Tag: ಹೊಟ್ಟೆ ನೋವು ನವದೆಹಲಿ

  • ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

    ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಹೊಟ್ಟೆ ನೋವಿನ ಹಿನ್ನೆಲೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

    ಭಗವಂತ್ ಮಾನ್ ಅವರು ಅಸ್ವಸ್ಥಗೊಂಡ ಹಿನ್ನೆಲೆ ದೆಹಲಿಯ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮುಖ್ಯಮಂತ್ರಿಯವರಿಗೆ ಹೊಟ್ಟೆನೋವಿನ ತಪಾಸಣೆ ನಡೆಸಲಾಗಿದ್ದು, ಅವರಿಗೆ ಇನ್‍ಫೆಕ್ಷನ್ ಆಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ಟೋಲ್‍ನಲ್ಲಿ ಹಸು ಮಲಗಿದ್ದೇ ಅಪಘಾತಕ್ಕೆ ಕಾರಣ – ಅಂಬುಲೆನ್ಸ್ ಚಾಲಕನ

    ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕ್ರಿಮಿನಲ್‍ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಗ್ಯಾಂಗ್‍ಸ್ಟರ್‌ಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಭಗವಂತ್ ಮಾನ್ ಅಭಿನಂದನೆ ಸಲ್ಲಿಸಿದ್ದರು. ಇದನ್ನೂ ಓದಿ: ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ಸಾಹಿತಿ ಜಿ. ರಾಜಶೇಖರ್ ವಿಧಿವಶ