Tag: ಹೊಳೆನರಸೀಪುರ

  • Hassan | ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

    Hassan | ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

    – ಸಾವಿನ ಸಂಖ್ಯೆ 24ಕ್ಕೆ ಏರಿಕೆ

    ಹಾಸನ: ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ (Heart Attack) ಬಲಿಯಾಗಿರುವ ಘಟನೆ ಹಾಸನ (Hassan) ಜಿಲ್ಲೆ, ಹೊಳೆನರಸೀಪುರ (Holenarasipura) ತಾಲೂಕಿನ ಸೋಮನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಸಂಜಯ್ (27) ಮೃತ ವ್ಯಕ್ತಿ. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಸಂಜಯ್ ಸೋಮವಾರ ಸಂಜೆ ಎದೆನೋವು ಎಂದು ಸೋಮನಹಳ್ಳಿ ಪ್ರಾಥಮಿಕ ಆಸ್ಪತ್ರೆಗೆ ಹೋಗಿದ್ದ. ನಡೆಯಲೂ ಆಗದ ಸ್ಥಿತಿಯಲ್ಲಿ ಸಂಜಯ್‌ನನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದಿದ್ದರು. ಕೂಡಲೇ ವೈದ್ಯರು ಆತನ ಬಿಪಿ ಪರೀಕ್ಷೆ ಮಾಡಿದ್ದರು. ಈ ವೇಳೆ 220ಕ್ಕೂ ಅಧಿಕ ಪ್ರಮಾಣದಲ್ಲಿ ಬಿಪಿ ಇದ್ದ ಬಗ್ಗೆ ಮಾಹಿತಿ ಲಭಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ರೆಫರ್ ಮಾಡುವ ವೇಳೆಯೇ ಸಂಜಯ್ ಹಠಾತ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

    ಸಂಜಯ್ ಸಾವಿನ ಬಗ್ಗೆ ಸಂಬಂಧಿಕರು ಅನುಮಾನಾಸ್ಪದ ಸಾವು ಎಂದು ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಹಳ್ಳಿ ಮೈಸೂರು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ. ಅಸಹಜ ಸಾವು ಪ್ರಕರಣಗಳಲ್ಲಿ ಮರಣೊತ್ತರ ಪರೀಕ್ಷೆ ನಡೆಸಲು ನಿರ್ದೇಶನ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ಸಂಜಯ್ ಮೃತದೇಹ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಹಣದಾಸೆ ತೋರಿಸಿ ಶ್ರೀಮಂತ ಮಹಿಳೆಯರ ಟಾರ್ಗೆಟ್ – ಬೆಂಗ್ಳೂರಿನ ಪ್ರತಿಷ್ಠಿತ ಸಲೂನ್‌ನಿಂದ 50 ಕೋಟಿ ವಂಚನೆ ಆರೋಪ

    ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಆರು ಹೃದಯಾಘಾತ ಪ್ರಕರಣ ವರದಿಯಾಗಿದೆ. ಸದ್ಯ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. 40 ದಿನಗಳಲ್ಲಿ 24 ಜನರಿಗೆ ಹೃದಯಾಘಾತ ಆಗಿದೆ. ಇದನ್ನೂ ಓದಿ: ರಾಜಕಾರಣಿಗಳೊಂದಿಗೆ ಮಲಗಲು ಒಪ್ಪದಿದ್ದಕ್ಕೆ 6 ಬಾರಿ ತಲಾಖ್ – ಸೈಕೋ ಪತಿ ವರ್ತನೆಗೆ ಬೇಸತ್ತು ಪತ್ನಿ ದೂರು

  • ಬೆಂಗಳೂರಿನಲ್ಲಿ ಹಾಸನ ಮೂಲದ ಯುವಕ ಹೃದಯಾಘಾತಕ್ಕೆ ಬಲಿ

    ಬೆಂಗಳೂರಿನಲ್ಲಿ ಹಾಸನ ಮೂಲದ ಯುವಕ ಹೃದಯಾಘಾತಕ್ಕೆ ಬಲಿ

    ಹಾಸನ: ‌ ಬೆಂಗಳೂರಿನ ಜೆಪಿ ನಗರದಲ್ಲಿ ಹಾಸನ (Hassana) ಮೂಲದ ಯುವಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ನಿಶಾಂತ್ (19) ಮೃತಪಟ್ಟ ಯುವಕ. ಹೊಳೆನರಸೀಪುರ (Holenarispura) ಪಟ್ಟಣದ ಚನ್ನಕೇಶವ ಹಾಗೂ ಜ್ಯೋತಿ ದಂಪತಿ ಪುತ್ರ ನಿಶಾಂತ್ ಡಿಪ್ಲೋಮಾ ಮುಗಿಸಿ ಕೈಗಾರಿಕಾ ತರಬೇತಿ ಸಲುವಾಗಿ 15 ದಿನದ ಹಿಂದೆ ಬೆಂಗಳೂರಿಗೆ (Bengaluru) ತೆರಳಿದ್ದರು. ಇದನ್ನೂ ಓದಿ: ಹಳಬರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಸಚಿವ ಸ್ಥಾನ ಕೊಟ್ರೆ ಕೆಲಸ ಮಾಡ್ತಾರೆ: ಶಿವಗಂಗಾ ಬಸವರಾಜ್

     

    ಇಂದು ರೂಂನಲ್ಲಿದ್ದಾಗ ತೀವ್ರ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಮೃತದೇಹವನ್ನು ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಹಾಸನಕ್ಕೆ ತರಲಾಗುತ್ತದೆ. ಇದನ್ನೂ ಓದಿ: ಇಡಿ ತನಿಖೆಯಿಂದ ವಾಲ್ಮೀಕಿ ನಿಗಮ ಹಗರಣದ ಹಿಂದಿನ ಮಹಾನಾಯಕರ ಮುಖವಾಡ ಕಳಚಲಿದೆ: ಶ್ರೀರಾಮುಲು

    ಎರಡು ತಿಂಗಳ ಅಂತರದಲ್ಲಿ ಹಾಸನ ಮೂಲದ ನಾಲ್ವರು ಹೃದಯಾಘಾತಕ್ಕೆ ಮೃತಪಟ್ಟಿದ್ದಾರೆ. ಹೊಳೆನರಸೀಪುರ ಪಟ್ಟಣದ ಓರ್ವ ಯುವಕ, ಯುವತಿ, ಅರಕಲಗೂಡು ತಾಲ್ಲೂಕಿನ ಓರ್ವ ಯುವಕ, ಹಾಸನ ತಾಲ್ಲೂಕಿನ ಓರ್ವ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದರು.

     

  • ಹಾಸನ | ಹೊಳೆನರಸೀಪುರದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಬಂಧನ

    ಹಾಸನ | ಹೊಳೆನರಸೀಪುರದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಬಂಧನ

    – ಚಿನ್ನ ಕದ್ದ ಚೋರಿಯರು ಸಿಕ್ಕಿಬಿದ್ದದ್ದು ಹೇಗೆ?
    – 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೀಜ್‌

    ಹಾಸನ: ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆ ಪೊಲೀಸರು (Holenarasipur City Police) ಕಾರ್ಯಾಚರಣೆ ನಡೆಸಿ ನಾಲ್ವರು ಖತರ್ನಾಕ್ ಕಳ್ಳಿಯರನ್ನು ಬಂಧಿಸಿ 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ವಶಪಡಿಸಿಕೊಂಡಿದ್ದಾರೆ.

    ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ, ಕುಪ್ಪಂ ಗ್ರಾಮದ ಶಶಿ (35), ಮಾಧವಿ (40), ಅಕಿಲ (30) ಹಾಗೂ ವಿದ್ಯಾ (29) ಬಂಧಿತ ಕಳ್ಳಿಯರು. ಇದನ್ನೂ ಓದಿ: ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್‌ – ಮೂವರು ಪುರುಷರೊಟ್ಟಿಗೆ ದಂಪತಿ ನೋಡಿದ್ದೆ: ಸ್ಫೋಟಕ ಸಂಗತಿ ಬಿಚ್ಚಿಟ್ಟ ಗೈಡ್‌

    ನಾಲ್ವರು ಒಂದೇ ಗ್ರಾಮದವರಾಗಿದ್ದು ಕಳ್ಳತನವನ್ನೇ ಫ್ಯಾಷನ್‌ ಮಾಡಿಕೊಂಡಿದ್ದರು. ಬಂಧಿತ ಶಶಿ ಹಾಗೂ ವಿದ್ಯಾ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ (Bengaluru Police Station) ಕಳ್ಳತನ ಪ್ರಕರಣಗಳು ದಾಖಲಾಗಿವೆ. ಮಾಧವಿ ಹಾಗೂ ಅಕಿಲ ಮೊದಲ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಶಶಿ ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದು ಉಳಿದ ಮೂವರು ಕ್ರಷರ್‌ಗಳಲ್ಲಿ ಕಲ್ಲು ಒಡೆಯುವ ಕೆಲಸ ಮಾಡಿಕೊಂಡಿದ್ದಾರೆ.

    ಕೆಎಸ್‌‍ಆರ್‌ಟಿಸಿ ಬಸ್‌‍ಗಳಲ್ಲಿ ಪ್ರಯಾಣಿಸುತ್ತಿದ್ದ ಅಮಾಯಕ ಮಹಿಳೆಯರೇ ಇವರೇ ಟಾರ್ಗೆಟ್‌ ಆಗಿದ್ದು ನೂಕುನುಗ್ಗಲಿನಲ್ಲಿ ಮಹಿಳೆಯರು ಕೆಎಸ್‌‍ಆರ್‌ಟಿಸಿ ಬಸ್‌‍ ಹತ್ತುವಾಗ ಅವರ ಮೈ ಮೇಲಿನ ಚಿನ್ನದ ಒಡವೆ, ವ್ಯಾನಿಟಿ ಬ್ಯಾಗ್‌ಗಳಿದ್ದ ಚಿನ್ನಾಭರಣಗಳನ್ನ ದೋಚುತ್ತಿದ್ದರು. ತಾವು ಸಹ ಬಸ್‌‍ ಹತ್ತುವರಂತೆ ನಟನೆ ಮಾಡುತ್ತಿದ್ದು ಯಾರಿಗೂ ಸಂಶಯ ಬರುತ್ತಿರಲಿಲ್ಲ.‌ ಇದನ್ನೂ ಓದಿ: ಎಲ್ರೂ ಬಂದು ಹೇಗಾಯ್ತು ಹುಷಾರಾಗಿ ಅಂತಾರೆ, ಪರಿಹಾರ ಮಾತ್ರ ಇಲ್ಲ: ಆರ್‌ಸಿಬಿ ಫ್ಯಾನ್ಸ್ ನೋವಿನ ಮಾತು

    ಸದ್ಯ ಬಂಧಿತರಿಂದ 35 ಗ್ರಾಂ ತೂಕದ ಚಿನ್ನದ ಸರ, 22 ಗ್ರಾಂ ತೂಕದ ನೆಕ್ಲೆಸ್‌, 5 ಗ್ರಾಂ ತೂಕದ ಬೆಳ್ಳಿ ಗಣಪತಿ ಡಾಲರ್‌ ಹಾಗೂ 29 ಗ್ರಾಂ ತೂಕದ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಮಹಮದ್ ಸುಜೇತಾ ಮಾಹಿತಿ ನೀಡಿದರು.

  • ಬಾತ್‌ರೂಂನಲ್ಲಿ ಹೃದಯಾಘಾತ – ಕುಸಿದು ಬಿದ್ದು ಯುವತಿ ಸಾವು

    ಬಾತ್‌ರೂಂನಲ್ಲಿ ಹೃದಯಾಘಾತ – ಕುಸಿದು ಬಿದ್ದು ಯುವತಿ ಸಾವು

    ಹಾಸನ : ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ (Holenarasipur) ಪಟ್ಟಣದಲ್ಲಿ ನಡೆದಿದೆ.

    ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.

    ಬಾತ್‌ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟು ಹೊತ್ತಿಗೆ ಸಂಧ್ಯಾಳ ಪ್ರಾಣ ಪಕ್ಷಿ ಹೋಗಿತ್ತು.  ಇದನ್ನೂ ಓದಿ: Anekal | ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ

    ಸಂಧ್ಯಾಕೆಲ ವರ್ಷಗಳಿಂದ ಬಿಪಿ-ಶುಗರ್‌ನಿಂದ ಬಳಲುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

  • ಹಾಸನ| ಪ್ರಿಯಕರನ ಜೊತೆ ಪತ್ನಿ ಪರಾರಿ – ನದಿಗೆ ಹಾರಿ ಪತಿ ಆತ್ಮಹತ್ಯೆ

    ಹಾಸನ| ಪ್ರಿಯಕರನ ಜೊತೆ ಪತ್ನಿ ಪರಾರಿ – ನದಿಗೆ ಹಾರಿ ಪತಿ ಆತ್ಮಹತ್ಯೆ

    ಹಾಸನ: ಪ್ರಿಯಕರನ ಜೊತೆ ಪತ್ನಿ ಪರಾರಿಯಾದ ಹಿನ್ನೆಲೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಹೊಳೆನರಸೀಪುರ (Holenarasipura) ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿ ನಡೆದಿದೆ.

    ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆಗೆ ಶರಣಾದ ಪತಿ. ರವಿಯ ಪತ್ನಿ ಕೆಲ ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಹೊನ್ನವಳ್ಳಿ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ರವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸರಿಯಾಗಿ ಸ್ಪಂದಿಸದ ಕಾರಣ ಎಸ್ಪಿಗೂ ದೂರು ನೀಡಿದ್ದರು. ಇದನ್ನೂ ಓದಿ: ಹರ್ಲೀನ್ ಡಿಯೋಲ್‍ ಅಬ್ಬರದ ಬ್ಯಾಟಿಂಗ್‌ಗೆ ಡೆಲ್ಲಿ ಬರ್ನ್‌ – ಗುಜರಾತ್‌ಗೆ 5 ವಿಕೆಟ್‌ಗಳ ರೋಚಕ ಜಯ

    ಆದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮನನೊಂದ ರವಿ ಶನಿವಾರ ಮಾಕವಳ್ಳಿ ಬಳಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ರವಿಯ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿಯುತ್ತಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಗ್ಯಾರಂಟಿಗೆ ಅನುದಾನ ಕಳೆದ ಬಾರಿ ಎಷ್ಟಿತ್ತು? ಈ ಬಾರಿ ಎಷ್ಟು ಹಂಚಿಕೆಯಾಗಿದೆ? ಸಾಲ ಎಷ್ಟು?

  • ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ – ಪ್ರಾಣಾಪಾಯದಿಂದ ಪಾರು

    ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ – ಪ್ರಾಣಾಪಾಯದಿಂದ ಪಾರು

    ಹಾಸನ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೋರ್ವ ನದಿಗೆ ಬಿದ್ದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

    ಮುಜಾಮಿಲ್ (17) ನದಿಗೆ ಬಿದ್ದ ವಿದ್ಯಾರ್ಥಿ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈತ ಕೆ.ಆರ್ ನಗರದಿಂದ ಹಾಸನಕ್ಕೆ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಮುಜಾಮಿಲ್ ಒಂದು ಕಾಲಿಟ್ಟು, ಇನ್ನೊಂದು ಕಾಲು ಬೋಗಿಯಿಂದ ಹೊರಗೆ ಹಾಕಿ ನಿಂತಿದ್ದ. ಈ ವೇಳೆ ಆಯತಪ್ಪಿ 70 ರಿಂದ 80 ಅಡಿ ಎತ್ತರದಿಂದ ಹೇಮಾವತಿ ನದಿಗೆ ಬಿದ್ದಿದ್ದಾನೆ. ಇದನ್ನೂ ಓದಿ: 3 ವರ್ಷದ ಹಿಂದೆ ನಡೆದ ಪರಿಷತ್ ಚುನಾವಣೆ | ಕೈ ಅಭ್ಯರ್ಥಿಗೆ 6 ಮತಗಳ ಸೋಲು – ಮರು ಮತ ಎಣಿಕೆಗೆ ಹೈಕೋರ್ಟ್ ಸೂಚನೆ

    ಹೇಮಾವತಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಕಡಿಮೆ ಇದ್ದಿದ್ದರಿಂದ ಬಂಡೆ ಹಿಡಿದು ಮುಜಾಮಿಲ್ ಕಿರುಚಾಡುತ್ತಿದ್ದ. ಮುಜಾಮಿಲ್ ಕಿರುಚಾಟ ಕೇಳಿದ ಸ್ಥಳೀಯರು ನದಿಗೆ ಇಳಿದು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಮುಜಾಮಿಲ್ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Kumbh Mela Stampede | ಇಂದು ಸಂಜೆ ದೆಹಲಿಯಿಂದ ಬೆಳಗಾವಿಗೆ ಬರಲಿದೆ ನಾಲ್ವರ ಶವ

  • ಹೊಳೆನರಸೀಪುರದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    ಹೊಳೆನರಸೀಪುರದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

    ಹಾಸನ: ಕಳೆದ ಮೂರ್ನಾಲ್ಕು ತಿಂಗಳಿಂದ ಹೊಳೆನರಸೀಪುರದ (Holenarasipur) ಕೆಲವು ಗ್ರಾಮಗಳಲ್ಲಿ ಆತಂಕ ಮೂಡಿಸಿದ್ದ ಚಿರತೆ (Leopard) ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.

    ಎರಡುವರೆ ವರ್ಷದ ಹೆಣ್ಣು ಚಿರತೆ ಇದಾಗಿದ್ದು, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಗ್ರಾಮಕ್ಕೆ ನುಗ್ಗಿ ಕುರಿ, ಸಾಕು ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕಿತ್ತು. ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು.

    ಇತ್ತೀಚೆಗೆ ಹಗಲು ವೇಳೆ ರೈತರ ಜಮೀನಿನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಇದಾದ ಬಳಿಕ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಇದಾದ ಬಳಿಕ ಅರಣ್ಯ ಇಲಾಖೆ ಬೋನ್ ಅಳವಡಿಸಿತ್ತು.

    ಬೋನಿನೊಳಗೆ ನಾಯಿ ಕಟ್ಟಲಾಗಿತ್ತು. ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

  • ಶ್ರೇಯಸ್ ಜೊತೆಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ – ಪ್ರೀತಂ ಗೌಡ

    ಶ್ರೇಯಸ್ ಜೊತೆಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ – ಪ್ರೀತಂ ಗೌಡ

    – ಹೆಚ್.ಡಿ.ರೇವಣ್ಣ ವಿರುದ್ಧ ಪರೋಕ್ಷ ವಾಗ್ದಾಳಿ

    ಹಾಸನ: ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ (Holenarasipura) ಶ್ರೇಯಸ್ಸು ಕೂಡ ಅಡಗಿದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ಹೇಳಿದರು.

    ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಭುವನೇಶ್ವರಿ ರಥ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ (HD Revanna) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಅವರು, ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. ಅದರ ಶ್ರೇಯಸ್ಸು ಶ್ರೇಯಸ್ ಪಟೇಲ್ ಅವರಿಗೆ ಸಲ್ಲುತ್ತದೆ. ನಿಮ್ಮನ್ನೆಲ್ಲಾ ನೋಡಿದ ಮೇಲೆ ಹೊಳೆನರಸೀಪುರಕ್ಕೆ ಸ್ವಾತಂತ್ರ‍್ಯ ಸಿಕ್ಕಿದೆ ಅನ್ನಿಸಿದೆ. 2024ರ ನಂತರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್‌ ನೋಟಿಸ್‌; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್‌ ಹೋರಾಟ: ಪರಮೇಶ್ವರ್‌

    ಇಲ್ಲಿಯ ತನಕ ಯಾವುದೇ ಕಾರ್ಯಕ್ರಮ ನಡೆಯುವಾಗ ಯಾವುದೋ ಒಂದು ಮನೆಗೆ ಅಥವಾ ಒಂದು ತೋಟದಲ್ಲಿ ಲೈಟ್ ಇರುತ್ತಿತ್ತು. ಇಡೀ ಹೊಳೆನರಸೀಪುರದಲ್ಲಿ ಲೈಟ್ ಇರುವುದನ್ನು ನೋಡಿರಲಿಲ್ಲ. ಈಗ ಹೊಳೆನರಸೀಪುರ ಶ್ರೇಯಸ್ ಪಟೇಲ್ ಅವರ ತಾತನ ಕಾಲಕ್ಕೆ ಕೊಂಡ್ಯೊಯ್ದಿದೆ. ಪುಟ್ಟಸ್ವಾಮಿಗೌಡರನ್ನು ಈ ಸಂದರ್ಭದಲ್ಲಿ ನೆನೆಯುತ್ತೇನೆ ಎಂದರು.

    ರಾಜಕಾರಣ ಬರುತ್ತದೆ. ಹೋಗುತ್ತದೆ. ನಾನು ಒಂದು ಪಕ್ಷದ ಪ್ರಮುಖ ಹುದ್ದೆಯಲ್ಲಿದ್ದೇನೆ. ಶ್ರೇಯಸ್ ಪಟೇಲ್ ಬೇರೆ ಪಕ್ಷದಿಂದ ಸಂಸದರಾಗಿದ್ದಾರೆ. ಮಾನವೀಯತೆ ಎನ್ನುವುದು ಬಹಳ ಮುಖ್ಯವಾದ್ದದ್ದು. ಇದೇ ರೀತಿ ಮುಂದುವರಿದುಕೊಂಡು ಹೋಗಲಿ. ಹೊಳೆನರಸೀಪುರವನ್ನು ಮಾದರಿಯನ್ನಾಗಿ ಮಾಡೋಣ. ಎಲ್ಲಿಯ ತನಕ ಶ್ರೇಯಸ್ ಪಟೇಲ್ ಅವರಿಗೆ ಅಧಿಕಾರ ಕೊಡುತ್ತೀರೊ ನಾನು ಯಾವುದೇ ಪಕ್ಷದಲ್ಲಿರಲಿ ಇದೇ ತರ ಪ್ರತಿ ವರ್ಷ ಬರುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: ಓವರ್‌ಲೋಡ್‌ನಿಂದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಪಲ್ಟಿ – ಓರ್ವ ಸಾವು

  • ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ `ಗಡ್ಡ’ ಗಲಾಟೆ – ಮುಸ್ಲಿಂ ಯುವಕರಿಗೆ ಗಡ್ಡ ಬೋಳಿಸುವಂತೆ ತಾಕೀತು ಆರೋಪ

    ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ `ಗಡ್ಡ’ ಗಲಾಟೆ – ಮುಸ್ಲಿಂ ಯುವಕರಿಗೆ ಗಡ್ಡ ಬೋಳಿಸುವಂತೆ ತಾಕೀತು ಆರೋಪ

    – ಗಡ್ಡ ಬೋಳಿಸಲು ಮುಸ್ಲಿಂ ಸಮುದಾಯದ ಯುವಕರ ನಕಾರ

    ಹಾಸನ: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಕಾಲೇಜು ಮಂಡಳಿ ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿ ಹಾಸನದಲ್ಲಿ (Hassan) ಕೇಳಿ ಬಂದಿದೆ.

    ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ ನರ್ಸಿಂಗ್ ಕಾಲೇಜಿನಲ್ಲಿ ಜಮು-ಕಾಶ್ಮೀರದ ಹದಿಮೂರು ವಿದ್ಯಾರ್ಥಿಗಳು ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಾಲೇಜಿಗೆ ಗಡ್ಡ ಬಿಟ್ಟುಕೊಂಡು ಬರುತ್ತಿರುವುದಲ್ಲದೇ ಕಾಲೇಜಿನ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದರಿಂದ ಕಾಲೇಜಿನ ಆಡಳಿತ ಮಂಡಳಿ ಗಡ್ಡ ಬೋಳಿಸಿಕೊಂಡು ಬಂದು ಶಿಸ್ತಿನಿಂದ ವರ್ತಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

    ಗಡ್ಡ ಬೋಳಿಸಲು ಮುಸ್ಲಿಂ ಸಮುದಾಯದ ಯುವಕರು ನಿರಾಕರಿಸಿದ್ದು, ತಮ್ಮ ಸಂಪ್ರದಾಯದಂತೆ ನಾವು ಗಡ್ಡ ಬಿಡುವುದಾಗಿ ಪಟ್ಟು ಹಿಡಿದಿದ್ದಾರೆ. ಈ ವಿಚಾರ ಸಂಬಂಧ ಜಮ್ಮು-ಕಾಶ್ಮೀರ ಸ್ಟೂಡೆಂಟ್ಸ್ ಅಸೋಸಿಯೇಷನ್‌ಗೆ ಮೊರೆ ಹೋಗಿದ್ದಾರೆ. ಪಿಎಂಎಸ್‌ಎಸ್ ಯೋಜನೆಯಡಿ ಜಮ್ಮು-ಕಾಶ್ಮೀರದಿಂದ ಹೊಳೆನರಸೀಪುರಕ್ಕೆ ವ್ಯಾಸಂಗಕ್ಕಾಗಿ ಬಂದಿರುವ ಯುವಕರು ಕಾಲೇಜು ಪ್ರಾಂಶುಪಾಲರ ಮೌಖಿಕ ಆದೇಶಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

    ಗಡ್ಡ ಬೋಳಿಸಿಕೊಂಡು ಕಾಲೇಜು ಚಟುವಟಿಕೆಗಳಲ್ಲಿ ಭಾಗವಹಿಸಲು ಸೂಚಿಸಲಾಗಿದೆ. ನಮ್ಮ ಸಂಪ್ರದಾಯದಂತೆ ಗಡ್ಡ ಬಿಡುವುದು ನಮ್ಮ ಹಕ್ಕು. ಈ ಕ್ರಮ ನಮ್ಮ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಯವಂತೆ ಒತ್ತಾಯಿಸಿ ಎಕ್ಸ್ನಲ್ಲೂ ವಿದ್ಯಾರ್ಥಿಗಳು ಪೋಸ್ಟ್ ಮಾಡಿದ್ದಾರೆ.

    ಪ್ರಕರಣ ಬೇರೆ ಹಂತಕ್ಕೆ ಹೋಗಬಾರದೆಂದು ಎಚ್ಚೆತ್ತ ಪ್ರಾಂಶುಪಾಲರು ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ವಿವಾದ ಬಗೆಹರಿಸಲಾಗಿದೆ ಎಂದು ಸಂಧಾನ ಮಾತುಕತೆಯಲ್ಲಿ ತಿಳಿಸಿದ್ದಾರೆ.

    ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಉಮರ್ ಮಾತನಾಡಿ, ನಮಗೆ ಗಡ್ಡ ತೆಗೆಯುವಂತೆ ಪ್ರಾಂಶುಪಾಲರು ಸೂಚಿಸಿದರು. ಅಲ್ಲದೇ ಶಿಸ್ತು ಕಾಪಾಡಿ, ಸಮವಸ್ತ್ರ ಧರಿಸಿ ಬರುವಂತೆ ಸೂಚನೆ ನೀಡಿದರು. ಇದು ಸೂಕ್ಷ್ಮವಾದ ವಿಚಾರವಾಗಿತ್ತು. ನಾವು ವಿದ್ಯಾಭ್ಯಾಸಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ನಾವು ಕೊಳಕು ಬಟ್ಟೆ ಹಾಕಿಲ್ಲ. ನಮ್ಮ ರೂಂಗಳನ್ನು ಪರಿಶೀಲಿಸಿ, ಎಲ್ಲರಂತೆ ನಾವು ಶಿಸ್ತಿನಿಂದ ಕಾಲೇಜಿಗೆ ಬರುತ್ತಿದ್ದೇವೆ. ನಾವು ಟ್ರಿಂ ಮಾಡಿಕೊಂಡೇ ಕಾಲೇಜಿಗೆ ಬರುತ್ತಿದ್ದೇವೆ. ಪ್ರಾಂಶುಪಾಲರು ನಮ್ಮ ಜೊತೆ ಮಾತನಾಡಿದ್ದಾರೆ. ಎಲ್ಲಾ ಸಮಸ್ಯೆ ಬಗೆಹರಿದಿದೆ, ಇದನ್ನು ದೊಡ್ಡ ವಿಷಯ ಮಾಡಬೇಡಿ. ನಾವು ಜಮ್ಮು ಕಾಶ್ಮೀರ ಸ್ಟೂಡೆಂಟ್ ಅಸೋಸಿಯೇಷನ್ ಜೊತೆಯೂ ಮಾತನಾಡಿದ್ದೇವೆ. ನಾವು ಇಲ್ಲಿ ಸುರಕ್ಷಿತವಾಗಿ ಇದ್ದೇವೆ. ಮುಂದೆ ಈ ರೀತಿ ಆಗುವುದಿಲ್ಲ. ಆ ರೀತಿ ಮತ್ತೆ ನಿಮ್ಮನ್ನು ಸಂಪರ್ಕ ಮಾಡುತ್ತೇವೆ ಎಂದು ಹೇಳಿದ್ದೇವೆ. ಯಾವುದೇ ವಿವಾದ ಇಲ್ಲ, ಬಗೆಹರಿದಿದೆ ಎಂದು ತಿಳಿಸಿದ್ದಾರೆ.

  • ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ

    ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ

    ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

    ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ 82 ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ: ಚಲುವರಾಯಸ್ವಾಮಿ

    ಈ ಪ್ರಕರಣದಲ್ಲಿ ಮಾಜಿ ಸಂಸದ ಎಸ್‌ಐಟಿ ಬಂಧನದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಹೊಳೆನರಸೀಪುರ, ಸಿಐಡಿಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

    ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರೂ ಆರೋಪಿಗಳಾಗಿರುವ ಪ್ರಕರಣವಿದು. ಈಗಾಗಲೇ ಹೆಚ್.ಡಿ.ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಮೊದಲು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿತ್ತು. ನಂತರ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಇದನ್ನೂ ಓದಿ: ಹಾಲಿನ ಪ್ಯಾಕೇಟ್‌ನಲ್ಲಿ ಹೆಚ್ಚಳ ಆಗಿರೋ 50ml ಹಾಲನ್ನು ಗ್ರಾಹಕರು ಖರೀದಿ ಮಾಡಲೇಬೇಕು: ಸಿಎಂ