ಸ್ಯಾಂಡಲ್‌ವುಡ್ (Sandalwood) ನಟಿ ಭಾವನಾ ರಾವ್ (Bhavana Rao) ಹೊಸ ಬಗೆಯ ಪಾತ್ರಗಳಿಗೆ ಮಹತ್ವ ನೀಡೋದ್ರಲ್ಲಿ ಯಾವಾಗಲೂ ಮುಂದು. ಇದೀಗ ಹೊಸ ಫೋಟೋನಲ್ಲಿ ಚಿಟ್ಟೆಯಾಗಿ ಮಿಂಚಿದ್ದಾರೆ. ಗಾಳಿಪಟ ನಟಿಯ ಚಿಟ್ಟೆಯ ಅವತಾರ ಅಭಿಮಾನಿಗಳ ಗಮನ ಸೆಳೆದಿದೆ.
ವರ್ಷಕ್ಕೆ ಕಮ್ಮಿ ಸಿನಿಮಾಗಳಲ್ಲಿ ನಟಿಸಿದ್ರು ಕೂಡ ಸದಾ ಕಂಟೆಂಟ್‌ಗೆ ಪ್ರಾಮುಖ್ಯತೆ ಕೊಡುವ ನಟಿ ಭಾವನಾ ರಾವ್, ಇತ್ತೀಚಿಗೆ ‘ಹೊಂದಿಸಿ ಬರೆಯಿರಿ’ ಚಿತ್ರದ ಮೂಲಕ ಗಮನ ಸೆಳೆದರು. ಪ್ರವೀಣ್ ತೇಜ್‌ಗೆ ಜೋಡಿಯಾಗಿ ಮಿಂಚಿದ್ರು ಈ ಗಾಳಿಪಟ (Galipata) ಬೆಡಗಿ. ಇದನ್ನೂ ಓದಿ:ನಟಿ ಶ್ರುತಿ ವಿರುದ್ಧ ಹಿರೆಕೇರೂರಿನಲ್ಲಿ ದೂರು ದಾಖಲು
‘ಹೊಂದಿಸಿ ಬರೆಯಿರಿ’ ಚಿತ್ರದಲ್ಲಿ ಭಾವನಾ ನಟನೆಗೆ ಮೆಚ್ಚುಗೆ ವ್ಯಕ್ತವಾದ ಬೆನ್ನಲ್ಲೇ ಮತ್ತೊಂದಿಷ್ಟು ಸಿನಿಮಾ ಕಥೆಗಳನ್ನ ಕೇಳ್ತಿದ್ದಾರೆ. ಹೊಸ ಬಗೆಯ ಪಾತ್ರಗಳ ಮೂಲಕ ಗಾಳಿಪಟ ನಾಯಕಿ ಅಭಿಮಾನಿಗಳ ಮುಂದೆ ಬರಲಿದ್ದಾರೆ.
ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ತಾರಾಗಣದ ‘ಹೊಂದಿಸಿ ಬರೆಯಿರಿ’ ಸಿನಿಮಾ ದಿನದಿಂದ ದಿನಕ್ಕೆ ಸ್ಯಾಂಡಲ್ ವುಡ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಸಿನಿಮಾದ ಪ್ರತಿಯೊಂದು ಸ್ಯಾಂಪಲ್ ಗಳು ಪ್ರಾಮಿಸಿಂಗ್ ಆಗಿದ್ದು ಚಿತ್ರರಸಿಕರ ಮನಗೆದ್ದಿವೆ. ಬಿಡುಗಡೆಯ ಹೊಸ್ತಿಲಲ್ಲಿರುವ ಸಿನಿಮಾ ತಂಡ ಭರ್ಜರಿ ಪ್ರಚಾರದ ಮೂಲಕವೂ ಗಮನ ಸೆಳೆಯುತ್ತಿದೆ. ‘ಹೊಂದಿಸಿ ಬರೆಯಿರಿ’ ಹಾಡುಗಳ ಮೆರವಣಿಗೆ ಆರಂಭವಾಗಿದ್ದು, ಈಗಾಗಲೇ ಬಿಡುಗಡೆಯಾದ ಎರಡು ಹಾಡುಗಳು ಕೇಳುಗರ ಮನ ಗೆದ್ದಿದೆ, ಇದೀಗ ಚಿತ್ರದ ಬಹು ನಿರೀಕ್ಷಿತ ಮೂರನೇ ಸಾಂಗ್ ಬಿಡುಗಡೆ ಮಾಡಿದೆ ಚಿತ್ರತಂಡ.
ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯದಲ್ಲಿ ಅರಳಿರುವ ‘ತಲೆಹರಟೆ ಮಾಡುತ್ತಿದೆ ಈ ಹೃದಯ’ ಎಂಬ ಪೆಪ್ಪಿ ಸಾಂಗ್ ಇದಾಗಿದೆ. ಐಶ್ವರ್ಯ ರಂಗರಾಜನ್, ವರುಣ್ ರಾಮಚಂದ್ರ ಈ ಹಾಡಿಗೆ ದನಿಯಾಗಿದ್ದಾರೆ. ಜೋ ಕೋಸ್ಟ ಅವರ ಫ್ರೆಶ್ ಮ್ಯೂಸಿಕ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಹಿಂದೆ ಬಿಡುಗಡೆಯಾಗಿದ್ದ ‘ಬೆಳಕಲಿ’ ಹಾಗೂ ‘ಓ ಕವನ’ ಹಾಡುಗಳು ಸಿನಿರಸಿಕರಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಈ ಹಾಡು ಕೂಡ ಕೇಳುಗರನ್ನು ಮೋಡಿ ಮಾಡುವ ಎಲ್ಲಾ ಲಕ್ಷಣಗಳನ್ನೂ ಹೊಂದಿದೆ. ಇದನ್ನೂ ಓದಿ:`ಮಿಸ್ ಯೂ ಸಾನ್ಯ’ ಎಂದು ಬಿಕ್ಕಿ ಬಿಕ್ಕಿ ಅತ್ತ ರೂಪೇಶ್ ಶೆಟ್ಟಿ
ಎಲ್ಲಾ ಅಂದುಕೊಂಡಂತೆ ಆಗಿದ್ರೆ ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಕೂಡ ರಿಲೀಸ್ ಡೇಟ್ ಅನೌನ್ಸ್ ಮಾಡಿತ್ತು. ಆದ್ರೆ ಸಿನಿಮಾದ ಅಂತಿಮ ಹಂತದ ತಾಂತ್ರಿಕ ಕೆಲಸಗಳು ಬಾಕಿ ಇರುವುದರಿಂದ ಬಿಡುಗಡೆಯನ್ನು ಚಿತ್ರತಂಡ ಮುಂದೂಡಿದೆ. ನವೆಂಬರ್ 18ರ ಬದಲಾಗಿ ಹೊಸದಾದ ರಿಲೀಸ್ ಡೇಟ್ ಸಿನಿಮಾ ತಂಡ ಅನೌನ್ಸ್ ಮಾಡಲಿದೆ ಎಂದು ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ತಿಳಿಸಿದ್ದಾರೆ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಒನ್ ಲೈನ್ ಕಹಾನಿ ಸುತ್ತ ಹೆಣೆಯಲಾದ ಸುಂದರವಾದ ಕಥಾಹಂದರವೇ ‘ಹೊಂದಿಸಿ ಬರೆಯಿರಿ’. ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಚಿತ್ರಣವಿದೆ ಹಾಗೂ ಭಾವನಾತ್ಮಕ ಜರ್ನಿ ಇದೆ.
ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀಮಹಾದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. ಜೋ ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಗುಳ್ಟು ಚಿತ್ರ ಖ್ಯಾತಿಯ ಶಾಂತಿ ಸಾಗರ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸಿನಿಮಾ ನಿರ್ಮಾಣ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಮೇನಹಳ್ಳಿ ಜಗನ್ನಾಥ್ ಸಾರಥ್ಯದಲ್ಲಿ ತಯಾರಾಗಿರುವ ಹೊಂದಿಸಿ ಬರೆಯಿರಿ (Hondisi bareyiri) ಸಿನಿಮಾ ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಕಥೆ, ಪಾತ್ರವರ್ಗದ ಬಗ್ಗೆ ಪ್ರೇಕ್ಷಕ ಕುತೂಹಲಗೊಂಡಿದ್ದಾನೆ. ಫಸ್ಟ್ ಲುಕ್ ನಿಂದ ಹಿಡಿದು ಇಲ್ಲಿವರೆಗೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಆವರಿಸಿರುವ ಹೊಂದಿಸಿ ಬರೆಯಿರಿ ಸಿನಿಮಾಗೆ ಈಗ ಮೋಹಕ ತಾರೆ ರಮ್ಯಾ ಸಾಥ್ ಕೊಡ್ತಿದ್ದಾರೆ. ಇದೇ 28ರಂದು ಚಿತ್ರದ ಓ ಕವನ ಎಂಬ ವಿಡಿಯೋ ಸಾಂಗ್ ನ್ನು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Ramya) ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಲಿದ್ದಾರೆ. ಸಂಡೇ ಸಿನಿಮಾಸ್ ಯೂಟ್ಯೂಬ್ ನಲ್ಲಿ ಬೆಳಗ್ಗೆ 11.31ಕ್ಕೆ ಹಾಡು ಅನಾವರಣವಾಗಲಿದೆ.
ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರುತ್ತಿರುವ ಚಿತ್ರದಲ್ಲಿ ಕಲರ್ ಫುಲ್ ತಾರಾಬಗಳವಿದೆ. ಪ್ರವೀಣ್ ತೇಜ್ (Praveen Tej), ಐಶಾನಿ ಶೆಟ್ಟಿ (Aishani Shetty), ಸಂಯುಕ್ತ ಹೊರನಾಡು, ಶ್ರೀಮಹಾದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಹಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ.
ಜೋ ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ (Ramenahalli Jagannath) ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.ಗುಳ್ಟು ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದು, “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ತಾರಾಗಣ, ಕಂಟೆಂಟು, ಕ್ವಾಲಿಟಿ , ಟೀಸರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾದಿಂದ ಬದುಕಿ ಸುಮ್ಮನೆ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ. ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣ ಪದಪುಂಜಗಳನ್ನು ಪೊಣಿಸಿ ರಚಿಸಿರುವ ಹಾಡಿಗೆ ಜೋ ಕೋಸ್ಟ ಅದ್ಭುತ ಸಂಗೀತ ನೀಡುವುದರ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ.
ಗುಳ್ಟು ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್ ಕೆ. ಜಿ. ಎಫ್ ನಂತರ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳನ್ನು ಹೊಂದಿಕೊಂಡು ಸಾಗುವ ಬದುಕಿನ ಪಯಣದ ಹೊಂದಿಸಿ ಬರೆಯಿರಿ ಸಿನಿಮಾದಲ್ಲಿ ಏಳು ಯುವಕ-ಯುವತಿಯರ ಒಂದೊಂದು ಕಥೆ, ಪ್ರೀತಿ ತುಂಬಿದೆ. ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ಇದನ್ನೂ ಓದಿ:ಕರೀನಾ ಬರೆದ ಪ್ರೆಗ್ನೆನ್ಸಿ ಬೈಬಲ್ ಪುಸ್ತಕ ಕೇಸು: ಸರ್ಕಾರದ ಮೂಲಕ ದೂರು ದಾಖಲಿಸಿ ಎಂದ ಹೈಕೋರ್ಟ್
ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ ಹೊಂದಿಸಿ ಬರೆಯಿರಿ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದು, ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಗಜಾನನ ಅಂಡ್ ಗ್ಯಾಂಗ್ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರ ಖ್ಯಾತಿಯ ಭಾವನಾರಾವ್ ಹೀಗೆ ಹಲವು ಪ್ರತಿಭೆಗಳು ಸಿನಿಮಾದಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]