Tag: ಹೊಸದುರ್ಗ

  • ಚಿತ್ರದುರ್ಗ | ಬಾತ್‌ರೂಮಲ್ಲಿ ವ್ಯಕ್ತಿಯ ಬರ್ಬರ ಹತ್ಯೆ – 7 ಆರೋಪಿಗಳ ಬಂಧನ

    ಚಿತ್ರದುರ್ಗ | ಬಾತ್‌ರೂಮಲ್ಲಿ ವ್ಯಕ್ತಿಯ ಬರ್ಬರ ಹತ್ಯೆ – 7 ಆರೋಪಿಗಳ ಬಂಧನ

    ಚಿತ್ರದುರ್ಗ: ಬಾತ್‌ರೂಮಲ್ಲಿ ನಡೆದಿದ್ದ ರಾಜೇಂದ್ರ ಶ್ರೀನಿವಾಸ್ (30) ಕೊಲೆ ಕೇಸನ್ನು ಭೇದಿಸುವಲ್ಲಿ ಹೊಸದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.

    ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಹುಣವಿನಡು ಗ್ರಾಮದಲ್ಲಿ ಬಾತ್‌ರೂಮಲ್ಲಿ ಸ್ನಾನ ಮಾಡುತ್ತಿದ್ದ ರಾಜೇಂದ್ರನನ್ನು ಬರ್ಬರವಾಗಿ ಕೊಂದು, ಆ ರಕ್ತಸಿಕ್ತ ಫೋಟೊವನ್ನು ಇನ್ಸ್ಟಾದಲ್ಲಿ ಹಾಕಿ ವಿಕೃತಿ ಮೆರೆದಿದ್ದ. ಹೊಳಲ್ಕೆರೆಯ ಸಾಗರ್, ಸಹೋದರ ಅಭಿಷೇಕ್ ಸೇರಿದಂತೆ ಸಂಬಂಧಿಕರಾದ ಕಿರಣ್ ಕುಮಾರ್, ಕೃಷ್ಣಮೂರ್ತಿ ಹಾಗೂ ಕೊಲೆಗೆ ಸಹಕರಿಸಿದ ಸಂಜು, ಕರಿಯಪ್ಪ, ಯಶವಂತ್ ಸೇರಿ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ

    ಅಲ್ಲದೇ ಈ ಕೃತ್ಯಕ್ಕೆ ಬಳಸಿದ ಸ್ಕೂಟಿ, ಎರ್ಟಿಗಾ ಕಾರು, ಎರಡು ಮಚ್ಚುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕೊಲೆ ಕೇಸನ್ನು 24 ಗಂಟೆಯೊಳಗೆ ಭೇದಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು, ಹೊಳಲ್ಕೆರೆ ಮೂಲದ ಕಿರಣಾ ಜೊತೆ ರಾಜೇಂದ್ರ ಲಿವಿಂಗ್ ರಿಲೇಷನ್‌ನಲ್ಲಿದ್ದು, ಕೆಲ ತಿಂಗಳ ಬಳಿಕ ಭಿನ್ನಾಭಿಪ್ರಾಯದಿಂದ ರಾಜೇಂದ್ರ ಹಾಗೂ ಕಿರಣಾ ದೂರವಾಗಿದ್ದರು. ಹೀಗಾಗಿ ದೂರಾದ ಬಳಿಕವೂ ಕಿರಣಾಗೆ ರಾಜೇಂದ್ರ ಕರೆ ಮಾಡಿ, ಕಿರುಕುಳ ನೀಡುತ್ತಿದ್ದ. ಹೀಗಾಗಿ ಕಿರಣಾ ಸಹೋದರ ಸಾಗರ್ ಮತ್ತು ಅಭಿಷೇಕ್ ಒಮ್ಮೆ ರಾಜೇಂದ್ರಗೆ ಕರೆ ಮಾಡಿ ಎಚ್ಚರಿಸಿದ್ದು, ಕಿರಣಾಳನ್ನು ಬಳಸಿಕೊಂಡು ಮೋಸ ಮಾಡಿದ ಎಂಬ ಆಕ್ರೋಶದಿಂದ ಬರ್ಬರವಾಗಿ ಕೊಲೆಗೈದಿದ್ದಾರೆ. ಕೊಲೆ ಬಳಿಕ ಇನ್ಸ್ಟಾಗ್ರಾಮ್‌ನಲ್ಲಿ ಆರೋಪಿಯಾದ ಸಾಗರ್ ಸ್ಟೇಟಸ್ ಹಾಕಿದ್ದು, ಕೊಲೆಯಾದ ಶವದ ಫೋಟೋ ಶೇರ್ ಮಾಡಿದ್ದನ್ನು ಪ್ರಕರಣದ ಸಾಕ್ಷಿಯಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ | ಕುಡಿದು ಅಂಬುಲೆನ್ಸ್ ಚಾಲನೆ – ಚಾಲಕನಿಗೆ 13,000 ದಂಡ!

  • ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ

    ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ

    ಚಿತ್ರದುರ್ಗ: ಬಾತ್‌ರೂಮಲ್ಲೇ (Bathroom) ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಸದುರ್ಗ (Hosadurga) ತಾಲೂಕಿನ ಹುಣುವಿನಡು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರಾಜೇಂದ್ರ ಶ್ರೀನಿವಾಸ್ (30) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಬಾತ್‌ರೂಮಲ್ಲಿ ಸ್ನಾನ ಮಾಡುವ ವೇಳೆ ಮನೆಗೆ ನುಗ್ಗಿರುವ ಮೂವರ ಗುಂಪೊಂದು ಮಾರಕಾಸ್ತ್ರಗಳಿಂದ ರಾಜೇಂದ್ರನನ್ನು ಕೊಚ್ಚಿ ಕೊಲೆಗೈದು ರಕ್ತದ ಕೋಡಿ ಹರಿಸಿದ್ದಾರೆ. ಈ ಸಂಬಂಧ ರಾಜೇಂದ್ರ ಶ್ರೀನಿವಾಸನ ತಾಯಿ ಸುಜಾತಾ ಹೊಸದುರ್ಗ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ದ ಮಾತ್ರಕ್ಕೆ ವಿನಾಯ್ತಿ ಇಲ್ಲ: ಪತ್ನಿ ಕೊಂದಿದ್ದ ಕಮಾಂಡೋಗೆ ಸುಪ್ರೀಂ ತರಾಟೆ

    ರಾಜೇಂದ್ರ ಕೆಲ ತಿಂಗಳ ಹಿಂದೆ ಕಿರಣಾ ಎಂಬ ಮಹಿಳೆ ಜೊತೆ ಮದುವೆಯಾಗಿದ್ದ. ಈ ವಿಚಾರದಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು. ಆದರೆ ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಜೇಂದ್ರನ ಮೇಲೆ ದಾಳಿ ನಡೆಸಿದ ಕಿರಣಾಳ ಸಹೋದರ ಸಾಗರ್ ಮತ್ತು ಇಬ್ಬರು ಈ ಕೊಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ – ಪ್ರತಿ ಕ್ವಿಂಟಲ್‌ಗೆ 1,616 ರೂ. ದರ ನಿಗದಿ

    ಮನಸೋ ಇಚ್ಛೆ ಮಾರಕಾಸ್ತ್ರದಿಂದ ಹೊಡೆದು ಕೊಲೆಗೈದು ಆರೋಪಿಗಳು ಪರಾರಿಯಾಗಿದ್ದಾರೆ. ಸಹೋದರಿ ಕಿರಣಾಳ ಸುದ್ದಿಗೆ ಬರಬೇಡ ಎಂದರೂ ಬಿಡುತ್ತಿಲ್ಲ ಎಂಬ ಆಕ್ರೋಶದಿಂದ ಈ ಕೊಲೆಗೈದಿದ್ದಾರೆಂದು ಆರೋಪಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯನವರೇ ತಪ್ಪಿಯೂ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ, ಮಾರಿಕೊಂಡು ಹೋಗ್ತಾರೆ – ಯತ್ನಾಳ್

    ಕಿರಣಾ ಈ ಮೊದಲು ಬೇರೊಬ್ಬನ ಜೊತೆ ಮದುವೆ ಆಗಿದ್ದು, ಬಳಿಕ ಕಿರಣಾ ಹಾಗೂ ರಾಜೇಂದ್ರ ಮದುವೆಯಾಗಿದ್ದ ಹಿನ್ನೆಲೆ ಸಾಗರ್ ದ್ವೇಷ ಸಾಧಿಸುತ್ತಿದ್ದ. ಈ ಕೊಲೆಗೆ ಕಿರಣಾಳ ಸೋದರಮಾವ ಕೃಷ್ಣಮೂರ್ತಿ ಕೂಡ ಪ್ರಚೋದಿಸಿದ್ದು, ಸಾಗರ್ ಹಾಗೂ ಇಬ್ಬರು ಅಪರಿಚಿತರಿಂದ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪಿಗಳನ್ನು ಬಂಧಿಸಿ ರಾಜೇಂದ್ರ ಶ್ರೀನಿವಾಸನ ಸಾವಿಗೆ ನ್ಯಾಯ ಒದಗಿಸುವಂತೆ ಮೃತನ ತಾಯಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರೋಡ್ ರೇಜ್ ಕೇಸ್ – ಮಾಜಿ ಎಂಪಿ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್, ಡ್ರೈವರ್‌ಗೆ ಜಾಮೀನು

    ಇನ್ಸ್ಟಾದಲ್ಲಿ ಜಾಲಿ ಜಾಲಿ ಎಂದು ಬರೆದು ವಿಕೃತಿ:
    ಇನ್ನು ಕೊಲೆಯ ಬೆನ್ನಲ್ಲೇ ರಾಜೇಂದ್ರ ಶ್ರೀನಿವಾಸ್ ಕೊಲೆಯ ಆರೋಪಿ ಸಾಗರ್ ತನ್ನ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕೊಲೆಯ ರಕ್ತಸಿಕ್ತ ಫೋಟೊವನ್ನು ಹಾಕಿಕೊಂಡು ವಿಕೃತಿ ಮೆರೆದಿದ್ದಾನೆ. ಕೊಲೆಯಾದ ರಾಜೇಂದ್ರ ಶವದ ಫೋಟೋ ಮೇಲೆ ಜಾಲಿ ಜಾಲಿ ಎಂದು ಬರೆದು ವಿಕೃತಿ ತೋರಿದ್ದು, ಆರೋಪಿ ಸಾಗರ್ ಹಾಗೂ ಮತ್ತೋರ್ವ ಆರೋಪಿ ಮಾರಕಾಸ್ತ್ರ ಹಿಡಿದ ಫೋಟೋ ಶೇರ್ ಮಾಡಿದ್ದಾನೆ. ಈ ಸಂಬಂಧ ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತ – ವಿದ್ಯಾರ್ಥಿನಿ ಸಾವು

  • Chitradurga | ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥ

    Chitradurga | ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥ

    ಚಿತ್ರದುರ್ಗ: ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ (Food Poison) ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಸದುರ್ಗ (Hosadurga) ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸೋಮವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಹಳ್ಳಿ ಗ್ರಾಮದ ಪ್ರಭುಲಿಂಗಪ್ಪ ಪುತ್ರನ ವಿವಾಹ ಸಂಭ್ರಮದಲ್ಲಿ ಘಟನೆ ನಡೆದಿದೆ. ಗವಿರಂಗಾಪುರ ಬೆಟ್ಟದಲ್ಲಿ ಭಾನುವಾರ ಮದುವೆ ನಡೆದಿತ್ತು. ಸೋಮವಾರ ಬೆಳಗ್ಗೆಯಿಂದ ಮದುವೆ ಹಾಜರಾದವರಿಗೆ ರಾತ್ರಿಯಿಂದಲೇ ಹೊಟ್ಟೆನೋವು ಶುರುವಾಗಿದೆ. ಬೆಳಗ್ಗೆ ವಾಂತಿಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಪಾಕ್‌ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ವ್ಯವಹಾರವೇ ಸ್ಥಗಿತ

    ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳು ದಾಖಲಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಡ್‌ಗಳು ಭರ್ತಿ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿಕಿತ್ಸಾ ಶಿಬಿರ ಆಯೋಜನೆ ಮಾಡಲಾಗಿದೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸೈನಿಕರಿಗೆ ಮೋದಿ ಆತ್ಮಸ್ಥೈರ್ಯ, ಉಗ್ರರಿಗೆ ಇದು ಎಚ್ಚರಿಕೆ: ಬಿ.ವೈ ವಿಜಯೇಂದ್ರ

  • ಲವ್ ಜಿಹಾದ್ ಆರೋಪ – ಪೋಕ್ಸೋ ಕೇಸ್‌ನಲ್ಲಿ ಯುವಕ ಅರೆಸ್ಟ್‌

    ಲವ್ ಜಿಹಾದ್ ಆರೋಪ – ಪೋಕ್ಸೋ ಕೇಸ್‌ನಲ್ಲಿ ಯುವಕ ಅರೆಸ್ಟ್‌

    ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯನ್ನ ಅನ್ಯಕೋಮಿನ ಯುವಕ ಪ್ರೀತಿ ಹೆಸರಲ್ಲಿ ಅಪಹರಣ ಮಾಡಿದ್ದಾನೆಂದು ಬಾಲಕಿ ತಂದೆ ದೂರು ನೀಡಿರುವ ಘಟನೆ ಜಿಲ್ಲೆಯ ಅಜ್ಜಂಪುರ (Ajjampura) ತಾಲೂಕಿನಲ್ಲಿ ನಡೆದಿದೆ.

    ಅಜ್ಜಂಪುರ ತಾಲೂಕಿನ ದಂದೂರು ಮೂಲದ ಅಪ್ರಾಪ್ತ ಬಾಲಕಿ ಚಿತ್ರದುರ್ಗ (Chitradurga) ಜಿಲ್ಲೆಯ ಹೊಸದುರ್ಗ (Hosadurga) ತಾಲೂಕಿನಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದಳು. ಈ ವೇಳೆ ಆಕೆ ಅಲ್ಲಿ ಅಫ್ರೋಜ್ ಎಂಬ ಯುವಕನ ಜೊತೆ ಓಡಾಡುತ್ತಿದ್ದಾಳೆಂದು ಬಾಲಕಿ ಹೆತ್ತವರಿಗೆ ತಿಳಿದುಬಂದಿದೆ. ಇದನ್ನೂ ಓದಿ: ಹೈಕಮಾಂಡ್ ನಿರ್ಣಯ ನಾವೆಲ್ಲ ಪಾಲಿಸಬೇಕು: ಬಸವರಾಜ ಬೊಮ್ಮಾಯಿ

    ಹೆತ್ತವರು ಆಕೆಯನ್ನ ಕಾಲೇಜು ಬಿಡಿಸಿ ಮನೆಗೆ ಕರೆತಂದು ಸಂಬಂಧಿಕರ ಮನೆಗೆ ಬಿಟ್ಟಿದ್ದರು. ಕಳೆದ 3 ತಿಂಗಳಿಂದ ಬಾಲಕಿ ಸಂಬಂಧಿಕರ ಮನೆಯಲ್ಲೇ ಇದ್ದಳು. ಆದರೆ, ಬಾಲಕಿ ಇದ್ದ ಮನೆಯವರ ಸಂಬಂಧಿಗಳು ಸಾವನ್ನಪ್ಪಿದ ಹಿನ್ನೆಲೆ ಮನೆಯಲ್ಲಿ ಆಕೆ ಜೊತೆ ಬೇರೊಬ್ಬರನ್ನ ಬಿಟ್ಟು ದೋರನಾಳು ಗ್ರಾಮಕ್ಕೆ ಹೋಗಿದ್ದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಮಂಗಳೂರಿನ ಸಾಗರ್ ದೇವಾಡಿಗಗೆ FIP MEDAL

    ಈ ವೇಳೆ ಅಪ್ರಾಪ್ತ ಬಾಲಕಿಯನ್ನ ಪ್ರೀತಿ ಹೆಸರಲ್ಲಿ ಅಫ್ರೋಜ್ ಎಂಬ ಯುವಕ ಅಪಹರಣ (Kidnap) ಮಾಡಿದ್ದಾನೆಂದು ಆರೋಪಿಸಿ ಬಾಲಕಿಯ ಹೆತ್ತವರು ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿ ಅಫ್ರೋಜ್‌ನನ್ನು ಬಂಧಿಸಿದ್ದು, ಆತನನ್ನು ಚಿಕ್ಕಮಗಳೂರು ಪೋಕ್ಸೋ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

  • ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ಗೆ ಮಾತೃವಿಯೋಗ

    ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ಗೆ ಮಾತೃವಿಯೋಗ

    ಚಿತ್ರದುರ್ಗ: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ (Goolihatti Shekar) ತಾಯಿ ಪುಟ್ಟಮ್ಮ ಇಂದು ಮುಂಜಾನೆ 5 ಗಂಟೆಗೆ ನಿಧನರಾಗಿದ್ದಾರೆ.

    ಹೊಸದುರ್ಗ (Hosadurga) ಕ್ಷೇತ್ರದ ಮಾಜಿಸಚಿವ ಗೂಳಿಹಟ್ಟಿ ಶೇಖರ್ ತಾಯಿ ಬೋವಿಹಟ್ಟಿಯ ಪುಟ್ಟಮ್ಮ (79) ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಈ ಹಿಂದೆ ಪುಟ್ಟಮ್ಮ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರು. ಬಳಿಕ ಮಗನ ಒತ್ತಾಯಕ್ಕೆ ಮಣಿದು ಹಿಂದೂ ಧರ್ಮಕ್ಕೆ ಮರಳಿದ್ದರು. ಇದನ್ನೂ ಓದಿ: ಬಿಹಾರ ಬಜೆಟ್ ಕನ್ನಡಿಗರಿಗೆ ಅನ್ಯಾಯ ಮಾಡಿದೆ: ಪ್ರಿಯಾಂಕ್ ಖರ್ಗೆ

    ಇಂದು ಸಂಜೆ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಪುತ್ರ ಗೂಳಿಹಟ್ಟಿ ಶೇಖರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಡುಪಿ: ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

  • ಚಿತ್ರದುರ್ಗದಲ್ಲಿ ಬೈಕ್‌ಗೆ ಕಾರು ಡಿಕ್ಕಿ – ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

    ಚಿತ್ರದುರ್ಗದಲ್ಲಿ ಬೈಕ್‌ಗೆ ಕಾರು ಡಿಕ್ಕಿ – ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

    ಚಿತ್ರದುರ್ಗ: ಬೈಕ್‌ಗೆ (Bike) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಸದುರ್ಗ (Hosadurga) ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ನಡೆದಿದೆ.

    ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದ ಪ್ರವೀಣ್ (26) ಹಾಗೂ ಹೊಸದುರ್ಗ ತಾಲೂಕಿನ ಕಡಿವಾಣಕಟ್ಟೆ ಗ್ರಾಮದ ಯೋಗೀಶ್ (27) ಮೃತ ದುರ್ದೈವಿಗಳು. ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಾಘಾತ ಸಂಭವಿಸಿದೆ. ಇದನ್ನೂ ಓದಿ: ಮಿದುಳು ತಿನ್ನುವ ಅಮೀಬಾ ಸೋಂಕಿಗೆ ಪಾಕಿಸ್ತಾನದ ವ್ಯಕ್ತಿ ಬಲಿ

    ಶನಿವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ಮಾಜಿ ಪ್ರಿಯಕರನೊಂದಿಗೆ ವಿವಾಹಿತ ಯುವತಿ ಆತ್ಮಹತ್ಯೆ

  • ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ

    ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ

    ಚಿತ್ರದುರ್ಗ: ಕೊಬ್ಬರಿ ಗೋದಾಮುವೊಂದಕ್ಕೆ (Coconut Warehouse) ಆಕಸ್ಮಿಕ ಬೆಂಕಿ (Fire) ತಗುಲಿದ ಪರಿಣಾಮ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗದಲ್ಲಿ  (Chitradurga) ನಡೆದಿದೆ.

    ಚಿತ್ರದುರ್ಗ ಜಿಲ್ಲೆ ಹೊಸದುರ್ಗ (Hosadurga) ತಾಲೂಕಿನ ಚಿಕ್ಕಬ್ಯಾಲದಕೆರೆ (Chikkabyaladakere) ಗ್ರಾಮದಲ್ಲಿ ಘಟನೆ ನಡೆದಿದೆ. ಚಿಕ್ಕಬ್ಯಾಲದಕೆರೆ ಬಳಿಯ ತೋಟದಲ್ಲಿದ್ದ ಗೋದಾಮು ಉದ್ಯಮಿ ಜಗದೀಶ್ ಎಂಬವರಿಗೆ ಈ ಕೊಬ್ಬರಿ ಗೋದಾಮು ಸೇರಿದ್ದು, ಗ್ರಾಮದ ಹೊರವಲಯದಲ್ಲಿತ್ತು. ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ ಬಾಂಬ್‌ ಬೆದರಿಕೆ – ಆಸಾಮಿ ಅಂದರ್‌!

    ಇದೀಗ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪಿಐ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಮಂಗಳೂರಿನ ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್‌ ಸ್ಫೋಟಕ್ಕೆ ಕಾರಣ ಏನು? – ತನಿಖೆಯಲ್ಲಿ ರಹಸ್ಯ ಬಯಲು

  • ಬಿಜೆಪಿ, ಪಕ್ಷೇತರ ಅಭ್ಯರ್ಥಿ ಬೆಂಬಲಿಗರ ನಡುವೆ ಮಾರಾಮಾರಿ – ಹಲ್ಲೆಯಿಂದ ತಪ್ಪಿಸಿಕೊಳ್ಳಲು ಮನೆಯ ಮೇಲ್ಛಾವಣೆ ಏರಿದ್ರು!

    ಬಿಜೆಪಿ, ಪಕ್ಷೇತರ ಅಭ್ಯರ್ಥಿ ಬೆಂಬಲಿಗರ ನಡುವೆ ಮಾರಾಮಾರಿ – ಹಲ್ಲೆಯಿಂದ ತಪ್ಪಿಸಿಕೊಳ್ಳಲು ಮನೆಯ ಮೇಲ್ಛಾವಣೆ ಏರಿದ್ರು!

    ಚಿತ್ರದುರ್ಗ: ರಾಜ್ಯದಲ್ಲಿ ಚುನಾವಣೆ (Election) ಸಮೀಪಿಸುತ್ತಿದ್ದಂತೆ ರಾಜಕೀಯ ತಿಕ್ಕಾಟ ಹೆಚ್ಚಾಗುತ್ತಿದ್ದು, ಎರಡು ಪಕ್ಷದ ಅಭ್ಯರ್ಥಿಗಳ ಬೆಂಬಲಿಗರ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಹೊಸದುರ್ಗ (Hosadurga) ತಾಲೂಕಿನ ಯಾದಗಟ್ಟ ಗ್ರಾಮದಲ್ಲಿ ನಡೆದಿದೆ.

    ಬಿಜೆಪಿ (BJP) ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ (Gulihatty Shekhar) ಬೆಂಬಲಿಗರಾಗಿರುವ ಗಿರೀಶ್ ಹಾಗೂ ಬಿಜೆಪಿ ಅಭ್ಯರ್ಥಿ ಎಸ್.ಲಿಂಗಮೂರ್ತಿಯ ಬೆಂಬಲಿಗರಾದ ಓಂಕಾರಪ್ಪ ಗುಂಪಿನ ನಡುವೆ ಗಲಾಟೆ ನಡೆದಿದೆ. ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ದಾಳಿ – ಜಮೀನಿನಲ್ಲಿ ಅಡಗಿಸಿಟ್ಟಿದ್ದ 70 ಲಕ್ಷ ಮೌಲ್ಯದ ಸಿಹೆಚ್ ಪೌಡರ್ ಜಪ್ತಿ

    ಗೂಳಿಹಟ್ಟಿ ಶೇಖರ್ ನಾಮಪತ್ರ ಸಲ್ಲಿಕೆಯ ವೇಳೆ ರೋಡ್ ಶೋಗೆ ಯದಗಟ್ಟ ಗ್ರಾಮದ ಲಿಂಗಾಯತ (Lingayat) ಸಮುದಾಯದ ಯುವಕರನ್ನು ಕರೆತಂದಿದ್ದರು. ಇದಕ್ಕೆ ಆಕ್ರೋಶಗೊಂಡಿದ್ದ ಗ್ರಾಮದ ಮುಖಂಡ ಓಂಕಾರಪ್ಪನ ಗುಂಪು, ಗಿರೀಶ್ ಮನೆ ಬಳಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಕೆಲವರು ಮನೆಯ ಮೇಲ್ಛಾವಣೆ ಏರಿದ್ದರು. ಆದರೂ ಸಹ ಅವರನ್ನು ಬಿಡದೇ ಅಟ್ಟಾಡಿಸಿಕೊಂಡು ದೊಣ್ಣೆಯಲ್ಲಿ ಬಡಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಗುಂಪು ಘರ್ಷಣೆ ವೇಳೆ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆಯಲ್ಲಿ ಗ್ರಾಮದ ಕೆಲ ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗ್ರಾಮ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಫೈರಿಂಗ್

  • ಪತಿ ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಅಸಹಜ ಸಾವು!

    ಪತಿ ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಅಸಹಜ ಸಾವು!

    ಚಿತ್ರದುರ್ಗ: ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಅಸಹಜವಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

    ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಯಾಗಿದ್ದ ಮೃತ ದಿವ್ಯಾ(22) 3 ತಿಂಗಳ ಹಿಂದೆ ಪತಿಯನ್ನು ಬಿಟ್ಟು ಪ್ರಿಯಕರ ಮಂಜುನಾಥ್ ಜೊತೆ ತೆರಳಿದ್ದಳು. ಈಕೆ ಪ್ರಿಯಕರನ ಜೊತೆ ಹಿರಿಯೂರಲ್ಲಿ ವಾಸವಾಗಿದ್ದಳು. ಕಳೆದ ಕೆಲವು ದಿನಗಳಿಂದ ದಿವ್ಯಾಗೆ ಜ್ವರ ಬಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

    ದಿವ್ಯಾ ಮೈ ಮೇಲೆ ಬರೆ ಮತ್ತು ಪರಚಿದ ಗಾಯಗಳಾಗಿದ್ದು, ಈಕೆ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೋಷಕರ ಮಂಜುನಾಥ್ ಮೇಲೆ ಆರೋಪ ಮಾಡುತ್ತಿದ್ದಾರೆ. ಇದೇ ವೇಳೆ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ಕೇಳಿದರೆ, ದಿವ್ಯಾ ಸಾವಿನಿಂದ ನೊಂದು ವಿಷ ಸೇವಿಸಿದ್ದೇನೆ ಎಂದಿದ್ದಾನೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ನಾನು ಕಾಂಗ್ರೆಸ್ ಸೇರಲ್ಲ, ಬಿಜೆಪಿ ಬಿಡಲ್ಲ: ಗೂಳಿಹಟ್ಟಿ ಸ್ಪಷ್ಟನೆ

    ನಾನು ಕಾಂಗ್ರೆಸ್ ಸೇರಲ್ಲ, ಬಿಜೆಪಿ ಬಿಡಲ್ಲ: ಗೂಳಿಹಟ್ಟಿ ಸ್ಪಷ್ಟನೆ

    ಚಿತ್ರದುರ್ಗ: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವ ಮಾತೇ ಇಲ್ಲ. ಅಲ್ಲದೆ ಇತ್ತ ಭಾರತೀಯ ಜನತಾ ಪಕ್ಷ(ಬಿಜೆಪಿ)ಯನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟಪಡಿಸಿದ್ದಾರೆ.

    ಕಾಂಗ್ರೆಸ್‍ಗೆ ಸೇರಲಿದ್ದಾರೆಂಬ ವಿಚಾರದ ಕುರಿತು ಶಾಸಕರು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಕ್ಷೇತ್ರದ ಜನರಿಗೆ ಸ್ಪಷ್ಟನೆ ನೀಡಿದ್ದಾರೆ. ಈ ಎಲ್ಲಾ ವದಂತಿಗಳು ಸತ್ಯಕ್ಕೆ ದೂರವಾದದ್ದು. ನಾನು ಕಾಂಗ್ರೆಸ್ ಸೇರಲ್ಲ. ಬಿಜೆಪಿ ಬಿಡಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ ಹಲವು ಶಾಸಕರು ಬಿಜೆಪಿಗೆ ಬರ್ತಾರೆ: ಬಿಎಸ್‍ವೈ

    ನನ್ನ ರಾಜಕೀಯ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸುಳ್ಳುಸುದ್ದಿ ಹಬ್ಬಿಸಿ ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ ಎನ್ನುವುದು ಕೂಡ ಸುಳ್ಳು. ಇಂತಹ ಅಪಪ್ರಚಾರದಿಂದ ಕ್ಷೇತ್ರದ ಜನರ ಎದುರು, ಸರ್ಕಾರದ ಮಟ್ಟದಲ್ಲಿ ಮುಜುಗರವಾಗುತ್ತಿದೆ. ವಿರೋಧಿಗಳು ಹಬ್ಬಿಸುವ ಇಂಥ ಆಧಾರರಹಿತ ಸುದ್ದಿಗಳನ್ನು ದಯಮಾಡಿ ಪ್ರಕಟಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಆಪರೇಷನ್ ಪಾಲಿಟಿಕ್ಸ್ ಶುರು – ಬಿಜೆಪಿ, ಜೆಡಿಎಸ್ ಶಾಸಕರಿಗೆ ಡಿಕೆಶಿ ಗಾಳ..?

    2023ರ ಚುನಾವಣೆಗೆ ಕಾಂಗ್ರೆಸ್ ಈಗಿನಿಂದಲೇ ಗೇಮ್ ಪ್ಲಾನ್ ಶುರು ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸದ್ದಿಲ್ಲದೇ ಆಪರೇಷನ್ ಹಸ್ತ ಜಾರಿಯಲ್ಲಿದೆ. ಜೆಡಿಎಸ್, ಬಿಜೆಪಿ ಶಾಸಕರನ್ನು ಕಾಂಗ್ರೆಸ್ಸಿಗೆ ಸೆಳೆಯಲು ಕೈ ತಂತ್ರಗಾರಿಕೆ ಹೂಡಿದೆ ಎನ್ನಲಾಗುತ್ತಿದೆ. ಇತ್ತ ಆಪರೇಷನ್ ಕಾಂಗ್ರೆಸ್ ಬೆನ್ನಲ್ಲೇ ಯಡಿಯೂರಪ್ಪ ಅಲರ್ಟ್ ಆಗಿದ್ದಾರೆ. ಆಪರೇಷನ್ ಹಸ್ತದ ಮೂಲಕ ಬಿಜೆಪಿ ಶಾಸಕರನ್ನು ಸೆಳೆಯುತ್ತಿರುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮನ್ನು ಕಡೆಗಣಿಸಿದರೆ ಬಿಜೆಪಿಗೆ ದೊಡ್ಡ ನಷ್ಟ. ತಮ್ಮ ವಿಚಾರದಲ್ಲಿ ಹೈಕಮಾಂಡ್‍ನ ನಡೆ, ಧೋರಣೆಗಳು ಸಕಾಲಿಕ ಅಲ್ಲ ಎಂದು ಸಂದೇಶ ರವಾನಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ ಆಪರೇಷನ್ ಬಗ್ಗೆ ಯಡಿಯೂರಪ್ಪ ವಾರ್ನಿಂಗ್