಕ ಆಕರ್ಷಣೆಯಿಂದಾಗಿ ದೈಹಿಕ ಸಂಬಂಧ ಬೆಳೆಸುತ್ತಾರೆ. ಆದರೆ ಇದರಿಂದಾಗಿ ಸಮಾಜದಲ್ಲಿ ಅವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗುತ್ತಿದೆ. ಹೆಚ್ಚಿನ ಅಪರಾಧ ಪ್ರಕರಣಗಳಲ್ಲಿ ಸಂತ್ರಸ್ತೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರುತ್ತಾರೆ. ಇದರಿಂದಾಗಿ ಹದಿಹರೆಯದ ಹುಡುಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಅನ್ಯಾಯ ಸರಿಪಡಿಸಲು ಹುಡುಗಿಯರ ವಯೋಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಕೋರ್ಟ್ ಸಲಹೆ ನೀಡಿದೆ.

    ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮದ ಅರಿವು ಮತ್ತು ಸುಲಭ ಲಭ್ಯವಾಗಿರುವ ಇಂಟರ್ನೆಟ್ ಸಂಪರ್ಕದಿಂದಾಗಿ 14 ವರ್ಷ ವಯಸ್ಸಿನ ಪ್ರತಿಯೊಬ್ಬ ಗಂಡು ಅಥವಾ ಹೆಣ್ಣು ಚಿಕ್ಕ ವಯಸ್ಸಿನಲ್ಲಿಯೇ ಪ್ರೌಢಾವಸ್ಥೆ ತಲುಪುತ್ತಿದ್ದಾರೆ. ಇದರಿಂದಾಗಿ ಹೆಣ್ಣು ಮತ್ತು ಗಂಡು ಮಕ್ಕಳು ಆಕರ್ಷಣೆಗೆ ಒಳಗಾಗುತ್ತಿದ್ದು ಈ ಆಕರ್ಷಣೆಗಳು ಸಮ್ಮತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಪ್ರೇರಣೆ ನೀಡುತ್ತಿವೆ. ಇದರಲ್ಲಿ ಯುವಕರು ಅಪರಾಧಿಗಳಲ್ಲ. ಅವರು ಹೆಣ್ಣಿನ ಸಂಪರ್ಕಕ್ಕೆ ಬಂದಾಗ ಮತ್ತು ದೈಹಿಕ ಸಂಬಂಧ ಬೆಳೆಸಿದಾಗ ಅದು ವಯಸ್ಸಿಗೆ ಸಂಬಂಧಿಸಿದ ವಿಚಾರವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

    ಪ್ರಕರಣವೊಂದರ ವಿಚಾರಣೆ ವೇಳೆ, ಸಂತ್ರಸ್ತೆ ರೀತಿಯ ಹದಿಹರೆಯದವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಮೇಲ್ನೋಟಕ್ಕೆ ಪ್ರಸುತ ಪ್ರಕರಣದಲ್ಲಿ ಆರೋಪಿಗೆ ದುಷ್ಕøತ್ಯ ಎಸಗುವ ಉದ್ದೇಶ ಇರಲಿಲ್ಲ ಎಂದು ಕೋರ್ಟ್ ಹೇಳಿದೆ.

    23 ವರ್ಷದ ಯುವಕ ತನ್ನ ವಿರುದ್ಧ ಪೋಕ್ಸೊ (POCSO) ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಎಫ್‍ಐಆರ್ ರದ್ದುಗೊಳಿಸುವುದು ಸೂಕ್ತ ಎಂದಿದೆ. ಇದನ್ನೂ ಓದಿ: ಈಗಿರುವ ಯಾರೂ ಬಿಜೆಪಿ ಕಟ್ಟಿಲ್ಲ: ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ ರೇಣುಕಾಚಾರ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಕೆಜಿಎಫ್ 2 ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಕೆಜಿಎಫ್ 2 ಸಿನಿಮಾ ಐವತ್ತನೇ ದಿನದ ಪ್ರದರ್ಶನಕ್ಕೆ ಹತ್ತಿರವಾಗುತ್ತಿದೆ. ವಿಶ್ವದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿ, ಭರ್ಜರಿ ಪ್ರದರ್ಶನ ಕೂಡ ಕಂಡಿದೆ. 1,200 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಲ್ಲಿ ದೋಚಿದೆ. ಇಂತಹ ಸಿನಿಮಾದಲ್ಲಿ ಧೂಮ್ರಪಾನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಅದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ : ತೆರೆಯ ಮೇಲೂ ಒಂದಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

    ಬೆಂಗಳೂರಿನ ಕ್ಯಾನ್ಸರ್ ರೋಗಿಗಳ ನೆರವು ಸಂಘವು ಹೈಕೋರ್ಟ್‌ಗೆ ‘ಕೆಜಿಎಫ್ 2’ ಸಿನಿಮಾವನ್ನು ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇದೊಂದು ಸಮಾಜಿಕ ಕಳಕಳಿ ಇಲ್ಲದ ಸಿನಿಮಾ. ಧೂಮಪಾನವನ್ನು ವಿಜೃಂಭಿಸಲಾಗಿದೆ. ಇದರಿಂದಾಗಿ ಮಕ್ಕಳು ಮತ್ತು ಯುವಕರ ಮೇಲೆ ದುಷ್ಟಪರಿಣಾಮ ಬೀರಲಿದೆ ಎಂದು ಅರ್ಜಿಲಯಲ್ಲಿ ಉಲ್ಲೇಖಿಸಲಾಗಿತ್ತು. ಸಿನಿಮಾ ತಡೆ ಹಿಡಿದು, ಸೆನ್ಸಾರ್ ಮಂಡಳಿಯು ಕೊಟ್ಟಿರುವ ಯು/ಎ ಪ್ರಮಾಣ ಪತ್ರವನ್ನು ಹಿಂಪಡೆಯಬೇಕೆಂದು ಕೇಳಿತ್ತು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ಸ್ ನಿಂದ ಮತ್ತೆರಡು ಪ್ಯಾನ್ ಇಂಡಿಯಾ ಸಿನಿಮಾ

    ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠವು ಈ ಅರ್ಜಿ ವಿಚಾರಣೆಯನ್ನು ನಡೆಸಿತು. ಈ ಸಂದರ್ಭದಲ್ಲಿ ಸರ್ಕಾರದ ಪರ ವಿಜಯಕುಮಾರ್ ಅವರು ವಾದ ಮಂಡಿಸಿ, ‘ಈಗಾಗಲೇ ಸಿನಿಮಾ ರಿಲೀಸ್ ಆಗಿದೆ. ಪ್ರದರ್ಶನವನ್ನೂ ಕಾಣುತ್ತಿದೆ. ಹಾಗಾಗಿ ಅರ್ಜಿ ವಿಚಾರಣೆಯ ಮಾನ್ಯತೆ ಕಳೆದುಕೊಂಡಿದೆ’ ಎಂದು ವಾದ ಮಂಡಿಸಿದರು. ಈ ವಾದವನ್ನು ಆಲಿಸಿದ ಪೀಠ ಅರ್ಜಿಯನ್ನು ವಜಾ ಮಾಡಿದೆ.

  • 15 ದಿನದ ಬಳಿಕ ಅಕ್ರಮ ಧ್ವನಿವರ್ಧಕಗಳ ವಿರುದ್ಧ ರಾಜ್ಯದಲ್ಲೂ ಕಾರ್ಯಾಚರಣೆ

    15 ದಿನದ ಬಳಿಕ ಅಕ್ರಮ ಧ್ವನಿವರ್ಧಕಗಳ ವಿರುದ್ಧ ರಾಜ್ಯದಲ್ಲೂ ಕಾರ್ಯಾಚರಣೆ

    ಬೆಂಗಳೂರು: ಅಕ್ರಮವಾಗಿ ಅಳವಡಿಸಿರುವ ಧ್ವನಿವರ್ಧಕಗಳನ್ನು ಯಾವ ಸಮಯದಲ್ಲಿ ಬಳಸಬೇಕು ಎಂಬುವುದನ್ನು ಅರ್ಜಿ ಹಾಕಿ ಹೈಕೋರ್ಟ್, ಸುಪ್ರೀಂಕೋರ್ಟ್‍ನಿಂದ ಅನುಮತಿ ಪಡೆಯಬೇಕು ಇಲ್ಲದಿದ್ದರೆ, 15 ದಿನಗಳ ಬಳಿಕ ಅನಧಿಕೃತ ಮೈಕ್‍ಗಳನ್ನು ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಈ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿ ಮಾತನಾಡಿದ ಅವರು, ಅಕ್ರಮವಾಗಿ ಧ್ವನಿವರ್ಧಕಗಳನ್ನು ಹಾಕಿರುವವರು ಅರ್ಜಿ ಸಲ್ಲಿಸಿ ಯಾವ, ಯಾವ ಡೆಸಿಬಲ್ ಯಾವ ಟೈಮ್‍ನಲ್ಲಿ ಬಳಸಬೇಕು ಎನ್ನುವುದನ್ನು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಒಂದು ಡೆಸಿಬಲ್, ರಾತ್ರಿ 10 ಗಂಟೆಯಿಂದ 6 ಗಂಟೆವರೆಗೆ ಒಂದು ಪ್ರಮಾಣದಂತೆ ಅನುಸರಿಸಬೇಕು. ಇದು ಕೇವಲ ಹಿಂದೂ ಧಾರ್ಮಿಕ ಅಥವಾ ಮುಸ್ಲಿಂ ಧಾರ್ಮಿಕ ಧ್ವನಿವರ್ಧಕಗಳಿಗೆ ಮಾತ್ರ ಅನ್ವಯವಾಗುವುದಿಲ್ಲ. ಬದಲಾಗಿ ಸಾರ್ವಜನಿಕ ಕಾರ್ಯಕ್ರಮಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಧ್ವನಿವರ್ಧಕ ಮಿತಿ ಪ್ರಮಾಣದಲ್ಲಿ ಬಳಸಬೇಕು ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ, ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ: ಬಿ.ಸಿ.ಪಾಟೀಲ್

    loudspeakers

    ಈ ಕುರಿತಂತೆ ಕಾನೂನು ತಜ್ಞರ ತಂಡದೊಂದಿಗೆ ಚರ್ಚೆ ನಡೆಸಿರುವ ಬೊಮ್ಮಾಯಿ ಅವರು, ಇಂದು ಸಂಜೆ ಅಥವಾ ನಾಳೆಯೊಳಗೆ ಸುತ್ತೋಲೆ ಹೊರಡಿಸುವ ಸಾಧ್ಯತೆಯಿದ್ದು, ಕೋರ್ಟ್ ನೀಡುವ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ 15 ದಿನದ ಬಳಿಕ ಅಕ್ರಮ ಮೈಕ್‍ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅನಧಿಕೃತ ಮೈಕ್ ಗಳ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಇದನ್ನೂ ಓದಿ: ಹೊಸ ಮನೆ ಖರೀದಿಸಿದ ನಟಿ ವೈಷ್ಣವಿ ಗೌಡ – ಅಗ್ನಿಸಾಕ್ಷಿ ಚೆಲುವೆಯ ಗೃಹ ಪ್ರವೇಶಕ್ಕೆ ದೊಡ್ಮನೆ ಮಂದಿ ಸಾಕ್ಷಿ

  • ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ

    ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ

    ರಾಯಚೂರು: ರಾಜ್ಯದಲ್ಲಿ ಹಿಜಬ್-ಕೇಸರಿ ಶಾಲು ವಿವಾದ ಹಿನ್ನೆಲೆ ರಾಯಚೂರಿನಲ್ಲಿ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆಯಿಂದ ಪ್ರತಿಭಟನೆಗಳು ನಿಂತಿವೆ. ಮುಸ್ಲಿಂ ಸಮುದಾಯದ ಮುಖಂಡರು, ಮೌಲಾನಾಗಳ ಜೊತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತುರ್ತು ಸಭೆ ನಡೆಸಿ ನ್ಯಾಯಾಲಯದ ಮಧ್ಯಂತರ ಆದೇಶದ ಬಗ್ಗೆ ಮನವರಿಕೆ ಮಾಡಿದ್ದಾರೆ.

    ಕಳೆದ ಮೂರ್ನಾಲ್ಕು ದಿನಗಳಿಂದ ಹಿಜಬ್ ವಿಚಾರ ಜೋರಾಗಿ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಈ ಕುರಿತು ಅಂತಿಮ ಆದೇಶ ಬರೋವರೆಗೂ ಕಾಯುವಂತೆ ಧರ್ಮಗುರುಗಳು, ಮುಖಂಡರ ಮೂಲಕ ಸಮುದಾಯದವರಿಗೆ ತಿಳಿ ಹೇಳಲು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಸೂಚನೆ ಹಿನ್ನೆಲೆ ಹಿಜಬ್ ಎಲ್ಲಿಯೂ ಪ್ರತಿಭಟನೆ ನಡೆಸದಿರಲು ತೀರ್ಮಾನ ಮಾಡಿದ್ದಾರೆ.  ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

    ರಾಯಚೂರು ಜಿಲ್ಲೆಯಲ್ಲಿ ಯಾವುದೇ ಸಂಘರ್ಷ ಇಲ್ಲ. ಜಿಲ್ಲೆಯಾದ್ಯಂತ ಶಾಂತವಾಗಿದೆ. ಎಲ್ಲ ಧಾರ್ಮಿಕ ಮುಖಂಡರು ಕೋರ್ಟ್ ಆದೇಶಕ್ಕೆ ಸಹಕಾರ ಮಾಡಿದ್ದಾರೆ ಎಂದು ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಹೇಳಿದ್ದಾರೆ. ಎಲ್ಲ ಮಕ್ಕಳು ಶಾಲಾ-ಕಾಲೇಜಿಗೆ ಹೋಗುತ್ತಿದ್ದಾರೆ. ಕೆಲವರು ಸಂಘರ್ಷದ ಲಾಭಗಳಿಸಲು ಹೋಗಿ ವಿಫಲವಾಗಿದ್ದಾರೆ. ಕಾಲೇಜುಗಳ ಬಳಿ ಸಮಾಜ ವಿರೋಧಿ ಚಟುವಟಿಕೆ ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಎಚ್ಚರಿಕೆ ಕೊಟ್ಟಿದ್ದಾರೆ.

  • ಶಾಲೆಗಳಲ್ಲಿ ಫೀಸ್ ಕಡಿತ ಬಗ್ಗೆ ಕೊನೆಗೂ ರೂಲ್ಸ್ – ಶೇ.30ರಷ್ಟು ಶುಲ್ಕ ಕಡಿತ ಆದೇಶ ರದ್ದು!

    ಶಾಲೆಗಳಲ್ಲಿ ಫೀಸ್ ಕಡಿತ ಬಗ್ಗೆ ಕೊನೆಗೂ ರೂಲ್ಸ್ – ಶೇ.30ರಷ್ಟು ಶುಲ್ಕ ಕಡಿತ ಆದೇಶ ರದ್ದು!

    ಬೆಂಗಳೂರು: ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿ ಜಟಾಪಟಿ ವಿವಾದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ ಆದೇಶಿಸಿದ್ದ ಶೇ.30ರಷ್ಟು ಶುಲ್ಕ ಕಡಿತ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

    2020-21ನೇ ಸಾಲಿನಲಲ್ಲಿ ಶೇ.15ರಷ್ಟು ಶುಲ್ಕ ಕಡಿತಕ್ಕೆ ಆದೇಶಿಸಿದೆ. ಸುಪ್ರೀಂಕೋರ್ಟ್ ಆದೇಶ ಆಧರಿಸಿ ಹೈಕೋರ್ಟ್ ತೀರ್ಪು ನೀಡಿದೆ. ಇದೀಗ ಶೇ.70ರಷ್ಟು ಶುಲ್ಕ ಸ್ವೀಕರಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಮೂಲಕ ಸರ್ಕಾರ-ಖಾಸಗಿ ಶಾಲೆಗಳು-ಪೋಷಕರ ನಡುವಿನ ದೀರ್ಘ ಕಾಲದ ಶುಲ್ಕ ಸಮರ ಶಾಂತವಾಗಿದೆ. ಇದನ್ನೂ ಓದಿ: ಚಿಕ್ಕಪ್ಪನ ಜೊತೆಗೆ ಅನೈತಿಕ ಸಂಬಂಧ- ಬರ್ತ್ ಡೇ ಪಾರ್ಟಿಗೆ ತೆರಳ್ತಿದ್ದವಳು ಬರ್ಬರವಾಗಿ ಹೆಣವಾದ್ಳು!

    ಶೇ.70 ರಷ್ಟು ಶುಲ್ಕ ಸ್ವೀಕರಿಸುವಂತೆ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಶೇ. 30ರಷ್ಟು ಶುಲ್ಕವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದ್ದು, ಕೋರ್ಟ್ ಆದೇಶವನ್ನು ಕ್ಯಾಮ್ಸ್ ಸ್ವಾಗತಿಸಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರಾಮನಗರ ಗ್ರಾಮಕ್ಕೆ ತೆರಳಿ ರಸ್ತೆ ಪರಿಶೀಲಿಸಿದ ದಾವಣಗೆರೆ ಡಿಸಿ

  • ಕಾರವಾರ ಬಂದರು ವಿಸ್ತರಣೆ- ಹೈಕೋರ್ಟ್ ಮಹತ್ವದ ತೀರ್ಪು

    ಕಾರವಾರ ಬಂದರು ವಿಸ್ತರಣೆ- ಹೈಕೋರ್ಟ್ ಮಹತ್ವದ ತೀರ್ಪು

    ಕಾರವಾರ: ಇಲ್ಲಿನ ವಾಣಿಜ್ಯ ಬಂದರು ವಿಸ್ತರಣೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿ, ಮಹತ್ವದ ಆದೇಶ ಪ್ರಕಟಿಸಿದೆ.

    ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಒಕಾ ಅವರಿದ್ದ ದ್ವಿ ಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ ಪೀಠ, ಮೀನುಗಾರರ ಅರ್ಜಿ ತಿರಸ್ಕರಿಸಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಬಹುದು ಎಂದು ಕರ್ನಾಟಕ ರಾಜ್ಯ ಮೆರಿಟೈಮ್ ಬೋರ್ಡ್ ಗೆ ಸೂಚಿಸಿದೆ.

    ಸಾಗರ ಮಾಲಾ ಯೋಜನೆಯಲ್ಲಿ 274 ಕೋಟಿ ವೆಚ್ಚದಲ್ಲಿ ಬೈತಖೋಲ್ ವಾಣಿಜ್ಯ ಬಂದರಿನ 250 ಮೀಟರ್ ಜಟ್ಟಿ ಹಾಗೂ 880 ಮೀಟರ್ ಅಲೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಬೈತಖೋಲ್ ಮೀನುಗಾರರ ಸಂಘಟನೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. 2020 ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆ ನೀಡಿತ್ತು.

  • ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಡಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಡಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    ಬೆಂಗಳೂರು: ರೆಗ್ಯೂಲರ್ ಸ್ಟೂಡೆಂಟ್ಸ್ ಗಳನ್ನು ಸಾರ್ವತ್ರಿಕವಾಗಿ ಪಾಸ್ ಮಾಡುತ್ತೇವೆ ಎಂದು ಸರ್ಕಾರ ಆದೇಶ ನೀಡಿದ ಬೆನ್ನಲ್ಲೆ ರಿಪಿಟರ್ಸ್ ವಿದ್ಯಾರ್ಥಿಗಳು ಕೂಡ ನಮ್ಮನ್ನೂ ಪಾಸ್ ಮಾಡಿ ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಡದಂತೆ ಹೈಕೋರ್ಟ್ ತಡೆ ಹಿಡಿದಿದೆ.

    ಹೌದು, ಕಳೆದ ವಾರ ರಿಪಿಟರ್ಸ್ ವಿಧ್ಯಾರ್ಥಿಗಳು ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚನೆ ನೀಡಿತ್ತು. ಇಂದು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರ ತಮ್ಮ ನಿಲುವನ್ನು ತಿಳಿಸಿ ಈಗಾಗಲೇ 12 ತಜ್ಞರ ಸಮಿತಿ ರಚಿಸಿರುವುದಾಗಿ ಹೈಕೋರ್ಟಿಗೆ ಮಾಹಿತಿ ನೀಡಿದೆ. ಇದನ್ನೂ ಓದಿ: ಜೂನ್ 22ರಿಂದ ಮಂತ್ರಾಲಯದ ರಾಯರ ದರ್ಶನಕ್ಕೆ ಅವಕಾಶ

    76 ಸಾವಿರ ರಿಪೀಟರ್ಸ್‍ಗಳ ಫಲಿತಾಂಶದ ಬಗ್ಗೆ ತೀರ್ಮಾನ ಮಾಡಲಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಪರೀಕ್ಷಾ ವಿಭಾಗದ ಜಂಟಿ ನಿರ್ದೇಶಕ ಕೃಷ್ಣಪ್ಪ ಹೈಕೋರ್ಟಿಗೆ ಮಾಹಿತಿ ರವಾನೆ ಮಾಡಿದರು.

    ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ, ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ. ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ತಿಳಿಸಿತ್ತು. ಅಲ್ಲದೇ ವಿಚಾರಣೆ ಜುಲೈ 5 ಕ್ಕೆ ಮುಂದೂಡಿ ಸರ್ಕಾರದ ನಿಲುವು ತಿಳಿಸಲು ಸೂಚನೆ ನೀಡಿದೆ. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್

  • ಆಕ್ಸಿಜನ್ ದುರಂತ,  ಮುಂದಿನ ವಿಚಾರಣೆ ವೇಳೆಗೆ ಸರ್ಕಾರ ನಿಲುವು ತಿಳಿಸಲಿದೆ: ಸುರೇಶ್ ಕುಮಾರ್

    ಆಕ್ಸಿಜನ್ ದುರಂತ, ಮುಂದಿನ ವಿಚಾರಣೆ ವೇಳೆಗೆ ಸರ್ಕಾರ ನಿಲುವು ತಿಳಿಸಲಿದೆ: ಸುರೇಶ್ ಕುಮಾರ್

    ಚಾಮರಾಜನಗರ: ಕಳೆದ ಹದಿನೈದು ದಿನಗಳ ಹಿಂದೆ ಚಾಮರಾಜನಗರದಲ್ಲಿ ಕೊರೊನಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ಕೊರತೆಯಿಂದ ಸೋಂಕಿತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಸೂಚನೆಯಂತೆ ಮುಂದಿನ ವಿಚಾರಣೆಯ ವೇಳೆಗೆ ರಾಜ್ಯ ಸರ್ಕಾರ ಕ್ರಮವಹಿಸಿದ ಬಗ್ಗೆ ತನ್ನ ನಿಲುವು ತಿಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಚಾಮರಾಜನಗರದಲ್ಲಿ ಹೇಳಿದರು.

    ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡಿ, ಕೋವಿಡ್ ಸೋಂಕಿತರ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದ ಬಳಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿನ ಆಕ್ಸಿಜನ್ ಕೊರತೆಯಿಂದ ಅಮಾಯಕರು ಸಾವನ್ನಪ್ಪಿದ ಘಟನೆ ನಡೆದು ಹದಿನೈದು ದಿನಗಳಾಗಿದೆ. ನ್ಯಾಯಾಂಗ ತನಿಖೆಯೂ ಸಹ ನಡೆದಿದೆ, ಹೈ ಕೋರ್ಟ್‍ನಲ್ಲಿ ಪ್ರಕರಣ ದಾಖಲಾಗಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

    ಹೈ ಕೋರ್ಟ್ ಈಗಾಗಲೇ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯ ವೇಳೆಗೆ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ ಪ್ರಕರಣದ ತಪ್ಪಿತಸ್ಥರಿಗೆ ಕ್ರಮ ಹಾಗೂ ಮೃತ ಕುಟುಂಬಗಳಿಗೆ ಪರಿಹಾರವನ್ನು ನೀಡುವ ಬಗ್ಗೆ ಸರ್ಕಾರದ ನಿರ್ಧಾರವನ್ನು ತಿಳಿಸುವಂತೆ ಸೂಚನೆ ನೀಡಿದೆ. ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದು, ಮೃತ ಕುಟುಂಬಗಳಿಗೆ ಯಾವ ರೀತಿಯಲ್ಲಿ ಪರಿಹಾರ ನೀಡಬಹುದೆಂದು ತಿಳಿಸಿದ್ದೇನೆ. ಸದ್ಯದಲ್ಲಿ ಸರ್ಕಾರ ಹೈ ಕೋರ್ಟ್‍ಗೆ ತನ್ನ ನಿಲುವನ್ನು ತಿಳಿಸಲಿದೆ ಎಂದಿದ್ದಾರೆ.

    ಹನೂರು ತಾಲ್ಲಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಿಗೆ ಭೇಟಿ ನೀಡಿದ್ದು, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರ ಬಳಿಯೂ ಸಹ ಚರ್ಚೆ ನಡೆಸಿದ್ದೇವೆ. ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಸಾವಿನ ಪ್ರಮಾಣವೂ ಸಹ ಕಡಿಮೆಯಾಗ ಬೇಕು. ಎಲ್ಲಾ ಕ್ರಮವನ್ನು ವಹಿಸಲು ರಾಜ್ಯ ಸರ್ಕಾರ ಸಿದ್ದವಿದೆ ಎಂದರು. ಹನೂರು ಶಾಸಕ ಆರ್. ನರೇಂದ್ರ ಹಾಗೂ ವೈದ್ಯರುಗಳು ಸಚಿವರೊಂದಿಗೆ ಹಾಜರಿದ್ದರು.

  • ಆಕ್ಸಿಜನ್ ಕೊರತೆಯಿಂದ ಸಾಯುವುದು ಯಾವ ನರಮೇಧಕ್ಕೂ ಕಮ್ಮಿಯಲ್ಲ: ಅಲಹಬಾದ್ ಹೈ ಕೋರ್ಟ್ ಚಾಟಿ

    ಆಕ್ಸಿಜನ್ ಕೊರತೆಯಿಂದ ಸಾಯುವುದು ಯಾವ ನರಮೇಧಕ್ಕೂ ಕಮ್ಮಿಯಲ್ಲ: ಅಲಹಬಾದ್ ಹೈ ಕೋರ್ಟ್ ಚಾಟಿ

    – ಆಕ್ಸಿಜನ್ ಕೊರತೆಯಿಂದ ಜನ ಸಾವನ್ನಪ್ಪಿದರೆ ಅಪರಾಧ ಕೃತ್ಯವೆಂದು ಪರಿಗಣಿಸಲಾಗುವುದು

    ಲಕ್ನೋ: ಕೊರೊನಾ ಎರಡನೇ ಅಲೆಗೆ ತತ್ತರಿಸಿ ಜನ ಆಕ್ಸಿಜನ್ ಕೊರತೆಯಿಂದ ನರಳಾಡಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ ಉತ್ತರ ಪ್ರದೇಶದ ಅಲಹಬಾದ್ ಹೈ ಕೋರ್ಟ್, ಆಕ್ಸಿಜನ್‍ನಿಂದ ವ್ಯಕ್ತಿ ಮರಣ ಹೊಂದುವುದನ್ನು ಅಪರಾಧ ಕೃತ್ಯವೆಂದು ಪರಿಗಣಿಸಲಾಗುವುದು. ಅಲ್ಲದೆ ಇದು ಯಾವ ನರಮೇಧಕ್ಕಿಂತ ಕಡಿಮೇ ಏನಲ್ಲ ಎಂದು ಎಚ್ಚರಿಸಿದೆ.

    ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರ ಮಧ್ಯೆ ದೇಶಾದ್ಯಂತ ಆಕ್ಸಿಜನ್ ಕೊರತೆ ಕಾಡುತ್ತಿರುವುದನ್ನು ಅರಿತ ಕೋರ್ಟ್, ಈ ಕುರಿತು ಬೇಸರ ವ್ಯಕ್ತಪಡಿಸಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ನರಳಾಡಿ ಜನ ಸಾಯುತ್ತಿರುವುದನ್ನು ಕಂಡು ತುಂಬಾ ನೋವಾಗಿದೆ. ಆಮ್ಲಜನಕವಿಲ್ಲದೆ ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯವಾಗಿದೆ, ಇದು ನರಮೇಧಕ್ಕಿಂತಲೂ ಕಡಿಮೆ ಏನಲ್ಲ. ಆಕ್ಸಿಜನ್ ನಿರಂತರ ಸಂಗ್ರಹಣೆ ಹಾಗೂ ಪೂರೈಕೆ ಸರಪಳಿಯನ್ನು ಖಚಿತಪಡಿಸಿಕೊಳ್ಳುವ ಕೆಲಸ ವಹಿಸಿಕೊಂಡವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯಮೂರ್ತಿ ಅಜಿತ್ ಕುಮಾರ್ ಹಾಗೂ ನ್ಯಾಯಮೂರ್ತಿ ಸಿದ್ಧಾರ್ಥ್ ವರ್ಮಾ ಅವರಿದ್ದ ಪೀಠ ಕಳವಳ ವ್ಯಕ್ತಪಡಿಸಿದೆ.

    ತಮ್ಮ ಪ್ರೀತಿ ಪಾತ್ರರ ಪ್ರಾಣ ಉಳಿಸಿಕೊಳ್ಳಲು ಆಮ್ಲಜನಕ ಸಿಲಿಂಡರ್ ಗಳ ಸಂಗ್ರಹಣೆಗಾಗಿ ಭಿಕ್ಷೆ ಬೇಡುತ್ತಿದ್ದಾರೆ. ಆಕ್ಸಿಜನ್ ಕೇಳಲು ಬಂದ ಬಡ ಜನರಿಗೆ ಜಿಲ್ಲಾಡಳಿತ ಹಾಗೂ ಪೊಲೀಸರು ಕಿರುಕುಳ ನೀಡಿದ್ದಾರೆ. ಈ ವೀಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ ಎಂದು ಕೋರ್ಟ್ ಕಿಡಿಕಾರಿದೆ.

    ಭಾರತದಲ್ಲಿ ನಿತ್ಯ ನಾಲ್ಕು ಲಕ್ಷದ ಆಸುಪಾಸಿನಲ್ಲಿ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದು, ಬೆಡ್ ಹಾಗೂ ಆಕ್ಸಿಜನ್ ಕೊರತೆಯಿಂದ ಜನ ನರಳಾಡಿ ಪ್ರಾಣ ಬಿಡುತ್ತಿದ್ದಾರೆ. ಇಷ್ಟಾದರೂ ಆಡಳಿತ ಸರ್ಕಾರಗಳು ಮಾತ್ರ ಬೇಕಾಬಿಟ್ಟಿಯಾಗಿ ವರ್ತಿಸುತ್ತಿವೆ. ಹೀಗಾಗಿ ಹೈ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

  • ಕಾರಿನಲ್ಲಿ ಪ್ರಯಾಣಿಸುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ- ದೆಹಲಿ ಹೈಕೋರ್ಟ್

    ಕಾರಿನಲ್ಲಿ ಪ್ರಯಾಣಿಸುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ- ದೆಹಲಿ ಹೈಕೋರ್ಟ್

    ನವದೆಹಲಿ: ನೀವು ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡುತ್ತಿದ್ದರೂ ಮಾಸ್ಕ್ ಕಡ್ಡಾಯ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಮಾಡಲೇಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

    ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದಾಗ ಪೊಲೀಸರು ಹಾಕಿದ ದಂಡದ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಈ ದೂರಿನ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಮುಖ್ಯ ನಾಯಾಧೀಶ ಪ್ರತಿಭಾ ಎಂ ಸಿಂಗ್ ಅವರು ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರು ಕೂಡ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಹಾಗೆಯೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ತೀರ್ಪು ನೀಡಿದ್ದಾರೆ.

    ನೀವು ಒಬ್ಬರೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಕೂಡ ನಿಮ್ಮ ಸುರಕ್ಷತೆಗಾಗಿ ಮಾಸ್ಕ್ ಧರಿಸಲೇಬೇಕು. ಇದೀಗ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜನ ಲಸಿಕೆ ಪಡೆದರು ಅಥವಾ ಪಡೆದುಕೊಳ್ಳದೆ ಇದ್ದರು ಕೂಡ ಮಾಸ್ಕ್ ಧರಿಸುವುದು ಮುಖ್ಯವಾಗಿದೆ ಎಂದರು.

    ಕೊರೊನಾ ಕುರಿತು ದೇಶದಾದ್ಯಂತ ಈಗಾಗಲೇ ಸರ್ಕಾರ ಹಾಗೂ ತಜ್ಞರು ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚನೆ ನೀಡುತ್ತಿದ್ದಾರೆ. ಅದೇ ರೀತಿ ಟ್ರಾಫಿಕ್‍ನಲ್ಲಿ ನಿಂತಿರುವಾಗ ಕಾರ್ ನ ಗ್ಲಾಸ್‍ನ್ನು ಕೆಳಗಿಳಿಸಿದಾಗ ಪಕ್ಕದಲ್ಲಿದ್ದವರಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆ ಇದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.

    ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ, ಹೈ ಕೋರ್ಟ್ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸುವಂತೆ ಕಾನೂನು ಜಾರಿಮಾಡಿಲ್ಲ ಆದರೆ ಪ್ರತಿಯೊಂದು ರಾಜ್ಯಗಳು ಈ ಬಗ್ಗೆ ತನ್ನದೇ ಆದ ಕಾನೂನನ್ನು ಜಾರಿಗೊಳಿಸುವ ಅಧಿಕಾರ ಇದೆ ಎಂದು ತಿಳಿಸಿದೆ.

    ಈ ನಡುವೆ ದೆಹಲಿ ಸರ್ಕಾರ ರಾಜ್ಯದಲ್ಲಿ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರು ಮಾಸ್ಕ್ ಧರಿಸುವುದು ಕಡ್ಡಾಯವಾಗಿ ಏಪ್ರಿಲ್ ಒಂದರಿಂದ ಕಾನೂನು ಜಾರಿಗೆ ತಂದಿದೆ ಎಂದು ಸ್ಪಷ್ಟನೆ ನೀಡಿದೆ.

    ದೆಹಲಿಯಲ್ಲಿ ಕಳೆದ ಒಂದೇ ದಿನ 5,100 ಕೊರೊನಾ ಹೊಸ ಪ್ರಕರಣಗಳು ದಾಖಲಾಗಿತ್ತು. ಇನ್ನು ದೇಶದಾದ್ಯಂತ ದಿನದ 24 ಗಂಟೆಗಳಲ್ಲಿ 1.15 ಲಕ್ಷ ಜನರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ ಎಂದು ವರದಿಯಾಗಿದೆ.