Tag: ಹೊಸಪೇಟೆ

  • ಟ್ರೇಡ್ ಲೈಸೆನ್ಸ್ ಇಲ್ಲದೇ ಕತ್ತೆ ಮಾರಾಟ ಮಾಡ್ತಿದ್ದ ಕಂಪನಿ ಕ್ಲೋಸ್

    ಟ್ರೇಡ್ ಲೈಸೆನ್ಸ್ ಇಲ್ಲದೇ ಕತ್ತೆ ಮಾರಾಟ ಮಾಡ್ತಿದ್ದ ಕಂಪನಿ ಕ್ಲೋಸ್

    – 3 ಲಕ್ಷಕ್ಕೆ ಮೂರು ಕತ್ತೆ ಮಾರಾಟ, ಲೀ.ಗೆ 2300 ರೂ.ನಂತೆ ಹಾಲು ಖರೀದಿ

    ಬಳ್ಳಾರಿ: ಟ್ರೇಡ್ ಲೈಸೆನ್ಸ್ (Trade License) ಇಲ್ಲದೇ ಅನಧಿಕೃತವಾಗಿ ಕತ್ತೆಗಳ ಮಾರಾಟ ಮಾಡುತ್ತಿದ್ದ ಕಂಪನಿಯನ್ನು ಕ್ಲೋಸ್ ಮಾಡಿ, ಕಂಪನಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆ (Hosapete) ತಾಲೂಕಿನಲ್ಲಿ ನಡೆದಿದೆ.

    ಆಂಧ್ರಪ್ರದೇಶದ (Andhrapradesh) ಅನಂತಪುರ (Anantapur) ಮೂಲದ ಜೆನ್ನಿ ಮಿಲ್ಕ್ ಕಂಪನಿಯನ್ನು (Jenny Milk Company) ಅನಧಿಕೃತವಾಗಿ, ಟ್ರೇಡ್ ಲೈಸೆನ್ಸ್ ಇಲ್ಲದೇ ಕತ್ತೆಗಳ ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಅಧಿಕಾರಿಗಳು ತಾತ್ಕಾಲಿಕವಾಗಿ ಕ್ಲೋಸ್ ಮಾಡಿಸಿದ್ದಾರೆ.ಇದನ್ನೂ ಓದಿ: ಕೇಂದ್ರದವರೇ ಪ್ಯಾಲೆಸ್ತೀನ್‌ಗೆ ಬೆಂಬಲ ಇದೆ ಅಂತಾರೆ, ಧ್ವಜ ತೋರಿಸೋದ್ರಲ್ಲಿ ತಪ್ಪೇನಿದೆ ಅಂತ ವಾದ ಮಾಡ್ತಾರೆ: ಪರಮೇಶ್ವರ್‌

    ಅನಧಿಕೃತ ಕಚೇರಿ ಓಪನ್ ಮಾಡಿ, ರೈತರನ್ನ ಗುರಿಯಾಗಿಸಿಕೊಂಡು ಕತ್ತೆ ಮಾರಾಟ ಮಾಡಿ, ಹಾಲು ಖರೀದಿಸುತ್ತಿದ್ದ ಬಗ್ಗೆ ಅಧಿಕೃತ ಮಾಹಿತಿಯನ್ನು ಪಡೆದು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಗರಾಭಿವೃದ್ಧಿ ಕೋಶಾಧಿಕಾರಿ ಮನೋಹರ್, ಹೊಸಪೇಟೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ನೇತೃತ್ವದ ಅಧಿಕಾರಿಗಳ ತಂಡ ದಾಳಿ ಮಾಡಿ, ಒಂದು ಘಂಟೆಗಳ ಕಾಲ ತಪಾಸಣೆ ನಡೆಸಿ ಕಚೇರಿಗೆ ಬೀಗ ಜಡಿದು, ಸೀಲ್ ಹಾಕಿಸಿದ್ದಾರೆ.

    ಈ ಕಂಪನಿಯಿಂದ ರೈತರು 3 ಲಕ್ಷ ರೂ.ಗೆ ಕತ್ತೆ ಪಡೆದು, ಬಳಿಕ ಪ್ರತಿ ಲೀಟರ್ ಹಾಲಿಗೆ 2,300 ರೂ. ನಂತೆ ಕಂಪನಿಗೆ ಹಾಲನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಅಲರ್ಟ್ ಆಗಿದ್ದ ಅಧಿಕಾರಿಗಳು ಟ್ರೇಡಿಂಗ್ ಲೈಸೆನ್ಸ್ ಇಲ್ಲದ ಕಾರಣಕ್ಕೆ ಈ ಕಂಪನಿಯನ್ನು ಕ್ಲೋಸ್ ಮಾಡಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

    ಕಳೆದ ಮೂರು ತಿಂಗಳಿನಿಂದ ಕರ್ನಾಟಕದ (Karnataka) ನಾನಾ ಭಾಗಗಳಲ್ಲಿ ಕಚೇರಿ ಓಪನ್ ಮಾಡಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಜಿಲ್ಲೆಯ ರೈತರು ಕತ್ತೆಗಳ ಖರೀದಿ ಬಗ್ಗೆ ಮೋಸ ಹೋಗದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆಯ ಸಂದೇಶವನ್ನು ರವಾನಿಸಲಾಗಿತ್ತು.ಇದನ್ನೂ ಓದಿ: ಅತಿ ವೇಗವಾಗಿ ಹರಡುವ ಕೋವಿಡ್‌ ಹೊಸ ತಳಿ ಪತ್ತೆ – ಯುಕೆ, ಯುಎಸ್‌, ಉಕ್ರೇನ್‌ ಸೇರಿ 27 ದೇಶಗಳಿಗೆ XEC ಆತಂಕ

  • ಪೂಜೆ ಹೆಸರಲ್ಲಿ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಪಂಗನಾಮ ಹಾಕಿದ ಖದೀಮರು

    ಪೂಜೆ ಹೆಸರಲ್ಲಿ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಪಂಗನಾಮ ಹಾಕಿದ ಖದೀಮರು

    ವಿಜಯನಗರ: ಪೂಜೆ ಹೆಸರಲ್ಲಿ ಖದೀಮರ ತಂಡದಿಂದ ಇಡೀ ಗ್ರಾಮಕ್ಕೆ ಕೋಟಿ ಕೋಟಿ ಹಣ ಪಂಗನಾಮ ಹಾಕಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ತಾಂಡಾದಲ್ಲಿ ಬೆಳಕಿಗೆ ಬಂದಿದೆ.

    ಒಂದಲ್ಲ ಎರಡಲ್ಲ ಹತ್ತು ಪಟ್ಟು ಅಂದರೆ 1 ಲಕ್ಷಕ್ಕೆ 10 ಲಕ್ಷ ಹಣ ಮಾಡಿ ಕೊಡುತ್ತೇವೆ ಎಂದು ಹೇಳಿ ಖದೀಮರ ತಂಡ ಕಲ್ಲಹಳ್ಳಿ ತಾಂಡಾದ ಜನರಿಗೆ ಆರು ತಿಂಗಳಲ್ಲಿ ಒಂದೇ ಗ್ರಾಮದ 60ಕ್ಕೂ ಹೆಚ್ಚು ಜನರಿಂದ 2 ಕೋಟಿಗೂ ಅಧಿಕ ಹಣ ಲೂಟಿ ಮಾಡಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ರಾತ್ರಿ ಡ್ಯೂಟಿ ವೇಳೆ ಹಾಲು ಕದ್ದ ಪೊಲೀಸ್ ಪೇದೆ – ವೀಡಿಯೋ ವೈರಲ್

    ನಿಮಗೆ ಕಷ್ಟ ಇದೆಯಾ, ಆರು ತಿಂಗಳಲ್ಲಿ ನಿಮ್ಮ ಕಷ್ಟ ಪರಿಹಾರ ಮಾಡುತ್ತೇವೆ ಎಂದು ಬಣ್ಣ ಬಣ್ಣದ ಆಸೆ ತೋರಿಸಿ ಮನೆಗೆ ರಾತ್ರಿ ವೇಳೆ ಬಂದು ಪೂಜೆ ಮಾಡಿ ಹಣ ಇಡಲಾಗುತ್ತಿತ್ತು. ಮಾತ್ರವಲ್ಲದೇ ಎಲ್ಲರ ಮೊಬೈಲ್ ಪೋನ್ ಪ್ಲೈಟ್ ಮೂಡಿಗೆ ಹಾಕಿಸಿ, ಲೈಟ್ ಆಫ್ ಮಾಡಿ ಪೂಜೆ ಮಾಡುತ್ತೇವೆ ಎಂದು ಹೇಳುತ್ತಿದ್ದರು. ಕೊನೆಗೆ ಬಾಕ್ಸ್ವೊಂದರಲ್ಲಿ ಲಕ್ಷಾಂತರ ಹಣ ಇಟ್ಟು ಪ್ಯಾಕ್ ಮಾಡಬಹುದಾ ಎಂದು ಕೇಳುತ್ತಿದ್ದರು. ಹಣ ಕೊಟ್ಟಿರುವವರು ಮಾಡಿ ಅಂದಾಗ ನೀವು ಹೊರಗೆ ಹೋಗಿ, ನಾವು ಪೂಜೆ ಮಾಡಿ ಮತ್ತೆ ಪ್ಯಾಕ್ ಮಾಡಬೇಕು ಎಂದು ಹೇಳಿ ಮನೆಯವರನ್ನು ಹೊರಗೆ ಕಳಿಸುತ್ತಿದ್ದ ಖದೀಮರು 168 ದಿನಗಳವರೆಗೆ ತೆಗೆಯಬಾರದು, ಆಮೇಲೆ ಇದರಲ್ಲಿನ ಹಣ 10 ಪಟ್ಟು ಹೆಚ್ಚಾಗುತ್ತದೆ ಎಂದು ನಂಬಿಸಿ ಜನರಿಗೆ ವಂಚನೆ ಮಾಡಿದ್ದರು. ಇದನ್ನೂ ಓದಿ: ಚಾರ್ಜ್‌ಶೀಟ್‌ನಲ್ಲಿ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ಕೋರ್ಟ್‌ ಮೊರೆ ಹೋದ ದರ್ಶನ್‌

    ಖದೀಮರ ಗ್ಯಾಂಗ್‌ನಿಂದ ಮೋಸಹೋದ ಕಲ್ಲಹಳ್ಳಿ ತಾಂಡಾದ ಕುಮಾರ ನಾಯ್ಕ್ ಎಂಬಾತ ಹೊಸಪೇಟೆ ಗ್ರಾಮೀಣ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ರಾಜಸ್ಥಾನ ಮೂಲದ ಜಿತೇಂದ್ರ ಸಿಂಗ್, ಆತನಿಗೆ ಸಹಕರಿಸುತ್ತಿದ್ದ ಕಲ್ಲಹಳ್ಳಿ ಗ್ರಾಮದ ತುಕ್ಯಾ ನಾಯ್ಕ್, ಶಂಕು ನಾಯ್ಕ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 35 ಲಕ್ಷ ರೂ, ನೋಟು ಎಣಿಸುವ 1 ಯಂತ್ರ, ಟವೆಲ್, ಜಮ್ಕಾನ ಜಪ್ತಿ ಮಾಡಲಾಗಿದೆ.

    ಪ್ರಕರಣದ ಪ್ರಮುಖ ಆರೋಪಿಗಳಾದ ಕಲ್ಲಹಳ್ಳಿ ಗ್ರಾಮದ ಸ್ವಾಮಿ ನಾಯ್ಕ್, ಕಾರುಬಾರಿ ವೆಂಕ್ಯಾ ನಾಯ್ಕ್ ಎಸ್ಕೇಪ್ ಆಗಿದ್ದು, ಪೊಲೀಸರು ಆರೋಪಿಗಳನ್ನು ಹುಡುಕುವ ಕಾರ್ಯದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ರಾತ್ರಿ ಡ್ಯೂಟಿ ವೇಳೆ ಹಾಲು ಕದ್ದ ಪೊಲೀಸ್ ಪೇದೆ – ವೀಡಿಯೋ ವೈರಲ್

  • ಅಪಾರ್ಟ್‌ಮೆಂಟ್‌ ನಿವಾಸಿಗಳೇ ಎಚ್ಚರವಾಗಿರಿ – ವಾಟ್ಸಪ್‌ ಡಿಪಿಗೆ ಫೋಟೋ ಹಾಕಿ ಸಿಕ್ಕ ಬಿದ್ದ ಕಳ್ಳಿ

    ಅಪಾರ್ಟ್‌ಮೆಂಟ್‌ ನಿವಾಸಿಗಳೇ ಎಚ್ಚರವಾಗಿರಿ – ವಾಟ್ಸಪ್‌ ಡಿಪಿಗೆ ಫೋಟೋ ಹಾಕಿ ಸಿಕ್ಕ ಬಿದ್ದ ಕಳ್ಳಿ

    ಬೆಂಗಳೂರು: ನೆಕ್ಲೆಸ್ (Necklace) ಧರಿಸಿದ ಫೋಟೋವನ್ನು ವಾಟ್ಸಪ್ ಡಿಪಿಗೆ (Whatsapp DP) ಹಾಕಿದ್ದರಿಂದ ಖತರ್ನಾಕ್ ಕಳ್ಳಿಯೊಬ್ಬಳು ಸಿಕ್ಕಿಬಿದ್ದಿದ್ದಾಳೆ.

    ವಿಜಯನಗರ ಜಿಲ್ಲೆಯ ಹೊಸಪೇಟೆ ಮೂಲದ ರೇಣುಕಾ (38) ಬಂಧಿತ ಆರೋಪಿ. ಹೆಚ್‌ಎಎಲ್ ಪೊಲೀಸರು ರೇಣುಕಾಳನ್ನು ಬಂಧಿಸಿ ಚಿನ್ನಾಭರಣವನ್ನು (Gold) ವಶಕ್ಕೆ ಪಡೆದಿದ್ದಾರೆ.

    ಸಿಕ್ಕಿ ಬಿದ್ದಿದ್ದು ಹೇಗೆ?
    ಅಪಾರ್ಟ್‌ಮೆಂಟ್‌ಗಳಲ್ಲಿ ಶ್ರೀಮಂತರೇ ಇರುತ್ತಾರೆ. ಅವರು ಅಡುಗೆ ಮಾಡುವ ವ್ಯಕ್ತಿಗಳನ್ನು ಹುಡುಕುತ್ತಿರುತ್ತಾರೆ ಎಂದು ತಿಳಿದು ಆಕೆ ಅಪಾರ್ಟ್‌ಮೆಂಟ್‌ಗಳಲ್ಲಿ ಕೆಲಸ ಮಾಡಲು ಮುಂದಾಗುತ್ತಾಳೆ.  ಇದನ್ನೂ ಓದಿ: ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ, ನಿಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯವಿಲ್ಲ: ಡಿಕೆಶಿ ಗುಡುಗು

     

    ರೇಣುಕಾ ಅಪಾರ್ಟ್‌ಮೆಂಟ್‌ ಬಳಿ ತೆರಳಿ, ನನಗೆ ಅಡುಗೆ ಮಾಡಲು ಬರುತ್ತದೆ. ದಕ್ಷಿಣ-ಉತ್ತರ ಭಾರತ ಸೇರಿದಂತೆ ಎಲ್ಲಾ ಶೈಲಿಯ ಅಡುಗೆ ಮಾಡುತ್ತೇನೆ. ಅಡುಗೆ ಮಾಡುವ ಕೆಲಸ ಇದ್ದರೆ ಹೇಳಿ ಎಂದು ಅಲ್ಲಿನ ಸೆಕ್ಯೂರಿಟಿ ಹತ್ತಿರ ಕೇಳುತ್ತಿದ್ದಳು.

    ಸೆಕ್ಯೂರಿಟಿ ಗಾರ್ಡ್ ಅಪಾರ್ಟ್ಮೆಂಟ್‌ನಲ್ಲಿರುವ ಮಾಲೀಕರಿಗೆ ಈಕೆಯನ್ನು ಪರಿಚಯ ಮಾಡುತ್ತಿದ್ದರು. ಇದೇ ರೀತಿ ಕೆಲಸ ಕೇಳಿಕೊಂಡು ಮಾರತ್ತಳ್ಳಿ ಪೂರ್ವ ಪೌಂಟೇನ್ ಅಪಾರ್ಟ್ಮೆಂಟ್‌ನ ಎರಡು ಫ್ಲ್ಯಾಟ್‌ಗಳಲ್ಲಿ ಕೆಲಸಕ್ಕೆ ಸೇರಿದ್ದಳು. ಆ ಎರಡೂ ಮನೆಗಳಲ್ಲಿ ತನ್ನ ಕೈಚಳಕ ತೋರಿಸಿ ಸುಮಾರು 100 ಗ್ರಾಂ ಚಿನ್ನಾಭರಣ ಕದ್ದಿದ್ದಳು. ಚಿನ್ನದ ಆಸೆಗೆ ಕೆಲಸ ಮಾಡುತ್ತಿದ್ದ ಈಕೆ ಮನೆ ಒಡತಿಯ ತಾಳಿಯನ್ನೂ ಸಹ ದೋಚಿದ್ದಳು.

     

     ಮನೆ ಮಾಲೀಕರು ಈಕೆಯ ಮೇಲೆ ಸಂಶಯ ವ್ಯಕ್ತಪಡಿಸಿ ಠಾಣೆಗೆ ದೂರು ನೀಡಿದ್ದರು. ಹೆಚ್‌ಎಎಲ್ ಪೊಲೀಸರು ಕರೆಸಿ ವಿಚಾರಣೆ ಮಾಡಿದಾಗ ನನಗೆ ಏನೂ ಗೊತ್ತಿಲ್ಲ ಎಂದು ನಾಟಕವಾಡಿದ್ದಳು. ಸಭ್ಯಸ್ಥಳಂತೆ ವರ್ತನೆ ತೋರಿದ್ದರಿಂದ ಆಕೆಯನ್ನು ವಿಚಾರಣೆ ಮಾಡಿ ಬಿಟ್ಟು ಕಳುಹಿಸಿದ್ದರು.

    ನಾನು ಕಳ್ಳತನ ಮಾಡಿದರೂ ಸಿಕ್ಕಿಬೀಳುವುದಿಲ್ಲ ಎಂದು ಮನಗಂಡಿದ್ದ ಆಕೆ ಒಂದು ದಿನ ಕದ್ದ ನೆಕ್ಲೆಸ್‌ನ್ನು ಧರಿಸಿ ಪೋಟೋ ತೆಗೆದುಕೊಂಡು ತನ್ನ ವಾಟ್ಸಾಪ್ ಡಿಪಿಗೆ ಹಾಕಿಕೊಂಡಿದ್ದಳು.

    ವಾಟ್ಸಪ್ ಡಿಪಿಯನ್ನು ಗಮನಿಸಿದ ಫ್ಲ್ಯಾಟ್‌ ಮಾಲೀಕರು ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ಮತ್ತೆ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರ ಬಂದಿದೆ. ಪೊಲೀಸರು ಬಂಧಿತಳಿಂದ 80 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

  • ಟಿಬಿ ಡ್ಯಾಂ ಹಿನ್ನೀರಿನ ಕಂದಕಕ್ಕೆ ಬಿತ್ತು ಬೈಕ್‌ – ಯವಕ ಸಾವು, ಓರ್ವ ಗಂಭೀರ

    ಟಿಬಿ ಡ್ಯಾಂ ಹಿನ್ನೀರಿನ ಕಂದಕಕ್ಕೆ ಬಿತ್ತು ಬೈಕ್‌ – ಯವಕ ಸಾವು, ಓರ್ವ ಗಂಭೀರ

    ಬಳ್ಳಾರಿ: ಬೈಕ್‌ ರೈಡ್‌ ವೇಳೆ ತುಂಗಭದ್ರಾ ಜಲಾಶಯದ (TB Dam) ಹಿನ್ನೀರಿನ ಕಂದಕಕ್ಕೆ ಬಿದ್ದು ಯುವಕ ಸಾವನ್ನಪ್ಪಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಹೊಸಪೇಟೆ (Hosapete) ಹೊರ ವಲಯದಲ್ಲಿ ನಡೆದಿದೆ.

    ಇಳಕಲ್‌ ಮೂಲದ ಜಗದೀಶ್ (28) ಮೃತಪಟ್ಟರೆ, ಶಶಾಂಕ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ (Bengaluru) ಇಳಕಲ್‌ಗೆ ಇವರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದರು.

    ವೇಗದಲ್ಲಿದ್ದ ಬೈಕ್‌ ತುಂಗಭದ್ರಾ ಜಲಾಶಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನೊಂದಿಗೆ ಇವರು ಕೆಳಗಡೆ ಬಿದ್ದಿದ್ದಾರೆ.  ಇದನ್ನೂ ಓದಿ:  ಮತಗಟ್ಟೆವಾರು ದತ್ತಾಂಶ ನೀಡಿದ್ರೆ ದುರ್ಬಳಕೆ ಆಗಬಹುದು: ಚುನಾವಣಾ ಆಯೋಗ ಆತಂಕ

    ಗಾಯಾಳುವನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರಿಯಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

     

  • ಹೊಸಪೇಟೆಯಲ್ಲಿ ‘ಯುವ’ ಪ್ರಿ ರಿಲೀಸ್ ಇವೆಂಟ್: ಚಿತ್ರರಂಗ ಭಾಗಿ

    ಹೊಸಪೇಟೆಯಲ್ಲಿ ‘ಯುವ’ ಪ್ರಿ ರಿಲೀಸ್ ಇವೆಂಟ್: ಚಿತ್ರರಂಗ ಭಾಗಿ

    ಯುವ ರಾಜ್ ಕುಮಾರ್ ನಟನೆಯ, ಸಂತೋಷ್ ಆನಂದ್ ರಾವ್ ನಿರ್ದೇಶನದ ‘ಯುವ’ ಚಿತ್ರದ ಪ್ರಿ ರಿಲೀಸ್ ಇವೆಂಟ್ (Pre Release Event) ನಾಳೆ ಸಂಜೆ ಹೊಸಪೇಟೆಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಅದಕ್ಕಾಗಿ ಸರ್ವ ಸಿದ್ಧತೆಯನ್ನೂ ಮಾಡಿಕೊಂಡಿದೆ. ಕನ್ನಡ ಸಿನಿಮಾ ರಂಗದ ಅನೇಕ ತಾರೆಯರು ಈ ಇವೆಂಟ್ ನಲ್ಲಿ ಭಾಗಿ ಆಗುತ್ತಿದ್ದು, ರಸಮಂಜರಿ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ.

    ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್, ರಿಷಬ್ ಶೆಟ್ಟಿ, ಸಪ್ತಮಿ ಗೌಡ ಸೇರಿದಂತೆ ಅನೇಕ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದು, ವಿಜಯ ಪ್ರಕಾಶ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಾವಿರಾರು ಅಭಿಮಾನಿಗಳು ಭಾಗಿಯಾಗಲಿದ್ದಾರೆ.

    ನಾನಾ ಕಾರಣಗಳಿಂದಾಗಿ ಯುವ ಸಿನಿಮಾ ಕುತೂಹಲ ಮೂಡಿಸಿದೆ. ನಿನ್ನೆಯಷ್ಟೇ ಮಧ್ಯಾಹ್ನ 1 ಗಂಟೆ 1 ನಿಮಿಷಕ್ಕೆ ಯುವ ಸಿನಿಮಾದ ಟ್ರೈಲರ್ (Trailer) ಬಿಡುಗಡೆ ಮಾಡಿದೆ ಹೊಂಬಾಳೆ ಫಿಲ್ಮ್ಸ್. ಇಡೀ ಟ್ರೈಲರ್ ತುಂಬಾ ಯುವರಾಜ್ ಕುಮಾರ್ ಆರ್ಭಟ, ಅಪ್ಪ-ಮಗನ ಸೆಂಟಿಮೆಂಟ್ ಮತ್ತು ಕಾಲೇಜು ಗುದ್ದಾಟಗಳನ್ನು ಕಾಣಬಹುದಾಗಿದೆ. ಮೇಲ್ನೋಟಕ್ಕೆ ಇದೊಂದು ನಾರ್ಮಲ್ ಕಥೆ ಅಂತ ಅನಿಸುತ್ತಿದ್ದರೂ, ಅದನ್ನು ಹೇಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನುವ ಕುತೂಹಲವಂತೂ ಇದ್ದೇ ಇದೆ. ಒಂದು ರೀತಿಯಲ್ಲಿ ಟ್ರೈಲರ್ ತುಂಬಾ ತುಂಬಿಕೊಂಡಿದ್ದಾರೆ ಯುವರಾಜ್ ಕುಮಾರ್. ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಯುವ (Yuva) ಸಿನಿಮಾದ ಬಿಡುಗಡೆಗಡೆ ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. ಈ ಸಿನಿಮಾದ ಮೂಲಕ ಯುವರಾಜ್ ಕುಮಾರ್ (Yuvraj Kumar) ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಹಾಗಾಗಿ ಅದ್ಧೂರಿಯಾಗಿಯೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಯುವ ಸಿನಿಮಾದ ಟ್ರೈಲರ್ (Trailer) ಈಗಾಗಲೇ ರಿಲೀಸ್ ಆಗಿದೆ.

     

    ಯುವ ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ – ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ ‘ಅಪ್ಪುಗೆ’ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.

  • ಹೊಸಪೇಟೆಯಲ್ಲಿ ‘ಯುವ’ ಚಿತ್ರದ 2ನೇ ಸಾಂಗ್ ರಿಲೀಸ್

    ಹೊಸಪೇಟೆಯಲ್ಲಿ ‘ಯುವ’ ಚಿತ್ರದ 2ನೇ ಸಾಂಗ್ ರಿಲೀಸ್

    ಯುವರಾಜಕುಮಾರ್ ನಟನೆಯ ಯುವ ಚಿತ್ರದ ಎರಡನೇ ಹಾಡನ್ನು ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. 2ನೇ ಹಾಡನ್ನು ಹೊಸಪೇಟೆಯಲ್ಲಿ ಬಿಡುಗಡೆ ಮಾಡಲು ಯೋಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅದ್ಧೂರಿ ಇವೆಂಟ್ ಮಾಡಿ, ಅಲ್ಲಿ 2ನೇ ಹಾಡನ್ನು ಬಿಡುಗಡೆ ಮಾಡುವ ಚರ್ಚೆ ನಡೆದಿದೆ ಎನ್ನುತ್ತಿವೆ ಬಲ್ಲ ಮೂಲಗಳು. ಯುವ (Yuva) ಅಶ್ವಮೇಧಯಾಗಕ್ಕೆ ಸಜ್ಜಾಗಿದ್ದಾರೆ. ಕುದುರೆ ಏರಿ ಯುದ್ಧಕ್ಕೆ ಹೊರಡಲಿದ್ದಾರೆ. ಅದಕ್ಕೂ ಮುನ್ನ ಕರುನಾಡಿನ ಮುಂದೆ ಮಂಡಿ ಊರಿದ್ದಾರೆ. ನನ್ನನ್ನು ಹರಸಿ ಬೆಳೆಸಿ ಎಂದು ಕೇಳಿಕೊಂಡಿದ್ದಾರೆ. ಅ ಕಾರಣಕ್ಕಾಗಿಯೇ ಯುವ ಸಿನಿಮಾದ ಮೊದಲ ಹಾಡನ್ನು ಜನರ ಮುಂದೆ ಈಗಾಗಲೇ ಇಟ್ಟಿದ್ದಾರೆ.

    ಯುವ ಕಣ್ಣಲ್ಲಿ ಜನರು ಏನು ನೋಡಲು ಕಾಯುತ್ತಿದ್ದರೊ ಅದನ್ನೇ ಯುವ ತೋರಿಸಿದ್ದಾರೆ. ಅಪ್ಪು ಬಿಟ್ಟು ಹೋದ ಸಿಂಹಾಸನದಲ್ಲಿ ನೀನೇ ಕೂಡಬೇಕು ಎಂದು ಹೇಳಿದ್ದಾರೆ. ಅದಕ್ಕೆ ತಕ್ಕಂತಿದೆ ಯುವ ಹಾಡು. ಒಬ್ಬನೇ ಶಿವ ಒಬ್ಬನೇ ಯುವ. ಇದನ್ನು ಕೇಳುತ್ತಾ ಕೇಳುತ್ತಾ ನೀವು ಮೈಮರೆಯುತ್ತೀರಿ. ಎಲ್ಲವನ್ನೂ ಅಲ್ಲಲ್ಲೇ ಬಿಟ್ಟು ಎದ್ದು ನಿಲ್ಲುತ್ತೀರಿ. ಕಾರಣ ಹಾಡು ಹಾಗಿದೆ. ಕರುನಾಡನ್ನು ಹುಚ್ಚೆಬ್ಬಿಸಿದೆ.

    ಅದೇನು ಕುಣಿತ. ಯುವರಾಜ್‌ಕುಮಾರ್ (Yuvarajkumar) ಸುಮ್ಮನೆ ಆಗಿಲ್ಲ. ಸುಮ್ಮನೆ ಬಂದಿಲ್ಲ. ಏನಾದರೂ ಮಾಡಿ ಹೋಗಬೇಕು. ಏನಾದರೂ ಸಾಧಿಸಬೇಕು. ಅದೆಲ್ಲಕ್ಕಿಂತ ಹೆಚ್ಚಾಗಿ ಅಪ್ಪು ಚಿಕ್ಕಪ್ಪ ನನ್ನ ಮೇಲಿಟ್ಟಿದ್ದ ನಂಬಿಕೆಯನ್ನು ಉಳಿಸಿಸಕೊಳ್ಳಬೇಕು. ಅದೊಂದೇ ಉದ್ದೇಶ. ಅದೇ ಕಾಯಕ. ಹೀಗಂದುಕೊಂಡು ಯುವ ಬಣ್ಣದಲೋಕಕ್ಕೆ ಕಾಲಿಟ್ಟಿದ್ದಾರೆ. ಯುವ ಹಾಡು ನೋಡಿದ ಜನರು ಕೇಕೆ ಹಾಕುತ್ತಿದ್ದಾರೆ.

    ಚಾಮರಾಜನಗರ ಅದು ಅಣ್ಣಾವ್ರು ಹುಟ್ಟಿದ ಮಣ್ಣು. ಅದೇ ಮಣ್ಣಿನಲ್ಲಿ ನಿಂತು ಯುವ ಕರುನಾಡಿಗೆ ತಲೆ ಬಾಗಿದ್ದಾರೆ. ನನ್ನನ್ನು ಹರಸಿ, ಬೆಳೆಸಿ ಎಂದು ಕೇಳಿಕೊಂಡಿದ್ದಾರೆ. ರಾಜ್‌ಕುಮಾರ್ ಮೊಮ್ಮಗ ಎನ್ನುವ ಕಾರಣಕ್ಕೆ ಅಷ್ಟೇ ಅಲ್ಲ. ಅಪ್ಪು ಮಗ ಎನ್ನುವ ಕಾರಣಕ್ಕೂ ಅಲ್ಲ. ಅದೆಲ್ಲ ಮೀರಿದ್ದು ಕಲೆ. ಅದನ್ನು ಯುವ ರಕ್ತದಲ್ಲೇ ಬಸಿದುಕೊಂಡು ಬಂದಿದ್ದಾರೆ.

     

    ಒಬ್ಬನೇ ಶಿವ ಒಬ್ಬನೇ ಯುವ ಈ ಹಾಡನ್ನು ಸಂತೋಷ್ ಆನಂದ್ ರಾಮ್ (Santhosh Anandram) ಬರೆದಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ‘ರಾಜಕುಮಾರ’ ಸಿನಿಮಾದಲ್ಲಿ ಬೊಂಬೆ ಹೇಳುತ್ತೈತೆ ಹಾಡನ್ನು ಬರೆದಿದ್ದು ಇವರೇ. ಅದೇ ಸಂತೋಷ್ ಈಗ ಈ ಗೀತೆಗೆ ಸಾಲು ಹೆಣೆದಿದ್ದಾರೆ. ಒಬ್ಬ ನಯಾ ಹುಡುಗನನ್ನು ಹೇಗೆ ತೆರೆ ಮೇಲೆ ತೋರಿಸಬೇಕೆಂದು ಅವರಿಗೆ ಗೊತ್ತು. ಅದನ್ನು ನಿಯತ್ತಾಗಿ ಪಾಲಿಸಿದ್ದಾರೆ. ಸದ್ಯ ರಿಲೀಸ್ ಆಗಿರೋ ಯುವ ಹಾಡಿಗೆ ಸಖತ್ ರೆಸ್ಪಾನ್ಸ್ ಸಿಗುತ್ತಿದೆ. ಹಾಡಿಗೆ ಯುವನ ಖದರ್ ಫ್ಯಾನ್ಸ್ ಫಿದಾ ಆಗಿದ್ದಾರೆ. ಇನ್ನೇನು ಇದೇ ಮಾ.29ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

  • ರಾಮಭಕ್ತರಿದ್ದ ರೈಲಿಗೆ ಬೆಂಕಿ ಹಚ್ತೀನಿ- ಓರ್ವ ವಶಕ್ಕೆ

    ರಾಮಭಕ್ತರಿದ್ದ ರೈಲಿಗೆ ಬೆಂಕಿ ಹಚ್ತೀನಿ- ಓರ್ವ ವಶಕ್ಕೆ

    ಗದಗ: ಅಯೋಧ್ಯೆ (Ayodhya Ram Mandir) ಧಾಮ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಮೇರೆಗೆ ಗದಗ ನಿಲ್ದಾಣದಲ್ಲಿ ಓರ್ವನನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಅನ್ಯಕೋಮಿನ ನಾಲ್ವರು ಯುವಕರು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ನಡೆದಿದ್ದೇನು..?: ಅಯೋಧ್ಯೆ ಧಾಮ ಟ್ರೈನ್ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅನ್ಯಕೋಮಿನ ಯುವಕನೊಬ್ಬ ಟ್ರೈನ್‍ಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಚೈನ್ ಎಳೆದ ಕಾರಣ ರೈಲು ಸುಮಾರು 2 ಗಂಟೆಗಳ ಕಾಲ ತಡವಾಗಿ ಚಲಿಸಿದೆ. ಇದನ್ನೂ ಓದಿ: ಬೆಂಕಿ ಹಚ್ಚುತ್ತೇನೆಂದು ಅನ್ಯಕೋಮಿನ ಯುವಕನಿಂದ ಬೆದರಿಕೆ; ಮೈಸೂರು-ಅಯೋಧ್ಯೆ ರೈಲು 2 ಗಂಟೆ ಸ್ಥಗಿತ!

    ಮೈಸೂರು- ಅಯೋಧ್ಯೆ ಧಾಮ ರೈಲಿನಲ್ಲಿ (Mysuru- Ayodhya Train) 1500 ರಾಮ ಭಕ್ತರು ಪ್ರಯಾಣ ಮಾಡುತ್ತಿದ್ದರು. ಈ ವೇಳೆಯಲ್ಲಿ ರಾಮ ಭಕ್ತರು ಮಾರ್ಗದುದ್ದಕ್ಕೂ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಾರೆ. ಇದರಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ, ಸುಮಾರು 4 ಜನ ಅನ್ಯ ಕೋಮಿನ ಯುವಕರು ರಾಮ ಭಕ್ತರ ಜೊತೆಯಲ್ಲಿ ವಾಗ್ವಾದ ಆರಂಭ ಮಾಡಿದ್ದಾರೆ. ಈ ವೇಳೆಯಲ್ಲಿ ಹಿಂದೂ ಹಾಗೂ ಅನ್ಯಕೋಮಿನ ಯುವಕನ ಜೊತೆಯಲ್ಲಿ ವಾಗ್ವಾದ ಆರಂಭವಾಗಿದೆ. ಹಿಂದೂ ಕಾರ್ಯಕರ್ತರು ಹಾಗೂ ಅನ್ಯಕೋಮಿನ ಯುವಕರು ಪದೇ ಪದೇ ಚೈನ್ ಎಳೆದ ಕಾರಣ ಟ್ರೈನ್ ಮುಂದೆ ಸಾಗಲು ತೊಂದರೆಯಾಗಿದೆ.

    ಹಿಂದೂಪರ ಕಾರ್ಯಕರ್ತರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಆರಂಭ ಮಾಡುತ್ತಿದ್ದಂತೆಯೇ ಅಲ್ಲಿಂದ ಅನ್ಯಕೋಮಿನ ಯುವಕರು ಪರಾರಿಯಾಗಿದ್ದಾರೆ. ಇದರಿಂದ ಕೆರಳಿದ ರಾಮ ಭಕ್ತರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಮಾಡಲು ಆರಂಭ ಮಾಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತೆರಳುವ ಮುನ್ನವೇ ಸ್ಥಳಕ್ಕೆ ಆಗಮಿಸಿದ ಎಸ್‍ಪಿ ಶ್ರೀಹರಿಬಾಬು ಹಾಗೂ ಸಿಬ್ಬಂದಿ ಎಲ್ಲರ ಮನವೊಲಿಸಿ, ರೈಲು ಚಲಿಸುವಂತೆ ಮಾಡಿದ್ದಾರೆ. ಈ ನಡುವೆ ರೈಲು ನಿಲ್ದಾಣದಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಂತೆ ಗಲಾಟೆ ಮಾಡಿದ ಅನ್ಯಕೋಮಿನ ನಾಲ್ವರು ಯುವಕರು ಪರಾರಿಯಾಗಿದ್ದಾರೆ.

  • 2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದ ಸಾವು

    2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದ ಸಾವು

    ವಿಜಯನಗರ: 2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆ (Hospet) ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ.

    ಐಶ್ವರ್ಯ ರೈ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು (Marriage) ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

    ಯುವತಿ ಕೆಳ ಜಾತಿಯವಳು ಎಂಬ ಕಾರಣಕ್ಕೆ ಕೆಲವು ಷರತ್ತುಗಳ ಮೇಲೆ ಯುವಕನ ಕಡೆಯವರು ಮದುವೆಗೆ ಒಪ್ಪಿದ್ದರು. ಇದೇ ಕಾರಣಕ್ಕೆ ಯುವತಿಯ ಕೊಲೆಗೆ ಪ್ರಚೋದನೆ ನೀಡಲಾಗಿದೆ ಎಂದು ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ- ಐವರು ಅಧಿಕಾರಿಗಳ ಅಮಾನತು

    ಐಶ್ವರ್ಯ ಹಾಗೂ ವರ ಅಶೋಕ್ ಕಳೆದ 7-8 ವರ್ಷಗಳಿಂದ ಪ್ರೀತಿಸುತ್ತಿದ್ದರು. ನಮಗೂ ಅವರಿಗೂ ಹೊಂದಾಣಿಕೆ ಆಗಲ್ಲ, ನಾನು ಈ ಮದುವೆ ಬೇಡ ಎಂದು ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ ಮನಸ್ಸಿನವಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಯುವಕನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಆಟಿಕೆ ವಸ್ತುಗಳಿದ್ದ ಗೋದಾಮು ಧಗಧಗ – ಕಟ್ಟಡದಲ್ಲಿ ಸಿಲುಕಿದ್ದ ಮಹಿಳೆ ರೆಸ್ಕ್ಯೂ

  • ತುಂಗಭದ್ರಾ ಕಾಲುವೆಯಲ್ಲಿ ತೇಲಿಬಂತು ಮಹಿಳೆಯ ಶವ

    ತುಂಗಭದ್ರಾ ಕಾಲುವೆಯಲ್ಲಿ ತೇಲಿಬಂತು ಮಹಿಳೆಯ ಶವ

     ಬಳ್ಳಾರಿ: ತುಂಗಭದ್ರಾ ಕಾಲುವೆಯಲ್ಲಿ (Tungabhadra Canal) ಜಾರಿ ಬಿದ್ದು ಮಹಿಳೆ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ (Hospet) ನಡೆದಿದೆ.

    ಹೊಸಪೇಟೆ ತಾಲೂಕಿನ ಸಂಡೂರು ರಸ್ತೆಯಲ್ಲಿ ಬರುವ ಹೆಚ್‌ಎಲ್‌ಸಿ ಕಾಲುವೆ ಬಳಿ ನೀರಿನಲ್ಲಿ ತೇಲಿ ಬರುತ್ತಿದ್ದ ಮಹಿಳೆಯನ್ನು ಕಂಡು ಸ್ಥಳೀಯರು ದಡಕ್ಕೆ ಎಳೆದುತಂದಿದ್ದಾರೆ. ದಡಕ್ಕೆ ಬರುವಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದು, ವಿಷಯ ತಿಳಿದು ಸ್ಥಳಕ್ಕೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದ ನಟ ರಜನಿಕಾಂತ್

     

    ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯ ಗುರುತು‌ ಪತ್ತೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೃಷ್ಣಾ ನಗರದ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ.‌ ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹೊಸಪೇಟೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ

    ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ

    ಬಳ್ಳಾರಿ: ಹೊಸಪೇಟೆ ತಾಲೂಕಿನಲ್ಲಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (BDCC) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ (Anand Singh) ಅವರು ರಾಜಿನಾಮೆ ಸಲ್ಲಿಸಿದ್ದಾರೆ.

    ಬ್ಯಾಂಕಿನ ಶತಮಾನೋತ್ಸವ ಸಮಯದಲ್ಲಿ ಅಧ್ಯಕ್ಷ ಸ್ಥಾನ ವಹಿಸಿದ್ದ ಆನಂದ್ ಸಿಂಗ್ ಅವರು ರಾಜಿನಾಮೆ ಸಲ್ಲಿಸಿದ್ದು, ಸದ್ಯ ರಾಜಿನಾಮೆ ಪತ್ರ ಎಲ್ಲೆಡೆ ಹರಿದಾಡುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಫ್ಲೈಓವರ್‌ನಲ್ಲೇ ಸ್ಕೂಟರ್ ಅಡ್ಡಗಟ್ಟಿ 1.70 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

     

    ವಿಧಾನಸಭಾ ಚುನಾವಣೆ (Vidhan Sabha Election) ಬಳಿಕ ಯಾವುದೇ ಕಾರ್ಯಕ್ರಮಕ್ಕೂ ಆನಂದ್ ಸಿಂಗ್ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಬಿಡಿಸಿಸಿ ಬ್ಯಾಂಕ್ ಅಧಿಕಾರದ ಅವಧಿ ಇನ್ನೂ ಎರಡು ವರ್ಷಗಳ ಕಾಲ ಇದ್ದು, ಅವಧಿ ಮುನ್ನವೇ ರಾಜೀನಾಮೆ ನೀಡಿದ್ದು ಹಲವಾರು ಅನುಮಾನಕ್ಕೆ ಕಾರಣವಾಗಿದೆ.

    ಕಳೆದ ಚುನಾವಣೆಯಲ್ಲಿ ಮಗನ ಸೋಲಿನ ಬಳಿಕ ಯಾವುದೇ ರಾಜಕೀಯ ಕಾರ್ಯಕ್ರಮದಲ್ಲಿ ಆನಂದ್ ಸಿಂಗ್ ಭಾಗಿಯಾಗಿಲ್ಲ. ಹೀಗಾಗಿ ಆನಂದ್ ಸಿಂಗ್ ರಾಜಕೀಯ ನಿವೃತ್ತಿ ಪಡೆದ್ರಾ ಎನ್ನುವ ಪ್ರಶ್ನೆ ಎದ್ದಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]