Tag: ಹೋಮ್ ಐಸೋಲೇಶನ್

  • ಕೋವಿಡ್ ಸಂದರ್ಭದಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಸಚಿವ ಸುಧಾಕರ್

    ಕೋವಿಡ್ ಸಂದರ್ಭದಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಸಚಿವ ಸುಧಾಕರ್

    ಬೆಂಗಳೂರು: ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5 ಲಕ್ಷ ಆರೋಗ್ಯ ಸಿಬ್ಬಂದಿಗೆ ತಂತ್ರಜ್ಞಾನದ ಮೂಲಕ ತರಬೇತಿ ನೀಡಲಾಗಿದೆ. ಇದು ಉಳಿದ ರಾಜ್ಯಗಳಿಗೂ ಮಾದರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.

    ಸ್ಟೆಪ್ ಒನ್ ಸಂಸ್ಥೆಯ ಸಹಯೋಗದಲ್ಲಿ ಕೋವಿಡ್ ರೋಗಿಗಳ ಮನೆ ಐಸೋಲೇಶನ್ ಗೆ ಸಂಬಂಧಿಸಿದಂತೆ 10,000 ವೈದ್ಯ, ಆಯುಷ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುಧಾಕರ್ ಅವರು ಮಾತನಾಡಿದರು.

    ಈ ವೇಳೆ ಅವರು, ಕೋವಿಡ್ ಮೊದಲ ಅಲೆಯಲ್ಲಿ ಆರೋಗ್ಯ ಸಿಬ್ಬಂದಿಗೆ ಹೊಸ ವೈರಾಣು ಕುರಿತು ತರಬೇತಿ ನೀಡಬೇಕಿತ್ತು. ಆದರೆ ಲಾಕ್‍ಡೌನ್ ಮೊದಲಾದ ಕಾರಣಗಳಿಂದಾಗಿ ತರಬೇತಿ ನೀಡಲು ಸಾಧ್ಯವಾಗಲಿಲ್ಲ. ಆ ಸಂದರ್ಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಸ್ಥೆಗಳ ನೆರವಿನಲ್ಲಿ ತಂತ್ರಜ್ಞಾನ ಬಳಸಿ 2.5 ಲಕ್ಷ ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಈ ಬಗೆಯ ಪರಿಣಾಮಕಾರಿ ತಂತ್ರಜ್ಞಾನ ಬಳಕೆಯನ್ನು ಕೇಂದ್ರ ಸರ್ಕಾರ ಕೂಡ ಗುರುತಿಸಿದೆ ಎಂದು ಪ್ರಶಂಸಿಸಿದರು. ಇದನ್ನೂ ಓದಿ: ವಸತಿ ಶಾಲೆಯ 16 ಮಕ್ಕಳಿಗೆ ವಕ್ಕರಿಸಿದ ಕೊರೊನಾ


    5 ಟಿ ಕ್ರಮವನ್ನು ಕೂಡ ಯಶಸ್ವಿಯಾಗಿ ಜಾರಿ ಮಾಡಲಾಗಿದೆ. ಮೂರನೇ ಅಲೆಯಲ್ಲಿ 2-3 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗುತ್ತಿದ್ದರೂ ತೀವ್ರತೆ ಕಡಿಮೆ ಇದೆ. 93% ರೋಗಿಗಳು ಮನೆ ಐಸೋಲೇಶನ್ ನಲ್ಲೇ ಇದ್ದಾರೆ. 5-6% ಜನರು ಆಸ್ಪತ್ರೆ ಹಾಗೂ 1% ಜನರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ ಎಂದರು.

    ಸ್ಟೆಪ್ ಒನ್ ಸಂಸ್ಥೆಯು ಕೋವಿಡ್ ಹೋರಾಟದಲ್ಲಿ ಸರ್ಕಾರದೊಂದಿಗೆ ಭಾಗಿಯಾಗಿ ಸಾವಿರಾರು ವೈದ್ಯರೊಂದಿಗೆ ಕೆಲಸ ಮಾಡಿ ಮನೆ ಐಸೋಲೇಶನ್ ಕ್ರಮ ಯಶಸ್ವಿಯಾಗಲು ನೆರವಾಗಿದೆ. ಇದರಿಂದಾಗಿ ರಾಜ್ಯ, ದೇಶದಲ್ಲೇ ಮಾದರಿಯಾಗಿದೆ. ನೀತಿ ಆಯೋಗ ಕೂಡ ಹೋಮ್ ಐಸೋಲೇಶನ್ ಹಾಗೂ ಇದಕ್ಕೆ ಸಂಬಂಧಿಸಿದ ತಾಂತ್ರಿಕ ನೆರವುಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದೆ. ಎಲ್ಲ ವೈದ್ಯ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ವೈದ್ಯರು ಹಾಗೂ ವೈದ್ಯಕೀಯ ಕಾಲೇಜುಗಳ ಪ್ರಾಧ್ಯಾಪಕರ ಸಹಯೋಗದಿಂದಾಗಿ ಮನೆ ಐಸೋಲೇಶನ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸಾಧ್ಯವಾಗಿದೆ ಎಂದು ವಿವರಿಸಿದರು.

    10 ಸಾವಿರ ಸಿಬ್ಬಂದಿ ನಿಯೋಜನೆ!
    ಹೋಮ್ ಐಸೋಲೇಶನ್ ನಲ್ಲಿರುವವರ ಆರೋಗ್ಯ ಮೇಲೆ ಹೆಚ್ಚು ನಿಗಾ ಇರಿಸಲಾಗಿದೆ. ಇದಕ್ಕಾಗಿ ಸುಮಾರು 10 ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಇನ್ನೂ 10 ಸಾವಿರ ಸಿಬ್ಬಂದಿಯನ್ನು ನಿಯೋಜಿಸುವ ಉದ್ದೇಶವಿದೆ. 500 ತಜ್ಞ ವೈದ್ಯರು ಈ ವ್ಯವಸ್ಥೆಗೆ ಬೆಂಬಲ ನೀಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ರೋಗಿಗಳಿಗೆ 1.33 ಕೋಟಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಲಾಗಿತ್ತು. 42.57 ಲಕ್ಷ ವೈದ್ಯರ ಕನ್ಸಲ್ಟೇಶನ್ ಮಾಡಲಾಗಿತ್ತು. 36 ಸಾವಿರ ರೋಗಿಗಳಿಗೆ ಮಾನಸಿಕ ಆರೋಗ್ಯ ಕೌನ್ಸಿಲಿಂಗ್ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ರೆಸಾರ್ಟ್ ನಲ್ಲಿ 30ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದೃಢ – ರೆಸಾರ್ಟ್ ಮುಚ್ಚದೆ ಎಂದಿನಂತೆ ಕಾರ್ಯ

    ಅನೇಕ ರೋಗಿಗಳು ಅಗತ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದನ್ನು ತಪ್ಪಿಸಿ ಅಗತ್ಯವಿರುವವರಿಗೆ ಹಾಸಿಗೆ ಒದಗಿಸಲು ವೈದ್ಯರ ಸಲಹೆ, ಮಾರ್ಗದರ್ಶನ ಅಗತ್ಯ. ದೂರವಾಣಿ ಕರೆ ಮಾಡಿ ಮಾರ್ಗದರ್ಶನ ನೀಡುವುದರಿಂದ ಅನೇಕರ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದರು.

  • ಮನೆಯಲ್ಲಿ ಕ್ವಾರಂಟೈನ್‍ನಲ್ಲಿದ್ದವರಿಗೆ ಆನ್‍ಲೈನ್ ಯೋಗ ಕ್ಲಾಸ್: ಕೇಜ್ರಿವಾಲ್

    ಮನೆಯಲ್ಲಿ ಕ್ವಾರಂಟೈನ್‍ನಲ್ಲಿದ್ದವರಿಗೆ ಆನ್‍ಲೈನ್ ಯೋಗ ಕ್ಲಾಸ್: ಕೇಜ್ರಿವಾಲ್

    ನವದೆಹಲಿ: ಕೋವಿಡ್-19 ಸೋಂಕು ತಗುಲಿ ಹೋಮ್ ಐಸೋಲೇಶನ್‍ನಲ್ಲಿ ಇರುವವರಿಗೆ ಆನ್‍ಲೈನ್‍ನಲ್ಲಿ ಯೋಗ ಕ್ಲಾಸ್ ಪ್ರಾರಂಭಿಸಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

    ಕೋವಿಡ್-19 ನಿಂದ ಮಾನಸಿಕ ಆರೋಗ್ಯವನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದು ಮುಖ್ಯ ಎಂದು ವಿವರಿಸಿದ ಅವರು, ದೆಹಲಿಯಲ್ಲಿ ಕೋವಿಡ್ ಸಂಖ್ಯೆ ಏರುತ್ತಿದೆ. ಪರಿಣಾಮ ಹೆಚ್ಚು ಜನರು ಹೋಮ್ ಐಸೋಲೇಶನ್‍ನಲ್ಲಿ ಇದ್ದಾರೆ. ಅದಕ್ಕೆ ಅವರಿಗೆ ಮಾನಸಿಕ ನೆಮ್ಮದಿ ಮತ್ತು ಶಾಂತಿಗಾಗಿ ಬುಧವಾರದಿಂದ ಆನ್‍ಲೈನ್ ಯೋಗ ಮತ್ತು ಧ್ಯಾನ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:  ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

    ಈ ಯೋಗ ಕ್ಲಾಸ್ ಗೆ ಭಾಗವಹಿಸಲು ಇಚ್ಚಿಸುವವರು ನೋಂದಾಯಿಕೊಳ್ಳಬೇಕು. ಅದಕ್ಕೆ ಲಿಂಕ್ ಅನ್ನು ಸೋಂಕಿತರಿಗೆ ಕಳುಹಿಸಲಾಗುತ್ತದೆ. ಬುಧವಾರದಿಂದ ತರಬೇತಿ ಪ್ರಾರಂಭವಾಗುತ್ತೆ. ಕ್ಲಾಸ್ ಬೆಳಗ್ಗೆ ಮತ್ತು ಸಂಜೆ ಒಂದು ಗಂಟೆ ಇರುತ್ತದೆ. ಪ್ರತಿ ತರಗತಿಯು 15 ರೋಗಿಗಳನ್ನು ಒಳಗೊಂಡಿರುತ್ತದೆ. ಈ ಕ್ಲಾಸ್ ನಲ್ಲಿ ಭಾಗವಹಿಸುವವರು ತಮ್ಮ ಬೋಧಕರೊಂದಿಗೆ ಸಂವಹನ ನಡೆಸಬಹುದು ಎಂದು ತಿಳಿಸಿದರು.

    ಯೋಗವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಒತ್ತಿ ಹೇಳಿದ ಅವರು, ದೆಹಲಿ ಸರ್ಕಾರವು 40,000 ರೋಗಿಗಳಿಗೆ ಹೋಮ್ ಐಸೊಲೇಟಿಯಲ್ಲಿ ಆನ್‍ಲೈನ್ ತರಗತಿಗಳನ್ನು ನಡೆಸಲು ವ್ಯವಸ್ಥೆ ಮಾಡಿದೆ ಎಂದು ಹೇಳಿದರು. ಇದನ್ನೂ ಓದಿ: ಸ್ಲಂ ಬೋರ್ಡ್‍ನಿಂದ ಕೈಗೆತ್ತಿಕೊಂಡಿರುವ 50 ಮನೆಗಳನ್ನು ಜ.30 ರೊಳಗೆ ಪೂರ್ಣಗೊಳಿಸಬೇಕು: ಗೋಪಾಲಯ್ಯ

  • ಉಡುಪಿಯ ಕೋವಿಡ್ ಸೋಂಕಿತರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ- ಹೋಮ್ ಐಸೋಲೇಶನ್ ರದ್ದು

    ಉಡುಪಿಯ ಕೋವಿಡ್ ಸೋಂಕಿತರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ- ಹೋಮ್ ಐಸೋಲೇಶನ್ ರದ್ದು

    ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ನಿಧಾನವಾಗಿ ಜಾಸ್ತಿಯಾಗುತ್ತಿದೆ. ಜಿಲ್ಲೆಯಲ್ಲಿ 1368 ಸಕ್ರಿಯ ಪ್ರಕರಣ ಇವೆ. ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್ ಶಿಫ್ಟ್ ಮಾಡುವ ನಿರ್ಣಯ ಮಾಡಿದ್ದೇವೆ ಎಂದು ಉಡುಪಿ ಜಿಲ್ಲಾ ಕೋವಿಡ್ ಉಸ್ತುವಾರಿ ಸುನಿಲ್ ಕುಮಾರ್ ಹೇಳಿದ್ದಾರೆ.

    ಉಡುಪಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ವೈದ್ಯರ ಸಭೆ ನಡೆಯುತು. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಾಯ್ತು. ಮನೆಯವರು, ರೋಗಿಗಳು ಜಿಲ್ಲಾಡಳಿತದ ಜೊತೆ ಸಹಕಾರ ಮಾಡಬೇಕು. ಕೋವಿಡ್ ಕೇರ್ ಸೆಂಟರ್ ದಾಖಲಾತಿ ಸಂದರ್ಭ ಸ್ಥಳೀಯಾಡಳಿತ ಜೊತೆ ಜನರು ಸಹಕಾರ ಮಾಡಬೇಕು ಎಂದು ವಿನಂತಿ ಮಾಡಿದರು.

    ಕೋವಿಡ್ ನಿಯಂತ್ರಣ ಕ್ಕೆ ಇದು ಸೂಕ್ತ ಎಂದು ಅಧಿಕಾರಿಗಳು, ಪ್ರತಿನಿಧಿಗಳ ತೀರ್ಮಾನಿಸಿದ್ದೇವೆ. ಜಿಲ್ಲೆಯಲ್ಲಿ 2000 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಸಿದ್ಧವಿದೆ. ಹೆಬ್ರಿ, ಕಾರ್ಕಳ, ಉಡುಪಿ, ಕುಂದಾಪುರ ಆಕ್ಸಿಜನ್ ಉತ್ಪಾಧಕಾ ಘಟಕ ಸ್ಥಾಪನೆಯಾಗಿದೆ. ಒಂದು ವಾರದೊಳಗೆ ಕಾಮಗಾರಿ ಪೂರ್ಣ ಆಗಲಿದೆ. ಎಲ್ಲಾ ಯಂತ್ರೋಪಕರಣ ಬಂದಿದ್ದು ವಾರದೊಳಗೆ ಘಟಕ ಪೂರ್ಣಗೊಳಿಸುತ್ತೇವೆ ಎಂದರು.

    ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಸುನೀಲ್ ಕುಮಾರ್ , ಡಿಸಿ ಜಿ. ಜಗದೀಶ್, ಸಿಇಒ ನವೀನ್ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ ಪಿ ವಿಷ್ಣುವರ್ಧನ್ ಇದ್ದರು.

  • ಹೋಮ್ ಐಸೋಲೇಶನ್‍ನಲ್ಲಿರುವವರಿಗೆ ಕೌನ್ಸಿಲಿಂಗ್- ಹಿಮ್ಸ್ ವಿದ್ಯಾರ್ಥಿಗಳಿಗೆ ಮೊದಲ ಸ್ಥಾನ

    ಹೋಮ್ ಐಸೋಲೇಶನ್‍ನಲ್ಲಿರುವವರಿಗೆ ಕೌನ್ಸಿಲಿಂಗ್- ಹಿಮ್ಸ್ ವಿದ್ಯಾರ್ಥಿಗಳಿಗೆ ಮೊದಲ ಸ್ಥಾನ

    ಹಾಸನ: ಕೋವಿಡ್ ಚಿಕಿತ್ಸಾ ಸೇವೆಯಲ್ಲಿ ರಾಜ್ಯದಲ್ಲೇ ಹೆಸರಾಗಿರುವ ಹಾಸನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಹೋಮ್ ಐಸೋಲೇಶನ್‍ನಲ್ಲಿರುವವರ ಸೇವೆಯಲ್ಲಿಯೂ ರಾಜ್ಯದಲ್ಲೇ ಅಗ್ರಸ್ಥಾನ ಪಡೆದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

    ಹಿಮ್ಸ್ ನ ಅಂತಿಮ ವರ್ಷದ ಎಲ್ಲ 70 ವಿದ್ಯಾರ್ಥಿಗಳು ಸಂಪೂರ್ಣವಾಗಿ ಕೊವಿಡ್-19 ಸೇವೆ ಹಾಗೂ ಹೋಮ್ ಐಸೋಲೇಶನ್‍ನಲ್ಲಿರುವವರಿಗೆ ಆನ್‍ಲೈನ್ ಮೂಲಕ ಅರೋಗ್ಯ ವಿಚಾರಣೆ, ಕೌನ್ಸಲಿಂಗ್ ಕಾರ್ಯದಲ್ಲಿ ತೊಡಗಿ ಮೆಚ್ಚುಗೆ ಗಳಿಸಿದ್ದಾರೆ.

    ರಾಜ್ಯ ಸರ್ಕಾರ ರಾಜೀವ್ ಗಾಂಧಿ ವಿಶ್ವ ವಿದ್ಯಾನಿಲಯದ ಮೂಲಕ ಎಲ್ಲ 45 ವೈದ್ಯಕೀಯ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳ ಸೇವಾ ವಿವರಗಳ ದತ್ತಾಂಶ ಪಡೆದುಕೊಂಡಿದ್ದು, ಶೇ.100ರ ಸಾಧನೆಯೊಂದಿಗೆ ಹಿಮ್ಸ್ ಮೊದಲ ಸ್ಥಾನದಲ್ಲಿದೆ.

    ದಿನಕ್ಕಿಷ್ಟು ಜನ ಹೋಮ್ ಐಸೋಲೇಶನ್‍ನಲ್ಲಿರುವ ರೋಗಿಗಳ ಆರೋಗ್ಯ ವಿಚಾರಿಸುವುದು, ಕೌನ್ಸಲಿಂಗ್ ಹಾಗೂ ಮಾರ್ಗದರ್ಶನ ಮಾಡುವ ಕರ್ತವ್ಯ ನಿರ್ವಹಣೆಯ ಹೊಣೆಯನ್ನು ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಪ್ರತಿ ವಾರಕ್ಕೊಮ್ಮೆ ರಾಜ್ಯ ಮಟ್ಟದಲ್ಲೇ ನೋಡಲ್ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಕಾರ್ಯವೈಖರಿಯ ಮೌಲ್ಯ ಮಾಪನ ಮಾಡಿ, ಕಾಲೇಜುವಾರು ಮೌಲ್ಯಾಂಕ ಪ್ರಕಟಿಸಲಾಗುತ್ತದೆ.

    ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ 45 ಮೆಡಿಕಲ್ ಕಾಲೇಜುಗಳ ಪಟ್ಟಿಯಲ್ಲಿ ಹಿಮ್ಸ್ ವಿದ್ಯಾರ್ಥಿಗಳ ಸಾಧನೆ ಮಂಚೂಣಿಯಲ್ಲಿದೆ. ಎಸ್.ಎಸ್ ಇನ್‍ಸ್ಟಿಟ್ಯೂಟ್ ಆಫ್ ಮಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ನಂತರದ ಸ್ಥಾನದಲ್ಲಿವೆ.

    ಕೇವಲ ಹೋಮ್ ಐಸೋಲೇಶನ್‍ನಲ್ಲಿರುವವರ ಸೇವೆ ಮಾತ್ರವಲ್ಲದೆ, ಆಸ್ಪತ್ರೆಗಳಲ್ಲಿಯೂ ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಹಿಮ್ಸ್‍ನ ವಿದ್ಯಾರ್ಥಿಗಳು ತೊಡಗಿ, ಜಿಲ್ಲೆಯ ಕೋವಿಡ್ ಚಿಕಿತ್ಸಾ ವ್ಯವಸ್ಥೆಗೆ ಬಲ ತುಂಬಿದ್ದಾರೆ ಎಂಬುದು ಪ್ರಶಂಸನೀಯ.

    ಹಿಮ್ಸ್ ನಿರ್ದೇಶಕರಿಂದ ಅಭಿನಂದನೆ:
    ಹಿಮ್ಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ಈ ಸಮರ್ಪಣಾ ಭಾವದ ಸೇವೆ ಮತ್ತು ಸಾಧನೆಗೆ ಹಿಮ್ಸ್ ನಿರ್ದೇಶಕ ಡಾ.ರವಿ ಕುಮಾರ್, ಪ್ರಾಂಶುಪಾಲ ಡಾ.ನಾಗೇಶ್ ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಕೃಷ್ಣಮೂರ್ತಿ ಅಭಿನಂದನೆ ಸಲ್ಲಿಸಿದ್ದಾರೆ.

    ಸುಮಾರು 800 ಹಾಸಿಗೆಗಳ ಕೋವಿಡ್ ಆಸ್ಪತ್ರೆಯ ಯಶಸ್ವಿ ನಿರ್ವಹಣೆ, ಕೋವಿಡ್ ಪೂರ್ವದಲ್ಲಿಯೇ ಆಕ್ಸಿಜನ್ ಶೇಖರಣೆಗೆ ಪೂರ್ವ ಸಿದ್ಧತೆ ಹಾಗೂ ವೈರಾಣು ಪತ್ತೆ ಪ್ರಯೋಗಾಲಯದ ಸ್ಥಾಪನೆ, ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ‘ವೈದ್ಯರ ನಡೆ ಹಳ್ಳಿಯ ಕಡೆ’ ಎಂಬ ಅನನ್ಯ ಕಾರ್ಯಕ್ರಮಕ್ಕೆ ಸಂಸ್ಥೆಯ 75 ವೈದ್ಯರನ್ನು ನಿಯೋಜಿಸಿ, ಕಾರ್ಯಕ್ರಮದ ಯಶಸ್ಸಿಗಾಗಿ ಜಿಲ್ಲಾಡಳಿತದೊಂದಿಗೆ ಹೆಗಲು ಜೋಡಿಸಿ ಸಹಕರಿಸುತ್ತಿರುವ ಹಿಮ್ಸ್ ಸಂಸ್ಥೆ, ಸೇವೆಯಲ್ಲಿ ಸದಾ ಮುಂದಿದೆ. ಈಗ ವಿದ್ಯಾರ್ಥಿಗಳ ಸಾಧನೆ ಸಂಸ್ಥೆಗೆ ಇನ್ನೊಂದು ಮನ್ನಣೆ ಸಿಕ್ಕಂತಾಗಿದೆ.

  • ಮಹಾರಾಷ್ಟ್ರದಲ್ಲಿ ಹೋಮ್ ಐಸೋಲೇಶನ್ ನಿಯಮ ಬದಲಾವಣೆ

    ಮಹಾರಾಷ್ಟ್ರದಲ್ಲಿ ಹೋಮ್ ಐಸೋಲೇಶನ್ ನಿಯಮ ಬದಲಾವಣೆ

    ಮುಂಬೈ: ಮಹಾರಾಷ್ಟ್ರ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹೋಮ್ ಐಸೋಲೇಶನ್ ನಿಯಮಗಳಲ್ಲಿ ಬದಲಾವಣೆ ತಂದಿದೆ. ಹೊಸ ಮಾರ್ಗಸೂಚಿ ಪ್ರಕಟಿಸಿರುವ ಸರ್ಕಾರ, ಕೊರೊನಾ ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಬೇಕೆಂದು ಸೂಚಿಸಿದೆ.

    ಕೊರೊನಾ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆ ಇರೋ ಜಿಲ್ಲೆಗಳಲ್ಲಿ ಹೊಸ ಸೋಂಕಿತರು ಮನೆಯಲ್ಲಿ ಐಸೋಲೇಟ್ ಆಗುವಂತಿಲ್ಲ. ಸೋಂಕಿನ ಗುಣಲಕ್ಷಣಗಳು ಇಲ್ಲದಿದ್ರೂ ಕೊರೊನಾ ದೃಢಪಡುತ್ತಿದ್ದಂತೆ ಸಮೀಪದ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಬೇಕು.

    ಕೋಲ್ಹಾಪುರ, ಸಾಂಗ್ಲಿ, ಸತರಾ, ಯವತಮಾಳ, ಅಮರಾವತಿ, ರತ್ನಗಿರಿ, ಸಿಂಘುದುರ್ಗ, ಸೋಲಾಪುರ, ಅಕೋಲಾ, ಬುಲಠಾಣಾ, ವಾಶೀಮ್, ಬೀಡ್, ಗಡಚಿರೋಲಿ, ಅಹಮದನಗರ, ಉಸ್ಮಾನಾಬಾದ್ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಹೋಮ್ ಐಸೋಲೇಶನ್ ಬಂದ್ ಮಾಡಲಾಗಿದೆ. ಮುಂಬೈನಲ್ಲಿ ಹೋಮ್ ಐಸೋಲೇಶನ್ ಗೆ ಅವಕಾಶ ನೀಡಲಾಗಿದೆ.

    ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರಬಹುದು. ಹಾಗಂತ ನಿಯಮಗಳಲ್ಲಿ ಸಡಿಲಗೊಳಿಸುವ ಆತುರದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮನೆಯಲ್ಲಿ ಐಸೋಲೇಟ್ ಆಗುವ ಸೋಂಕಿತರು ಸರಿಯಾಗಿ ನಿಯಮಗಳನ್ನ ಪಾಲನೆ ಮಾಡದಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆ ಸೋಂಕು ಪಸರಿಸುವ ಕಡಿಮೆ ಇರೋ ಜಿಲ್ಲೆಗಳಲ್ಲಿ ಹೋಮ್ ಐಸೋಲೇಶನ್ ಬಂದ್ ಮಾಡಲಾಗಿದೆ. ಸೋಂಕಿತರು ತಮ್ಮ ಕುಟುಂಬಸ್ಥರ ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಕೇರ್ ಸೆಂಟರ್ ಗೆ ದಾಖಲಾಗಬೇಕೆಂದು ಸರ್ಕಾರ ಹೇಳಿದೆ.

  • ತಮಗೆ ಪಾಸಿಟಿವ್ ಬಂದು, ಮನೆಯವರೆಲ್ಲರಿಗೂ ನೆಗೆಟಿವ್ ಬರಲು ಕಾರಣ ತಿಳಿಸಿದ ಅನು ಪ್ರಭಾಕರ್

    ತಮಗೆ ಪಾಸಿಟಿವ್ ಬಂದು, ಮನೆಯವರೆಲ್ಲರಿಗೂ ನೆಗೆಟಿವ್ ಬರಲು ಕಾರಣ ತಿಳಿಸಿದ ಅನು ಪ್ರಭಾಕರ್

    – ಕೊರೊನಾ ಬಂದಮೇಲೆ ಏನು ಮಾಡಬೇಕು?

    ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಸಹ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಕುರಿತು ನಟಿ ಅನು ಪ್ರಭಾಕರ್ ಮುಖರ್ಜಿ ಜಾಗೃತಿ ಮೂಡಿಸಿದ್ದು, ತಮಗೆ ಪಾಸಿಟಿವ್ ಬಂದರೂ ಮನೆಯವರಿಗೆ ಹೇಗೆ ನೆಗೆಟಿವ್ ಬಂತು, ಕೊರೊನಾ ಸೋಂಕು ತಗುಲಿದರೆ ಏನು ಮಾಡಬೇಕು ಎಂಬುದರ ಬಗ್ಗೆ ತಿಳಿಸಿದ್ದಾರೆ.

    ಫೇಸ್ಬುಕ್‍ನಲ್ಲಿ ವೀಡಿಯೋ ಹಂಚಿಕೊಂಡಿರುವ ಅವರು, ನನಗೆ ಪಾಸಿಟಿವ್ ಬಂದು ಮನೆಯವರಿಗೆ ಎಲ್ಲರಿಗೂ ನೆಗೆಟಿವ್ ಬರಲು ಕಾರಣ ನನಗೆ ಯಾವುದೇ ರೀತಿಯ ಕೊರೊನಾ ಲಕ್ಷಣಗಳು ಇರಲಿಲ್ಲ. ಜ್ವರ, ನೆಗಡಿ, ಕೆಮ್ಮು ಏನೂ ಬಂದಿಲ್ಲ. ಆದರೆ ಕಳೆದ ವಾರ ನನಗೆ ಟೇಸ್ಟ್ ಹಾಗೂ ಸ್ಮೆಲ್ ಹೋಗಲು ಶುರುವಾಯಿತು ಎಂದು ತಿಳಿಸಿದ್ದಾರೆ.

    ಕೂಡಲೇ ವೈದ್ಯೆ ನನ್ನ ಅಕ್ಕ ಶೀಲಾ ಧೀಕ್ಷಿತ್‍ಗೆ ಕರೆ ಮಾಡಿ, ಈ ರೀತಿಯಾಗುತ್ತಿದೆ ಎಂದು ವಿವರಿಸಿದೆ. ಆಗ ಅವರು ತಕ್ಷಣವೇ ಟೆಸ್ಟ್ ಮಾಡಿಸಿಕೊ, ಐಸೋಲೇಟ್ ಆಗು, ರಿಸಲ್ಟ್ ಬರುವವರೆಗೆ ಕಾಯಬೇಡ, ಐಸೋಲೇಟ್ ಆಗಿ ಪ್ರತ್ಯೇಕವಾಗಿರು, ಯಾವುದೇ ಕಾರಣಕ್ಕೂ ಕುಟುಂಬದವರೊಂದಿಗೆ ಸೇರಬೇಡ ಎಂದು ಹೇಳಿದರು. ಹಾಗೇ ನಾನು ಸ್ಟ್ರಿಕ್ಟ್ ಆಗಿ ಫಾಲೋ ಮಾಡಿದೆ, ಹೀಗಾಗಿ ನನ್ನ ಕುಟುಂಬದವರಿಗೆ ಪಾಸಿಟಿವ್ ಬರದಿರಲು ಇದೂ ಒಂದು ಕಾರಣ ಇರಬಹುದು ಎಂದು ವಿವರಿಸಿದರು.

    ಸಣ್ಣ ಲಕ್ಷಣ ಕಾಣಿಸಿಕೊಂಡರೂ ತಕ್ಷಣವೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ, ಹಾಗೇ ಐಸೋಲೇಟ್ ಆಗಿ. ಐಸೋಲೇಟ್ ಆಗಲು ಮನೆಯಲ್ಲಿ ಅವಕಾಶ ಇಲ್ಲವಾದಲ್ಲಿ ಕೋವಿಡ್ ಕೇರ್ ಸೆಂಟರ್‍ಗೆ ತೆರಳಿ. ಟೆಸ್ಟ್ ರಿಸಲ್ಟ್ ಬಂದಮೇಲೆ ಚಿಕಿತ್ಸೆ ಪಡೆದರಾಯಿತು ಎಂದು ಯಾವುದೇ ಕಾರಣಕ್ಕೂ ಕಾಯಬೇಡಿ. ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ, ನಿಮಗೆ ಲಕ್ಷಣ ಏನಿದೆಯೋ ಅದಕ್ಕೆ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ.

    ಆರಂಭದ 4-5 ದಿನಗಳೇ ತುಂಬಾ ಮುಖ್ಯವಾಗುತ್ತದೆ. ಪಲ್ಸ್ ರೇಟ್, ಆಕ್ಸಿಜನ್ ಲೆವೆಲ್, ಬಿಪಿ ಚೆಕ್ ಮಾಡಲು ವೈದ್ಯರ ಅವಶ್ಯಕತೆ ಇರುತ್ತದೆ. ಹೀಗಾಗಿ ತಕ್ಷಣವೇ ನಿಮಗಿರುವ ಲಕ್ಷಣಗಳಿಗೆ ಚಿಕಿತ್ಸೆ ಪಡೆಯಲು ಆರಂಭಿಸಿ, ಟೆಸ್ಟ್ ರಿಸಲ್ಟ್‍ಗಾಗಿ ಕಾಯಬೇಡಿ. ಸರ್ಕಾರ ತನ್ನ ಮಿತಿ ಮೀರಿ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಿಮ್ಮ ಪರಿಸ್ಥಿತಿ ಗಂಭೀರವಾಗಿ ಆಕ್ಸಿಜನ್ ಬೇಕು, ಆಸ್ಪತ್ರೆ ಬೇಕು ಎಂದರೆ ತುಂಬಾ ಕಷ್ಟವಾಗುತ್ತದೆ ಎಂದು ತಿಳಿಸಿದರು.

  • ಎಚ್ಚರ ಎಚ್ಚರ- ಹೋಮ್ ಐಸೋಲೇಶನ್ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ

    ಎಚ್ಚರ ಎಚ್ಚರ- ಹೋಮ್ ಐಸೋಲೇಶನ್ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ

    ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಇಷ್ಟು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹಲವರು ಗುಣಮುಖರಾಗುತ್ತಿದ್ದರು. ಆದರೆ ಇದೀಗ ಹೋಮ್ ಐಸೂಲೇಷನ್ ನಿಂದಾಗಿ ಸಾವಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗುತ್ತಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

    ಒಂದು ಕಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಎಚ್ಚರ ತಪ್ಪಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದರಲ್ಲಿ ಅನುಮಾನವಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಒಡೆದು ಬಹುತೇಕರು ಗುಣಮುಖರಾಗುತ್ತಿದ್ದಾರೆ. ಅದರೆ ಹೋಮ್ ಐಸೋಲೇಶ್ ಆಗುತ್ತಿರುವವರಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ. ಇದರಿಂದಾಗಿ ಆತಂಕ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆರ ರಾಜ್ಯದಲ್ಲಿ ಹೋಮ್ ಐಸೂಲೇಷನ್ ಡೆತ್ ಹೆಚ್ಚುತ್ತಿದೆ.

    ಸಾವು ಹೆಚ್ಚಲು ಕಾರಣವೇನು?
    ಹೋಮ್ ಐಸೂಲೇಷನ್ ಡೆತ್ ಹೆಚ್ಚಲು ಕಾರಣವೇನು ಎಂಬುದನ್ನು ತಜ್ಞರು ತಿಳಿಸಿದ್ದು, ತಜ್ಞ ವೈದ್ಯ ಡಾ.ವಿಶಾಲ್ ರಾವ್ ಹೋಮ್ ಐಸೂಲೇಷನ್‍ಗೆ ಕಾರಣ ಬಿಚ್ಚಿಟ್ಟಿದ್ದಾರೆ. ಸೋಂಕು ಪತ್ತೆಯಾದ ಆರಂಭದ ಮೂರು ದಿನದಲ್ಲಿ ಆರೋಗ್ಯ ಸುಧಾರಣೆ ಆಗುತ್ತದೆ. ನಂತರ ನಾಲ್ಕನೇ ದಿನದ ಬಳಿಕ ಸೋಂಕಿತರಲ್ಲಿ ಆಕ್ಸಿಜನ್ ಪ್ರಮಾಣ ಕಡಿಮೆ ಆಗುತ್ತದೆ. ಆಕ್ಸಿಜನ್ ಕಡಿಮೆ ಆಗುವುದು ಸೊಂಕಿತರಿಗೆ ತಿಳಿಯುವುದಿಲ್ಲ. ಕೊನೇಯ ಹಂತಕ್ಕೆ ಬಂದಾಗ ಇದು ತಿಳಿಯುತ್ತದೆ. ಆಗ ಗುಣಮುಖರಾಗುವುದು ಕಷ್ಟ. ಹೀಗಾಗಿ ಸಾವು ಸಂಭವಿಸುತ್ತದೆ. ವೈದ್ಯರ ಸಲಹೆಗಳನ್ನು ಸರಿಯಾಗಿ ಪಾಲನೆ ಮಾಡದಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ.

    ಪರಿಹಾರೋಪಾಯಗಳು
    ಪ್ರತಿದಿನ ಆಕ್ಸಿಜನ್ ಲೆವೆಲ್ ಚೆಕ್ ಮಾಡಬೇಕು, ಆಕ್ಸಿಜನ್ ಲೆವೆಲ್ ಕಡಿಮೆ ಬಂದರೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಬೇಕು. ಆರೋಗ್ಯದ ಬಗ್ಗೆ ಪ್ರತಿ ದಿನ ವೈದ್ಯರಿಗೆ ಮಾಹಿತಿ ನೀಡಬೇಕು. ವೈದ್ಯರು ನೀಡಿರುವ ಮಾತ್ರೆಗಳನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಹೋಮ್ ಐಸೂಲೇಷನ್ ನಲ್ಲಿ ಇರುವವರು ಹೊರಗಡೆ ಎಲ್ಲೂ ಓಡಾಡಬಾರದು ಎಂಬುದನ್ನು ತಜ್ಞ ವೈದ್ಯ ಡಾ.ವಿಶಾಲ್ ರಾವ್ ತಿಳಿಸಿದ್ದಾರೆ.