Tag: ಹೊನ್ನಾಳಿ

  • ಕಲುಷಿತ ನೀರು ಕುಡಿದು 7 ಮಂದಿ ಅಸ್ವಸ್ಥ – ಹುಣಸಘಟ್ಟ PDO ಅಮಾನತು

    ಕಲುಷಿತ ನೀರು ಕುಡಿದು 7 ಮಂದಿ ಅಸ್ವಸ್ಥ – ಹುಣಸಘಟ್ಟ PDO ಅಮಾನತು

    ದಾವಣಗೆರೆ: ಕಲುಷಿತ ನೀರು (Contaminated Water) ಕುಡಿದು 7 ಮಂದಿ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆ ಹುಣಸಘಟ್ಟ (Hunasagatta) ಪಿಡಿಒ (PDO) ಪರಮೇಶ್ ಕಳ್ಳೂರು ಅವರನ್ನು ಅಮಾನತು ಮಾಡಲಾಗಿದೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ಕಲುಷಿತ ನೀರು ಕುಡಿದು 7 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಓರ್ವ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಪಿಡಿಒ ಪರಮೇಶ್ ಅವರನ್ನು ಅಮಾನತು (Suspend) ಮಾಡಲಾಗಿದೆ. ಇದನ್ನೂ ಓದಿ: ಚಿತ್ರದುರ್ಗದ ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ

    ಕುಡಿಯುವ ನೀರಿನ ಪೈಪ್‌ನಲ್ಲಿ ಚರಂಡಿ ನೀರು ಸೇರಿಕೊಳ್ಳುತ್ತಿದ್ದರೂ ಪಿಡಿಒ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಾರಣದಿಂದ ಪಿಡಿಒ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಸುರೇಶ್ ಬಿ ಇಟ್ನಾಳ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ

  • ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು

    ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು

    ದಾವಣಗೆರೆ: ಕಲುಷಿತ ನೀರು (Contaminated Water) ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ (Honnali) ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದೆ.

    ಚಂದ್ರಮ್ಮ (60) ಸಾವನ್ನಪ್ಪಿದ ವೃದ್ಧೆ. ಆ.21ರಂದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಗ್ರಾಮದ 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಚಂದ್ರಮ್ಮ ವಾಂತಿ, ಬೇಧಿ, ಜ್ವರ ಹಾಗೂ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಚಂದ್ರಮ್ಮ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭ

    ಇನ್ನುಳಿದ 6 ಮಂದಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಕುಡಿಯುವ ನೀರಿನ ಪೈಪು ಒಡೆದು ಚರಂಡಿ ನೀರು ಮಿಶ್ರಣವಾದ ಹಿನ್ನೆಲೆ ನೀರು ಕಲುಷಿತಗೊಂಡಿತ್ತು. ಘಟನೆಯ ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಅಲ್ಲದೇ ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿದ್ದರು. ಇದನ್ನೂ ಓದಿ: ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

  • ಹೊನ್ನಾಳಿಯಲ್ಲಿ ಭಾರೀ ಮಳೆ – ತಾಲೂಕು ಆಸ್ಪತ್ರೆ ಒಳಗೆ ನುಗ್ಗಿದ ನೀರು

    ಹೊನ್ನಾಳಿಯಲ್ಲಿ ಭಾರೀ ಮಳೆ – ತಾಲೂಕು ಆಸ್ಪತ್ರೆ ಒಳಗೆ ನುಗ್ಗಿದ ನೀರು

    – ಜನರಲ್, ಐಸಿಯು ವಾರ್ಡ್‌ ಜಲಾವೃತ

    ದಾವಣಗೆರೆ: ಹೊನ್ನಾಳಿಯಲ್ಲಿ (Honnalli) ರಾತ್ರಿ ಭಾರೀ ಮಳೆಯಾಗಿದ್ದು (Rain) ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ (Taluk Hospital) ನೀರು ನುಗ್ಗಿದೆ. ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ.

    ಜನರಲ್ ವಾರ್ಡ್, ಐಸಿಯು ವಾರ್ಡ್‌ಗಳಿಗೂ ನೀರು ನುಗ್ಗಿದ್ದು ಇಡೀ ಆಸ್ಪತ್ರೆ ಸಂಪೂರ್ಣ ಜಲಾವೃತವಾಗಿದೆ. ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿ, ಔಷಧ ವಿತರಣಾ ಕೊಠಡಿ, ಹೆರಿಗೆ ವಾರ್ಡ್‌ಗೆ ನೀರು ನುಗ್ಗಿದ್ದು ವಾರ್ಡ್‌ನಲ್ಲಿದ್ದ ಬಾಣಂತಿಯರು ಹಾಗೂ ಐಸಿಯು ಘಟಕದಲ್ಲಿನ ರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ.

     ಸರಿಯಾದ ರೀತಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕ್ರೀಡಾಂಗಣದಿಂದ ಆಸ್ಪತ್ರೆಗೆ ನೀರು ಹರಿದಿದೆ. ರಾತ್ರಿಯಿಡಿ ಜಾಗರಣೆ ಮಾಡಿ ಆಸ್ಪತ್ರೆಯನ್ನು ಸಿಬ್ಬಂದಿ ಕ್ಲೀನ್‌ ಮಾಡಿದ್ದಾರೆ. ಇದನ್ನೂ ಓದಿ: ನರ್ಸರಿಯಲ್ಲಿ 4 ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ರೊಚ್ಚಿಗೆದ್ದ ಜನರಿಂದ ಪೊಲೀಸರ ಮೇಲೆ ಕಲ್ಲು ತೂರಾಟ

    ಹೊನ್ನಾಳಿ ಪಟ್ಟಣದ ಹಲವು ರಸ್ತೆಗಳು ಜಲಾವೃತಗೊಂಡು ಬಡಾವಣೆಯ ಬೀದಿಗಳಲ್ಲೂ ಮೊಣಕಾಲುದ್ದ ನೀರು ನಿಂತಿದೆ . ಖಾಸಗಿ ಬಸ್ ನಿಲ್ದಾಣದಲ್ಲೂ ಎರಡು ಅಡಿ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ನಿಂತ ನೀರಿನಲ್ಲೇ ಬೈಕ್ ಸವಾರರು ಹಾಗೂ ಪ್ರಯಾಣಿಕರು ಸಂಚಾರ ಮಾಡಿದ್ದಾರೆ.

  • 3,000ಕ್ಕೂ ಅಧಿಕ ಅಡಿಕೆ ಮರ, 200ಕ್ಕೂ ಅಧಿಕ ತೆಂಗಿನ ಮರಗಳು ನೆಲಸಮ

    3,000ಕ್ಕೂ ಅಧಿಕ ಅಡಿಕೆ ಮರ, 200ಕ್ಕೂ ಅಧಿಕ ತೆಂಗಿನ ಮರಗಳು ನೆಲಸಮ

    – ಬೆಳೆ ಹಾನಿ ಪ್ರದೇಶಕ್ಕೆ ರೇಣುಕಾಚಾರ್ಯ ಭೇಟಿ

    ದಾವಣಗೆರೆ: ಜಿಲ್ಲೆಯ ಹೊನ್ನಾಳಿ (Honnali) ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ (Rain) 3000ಕ್ಕೂ ಅಧಿಕ ಅಡಿಕೆ ಮರಗಳು ಹಾಗೂ 200ಕ್ಕೂ ಅಧಿಕ ತೆಂಗಿನ ಮರಗಳು ಧರೆಗುರುಳಿವೆ. ಬೆಳೆ ಹಾನಿ ಪ್ರದೇಶಕ್ಕೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (MP Renukacharya) ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಶನಿವಾರ ಸುರಿದ ಧಾರಾಕಾರ ಮಳೆಗೆ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮವೊಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ ಹಾಗೂ 200ಕ್ಕೂ ಅಧಿಕ ತೆಂಗಿನ ಮರಗಳು ಧರೆಗುರುಳಿವೆ. ಪ್ರತೀ ಎಕರೆಗೆ 50 ರಿಂದ 100 ಮರಗಳು ಧರೆಗೆ ಉರುಳಿವೆ. ಹಾಗೆಯೇ ಪ್ರತಿ ಎಕರೆಗೆ 4 ರಿಂದ 5 ಲಕ್ಷ ರೂ. ಮೌಲ್ಯದ ಅಡಿಕೆ ಬೆಳೆ ಹಾನಿಯಾಗಿದೆ. ಇದನ್ನೂ ಓದಿ: TB Dam – ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ – ತಾಂತ್ರಿಕ ತಂಡಕ್ಕೆ 2 ಲಕ್ಷ ಬಹುಮಾನ

    ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲ 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್ ಪ್ರತಿಭಟನೆ

    ಬೆಳೆ ಹಾನಿಯಾದ ತೋಟಗಳಿಗೆ ರೈತರೊಂದಿಗೆ ರೇಣುಕಾಚಾರ್ಯ ಭೇಟಿ ನೀಡಿ, ರೈತರಿಗೆ ಧೈರ್ಯ ತುಂಬಿದ್ದಾರೆ. ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

  • ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

    ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

    ದಾವಣಗೆರೆ/ಬೆಂಗಳೂರು: ಮಾಜಿ ಮಂತ್ರಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ(Renukacharya) ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್(Chandrashekar) ನಾಪತ್ತೆ ಪ್ರಕರಣ ವಿಷಾದದಲ್ಲಿ ಅಂತ್ಯವಾಗಿದೆ. ಐದು ದಿನದ ಹಿಂದೆ ನಾಪತ್ತೆಯಾಗಿದ್ದ ಚಂದ್ರಶೇಖರ್ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಗುರುವಾರ ಮಧ್ಯಾಹ್ನದವರೆಗೂ ಚಂದ್ರು ಅವರನ್ನು ಅಪಹರಣ ಮಾಡಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಹೊನ್ನಾಳಿ ಮತ್ತು ನ್ಯಾಮತಿ ಮಾರ್ಗಮಧ್ಯೆ ಬರುವ ಸೊರಟೂರಿನ ತುಂಗಭದ್ರಾ(Tungabhadra Canal) ನದಿಯ ಕಾಲುವೆಯಲ್ಲಿ ಕಾರೊಂದು ಇದೆ ಎಂಬ ಸುದ್ದಿ ಇಡೀ ಪ್ರಕರಣಕ್ಕೆ ಟ್ವಿಸ್ಟ್ ನೀಡಿತು.

    ಕಾಲುವೆ ಮೇಲ್ಭಾಗದಲ್ಲಿ ಕಾರೊಂದರ ಬಿಡಿಭಾಗಳು ಪತ್ತೆ ಆಗಿದ್ದವು. ನುರಿತ ಈಜುಪಟುಗಳು ಮತ್ತು ಅಗ್ನಿಶಾಮಕ ಪಡೆ ಸಿಬ್ಬಂದಿ ಕಾರ್ಯಾರಚಣೆ ನಡೆಸಿ, ಕಾರನ್ನು ಮೇಲಕ್ಕೆ ಎತ್ತಿದರು. ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಶವ ಅಂತ ಹೇಳ್ಬೇಡಿ ಚಂದ್ರು ಅಂತ ಕರೆಯಿರಿ- ಗೋಳಾಡಿದ ರೇಣುಕಾಚಾರ್ಯ

    ಶಾಸಕ ರೇಣುಕಾಚಾರ್ಯ ಸೇರಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಚಂದ್ರು ನಿನ್ನ ಸಾವಿಗೆ ನಾನೇ ಕಾರಣ. ಚಂದ್ರು ನನ್ನನ್ನು ಕರ್ಕೋಳೋ ಎಂದು ರೇಣುಕಾಚಾರ್ಯ ಗೋಳಾಡಿದ್ದಾರೆ.

    ಇದು ಕೊಲೆಯೋ? ಆತ್ಮಹತ್ಯೆಯೋ? ಅಪಘಾತದಿಂದ ಉಂಟಾದ ಸಾವೋ? ಎಂಬುದು ಖಚಿತವಾಗಿಲ್ಲ. ಚಂದ್ರು ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದು ನಿಂತಿದೆ. ಇದೀಗ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಚಂದ್ರಶೇಖರ್ ಸಾವಿನ ನೈಜ ಕಾರಣ ತಿಳಿದುಬರಲಿದೆ.

    ಮತ್ತೊಂದು ಕಡೆ ಪೊಲೀಸರ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿದ್ದಾರೆ. ಇದು ಸಹಜ ಸಾವಲ್ಲ. ಕೊಲೆ ನಡೆದಿದೆ ಈ ಬಗ್ಗೆ ತನಿಖೆ ಆಗಬೇಕು ಎಂದು ಶಾಸಕ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ರೇಣುಕಾಚಾರ್ಯ ಜೊತೆ ಚರ್ಚಿಸಿ ತನಿಖೆ ನಿರ್ಧಾರ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಶುಕ್ರವಾರ ಚಂದ್ರಶೇಖರ್ ಅಂತ್ಯಕ್ರಿಯೆ ಹೊನ್ನಾಳಿಯಲ್ಲಿ ನಡೆಯಲಿದೆ.

    ಚಂದ್ರು ಸಾವಿನ ಸುತ್ತ ಅನುಮಾನದ ಹುತ್ತ
    ಅನುಮಾನ 1 – ಡ್ರೈವರ್ ಸೀಟ್ ಬೆಲ್ಟ್ ಲಾಕ್ ಆಗಿದ್ರೂ ಹಿಂಬದಿ ಸೀಟ್‍ನಲ್ಲಿ ಮೃತದೇಹ ಸಿಕ್ಕಿದೆ.
    ಅನುಮಾನ 2 – ಕ್ರೇಟಾ ಕಾರಿನ ಮುಂಭಾಗದ ಗಾಜು ದೊಡ್ಡದಾಗಿ ಒಡೆದಿರುವುದು. ಯಾರೋ ಕಲ್ಲು ಎತ್ತಿ ಹಾಕಿ ಒಡೆದಂತೆ ಕಾಣುತ್ತಿದೆ.
    ಅನುಮಾನ 3 – ಕಾರು ಹಿಂಬದಿ ನಜ್ಜು ಗುಜ್ಜಾಗಿರುವುದು.
    ಅನುಮಾನ 4 – ನಾಲೆಯ ತಡೆಗೋಡೆಗೆ ಹೆಚ್ಚು ಹಾನಿ ಆಗದಿರುವುದು.
    ಅನುಮಾನ 5 – ಮೃತ ಚಂದ್ರು ಮೊಬೈಲ್ ಟವರ್ ಲೊಕೇಶನ್ ಬೇರೆ ಕಡೆ ಕೊನೆಯಾಗಿರುವುದು.

    ಏನಿದು ಪ್ರಕರಣ?
    ಅ.30ರ ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ಮರಳಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ‌. ರಾತ್ರಿ 11:30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಸಿಗ್ನಲ್ ಪತ್ತೆಯಾಗಿಲ್ಲ. ಶಿವಮೊಗ್ಗದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ  ದೃಶ್ಯ ಸಿಸಿ ಕ್ಯಾಮೆರಾದಲ್ಲಿ  ಲಭ್ಯವಾಗಿದೆ.

    Live Tv
    [brid partner=56869869 player=32851 video=960834 autoplay=true]

  • 5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆ

    5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆ

    ದಾವಣಗೆರೆ: ಹೊನ್ನಾಳಿ(Honnalli) ಶಾಸಕ ಎಂಪಿ ರೇಣುಕಾಚಾರ್ಯ(MP Renukacharya) ಸಹೋದರನ ಪುತ್ರನ ಕಾರು ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ(Tungabhadra Canal) 5 ದಿನಗಳ ಬಳಿಕ ಪತ್ತೆಯಾಗಿದೆ.

    ಚಂದ್ರಶೇಖರ್‌ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಸಿಕ್ಕಿದೆ. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲೇ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರು ಪತ್ತೆಯಾದ ವಿಚಾರ ತಿಳಿದು ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ಸ್ಥಳಕ್ಕೆ ಬಂದಿದ್ದಾರೆ.  ಇದನ್ನೂ ಓದಿ: ಕೆಂಪುಕೋಟೆಯ ಮೇಲೆ ದಾಳಿ – ಲಷ್ಕರ್‌ ಉಗ್ರ ಅಶ್ಫಾಕ್ ಆರಿಫ್‌ ಗಲ್ಲು ಖಾಯಂ

    ಸ್ಥಳೀಯ ನಿವಾಸಿಗಳು ಕಾಲುವೆಯಲ್ಲಿ ಕಾರು ಬಿದ್ದಿದೆ ಎಂಬ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕ್ರೇನ್‌ ಮೂಲಕ ಕಾರನ್ನು ಮೇಲಕ್ಕೆ ಎತ್ತಿದ್ದಾರೆ.

    ಕಾರಿನ ಏರ್‌ ಬ್ಯಾಗ್‌ ತೆರೆದಿದ್ದು, ಹಿಂಭಾಗದಲ್ಲಿ ಶವ ಪತ್ತೆಯಾಗಿದೆ. ಮುಂಭಾಗದ ಗಾಜು ಒಡೆದಿದ್ದರೆ ಹಿಂಭಾಗದಲ್ಲಿ ಕಾರು ನಜ್ಜುಗುಜ್ಜಾಗಿದೆ. ಹೀಗಾಗಿ ಇದು ಅಪಘಾತವೇ ಅಥವಾ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದ್ಯಾ ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕಿದೆ. ಇದನ್ನೂ ಓದಿ: ನನ್ನ ಮಗನನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡುತ್ತೇವೆ: ರೇಣುಕಾಚಾರ್ಯ

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರೇಣುಕಾಚಾರ್ಯ, ಕೆಲ ದಿನಗಳಿಂದ ನನ್ನ ತಮ್ಮನ ಮಗ ಚಂದ್ರಶೇಖರ್‌ನನ್ನು ಹಿಂಬಾಲಿಸುತ್ತಿದ್ದರು. ಅವರೇ ಕಿಡ್ನ್ಯಾಪ್ ಮಾಡಿದ್ದಾರೆ. ಆದರೆ ಯಾವ ದುರುದ್ದೇಶದಿಂದ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಅವರು ಉದ್ದೇಶ ಪೂರ್ವಕವಾಗಿಯೇ ಈ ರೀತಿ ಕೆಲಸ ಮಾಡಿದ್ದಾರೆ ಎಂದು ಸ್ಫೋಟಕ ಮಾಹಿತಿ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗೌರಿಗದ್ದೆಗೆ ಒಬ್ಬನೇ ಹೋಗಿದ್ದ ಚಂದ್ರಶೇಖರ್ – ತಮ್ಮನ ಮಗನನ್ನು ನೆನದು ರೇಣುಕಾಚಾರ್ಯ ಕಣ್ಣೀರು

    ಗೌರಿಗದ್ದೆಗೆ ಒಬ್ಬನೇ ಹೋಗಿದ್ದ ಚಂದ್ರಶೇಖರ್ – ತಮ್ಮನ ಮಗನನ್ನು ನೆನದು ರೇಣುಕಾಚಾರ್ಯ ಕಣ್ಣೀರು

    ದಾವಣಗೆರೆ: ಶಿವಮೊಗ್ಗದ (Shivamogga) ಗೌರಿಗದ್ದೆಗೆ ಚಂದ್ರಶೇಖರ್ (Chandrasekhar) ಹೋಗಿದ್ದನು. ಅಂದು ರಾತ್ರಿಯಿಂದಲೇ ಅವನ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಹೊನ್ನಾಳಿ (Honnali) ಕ್ಷೇತ್ರದ ಬಿಜೆಪಿ ಶಾಸಕ ಎಂ. ರೇಣುಕಾಚಾರ್ಯ (MP Renukacharya) ತಮ್ಮ ಸಹೋದರನ ಮಗ ನಾಪತ್ತೆಯಾಗಿರುವುದನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ಅವರು, ಚಂದ್ರಶೇಖರ್ ಎಲ್ಲಿ ಹೋಗಿದ್ದಾನೆ, ಎಲ್ಲಿ ಇದ್ದಾನೆ ಎನ್ನುವುದು ಕೂಡ ತಿಳಿಯುತ್ತಿಲ್ಲ. ಯಾವಾಗಲೂ ಸ್ನೇಹಿತರ ಜೊತೆ ಇರುತ್ತಿದ್ದ, ಆದರೆ ಕಳೆದ ಭಾನುವಾರ ಒಬ್ಬನೇ ಗೌರಿಗದ್ದೆಗೆ (Gourigadde) ಹೋಗಿದ್ದ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ- ಕುಟುಂಬಸ್ಥರಲ್ಲಿ ಆತಂಕ

    ಬೆಳಗ್ಗೆಯಿಂದಲೂ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಎಲ್ಲರಿಗೂ ಕರೆ ಮಾಡಿ ವಿಚಾರಿಸುತ್ತಿದ್ದೇವೆ. ಯಾವುದೇ ಮಾಹಿತಿಯಾಗಲಿ, ಕಾರು ಕೂಡ ಸಿಗುತ್ತಿಲ್ಲ. ಮನಸ್ಸು ಎಷ್ಟೇ ಭಾರವಾಗಿದ್ದರೂ ಎರಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಂದಿದ್ದೇನೆ. ಎಲ್ಲರೂ ಆತ್ಮ ವಿಶ್ವಾಸ ತುಂಬುತ್ತಿದ್ದಾರೆ. ಚುನಾವಣೆ ಸೋತಾಗಲೂ ನಾನು ಇಷ್ಟು ಯೋಚನೆ ಮಾಡಿರಲಿಲ್ಲ. ಚಂದ್ರಶೇಖರ್ ಬಹಳ ಸೌಮ್ಯ ಸ್ವಭಾವದವನು. ಒಂದು ಕೆಟ್ಟ ಪದ ಕೂಡ ಮಾತನಾಡುತ್ತಿರಲಿಲ್ಲ. ಎಲ್ಲರೊಂದಿಗೂ ಅಷ್ಟು ಚೆನ್ನಾಗಿ ಬೆರೆಯುತ್ತಿದ್ದ. ಎಲ್ಲಾ ಕಾರ್ಯಕ್ರಮಗಳಲ್ಲಿಯೂ ನನ್ನೊಂದಿಗೆ ಇರುತ್ತಿದ್ದ. ಚಂದ್ರು ವಾಪಸ್ ಬರುತ್ತಾನೆ ಎಂದು ಭಗವಂತನನ್ನು ನಂಬಿದ್ದೇನೆ. ಅವನು ಬಂದ ತಕ್ಷಣ ಮುದ್ದಾಡಬೇಕು ಎಂಬ ಆಸೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

     

    ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಅವರು ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದಾರೆ. ಇತ್ತೀಚಿಗೆ ರೇಣುಕಾಚಾರ್ಯ ಜೊತೆ ಸಕ್ರಿಯವಾಗಿ ಓಡಾಡಿಕೊಂಡಿದ್ದ 27 ವರ್ಷದ ಚಂದ್ರಶೇಖರ್ ಭಾನುವಾರ ಗೌರಿಗದ್ದೆಯಿಂದ ಹೊನ್ನಾಳಿಗೆ ವಾಪಸ್ ಆಗಿದ್ದರು. ಅದೇ ದಿನ ರಾತ್ರಿ 11:30ರ ಸುಮಾರಿಗೆ ಹೊನ್ನಾಳಿಯ ಸಂತೆ ಮೈದಾನದ ಬಳಿ ಚಂದ್ರಶೇಖರ್ ಫೋನ್ ಸ್ವಿಚ್ ಆಫ್ ಆಗಿದೆ.

    ಎಲ್ಲಿ ಹುಡುಕಿದರೂ ಕಾಣುತ್ತಿಲ್ಲ. ಅವರ ಕಾರು ಕೂಡ ಎಲ್ಲಿಯೂ ಪತ್ತೆ ಆಗಿಲ್ಲ. ಇದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ. ರೇಣುಕಾಚಾರ್ಯ ಅವರು ಚಂದ್ರಶೇಖರ ಎಲ್ಲಿದ್ದರೂ ಬಾರಪ್ಪ ಎಂದು ಗೋಳಾಡುತ್ತಿದ್ದಾರೆ. ಹೊನ್ನಾಳಿ ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

    ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

    ದಾವಣಗೆರೆ: ಹೊನ್ನಾಳಿ(Honnalli) ಪಟ್ಟಣದಲ್ಲಿ ಶಾಸಕ ರೇಣುಕಾಚಾರ್ಯರ(Renukacharya) ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆದಿದೆ.

    ಸೋಮವಾರ ರಾತ್ರಿ 10:30ರ ವೇಳೆಗೆ ಆಪ್ತ ಸಹಾಯಕ ಪ್ರಜ್ವಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
    ಇದನ್ನೂ ಓದಿ: ರಷ್ಯಾದಿಂದ ಮತ್ತೆ ಡೆಡ್ಲಿ ಡ್ರೋನ್ ದಾಳಿ – ಉಕ್ರೇನ್‌ನಲ್ಲಿ ಅಲ್ಲೋಲ ಕಲ್ಲೋಲ

    ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಪ್ರಜ್ವಲ್‌ ಅವರನ್ನು ದಾಖಲಿಸಿದ್ದು, ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿ ರೇಣುಕಾಚಾರ್ಯ ಆಪ್ತ ಸಹಾಯಕನ ಆರೋಗ್ಯವನ್ನು ವಿಚಾರಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ರೇಣುಕಾಚಾರ್ಯ ಆರೋಗ್ಯ ಸಚಿವರಾಗುವಂತೆ ಸೋಂಕಿತನ ಪಟ್ಟು

    ರೇಣುಕಾಚಾರ್ಯ ಆರೋಗ್ಯ ಸಚಿವರಾಗುವಂತೆ ಸೋಂಕಿತನ ಪಟ್ಟು

    ದಾವಣಗೆರೆ: ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ಸೋಂಕಿತರ ಜೊತೆ ಕಾಲ ಕಳೆದಿದ್ದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಆರೋಗ್ಯ ಸಚಿವರಾಗಬೇಕೆಂದು ಕೊರೊನಾ ಸೋಂಕಿತನೊಬ್ಬ ಪಟ್ಟು ಹಿಡಿದ ಘಟನೆ ದಾವಣಗೆರೆಯ ಹೊನ್ನಾಳಿ ಪಟ್ಟಣದ ಅರಬಗಟ್ಟೆ ಕೊವೀಡ್ ಕೇರ್ ಸೆಂಟರ್ ನಲ್ಲಿ ನಡೆದಿದೆ.

    ಹೊನ್ನಾಳಿ ತಾಲೂಕಿನಲ್ಲಿ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯರವರೇ ಆರೋಗ್ಯ ಸಚಿವರಾಗಬೇಕೆಂದು ಸೋಂಕಿತನೋರ್ವ ಪಟ್ಟು ಹಿಡಿದಿದ್ದಾನೆ. ಕೊರೊನಾ ಬಂದ ಸಂದರ್ಭದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ, ನಿಮ್ಮನ್ನು ಆರೋಗ್ಯ ಸಚಿವರನ್ನಾಗಿ ಮಾಡಿದರೆ ಇಡೀ ರಾಜ್ಯಕ್ಕೆ ಒಳ್ಳೆಯ ಸೇವೆ ಸಿಗುತ್ತದೆ ಎಂದು ಸೋಂಕಿತ ಅಭಿಪ್ರಯಾಪಟ್ಟಿದ್ದಾರೆ. ಇದನ್ನೂ ಓದಿ: ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ: ರೇಣುಕಾಚಾರ್ಯ

    ಕೋವಿಡ್ ಕೇರ್ ಸೆಂಟರ್‍ ನಲ್ಲಿ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾದವರನ್ನು ಬೀಳ್ಕೋಡುಗೆ ನೀಡಿದ ರೇಣುಕಾಚಾರ್ಯರವರಿಗೆ ಮನೆಗೆ ತೆರಳುವ ಮುನ್ನ ಮಹಿಳೆಯರು ಒಂದು ದಿನ ನೀವು ಕೋವಿಡ್ ಕೇರ್ ಸೆಂಟರ್ ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಆಗುತ್ತದೆ ಎಂದು ರೇಣುಕಾಚಾರ್ಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಗುಣಮುಖರಾದವರನ್ನು ತಮ್ಮ ಅಂಬ್ಯುಲೆನ್ಸ್ ನಲ್ಲೇ ಕಳುಹಿಸಿಕೊಟ್ಟ ರೇಣುಕಾಚಾರ್ಯರವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೋವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಗುಣಮುಖರಾದವರು ಕಣ್ಣೀರು ಹಾಕುತ್ತಾ ಮನೆಯತ್ತ ತೆರಳಿದ ಪ್ರಸಂಗವೂ ನಡೆದಿದೆ.

  • ನನ್ನ ನಿಸ್ವಾರ್ಥ ಸೇವೆಯನ್ನು ಕಂಡು ಕಾಂಗ್ರೆಸ್‍ನಿಂದ ವಿಕೃತಿ ಪ್ರದರ್ಶನ – ರೇಣುಕಾಚಾರ್ಯ

    ನನ್ನ ನಿಸ್ವಾರ್ಥ ಸೇವೆಯನ್ನು ಕಂಡು ಕಾಂಗ್ರೆಸ್‍ನಿಂದ ವಿಕೃತಿ ಪ್ರದರ್ಶನ – ರೇಣುಕಾಚಾರ್ಯ

    ದಾವಣಗೆರೆ: ಹೊನ್ನಾಳಿಯ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ ನಡೆಸಿದ್ದಕ್ಕೆ ಟೀಕೆ ವ್ಯಕ್ತವಾದ ಹಿನ್ನೆಲೆ, ನಾನು ಸಲ್ಲಿಸುತ್ತಿರುವ ನಿರಂತರ ನಿಸ್ವಾರ್ಥ ಸೇವೆಯನ್ನು ಕಂಡು ಕಾಂಗ್ರೆಸ್ ಮುಖಂಡರು ಸಹಿಸಲಾಗದೆ ವಿಕೃತಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ನಾನೊಬ್ಬ ಜನಸೇವಕನಾಗಿ ನಮ್ಮ ಕ್ಷೇತ್ರದಲ್ಲಿ ನಮ್ಮ ಬಂಧುಗಳ ರಕ್ಷಣೆಗಾಗಿ ನಾನು ಸಲ್ಲಿಸುತ್ತಿರುವ ನಿರಂತರ ನಿಸ್ವಾರ್ಥ ಸೇವೆಯನ್ನು ಈ ರೀತಿ ಬಣ್ಣಿಸುತ್ತಿದ್ದಾರೆ. ನಾಟಕ, ದೊಂಬರಾಟ, ಕಾಮಿಡಿ ಪೀಸ್, ಪ್ರಚಾರಕ್ಕಾಗಿ ಮಾಡುತ್ತಿರುವ ಗಿಮಿಕ್ ಎಂದು ಅಪ ಪ್ರಚಾರ ಮಾಡಿದ್ದಾರೆ.  ಇದನ್ನೂ ಓದಿ: ರೇಣುಕಾಚಾರ್ಯರನ್ನ ಪತಿಯಾಗಿ ಪಡೆದ ನಾನೇ ಅದೃಷ್ಟವಂತೆ: ಕೊಂಡಾಡಿದ ಪತ್ನಿ ಸುಮಿತ್ರಾ

    ಕೋವಿಡ್ ಸೋಂಕಿತ ಶವ ಸಂಸ್ಕಾರ ಮಾಡಿದ್ದಕ್ಕೆ ಟೀಕೆ ವ್ಯಕ್ತ ಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ವಿಕೃತಿ. ಪ್ರತಿದಿನ ಕೋವಿಡ್ ವಾರ್ಡ್‍ನ ಪ್ರತಿ ಬೆಡ್ ಗೆ ಭೇಟಿ ನೀಡಿ ನನ್ನ ಬಂಧುಗಳಿಗೆ ಆತ್ಮಸ್ಥೈರ್ಯ ತುಂಬಿದ್ದಕ್ಕೆ ಟೀಕೆ, ಜನರ ಆರೋಗ್ಯ ವೃದ್ಧಿಗಾಗಿ ಹೋಮ ಮಾಡಿಸಿದ್ದಕ್ಕೆ ಹಾಗೂ ಹೋಳಿಗೆ ಊಟದ ಬಗ್ಗೆ ಟೀಕೆ, ಪ್ರತಿದಿನ ನಾನು ವೈಯಕ್ತಿಕವಾಗಿ ನೀಡುತ್ತಿರುವ ಉಪಹಾರದ ಬಗ್ಗೆ ಟೀಕೆ, ಕೋವಿಡ್ ಸೋಂಕಿತರಿಗೆ ಯೋಗಾ ಹಾಗೂ ಮನರಂಜನೆ ಬಗ್ಗೆ ಟೀಕೆ ಮಾಡಿದ್ದಾರೆ.

    ಸಿಸಿಸಿ ವಾಸ್ತವ್ಯದ ಬಗ್ಗೆ ಹಗುರ ಮಾತುಗಳು ಕೇಳಿಬಂದಿರುವುದು ನನ್ನ ಗಮನಕ್ಕೆ ಬಂದಿದೆ. ಇದರಿಂದ ವೈಯಕ್ತಿಕ ತೇಜೋವಧೆ ಆಗುತ್ತಿದೆ. ಹೀಗೆ ನನ್ನ ಬಗ್ಗೆ ಕ್ಷೇತ್ರದ ಮಾಜಿ ಶಾಸಕರು ಹಾಗೂ ಅವರ ಪಕ್ಷದ ಮುಖಂಡರು ಕೀಳು ಮಟ್ಟದಲ್ಲಿ ಟೀಕಿಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಇದು ನಿಮ್ಮ ಕೀಳು ಮಟ್ಟದ ರಾಜಕೀಯ ಮನಸ್ಥಿತಿಯನ್ನು ತೋರಿಸುತ್ತದೆ. ಇದು ರಾಜಕೀಯ ಮಾಡುವ ಸಮಯವಲ್ಲ ಮಾನವೀಯತೆ ಮೆರೆಯುವ ಸಮಯ ಎಂದು ಬರೆದುಕೊಂಡಿದ್ದಾರೆ.