Tag: ಹೊಟ್ಟೆ ನೋವು

  • ಹೊಟ್ಟೆ ನೋವು ತಾಳಲಾರದೇ 15ರ ಬಾಲಕಿ ಆತ್ಮಹತ್ಯೆಗೆ ಶರಣು

    ಹೊಟ್ಟೆ ನೋವು ತಾಳಲಾರದೇ 15ರ ಬಾಲಕಿ ಆತ್ಮಹತ್ಯೆಗೆ ಶರಣು

    ಹುಬ್ಬಳ್ಳಿ: ಹೊಟ್ಟೆ ನೋವು ತಾಳಲಾರದೇ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ.

    ಕುಸಗಲ್ ಗ್ರಾಮದ ಶೈಲಾ ಗುರುಸಿದ್ದಪ್ಪ ಇಮಾಪುರ (15) ಹೊಟ್ಟೆ ನೋವು ತಾಳಲಾರದೇ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈ ಹಿಂದಿನಿಂದಲೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶೈಲಾ, ಶನಿವಾರ ರಾತ್ರಿ ನೋವು ತಾಳಲಾರದೇ ಮನೆಯಲ್ಲಿ ವಿಷಕಾರಕ ಪದಾರ್ಥ ಸೇವಿಸಿದ್ದಾಳೆ. ಇದನ್ನೂ ಓದಿ: ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿರೋಧ

    ನಂತರ ತೀವ್ರವಾಗಿ ಅಸ್ವಸ್ಥಗೊಂಡ ಬಾಲಕಿಯನ್ನು ಕಿಮ್ಸ್ (Kims) ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಶೈಲಾ ಸಾವಿನಪ್ಪಿದ್ದಾಳೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವತಿಯೊಂದಿಗೆ ಸಲುಗೆಯಿಂದ ಮಾತಾಡಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ ಹಲ್ಲೆ

    Live Tv
    [brid partner=56869869 player=32851 video=960834 autoplay=true]

  • ಹೊಟ್ಟೆ ನೋವು ತಾಳಲಾರದೇ ಯುವಕ ಆತ್ಮಹತ್ಯೆ

    ಹೊಟ್ಟೆ ನೋವು ತಾಳಲಾರದೇ ಯುವಕ ಆತ್ಮಹತ್ಯೆ

    ತುಮಕೂರು: ಹೊಟ್ಟೆ ನೋವು ತಾಳಲಾರದೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೊಡಬಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹೃತಿಕ್ ನಾಯಕ್ (19) ಎಂದು ಗುರುತಿಸಲಾಗಿದೆ. ಯುವಕ ಹೆಚ್ಚು ಮದ್ಯಸೇವನೆಯಿಂದ ಪದೇ ಪದೇ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಆದರೆ ಇಂದು ಹೊಟ್ಟೆ ನೋವು ತಾಳಲಾರದೆ ಮನನೊಂದು ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಈ ಸಂಬಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೊಳೆಗೆ ಕಾರು ಉರುಳಿದ ಪ್ರಕರಣಕ್ಕೆ ಟ್ವಿಸ್ಟ್- ಆಕ್ಸಿಡೆಂಟ್ ಆಗೋ 4 ನಿಮಿಷ ಮೊದಲೇ ಕರೆ ಮಾಡಿದ್ದ ಯುವಕರು..!

    ಇದೇ ರೀತಿ ಇತ್ತೀಚೆಗಷ್ಟೇ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಂಜಿತಾ (30) ಅವರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿತ್ತು. ಈ ಬಗ್ಗೆ ಪತಿ ವೆಂಕಟೇಶ್ ಕುಣಿಗಲ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಾರ್‌ನಲ್ಲಿ ಗುಂಡಿನ ದಾಳಿ- 15 ಮಂದಿ ಸ್ಥಳದಲ್ಲೇ ಸಾವು

    Live Tv
    [brid partner=56869869 player=32851 video=960834 autoplay=true]

  • ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ

    ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ

    ಶಿವಮೊಗ್ಗ: ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ನಡೆದಿದೆ.

    ಮೃತ ಯುವತಿಯನ್ನು ಚಂದ್ರಗುತ್ತಿ ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಎಂದು ಗುರುತಿಸಲಾಗಿದೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸುಚಿತ್ರಾರಿಗೆ ಕೆಲವು ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.

    ಪೋಷಕರು ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಸುಚಿತ್ರಾಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದೇ ಇರುವುದರಿಂದ ಹೊಟ್ಟೆನೋವು ತಾಳಲಾರದೇ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಸದ್ಯ ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದು. ಪೊಲೀಸರು ಘಟನೆ ಕುರಿತಂತೆ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ:ಜಮೀನಿನಲ್ಲಿದ್ದ ರೈತನನ್ನು ಬಲಿ ತೆಗೆದುಕೊಂಡ ಕಾಡು ಪ್ರಾಣಿ

  • ಹೊಟ್ಟೆ ನೋವು ತಾಳಲಾರದೇ ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ರೋಗಿ

    ಹೊಟ್ಟೆ ನೋವು ತಾಳಲಾರದೇ ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ರೋಗಿ

    ಕೋಲಾರ: ರೋಗಿಯೊಬ್ಬ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನೋವು ತಾಳಲಾರದೇ ಆಸ್ಪತ್ರೆಯಲ್ಲಿಯೇ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ನಡೆದಿದೆ.

    ಕೋಲಾರದ ಚಿನ್ನಾಪುರ ಗ್ರಾಮದ ಮಂಜುನಾಥ್ (38) ಆತ್ಯಹತ್ಯೆಗೆ ಶರಣಾದ ವ್ಯಕ್ತಿ. ಮಂಜುನಾಥ್ ಹಲುವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

    ಆಸ್ಪತ್ರೆಯಲ್ಲಿ ಮಂಜುನಾಥ್‍ಗೆ ಇಂಜೆಕ್ಷನ್ ಕೊಟ್ಟ ವೇಳೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ನೋವು ತಾಳಲಾರದೇ ಆಸ್ಪತ್ರೆಯ ಬಾತ್ ರೂಂ ನಲ್ಲಿ ಗ್ಯಾಸ್ ಪೈಪ್ ಬಳಸಿಕೊಂಡು ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಘಟನೆ ಕುರಿತು ಕೋಲಾರದ ಗಲ್‍ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಋತುಚಕ್ರದ ಹೊಟ್ಟೆ ನೋವಿಗೆ ಇಲ್ಲಿದೆ ಮನೆ ಮದ್ದು

    ಋತುಚಕ್ರದ ಹೊಟ್ಟೆ ನೋವಿಗೆ ಇಲ್ಲಿದೆ ಮನೆ ಮದ್ದು

    ಋತುಚಕ್ರದ ಸಮಯದಲ್ಲಿ ಹೆಣ್ಣು ಮಕ್ಕಳು ಸಾಮಾನ್ಯವಾಗಿ ಹೊಟ್ಟೆನೋವಿನಿಂದ ಬಳಲುತ್ತಾರೆ. ಈ ಸಮಯದಲ್ಲಿ ಕೆಳಹೊಟ್ಟೆಯಲ್ಲಿ ವಿಪರೀತವಾಗಿ ನೋವು ಕಾಣಿಸಿಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಕೆಲವರು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಮಾತ್ರೆ ಸೇವಿಸುವುದರಿಂದ ಪೂರ್ಣವಾಗಿ ಹೊಟ್ಟೆ ನೋವು ಕಡಿಮೆಯಾಗಲ್ಲ ಬದಲಾಗಿ ಅನಾರೋಗ್ಯಕ್ಕೀಡಾಗುವ ಸಾಧ್ಯತೆಗಳು ಹೆಚ್ಚಿದೆ. ಆದ್ದರಿಂದ ಋತುಚಕ್ರದ ವೇಳೆ ಹೊಟ್ಟೆನೋವು ಕಡಿಮೆ ಮಾಡಲು ಮನೆಯಲ್ಲಿಯೇ ತಯಾರಿಸಬಹುದಾದ ಕೆಲವೊಂದು ಟಿಪ್ಸ್ ಗಳು ಇಲ್ಲಿವೆ.

    * ಒಂದು ಲೋಟ ಬಿಸಿ ನೀರಿಗೆ ಅರ್ಧ ನಿಂಬೆ ರಸವನ್ನು ಹಿಂಡಿ. ಬಳಿಕ ಅದನ್ನು ಚೆನ್ನಾಗಿ ಮಿಕ್ಸ್ ಮಾಡಿ ಕುಡಿದರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ.

    * ತುಂಬಾ ಹೊಟ್ಟೆ ಇದ್ದರೆ ಎಳನೀರಿಗೆ ಗ್ಲೂಕೋಸ್ ಹಾಕಿ, ಮಿಕ್ಸ್ ಮಾಡಿ ಕುಡಿದರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ ಜೊತೆಗೆ ಸುಸ್ತು ಕಡಿಮೆಯಾಗುತ್ತದೆ.

    * ಎರಡು ಮೂರು ಪುದೀನಾ ಎಲೆಗಳನ್ನು ಹಾಕಿ ಒಂದು ಕಪ್ ಟೀ ಮಾಡಿ ಕುಡಿದರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ.

    * ಹಸಿ ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿದರೂ ಒಳ್ಳೆಯದು.


    * ಒಂದು ಲೋಟ ನೀರಿಗೆ ಕೆಲವು ಪುದೀನಾ ಎಲೆಗಳನ್ನು ಹಾಕಿ ಕೆಲವು ಹೊತ್ತು ಕುದಿಸಿರಿ, ಬಳಿಕ ಆ ನೀರನ್ನು ಕುಡಿಯಿರಿ. ಋತುಚಕ್ರದ ವೇಳೆ ಹೊಟ್ಟೆನೋವಿಗೆ ಇದು ಕೂಡ ಉತ್ತಮ ಪರಿಹಾರವಾಗಿದೆ.

    * ಒಂದು ಚಮಚ ಅಲೋವೆರಾ ರಸಕ್ಕೆ ಒಂದು ಟೀಸ್ಪೂನ್ ಜೇನುತುಪ್ಪವನ್ನು ಮಿಕ್ಸ್ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸುವುದರಿಂದ ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ.

    * ಇಂತಹ ಸಮಯದಲ್ಲಿ ತುಳಸಿ ಎಲೆಯನ್ನು ಸೇವಿಸುವುದು ಉತ್ತಮ.

    * ಒಂದು ಲೋಟ ನೀರಿಗೆ ಜೀರಿಗೆಯನ್ನು ಹಾಕಿ ಕುದಿಸಿ ಕುಡಿಯುವುದರಿಂದ ಮುಟ್ಟಿನ ನೋವು ಸಹಜವಾಗಿ ಕಡಿಮೆಯಾಗುತ್ತದೆ.

    * ಋತುಚಕ್ರದ ಸಮಯದಲ್ಲಿ ಅಧಿಕವಾಗಿ ಹಣ್ಣುಗಳನ್ನು ತಿನ್ನುವುದು ಒಳ್ಳೆಯದು. ಅದರಲ್ಲೂ ಪಪ್ಪಾಯ ತಿಂದರೆ ನೋವು ಬೇಗ ಕಡಿಮೆಯಾಗುತ್ತದೆ.

    * ಒಂದು ಲೋಟ ಮಜ್ಜಿಗೆಗೆ ಸ್ವಲ್ಪ ಮೆಂತ್ಯೆ ಬೆರೆಸಿ ನೆನೆಹಾಕಿ ಕುಡಿದರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ.

    * ಒಂದು ಲೋಟ ಕ್ಯಾರೇಟ್ ಜ್ಯೂಸ್ ಕುಡಿದರೆ ಇಂತಹ ಸಮಯದಲ್ಲಿ ನೋವು ನಿವಾರಣೆಯಾಗುತ್ತದೆ.

    * ಒಂದು ಇಂಚು ಹಸಿ ಶುಂಠಿಯ ಸಿಪ್ಪೆ ತೆಗೆದು ಬಳಿಕ ಅದನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಸಣ್ಣ ಉರಿಯಲ್ಲಿ 10 ನಿಮಿಷ ಕುದಿಸಿರಿ. ಬಳಿಕ ಆ ನೀರನ್ನು ಸೋಸಿ, ಬಿಸಿಬಿಸಿಯಿರುವಾಗಲೇ ಕುಡಿಯಿರಿ. ಹೀಗೆ ಮಾಡಿ ದಿನಕ್ಕೆ ಎರಡು ಬಾರಿ ಕುಡಿದರೆ ನೋವು ಕಡಿಮೆಯಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಂಬುಲೆನ್ಸ್ ಬಾರದೇ ರೈಲ್ವೇ ನಿಲ್ದಾಣದಲ್ಲಿ ಹೊಟ್ಟೆನೋವಿನಿಂದ ನರಳಾಡಿದ ಬಾಣಂತಿ

    ಆಂಬುಲೆನ್ಸ್ ಬಾರದೇ ರೈಲ್ವೇ ನಿಲ್ದಾಣದಲ್ಲಿ ಹೊಟ್ಟೆನೋವಿನಿಂದ ನರಳಾಡಿದ ಬಾಣಂತಿ

    ಯಾದಗಿರಿ: ಬಾಣಂತಿ ಮಹಿಳೆ ಹೊಟ್ಟೆ ನೋವಿನಿಂದ ಒಂದು ಗಂಟೆಕ್ಕೂ ಹೆಚ್ಚು ಕಾಲ ನರಳಾಡಿದ ಘಟನೆ ಯಾದಗಿರಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

    108 ಆಂಬುಲೆನ್ಸ್ ಗೆ ಕರೆ ಮಾಡಿದರೂ ಸಕಾಲಕ್ಕೆ ಆಗಮಿಸದ ಕಾರಣ ಬಾಣಂತಿಗೆ ತೀವ್ರವಾಗಿ ರಕ್ತಸ್ರಾವವಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹುಲಕಲ್ ಮೂಲದ ಶಾಂತಮ್ಮ ಎಂಬವರು ಸೋಮವಾರ ಬೆಳಗ್ಗೆ ತೆಲಂಗಾಣದ ಕೃಷ್ಣಾದಲ್ಲಿ ಗಂಡು ಮಗುವಿಗೆ ಜನ್ಮ ನೀಡಿ ನಂತರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

    ಆದರೆ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದ ಕಾರಣ ಬಾಣಂತಿ, ಮಗು ಸಮೇತ ಯಾದಗಿರಿಗೆ ರೈಲ್ವೇ ಮೂಲಕ ಆಗಮಿಸುತ್ತಿರುವಾಗ ತೀವ್ರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಶಾಂತಮ್ಮ ಯಾದಗಿರಿ ರೈಲ್ವೇ ನಿಲ್ದಾಣದಲ್ಲಿ ಹೊಟ್ಟೆ ನೋವಿನಿಂದ ನರಳಾಡಿದ್ದಾರೆ.

    ರೈಲ್ವೇ ಪೊಲೀಸರು ಹಾಗೂ ಸ್ಥಳೀಯ ಜನರು ವ್ಹೀಲ್ ಚೇರ್ ಹಾಗೂ ಸ್ಟ್ರೇಚರ್ ಮೂಲಕ ರಕ್ಷಿಸಿದರು. ಇಷ್ಟೆಲ್ಲ ನಡೆದ ಬಳಿಕ ಆಗಮಿಸಿದ 108  ಆಂಬುಲೆನ್ಸ್ ಬಂದಿದೆ. ಸದ್ಯ ತಾಯಿ ಮಗು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯವಾಗಿದ್ದಾರೆ.