Tag: ಹೌತಿ

  • ಯೆಮೆನ್‌ ಬಂದರು ಮೇಲೆ ಇಸ್ರೇಲ್‌ ದಾಳಿ- ಉಂಡೆಗಳಂತೆ ಮೇಲಕ್ಕೆ ಚಿಮ್ಮಿದ ಬೆಂಕಿಯ ಜ್ವಾಲೆ

    ಯೆಮೆನ್‌ ಬಂದರು ಮೇಲೆ ಇಸ್ರೇಲ್‌ ದಾಳಿ- ಉಂಡೆಗಳಂತೆ ಮೇಲಕ್ಕೆ ಚಿಮ್ಮಿದ ಬೆಂಕಿಯ ಜ್ವಾಲೆ

    ಟೆಲ್‌ ಅವೀವ್‌: ತನ್ನ ವಿಮಾನ ನಿಲ್ದಾಣದ (Airport) ಮೇಲೆ ಹೌತಿ ಉಗ್ರರು ದಾಳಿ ಮಾಡಿದ್ದಕ್ಕೆ ಪ್ರತೀಯಾಗಿ ಇಸ್ರೇಲ್‌ (Isreal) ಯೆಮೆನ್‌ನ ಹೊಡೈದಾ ಬಂದರು (Yemen’s Hodeidah Port) ಮೇಲೆ ಬಾಂಬ್‌ ದಾಳಿ ನಡೆಸಿದೆ.

    ಇಸ್ರೇಲ್‌ 30 ಯುದ್ಧ ವಿಮಾನಗಳ ಸಹಾಯದಿಂದ ಬಾಂಬ್‌ ದಾಳಿ ನಡೆಸಿದೆ. ಈ ದಾಳಿಗೆ ಹೊಡೈದಾ ಬಂದರು ಧ್ವಂಸಗೊಂಡಿದ್ದು ಭಾರೀ ಪ್ರಮಾಣದಲ್ಲಿ ಬೆಂಕಿಯ ಜ್ವಾಲೆಗಳು ಮೇಲಕ್ಕೆ ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.  ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆಯೂ ಹೆಚ್ಚಿದ ವೈವಾಹಿಕ ಸಂಬಂಧ – ಲವ್‌ಸ್ಟೋರಿಗಳಿಗೆ ಕಾರಣ ಏನು?

    ಇರಾನ್ ಬೆಂಬಲಿತ ಹೌತಿಗಳು ಟೆಲ್ ಅವೀವ್‌ನ ಮುಖ್ಯ ವಿಮಾನ ನಿಲ್ದಾಣದ ಬಳಿ ಕ್ಷಿಪಣಿಯನ್ನು ಹಾರಿಸಿದ ಒಂದು ದಿನದ ನಂತರ ಇಸ್ರೇಲ್‌ ಪ್ರತೀಕಾರ ತೀರಿಸಿದೆ.

    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾನುವಾರ ವಿಮಾನ ನಿಲ್ದಾಣದ ಬಳಿ ಹೌತಿಗಳು ನಡೆಸಿದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದರು. ಇದನ್ನೂ ಓದಿ: 1971ರ ನಂತರ ನಾಳೆ ದೇಶದಲ್ಲಿ ಯುದ್ಧದ ಡ್ರಿಲ್‌! – ಮಾಕ್‌ ಡ್ರಿಲ್‌ ಹೇಗಿರಲಿದೆ?

    ಯೆಮೆನ್‌ನಿಂದ ಬಂದ ಹೆಚ್ಚಿನ ದಾಳಿಗಳನ್ನು ಇಸ್ರೇಲ್‌ನ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು ತಡೆಹಿಡಿದಿದ್ದವು. ಆದರೆ ಭಾನುವಾರ ರಕ್ಷಣಾ ವ್ಯವಸ್ಥೆಯನ್ನು ಬೇಧಿಸಿ ಕ್ಷಿಪಣಿ ವಿಮಾನ ನಿಲ್ದಾಣದ ಮೇಲೆ ಬಿದ್ದಿತ್ತು.

  • ಹೌತಿ ಉಗ್ರರ ಮೇಲೆ ಅಮೆರಿಕ ಏರ್‌ಸ್ಟ್ರೈಕ್‌, 31 ಬಲಿ – ನರಕ ತೋರಿಸ್ತೀವಿ ಎಂದು ಗುಡುಗಿದ ಟ್ರಂಪ್‌

    ಹೌತಿ ಉಗ್ರರ ಮೇಲೆ ಅಮೆರಿಕ ಏರ್‌ಸ್ಟ್ರೈಕ್‌, 31 ಬಲಿ – ನರಕ ತೋರಿಸ್ತೀವಿ ಎಂದು ಗುಡುಗಿದ ಟ್ರಂಪ್‌

    – ಟ್ರಂಪ್‌ ಎರಡನೇ ಅವಧಿಯ ಮೊದಲ ದಾಳಿ
    – ನಿಮ್ಮ ಸಮಯ ಮುಗಿದಿದೆ: ಟ್ರಂಪ್‌ ಎಚ್ಚರಿಕೆ

    ವಾಷಿಂಗ್ಟನ್‌: ಅಮೆರಿಕದ (USA) ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಉಗ್ರರ ಮೇಲೆ ಏರ್‌ಸ್ಟ್ರೈಕ್‌ (Air Strike) ಮಾಡಿಸಿದ್ದಾರೆ. ಯೆಮೆನ್‌ನಲ್ಲಿ ಹೌತಿ ಉಗ್ರರ ನೆಲೆಗಳ (Yemen Houthi Rebels) ಅಮೆರಿಕ ಏರ್‌ಸ್ಟ್ರೈಕ್‌ (Air Strike) ನಡೆಸಿ ಧ್ವಂಸಗೊಳಿಸಿದೆ.

    ಯೆಮೆನ್‌ನ ಇರಾನ್ ಬೆಂಬಲಿತ ಹೌತಿಗಳ ವಿರುದ್ಧ ದೊಡ್ಡ ಪ್ರಮಾಣದ ಮಿಲಿಟರಿ ದಾಳಿಯಿಂದ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ಅಮೆರಿಕ ಯುದ್ಧ ನೌಕೆಗಳಿಂದ ಹಾರಿದ ಯುದ್ಧ ವಿಮಾನಗಳು ಹೌತಿ ಉಗ್ರರ ಪ್ರಮುಖ ಸ್ಥಳಗಳ ಮೇಲೆ ಬಾಂಬ್‌ ದಾಳಿ ನಡೆಸಿದೆ.

    ಕೆಂಪು ಸಮುದ್ರದಲ್ಲಿ ಸರಕು ಸಾಗಾಣಿಕೆ ಹಡಗು ಮೇಲೆ ಹೌತಿ ಉಗ್ರರು ನಡೆಸಿದ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ನಿಮ್ಮ ಸಮಯ ಮುಗಿದಿದೆ ಮತ್ತೆ ದಾಳಿ ಮಾಡಿದರೆ ನಿಮಗೆ ನರಕ ತೋರಿಸಲಾಗುವುದು ಎಂದು ಟ್ರಂಪ್‌ ಗುಡುಗಿದ್ದಾರೆ.

    ಜಾಗತಿಕ ವ್ಯಾಪಾರ ಮತ್ತು ಅಮೆರಿಕ ಸ್ವತ್ತುಗಳನ್ನು ರಕ್ಷಿಸಲು ಈ ದಾಳಿ ಮಾಡಿದ್ದೇವೆ ಎಂದು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ. ಯಾವುದೇ ಭಯೋತ್ಪಾದಕ ಪಡೆ ಅಮೆರಿಕದ ವಾಣಿಜ್ಯ ಮತ್ತು ನೌಕಾ ಹಡಗುಗಳು ವಿಶ್ವದ ಜಲಮಾರ್ಗಗಳಲ್ಲಿ ಮುಕ್ತವಾಗಿ ನೌಕಾಯಾನ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಹೌತಿಗಳಿಗೆ ಇರಾನ್‌ ಬೆಂಬಲ ನೀಡುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ಇರಾನ್‌ ದೇಶವನ್ನು ಸಂಪೂರ್ಣವಾಗಿ ಹೊಣೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ಹೌತಿಗಳ ಬೆದರಿಕೆಗೆ ಮಾಜಿ ಅಧ್ಯಕ್ಷ ಜೋ ಬೈಡನ್‌ ಪ್ರಬಲವಾಗಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಟೀಕಿಸಿದ್ದಾರೆ.

    ಜೋ ಬೈಡೆನ್ ಸರ್ಕಾರದ ಪ್ರತಿಕ್ರಿಯೆ ಶೋಚನೀಯವಾಗಿ ದುರ್ಬಲವಾಗಿತ್ತು. ಇದರಿಂದಾಗಿ ಹೌತಿಗಳು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಕೆಂಪು ಸಮುದ್ರದ ಮೂಲಕ ಹಾದುಹೋದ ಕೊನೆಯ ಅಮೆರಿಕನ್ ಯುದ್ಧನೌಕೆಯ ಮೇಲೆ ಹೌತಿಗಳು ಒಂದು ಡಜನ್‌ಗಿಂತಲೂ ಹೆಚ್ಚು ಬಾರಿ ದಾಳಿ ಮಾಡಿದ್ದಾರೆ. ಇರಾನ್‌ನಿಂದ ಹಣಕಾಸು ಪಡೆದ ಹೌತಿ ಗೂಂಡಾಗಳು ಯುಎಸ್ ವಿಮಾನಗಳ ಮೇಲೆ ಕ್ಷಿಪಣಿಗಳನ್ನು ಹಾರಿಸಿದ್ದಾರೆ. ಈ ಕಾರಣಕ್ಕೆ ದಾಳಿ ನಡೆಸಲಾಗಿದೆ ಎಂದು ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಬಸ್‌ ಉರುಳಿಸಿ 9 ಮಂದಿ ತೀರ್ಥಯಾತ್ರಿಗಳನ್ನು ಹತೈಗೈದ ಉಗ್ರ ಪಾಕ್‌ನಲ್ಲಿ ಮಟಾಷ್‌

     

    ಈಗ ಅಮೆರಿಕ ದಾಳಿ ನಡೆಸಿದ್ದು ಯಾಕೆ?
    2023 ರ ಅಂತ್ಯದಿಂದ ಹೌತಿಗಳು ಕೆಂಪು ಸಮುದ್ರ, ಅಡೆನ್ ಕೊಲ್ಲಿ ಮತ್ತು ಇತರ ಪ್ರಮುಖ ಸಮುದ್ರ ಮಾರ್ಗಗಳಲ್ಲಿ ವಾಣಿಜ್ಯ ಮತ್ತು ಮಿಲಿಟರಿ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಈಗ ಗಾಜಾದಲ್ಲಿ ಕದನ ವಿರಾಮದ ಹೊರತಾಗಿಯೂ ಹೌತಿಗಳು ಇತ್ತೀಚೆಗೆ ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳ ಮೇಲೆ ದಾಳಿಗಳನ್ನು ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಕ್ಕೆ ಅಮೆರಿಕ ಈಗ ದಾಳಿ ನಡೆಸಿದೆ.

    ಎಲ್ಲಿಲ್ಲಿ ದಾಳಿ?
    ಪ್ರಸಿದ್ಧ ಮಿಲಿಟರಿ ತಾಣವಾದ ಸನಾ ವಿಮಾನ ನಿಲ್ದಾಣ ಸಂಕೀರ್ಣ, ಸೌದಿ ಗಡಿಯ ಬಳಿ ಹೌತಿಗಳ ಉತ್ತರದ ಭದ್ರಕೋಟೆಯಾದ ಸಾದಾ, ನೈಋತ್ಯ ಪ್ರದೇಶದಲ್ಲಿರುವ ಧಮರ್ ಮತ್ತು ಅಬ್ಸ್, ಹೌತಿ ಮಿಲಿಟರಿ ಸೌಲಭ್ಯಗಳ ನೆಲೆಯಾಗಿರುವ ಗೆರಾಫ್ ಮೇಲೆ ದಾಳಿ ನಡೆದಿದೆ.

     

  • Houthi Targets: ಹೌತಿ ಉಗ್ರರ 36 ನೆಲೆಗಳ ಮೇಲೆ US, UK ಜಂಟಿ ದಾಳಿ

    Houthi Targets: ಹೌತಿ ಉಗ್ರರ 36 ನೆಲೆಗಳ ಮೇಲೆ US, UK ಜಂಟಿ ದಾಳಿ

    ವಾಷಿಂಗ್ಟನ್: ಇರಾನ್ ಬೆಂಬಲಿತ ಹೌತಿ (Houthi) ಬಂಡುಕೋರರ ವಿರುದ್ಧ ಸಿಟ್ಟಿಗೆದ್ದಿರುವ ಅಮೆರಿಕ ಉಗ್ರರ ವಿರುದ್ಧ ಸಮರ ಸಾರಿದೆ. ಅಮೆರಿಕ ಮತ್ತು ಬ್ರಿಟನ್ ಜಂಟಿಯಾಗಿ ಶನಿವಾರ ಯೆಮೆನ್‌ನಲ್ಲಿರುವ (Yemen) ಸರಿಸುಮಾರು 36 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿವೆ.

    ಕಳೆದ ಜನವರಿ 28 ರಂದು ಜೋರ್ಡಾನ್​ನಲ್ಲಿ US ಮೂವರು ಸೈನಿಕರ ಹತ್ಯೆಗೆ ಪ್ರತಿಕ್ರಿಯೆಯಾಗಿ ಇರಾಕ್ ಮತ್ತು ಸಿರಿಯಾದಲ್ಲಿರುವ ಹೌತಿ ನೆಲೆಗಳ ಮೇಲೆ ಅಮೆರಿಕದ ಏಕಪಕ್ಷೀಯ ದಾಳಿ ನಡೆಸಿತ್ತು. ಅದಾದ ಒಂದು ದಿನದ ಬಳಿಕ ಯೆಮೆನ್​ನಲ್ಲಿ ಜಂಟಿ ವಾಯು ದಾಳಿಗಳು ನಡೆದಿವೆ ಎಂದು ವರದಿಯಾಗಿವೆ.

    ಅಂತಾರಾಷ್ಟ್ರೀಯ ಮತ್ತು ವಾಣಿಜ್ಯ ಹಡಗುಗಳು ಹಾಗೂ ಕೆಂಪು ಸಮುದ್ರದಲ್ಲಿ ಸಾಗುವ ನೌಕೆಗಳ ವಿರುದ್ಧ ಹೌತಿಗಳ ನಿರಂತರ ದಾಳಿಗೆ ಪ್ರತಿಕ್ರಿಯೆಯಾಗಿ ಯೆಮೆನ್‌ನ 13 ಸ್ಥಳಗಳಲ್ಲಿರುವ 36 ಹೌತಿ ನೆಲೆಗಳ ಮೇಲೆ ಈ ದಾಳಿ ನಡೆದಿದೆ ಎಂದು ಕಾರ್ಯಾಚರಣೆಗೆ ಬೆಂಬಲ ನೀಡಿದ ಯುನೈಟೆಡ್ ಸ್ಟೇಟ್ಸ್, ಬ್ರಿಟನ್ ಮತ್ತು ಇತರ ದೇಶಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿವೆ. ಇದನ್ನೂ ಓದಿ: ಕಾನೂನುಬಾಹಿರ ವಿವಾಹ – ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದಂಪತಿಗೆ 7 ವರ್ಷ ಜೈಲು

    ಜಾಗತೀಕ ವ್ಯಾಪಾರ ಮತ್ತು ಮುಗ್ಧ ನಾವಿಕರ ಜೀವಕ್ಕೆ ಹೌತಿ ಬಂಡುಕೋರರು ಬೆದರಿಕೆ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೌತಿ ಉಗ್ರರ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಹೌತಿ ಉಗ್ರರ ಶಸ್ತ್ರಾಸ್ತ್ರ ಸಂಗ್ರಹಣಾ ಸೌಲಭ್ಯಗಳು, ಕ್ಷಿಪಣಿ ವ್ಯವಸ್ಥೆಗಳು ಮತ್ತು ಲಾಂಚರ್​ಗಳ ವಾಯು ರಕ್ಷಣಾ ವ್ಯವಸ್ಥೆಗಳು ಮತ್ತು ರಾಡಾರ್​ಗೆ ಸಂಬಂಧಿಸಿದ ತಾಣಗಳನ್ನು ಗುರಿಯಾಗಿಸಿ ಜಂಟಿ ದಾಳಿ ನಡೆದಿದೆ.

    ಅಲ್ಲದೇ ಕೆಂಪು ಸಮುದ್ರದಲ್ಲಿ ಹಡಗುಗಳ ವಿರುದ್ಧ ಉಡಾಯಿಸಲು ಸಿದ್ಧವಾಗಿದ್ದ 6 ಹೌತಿ ಹಡಗು ಕ್ಷಿಪಣಿಗಳ ವಿರುದ್ಧ ಯುಎಸ್ ಪಡೆಗಳು ಶನಿವಾರ ಪ್ರತ್ಯೇಕವಾಗಿ ದಾಳಿ ನಡೆಸಿದ್ದವು ಎಂದು ಸೆಂಟ್ರಲ್ ಕಮಾಂಡ್ (ಸೆಂಟ್ಕಾಮ್) ತಿಳಿಸಿದೆ. ಇದನ್ನೂ ಓದಿ: ಜೈಲು ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳಲ್ಲಿ ಬಾಂಬ್‌ ಬ್ಲಾಸ್ಟ್‌ – ಇಮ್ರಾನ್‌ ಖಾನ್‌ ಪಕ್ಷದ ಮೂವರ ದುರ್ಮರಣ

    ಕಳೆದ ಜನವರಿ 28ರಂದು ಸಿರಿಯಾ ಗಡಿ (Syrian Border) ಸಮೀಪದಲ್ಲಿರುವ ಈಶಾನ್ಯ ಜೋರ್ಡಾನ್‌ನಲ್ಲಿ ಅಮೆರಿಕ ಸೇನೆಯ ಮೇಲೆ ಡ್ರೋನ್ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಮೂರು ಸೈನಿಕರು (American Soldiers) ಸಾವನ್ನಪ್ಪಿದ್ದರು. ಈ ನಂತರ ಅಮೆರಿಕ ಪ್ರತೀಕಾರ ತೀರಿಸಿಕೊಳ್ಳೋದಾಗಿ ಸವಾಲು ಹಾಕಿತ್ತು.

  • ಭಾರತದ ಧ್ವಜವುಳ್ಳ ಕಚ್ಚಾತೈಲ ಟ್ಯಾಂಕರ್‌ ಮೇಲೆ ಹೌತಿ ಉಗ್ರರಿಂದ ಡ್ರೋನ್‌ ದಾಳಿ

    ಭಾರತದ ಧ್ವಜವುಳ್ಳ ಕಚ್ಚಾತೈಲ ಟ್ಯಾಂಕರ್‌ ಮೇಲೆ ಹೌತಿ ಉಗ್ರರಿಂದ ಡ್ರೋನ್‌ ದಾಳಿ

    ವಾಷಿಂಗ್ಟನ್‌: ಕೆಂಪು ಸಮುದ್ರದಲ್ಲಿ (Red Sea) ಯೆಮೆನ್‌ನ ಹೌತಿ ಬಂಡುಕೋರರು (Yemen’s Houthi rebels) ಭಾರತದ ಧ್ವಜವುಳ್ಳ ಕಚ್ಚಾ ತೈಲ ಟ್ಯಾಂಕರ್‌ (Indian-Flagged Oil Tanker) ಮೇಲೆ ಡ್ರೋನ್‌ ದಾಳಿ (Drone Attack) ನಡೆಸಿದ್ದಾರೆ ಎಂದು ಅಮೆರಿಕ (USA) ತಿಳಿಸಿದೆ.

    ಎಂ/ವಿ ಸಾಯಿಬಾಬಾ ಹೆಸರಿನ ಗ್ಯಾಬನ್‌ ಒಡೆತನದ ಹಡಗಿನ (Ship) ಮೇಲೆ ದಾಳಿ ನಡೆಸಿದ್ದು ಯಾವುದೇ ಗಾಯಗಳಾಗಿಲ್ಲ ಎಂದು ಹೇಳಿದೆ. ಭಾರತೀಯ ಕಾಲಮಾನ ರಾತ್ರಿ 10:30ರ ವೇಳೆಗೆ ಈ ದಾಳಿ ಸಂಭವಿಸಿದೆ. ಭಾರತೀಯ ಹಡಗಿನ ಮೇಲೆ ದಾಳಿ ನಡೆದ ಬಳಿಕ ಮತ್ತೊಂದು ಹಡಗಿನ ಮೇಲೆ ಈ ದಾಳಿ ನಡೆದಿದೆ.

    ಶನಿವಾರ ಎರಡು ಹಡಗಿನ ಮೇಲೆ ಡ್ರೋನ್‌ ದಾಳಿ ನಡೆದಿದೆ. ನಾರ್ವೇ ಧ್ವಜದ ಹೊಂದಿದ್ದ ಹಡಗಿನ ಮೇಲೆ ಡ್ರೋನ್‌ ದಾಳಿ ನಡೆದಿತ್ತು. ಆದರೆ ಈ ಹಡಗು ಸ್ವಲ್ಪದರಲ್ಲೇ ಪಾರಾಗಿದೆ ಎಂದು ಅಮೆರಿಕ ತಿಳಿಸಿದೆ. ಇದನ್ನೂ ಓದಿ: ಹಿಂದೂ ಮಹಾಸಾಗರದಲ್ಲಿ ವ್ಯಾಪಾರಿ ಹಡಗಿನ ಮೇಲೆ ಡ್ರೋನ್‌  ದಾಳಿ

    ಹೌತಿ ಬಂಡುಕೋರರಿಗೆ ಇರಾನ್ ಬೆಂಬಲ ನೀಡುತ್ತಿದೆ. ಹಮಾಸ್‌ ವಿರುದ್ಧ ಇಸ್ರೇಲ್‌ ಯುದ್ಧ ಸಾರಿದ್ದನ್ನು ಖಂಡಿಸಿ ಹೌತಿ ಬಂಡುಕೋರರು ಈಗ ಕೆಂಪು ಸಮುದ್ರದ ಮೂಲಕ ಹೋಗುವ ವ್ಯಾಪಾರಿ ಹಡಗುಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಆರಂಭಿಸಿದ್ದಾರೆ.

    ಕೆಂಪು ಸಮುದ್ರದಲ್ಲಿ ಪದೇ ಪದೇ ದಾಳಿಯಾಗುತ್ತಿರುವ ಕಾರಣ ಪ್ರಮುಖ ಹಡಗು ಕಂಪನಿಗಳು ಮಾರ್ಗವನ್ನು ಬದಲಾಯಿಸಿದ್ದು ದಕ್ಷಿಣ ಆಫ್ರಿಕಾ ಮೂಲಕವಾಗಿ ಈಗ ಹಡಗುಗಳು ಸಂಚರಿಸುತ್ತಿವೆ.

     

  • ಹೆಲಿಕಾಪ್ಟರ್‌ನಿಂದ ಇಳಿದು ಗುಂಡು ಹಾರಿಸಿ ಫಿಲ್ಮಿ ಸ್ಟೈಲ್‌ ಹೈಜಾಕ್‌ – ಭಾರತಕ್ಕೆ ಬರುತ್ತಿದ್ದ ಹಡಗು ಅಪಹರಣದ ವಿಡಿಯೋ ರಿಲೀಸ್‌

    ಹೆಲಿಕಾಪ್ಟರ್‌ನಿಂದ ಇಳಿದು ಗುಂಡು ಹಾರಿಸಿ ಫಿಲ್ಮಿ ಸ್ಟೈಲ್‌ ಹೈಜಾಕ್‌ – ಭಾರತಕ್ಕೆ ಬರುತ್ತಿದ್ದ ಹಡಗು ಅಪಹರಣದ ವಿಡಿಯೋ ರಿಲೀಸ್‌

    – ಯೆಮೆನ್‌ ಬಂಡುಕೋರರಿಂದ ಸರಕು ಸಾಗಾಣೆ ಹಡಗು ಅಪಹರಣ
    – ಇಸ್ರೇಲ್‌ ದಾಳಿಗೆ ಪ್ರತೀಕಾರವಾಗಿ ಹೈಜಾಕ್‌

    ಸನಾ: ಹಡಗಿನ ಮೇಲೆ ಇಳಿದ ಹೆಲಿಕಾಪ್ಟರ್‌. ರೈಫಲ್‌ ಹಿಡಿದು ಘೋಷಣೆ ಕೂಗುತ್ತಾ ಇಳಿದ ಬಂಡುಕೋರರು. ಹಡಗಿನ ಕ್ಯಾಬಿನ್‌ ನುಗ್ಗಿ ಬೆದರಿಕೆ. ಶರಣಾದ ಹಡಗಿನ ಸಿಬ್ಬಂದಿ. ಇದು ಯಾವುದೋ ಸಿನಿಮಾದ ಕಥೆಯಲ್ಲ. ಯೆಮೆನ್‌ (Yemen) ಬಂಡುಕೋರರು ಹಡಗನ್ನುಅಪಹರಿಸಿ ಪರಿ ಇದು.

    ಭಾರತಕ್ಕೆ (India) ಬರುತ್ತಿದ್ದ ಸರಕು ಹಡಗು ಗ್ಯಾಲಕ್ಸಿ ಲೀಡರ್‌ (Galaxy Leader) ಅಪಹರಣ ಕೊನೆಯ ಕ್ಷಣಗಳ ವಿಡಿಯೋವನ್ನು ಯೆಮೆನ್ ಮೂಲದ ಹೌತಿ ಬಂಡುಕೋರರು (Houthi Rebels) ಬಿಡುಗಡೆ ಮಾಡಿದ್ದಾರೆ. ಟರ್ಕಿಯಿಂದ (Turkey) ಭಾರತಕ್ಕೆ ಬರುತ್ತಿದ್ದ ಹಡಗನ್ನು ಭಾನುವಾರ ಅಪಹರಣ ಮಾಡಲಾಗಿತ್ತು. ಈಗ ಹೌತಿ ಬಂಡುಕೋರರು ಎರಡು ನಿಮಿಷಗಳ ಹಡಗನ್ನು ಹೈಜಾಕ್ (Hijack) ಮಾಡುವ ಭಯಾನಕ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

    ಹೆಲಿಕಾಪ್ಟರ್‌ನಲ್ಲಿ ಬಂದ ಬಂಡುಕೋರರು ಹಡಗಿನ ಮೇಲೆ ದಾಳಿ ಮಾಡಿ ಹೈಜಾಕ್‌ ಮಾಡಿದ್ದಾರೆ. ಹಡಗಿನ ಡೆಕ್‌ನಲ್ಲಿ ಲ್ಯಾಂಡ್‌ ಆದ ಹೆಲಿಕಾಪ್ಟರ್‌ನಿಂದ 10ಕ್ಕೂ ಹೆಚ್ಚು ಬಂಡುಕೋರರು ಘೋಷಣೆಗಳನ್ನು ಕೂಗುತ್ತಾ ಗುಂಡು ಹಾರಿಸುತ್ತಾ ನಿಯಂತ್ರಣ ಕೇಂದ್ರಕ್ಕೆ ಬಂದಿದ್ದಾರೆ. ಬಂಡುಕೋರರನ್ನು ನೋಡಿದ ಸಿಬ್ಬಂದಿ ಶಾಕ್‌ ಆಗಿ ಕೈಯನ್ನು ಮೇಲಕ್ಕೆ ಎತ್ತಿ ಶರಣಾಗಿದ್ದಾರೆ.  ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ

    ಹಮಾಸ್ ವಿರುದ್ಧದ ಯುದ್ಧದ ಪ್ರತೀಕಾರವಾಗಿ ಇಸ್ರೇಲಿ ಹಡಗುಗಳನ್ನು ಗುರಿಯಾಗಿಸಿಕೊಂಡು ನಾವು ದಾಳಿ ಮಾಡುತ್ತೇವೆ ಎಂದು ಹೌತಿ ಬಂಡುಕೋರರು ಎಚ್ಚರಿಕೆ ನೀಡಿದ್ದಾರೆ.

    ಹಡಗಿನ ಹೈಜಾಕ್ ಬಳಿಕ ಇದು ಆರಂಭ ಮಾತ್ರ ಎಂದು ಎಂದು ಹೌತಿ ತಿಳಿಸಿದ್ದು, ಕೆಂಪು ಸಮುದ್ರ ಮಾರ್ಗದಲ್ಲಿ ಬರುವ ಎಲ್ಲಾ ಇಸ್ರೇಲಿ ಹಡಗುಗಳನ್ನೂ ಅಪಹರಿಸುವುದಾಗಿ ಬೆದರಿಕೆ ಹಾಕಿದೆ. ಗಾಜಾ ಮೇಲಿನ ದಾಳಿ ನಿಲ್ಲಿಸುವವರೆಗೂ ಮತ್ತಷ್ಟು ಕಡಲ ದಾಳಿಗಳನ್ನು ನಡೆಸುವುದಾಗಿ ಹೌತಿ ಬಂಡುಕೋರರು ಘೋಷಣೆ ಮಾಡಿದ್ದಾರೆ.

    ಹಡಗು ಇಸ್ರೇಲಿಗೆ ಸೇರಿದ್ದು ಎಂದು ಹೌತಿ ಹೇಳಿದೆ. ಆದರೆ ಈ ಹೇಳಿಕೆಯನ್ನು ಇಸ್ರೇಲ್‌ ನಿರಾಕರಿಸಿದೆ. ಇದರಲ್ಲಿ ಇಸ್ರೇಲ್‌ ಪ್ರಜೆಗಳು ಯಾರು ಇರಲಿಲ್ಲ. ಅಪಹರಣಕ್ಕೊಳಗಾದ ಹಡಗು ತನ್ನದ್ದಲ್ಲ ಎಂದು ಇಸ್ರೇಲ್‌  ತಿಳಿಸಿದೆ.

    ಅಪಹರಣಕ್ಕೊಳಗಾದ ಹಡಗಿನ ಮೇಲೆ ಬಹಾಮಾಸ್ ಧ್ವಜವಿತ್ತು. ಹಡಗಿನಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ಸುಮಾರು 25 ಸಿಬ್ಬಂದಿ ಇದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಖಲಿಸ್ತಾನಿಗಳಿಂದ ಹಿಂದೂ ದೇವಾಲಯಗಳ ಟಾರ್ಗೆಟ್: ಕ್ರಮಕ್ಕೆ ಕೆನಡಾ ಸಂಸದ ಒತ್ತಾಯ

    ಇದು ಬ್ರಿಟಿಷ್ ಕಂಪನಿಯ ಒಡೆತನದಲ್ಲಿದ್ದು, ಇಸ್ರೇಲಿ ಉದ್ಯಮಿ ಅಬ್ರಹಾಂ “ರಾಮಿ” ಉಂಗಾರ್ ಅವರೂ ಕೂಡ ಈ ಹಡಗಿನ ಸಹ ಮಾಲೀಕರು ಎಂದು ಹೇಳಲಾಗಿದೆ. ಅಪಹರಣದ ಸಮಯದಲ್ಲಿ ಹಡಗನ್ನು ಜಪಾನಿನ ನಿಪ್ಪನ್‌ ಯೂಸೆನ್‌ ಕಂಪನಿಗೆ ಗುತ್ತಿಗೆಗೆ ನೀಡಲಾಗಿತ್ತು. ಇದನ್ನೂ ಓದಿ: ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿ ಸೌದಿ ಅರಾಮ್ಕೋ ಮೇಲೆ ಹೌತಿ ಬಂಡುಕೋರರದಿಂದ ಡ್ರೋನ್ ದಾಳಿ – ಹೊತ್ತಿ ಉರಿದ ಘಟಕಗಳು

    ಸದ್ಯ ಹಡಗು ಎಲ್ಲಿದೆ?
    ಹಡಗಿನ ಜೊತೆ ಸಂವಹನ ಸಂಪೂರ್ಣ ಕಡಿತಗೊಂಡಿದೆ. ಸದ್ಯ ಇದು ಯೆಮೆನ್‌ನಲ್ಲಿರುವ ಹುದೈದಾ ಬಂದರಿನಲ್ಲಿದೆ ಎಂದು ಗ್ಯಾಲಕ್ಸಿ ಲೀಡರ್‌ ನಿರ್ವಹಣೆ ಮಾಡುತ್ತಿರುವ ಕಂಪನಿಯ ವಕ್ತಾರರು ತಿಳಿಸಿದ್ದಾರೆ.