Tag: ಹೊಡೆತ

  • ನಟಿ ಶ್ರೀಲೀಲಾಗೆ ಕೆನ್ನೆಗೆ ಬಾರಿಸಿದ ಬಾಲಯ್ಯ: ಏನಿದು ಗುಸು ಗುಸು?

    ನಟಿ ಶ್ರೀಲೀಲಾಗೆ ಕೆನ್ನೆಗೆ ಬಾರಿಸಿದ ಬಾಲಯ್ಯ: ಏನಿದು ಗುಸು ಗುಸು?

    ತೆಲುಗಿನ (Telugu) ಖ್ಯಾತ ನಟ ಬಾಲಯ್ಯ ನಟನೆಯ ಹೊಸ ಸಿನಿಮಾದಲ್ಲಿ ಕನ್ನಡತಿ ಶ್ರೀಲೀಲಾ (Srileela) ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲೂ ಅವರು ಪಾಲ್ಗೊಂಡಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಶ್ರೀಲೀಲಾಗೆ ಬಾಲಯ್ಯ ಕೆನ್ನೆಗೆ ಬಾರಿಸಿದರು ಎನ್ನುವ ಸುದ್ದಿ ಸಖತ್ ಚರ್ಚೆಗೆ ಕಾರಣವಾಗಿದೆ.

    ಬಾಲಯ್ಯ (Balayya) ಸಖತ್ ಕೋಪಿಷ್ಠ ಎನ್ನುವುದು ಪದೇ ಪದೇ ಸಾಬೀತಾಗಿದೆ. ಚಿತ್ರೀಕರಣದ ಸ್ಥಳದಲ್ಲಿ ಬಾಲಯ್ಯ ಯಾವತ್ತಿಗೂ ಗರಂ ಆಗಿರುತ್ತಾರೆ ಎನ್ನುವುದು ಹಲವು ಘಟನೆಗಳು ನೆನಪಿಸುತ್ತವೆ. ಆದರೆ, ಅವರು ಈವರೆಗೂ ನಟಿಯರ ಮೇಲೆ ಕೈ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ನಟಿಯೊಬ್ಬರ ಮೇಲೆ ಬಾಲಯ್ಯ ಕೈ ಮಾಡಿದ್ದಾರೆ ಎನ್ನುವುದು ಹಾಟ್ ಟಾಪಿಕ್. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್‌ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ

    ಶೂಟಿಂಗ್ ಸ್ಥಳದಲ್ಲಿ ಇದ್ದವರ ಮಾಹಿತಿ ಪ್ರಕಾರ, ಅದು ಕೋಪದಿಂದ ಹೊಡೆದ ಘಟನೆಯಲ್ಲವಂತೆ. ಅಂಥದ್ದೊಂದು ದೃಶ್ಯ ಸಿನಿಮಾದಲ್ಲಿತ್ತು ಎಂದು ಹೇಳಲಾಗುತ್ತಿದೆ. ಬಾಲಯ್ಯ ಕುಟುಂಬದ ಸೊಸೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸೊಸೆಯನ್ನು ಹೊಡೆಯುವಂತಹ ಸನ್ನಿವೇಶ ಅದಾಗಿತ್ತು ಎಂದು ಹೇಳಲಾಗುತ್ತಿದೆ.

    ಅಷ್ಟಕ್ಕೂ ಶ್ರೀಲೀಲಾ ಅವರೇ ದೃಶ್ಯ ನೈಜವಾಗಿ ಬರಲಿ ಎನ್ನುವ ಕಾರಣಕ್ಕಾಗಿ ಜೋರಾಗಿ ಕೆನ್ನೆಗೆ ಬಾರಿಸಿ ಎಂದು ಬಾಲಯ್ಯನವರನ್ನು ಕೇಳಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಇದರಲ್ಲಿ ಯಾವುದು ನಿಜವೋ ಯಾವುದು ಸುಳ್ಳು ಎನ್ನುವುದನ್ನು ಅವರೇ ಸ್ಪಷ್ಟ ಪಡಿಸಬೇಕು.

  • ಬೆಂಗಳೂರಿನಲ್ಲಿ ರಣವೀರ್ ಸಿಂಗ್ ಗೆ ಕಪಾಳಮೋಕ್ಷ: ವೈರಲ್ ಆದ ವಿಡಿಯೋ ಅಸಲಿಯತ್ತೇನು?

    ಬೆಂಗಳೂರಿನಲ್ಲಿ ರಣವೀರ್ ಸಿಂಗ್ ಗೆ ಕಪಾಳಮೋಕ್ಷ: ವೈರಲ್ ಆದ ವಿಡಿಯೋ ಅಸಲಿಯತ್ತೇನು?

    ನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ (Bangalore) ನಡೆದ ಸೈಮಾ (SIIMA) ಪ್ರಶಸ್ತಿ (Award) ಪ್ರದಾನ ಸಮಾರಂಭದಲ್ಲಿ ಬಾಲಿವುಡ್ ಖ್ಯಾತ ನಟ, ಬೆಂಗಳೂರಿನ ಅಳಿಯ ರಣವೀರ್ ಸಿಂಗ್ ಕೂಡ ಭಾಗಿಯಾಗಿದ್ದರು. ಅವರು ಕಾರ್ಯಕ್ರಮದ ಮುಖ್ಯ ನಿರೂಪಕರಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಚಾತುರ್ಯವೊಂದು ನಡೆದು ಹೋಗಿದೆ. ರಣವೀರ್ ಸಿಂಗ್ ಅವರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ಆ ವಿಡಿಯೋ ವೈರಲ್ ಕೂಡ ಆಗಿದೆ.

    ಅಭಿಮಾನಿಯೊಬ್ಬ ಸೆಲ್ಫಿಗಾಗಿ ರಣವೀರ್ ಸಿಂಗ್ (Ranveer Singh) ದುಂಬಾಲು ಬೀಳುತ್ತಾನೆ. ರಣವೀರ್ ಸೆಲ್ಫಿ ಕೊಡಲು ನಿರಾಕರಿಸುತ್ತಾರೆ. ಆಗ ರಣವೀರ್ ಸಿಂಗ್ ಗೆ ಕಪಾಳಮೋಕ್ಷ ಮಾಡುವಂತಹ ಸನ್ನಿವೇಶ ಎದುರಾಗುತ್ತದೆ. ವ್ಯಕ್ತಿಯು ರಣವೀರ್ ಗೆ ಕಪಾಳಕ್ಕೆ ಏಟು ಕೊಡುತ್ತಾನೆ.  ಈ ಘಟನೆ ಗುಂಪಿನ ಮಧ್ಯ ನಡೆದಿದ್ದರಿಂದ ಕೆಲವರು  ಅಚ್ಚರಿ ವ್ಯಕ್ತ ಪಡಿಸುತ್ತಾರೆ. ಇನ್ನೂ ಕೆಲವರು ನೋಡಿಯೋ ನೋಡದಂತೆ ಉಳಿದು ಬಿಡುತ್ತಾರೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಮೂಲಗಳ ಪ್ರಕಾರ ರಣವೀರ್ ಸಿಂಗ್ ಕಪಾಳಕ್ಕೆ ಹೊಡೆದ್ದು ಬಾಡಿಗಾರ್ಡ್ ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದು ಉದ್ದೇಶ ಪೂರ್ವಕವಾಗಿ ನಡೆದ ಘಟನೆಯ‍ಲ್ಲ, ಆಕಸ್ಮಿಕವಾಗಿ ಹಾಗೆ ಆಗಿದೆ ಎನ್ನುವ ಮಾತಿದೆ. ರಣವೀರ್ ಸಿಂಗ್ ಕಪಾಳ ಮುಟ್ಟುವಷ್ಟು ಧೈರ್ಯ ಯಾರಿಗಿದೆ? ಹಾಗಾಗಿ ಏನೋ ಮಾಡಲು ಹೋಗಿ, ಇನ್ನೇನೋ ಆಗಿದೆ. ಹಾಗಾಗಿ ರಣವೀರ್ ಸುಮ್ಮನೆ ಆಗಿದ್ದಾರಂತೆ. ಸೈಮಾ ಅವಾರ್ಡ್ ಕಾರ್ಯಕ್ರಮಕ್ಕೆ ಶುರುವಾಗುವ ಮುನ್ನವೇ ಈ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಅಲ್ಲದೇ, ಹೊಡದವ ರಣವೀರ್ ಅಭಿಮಾನಿ ಅಂತಾನೂ ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಶೂಟಿಂಗ್ ವೇಳೆ ಶಕೀಲಾ ಕೆನ್ನೆಗೆ ಹೊಡೆದಿದ್ದ ಸಿಲ್ಕ್ ಸ್ಮಿತಾ

    ಶೂಟಿಂಗ್ ವೇಳೆ ಶಕೀಲಾ ಕೆನ್ನೆಗೆ ಹೊಡೆದಿದ್ದ ಸಿಲ್ಕ್ ಸ್ಮಿತಾ

    ಬೆಂಗಳೂರು: ಶೂಟಿಂಗ್ ವೇಳೆ ಸಿಲ್ಕ್ ಸ್ಮಿತಾ ಅವರು ನನ್ನ ಕೆನ್ನೆಗೆ ಹೊಡೆದಿದ್ದರು ಎಂದು ಮಾದಕ ನಟಿ ಶಕೀಲಾ ಹೇಳಿದ್ದಾರೆ.

    90 ದಶಕದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಮಾದಕ ನಟಿಯರಾದ ಸಿಲ್ಕ್ ಸ್ಮಿತಾ ಮತ್ತು ಶಕೀಲಾ ತನ್ನದೇ ಅದ ಅಭಿಮಾನಿ ಬಳಗವನ್ನು ಇಬ್ಬರು ಹೊಂದಿದ್ದರು. ಆದರೆ ಈ ಇಬ್ಬರು ನಟಿಯರಿಗೆ ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ ಎಂದು ಸ್ವತಃ ಶಕೀಲಾ ಅವರೇ ಹೇಳಿಕೊಂಡಿದ್ದರು.

    ಜೊತೆಗೆ ಸಿಲ್ಕ್ ಸ್ಮಿತಾ ಬಗ್ಗೆ ಮಾತನಾಡುವಾಗ ಅವರಿಬ್ಬರ ಮಧ್ಯೆ ನಡೆದ ಒಂದು ಪ್ರಸಂಗವನ್ನು ಕೂಡ ಶಕೀಲಾ ನೆನಪಿಸಿಕೊಂಡಿದ್ದಾರೆ. ಆಗ ನಾನು ಇನ್ನೂ ಸಿನಿಮಾ ರಂಗಕ್ಕೆ ಹೊಸಬಳು. ಆದರೆ ಸಿಲ್ಕ್ ಸ್ಮಿತಾ ಆಗಾಲೇ ಸಿನಿಮಾರಂಗದಲ್ಲಿ ಬಹಳ ಹೆಸರು ಮಾಡಿದ್ದರು. ಹೀಗಿರುವಾಗ ನಾವಿಬ್ಬರು ಒಂದೇ ಸಿನಿಮಾದಲ್ಲಿ ನಟಿಸಿದ್ದೆವು. ಆಗ ಒಂದು ದೃಶ್ಯದ ಚಿತ್ರೀಕರಣದ ಬಗ್ಗೆ ರಿಹರ್ಸಲ್ ಮಾಡೋಣ ಬನ್ನಿ ಎಂದು ನಾನು ಅವರನ್ನು ಕರೆದಿದ್ದೆ. ಆದರೆ ಅವರು ಬರಲಿಲ್ಲ ಎಂದು ಶಕೀಲಾ ಹೇಳಿದ್ದಾರೆ.

    ಆ ದೃಶ್ಯದಲ್ಲಿ ನನಗೆ ಸಿಲ್ಕ್ ಸ್ಮಿತಾ ಹೊಡೆಯಬೇಕಿತ್ತು. ನಾನು ರಿಹರ್ಸಲ್ ಮಾಡೋಣವೆಂದರೂ ಬೇಡವೆಂದು ಸಿಲ್ಕ್ ಸ್ಮಿತಾ ಶೂಟಿಂಗ್ ಟೈಮ್‍ನಲ್ಲಿ ನಿಜವಾಗಿಯೇ ನನ್ನ ಕೆನ್ನೆಗೆ ಜೋರಾಗಿ ಭಾರಿಸಿದ್ದರು. ಅಂದು ಅವರು ಹೊಡೆದ ರಭಸಕ್ಕೆ ನನ್ನ ಕೆನ್ನೆ ಊದಿತ್ತು. ನಾನು ಶೂಟಿಂಗ್ ಸೆಟ್‍ನಿಂದ ಅಳುತ್ತಲೇ ಮನೆಗೆ ಹೋಗಿದ್ದೆ. ನಂತರ ಎರಡು ದಿನ ಶೂಟಿಂಗ್‍ಗೆ ಬಂದಿರಲಿಲ್ಲ. ಬಳಿಕ ನಿರ್ಮಾಪಕರು ಬಂದು ಸಮಾಧಾನ ಮಾಡಿ ಕರೆದುಕೊಂಡು ಬಂದರು ಎಂದು ಶಕೀಲಾ ತಿಳಿಸಿದ್ದಾರೆ.

    ಇದಾದ ನಂತರ ನಾನು ಅವರನ್ನು ಮಾತನಾಡಿಸಲು ಹೋಗಲಿಲ್ಲ. ಅವರು ಇದ್ದ ಕಡೆ ನಾನು ಹೋಗುತ್ತಿರಲಿಲ್ಲ. ಸಿಲ್ಕ್ ಸ್ಮಿತಾ ಅವರು ನಾನು ಅವರ ಜಾಗವನ್ನು ಕಿತ್ತುಕೊಳ್ಳುತ್ತೇನೆ ಎಂಬ ಭಯದಿಂದಲೇ ಹೊಡೆದರು ಎಂದು ಶಕೀಲಾ ತಿಳಿಸಿದ್ದಾರೆ. ಇದಾದ ನಂತರ ಸಿಲ್ಕ್ ಸ್ಮಿತಾ ಅವರೇ ಶಕೀಲಾ ಅವರ ಬಳಿ ಬಂದು ಅಂದು ಹೊಡೆದಿದ್ದಕ್ಕೆ ಕ್ಷಮೆ ಕೇಳಿದ್ದರಂತೆ. ಚಾಕೋಲೆಟ್ ಬಾಕ್ಸ್ ನೀಡಿ ಸ್ವಾರಿ ಎಂದು ಸ್ಮಿತಾ ಹೇಳಿದ್ದರಂತೆ.

    1979ರಲ್ಲಿ ಸಿನಿಮಾಗೆ ಎಂಟ್ರಿಕೊಟ್ಟ ಸಿಲ್ಕ್ ಸ್ಮಿತಾ ನಂತರ ಕನ್ನಡ, ತೆಲುಗು ಮತ್ತು ತಮಿಳು ಚಿತ್ರರಂಗ ಸೇರಿದಂತೆ ಸೌತ್‍ಸಿನಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಬಿ ಗ್ರೇಡ್ ಸಿನಿಮಾ ಐಟಂ ಹಾಡಿನಲ್ಲಿ ಹೆಜ್ಜೆ ಹಾಕುತ್ತಿದ್ದ ಸ್ಮಿತಾ, ಅಂದಿನ ಕಾಲದಲ್ಲೇ ಬಹಳ ಬೇಡಿಕೆಯ ನಟಿ ಆಗಿದ್ದರು. ಜೊತೆಗೆ ಬಾಲಿವುಡ್‍ನಲ್ಲೂ ನಟಿಸಿದ್ದ ಸ್ಮಿತಾ 1996ರಲ್ಲಿ ತನ್ನ ಚೆನ್ನೈ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು.

    ಆಂಧ್ರಪ್ರದೇಶ ನೆಲ್ಲೂರಿನಲ್ಲಿ ಜನಿಸಿದ ಶಕೀಲಾ ತನ್ನ 18ನೇ ವಯಸ್ಸಿನಲ್ಲೇ ಚಿತ್ರರಂಗಕ್ಕೆ ಬಂದರು. ಒಂದು ಕಾಲದಲ್ಲಿ ಬಿ ಗ್ರೇಡ್ ಸಿನಿಮಾಗಳಿಗೆ ಸಿಮೀತವಾಗಿದ್ದ ಶಕೀಲಾ, ನಂತರ ನಾನು ವಯಸ್ಕರ ಚಿತ್ರ ಮಾಡುವುದಿಲ್ಲ ಎಂದು ಅದರಿಂದ ಹೊರಗೆ ಬಂದರು. ನಂತರ ಕನ್ನಡ, ಮಲೆಯಾಳಂ ಚಿತ್ರರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

  • ಪೊರಕೆಯಲ್ಲಿ ಹೊಡೆದ್ರೂ ಮಗನಿಗಾಗಿ ಮಿಡಿದ ತಾಯಿ ಹೃದಯ

    ಪೊರಕೆಯಲ್ಲಿ ಹೊಡೆದ್ರೂ ಮಗನಿಗಾಗಿ ಮಿಡಿದ ತಾಯಿ ಹೃದಯ

    ಬೆಂಗಳೂರು: ಹೆತ್ತ ಕಂದ ಅಮ್ಮನ ಮೇಲೆ ಕೈ ಮಾಡಿದ್ರು, ಕ್ಷಮಿಸಿ ತನ್ನ ಮಗನನ್ನು ಬಂಧ ಮುಕ್ತಗೊಳಿಸಲು ತಾಯಿ ಮುಂದಾಗಿದ್ದಾರೆ.

    ಅಮ್ಮನನ್ನ ಪೊರಕೆಯಲ್ಲಿ ಹೊಡೆದ ಮಗನಿಗೆ ಕ್ಷಮಾ ಬಿಕ್ಷೆ ನೀಡಲು ತಾಯಿ ನಿರ್ಧರಿಸಿದ್ದಾರೆ. ಶನಿವಾರದಂದು ಜೆ ಪಿ ನಗರದಲ್ಲಿ ತಾಯಿ ಮೇಲೆ ಪೊರಕೆಯಲ್ಲಿ ಮಗನೊಬ್ಬ ಹಲ್ಲೆ ಮಾಡಿದ್ದನು. ತಾಯಿ ಬುದ್ದಿ ಮಾತು ಹೇಳಿದ್ದಕ್ಕೆ ಪೊರಕೆಯಿಂದ ಮಗ ಹೊಡೆದಿದ್ದನು. ಇದೀಗ ತನ್ನ ಕಂದನ ಮೇಲೆ ದೂರು ದಾಖಲಿಸಬೇಡಿ ಎಂದು ಪೊಲೀಸರ ಮೊರೆ ಹೋಗಿ ಮಗನ ಭವಿಷ್ಯ ಹಾಳಾಗುತ್ತೆ ಅಂತ ತಾಯಿ ಕಣ್ಣೀರು ಹಾಕಿದ್ದಾರೆ.

    ನಾನು ನನ್ನ ಮಗನಿಗೆ ಬುದ್ಧಿ ಹೇಳ್ತೀನಿ ಇಷ್ಟಕ್ಕೆ ಇದು ಸಾಕು, ದಯಮಾಡಿ ಅವನನ್ನ ಬಿಟ್ಟು ಬಿಡಿ ಎಂದು ಪೊಲೀಸರಿಗೆ ತಾಯಿ ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ರಾತ್ರಿ ಜೆಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ಹುಡುಗನ ಅಮ್ಮ ಮನವಿ ಮಾಡಿದ್ದಕ್ಕೆ ಮಗನಿಗೆ ಎಚ್ಚರಿಕೆ ಕೊಟ್ಟು ಪೊಲೀಸರು ಕಳಿಸಿದ್ದಾರೆ. ಇದನ್ನೂ ಓದಿ: ಹೆತ್ತಮ್ಮನಿಗೆ ಪೊರಕೆಯಲ್ಲಿ ಹೊಡೆದು ಮಗನಿಂದ ಕ್ಲಾಸ್..!

    ಭಾನುವಾರ ರಾತ್ರಿ ಹುಡುಗನ ಮೇಲೆ ಎಫ್‍ಐಆರ್ ದಾಖಲಾಗಿದ್ದ ಹಿನ್ನೆಲೆ ಠಾಣೆಗೆ ಕರೆ ತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಹುಡುಗ ಬಾಲಾಪರಾಧಿ ಎಂದು ಪತ್ತೆಯಾದ ಬಳಿಕ ತಾಯಿ ಮನವಿ ಮೇರೆಗೆ ಆತನಿಗೆ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ. ಅಲ್ಲದೆ ಮಂಗಳವಾರ ಬಾಲಾಪರಾಧಿಗಳ ನ್ಯಾಯಾಲಯಕ್ಕೆ ಹುಡುಗನನ್ನ ಹಾಜರು ಪಡಿಸಲು ಪೊಲೀಸರು ತೀರ್ಮಾನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv