Tag: ಹೊಸ ಮದ್ಯ ನೀತಿ ಹಗರಣ

  • ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಚುನಾವಣಾ ಪ್ರಚಾರಕ್ಕಾಗಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ- ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಯಾವುದೇ ನಿರ್ಣಯಗಳನ್ನು ಕೈಗೊಳ್ಳುವಂತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಮಾತನಾಡುವಂತಿಲ್ಲ ಎಂದು ಷರತ್ತು ವಿಧಿಸಿರುವ ಕೋರ್ಟ್ ಕೇವಲ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು ಎಂದು ಹೇಳಿದೆ.

    ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳಲಿದೆ. ಅಲ್ಲಿವರೆಗೂ ಜಾಮೀನು ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು. ಇದಕ್ಕೆ ನಿರಾಕರಿಸಿದ ಕೋರ್ಟ್ ಕಡೆಯ ಹಂತದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಜೂನ್ 31 ರ ಪ್ರಚಾರಕ್ಕೆ ಕಡೆಯ ದಿನವಾಗಿದ್ದು, ಈ ಹಿನ್ನೆಲೆ ಜೂನ್ 1 ರ ವರೆಗೂ ಜಾಮೀನು ಮಂಜೂರು ಮಾಡಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಇದನ್ನೂ ಓದಿ: ಪಾಕ್‌ ಸಹ ಅಣುಬಾಂಬ್‌ ಹೊಂದಿದೆ, ಕೆರಳಿಸಿದ್ರೆ ಭಾರತದ ಮೇಲೆ ಎಸೆಯುತ್ತಾರೆ: ಕಾಂಗ್ರೆಸ್‌ ಮಾಜಿ ಸಚಿವ ಪ್ರಚೋದನಕಾರಿ ಹೇಳಿಕೆ!

    ಕೇಜ್ರಿವಾಲ್ ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದ ಇಡಿ
    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿತ್ತು. ಅಫಿಡೆವಿಟ್‌ನಲ್ಲಿ ಚುನಾವಣಾ ಪ್ರಚಾರದ ಹಕ್ಕು ‘ಮೂಲಭೂತ ಹಕ್ಕಲ್ಲ’ ಎಂದು ಹೇಳಿತ್ತು.

    ಈವರೆಗೂ ಯಾವುದೇ ರಾಜಕೀಯ ನಾಯಕನು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

    ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡೆವಿಟ್‌ನಲ್ಲಿ ಹೇಳಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ವಿಶೇಷ ರಿಯಾಯಿತಿ ಕಾನೂನು ಮತ್ತು ಸಮಾನತೆಗೆ ಅಸಹ್ಯಕರವಾಗಿದೆ ಎಂದು ಹೇಳಿತ್ತು.

  • ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ನವದೆಹಲಿ: ಲೋಕಸಭಾ ಚುನಾವಣೆ ಹೊತ್ತಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹಾಗೂ ಬಿಆರ್‌ಎಸ್‌ ನಾಯಕಿ ಕೆ.ಕವಿತಾ (K.Kavitha) ಅವರಿಗೆ ಜೈಲೇ ಗತಿಯಾಗಿದೆ. ಇಬ್ಬರ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ವರೆಗೆ ವಿಸ್ತರಣೆಯಾಗಿದೆ.

    ಹೊಸ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧಿಸಲಾದ ವಿಪಕ್ಷಗಳ ನಾಯಕರಿಗೆ 14 ದಿನಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಿಸಲಾಗಿದೆ. ದೆಹಲಿಯ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್‌ ಮತ್ತು ಕವಿತಾರನ್ನು ಮುಂದಿನ ಮೇ 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇದನ್ನೂ ಓದಿ: ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    ದೆಹಲಿ ಸಿಎಂ ಅವರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಮಾ.21 ಇಡಿ ತಮ್ಮನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಏ.15 ರಂದು ಅರ್ಜಿ ವಿಚಾರಣೆ ನಡೆಸಿತ್ತು. ಆದರೆ ಕೇಜ್ರಿವಾಲ್‌ಗೆ ತಕ್ಷಣ ಜೈಲಿನಿಂದ ಮುಕ್ತಿ ನೀಡಲು ನಿರಾಕರಿಸಿತು.

    ಆದರೆ ಕೇಜ್ರಿವಾಲ್‌ ಅವರು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮೊದಲು ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟದ ಸದಸ್ಯನ ವಿರುದ್ಧ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ – ʻಮ್ಯಾಚ್‌ ಫಿಕ್ಸಿಂಗ್‌ʼ ಎಂದ ಕಾಂಗ್ರೆಸ್‌

    ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಕವಿತಾ ಅವರ ಜಾಮೀನು ಅರ್ಜಿ ವಿಚಾರಣೆಯು ಮೇ 2 ರಂದು ರೋಸ್‌ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವಾಜಾ ಅವರು ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ. ಇಡಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಾಗಲೇ ಕವಿತಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು.

  • ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

    ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

    ನವದೆಹಲಿ: ಹೊಸ ಮದ್ಯ ನೀತಿಯಲ್ಲಿ (Delhi Liquor Policy Case) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕೊಳ್ಳಪಟ್ಟಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ನ್ಯಾಯಾಂಗ ಬಂಧನವನ್ನು ಏ.26 ರವರೆಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ಹೊರಡಿಸಿದೆ.

    ಸಿಸೋಡಿಯಾ ಪರ ವಾದ ಮಂಡಿಸಿದ ವಕೀಲ ಮೋಹಿತ್ ಮಾಥುರ್, ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ವಿಳಂಬವಾಗಿದೆ. ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಬೆನೊಯ್ ಬಾಬುಗೆ ಜಾಮೀನು ನೀಡಿರುವುದನ್ನು ಉಲ್ಲೇಖಿಸಿ, ಸಿಸೋಡಿಯಾ ಕೂಡಾ ಪ್ರಭಾವಿ ಸ್ಥಾನದಲ್ಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಣಕು ಮತದಾನದಲ್ಲಿ ಬಿಜೆಪಿಗೆ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆಗೆ ಹಲವು ಎಎಪಿ ನಾಯಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಪ್ರಕರಣದ ಪೂರ್ಣ ತನಿಖೆವರೆಗೂ ಜಾಮೀನು ನೀಡಬಾರದು ಎಂದು ವಾದಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಏಪ್ರಿಲ್ 26 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಮುಂದೂಡಿತು.

  • ದೆಹಲಿ ಹೊಸ ಮದ್ಯ ನೀತಿ ಹಗರಣ – ಕೆ. ಕವಿತಾ ಮೊಬೈಲ್ ವಶಕ್ಕೆ ಪಡೆದ ಇಡಿ

    ದೆಹಲಿ ಹೊಸ ಮದ್ಯ ನೀತಿ ಹಗರಣ – ಕೆ. ಕವಿತಾ ಮೊಬೈಲ್ ವಶಕ್ಕೆ ಪಡೆದ ಇಡಿ

    ನವದೆಹಲಿ: ಹೊಸ ಮದ್ಯನೀತಿಯಲ್ಲಿ (Delhi excise policy) ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ವಿಚಾರಣೆಗೆ ಹಾಜರಾದ ತೆಲಂಗಾಣ ಪರಿಷತ್ ಸದಸ್ಯೆ, ಮುಖ್ಯಮಂತ್ರಿ ಕೆ.ಸಿ ಆರ್ ಚಂದ್ರಶೇಖರ್ ರಾವ್ (KC Chandrasekhar Rao) ಪುತ್ರಿ ಕೆ. ಕವಿತಾ (K Kavitha) ಅವರ ಮೊಬೈಲ್ ಫೋನ್‌ಗಳನ್ನು (Mobile Phones) ಇಡಿ (ED) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಇಂದು ನಡೆದ ವಿಚಾರಣೆ ವೇಳೆ ಒಟ್ಟು ಮೂರು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ. ಮೊಬೈಲ್ ಫೋನ್ ಜೊತೆಗೆ ಪತ್ರವನ್ನು ನೀಡಿರುವ ಕೆ. ಕವಿತಾ ಗೌಪ್ಯತೆ ಧಕ್ಕೆಯಾಗುವ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

    ವಿಚಾರಣೆಗೆ ತೆರಳುವ ಮುನ್ನ ಮಾತನಾಡಿದ ಅವರು, ದಾಖಲೆಗಾಗಿ ಏಜೆನ್ಸಿಯಿಂದ ನನ್ನನ್ನು ಮೊದಲ ಬಾರಿಗೆ ವಿಚಾರಣೆಗೆ ಕರೆಯಲಾಯಿತು. 2022ರ ನವೆಂಬರ್‌ನಲ್ಲಿ ನನ್ನ ವಿರುದ್ಧ ಮಾಡಿದ ಆರೋಪವು ದುರುದ್ದೇಶಪೂರಿತವಾಗಿದೆ, ತಪ್ಪಾಗಿ ಗ್ರಹಿಸಲ್ಪಟ್ಟಿದೆ. ತಮ್ಮ ವಿರುದ್ಧದ ‘ಸುಳ್ಳು’ ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿದರು‌. ಇದನ್ನೂ ಓದಿ: ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನಂತೆ ಅಮೆರಿಕದ 186 ಬ್ಯಾಂಕ್‌ಗಳು ಅಪಾಯದಲ್ಲಿ – ಅಧ್ಯಯನ

    ಮಾರ್ಚ್ 11 ಮತ್ತು ಮಾರ್ಚ್ 20ರಂದು ಎರಡು ಬಾರಿ ಈ ಹಿಂದೆ ಇಡಿ ಅಧಿಕಾರಿಗಳು 18-19 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು‌. ಸೋಮವಾರ ಸುಮಾರು ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಮಂಗಳವಾರದ ನಾಲ್ಕನೇ ದಿನದ ವಿಚಾರಣೆ ವೇಳೆ ಅವರ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಲಾಗುತ್ತಿದೆ. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್