Tag: ಹೊಸಪೇಟೆ

  • 5.20 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ – ಅಪಘಾತವೆಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್

    5.20 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ – ಅಪಘಾತವೆಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್

    – ವಾಹನ ಕೀಯಿಂದಲೇ ಖದೀಮರನ್ನು ಪತ್ತೆಹಚ್ಚಿದ ಪೊಲೀಸರು

    ಬಳ್ಳಾರಿ: 5.20 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿದ ಘಟನೆ ಹೊಸಪೇಟೆ (Hosapete) ಹೊರವಲಯದಲ್ಲಿ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.

    ಮೃತ ವ್ಯಕ್ತಿಯನ್ನು ಹೊಸಪೇಟೆಯ ಕೌಲ್ ಪೇಟೆಯ ನಿವಾಸಿ ಗಂಗಾಧರ ಹಾಗೂ ಬಂಧಿತರನ್ನು ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಅಜೇಯ, ರಿಯಾಜ್, ಯೋಗರಾಜ್ ಸಿಂಗ್, ನಕಲಿ ಹೆಂಡತಿ ಹುಲಿಗೆಮ್ಮ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಭಾರತ ಯಾರ ಮುಂದೆಯೂ ಅವಮಾನಕ್ಕೆ ಒಳಗಾಗಲು ರಷ್ಯಾ ಬಿಡಲ್ಲ: ಅಮೆರಿಕ ಟ್ಯಾರಿಫ್‌ಗೆ ಪುಟಿನ್‌ ಟಾಂಗ್‌

    ಖದೀಮರು ಮೃತ ಗಂಗಾಧರ್ ಹೆಸರಲ್ಲಿ 5.20 ಕೋಟಿ ರೂ. ಇನ್ಶೂರೆನ್ಸ್ ಮಾಡಿಸಿದ್ದರು. ಈ ಹಣವನ್ನು ಪಡೆಯುವ ಆಸೆಯಿಂದಾಗಿ ಕೊಲೆಗೆ ಸಂಚು ಹೂಡಿದ್ದರು. ಮೊದಲು ಕೊಲೆ ಮಾಡಿ, ಬಳಿಕ ಹೊಸಪೇಟೆ ಹೊರವಲಯದ ಜಂಬುನಾಥ ಹಳ್ಳಿಗೆ ಹೋಗುವ ರಸ್ತೆಗೆ ಕರೆತಂದಿದ್ದರು. ಸೆಕೆಂಡ್ ಹ್ಯಾಂಡ್ ಎಕ್ಸೆಲ್ ಬೈಕ್‌ನ್ನು ಬಾಡಿಗೆಗೆ ತಂದು, ಅದರ ಮೇಲೆ ಕೂರಿಸಿ ಕಾರಿನಿಂದ ಗುದ್ದಿಸಿದ್ದರು. ಅಪಘಾತವೆಂದು ಬಿಂಬಿಸುವಂತೆ ಮಾಡಿ, ಪರಾರಿಯಾಗಿದ್ದರು.

    ಈ ಕುರಿತು ಮೃತನ ಪತ್ನಿ ಹೊಸಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಪಘಾತವಾದರೆ ಬೈಕ್ ಬೀಗ ಗಾಡಿಯಲ್ಲಿರಬೇಕು ಇಲ್ಲ, ಕೆಳಗೆ ಬಿದ್ದಿರಬೇಕು. ಆದರೆ ಬೀಗ ಸೈಡ್ ಬ್ಯಾಗ್‌ನಲ್ಲಿದೆ ಎಂದು ಅನುಮಾನಗೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಕಾರು, ಬೈಕ್‌ನ್ನು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: 2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್‌ ಶೋಗಳ ಈ ಅದ್ಭುತ ಪಯಣ: ಜನತೆಗೆ ರಿಷಬ್‌ ಕೃತಜ್ಞತೆ

  • ಬೆಳ್ಳಂಬೆಳಗ್ಗೆ ಇಬ್ಬರು ಗಣಿ ಉದ್ಯಮಿಗಳಿಗೆ ಇ.ಡಿ ಶಾಕ್ – ಮನೆ, ಕಚೇರಿ, ಸ್ಟೀಲ್ ಅಂಗಡಿ ಮೇಲೆ ದಾಳಿ

    ಬೆಳ್ಳಂಬೆಳಗ್ಗೆ ಇಬ್ಬರು ಗಣಿ ಉದ್ಯಮಿಗಳಿಗೆ ಇ.ಡಿ ಶಾಕ್ – ಮನೆ, ಕಚೇರಿ, ಸ್ಟೀಲ್ ಅಂಗಡಿ ಮೇಲೆ ದಾಳಿ

    ಬಳ್ಳಾರಿ: ಬೆಳ್ಳಂಬೆಳಗ್ಗೆ ಇಬ್ಬರು ಗಣಿ ಉದ್ಯಮಿಗಳಿಗೆ (Mining Entrepreneur) ಇ.ಡಿ (ED) ಶಾಕ್ ಕೊಟ್ಟಿದೆ. ಉದ್ಯಮಿಗಳ ಮನೆ, ಕಚೇರಿ ಹಾಗೂ ಸ್ಟೀಲ್ ಅಂಗಡಿ ಸೇರಿದಂತೆ ಏಕಕಾಲದಲ್ಲಿ ಮೂರು ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆಯ (Hospet) ಗಣಿ ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್ ಹಾಗೂ ಕಾಂಗ್ರೆಸ್ ನಗರಸಭೆ ಸದಸ್ಯ ಕಾರದಪುಡಿ ಮಹೇಶಗೆ ಸೇರಿದ ಮನೆ, ಅಂಗಡಿ, ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ವಸ್ತಿಕ್ ನಾಗರಾಜ್‌ಗೆ ಸೇರಿದ ಹೊಸಪೇಟೆಯ ಎಂಜೆ ನಗರದ ಮನೆ, ಎಪಿಎಂಸಿಯ ಬಳಿ ಇರೋ ಸ್ಟೀಲ್ ಅಂಗಡಿ ಮತ್ತು ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಇದನ್ನೂ ಓದಿ: 34 ವರ್ಷಗಳ ಬಳಿಕ ಸಹಪಾಠಿಗಳ ಪುನರ್ ಮಿಲನ – ಸವಿನೆನಪುಗಳ ಮೆಲುಕು!

    ಮತ್ತೊಂದೆಡೆ 20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯರಾಗಿರುವ ಕಾರದಪುಡಿ ಮಹೇಶ್ ಮನೆಯಲ್ಲೂ ಶೋಧ ನಡೆಸಲಾಗುತ್ತಿದೆ. ಇಬ್ಬರೂ ಗಣಿ ಉದ್ಯಮಿಗಳ ಮನೆಯಲ್ಲಿ ಇ.ಡಿ ಅಧಿಕಾರಿಗಳು ತೀವ್ರಶೋಧ ನಡೆಸುತ್ತಿದ್ದಾರೆ. ಬೆಲೆಕೇರಿ ಅದಿರು ಅಕ್ರಮ ಸಾಗಣೆ ಪ್ರಕರಣದಲ್ಲಿ ಇಬ್ಬರೂ ಗಣಿ ಉದ್ಯಮಿಗಳು ಭಾಗಿಯಾಗಿರುವ ಆರೋಪ ಹೊತ್ತಿದ್ದಾರೆ. ಇದನ್ನೂ ಓದಿ: ಎಸ್‌ಐಟಿ ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಎಲ್ಲರೂ ಕಾಪಾಡಬೇಕು: ಯು.ಟಿ. ಖಾದರ್

  • ಹೊಸಪೇಟೆಯ ಧರ್ಮದ ಗುಡ್ಡದಲ್ಲಿ ಚಿರತೆ ಪತ್ತೆ

    ಹೊಸಪೇಟೆಯ ಧರ್ಮದ ಗುಡ್ಡದಲ್ಲಿ ಚಿರತೆ ಪತ್ತೆ

    ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆ (Hospet) ತಾಲೂಕಿನ ಧರ್ಮದ ಗುಡ್ಡದಲ್ಲಿ (Dharmada Gudda) ಚಿರತೆ ಪತ್ತೆಯಾಗಿದೆ.

    ಧರ್ಮದ ಗುಡ್ಡದ ಕೆಳಗಡೆ ಯುವಕರ ಓಡಾಡುತ್ತಿದ್ದಾಗ ಮೇಲೆ ಚಿರತೆ (Leopard) ಕಾಣಿಸಿಕೊಂಡಿದೆ. ಚಿರತೆ ಕಂಡು ಯುವಕರು ಗಾಬರಿಯಾಗಿದ್ದಾರೆ.  ಇದನ್ನೂ ಓದಿ: ವಿಷ್ಣುವರ್ಧನ್ ಸಮಾಧಿ ನೆಲಸಮ ಅಭಿಮಾನಿಗಳಿಂದ ತೀವ್ರ ಆಕ್ರೋಶ

    ಬಸವನದುರ್ಗ- ನಾಗೇನಹಳ್ಳಿ ಸೇರಿದಂತೆ ನಾನಾ ಗ್ರಾಮಗಳ ಭಕ್ತಾದಿಗಳು ಧರ್ಮದಗುಡ್ಡಕ್ಕೆ ಆಗಮಿಸುತ್ತಾರೆ. ಚಿರತೆ ಪ್ರತ್ಯಕ್ಷದಿಂದ ಧರ್ಮದ ಗುಡ್ಡಕ್ಕೆ ಬರುವ ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಚಿರತೆ ಓಟಾದ ದೃಶ್ಯಗಳು ಸ್ಥಳೀಯ ಯುವಕರ ಮೊಬೈಲಿನಲ್ಲಿ ಸೆರೆಯಾಗಿದೆ.

  • ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು

    ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು

    ಬಳ್ಳಾರಿ: ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದ ಆರ್.ದಾದಾಸಾಹೇಬ್(51) ಮೃತ ಪೊಲೀಸ್ ಮುಖ್ಯ ಪೇದೆ. ಇದನ್ನೂ ಓದಿ: ಜಪಾನ್‌ ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾದ ಭಾರತ

    ದಾದಾಸಾಹೇಬ್ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಶನಿವಾರ(ಮೇ 25) ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಮಲತಂದೆಯ ಮೃಗೀಯ ವರ್ತನೆ – ಕಟ್ಟಿಗೆಯಿಂದ ಹೊಡೆದು ಹತ್ಯೆ

    ಮೃತ ಪೊಲೀಸ್ ಪೇದೆಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಹೊಸಪೇಟೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಬಳಿ ದಾದಾಸಾಹೇಬ್ ಅವರ ಸಾವಿಗೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

  • ಸಾಧನಾ ಸಮಾವೇಶಕ್ಕೆ ಮಳೆಯ ಭೀತಿ

    ಸಾಧನಾ ಸಮಾವೇಶಕ್ಕೆ ಮಳೆಯ ಭೀತಿ

    ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ (Hospet) ನಡೆಯುತ್ತಿರುವ ಸಾಧನಾ ಸಮಾವೇಶಕ್ಕೆ (Sadhana Samavesha) ಮಳೆಯ ಭೀತಿ ಎದುರಾಗಿದೆ.

    ಇಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಹೊಸಪೇಟೆಯಲ್ಲಿ ಮೋಡ ಕವಿದ ವಾತಾವರಣ ಇದ್ದು ಮಳೆ (Rain) ಬರುವ ಸಾಧ್ಯತೆ ಹೆಚ್ಚಾಗಿದೆ. ಇದನ್ನೂ ಓದಿ: Belagavi | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಅಪ್ರಾಪ್ತ ಸೇರಿ ಇಬ್ಬರ ಬಂಧನ

     

    ಈಗಾಗಲೇ ಮೋಡ ಕವಿದಿದ್ದು, ಗುಡುಗು ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ಮಳೆ ಬರುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ವಿಜಯನಗರ ಜಿಲ್ಲೆಗೆ ಯಲ್ಲೋ ಅಲರ್ಟ್‌ ಜಾರಿ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್ – ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ ಕಳ್ಳ ಅರೆಸ್ಟ್

    ಜ್ಯದ ವಿವಿಧೆಡೆಯಿಂದ ಕಾರ್ಯಕ್ರಮಕ್ಕೆ ಜನರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ 1 ಲಕ್ಷ ಚಯರ್‌, ಬೃಹತ್ ಜರ್ಮನ್ ಟೆಂಟ್ ಹಾಕಲಾಗಿದೆ. ಹೀಗಾಗಿ ಮಳೆ ಬಂದರೂ ಕಾರ್ಯಕ್ರಮಕ್ಕೆ ತೊಂದರೆ ಇಲ್ಲ. ಆದರೆ ಊಟದ ವ್ಯವಸ್ಥೆ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.

  • ಬಸ್ಸಿನಲ್ಲಿ ಸಿಕ್ಕಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಾಪಸ್, ವ್ಯಕ್ತಿಗೆ ಸನ್ಮಾನ

    ಬಸ್ಸಿನಲ್ಲಿ ಸಿಕ್ಕಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಾಪಸ್, ವ್ಯಕ್ತಿಗೆ ಸನ್ಮಾನ

    ಬಳ್ಳಾರಿ: ಬಸ್ಸಿನಲ್ಲಿ (Bus) ಸಿಕ್ಕ ಲಕ್ಷಾಂತರ ಮೌಲ್ಯದ ಬಂಗಾರ, ಬೆಳ್ಳಿ ಸಾಮಾನು ಹಿಂದುರುಗಿಸಿ ವ್ಯಕ್ತಿಯೊಬ್ಬರು ಪ್ರಾಮಾಣಿಕತೆ ಮೆರೆದಿರುವ ಘಟನೆ ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆಯಲ್ಲಿ (Hospet) ಬೆಳಕಿಗೆ ಬಂದಿದೆ.

    ಹೊಸಪೇಟೆ ತಾಲೂಕಿನ ಮಲಪನಗುಡಿಯ ರಾಘವೇಂದ್ರ ಬಸ್‌ನಲ್ಲಿ ಸಿಕ್ಕಿದ್ದ ಬಂಗಾರ, ಬೆಳ್ಳಿ ಆಭರಣದ ವಸ್ತುಗಳನ್ನು ಹಿಂದುರಿಗಿಸಿ ಪ್ರಾಮಾಣಿಕತೆ ಮೆರೆದಾತ. 45 ಗ್ರಾಂ ಮೌಲ್ಯದ ಮೂರು ಬಂಗಾರದ ಚೈನ್, 5 ಗ್ರಾಂನ 1 ಜೊತೆ ಬಂಗಾರದ ಕಿವಿಯೋಲೆ, 10 ಗ್ರಾಂ ಮೂರು ಬಂಗಾರದ ಉಂಗುರ, 80 ಗ್ರಾಂ ಮೌಲ್ಯದ ಬೆಳ್ಳಿ ಕಡಗ, ದೇವಿಯ ಮೂರ್ತಿ ಬ್ಯಾಗ್ ನಲ್ಲಿತ್ತು.

    ಹೂವಿನ ಹಡಗಲಿಯ ಮುದುಕಪ್ಪ ಶೇಗಡಿ ಎನ್ನುವವರು ಹೂವಿನ ಹಡಗಲಿಯಿಂದ ಹೊಸಪೇಟೆಗೆ ಬಸ್ಸಿನಲ್ಲಿ ಮಗನ ಮನೆಗೆ ಬರುತ್ತಿದ್ದರು. ಹೊಸಪೇಟೆಯ ಚೆಕ್ ಪೋಸ್ಟ್ ಬಳಿ, ಬಸ್ ಇಳಿಯುವಾಗ ಮುದುಕಪ್ಪ ಬ್ಯಾಗ್ ಮರೆತು ಇಳಿದಿದ್ದಾರೆ. ಅದೇ ವೇಳೆ ಬಸ್ ನಲ್ಲಿ ಬಂದಿದ್ದ ಕೋರಿಯರ್ ತರಲು ರಾಘವೇಂದ್ರ ಬಂದಿದ್ದರು. ಇದನ್ನೂ ಓದಿ: ಹೆಚ್ಚು ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ವಿಷ ಸೇವಿಸಿ ಯುವತಿ ಆತ್ಮಹತ್ಯೆ

    ಆಗ ಬಸ್ ನಲ್ಲಿದ್ದ ಅಪರಿಚಿತ ಪ್ರಯಾಣಿಕನೊಬ್ಬ ರಾಘವೇಂದ್ರನ ಕೈಗೆ ಬ್ಯಾಗ್ ಕೊಟ್ಟು ಬಸ್ ಇಳಿದು ಹೋಗಿದ್ದಾರೆ. ಅದೇ ಸ್ಥಳದಲ್ಲಿ ರಾಘವೇಂದ್ರ ಬ್ಯಾಗ್ ಹಿಡಿದುಕೊಂಡು ಅರ್ಧ ಗಂಟೆ ಕಾದಿದ್ದ. ಅರ್ಧ ಗಂಟೆ ಕಾದ್ರೂ ಬಸ್ ನಿಲ್ದಾಣದ ಬಳಿ ಯಾರೂ ಬರಲಿಲ್ಲ. ಆಗ ಸಹಜವಾಗಿ ಬ್ಯಾಗ್ ಓಪನ್ ಮಾಡಿ ನೋಡಿದ ರಾಘವೇಂದ್ರಗೆ ಅದರಲ್ಲಿ ಚಿನ್ನಾಭರಣ ಇರುವುದು ಕಂಡಿದೆ. ಬ್ಯಾಗ್‌ನಲ್ಲಿ ಬಂಗಾರ ನೋಡಿದ ಕೂಡಲೇ ರಾಘವೇಂದ್ರ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

    ಆಗ ಚಿನ್ನಾಭರಣದ ಬ್ಯಾಗ್ ನಲ್ಲಿ ಬಿಟ್ಟು ಮರೆತು ಹೋಗಿದ್ದ ಮುದುಕಪ್ಪ ಅವರಿಗೆ ಹೊಸಪೇಟೆ ಪಟ್ಟಣ ಪೊಲೀಸರು ಬ್ಯಾಗ್ ವಾಪಾಸ್ ಕೊಟ್ಟಿದ್ದಾರೆ. ಇದೇ ವೇಳೆ ಬ್ಯಾಗ್ ವಾಪಾಸ್ ಕೊಟ್ಟು ಪ್ರಾಮಾಣಿಕತೆ ಮೆರೆದ ರಾಘವೇಂದ್ರಗೆ ವಿಜಯನಗರ ಜಿಲ್ಲಾ ಪೊಲೀಸರು ಸನ್ಮಾನಿಸಿದ್ದಾರೆ.

     

  • ಅಪಾರ್ಟ್‌ಮೆಂಟ್‌ನಲ್ಲಿ ನಿರಂತರ ಕಳ್ಳತನ – 18 ವರ್ಷದಿಂದ ಸೆಕ್ಯೂರಿಟಿಯಾಗಿದ್ದ ಕಳ್ಳ ಅರೆಸ್ಟ್‌

    ಅಪಾರ್ಟ್‌ಮೆಂಟ್‌ನಲ್ಲಿ ನಿರಂತರ ಕಳ್ಳತನ – 18 ವರ್ಷದಿಂದ ಸೆಕ್ಯೂರಿಟಿಯಾಗಿದ್ದ ಕಳ್ಳ ಅರೆಸ್ಟ್‌

    ಬಳ್ಳಾರಿ: ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರ ಕಳ್ಳತನ ನಡೆಯುತ್ತಿದ್ದ ಪ್ರಕರಣವನ್ನು ಕೊನೆಗೂ ಪೊಲೀಸರು (Police) ಬೇಧಿಸಿ ಆರೋಪಿ ಸೆಕ್ಯೂರಿಟಿಗಾರ್ಡ್‌ನನ್ನು (Security Guard) ಬಂಧಿಸಿದ್ದಾರೆ.

    ಹೊಸಪೇಟೆಯ ಸಾಯಿಸದನ ಅಪಾರ್ಟ್‌ಮೆಂಟ್‌ನಲ್ಲಿ (Apartment) ಕಳೆದ ಎರಡು ವರ್ಷಗಳಿಂದ ಹಲವು ಮನೆಗಳಲ್ಲಿ ಕಳ್ಳತನ ನಡೆಯುತ್ತಿತ್ತು. ನಿರಂತರ ಕಳ್ಳತನದಿಂದ ಹೊಸಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಕಳ್ಳರ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ.

     
    ಹೊರಗಡೆಯಿಂದ ಈ ಕೃತ್ಯ ನಡೆಯುತ್ತಿಲ್ಲ. ಒಳಗಡೆ ಇದ್ದವರಿಂದಲೇ ಕೃತ್ಯ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ 18 ವರ್ಷಗಳ ಕಾಲ ಸೆಕ್ಯೂರಿಟಿಯಾಗಿ ಕೆಲಸ ಪ್ರವೀಣ್ ವಿಚಾರಣೆ ನಡೆಸಿದ್ದರು. ಅನುಮಾನ ಬಂದು ಮತ್ತಷ್ಟು ವಿಚಾರಣೆ ನಡೆಸಿದಾಗ ಕಳ್ಳತನ ಎಸಗಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾನೆ.

    ಒಂದು ವರ್ಷದಿಂದ ಅಪಾರ್ಟ್‌ಮೆಂಟ್‌ನ ಎರಡು ಮನೆಗಳಲ್ಲಿ ಕಳ್ಳತನ ನಡೆದಿತ್ತು. ಆರೋಪಿ ಪ್ರವೀಣ್ ನನ್ನು ಬಂಧಿಸಿದ ಪೊಲೀಸರು 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

     

  • ಕ್ಷೇತ್ರದ ಅಭಿವೃದ್ಧಿಗೆ ಅನುದಾನವೇ ಸಿಗುತ್ತಿಲ್ಲ: ಸರ್ಕಾರದ ವಿರುದ್ಧವೇ ಕೈ ಶಾಸಕ ಗವಿಯಪ್ಪ ಆಕ್ರೋಶ

    ಕ್ಷೇತ್ರದ ಅಭಿವೃದ್ಧಿಗೆ ಅನುದಾನವೇ ಸಿಗುತ್ತಿಲ್ಲ: ಸರ್ಕಾರದ ವಿರುದ್ಧವೇ ಕೈ ಶಾಸಕ ಗವಿಯಪ್ಪ ಆಕ್ರೋಶ

    – ಜನರು ಕೇಳುವ ಪ್ರಶ್ನೆಗೆ ನನ್ನ ಬಳಿ ಉತ್ತರ ಇಲ್ಲ
    – ಆನಂದ್‌ ಸಿಂಗ್‌ ತಂದ ಅನುದಾನಲ್ಲಿ ಒಂದೂವರೆ ವರ್ಷ ಕೆಲಸ

    ಬಳ್ಳಾರಿ: ಇಲ್ಲಿಯವರೆಗೆ ನಮ್ಮ ಕ್ಷೇತ್ರಕ್ಕೆ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ಶಾಸಕರು (BJP MLA’s) ಕಾಂಗ್ರೆಸ್‌ ಸರ್ಕಾರದ ವಿರುದ್ಧ ದೂರುತ್ತಿದ್ದರು. ಆದರೆ ಈಗ ಕಾಂಗ್ರೆಸ್‌ ಶಾಸಕರೇ ಅನುದಾನದ ವಿಚಾರವನ್ನು ಪ್ರಸ್ತಾಪಿಸಿ ಸಿದ್ದರಾಮಯ್ಯ (Siddaramaiah) ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲು ಆರಂಭಿಸಿದ್ದಾರೆ.

    ನೀವು ಶಾಸಕರಾಗಿ ಎರಡು ವರ್ಷ ಆಗುತ್ತಾ ಬಂದಿದೆ. ಏನು ಕೆಲಸ ಮಾಡಿದ್ದೀರಿ ತೋರಿಸಿ ಎಂದು ಜನ ನನ್ನನ್ನು ಕೇಳುತ್ತಿದ್ದಾರೆ. ಆದರೆ ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲು ಹಣ ಇಲ್ಲ. ನಮ್ಮದೇ ಸರ್ಕಾರ ಇದ್ದರೂ ಅನುದಾನ ಬಿಡುಗಡೆ  ಆಗುತ್ತಿಲ್ಲ ಎಂದು ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ (Hosapete) ಶಾಸಕ ಎಚ್ ಆರ್ ಗವಿಯಪ್ಪ (H. R. Gaviyappa) ತಮ್ಮದೇ ಸರ್ಕಾರದ ವಿರುದ್ದ ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: VRS ತೆಗೆದುಕೊಳ್ಳಿ ಅಥವಾ ವರ್ಗಾವಣೆಯಾಗಿ – ಹಿಂದೂಯೇತರ ಸಿಬ್ಬಂದಿ ಬೇಡ: ತಿರುಪತಿ ಬೋರ್ಡ್‌

    ಬೇರೆ ಬೇರೆ ಕಡೆ ಅನುದಾನ ಸಿಗುತ್ತಿದೆ. ಆದರೆ ನನ್ನ ಕ್ಷೇತ್ರಕ್ಕೆ KKRDB ಸೇರಿದಂತೆ ಯಾವ ಅನುದಾನವೂ ಸರಿಯಾಗಿ ಸಿಗುತ್ತಿಲ್ಲ. ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಎಲ್ಲವನ್ನು ತಿಳಿದುಕೊಳ್ಳುವುದ್ದಕ್ಕೆ ಒಂದೂವರೆ ವರ್ಷ ಕಳೆದು ಬಿಟ್ಟೆ. ಇನ್ನು ಎಷ್ಟು ವರ್ಷ ಹೀಗೆ ಅನುದಾನವಿಲ್ಲದೇ ಇರಲು ಸಾಧ್ಯ ಎಂದು ಹೇಳುವ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದರು.

    ಈ ಹಿಂದೆ ಇದ್ದ ಬಿಜೆಪಿ ಶಾಸಕ ಆನಂದ್ ಸಿಂಗ್ (Anand Singh) ತಂದ ಅನುದಾನದಲ್ಲಿಯೇ ಒಂದೂವರೆ ವರ್ಷ ಕೆಲಸ ನಡೆದಿದೆ. ಈಗಲಾದರೂ ನಮಗೆ ಕೆಲಸ ಮಾಡಲು ಅನುದಾನ ಬೇಕಲ್ವಾ? ಕೆಕೆಆರ್‌ಡಿಬಿಯಿಂದ ನೂತನ ವಿಜಯನಗರ ಜಿಲ್ಲೆಗೆ ಒಟ್ಟು 348 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.‌ ವಿಜಯನಗರ ಜಿಲ್ಲೆಯ ಬೇರೆ ಬೇರೆ ಕ್ಷೇತ್ರಗಳಿಗೆ 60, 70 ಕೋಟಿ ರೂ. ಅನುದಾನ ನೀಡಿದ್ದಾರೆ. ವಿಜಯನಗರ ಕ್ಷೇತ್ರಕ್ಕೆ ಕೇವಲ 22 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ.ಅದರಲ್ಲಿ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ 12 ಕೋಟಿ ರೂ. ಅನುದಾನ ನೀಡಿದ್ದೇನೆ.‌ ಉಳಿದ 8 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿ ಏನು ಕೆಲಸ ಮಾಡಲು ಸಾಧ್ಯವಾಗುತ್ತೆ ಎಂದು ಪ್ರಶ್ನಿಸಿದ್ದಾರೆ.

     

    ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದವೂ ಅಸಮಾಧಾನ ಹೊರ ಹಾಕಿದ ಅವರು, ಜಿಲ್ಲೆಗೆ ಬರುವ ಅನುದಾನದಲ್ಲಿ ಜಿಲ್ಲಾ ಕೇಂದ್ರದ‌ ಅಭಿವೃದ್ಧಿಗೆ ಉಸ್ತುವಾರಿ ಸಚಿವರು 25% ರಷ್ಟು ಅನುದಾನ ಮೀಸಲಿಡಬೇಕು. ಅದು ಜಿಲ್ಲಾ ಉಸ್ತುವಾರಿ‌ ಸಚಿವರ ಕೈಯಲ್ಲಿ ಇರುತ್ತದೆ. ನಮ್ಮ ಜಿಲ್ಲಾ ಉಸ್ತುವಾರಿ ಜಮೀರ್‌ ಅಹ್ಮದ್‌ ಅವರು ಅದನ್ನು ಮಾಡಿಲ್ಲ. ಬೇಕಾದ್ರೆ ಅವರ ವಿವೇಚನೆಗೆ ಬಂದಂತೆ ಅನುದಾನ‌ ಬಳಸಲಿ. ನಾನು ಏನೂ ಕೇಳಲ್ಲ. ಒಟ್ಟಿನಲ್ಲಿ ನನ್ನ ಕ್ಷೇತ್ರದಲ್ಲಿ ಕೆಲಸ ಆಗಬೇಕು ಎಂದು ನೇರವಾಗಿಗೆ ಸಿಟ್ಟು ಹೊರ ಹಾಕಿದರು.

     

  • ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ

    ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ

    ಬಳ್ಳಾರಿ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆ (Hosapete) ನಗರದ ಸಿದ್ಧಲಿಂಗಪ್ಪ ಕ್ರಾಸ್ ಬಳಿ ನಡೆದಿದೆ.

    ಮೃತ ವ್ಯಕ್ತಿಯನ್ನು ಶಾಂತಕುಮಾರ (25) ಗುರುತಿಸಲಾಗಿದ್ದು, ಕೊಲೆ ಆರೋಪಿಯನ್ನು ಹುಲಿಗೇಶ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಜ್‌ ಯಾತ್ರೆಯ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ – ಪಾಕ್‌ಗೆ ಸೌದಿ ಎಚ್ಚರಿಕೆ

    ಕುಡಿದ ಮತ್ತಿನಲ್ಲಿ ಸಣ್ಣ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ಆರಂಭವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಶಾಂತಕುಮಾರನ ತಲೆ ಭಾಗಕ್ಕೆ ಹುಲಿಗೇಶ ಬಲವಾಗಿ ಹೊಡೆದಿದ್ದ. ಆರೋಪಿ ಹುಲಿಗೇಶ ನಡುರಸ್ತೆಯಲ್ಲಿಯೇ ಸ್ನೇಹಿತ ಶಾಂತಕುಮಾರನನ್ನು ಹೊಡೆದಿದ್ದ. ಕೈಯಿಂದ ತಲೆಭಾಗಕ್ಕೆ ಬಲವಾಗಿ ಏಟು ಬಿದ್ದ ಹಿನ್ನೆಲೆ ಶಾಂತಕುಮಾರ್ ತೀವ್ರ ಅಸ್ವಸ್ಥನಾಗಿದ್ದ.

    ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಕೊಪ್ಪಳ (Koppala) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇನ್ನೂ ಆರೋಪಿ ಹುಲಿಗೇಶನನ್ನ ಹೊಸಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಹೊಸಪೇಟೆ ಡಿವೈಎಸ್ಪಿ, ಸಿಪಿಐ ಭೇಟಿ, ಪರಿಶೀಲನೆ ನಡೆಸಿದ್ದು, ಹೊಸಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ತಿರುಮಲನ ಸನ್ನಿಧಿಗೆ 2 ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು

  • 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿ – ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

    2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿ – ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

    ವಿಜಯನಗರ: 2ನೇ ಬಾರಿಗೆ ತುಂಗಭದ್ರಾ ಜಲಾಶಯ (Tungabhadra Dam) ಭರ್ತಿಯಾದ ಹಿನ್ನೆಲೆ ಇಂದು (ಭಾನುವಾರ) ಸಿಎಂ ಸಿದ್ದರಾಮಯ್ಯ (Siddaramaiah) ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

    ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಳಡಿಕೆಯ 25 ದಿನಗಳ ಬಳಿಕ ಡ್ಯಾಂ ಭರ್ತಿಯಾಗಿದೆ. ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ ಮತ್ತೆ ಭರ್ತಿ ಹಿನ್ನೆಲೆ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬಾಗಿನ ಅರ್ಪಣೆ ಕಾರ್ಯಕ್ರಮದ ಸಲುವಾಗಿ ತುಂಗಭದ್ರಾ ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜಲಾಶಯದ ಸೇತುವೆಯ ಮೇಲೆ ಕನ್ನಡ ಧ್ವಜಗಳು ರಾರಾಜಿಸುತ್ತಿವೆ. ಅಲ್ಲದೇ ತಳಿರು ತೋರಣ, ಬಾಳೆಯಿಂದ ಜಲಾಶಯಯವನ್ನು ಅಲಂಕರಿಸಲಾಗಿದೆ. ಇದನ್ನೂ ಓದಿ: Bengaluru | ಹೇಗೆ ನಡೆಯುತ್ತೆ ಭೀಕರ ಕೊಲೆಯ ಮರಣೋತ್ತರ ಪರೀಕ್ಷೆ?

    ಕ್ರಸ್ಟ್ ಗೇಟ್ ಕಿತ್ತುಹೋದ ಸಂದರ್ಭದಲ್ಲಿ ಸಿಎಂ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಮತ್ತೆ ಜಲಾಶಯ ತುಂಬುತ್ತೆ. ನಾನು ಬಾಗಿನ ಅರ್ಪಣೆ ಮಾಡಲು ಬರುವೆ ಎಂದು ಹೇಳಿದ್ದರು. ಅದೇ ರೀತಿ ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಲಿದ್ದಾರೆ. ಬೆಳಗ್ಗೆ 11:0ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಜೊತೆ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಸಚಿವರು, ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಡಿಜಿಟಲ್ ಪೇಮೆಂಟ್‌ನಲ್ಲಿ ಬೆಂಗಳೂರಿಗರೇ ಫಸ್ಟ್ – ಸೆಪ್ಟೆಂಬರ್‌ನಲ್ಲಿ ಬಿಎಂಟಿಸಿಗೆ ಬರೋಬ್ಬರಿ 8 ಕೋಟಿ ಆದಾಯ

    ಬಾಗಿನ ಅರ್ಪಣೆ ಬಳಿಕ 19ನೇ ಕ್ರಸ್ಟ್ಗೇಟ್ ಅಳವಡಿಕೆ ಕಾಮಗಾರಿಯಲ್ಲಿ ಭಾಗಿಯಾದ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಕೊಪ್ಪಳದ ಮುನಿರಾಬಾದ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಳಗ್ಗೆ 11:55 ಕ್ಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮ ಮುಕ್ತಾಯದ ಬಳಿಕ ಸಂಜೆ 4 ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿಗೆ ತೆರಳಲಿದ್ದಾರೆ. ಇದನ್ನೂ ಓದಿ: BBMP ವ್ಯಾಪ್ತಿಯ 110 ಹಳ್ಳಿ ಜನರ ಕನಸು ಶೀಘ್ರ ನನಸು – ಮುಂದಿನ ವಾರದಲ್ಲೇ ಮನೆಗಳಿಗೆ ಬರಲಿದೆ ಕಾವೇರಿ!