Tag: ಹೊಲಿಗೆ ಯಂತ್ರ

  • ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಟಿಫಿನ್ ಬಾಕ್ಸ್, ಹೊಲಿಗೆ ಯಂತ್ರ ಜಪ್ತಿ

    ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಟಿಫಿನ್ ಬಾಕ್ಸ್, ಹೊಲಿಗೆ ಯಂತ್ರ ಜಪ್ತಿ

    ಬೆಳಗಾವಿ: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಹೊಲಿಗೆ ಯಂತ್ರಗಳು (Sewing Machine) ಮತ್ತು ಟಿಫಿನ್ ಬಾಕ್ಸ್‌ಗಳನ್ನು (Tiffin Box) ಪೊಲೀಸರು ಜಪ್ತಿ ಮಾಡಿರುವ ಘಟನೆ ಬೆಳಗಾವಿ‌ (Belagavi) ಜಿಲ್ಲೆಯ ಸವದತ್ತಿ (Savadatti) ಪಟ್ಟಣದಲ್ಲಿ ನಡೆದಿದೆ.

    ನಗರದ ಸಂಭವ ಟಿಂಬರ್ ಯಾರ್ಡ್ ಗೋದಾಮು ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಸವದತ್ತಿ ಕೇತ್ರದ ಜೆಡಿಎಸ್ (JDS) ಅಭ್ಯರ್ಥಿ ಸೌರಭ್ ಛೋಪ್ರಾ (Sourabh Chopra) ಭಾವಚಿತ್ರವಿರುವ ಟಿಫಿನ್ ಬಾಕ್ಸ್ ಜೊತೆಗೆ ಹೊಲಿಗೆ ಯಂತ್ರಗಳನ್ನು ಜಪ್ತಿ ಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಶೆಟ್ಟರ್ ನಿರ್ಧಾರದಿಂದ ಉಂಟಾದ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾದ ಜೆ.ಪಿ ನಡ್ಡಾ 

    ಲಕ್ಷಾಂತರ ಮೌಲ್ಯದ 2300ಕ್ಕೂ ಅಧಿಕ ಹೊಲಿಗೆ ಯಂತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದ ಮೇಲೆ ಸರಕು ಮತ್ತು ಸೇವಾ ತೆರಿಗೆ (GST) ಅಧಿಕಾರಿಗಳು ಹಾಗೂ ಸ್ಥಳೀಯ ಚುನಾವಣೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸೌರಭ್ ಛೋಪ್ರಾ ಹೊಲಿಗೆ ಯಂತ್ರ ಇರುವ ಕುರಿತಾಗಿ ಬಿಲ್ ಹಾಗೂ ಅದಕ್ಕೆ ಬೇಕಾದ ದಾಖಲೆಗಳನ್ನು ಒದಗಿಸಿದ್ದಾರೆ. ನೀತಿ ಸಂಹಿತೆ ಬರುವ ಮುಂಚೆಯೇ ಇವುಗಳನ್ನು ತರಲಾಗಿದೆ. ಆದರೆ ಎಲ್ಲಿಯೂ ಹಂಚಿಲ್ಲ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಜಾತಿ ರಾಜಕಾರಣಕ್ಕೆ ಮಾನ್ಯತೆಯಿಲ್ಲ, ನೀತಿ ರಾಜಕಾರಣಕ್ಕೆ ಬೆಲೆ: ಸಿ.ಟಿ.ರವಿ 

    ಅಭ್ಯರ್ಥಿ ಕಡೆಯವರು ಪೋಲಿಸರ ನೇತೃತ್ವದಲ್ಲಿ ಗೋದಾಮು ಸೀಜ್ (Seize) ಮಾಡಿದ್ದು, ನಂತರ ಗೋದಾಮಿನಲ್ಲಿರುವ ಹೊಲಿಗೆ ಯಂತ್ರ ಹಾಗೂ ಟಿಫಿನ್ ಬಾಕ್ಸ್‌ಗಳನ್ನು ವಶಕ್ಕೆ ಪಡೆದು ಬೇರೆಡೆ ಸ್ಥಳಾಂತರಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಕೆ – ನಾಣ್ಯ ಎಣಿಸಿ ಸುಸ್ತಾದ ಅಧಿಕಾರಿಗಳು

  • ಸಾವಿರಾರು ಮಾಸ್ಕ್ ತಯಾರಿಸ್ತಿದ್ದಾರೆ ಧಾರವಾಡ ಮಹಿಳೆಯರು

    ಸಾವಿರಾರು ಮಾಸ್ಕ್ ತಯಾರಿಸ್ತಿದ್ದಾರೆ ಧಾರವಾಡ ಮಹಿಳೆಯರು

    ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ಮಾಸ್ಕ್ ಕೊರತೆ ಉಂಟಾಗದಂತೆ ತಡೆಯಲು ಮತ್ತು ಅಗತ್ಯವಿರುವ ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

    ಕ್ಷೇತ್ರದ ಬಡ ಮಹಿಳೆಯರಿಗೆ ಸಂಸದರ ಅನುದಾನದಡಿ ವಿತರಿಸಿದ್ದ ಹೊಲಿಗೆ ಯಂತ್ರದ ಸಹಾಯದಿಂದ ಈಗಾಗಲೇ ಸಾವಿರಾರು ಮಾಸ್ಕ್ ಸಿದ್ಧಪಡಿಸಲಾಗಿದೆ. ಈಗ ವಿತರಿಸುವ ಮೂಲಕ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೋರಾಟಕ್ಕೆ ಕೈಜೋಡಿಸಿರುವ ಧಾರವಾಡದ ಲೋಕಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದ ಮಹಿಳೆಯರು ತಮಗೆ ನೀಡಿದ ಯಂತ್ರದಿಂದ ಉಚಿತವಾಗಿ ಮಾಸ್ಕ್ ಹೊಲಿದುಕೊಡುವ ಮೂಲಕ ಮಾದರಿ ಸೇವೆ ಸಲ್ಲಿಸುತ್ತಿದ್ದಾರೆ.

    ಕೇಂದ್ರ ಸಚಿವ ಜೋಶಿ ಅವರು ತಮ್ಮ ಕ್ಷೇತ್ರದಲ್ಲಿ 544 ಬಡ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡಿದ್ದಾರೆ. ಅದರಲ್ಲಿ ಸಂಸದರ ಆದರ್ಶ ಗ್ರಾಮವಾದ ಹಾರೋಬೆಳವಡಿ, ಕಬ್ಬೇನೂರು ಗ್ರಾಮ ಸೇರಿದಂತೆ ಕ್ಷೇತ್ರದ 200ಕ್ಕೂ ಹೆಚ್ಚು ಮಹಿಳೆಯರು ಈಗಾಗಲೇ ಮಾಸ್ಕ್ ತಯಾರಿಕೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ.

    ತಲಾ ಒಬ್ಬರು ದಿನಕ್ಕೆ 100 ರಿಂದ 150 ಮಾಸ್ಕ್ ಸಿದ್ಧಪಡಿಸುತ್ತಿದ್ದಾರೆ. ಸಚಿವ ಜೋಶಿ ಅವರು ತಮ್ಮದೇ ಪೋಷಕತ್ವದಲ್ಲಿರುವ ಕ್ಷಮತಾ ಸೇವಾ ಸಂಸ್ಥೆಯನ್ನು ಈ ಜನೋಪಕಾರಿ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಮಾಸ್ಕ್ ತಯಾರಿಕೆಗೆ ಅಗತ್ಯವಿರುವ ಬಟ್ಟೆ ಮತ್ತು ದಾರವನ್ನು ಸಂಸ್ಥೆಯಿಂದ ಉಚಿತವಾಗಿ ವಿತರಣೆ ಮಾಡಿಸಿದ್ದಾರೆ. ಸಚಿವರ ಈ ಮಹತ್ವದ ಸೇವಾ ಕಾರ್ಯಕ್ಕೆ ಗ್ರಾಮೀಣ ಪ್ರದೇಶದ ಮಹಿಳೆಯರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದರೆ ತಪ್ಪಾಗಲಾರದು.

    ಕ್ಷಮತಾ ಸೇವಾ ಸಂಸ್ಥೆಯೂ 3 ಲಕ್ಷ ಮಾಸ್ಕ್ ವಿತರಿಸುವ ಗುರಿಯನ್ನು ಇಟ್ಟುಕೊಂಡಿದ್ದು, ಲೋಕಸಭಾ ಕ್ಷೇತ್ರದಲ್ಲಿ ಬರುವ ಸಾವಿರಾರು ಬಡ ಮಹಿಳೆಯರಿಗೆ ‘ಸುವರ್ಣ ಎಜುಕೇಶನ್ ಟ್ರಸ್ಟ್’ ಉಚಿತ ಹೊಲಿಗೆ ತರಬೇತಿ ನೀಡಿದೆ. ತರಬೇತಿ ಹೊಂದಿದ ಮಹಿಳೆಯರನ್ನು ಬಳಸಿಕೊಂಡು ಈಗಾಗಲೇ ಉತ್ತಮ ಗುಣಮಟ್ಟದ 40 ಸಾವಿರಕ್ಕೂ ಹೆಚ್ಚು ಮಾಸ್ಕ್‍ಗಳನ್ನು ತಯಾರಿದಿದೆ.

    ಬಡ ಮಹಿಳೆಯರ ನಿಶ್ವಾರ್ಥ ಸೇವೆ
    ಸಂಸದರ ಅನುದಾನದಡಿ ಈ ಹಿಂದೆ ವಿತರಣೆ ಮಾಡಿದ ಯಂತ್ರಗಳು ಇಂದು ಬಹಳಷ್ಟು ಸಹಕಾರಿಯಾಗಿದ್ದು, ಮಹಿಳೆಯರು ಸ್ವಯಂ ಪ್ರೇರಣೆಯಿಂದ ಉಚಿತ ಮಾಸ್ಕ್ ತಯಾರಿಸಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಇಂದಿನ ಕಠಿಣ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಮಹಿಳೆಯರು ಮಾಸ್ಕ್ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಮಾಸ್ಕ್ ತಯಾರಿಸುವ ಕುಶರಿ ಕೆಲಸಕ್ಕೆ ಸಂಭಾವನೆ ನೀಡಲು ಮುಂದಾದರೂ ಅದನ್ನು ಈ ಮಹಿಳೆಯರು ನಿರಾಕರಿಸುತ್ತಿದ್ದಾರೆ.

  • ಮಾದರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ಅಮೂಲ್ಯ

    ಮಾದರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ಅಮೂಲ್ಯ

    -ಪತಿಯಿಂದ ಸಿಕ್ತು ಗಿಫ್ಟ್, ಮನೆಗೆ ಬಂದ ಅಭಿಮಾನಿಗಳಿಗೂ ಉಡುಗೊರೆ ನೀಡಿದ ಗೋಲ್ಡನ್ ಕ್ವೀನ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಗೋಲ್ಡನ್ ಕ್ವೀನ್ ಅಮೂಲ್ಯ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವುದಕ್ಕಾಗಿ ಹೊಲಿಗೆ ಯಂತ್ರಗಳನ್ನ ವಿತರಣೆ ಮಾಡಿದ್ದಾರೆ.

    ಶುಕ್ರವಾರ ಅಮೂಲ್ಯ ಮೊದಲು ತಮ್ಮ ಅಮ್ಮನ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಬಳಿಕ ತಮ್ಮ ಪತಿ ಮನೆ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರ ಜೊತೆ ಕೇಕ್ ಮಾಡಿ ಬರ್ತ್ ಡೇ ಸೆಲೆಬ್ರೆಟ್ ಮಾಡಿಕೊಂಡಿದ್ದರು. ಅಭಿಮಾನಿಗಳು ಕೂಡ ಅಪಾರವಾಗಿ ಬಂದಿದ್ದು, ಕೇಕ್ ತಂದು ಕಟ್ ಮಾಡಿಸಿದ್ದಾರೆ. ಬರ್ತ್ ಡೇ ಪ್ರಯುಕ್ತ ಮಹಿಳೆಯರಿಗೆ ಸ್ವಾಲಂಬಿ ಬದುಕು ಕಟ್ಟಿಕೊಳ್ಳಲು ಹೊಲಿಗೆ ಯಂತ್ರಗಳನ್ನು ನೀಡಿದ್ದಾರೆ.

    ಇದೇ ವೇಳೆ ಮಾತನಾಡಿದ ಅಮೂಲ್ಯ, ಪ್ರತಿದಿನ ಯಾರಿಗಾದರೂ ಒಳ್ಳೆಯದನ್ನು ಮಾಡಬೇಕು ಎಂದು ನಮ್ಮ ಪತಿ ಹೇಳುತ್ತಿರುತ್ತಾರೆ. ನಾವು ಹುಟ್ಟಿದ ದಿನವನ್ನು ಬೇರೆಯವರು ನೆನಪಿಸಕೊಳ್ಳಬೇಕು ಎಂದು ಹೇಳುತ್ತಾರೆ. ನನಗೆ ಒಳ್ಳೆಯ ಕುಟುಂಬ, ಪ್ರೀತಿ ಸಿಕ್ಕಿದೆ. ಅಭಿಮಾನಿಗಳ ಪ್ರೀತಿಗೆ ನಾವು ಚಿರುಋಣಿಯಾಗಿದ್ದೇವೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

    ಇತ್ತೀಚೆಗೆ ಮಹಿಳೆಯರಿಗೆ ಉದ್ಯೋಗ ಕೊಡಿಸಬೇಕು ಎಂದು ಯೋಜನೆ ಮಾಡಿ ಮನೆಯಲ್ಲಿಯೇ ಕುಳಿತು ಕೆಲಸ ಮಾಡುವವರಿಗೆ ಹೊಲಿಗೆ ಯಂತ್ರಗಳನ್ನು ಕೊಟ್ಟಿದ್ದೇವೆ. ಇದುವರೆಗೂ ನಮ್ಮ ಪತಿ ಎಲ್ಲೂ ಶಾಪಿಂಗ್ ಕರೆದುಕೊಂಡು ಹೋಗಿಲ್ಲ. ಆದರೆ ನನಗೋಸ್ಕರ ಶಾಪಿಂಗ್ ಬಂದು ನನಗೆ ಉಡುಗೊರೆಯಾಗಿ ಸೀರೆ ಕೊಡಿಸಿದ್ದಾರೆ ಎಂದು ಹೇಳಿದ್ದಾರೆ.

    ಇದೇ ವೇಳೆ ಸಿನಿಮಾದ ಬಗ್ಗೆ ಮಾತನಾಡಿದ ಅಮೂಲ್ಯ, ಸದ್ಯಕ್ಕೆ ಕಥೆ ಕೇಳುತ್ತಿದ್ದೇವೆ. ತುಂಬಾ ಪ್ಲಾನ್ ಗಳಿವೆ ಒಂದೊಂದು ಸಿನಿಮಾ ಮಾಡುತ್ತೇನೆ. ದರ್ಶನ್ ಜೊತೆ ಒಮ್ಮೆ ಮಾತನಾಡಿದ್ದೀವಿ. ಆದರೆ ಖಚಿತವಾದ ಮೇಲೆ ಹೇಳುತ್ತೇವೆ ಎಂದು ತಿಳಿಸಿದ್ದಾರೆ.

    ನಾವು ಕೆಲವು ಮಹಿಳೆಯರಿಗೆ ಹೊಲಿಗೆ ತರಬೇತಿ ಕೊಟ್ಟಿದ್ದೇವು. ಅವರಿಗೆ ಈಗ ಹೊಲಿಗೆ ಯಂತ್ರ ಕೊಟ್ಟಿದ್ದೇವೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಬೇಕು ಎನ್ನುವ ಉದ್ದೇಶದಿಂದ ಸರ್ಕಾರಿ ಶಾಲಾ ಶಿಕ್ಷಕಿಯರನ್ನು ಕರೆದು ಅಮೂಲ್ಯ ಅವರಿಂದ ಬಾಗಿನ ಕೊಟ್ಟಿದ್ದೇವೆ. ಇನ್ನು ಹುಟ್ಟುಹಬ್ಬದ ಪ್ರಯುಕ್ತ ಬಂದವರಿಗೆ ಗಿಡ ಕೊಟ್ಟಿದ್ದೇವೆ ಎಂದು ಅಮೂಲ್ಯ ಪತಿ ಜಗದೀಶ್ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv