Tag: ಹೊಸ ಮಾರ್ಗಸೂಚಿ

  • ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

    ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

    ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತವು ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ಕೊರೊನಾ ಭೀತಿ ಹಿನ್ನೆಲೆ ಕರ್ನಾಟಕ ಸರ್ಕಾರವು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಹೊರಡಿಸಿರುವ ಮಾರ್ಗ ಸೂಚಿಗಳ ಪ್ರಕಾರ ಇದನ್ನು ಬಿಡುಗಡೆಗೊಳಿಸಲಾಗಿದೆ.  ಇದನ್ನೂ ಓದಿ: ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

    ಹೊಸ ಮಾರ್ಗಸೂಚಿಯಲ್ಲಿ ಏನಿದೆ?
    ವೀಕೆಂಡ್ ಕಫ್ರ್ಯೂ ವೇಳೆ ಶನಿವಾರ ಹಾಗೂ ಭಾನುವಾರ ಮೆಟ್ರೋ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ರೈಲುಗಳು 20 ನಿಮಿಷಗಳ ಬದಲಾಗಿ 30 ನಿಮಿಷಗಳ ಆವರ್ತನಗಳಲ್ಲಿ ಕಡಿಮೆ ಮೆಟ್ರೋಗಳು ಕಾರ್ಯ ನಿರ್ವಹಿಸುತ್ತವೆ. ಮೆಟ್ರೋ ರೈಲುಗಳಲ್ಲಿ ಆಸನ ಸಾಮಥ್ರ್ಯ ತುಂಬಿರುವುದು ಗಮನಿಸಿದರೆ ಅವರು ಆ ರೈಲನ್ನು ಬಿಟ್ಟು ಮುಂದಿನ ರೈಲು ಹತ್ತಬೇಕಾಗುತ್ತದೆ. ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ: ಕೇಜ್ರಿವಾಲ್

  • ಓಮಿಕ್ರಾನ್ ಭೀತಿ – ಮುಂಬೈ, ಪುಣೆ, ನಾಸಿಕ್ ಶಾಲೆ ಪುನರಾರಂಭ ಮುಂದೂಡಿಕೆ

    ಓಮಿಕ್ರಾನ್ ಭೀತಿ – ಮುಂಬೈ, ಪುಣೆ, ನಾಸಿಕ್ ಶಾಲೆ ಪುನರಾರಂಭ ಮುಂದೂಡಿಕೆ

    ಮುಂಬೈ: ಕೋವಿಡ್-19 ಹೊಸ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದಾಗಿ ಮುಂಬೈನಲ್ಲಿ ಶಾಲೆಗಳ ಪುನರಾರಂಭವನ್ನು ಮುಂದೂಡಲಾಗಿದೆ.

    ಮುಂಬೈನಲ್ಲಿ 1 ರಿಂದ 7ನೇ ತರಗತಿಯ ಶಾಲೆಗಳು ನಾಳೆ ಅಂದರೆ ಡಿಸೆಂಬರ್ 1 ಆರಂಭವಾಗಬೇಕಿದ್ದ ಶಾಲೆಗಳನ್ನು ಡಿಸೆಂಬರ್ 15 ರಿಂದ ತೆರೆಯುವುದಾಗಿ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಂಗಳವಾರ ತಿಳಿಸಿದೆ. ಆದರೆ ಮಹಾರಾಷ್ಟ್ರದ ಕೆಲವು ಶಾಲೆಗಳನ್ನು ನಾಳೆಯಿಂದಲೇ ತೆರೆಯಲಾಗುತ್ತಿದೆ. ಇದನ್ನೂ ಓದಿ: ಓಮಿಕ್ರಾನ್ ರೂಪಾಂತರಿ ನಮ್ಮ ದೇಶದಲ್ಲೂ ಇರಬಹುದು: ಡಾ.ಸಿ.ಎಸ್ ಮಂಜುನಾಥ

    ಕೋವಿಡ್-19 ಹೊಸ ರೂಪಾಂತರ ತಳಿ ಓಮಿಕ್ರಾನ್‍ನ ಆತಂಕದಿಂದ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ಅಪಾಯದಲ್ಲಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಬಗ್ಗೆ ರಾಜ್ಯ ಸಚಿವ ಸಂಪುಟ ಕಳವಳ ವ್ಯಕ್ತಪಡಿಸಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಸೋಮವಾರ ಹೇಳಿದ್ದಾರೆ.

    ವಿಶ್ವದಲ್ಲಿ ಹಬ್ಬುತ್ತಿರುವ ಕೋವಿಡ್-19ನ ತಳಿ ಓಮಿಕ್ರಾನ್ ಅನ್ನು ತಡೆಗಟ್ಟುವ ದೃಷ್ಟಿಯಿಂದ 1-7ನೇ ತರಗತಿಯವರೆಗೂ ಶಾಲೆಗಳನ್ನು ಡಿಸೆಂಬರ್ 1ರ ಬದಲಾಗಿ ಡಿಸೆಂಬರ್ 15 ರಿಂದ ಪುನಾರಂಭಿಸಲಾಗುತ್ತದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಾಧ್ಯಮಕ್ಕೆ ತಿಳಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಯಾವಾಗ ಕುಡಿತಾರೋ, ಯಾವಾಗ ಕುಡಿಯಲ್ಲೊ ಗೊತ್ತಿಲ್ಲ: ಕೆ.ಎಸ್.ಈಶ್ವರಪ್ಪ

    ಭಾರತದಲ್ಲಿ ಯಾವುದೇ ಓಮಿಕ್ರಾನ್ ಪ್ರಕರಣಗಳು ವರದಿಯಾಗಿಲ್ಲ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಇಂದು ಕೋವಿಡ್-19 ರೂಪಾಂತರ ತಳಿ ಓಮಿಕ್ರಾನ್ ಕುರಿತು ರಾಜ್ಯಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

  • ಗಣೇಶ ಚತುರ್ಥಿ ಆಚರಣೆಗೆ 10 ದಿನದಲ್ಲಿ ಹೊಸ ಮಾರ್ಗಸೂಚಿ: ಶಿವರಾಮ್ ಹೆಬ್ಬಾರ್

    ಗಣೇಶ ಚತುರ್ಥಿ ಆಚರಣೆಗೆ 10 ದಿನದಲ್ಲಿ ಹೊಸ ಮಾರ್ಗಸೂಚಿ: ಶಿವರಾಮ್ ಹೆಬ್ಬಾರ್

    ಕಾರವಾರ: ಗಣೇಶ ಚತುರ್ಥಿ ಆಚರಣೆ ಸಂಬಂಧ ಮುಂದಿನ ಹತ್ತು ದಿನದ ಪರಿಸ್ಥಿತಿ ಅವಲೋಕಿಸಿ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಶಿರಸಿ ನಗರದಲ್ಲಿ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಗೆ ಕಠಿಣ ನಿರ್ಬಂಧ ವಿಧಿಸದಂತೆ ಈಗಾಗಲೇ ಗಣೇಶೊತ್ಸವ ಸಮಿತಿ ಪ್ರಮುಖರ ನಿಯೋಗ ತಮ್ಮನ್ನು ಭೇಟಿ ಮಾಡಿದೆ. ಜನರ ಒತ್ತಾಯವನ್ನು ಸರ್ಕಾರಕ್ಕೂ ತಿಳಿಸಲಾಗಿದೆ. ಮುಂದಿನ ಸ್ಥಿತಿ ಗಮನಿಸಿ ಮುಖ್ಯಮಂತ್ರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: 6 ಲಕ್ಷ ಕೋಟಿ ಸಂಗ್ರಹ ಗುರಿ – ಖಾಸಗಿಯವರಿಗೆ ಸಿಗಲಿದೆ ರೈಲು, ರಸ್ತೆ, ಗಣಿ

    ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ ಎರಡು ಸಾವಿರದಷ್ಟು ರೈತರಿಗೆ ಬಿಡುಗಡೆ ಆಗಬೇಕಿರುವ ಮೊತ್ತವನ್ನು ಶೀಘ್ರ ದೊರಕುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿದ್ದೇನೆ. ವಾರದೊಳಗೆ ಸಕಾರಾತ್ಮಕ ಫಲಿತಾಂಶ ಕಂಡುಕೊಳ್ಳಲಿದ್ದೇವೆ ಎಂದರು. ಇದನ್ನೂ ಓದಿ: ಗಣೇಶ ಚತುರ್ಥಿಯಂದೇ ಪ್ರಕೃತಿಯ ಮಧ್ಯೆ ಪ್ರತ್ಯಕ್ಷವಾದ ಗಣಪತಿ

  • ಲಸಿಕೆ ಕೊರತೆ- ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ

    ಲಸಿಕೆ ಕೊರತೆ- ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ

    ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಕೊರೊನಾ ಲಸಿಕೆ ಅಭಾವ ಕಾಡುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳು ವ್ಯಾಕ್ಸಿನ್ ಕೊಳ್ಳಲು ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

    ಇಷ್ಟು ದಿನ ಖಾಸಗಿ ಆಸ್ಪತ್ರೆಗಳು ಉತ್ಪಾದನಾ ಕಂಪನಿಗಳಿಂದ ನೇರವಾಗಿ ಕೊರೊನಾ ಲಸಿಕೆ ಕೊಳ್ಳಬಹುದಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದ್ದು, ಖಾಸಗಿ ಆಸ್ಪತ್ರೆಗಳು ಸಹ ಕೋ-ವಿನ್ ಆಪ್‍ನಲ್ಲಿಯೇ ಆರ್ಡರ್ ಮಾಡಬೇಕು ಎಂದು ಹೊಸ ನಿಯಮದಲ್ಲಿ ತಿಳಿಸಿದೆ. ಕೊರೊನಾ ಲಸಿಕೆಯ ಸಂಗ್ರಹ ಹಾಗೂ ಲಾಭದ ಕುರಿತು ಪರಿಶೀಲಿಸುವ ದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

    ಹೊಸ ಮಾರ್ಗಸೂಚಿಗಳ ಪ್ರಕಾರ ಖಾಸಗಿ ಆಸ್ಪತ್ರೆಗಳು ನೇರವಾಗಿ ಲಸಿಕೆ ಉತ್ಪಾದಕರಿಂದ ಕೊಳ್ಳುವಂತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕೋ-ವಿನ್ ಪೋರ್ಟಲ್‍ನಲ್ಲಿ ವ್ಯಾಕ್ಸಿನ್ ಆರ್ಡರ್ ಮಾಡಬೇಕು. ಅಲ್ಲದೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮೂಲಕ ಪೇಮೆಂಟ್ ಮಾಡಬೇಕು. ಜುಲೈ 1 ರಿಂದ ವ್ಯಾಕ್ಸಿನ್ ಖರೀದಿಯ ಹೊಸ ನಿಯಮಗಳು ಜಾರಿಗೆ ಬರಲಿವೆ.

    ಉತ್ಪಾದಕರ ಕಡೆಯಿಂದ ನೇರವಾಗಿ ಖರೀದಿಸಿದ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು ಕಡಿಮೆ ಪ್ರಮಾಣದಲ್ಲಿ ಬಳಸುತ್ತಿವೆ. ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡುತ್ತಿಲ್ಲ, ಸ್ಟಾಕ್ ಉಳಿಯುತ್ತಿದೆ ಎಂಬ ಕುರಿತು ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

    ಹೊಸ ನಿಯಮದ ಪ್ರಕಾರ, ಲಸಿಕೆ ಖರೀದಿಸಿದ ಬಳಿಕ ಸಂಗ್ರಹಣೆ ಹಾಗೂ ಲಸಿಕೆ ಹಾಕಿರುವುದು ಎಲ್ಲದರ ಕುರಿತು ಲೆಕ್ಕ ನೀಡಬೇಕಾಗುತ್ತದೆ. ನಿರ್ದಿಷ್ಟ ತಿಂಗಳಲ್ಲಿ ಅಥವಾ ವಾರದಲ್ಲಿ ಎಷ್ಟು ಲಸಿಕೆ ಖರ್ಚಾಗಿದೆ ಎಂಬುದನ್ನು ಖಾಸಗಿ ಆಸ್ಪತ್ರೆಗಳು ತಿಳಿಸಬೇಕಾಗುತ್ತದೆ. ಇದರಿಂದಾಗಿ ಹೆಚ್ಚು ದಿನಗಳ ಕಾಲ ಸ್ಟಾಕ್ ಇಟ್ಟುಕೊಳ್ಳುವುದು ತಪ್ಪುತ್ತದೆ. ಇದರಿಂದ ಸರ್ಕಾರಕ್ಕೆ ಹೆಚ್ಚು ಲಸಿಕೆ ಸಿಗುತ್ತದೆ.

    ಪ್ರಸ್ತುತ ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಲಸಿಕೆಗಳನ್ನು ನೇರವಾಗಿ ಉತ್ಪಾದಕರಿಂದ ಖರೀದಿಸಬಹುದಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ ಲಸಿಕೆಗೆ ನಿಗದಿಪಡಿಸಿರುವ ಬೆಲೆಯ ಮೇಲೆ 150 ರೂ. ಸೇವಾ ಶುಲ್ಕವನ್ನು ವಿಧಿಸಲಾಗಿದ್ದು, ಇದನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಸರ್ಕಾರಗಳಿಗೆ ವಹಿಸಲಾಗಿದೆ.