Tag: ಹೊಂಬಾಳೆ

  • ನೋವಿನ ಸಂದರ್ಭದಲ್ಲಿ ಸಂಭ್ರಮ ಬೇಡವೆಂದು ಹಿಂದೆ ಸರಿದ ರಿಷಬ್ ಶೆಟ್ಟಿ

    ನೋವಿನ ಸಂದರ್ಭದಲ್ಲಿ ಸಂಭ್ರಮ ಬೇಡವೆಂದು ಹಿಂದೆ ಸರಿದ ರಿಷಬ್ ಶೆಟ್ಟಿ

    ನಿವಾರ ತಮಿಳುನಾಡಿನ ಕರೂರ್‌ನಲ್ಲಿ ಕಾಲ್ತುಳಿತ (Karur Stampede) ಪ್ರಕರಣದಲ್ಲಿ 41 ಜನರು ಸತ್ತಿದ್ದು ನೂರಾರು ಜನರು ಗಾಯಗೊಂಡಿದ್ದಾರೆ. ಇಡೀ ತಮಿಳುನಾಡು ರಾಜ್ಯವೇ ದುಃಖದಲ್ಲಿ ಮುಳುಗಿದೆ. ಈ ದುಃಖದಲ್ಲಿ ಕಾಂತಾರ ಸಿನಿಮಾ ತಂಡವೂ ಭಾಗಿಯಾಗಲು ನಿರ್ಧರಿಸಿದೆ. ಹೀಗಾಗಿ ಮಂಗಳವಾರ ಚೆನ್ನೈ ನಡೆಯಬೇಕಿದ್ದ ಕಾಂತಾರ ಸುದ್ದಿಗೋಷ್ಠಿಯನ್ನು ಚಿತ್ರ ತಂಡ ರದ್ದುಮಾಡಿದೆ.

    ಹೊಂಬಾಳೆ ಫಿಲಂಸ್ (Hombale Films) ಮೂಲಕ ಅಧಿಕೃತ ಪ್ರಕಟಣೆ ಹೊರಡಿಸಿರುವ ನಟ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ನೋವಿನ ಸಂದರ್ಭದಲ್ಲಿ ಸಂಭ್ರಮ ಬೇಡ ಎಂಬರ್ಥದಲ್ಲಿ ಪ್ರಕಟಣೆ ಹೊರಡಿಸಿದ್ದಾರೆ.  ಇದನ್ನೂ ಓದಿ:  ಬಿಗ್‌ಬಾಸ್ ಮನೆಯಲ್ಲಿ ವಿವಾದಿತ ಸ್ಪರ್ಧಿಗಳು!


    ಕಾಲ್ತುಳಿತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ನಿಮ್ಮ ನೋವಿನಲ್ಲಿ ನಾವೂ ಪಾಲುದಾರರು ಎಂದಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ ಇದು ಕಷ್ಟದಲ್ಲಿದ್ದವರಿಗೆ ಜೊತೆಯಾಗಬೇಕಾದ ಸಮಯ, ಹೀಗಾಗಿ ಕಾರ್ಯಕ್ರಮ ರದ್ದು ಮಾಡುತ್ತಿದ್ದೇವೆ. ತಮಿಳುನಾಡು ಪ್ರೇಕ್ಷಕರನ್ನು ಆದಷ್ಟು ಬೇಗ ಭೇಟಿಯಾಗುತ್ತೇವೆ ಎಂದು ಹೇಳುವ ಮೂಲಕ ಕಾಂತಾರ ಇವೆಂಟ್ ಕ್ಯಾನ್ಸಲ್ ಮಾಡಿಕೊಂಡಿದೆ.

  • ಇಂಗ್ಲಿಷಿನಲ್ಲೂ ‘ಕಾಂತಾರ’ ರಿಲೀಸ್ : ಮಾರ್ಚ್ 1ರಿಂದ ಲಭ್ಯ

    ಇಂಗ್ಲಿಷಿನಲ್ಲೂ ‘ಕಾಂತಾರ’ ರಿಲೀಸ್ : ಮಾರ್ಚ್ 1ರಿಂದ ಲಭ್ಯ

    ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿರುವ ‘ಕಾಂತಾರ’ ಸಿನಿಮಾ ಇದೀಗ ಇಂಗ್ಲಿಷ್ ನಲ್ಲೂ ಸಿದ್ಧವಾಗಿದೆ. ಈಗಾಗಲೇ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲೂ ಈ ಸಿನಿಮಾ ರಿಲೀಸ್ ಆಗಿದ್ದು, ಈಗ ಇಂಗ್ಲಿಷ್ ನಲ್ಲೂ ಚಿತ್ರವನ್ನು ಡಬ್ ಮಾಡಲಾಗಿದೆ. ಮಾರ್ಚ್ 1 ರಿಂದ ಓಟಿಟಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಸಿನಿಮಾ ಶತದಿನೋತ್ಸವ ಕಂಡಿದೆ. ಈ ವೇಳೆಯಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಗಿದೆ.

    ಕಡಿಮೆ ವೆಚ್ಚದಲ್ಲಿ ತಯಾರಾದ ಈ ಸಿನಿಮಾ ನಾಲ್ಕುನೂರಕ್ಕೂ ಅಧಿಕ ಕೋಟಿ ಹಣವನ್ನು ಗಳಿಸಿದೆ. ನೂರು ದಿನಗಳ ಪ್ರದರ್ಶನ ಕಂಡಿದೆ. ಹಲವು ಭಾಷೆಗಳಲ್ಲಿ ಡಬ್ ಆಗಿ, ಅಷ್ಟೂ ಭಾಷೆಗಳಲ್ಲೂ ಯಶಸ್ವಿ ಪ್ರದರ್ಶನ ಕಂಡಿದೆ. ಈಗ ಇಂಗ್ಲಿಷಿನವರಿಗೂ ಈ ಸಿನಿಮಾವನ್ನು ತೋರಿಸಲು ನೆಟ್ ಫ್ಲಿಕ್ಸ್ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ ಮೊದಲ ವಾರದಲ್ಲೇ ನೋಡಲು ಲಭ್ಯವಿದೆ. ಇದನ್ನೂ ಓದಿ: ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ಕಾಂತಾರ ನಂತರ ಕಾಂತಾರ 2 ಸಿನಿಮಾ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ರಿಷಬ್ ಶೆಟ್ಟಿ ಬೇರೆಯದ್ದೇ ಅಚ್ಚರಿಯನ್ನು ನೀಡಿದ್ದಾರೆ. ಈಗಾಗಲೇ ನೋಡಿದ್ದು ಕಾಂತಾರ 2, ಮುಂದಿನ ದಿನಗಳಲ್ಲಿ ಬರುವುದು ಕಾಂತಾರ 1 ಎಂದು ಅವರು ಹೇಳಿಕೆ ನೀಡಿದ್ದಾರೆ. ಈಗಾಗಲೇ ನೋಡಿರುವ ಕಥೆಯ ಮುಂಚಿನ ಕಥೆಯನ್ನು ಮುಂದಿನ ಕಾಂತಾರ ಚಿತ್ರದಲ್ಲಿ ನೋಡಲಿದ್ದೀರಿ ಎಂದು ರಿಷಬ್ ತಿಳಿಸಿದ್ದಾರೆ. ಈ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯಶ್ ಜೊತೆ ಸಿನಿಮಾ ಮಾಡುತ್ತೇವೆ, ಕಾಯಬೇಕು ಎಂದ ಹೊಂಬಾಳೆ ಫಿಲ್ಮ್ಸ್

    ಯಶ್ ಜೊತೆ ಸಿನಿಮಾ ಮಾಡುತ್ತೇವೆ, ಕಾಯಬೇಕು ಎಂದ ಹೊಂಬಾಳೆ ಫಿಲ್ಮ್ಸ್

    ಮುಂದಿನ ದಿನಗಳಲ್ಲಿ ಯಶ್ ಜೊತೆ ಸಿನಿಮಾ ಮಾಡುವುದು ಪಕ್ಕಾ. ಆದರೆ, ಅದಕ್ಕಾಗಿ ಕಾಯಬೇಕು ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿಕೊಂಡಿದೆ. ಕೆಜಿಎಫ್ 2 ಮುಗಿದ ತಕ್ಷಣವೇ ಕೆಜಿಎಫ್ 3 ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ಕೈಗೆತ್ತಿಕೊಳ್ಳಲಿದೆ ಎಂದು ನಂಬಲಾಗಿತ್ತು. ಈ ಕುರಿತು ಹಲವು ಚರ್ಚೆಗಳೂ ನಡೆದವು. ಆದರೆ, ಸದ್ಯಕ್ಕೆ ಅದಕ್ಕೆ ಫುಲ್ ಸ್ಟಾಪ್ ಇಡಲಾಗಿದೆ. ಯಶ್ ಬೇರೊಂದು ಸಿನಿಮಾ ಮಾಡುತ್ತಿರುವುದರಿಂದ ಯಶ್ ಜೊತೆಗಿನ ಚಿತ್ರಕ್ಕಾಗಿ ಕಾಯುವುದು ಅನಿವಾರ್ಯವಾಗಿದೆ. ಈ ಕಾಯುವಿಕೆ ಇನ್ನೆಷ್ಟು ವರ್ಷ ಎನ್ನುವುದು ಸದ್ಯಕ್ಕಿರುವ ಕುತೂಹಲವೂ ಆಗಿದೆ.

    ಶ್ ಅವರ ಹೊಸ ಸಿನಿಮಾದ ಬಗ್ಗೆ ಆರೇಳು ತಿಂಗಳಿಂದ ಹೊಸ ಹೊಸ ಸುದ್ದಿಗಳು ಬರುತ್ತಲೇ ಇವೆ. ಬಂದ ವೇಗದಲ್ಲೇ ಅವರು ಹುಸಿಯಾಗುತ್ತಿವೆ. ಆದರೆ, ಇತ್ತೀಚೆಗಷ್ಟೇ ಅವರ ಹೊಸ ಸಿನಿಮಾದ ಅಚ್ಚರಿಯ ಸಂಗತಿಯೊಂದು ಹೊರ ಬಿದ್ದಿತ್ತು. ಅವರ ಮುಂದಿನ ಸಿನಿಮಾ ಬಜೆಟ್ ಬರೋಬ್ಬರಿ 400 ಕೋಟಿ ಎಂದು ಹೇಳಲಾಗಿತ್ತು. ಈ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡುತ್ತಿರುವ ಸಂಸ್ಥೆ ಕೆವಿಎನ್ ಎಂದು ಹೇಳಲಾಗಿತ್ತು. ಅದೀಗ ನಿಜ ಎನ್ನುವಂತೆ ಸಾಕ್ಷಿಯೊಂದು ಸಿಕ್ಕಿದೆ.

    ಯಶ್ ಅವರು 19ನೇ ಸಿನಿಮಾವನ್ನು ದಕ್ಷಿಣದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಮಾಡಲಿದೆ ಎನ್ನುವ ವರ್ತಮಾನ ಗಾಂಧಿನಗರದಲ್ಲಿ ಬಲವಾಗಿಯೇ ಕೇಳಿ ಬರುತ್ತಿತ್ತು. ಅದು ನಿಜ ಎನ್ನುವಂತೆ ಕೆವಿಎನ್ ಪ್ರೊಡಕ್ಷನ್ ನ ವೆಂಕಟ್ ಕೋಣಂಕಿ ನಾರಾಯಣ್ ಅವರು ಯಶ್ ಜೊತೆ ಕಾಣಿಸಿಕೊಂಡಿದ್ದಾರೆ. ಹುಟ್ಟು ಹಬ್ಬದ ಪಾರ್ಟಿಯಲ್ಲಿ ವೆಂಕಟ್ ಕೂಡ ಭಾಗಿಯಾಗಿ ಶುಭ ಹಾರೈಸಿದ್ದಾರೆ. ಹಾಗಾಗಿ ಇವರೇ ಮುಂದಿನ ಸಿನಿಮಾದ ನಿರ್ಮಾಪಕರು ಎನ್ನುವುದು ನಿಕ್ಕಿಯಾದಂತಾಗಿದೆ. ಇದನ್ನೂ ಓದಿ: ಸಾನ್ಯ ಎಲಿಮಿನೇಟ್‌ ಆದಮೇಲೆ ಅವಳ ಬೆಲೆ ರೂಪೇಶ್‌ ಶೆಟ್ಟಿಗೆ ಗೊತ್ತಾಯ್ತು: ದೀಪಿಕಾ ದಾಸ್

    ಈ ಹಿಂದೆ ಯಶ್, ಗೋವಾದ ಮುಖ್ಯಮಂತ್ರಿಗಳನ್ನು ಭೇಟಿಯಾದಾಗ ಇದೇ ವೆಂಕಟ್ ಕೂಡ ಜೊತೆಗಿದ್ದರು. ಅವತ್ತೇ ಒಂದು ಸುಳಿವನ್ನೂ ಅವರು ಬಿಟ್ಟುಕೊಟ್ಟಿದ್ದರು. ಪದೇ ಪದೇ ಯಶ್ ಜೊತೆ ವೆಂಕಟ್ ಕಾಣಿಸಿಕೊಳ್ಳುತ್ತಿರುವುದು ಸುದ್ದಿಗೆ ಪುಷ್ಠಿ ನೀಡಿದಂತಾಗಿದೆ. ಸ್ವತಃ ಯಶ್ ಅವರೇ ಹೇಳಿದಂತೆ ಮುಂದಿನ ದಿನಗಳಲ್ಲಿ ದೊಡ್ಡ ಸುದ್ದಿಯನ್ನೇ ಅವರ ಅಭಿಮಾನಿಗಳಿಗೆ ಅವರು ಕೊಡಲಿದ್ದಾರೆ. ಆ ದೊಡ್ಡ ಸುದ್ದಿಯಲ್ಲಿ ವೆಂಕಟ್ ಅವರ ಹೆಸರೂ ಇರಲಿದೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಡೆಯಾಜ್ಞೆ ತೆರವು – ಕಾಂತಾರ ವರಾಹರೂಪಂ ಹಾಡು ಬಳಕೆಗೆ ಅನುಮತಿ

    ತಡೆಯಾಜ್ಞೆ ತೆರವು – ಕಾಂತಾರ ವರಾಹರೂಪಂ ಹಾಡು ಬಳಕೆಗೆ ಅನುಮತಿ

    ತಿರುವನಂತಪುರಂ: ಕಾಂತಾರ(Kantara) ಚಿತ್ರದ ವರಾಹರೂಪಂ(Varaha Roopam) ಹಾಡಿನ ವಿವಾದದಲ್ಲಿ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ.

    ಕೃತಿಚೌರ್ಯದ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’(Thaikkudam Bridge) ಅರ್ಜಿಯನ್ನು ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ, ವಿಚಾರಣೆಗೆ ನ್ಯಾಯವ್ಯಾಪ್ತಿ ಅಡ್ಡಿ ಎಂದು ಹೇಳಿ ಅರ್ಜಿಯನ್ನೇ ವಜಾಗೊಳಿಸಿದೆ.

    ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ ವರಾಹರೂಪಂ ಹಾಡಿನ ಬರಹಗಾರ ಶಶಿರಾಜ್‌ ಕಾವೂರು, ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ  ಬಳಿಕ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದೆ ಮತ್ತು ವರಾಹರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿದೆ. ನ್ಯಾಯ ಗೆದ್ದಿತು. ಜೈ ತುಳುನಾಡು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಿನಿಮಾಗಳ ಆಯ್ಕೆ, ದೇವರು ಬಗೆಗಿನ ಗ್ರಹಿಕೆ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಕೋಝಿಕ್ಕೋಡ್ ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡಿದ್ದರೂ ಪಾಲಕ್ಕಾಡ್‌ ನ್ಯಾಯಾಲಯದಲ್ಲಿ ಥೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ. ಹೀಗಾಗಿ ಸದ್ಯಕ್ಕೆ ಮೂಲ ವರಾಹರೂಪಂ ಹಾಡನ್ನು ಬಳಸಲು ಸಾಧ್ಯವಿಲ್ಲ.

    ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್ ಕಾಂತಾರ ಸಿನಿಮದ ʼವರಾಹರೂಪಂʼ ಕೃತಿಚೌರ್ಯದ ಆರೋಪ ಮಾಡಿ ಕೇಸ್‌ ದಾಖಲಿಸಿತ್ತು. ಅರ್ಜಿಯನ್ನು ಮಾನ್ಯ ಮಾಡಿದ್ದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ನ್ಯಾಯಾಲಯ ಕಾಂತಾರ ನಿರ್ಮಾಪಕರಿಗೆ ವರಾಹರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಮುಂದಿನ ಆದೇಶದವರೆಗೆ ಸಿಂಕ್ರೊನೈಸ್ ಮಾಡಿದ ವರಾಹರೂಪಂ ಗೀತೆಯೊಂದಿಗೆ ಕಾಂತಾರ ಚಿತ್ರದ ಪ್ರದರ್ಶನ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ, ಸ್ಟ್ರೀಮಿಂಗ್ ಮಾಡದಂತೆ ಜಿಲ್ಲಾ ನ್ಯಾಯಾಲಯ ನಿರ್ಬಧ ವಿಧಿಸಿತ್ತು.

    ವಜಾಗೊಳಿಸಿದ್ದ ಹೈಕೋರ್ಟ್‌
    ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿತ್ತು. ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು.

    ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ. ಈ ನ್ಯಾಯಾಲಯವು ಇಂತಹ ಕೇಸ್‌ಗಳಿಂದ ತುಂಬಿ ತುಳುಕುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತ್ತು. ಈ ಅರ್ಜಿಯನ್ನು ಈಗ ವಿಚಾರಣೆಗೆ ಪರಿಗಣಿಸಲಾಗದು ಎಂದ ಕೋರ್ಟ್‌ ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹೊಂಬಾಳೆ ಫಿಲ್ಮ್ಸ್‌ನವರಿಗೆ ಸಲಹೆಯನ್ನು ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಮತದಾರರ ಪಟ್ಟಿ ವಿವಾದ: ಕೆಜಿಎಫ್ ಸೇಡಿನ ಕಥೆಯೂ ಅಲ್ಲ, ಕಾಂತಾರ ದಂತಕಥೆಯೂ ಅಲ್ಲ ಎಂದ ಸಿದ್ದರಾಮಯ್ಯ

    ಮತದಾರರ ಪಟ್ಟಿ ವಿವಾದ: ಕೆಜಿಎಫ್ ಸೇಡಿನ ಕಥೆಯೂ ಅಲ್ಲ, ಕಾಂತಾರ ದಂತಕಥೆಯೂ ಅಲ್ಲ ಎಂದ ಸಿದ್ದರಾಮಯ್ಯ

    ತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಎರಡು ದಿನಗಳಿಂದ ಕರ್ನಾಟಕದಲ್ಲಿ ಭಾರೀ ಗದ್ದಲ ಎದ್ದಿದೆ. ಅದರಲ್ಲೂ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಹೆಸರಿನಲ್ಲಿ ಮತದಾರರ ಖಾಸಗಿ ಸಂಗತಿಗಳು ಸೋರಿಕೆ ಆಗಿವೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಅದರಲ್ಲೂ ಸಚಿವ ಅಶ್ವತ್ಥ್ ನಾರಾಯಣ್ ಅವರ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸಿದೆ. ಈ ಅನುಮಾನಕ್ಕೆ ಕಾರಣ ಹೊಂಬಾಳೆ ಹೆಸರು.

    ಚಿತ್ರೋದ್ಯಮದ ಬಹುತೇಕರಿಗೆ ಗೊತ್ತಿರುವಂತೆ ಹೊಂಬಾಳೆ ಫಿಲ್ಮಸ್ ಸಂಸ್ಥೆಯು ಅಶ್ವತ್ಥ್ ನಾರಾಯಣ್ ಅವರ ಸಂಬಂಧಿ ವಿಜಯ್ ಕುಮಾರ್ ಅವರದ್ದು. ಈ ಹೊಂಬಾಳೆ ಫಿಲ್ಮಸ್ ಬ್ಯಾನರ್ ನಲ್ಲಿ ಕೆಜಿಎಫ್, ಕಾಂತಾರ ಸೇರಿದಂತೆ ಹಲವು ಚಿತ್ರಗಳು ನಿರ್ಮಾಣಗೊಂಡಿವೆ. ‘ಹೊಂಬಾಳೆ’ ಎನ್ನುವ ಹೆಸರೇ ಮತದಾರರ ಪಟ್ಟಿಯ ವಿವಾದಕ್ಕೆ ಮುನ್ನುಡಿಯಾಗಿದ್ದು, ಇದು ಚಿಲುಮೆ ಎನ್ನುವ ಹೆಸರಿನ ಸಂಸ್ಥೆಯ ಜೊತೆ ತಳುಕುಹಾಕಿಕೊಂಡಿದೆ.  ಮತದಾರರ ಪಟ್ಟಿಯ ದುರುಪಯೋಗಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಹೆಸರು ಬಲವಾಗಿ ಕೇಳಿಬಂದಿದೆ. ಚಿಲುಮೆ ಸಂಸ್ಥೆಯು ಈ ಹಿಂದೆ ಹೊಂಬಾಳೆ ಹೆಸರಿನಲ್ಲಿ ಚಟುವಟಿಕೆಯಲ್ಲಿತ್ತು ಎನ್ನುವುದು ವಿವಾದಕ್ಕೆ ಕಾರಣವಾದ ಅಂಶ.

    ಹೊಂಬಾಳೆ ಹೆಸರು ಕೇಳಿ ಬರುತ್ತಿದ್ದಂತೆಯೇ ಆದ ಘಟನೆಗೂ ಅಶ್ವತ್ಥ್ ನಾರಾಯಣ್ ಅವರಿಗೆ ನೇರ ಸಂಬಂಧವಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಆರೋಪ. ಹಾಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೊಂಬಾಳೆ ಫಿಲ್ಮಸ್ ಸಂಸ್ಥೆಯನ್ನು ತಿವಿಯಲು ಈ ಬ್ಯಾನರ್ ನಿಂದ ನಿರ್ಮಾಣವಾದ ಎರಡು ಚಿತ್ರಗಳ ಹೆಸರನ್ನು ಉಪಯೋಗಿಸಿಕೊಂಡು, ಹೊಂಬಾಳೆ ಫಿಲ್ಮ್ಸ್ ನ ಅಶ್ವತ್ಥ್ ನಾರಾಯಣ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ʻಕಮಾಂಡೋʼ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಕೈಗೆ ಪೆಟ್ಟು

    ಈ ಕುರಿತು ಸರಣಿಯ ಟ್ವಿಟ್ ಮಾಡಿರುವ ಸಿದ್ಧರಾಮಯ್ಯ, ‘ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ, ಪಂಜುರ್ಲಿಯ ದಂತಕಥೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ ಅದನ್ನೇ ಮಾಡಬೇಕು’ ಎಂದು ಟ್ವಿಟ್ ಮಾಡಿದ್ದಾರೆ. ಈ ಟ್ವಿಟ್ ಭಾರೀ ವೈರಲ್ ಆಗಿದೆ. ಅಲ್ಲದೇ ಅನೇಕರು ಇದಕ್ಕೆ ಸ್ಪಂದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

    ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

    ಮಂಡ್ಯ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಚಿತ್ರ ಇಂದು ಮಧ್ಯರಾತ್ರಿ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಚಿತ್ರ ರಿಲೀಸ್‍ಗೂ ಮುನ್ನ ನಿರ್ಮಾಪಕ ವಿಜಯ್ ಕಿರಗಂದೂರು ತವರಿಗೆ ಕೆಜಿಎಫ್ ಟೀಂ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದುಕೊಂಡಿದೆ.

    ಹೊಂಬಾಳೆ ತವರು ಮಂಡ್ಯದ ಕಿರಗಂದೂರಿಗೆ ಮಂಗಳವಾರ ರಾತ್ರಿ ಚಿತ್ರತಂಡ ಭೇಟಿ ಕೊಟ್ಟಿದೆ. ಈ ವೇಳೆ ಟೀಂ ಹಿರಿಯರ ಆಶೀರ್ವಾದ ಪಡೆದುಕೊಂಡಿದೆ. ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ ಕಿರಗಂದೂರು ತವರಿನಲ್ಲಿ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗೆ ಕೋರಿದರು. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2

    ಶ್ರೀರಂಗಪಟ್ಟಣದ ನಿಮಿಷಾಂಬ ದೇವಾಲಯಕ್ಕೆ ಚಿತ್ರತಂಡ ತೆರಳಿ ಪೂಜೆ ಸಲ್ಲಿಸಿದೆ. ಹಿರಿಯರ ಮನೆಯಲ್ಲಿ ಕುಟುಂಬದವರೊಂದಿಗೆ ಬೆರೆತು ಕೆಲ ಹೊತ್ತು ಕಳೆದಿದೆ. ಅಲ್ಲದೆ ಹೊಂಬಾಳೆಗೆ ಸ್ಫೂರ್ತಿಯಾಗಿದ್ದ ಹಿರಿಯರು ಪೂರ್ವಜರ ಆಶೀರ್ವಾದವನ್ನು ಕೆಜಿಎಫ್ ಟೀಂ ಪಡೆದುಕೊಂಡಿದೆ. ಈ ವೇಳೆ ವಿಜಯ ಕಿರಗಂದೂರು ಅವರ ಹಿರಿಯ ಸಹೋದರ ಕಿರಗಂದೂರು ಮಂಜುನಾಥ್ ಚಿತ್ರತಂಡಕ್ಕೆ ಶುಭ ಕೋರಿದರು. ಇದನ್ನೂ ಓದಿ: ಯಶ್ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಡಿಮ್ಯಾಂಡ್: ರಾಕಿಭಾಯ್ ನಿರಂತರ ಪ್ರದರ್ಶನ

    ಇತ್ತೀಚೆಗಷ್ಟೇ ನಟ ಯಶ್ ಹಾಗೂ ವಿಜಯ್ ಕಿರಗಂದೂರು ಅವರು ಚಿತ್ರದ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದುಕೊಂಡಿದ್ದರು. ಅಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿ, ಚಿತ್ರದ ಬಗ್ಗೆ ಮಾಹಿತಿ ನೀಡಿದ್ದರು. ಹಾಗೂ ಖಾವಂದರ ಆಶೀರ್ವಾದ ಪಡೆದುಕೊಂಡು ಬಂದಿದ್ದರು. ಇದನ್ನೂ ಓದಿ: ವಿಶ್ವದಾದ್ಯಂತ ಕೆಜಿಎಫ್ ಅಬ್ಬರಕ್ಕೆ ಮೂರೇ ದಿನ ಬಾಕಿ -ನ್ಯೂಯಾರ್ಕ್‍ನ ಎಲ್‍ಇಡಿ ಸ್ಕ್ರೀನ್‍ನಲ್ಲಿ ಯಶ್ ಟ್ರೇಲರ್

  • ಜಗ್ಗೇಶ್ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್’

    ಜಗ್ಗೇಶ್ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್’

    ಸ್ಯಾಂಡಲ್‌ವುಡ್‌ನಲ್ಲಿ ಬಿಗ್ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡುವುದರಲ್ಲಿ ಖ್ಯಾತಿ ಪಡೆದಿರುವ ಹೊಂಬಾಳೆ ಫಿಲ್ಮ್ಸ್ ಈಗ ಮತ್ತೊಂದು ಚಿತ್ರಕ್ಕೆ ಚಾಲನೆ ಕೊಡಲು ಸಜ್ಜಾಗಿದೆ. ಇದು ಈ ಬ್ಯಾನರ್ ನ 12ನೇ ಸಿನಿಮಾವಾಗಿದೆ.

    ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರು ತಮ್ಮ ಬ್ಯಾನರ್ ನ 12ನೇ ಚಿತ್ರವನ್ನು ಇಂದು ಘೋಷಣೆ ಮಾಡಿದ್ದು, ಚಿತ್ರಕ್ಕೆ ರಾಘವೇಂದ್ರ ಸ್ಟೋರ್ ಎಂದು ಹೆಸರಿಟ್ಟಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನವಿದ್ದು, ನವರಸ ನಾಯಕ ಜಗ್ಗೇಶ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

    ಈ ಸಿನಿಮಾ ಫಸ್ಟ್ ಲುಕ್ ಹೊಂಬಾಳೆ ಫಿಲ್ಮ್ಸ್ ಕೂ ಹಾಗೂ ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ಗಮನಿಸಿದರೆ ಇದೊಂದು ಹೋಟೆಲ್ ಕುರಿತಾದ ಕಥೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದನ್ನೂ ಓದಿ: ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ

    ಸಾಲು ಸಾಲು ಚಿತ್ರ ಘೋಷಿಸಿರುವ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ಮೊದಲ ಚಿತ್ರ ‘ನಿನ್ನಿಂದಲೇ’. 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರ ತೆರೆಗೆ ಬಂದಿತ್ತು. ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಮಾಸ್ಟರ್‌ ಪೀಸ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು.

    2017ರಲ್ಲಿ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ‘ರಾಜಕುಮಾರ’ ಚಿತ್ರ ಸೂಪರ್ ಡ್ಯೂಪರ್ ಹಿಟ್ ಆಯ್ತು. ಕನ್ನಡ ಚಿತ್ರರಂಗದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ‘ರಾಜಕುಮಾರ’ ಚಿತ್ರವೂ ಒಂದು ಎನಿಸಿಕೊಂಡಿತು.

  • ಹೊಂಬಾಳೆ ಸಮೂಹದ ಎಲ್ಲ ಸಿಬ್ಬಂದಿ, ಕುಟುಂಬ ಸದಸ್ಯರಿಗೆ ಉಚಿತ ಕೋವಿಡ್‌ ಲಸಿಕೆ

    ಹೊಂಬಾಳೆ ಸಮೂಹದ ಎಲ್ಲ ಸಿಬ್ಬಂದಿ, ಕುಟುಂಬ ಸದಸ್ಯರಿಗೆ ಉಚಿತ ಕೋವಿಡ್‌ ಲಸಿಕೆ

    ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಣ ಹಾಗೂ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರತಿಷ್ಠಿತ ಹೊಂಬಾಳೆ ಸಮೂಹವು ತನ್ನ ಉದ್ಯೋಗಿಗಳು, ನೌಕರರು ಹಾಗೂ ಅವರ ಅವಲಂಬಿತ ಅಂದಾಜು ಐದು ಸಾವಿರ ಮಂದಿಗೆ ಉಚಿತವಾಗಿ ಕೋವಿಡ್‌ ಲಸಿಕೆ ಹಾಕಿಸಲು ನಿರ್ಧರಿಸಿದೆ.

    ತನ್ನೊಂದಿಗೆ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ಹೊಂಬಾಳೆ ಸಮೂಹವು ಎಲ್ಲರ ವ್ಯಾಕ್ಸಿನೇಶನ್‌ಗೆ ಆಗುವ ಪೂರ್ಣ ವೆಚ್ಚವನ್ನು ತಾನೇ ಭರಿಸಲಿದೆ.

    ಹೊಂಬಾಳೆ ಫಿಲ್ಮ್‌ ಬ್ಯಾನರ್‌ನಡಿ ಕೆಲಸ ಮಾಡುವ ಎಲ್ಲ ಸದಸ್ಯರು ಹಾಗೂ ಪೂರಕ ಸಿಬ್ಬಂದಿ ಹಾಗೂ ಅವರ ಅವಲಂಬಿತರೆಲ್ಲರಿಗೂ ವ್ಯಾಕ್ಸಿನ್‌ ನೀಡಲಾಗುವುದು. ಜತೆಗೆ ಹೊಂಬಾಳೆ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯ ಎಂದು ಹೊಂಬಾಳೆ ಸಮೂಹದ ಪ್ರಕಟಣೆ ತಿಳಿಸಿದೆ.

    ಕೇಂದ್ರ ಸರಕಾರ ಮಾರ್ಗಸೂಚಿಯಂತೆ ಮುಂದಿನ ಹಂತದಲ್ಲಿ ಅವರವರ ವಯೋಮಿತಿ ಆಧಾರದ ಮೇಲೆ ಕೋವಿಡ್‌ ವ್ಯಾಕ್ಸಿನ್‌ ಕೊಡಿಸಲಾಗುವುದು ಮತ್ತು ನಮ್ಮವರ ಆರೋಗ್ಯದ ಜತೆಗೆ ಅವರ ಕುಟುಂಬದ ಆರೋಗ್ಯವೂ ನಮಗೆ ಮುಖ್ಯವಾಗಿದೆ ಎಂದು ಸಂಸ್ಥೆ ಹೇಳಿದೆ.

    https://twitter.com/VKiragandur/status/1374705049268482050

  • ಏಪ್ರಿಲ್ 1ರಂದು ಪುನೀತ್ ಅಭಿನಯದ ‘ಯುವರತ್ನ’ ಚಿತ್ರ ರಿಲೀಸ್

    ಏಪ್ರಿಲ್ 1ರಂದು ಪುನೀತ್ ಅಭಿನಯದ ‘ಯುವರತ್ನ’ ಚಿತ್ರ ರಿಲೀಸ್

    ಬೆಂಗಳೂರು: ಹಾಡುಗಳಿಂದ ಭಾರೀ ಸದ್ದು ಮಾಡಿರುವ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಯುವರತ್ನ ಚಿತ್ರ ತೆರೆ ಮೇಲೆ ಬರಲು ಸಿದ್ಧವಾಗಿದೆ.

    ಹೌದು. ಏಪ್ರಿಲ್ ಒಂದರಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಕೊರೊನಾ ಲಾಕ್‍ಡೌನ್ ನಿಂದಾಗಿ ಲಾಕ್ ಆಗಿದ್ದ ಯುವರತ್ನ ಚಿತ್ರಕ್ಕೆ ಇದೀಗ ಬಿಡುಗಡೆ ಭಾಗ್ಯ ಬಂದಿರುವುದು ಪುನೀತ್ ಅಭಿಮಾನಿಗಳಲ್ಲಿ ಸಂತಸ ತಂದಿದೆ. 2018ರಲ್ಲಿ ಚಿತ್ರ ಸೆಟ್ಟೇರಿತ್ತು. ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ 2019ರ ಏಪ್ರಿಲ್ 24 ರಾಜ್‍ಕುಮಾರ್ ಹುಟ್ಟುಹಬ್ಬದಂದು ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸಿತ್ತು. ಆದರೆ ಮಹಾಮಾರಿ ಕೊರೊನಾದಿಂದಾಗಿ ರಿಲೀಸ್ ಡೇಟ್ ಮುಂದಕ್ಕೆ ಹೋಗಿತ್ತು.

    ಇದೀಗ ಚಿತ್ರತಂಡ ಬಾಕಿ ಉಳಿದಿದ್ದ 2 ಹಾಡುಗಳನ್ನು ಮುಗಿಸಿಕೊಂಡು ಪೋಸ್ಟ್ ಪ್ರೊಡೆಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಇದು ಮುಗಿದ ತಕ್ಷಣ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಪ್ರಚಾರವನ್ನು ಮುಗಿಸಿಕೊಂಡು ಏಪ್ರಿಲ್‍ನಲ್ಲಿ ಬಿಗ್‍ಸ್ಕ್ರೀನ್‍ನಲ್ಲಿ ತೋರಿಸಲು ಚಿತ್ರತಂಡ ತಯಾರಿ ಮಾಡುತ್ತಿದೆ.

    ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿರುವ ಸಂತೋಷ್ ಆನಂದರಾಮ್ ಕುತೂಹಲ ಮೂಡಿಸಿದ್ದಾರೆ. ಪುನೀತ್ ರಾಜ್‍ಕುಮಾರ್, ಧನಂಜಯ್, ಸಹೇಷಾ ಸೆಹ್ಗಲ್, ದಿಂಗತ್, ಸೋನು ಗೌಡ, ಮುಂತಾದ ಬಹು ತಾರಾ ಬಳಗವನ್ನು ಒಳಗೊಂಡಿದ್ದು, ಹೊಂಬಾಳೆ ಫೀಲ್ಮಂಸ್‍ ನಡಿ ನಿರ್ಮಾಣಗೊಂಡಿರುವುದು ಇನ್ನೊಂದು ವಿಶೇಷ.

  • ಅಧೀರಾನ ‘ಘರ್ಜನೆ’ಗೆ ಹೈಕೋರ್ಟ್‌ ಅನುಮತಿ

    ಅಧೀರಾನ ‘ಘರ್ಜನೆ’ಗೆ ಹೈಕೋರ್ಟ್‌ ಅನುಮತಿ

    ಬೆಂಗಳೂರು: ಬಾಲಿವುಡ್‌ ನಟ ಸಂಜಯ್‌ ದತ್‌ ನಟಿಸುತ್ತಿರುವ ಕೆಜಿಎಫ್‌-2 ಚಿತ್ರದ ಚಿತ್ರೀಕರಣಕ್ಕೆ ನೀಡಿರುವ ಅನುಮತಿಯನ್ನು ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌)ಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

    ಹುಬ್ಬಳ್ಳಿಯ ವಕೀಲ ಜಿ. ಶಿವಶಂಕರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು. ಈ ವೇಳೆ ಶಿಕ್ಷೆಗೊಳಗಾದವರು ನಟನೆ ಮಾಡಬಾರದು ಎಂದು ಯಾವ ಕಾನೂನಿನಲ್ಲಿ ಹೇಳಿದೆ? ಅರ್ಜಿದಾರರೊಬ್ಬರ ನಿಲುವೇ ಇಡೀ ಕರ್ನಾಟಕದ ಜನತೆಯ ನಿಲುವು ಎಂದು ಹೇಗೆ ಸಾಬೀತುಪಡಿಸುತ್ತೀರಿ ಎಂದು ಅರ್ಜಿದಾರರ ಪರ ವಕೀಲರನ್ನು ಕೋರ್ಟ್‌ ಪ್ರಶ್ನಿಸಿತು.

    ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ಸಿಗದ ಕಾರಣ ಈ ಅರ್ಜಿಗೆ ಕಾನೂನಾತ್ಮಕ ಆಧಾರವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.

    ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೆಜಿಎಫ್‌-2 ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಮತ್ತು ನಟ ಸಂಜಯ್‌ ದತ್‌ ಅವರನ್ನು ಪ್ರತಿವಾದಿ ಮಾಡಲಾಗಿತ್ತು.

    ಅರ್ಜಿಯಲ್ಲಿ ಏನಿತ್ತು?
    ಕೆಜಿಎಫ್‌-2 ಚಿತ್ರದಲ್ಲಿ ಟಾಡಾ ಅಪರಾಧಿಯಾದ ಬಾಲಿವುಡ್‌ ನಟ ಸಂಜಯ್‌ ದತ್‌ ನಟಿಸುತ್ತಿದ್ದಾರೆ. ಸಂಜಯ್‌ ದತ್‌ಗೆ 10 ವರ್ಷ ಜೈಲು ಶಿಕ್ಷೆಯಾಗಿತ್ತು. ಈ ವಿಚಾರ ತಿಳಿದಿದ್ದರೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಜಯ್‌ ದತ್‌ ನಟನೆಯ ಕೆಜಿಎಫ್‌-2 ಚಿತ್ರದ ಚಿತ್ರೀಕರಣಕ್ಕೆ ಹಾಗೂ ಬಿಡುಗಡೆಗೆ ಅನುಮತಿ ನೀಡಿದ್ದಾರೆ.

    ಜನರಿಂದ ಹೆಚ್ಚು ಹಣ ಗಳಿಸಬೇಕೆಂಬ ಉದ್ದೇಶದಿಂದ ಸಂಜಯ್‌ ದತ್‌ ಅವರನ್ನು ಹಾಕಿಕೊಂಡು ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಇದು ಜನತೆಯ ಘನತೆಗೆ ಧಕ್ಕೆಯಾಗಿದೆ. ಕೆಜಿಎಫ್‌-2 ಚಿತ್ರೀಕರಿಸಲು ಹೊಂಬಾಳೆ ಫಿಲಿಂಸ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು. ಈ ಅರ್ಜಿ ಇತ್ಯರ್ಥವಾಗುವರೆಗೂ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.