Tag: ಹೊಗೇನಕಲ್

  • ಹೊಗೇನಕಲ್‌ನ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡಲ್ಲ: ಸೋಮಣ್ಣ

    ಹೊಗೇನಕಲ್‌ನ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡಲ್ಲ: ಸೋಮಣ್ಣ

    ಚಾಮರಾಜನಗರ: ಹೊಗೇನಕಲ್‌ನಲ್ಲಿ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

    ಹೊಗೇನಕಲ್‌ನಲ್ಲಿ 400 ಎಕರೆ ವಿಸ್ತೀರ್ಣದ ನಡುಗುಡ್ಡೆಯನ್ನು ತಮಿಳುನಾಡು ಸರ್ಕಾರ ಅತಿಕ್ರಮಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದ ಸಣ್ಣ ಹಕ್ಕನ್ನು ಸಹ ಬೇರೆಯವರಿಗೆ ಬಿಟ್ಟು ಕೊಡಲ್ಲ, ನಮ್ಮ ಹಕ್ಕನ್ನು ನಾವು ಕಾಯ್ದುಕೊಳ್ಳುತ್ತೇವೆ. ನಮಗೆ ಆ ಶಕ್ತಿಯಿದೆ ಎಂದರು.

    Somanna

    ಜಂಟಿ ಸರ್ವೆ ಪುನಾರಾಂಭಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಯಾವ್ಯಾವ ಕಾಲಕ್ಕೇ ಏನಾಗಬೇಕೋ ಆ ರೀತಿಯೇ ಆಗುತ್ತದೆ. ಕರ್ನಾಟಕದ ಒಂದು ಇಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡಲ್ಲ. ನಮ್ಮ ನೆಲದಲ್ಲಿ ಇನ್ನೊಬ್ಬರು ಬಂದು ಸೇರಿಕೊಳ್ಳಲು ಅವಕಾಶ ಕೊಡಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನನ್ನ ವಿಜಯನಗರದ ಜನ ದುಃಖದಲ್ಲಿದ್ದಾರೆ: ಆನಂದ್ ಸಿಂಗ್

    ತಮಿಳುನಾಡು ಕೈಗೊಂಡಿರುವ ಹೊಗೇನಕಲ್ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ಕುಡಿದ ಮೇಲೆ ತಮಿಳುನಾಡಿನವರು ನೀರು ಕುಡಿಯುತ್ತಾರೆ ವಿನಾಃ ಅವರು ಕುಡಿದ ನೀರನ್ನು ನಾವು ಕುಡಿಯೋದಿಲ್ಲ, ಅವರ ಹಕ್ಕನ್ನು ಕಾಯ್ದುಕೊಳ್ಳೋದು ಅವರ ಕರ್ತವ್ಯ. ನಮ್ಮ ಹಕ್ಕನ್ನು ಕಾಯ್ದುಕೊಳ್ಳೋದು ನಮ್ಮ ಕರ್ತವ್ಯವಾಗಿದ್ದು, ನಮ್ಮ ಜನರಿಗೆ ಅನ್ಯಾಯ ಮಾಡಿಕೊಂಡು ಅವರಿಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಮಗೆ ಗೌರವ ಕೊಟ್ಟಿದ್ದಕ್ಕೆ ಜಾರಕಿಹೊಳಿಗೆ ಅಭಿನಂದನೆ: ಎಚ್‍ಡಿಕೆ

  • ಹೊಗೇನಕಲ್ ಜಲವೈಭವ ಡ್ರೋನ್ ಕ್ಯಾಮೆರಾದಲ್ಲಿ ಸೆರೆ

    ಹೊಗೇನಕಲ್ ಜಲವೈಭವ ಡ್ರೋನ್ ಕ್ಯಾಮೆರಾದಲ್ಲಿ ಸೆರೆ

    – ಜಮೀನುಗಳಿಗೆ ಕಾವೇರಿ ನೀರು ನುಗ್ಗಿ ಹಾನಿ

    ಚಾಮರಾಜನಗರ: ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಂದ ಒಂದೂವರೆ ಲಕ್ಷ ಕ್ಯೂಸೆಕ್‍ಗೂ ಹೆಚ್ಚು ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿ ಹೊಗೇನಕಲ್‍ನಲ್ಲಿ ಜಲವೈಭವವೇ ಸೃಷ್ಟಿಯಾಗಿದೆ. ಈ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ವಿಶಾಲವಾಗಿ ಹರಿಯುತ್ತಾ ಹೊಗೇನಕಲ್ ಬಳಿ ಭೋರ್ಗೆರೆದು ಹಾಲ್ನೊರೆಯಂತೆ ಧುಮ್ಮಿಕ್ಕುವ ದೃಶ್ಯ ವರ್ಣನಾತೀತವಾಗಿದೆ. ಕೊಡಗಿನಲ್ಲಿ ಹುಟ್ಟಿ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹರಿದು ಹೊಗೇನಕಲ್ ಬಳಿ ತಮಿಳುನಾಡಿಗೆ ಪ್ರವೇಶಿಸುವ ಕಾವೇರಿಯ ಸೊಬಗು ಈಗ ಇಮ್ಮಡಿಗೊಂಡಿದೆ. ಮಲೆಮಹದೇಶ್ವರ ಬೆಟ್ಟ ಅರಣ್ಯದಲ್ಲಿನ ಬೆಟ್ಟಗುಡ್ಡಗಳ ನಡುವೆ ಬಂಡೆಗಳನ್ನು ಸೀಳಿ ಹಾಲ್ನೊರೆಯಂತೆ ಧುಮ್ಮಿಕ್ಕುವ ದೃಶ್ಯವಂತೂ ರುದ್ರರಮಣೀಯವಾಗಿದೆ.

    ಇತ್ತ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನದಿಪಾತ್ರದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಗೀಡಾಗಿದೆ. ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರ, ಮುಳ್ಳೂರು, ಹಳೇ ಅಣಗಳ್ಳಿ, ದಾಸನಪುರ ಗ್ರಾಮಗಳಲ್ಲಿ ಕಬ್ಬು ಭತ್ತ, ಬಾಳೆ ಬೆಳೆ ಸೇರಿದಂತೆ ನೂರಾರು ಎಕರೆ ಬೆಳೆ ಹಾನಿಗೀಡಾಗಿದೆ.

    ಭತ್ತದ ಸಸಿ ಸಂಪೂರ್ಣ ನಾಶವಾಗಿವೆ, ಹತ್ತಾರು ಪಂಪ್ ಸೆಟ್‍ಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಸರ್ಕಾರ ಕಳೆದ ವರ್ಷದ ಬೆಳೆ ಹಾನಿ ಪರಿಹಾರವನ್ನೇ ಸರಿಯಾಗಿ ನೀಡಿಲ್ಲ. ಈ ವರ್ಷ ಪ್ರವಾಹದಿಂದ ನಮ್ಮ ಬೆಳೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.