ಬೆಂಗಳೂರು: ಬಿಟ್ ಕಾಯಿನ್ ಹಗರಣ (Bitcoin Scam) ಮರು ತನಿಖೆಗೆ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (Dr G.Parameshwara) ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು. ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆಯಿಲ್ಲ : ಸಿದ್ದರಾಮಯ್ಯ ವಾಗ್ದಾಳಿ
ಸುರ್ಜೇವಾಲ ಅಧಿಕಾರಿಗಳ ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಆ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಅಷ್ಟೇ. ವಿಧಾನಸೌಧದ ಒಳಗೆ ಸಭೆ ಮಾಡಿದರೆ ತಪ್ಪು. ಖಾಸಗಿ ಹೊಟೇಲ್‌ನಲ್ಲಿ ಡಿ.ಕೆ.ಶಿವಕುಮಾರ್ ಸಭೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸುರ್ಜೇವಾಲ ಬಂದಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿಲ್ಲ. ಬಿಜಪಿಯವರು ದೂರು ನೀಡಲಿ. ರಾಜಭವನದವರು ಪರಿಶೀಲನೆ ಮಾಡ್ತಾರೆ ಎಂದಿದ್ದಾರೆ.
ದಲಿತ ಸಿಎಂ ವಿಚಾರದಲ್ಲಿ ನೀವು ಬಹಳ ಡೀಪ್ ಆಗಿ ಹೋಗುವ ಅಗತ್ಯವಿಲ್ಲ. ನಮ್ಮ ಸಮುದಾಯಕ್ಕೆ ಧೈರ್ಯ ತುಂಬುವ ನಿಟ್ಟಿನಲ್ಲಿ ಮಾತನಾಡಿದ್ದೇನೆ. ನಾಳೆಯೇ ಹೋಗಿ ನಾವು ಸಿಎಂ ಆಗಬೇಕು ಅಂತ ನಾವು ಕೇಳಲ್ಲ. ಯಾವುದೇ ಗೊಂದಲವಾದ ಮಾತುಗಳು ಅದರಲ್ಲಿ ಇಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ನಿತಿನ್ ಗಡ್ಕರಿ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ- ಶಿವಮೊಗ್ಗ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಒತ್ತಾಯ
ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದ್ದರು.


















