Tag: ಹೌಸ್ ಫುಲ್

  • ಗಂಧದ ಗುಡಿ ಅಬ್ಬರದ ನಡುವೆಯೂ ‘ಕಾಂತಾರ’ ಹೌಸ್ ಫುಲ್

    ಗಂಧದ ಗುಡಿ ಅಬ್ಬರದ ನಡುವೆಯೂ ‘ಕಾಂತಾರ’ ಹೌಸ್ ಫುಲ್

    ಪುನೀತ್ ರಾಜ್ ಕುಮಾರ್ (Puneeth Rajkumar) ಕನಸಿನ ಗಂಧದ ಗುಡಿ (Gandhad Gudi)  ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಅಪ್ಪು ಅಭಿಮಾನಿಗಳು ನೆಚ್ಚಿನ ನಟ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಕಡೆ ರಿಷಬ್ ಶೆಟ್ಟಿ (Rishabh Shetty) ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಿತ್ರ ಕೂಡ ಹಲವು ಕಡೆ ಹೌಸ್ ಫುಲ್ (House Full) ಪ್ರದರ್ಶನ ಕಾಣುತ್ತಿದೆ. ಅಲ್ಲದೇ, ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಕೂಡ ಉತ್ತಮ ಪ್ರದರ್ಶನ ಕಾಣುತ್ತಿದೆ.

    ಗಂಧದ ಗುಡಿ ಸಿನಿಮಾದಿಂದಾಗಿ ಕಾಂತಾರ (Kantara) ಮತ್ತು ಹೆಡ್ ಬುಷ್ ಸಿನಿಮಾಗೆ ಎಫೆಕ್ಟ್ ಆಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಗಂಧದ ಗುಡಿಯಿಂದಾಗಿ ಈ ಎರಡೂ ಚಿತ್ರಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಿಲ್ಲ. ಕೆಲವು ಕಡೆ ಶೋಗಳನ್ನು ರದ್ದು ಮಾಡಿ ಗಂಧದ ಗುಡಿ ಚಿತ್ರಕ್ಕೆ ನೀಡಲಾಗಿದೆ ಎನ್ನುವ ಮಾಹಿತಿ ಇದೆ. ಇನ್ನೂ ಹಲವು ಕಡೆ ಅಭಿಮಾನಿಗಳೇ ಒತ್ತಾಯ ಮಾಡಿ, ಪ್ರತಿಭಟಿಸಿ ಗಂಧದ ಗುಡಿ ಚಿತ್ರವನ್ನು ರಿಲೀಸ್ ಮಾಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

    ಗಂಧದ ಗುಡಿ ಡಾಕ್ಯುಡ್ರಾಮಾ ಸಿನಿಮಾ ಇಂದು ಬಿಡುಗಡೆ ಆಗಿ, ಬೆಳಗ್ಗೆಯೇ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸ್ಪೆಷಲ್ ಶೋ ಆಯೋಜನೆಗೊಂಡಿದ್ದವು. ಮೊದಲ ಪ್ರದರ್ಶನದಲ್ಲೇ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಂಡ ಅಭಿಮಾನಿಗಳು ಭಾವುಕರಾದರು. ಅಭಿಮಾನಿಗಳ ಜೊತೆಯೇ ಡಾ.ರಾಜ್ ಕುಟುಂಬ ಕೂಡ ಸಿನಿಮಾ ವೀಕ್ಷಿಸಿದೆ.

    ಇಂದು ಬೆಳಗ್ಗೆ ಹತ್ತು ಗಂಟೆಯೊಳಗೆ ಬೆಂಗಳೂರಿನಲ್ಲೇ 50ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜನೆ ಮಾಡಿದ್ದು, ಬೆಳಗಿನ ಜಾವವೇ 50 ಬಾರಿ ಈ ಸಿನಿಮಾ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ವಿತರಕ ಕಾರ್ತಿಕ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ನೂತನ ದಾಖಲೆ ಎಂದೂ ಅವರು ತಿಳಿಸಿದ್ದಾರೆ. ಬೆಳಗಿನ ಜಾವ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಗಂಧದಗುಡಿ’ ಪೇಯ್ಡ್ ಪ್ರೀಮಿಯರ್ ಟಿಕೆಟ್ ಖಾಲಿ ಖಾಲಿ

    ‘ಗಂಧದಗುಡಿ’ ಪೇಯ್ಡ್ ಪ್ರೀಮಿಯರ್ ಟಿಕೆಟ್ ಖಾಲಿ ಖಾಲಿ

    ನಾಳೆಯಿಂದ ಪುನೀತ್ ರಾಜ್ ಕುಮಾರ್ (Puneeth Rajkumar) ಅಭಿನಯದ ಗಂಧದ ಗುಡಿ (Gandhad Gudi) ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಇಂದು ಬೆಂಗಳೂರು ಸೇರಿದಂತೆ ಹಲವು ಕಡೆ ಪೇಯ್ಡ್ ಪ್ರೀಮಿಯರ್ ಆಯೋಜನೆ ಮಾಡಿದ್ದು, ಅಷ್ಟೂ ಟಿಕೆಟ್ ಗಳು ಖಾಲಿ ಆಗಿವೆ. ಎಲ್ಲ ಕಡೆಯೂ ತುಂಬಿದ ಪ್ರದರ್ಶನ ನಡೆಯಲಿದೆ. ಸಂಜೆಯಿಂದ ಎಲ್ಲ ಪ್ರದರ್ಶನಗಳು ನಡೆಯುತ್ತಿವೆ.

    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪೇಯ್ಡ್ ಪ್ರೀಮಿಯರ್ (Paid Premiere) ಆಯೋಜನೆ ಮಾಡಿದ್ದು ನಲವತ್ತಕ್ಕೂ ಹೆಚ್ಚು ಪೇಯ್ಡ್ ಪ್ರೀಮಿಯರ್ ಪ್ರದರ್ಶನ ನಡೆಯುತ್ತಿರುವುದು ವಿಶೇಷ. ಪೇಯ್ಡ್ ಪ್ರೀಮಿಯರ್ ಶೋ ಆಯೋಜನೆ ಆಗುತ್ತಿದ್ದಂತೆಯೇ ಅಭಿಮಾನಿಗಳು ಟಿಕೆಟ್ ಅನ್ನು ಮುಗಿಬಿದ್ದು ಖರೀದಿಸಿದ್ದು, ಬಹುತೇಕ ಚಿತ್ರಮಂದಿರಗಳ ಮುಂದೆ ಹೌಸ್ ಫುಲ್ (House Full) ಬೋರ್ಡ್ ಕಾಣುತ್ತಿದೆ. ಪ್ರೀಮಿಯರ್ ಮೂಲಕವೇ 25 ಲಕ್ಷ ರೂಪಾಯಿಗೂ ಅಧಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿಯೂ ಇದೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

    ನಾಳೆಯು ಕೂಡ ಹತ್ತು ಗಂಟೆಯೊಳಗೆ 50ಕ್ಕೂ ಹೆಚ್ಚು ಪ್ರದರ್ಶನಗಳನ್ನು ಆಯೋಜನೆ ಮಾಡಿದ್ದು, ಬೆಳಗಿನ ಜಾವವೇ 50 ಬಾರಿ ಈ ಸಿನಿಮಾ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ ಎಂದು ವಿತರಕ ಕಾರ್ತಿಕ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ನೂತನ ದಾಖಲೆ ಎಂದೂ ಅವರು ತಿಳಿಸಿದ್ದಾರೆ. ಬೆಳಗಿನ ಜಾವ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಆಗಲಿದೆ.

    Live Tv
    [brid partner=56869869 player=32851 video=960834 autoplay=true]