Tag: ಕೇಂದ್ರ ಸರ್ಕಾರ

  • ಕೇಂದ್ರ ಶಿಷ್ಟಾಚಾರ ಪಾಲನೆ ಮಾಡದಿದ್ರೆ ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ – ಮಹದೇವಪ್ಪ

    ಕೇಂದ್ರ ಶಿಷ್ಟಾಚಾರ ಪಾಲನೆ ಮಾಡದಿದ್ರೆ ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ – ಮಹದೇವಪ್ಪ

    ಬೆಂಗಳೂರು: ಕೇಂದ್ರ ಸರ್ಕಾರ (Central Government) ರಾಜ್ಯಗಳ ಜೊತೆ ಫೈಟ್ ಮಾಡದೇ ಶಿಷ್ಟಾಚಾರ ಪಾಲನೆ ಮಾಡಬೇಕು ಎಂದು ಕೇಂದ್ರದ ವಿರುದ್ಧ ಸಚಿವ ಮಹದೇವಪ್ಪ (HC Mahadevappa) ವಾಗ್ದಾಳಿ ನಡೆಸಿದರು.

    ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ ಹಿನ್ನೆಲೆ ಪ್ರಧಾನಿ ಮೋದಿಗೆ ಸಿಎಂ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಶಿಷ್ಟಾಚಾರ ಪಾಲನೆ ಮಾಡಬೇಕು. ಸಿಗಂದೂರು ಸೇತುವೆ ಮಾಡಿರುವುದು ಐತಿಹಾಸಿಕ ಕೆಲಸ. ಇದನ್ನು ಸ್ವಾಗತ ಮಾಡಬೇಕು. 2013-18ವರೆಗೆ ನಾನು ಲೋಕೋಪಯೋಗಿ ಇಲಾಖೆಯ ಸಚಿವನಾಗಿದ್ದೆ. ಆಗ ಯಡಿಯೂರಪ್ಪ ನನಗೆ ಸೇತುವೆ ಮಾಡಿಕೊಡಿ ಅಂತ ಕೇಳಿದ್ದರು. ಕಾಗೋಡು ತಿಮ್ಮಪ್ಪ ಕೂಡ ಮನವಿ ಮಾಡಿದ್ದರು. 2013-18ರ ನಡುವೆ ಕರ್ನಾಟಕ ರೋಡ್ ಡೆವಲಪ್ಮೆಂಟ್ ಕಾರ್ಪೋರೇಷನ್‌ನಿಂದ ಡಿಪಿಆರ್‌ನ್ನು (ಯೋಜನೆಯ ವಿವರವಾದ ವರದಿ) ತಯಾರಿ ಮಾಡಿದ್ದೆವು. ಬಳಿಕ ಗಡ್ಕರಿ ಅವರನ್ನು ಭೇಟಿ ಮಾಡಿ, ನ್ಯಾಷನಲ್ ಹೈವೆ ಅಥವಾ ಸಾಗರಮಾಲ ಯೋಜನೆ ಮಾಡಿ ಕೊಡಿ ಎಂದು ಕೇಳಿದ್ದೆ ಎಂದು ಇತಿಹಾಸ ತಿಳಿಸಿದರು.ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

    ರಾಜ್ಯ ಸರ್ಕಾರವೇ ನಿರ್ಧಾರ ಮಾಡಿ, ಸೇತುವೆ ಆಗಬೇಕು ಎಂದಿದ್ದರು. ನಮ್ಮ ಮನವಿ ಮೇಲೆ ಕೇಂದ್ರ ಕೆಲಸ ಮಾಡಲು ಒಪ್ಪಿಗೆ ನೀಡಿತ್ತು. ಸೇತುವೆ ಆಗಬೇಕು ಅಂತ ನಿರ್ಧಾರ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಅಭಿವೃದ್ಧಿ ವಿಷಯದಲ್ಲಿ ಫೈಟ್ ಮಾಡೋ ಅವಶ್ಯಕತೆ ಇಲ್ಲ. ನಾವೇ ಕ್ರೆಡಿಟ್ ತಗೋಬೇಕು ಅಂತ ಮಾಡಬಾರದು ಎಂದು ಕಿಡಿಕಾರಿದರು.

    ಕಾರ್ಯಕ್ರಮಗಳನ್ನ ಶಿಷ್ಟಾಚಾರದ ಪ್ರಕಾರ ಮಾಡಬೇಕು. ಸಿಎಸ್‌ಗೆ ಪತ್ರ ಬರೆದು ಸಿಎಂ ಸಮಯ ಪಡೆದು ಕಾರ್ಯಕ್ರಮ ಮಾಡಬೇಕಿತ್ತು. ಸಿಎಂ ಬೇಡ ನಾವೇ ಕಾರ್ಯಕ್ರಮ ಮಾಡ್ತೀವಿ ಅಂದ್ರೆ ಅದು ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ. ಸಿಎಂ ಸಮಯ ನೋಡಿಕೊಂಡು ಸಮನ್ವಯದಿಂದ ಕೆಲಸ ಮಾಡಬೇಕು. ಫೈಟ್ ಮಾಡೋದ್ರಿಂದ ಏನು ಪ್ರಯೋಜನ ಇಲ್ಲ. ಇದು ಪ್ರಜಾಪ್ರಭುತ್ವ ಅಲ್ಲ ಎಂದು ಆಕ್ರೋಶ ಹೊರಹಾಕಿದರು.

    ಸಮಾಜ ಕಲ್ಯಾಣ ಇಲಾಖೆಯಲ್ಲಿನ ಬ್ಯಾಗ್ ಲಾಗ್ ಹುದ್ದೆ ಮುಂಬಡ್ತಿ ನೀಡಲು ನಿಯಮಗಳು ಪಾಲನೆ ಆಗ್ತಿಲ್ಲ ಅಂತ ಎಐಸಿಸಿ ಅಧ್ಯಕ್ಷರು ಸಿಎಂಗೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಐಸಿಸಿ ಅಧ್ಯಕ್ಷರು ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಒಂದು ವಿಜಿಲೆನ್ಸ್ ವಿಂಗ್ ಇದೆ. ಏನೇ ದೂರು ಬಂದರು ಈ ವಿಂಗ್ ಪರಿಶೀಲನೆ ಮಾಡಲಿದೆ. ಅದನ್ನ ಪರಿಶೀಲನೆ ಮಾಡಿ ಕಮೀಷನರ್ ಅವರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯುತ್ತಾರೆ ಅಂತ ಸ್ಪಷ್ಟಪಡಿಸಿದರು.

    ನಮಗೆ ಪ್ರಾಂಶುಪಾಲರು, ಪೊಲೀಸ್ ಇಲಾಖೆ, ಡಿಹೆಚ್‌ಓಗಳ ಪ್ರಮೋಷನ್ ಸಂಬಂಧ ನನ್ನ ಗಮನಕ್ಕೆ ಬಂದಿತ್ತು. ನಾನು ಸಿಎಂ ಗಮನಕ್ಕೆ ತಂದು. ಸಮಸ್ಯೆ ಪರಿಹಾರಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ನಾನೂ ಕೂಡಾ ಸಿಎಸ್ ಮತ್ತು ಸಂಬಂಧಪಟ್ಟ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದರು.ಇದನ್ನೂ ಓದಿ: ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

  • ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ GST ಅನ್ವಯಿಸುತ್ತೆ: ಸಂತೋಷ್ ಲಾಡ್ ಲೇವಡಿ

    ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ GST ಅನ್ವಯಿಸುತ್ತೆ: ಸಂತೋಷ್ ಲಾಡ್ ಲೇವಡಿ

    ಚಿತ್ರದುರ್ಗ: ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ GST ಅನ್ವಯಿಸುತ್ತೆ ಎಂದು ಕಾರ್ಮಿಕ ಇಲಾಖೆ ಸಂತೋಷ್ ಲಾಡ್ (Santosh Lad) ಕಿಡಿಕಾರಿದ್ದಾರೆ.

    ಚಿತ್ರದುರ್ಗದಲ್ಲಿ (Chitradurg) ಗ್ರಾಹಕರು ಸಣ್ಣ ವ್ಯಾಪಾರ ವಹಿವಾಟಿಗೆ ಬಳಸಿದ ಗೂಗಲ್ ಪೇ ಹಾಗೂ ಫೋನ್ ಪೇ ಆಧರಿಸಿ, ಜಿಎಸ್‌ಟಿ ಕಟ್ಟುವಂತಿರುವ ನಿಯಮದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಹಾಲು, ಮೊಸರು, ಅರಶಿಣ ಸೇರಿದಂತೆ ಎಲ್ಲದರ ಮೇಲೂ ಜಿಎಸ್‌ಟಿ ಇದೆ. ಶೇ. 60% ನಿಂದ 70% ಜನರು ಜಿಎಸ್‌ಟಿ ಭರಿಸಬೇಕಾಗಿದೆ. ಈ ಜಿಎಸ್‌ಟಿಯಿಂದ ದೇಶದಲ್ಲಿ ಸಾಹುಕಾರರಿಗೆ ಅನುಕೂಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು

    ಅಲ್ದೇ ಸುಮಾರು ಹದಿನಾರುವರೆ ಲಕ್ಷ ಕೋಟಿ ರೂ. ಮಾಫಿ ಆಗಿದೆ. ಇದರಿಂದ ರೈತರು, ಬಡವರು ಹಾಗು ಮಧ್ಯಮ ವರ್ಗಕ್ಕೆ ಯಾವ್ದೇ ಅನುಕೂಲವಾಗಿಲ್ಲ. ಈ ಬಗ್ಗೆ ಜನರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ

    ಹಾಗೆಯೇ ಯಾವ ಕ್ಯಾಶ್ ಲೆಸ್? ಕೌಂಟರ್ ಫೇಕ್ ನೋಟ್ಸ್ ಪತ್ತೆ ಆಗ್ತಿದ್ದು, ಸುಮಾರು 26,000 ಕೋಟಿಯಷ್ಟು 2 ಸಾವಿರರ ನೋಟನ್ನು ಆರ್‌ಬಿಐ ಪತ್ತೆ ಹಚ್ಚಿದೆ. 1 ಲಕ್ಷ 14 ಸಾವಿರ ಕೋಟಿಯಷ್ಟು 500 ರೂ. ಮುಖಬೆಲೆಯ ನೋಟು ಫೇಕ್ ಕರೆನ್ಸಿ ಸಿಗ್ತಿದೆ. ಆದರೆ ಕೇಂದ್ರ ಸರ್ಕಾರ ಜನಕ್ಕೆ ಸುಳ್ಳು ಹೇಳಿ ಪಿಕ್ಚರ್ ನಡೆಸಿಕೊಂಡು ಹೋಗಿದ್ದಾರೆಂದು ಕೇಂದ್ರ ಸರ್ಕಾರದ ವಿರುದ್ಧ ಸಂತೋಷ್ ಲಾಡ್ ಗುಡುಗಿದ್ದಾರೆ.  ಇದನ್ನೂ ಓದಿ: ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

  • ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ

    ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ

    -6 ನೀರಾವರಿ ಯೋಜನೆಗಳಿಗೆ 11.122 ಕೋಟಿ ಅನುದಾನಕ್ಕಾಗಿ ಮನವಿ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಈ ಬಾರಿ 11 ದಿನಗಳ ಕಾಲ ನಡೆಯಲಿದ್ದು, ಇದೇ ವೇಳೆ ಏರ್ ಶೋ (Air Show) ನಡೆಸಲು ಕೇಂದ್ರ ಸರ್ಕಾರ (Central Govt) ಒಪ್ಪಿಗೆ ನೀಡಿದೆ.

    ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದ ನಿಯೋಗ ರಾಜನಾಥ್ ಸಿಂಗ್ (Rajanath Singh) ಅವರನ್ನು ಭೇಟಿಯಾಗಿ ಏರ್‌ಶೋಗೆ ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಕೋರಿಕೆ ಬೆನ್ನಲ್ಲೇ ರಾಜನಾಥ್ ಸಿಂಗ್ ಮನವಿಗೆ ಒಪ್ಪಿಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಇದನ್ನೂ ಓದಿ: ಹೊಂಬಾಳೆ ಫಿಲಂಸ್ ಪ್ರಸ್ತುತಿ: ಮಹಾವತಾರ್ ನರಸಿಂಹ ಟ್ರೈಲರ್ ರಿಲೀಸ್

    ಭೇಟಿ ವೇಳೆ ಬೆಂಗಳೂರಿನ (Bengaluru) ಟನಲ್ ಯೋಜನೆ, ಲಿಂಕ್ ರೋಡ್ ಹಾಗೂ ಏರ್‌ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕ್ಕರ್ ರಸ್ತೆಗೆ ರಕ್ಷಣಾ ಇಲಾಖೆಗೆ ಜಾಗ ಕೇಳಲಾಗಿತ್ತು. ಇದಕ್ಕೂ ಸರ್ಕಾರ ಸ್ಪಂದಿಸಿದೆ ಹಾಗೂ ನಾಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭೇಟಿಗೂ ಅವಕಾಶ ಕೇಳಲಾಗಿದೆ ಎಂದು ತಿಳಿಸಿದ್ದಾರೆ.

    ಇನ್ನೂ ಇದೇ ವೇಳೆ ಡಿಕೆಶಿ ಮಾತನಾಡಿ, ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ, ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

    ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಸುರಂಗ ಮಾರ್ಗ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಛೇಡಿಸಿದ್ದಾರೆ. ಟನಲ್ ನಿರ್ಮಾಣಕ್ಕಾಗಿ ಕುಮಾರಸ್ವಾಮಿ ನೆರವು ಕೇಳಿರುವ ಡಿಕೆ ಶಿವಕುಮಾರ್, ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಟೀಕಿಸಿದ್ದಾರೆ. ಟನಲ್ ನಿರ್ಮಾಣದಲ್ಲಿ ಹೆಚ್‌ಡಿಕೆ ಸಲಹೆ ಪಡೆಯಲಾಗುವುದು. ಅವರು ಗಡ್ಕರಿ ಭೇಟಿಯಾಗಿದ್ದು ಗೊತ್ತು. ಕೇಂದ್ರದಿಂದ ದುಡ್ಡು ಕೊಡಿಸಲಿ ಸಾಕು. ಕ್ರೇಡಿಟ್ ಯಾರು ಬೇಕಾದರೂ ತೆಗೆದುಕೊಳ್ಳಲಿ ಎಂದಿದ್ದಾರೆ.ಇದನ್ನೂ ಓದಿ: ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ

  • ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

    ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

    – 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ಕೇಳಿದ್ದ ರಾಜ್ಯ

    ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ (Yettinahole Integrated Drinking Water Supply Project) ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ (Forest) ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ (Karnataka Government) ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ  ಅನುಮತಿ ನೀಡಲು ನಿರಾಕರಿಸಿದೆ.

    ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು. ಇದನ್ನೂ ಓದಿ: ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

     

    ನವದೆಹಲಿಯಲ್ಲಿ ಜೂನ್‌ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು.  ಇದನ್ನೂ ಓದಿ: ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

    ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್‌ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.

  • ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

    ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

    * ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಹ್ಲಾದ್‌ ಜೋಶಿ ಸೂಚನೆ
    * ಪರವಾನಗಿ ರಹಿತ 9 ತಯಾರಕರಿಂದ 2,500ಕ್ಕೂ ಹೆಚ್ಚು ಹೆಲ್ಮೆಟ್‌ಗಳ ವಶ

    ನವದೆಹಲಿ: ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಮುಂದಾಗಿರುವ ಕೇಂದ್ರ ಸರ್ಕಾರ (Central Government) ಕಳಪೆ ಗುಣಮಟ್ಟದ ಹೆಲ್ಮೆಟ್‌ (Substandard Helmets) ಮಾರಾಟ ಮತ್ತು ಬಳಕೆಗೆ ತಡೆಯೊಡ್ಡಿದೆ.

    ಕಳಪೆ ಗುಣಮಟ್ಟದ ಹೆಲ್ಮೆಟ್ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ, ರಸ್ತೆ ಬದಿಗಳಲ್ಲಿ ಮಾರಾಟ ಆಗುತ್ತಿರುವ ಕಳಪೆ ಹೆಲ್ಮೆಟ್‌ಗಳಿಗೆ ಬ್ರೇಕ್‌ ಹಾಕುವ ಜೊತೆಗೆ ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ ಬಳಕೆಯನ್ನೇ ಕಡ್ಡಾಯಗೊಳಿಸಿದೆ.

    ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಭಾರತೀಯ ಮಾನದಂಡಗಳ ಬ್ಯೂರೋ (BIS) ಕಳಪೆ ಹೆಲ್ಮೆಟ್ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದು, ದೆಹಲಿಯಲ್ಲಿ ಈಗಾಗಲೇ 2500ಕ್ಕೂ ಹೆಚ್ಚು ಕಳಪೆ ಹೆಲ್ಮೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಸೈನಿಕರಿಗೆ ಅಂಗವೈಕಲ್ಯ ಪಿಂಚಣಿ ನೀಡುವುದು ಔದಾರ್ಯಕ್ಕಲ್ಲ, ರಾಷ್ಟ್ರಕ್ಕಾಗಿ ಮಾಡಿದ ಸೇವೆಗೆ – ದೆಹಲಿ ಹೈಕೋರ್ಟ್

    2024-25ನೇ ಆರ್ಥಿಕ ವರ್ಷದಲ್ಲಿ BIS ದೆಹಲಿಯಲ್ಲಿ 30ಕ್ಕೂ ಹೆಚ್ಚು ಹೆಲ್ಮೆಟ್‌ ತಯಾರಕ ಘಟಕಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಪರವಾನಗಿ ರದ್ದಾದ ಹಾಗೂ ಅವಧಿ ಮುಗಿದ 9 ತಯಾರಕರು ಕಂಡುಬಂದಿದ್ದು, ಇವರಿಂದ 2,500ಕ್ಕೂ ಹೆಚ್ಚು ಹೆಲ್ಮೆಟ್‌ಗಳನ್ನು ವಶಪಡಿಸಿಕೊಂಡಿದೆ.

    ದೆಹಲಿಯ 17 ಅಂಗಡಿಗಳು ಮತ್ತು ರಸ್ತೆ ಬದಿ ವ್ಯಾಪಾರಸ್ಥರಲ್ಲೂ ಶೋಧ ನಡೆಸಿ, 500ಕ್ಕೂ ಹೆಚ್ಚು ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ವಶಪಡಿಸಿಕೊಂಡ BIS ಅಧಿಕಾರಿಗಳ ತಂಡ, ವರ್ತಕರು ಮತ್ತು ತಯಾರಕರ ವಿರುದ್ಧ ಕಾನೂನು ಕ್ರಮ ಜರುಗಿಸಿದೆ.  ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

    176 ತಯಾರಕರಿಗೆ BIS ಮಾನ್ಯತೆ:
    2025ರ ಜೂನ್ ವೇಳೆಗೆ ದೇಶಾದ್ಯಂತ 176 ಹೆಲ್ಮೆಟ್‌ ತಯಾರಕರು ಮಾತ್ರ ರಕ್ಷಣಾತ್ಮಕ ಹೆಲ್ಮೆಟ್‌ ಉತ್ಪಾದನೆಗೆ ಮಾನ್ಯವಾದ BIS ಪರವಾನಗಿ ಹೊಂದಿದ್ದಾರೆ. ರಸ್ತೆ ಬದಿಗಳಲ್ಲಿ ಮಾರಾಟವಾಗುತ್ತಿರುವ ಅನೇಕ ಹೆಲ್ಮೆಟ್‌ಗಳು BIS ಪ್ರಮಾಣೀಕರಣ ಹೊಂದಿರುವುದಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.

    ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್‌ ಇಲ್ಲದೆ ಮತ್ತು ಹೆಲ್ಮೆಟ್‌ ಧರಿಸಿದ್ದರೂ ಕಳಪೆ ಗುಣಮಟ್ಟದ್ದಾಗಿದ್ದರಿಂದ ತಲೆಗೆ ತೀವ್ರ ಪೆಟ್ಟು ಬಿದ್ದು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು BIS ಅನೇಕ ಪ್ರಕರಣಗಳಲ್ಲಿ ಇದನ್ನು ಗಮನಿಸಿದ್ದು, ಬೈಕ್‌ ಸವಾರರ ಸುರಕ್ಷತೆ ದೃಷ್ಟಿಯಿಂದ ಕಳಪೆ ಗುಣಮಟ್ಟದ ಹೆಲ್ಮೆಟ್‌ ತಯಾರಕರು ಮತ್ತು ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

    BIS, ನಿಯಮಿತ ಕಾರ್ಖಾನೆ ಮತ್ತು ಮಾರುಕಟ್ಟೆ ಮೇಲೆ ಕಣ್ಗಾವಲಿರಿಸಿದ್ದು, 500ಕ್ಕೂ ಹೆಚ್ಚು ಹೆಲ್ಮೆಟ್ ಮಾದರಿಗಳನ್ನು ಪರೀಕ್ಷಿಸಿದೆ. 30ಕ್ಕೂ ಹೆಚ್ಚು ಶೋಧ ಕಾರ್ಯಾಚರಣೆ ನಡೆಸಿ ಗುಣಮಟ್ಟದ ಮಾನದಂಡಗಳನ್ನು ಜಾರಿಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗ್ರಾಹಕ ವ್ಯವಹಾರಗಳ ಇಲಾಖೆ ಸಹ ಗ್ರಾಹಕರ ರಕ್ಷಣೆ ಮತ್ತು ಸುರಕ್ಷಿತ ವಾಹನ ಸಂಚಾರಕ್ಕಾಗಿ ಕಳಪೆ-ಗುಣಮಟ್ಟದ ಹೆಲ್ಮೆಟ್‌ ಮಾರಾಟದ ವಿರುದ್ಧ ಸಮರ ಸಾರಿದೆ. ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಾವು-ನೋವು ತಡೆಯುವ ಉದ್ದೇಶದಿಂದ ಉತ್ತಮ ಗುಣಮಟ್ಟದ ಹೆಲ್ಮೆಟ್‌ ಮಾರಾಟ-ಖರೀದಿಗೆ ಆದ್ಯತೆ ನೀಡುತ್ತಿದೆ.

    ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ:
    ವಾಹನ ಸವಾರರ ಸುರಕ್ಷತೆ ಹಾಗೂ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳಿಂದ ಗ್ರಾಹಕರನ್ನು ರಕ್ಷಿಸುವ ಪ್ರಯತ್ನವಾಗಿ ಗ್ರಾಹಕ ವ್ಯವಹಾರಗಳ ಇಲಾಖೆ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ ನಡೆಸುತ್ತಿದೆ. ಎಲ್ಲಾ ಜಿಲ್ಲಾ ಅಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಪತ್ರ ಬರೆದು ಮಾರುಕಟ್ಟೆಯಲ್ಲಿ ಹೆಲ್ಮೆಟ್‌ಗಳ ಗುಣಮಟ್ಟ ಪರಿಶೀಲನೆಗೆ ಸೂಚನೆ ನೀಡಿದೆ. ದೆಹಲಿಯಲ್ಲಿ ಈ ಅಭಿಯಾನಕ್ಕೆ ಬೆಂಬಲ ವ್ಯಕ್ತವಾಗುತ್ತಿದ್ದು, ದೇಶದ ಇತರೆಡೆಯೂ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಅಭಿಯಾನ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.  ಇದನ್ನೂ ಓದಿ: ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

    ಬಿಐಎಸ್ ಕೇರ್ ಅಪ್ಲಿಕೇಶನ್‌ʼ
    ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ BIS ಪ್ರಾಮಾಣಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು ಹಾಗೂ ಪ್ರಮಾಣೀಕರಣವಿಲ್ಲದ ಹೆಲ್ಮೆಟ್‌ಗಳ ತಯಾರಿಕೆ ಅಥವಾ ಮಾರಾಟ ಕಂಡುಬಂದರೆ ಗ್ರಾಹಕ ವ್ಯವಹಾರಗಳ ಇಲಾಖೆ ಅಥವಾ BIS ಗಮನಕ್ಕೆ ತರಬೇಕು. ಇದಕ್ಕಾಗಿ ʼಬಿಐಎಸ್ ಕೇರ್ ಅಪ್ಲಿಕೇಶನ್‌ʼ ಮತ್ತು ʼಬಿಐಎಸ್ ಪೋರ್ಟಲ್‌ʼನಲ್ಲಿ ದೂರು ದಾಖಲಿಸಲು ಅವಕಾಶ ಕಲ್ಪಿಸಿದೆ. ರಾಷ್ಟ್ರವ್ಯಾಪಿ ಗ್ರಾಹಕರ ಜಾಗೃತಿಗಾಗಿ ಬಿಐಎಸ್ ಕ್ವಾಲಿಟಿ ಕನೆಕ್ಟ್ ಅಭಿಯಾನ ಸಹ ಆಯೋಜಿಸುತ್ತಿದೆ. ‘ಮನಕ್ ಮಿತ್ರ’ ಸ್ವಯಂ ಸೇವಕರು ಹೆಲ್ಮೆಟ್‌ ಮತ್ತಿತರ ಉತ್ಪನ್ನಗಳ ಕಡ್ಡಾಯ ಪ್ರಮಾಣೀಕರಣ ಬಗ್ಗೆ ಗ್ರಾಹಕರಿಗೆ ಅಗತ್ಯ ಮಾಹಿತಿ ಒದಗಿಸುತ್ತಾರೆ ಎಂದಿದೆ BIS.

    ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದೇನು?
    ಈ ಕುರಿತು ಮಾತನಾಡಿರುವ ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್‌ ಜೋಶಿ ಮಾತನಾಡಿ, ದೇಶದಲ್ಲಿ 21 ಕೋಟಿಗೂ ಹೆಚ್ಚು ದ್ವಿಚಕ್ರ ವಾಹನಗಳಿದ್ದು, ಸವಾರರ ಸುರಕ್ಷತೆ ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಮೋಟಾರು ವಾಹನ ಕಾಯ್ದೆ, 1988ರಡಿ ಹೆಲ್ಮೆಟ್ ಕಡ್ಡಾಯವಾಗಿದ್ದು, ಅದರ ಗುಣಮಟ್ಟಕ್ಕೂ ಆದ್ಯತೆ ಕೊಡಬೇಕಿದೆ. ಹಾಗಾಗಿ 2021ರಿಂದ ಗುಣಮಟ್ಟ ನಿಯಂತ್ರಣ ಆದೇಶ ಜಾರಿಯಲ್ಲಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್‌ಗೆ ಅವಕಾಶವಿಲ್ಲ. ಎಲ್ಲಾ ದ್ವಿಚಕ್ರ ವಾಹನ ಸವಾರರಿಗೆ BIS ಮಾನದಂಡದಂತೆ (IS 4151:2015) ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ಗಳನ್ನು ಗ್ರಾಹಕ ವ್ಯವಹಾರಗಳ ಇಲಾಖೆ ಕಡ್ಡಾಯಗೊಳಿಸುತ್ತದೆ ಎಂದು ತಿಳಿಸಿದ್ದಾರೆ.

  • ಮಧ್ಯಮ ವರ್ಗದ ಜನರ ತೆರಿಗೆ ಭಾರ ಇಳಿಸಲು ಸರ್ಕಾರ ಚಿಂತನೆ – GST ಸ್ಲ್ಯಾಬ್‌ಗಳಲ್ಲಿ ಬದಲಾವಣೆ; ಯಾವೆಲ್ಲ ವಸ್ತುಗಳು ಅಗ್ಗ?

    ಮಧ್ಯಮ ವರ್ಗದ ಜನರ ತೆರಿಗೆ ಭಾರ ಇಳಿಸಲು ಸರ್ಕಾರ ಚಿಂತನೆ – GST ಸ್ಲ್ಯಾಬ್‌ಗಳಲ್ಲಿ ಬದಲಾವಣೆ; ಯಾವೆಲ್ಲ ವಸ್ತುಗಳು ಅಗ್ಗ?

    ನವದೆಹಲಿ: ಮಧ್ಯಮ ವರ್ಗದ ಜನರ ತೆರಿಗೆ ಭಾರವನ್ನು ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (GST) ಸ್ಲ್ಯಾಬ್‌ಗಳಲ್ಲಿ ಬದಲಾವಣೆ ತರಲು ಚಿಂತಿಸಿದೆ ಎಂದು ಮೂಲಗಳು ಹೇಳಿವೆ. ಮಾಹಿತಿಗಳ ಪ್ರಕಾರ 12% ಸ್ಲ್ಯಾಬ್ ಅನ್ನು ಸಂಪೂರ್ಣವಾಗಿ ರದ್ದು ಮಾಡಿ ಇದರಲ್ಲಿರುವ ವಸ್ತುಗಳ ಮೇಲಿನ ಜಿಎಸ್ಟಿಯನ್ನು 5% ಸ್ಲ್ಯಾಬ್‌ಗೆ ಸೇರ್ಪಡೆ ಮಾಡಲು ಸರ್ಕಾರ ತಯಾರಿ ಆರಂಭಿಸಿದೆ.

    ಪ್ರಸ್ತುತ 12% GSTಯನ್ನು ಆಕರ್ಷಿಸುವ ಹೆಚ್ಚಿನ ವಸ್ತುಗಳು ಸಾಮಾನ್ಯ ನಾಗರಿಕರು ದೈನಂದಿನ ಜೀವನದಲ್ಲಿ ಸಾಮಾನ್ಯವಾಗಿ ಬಳಸುವ ಸರಕುಗಳಾಗಿವೆ. ಸರ್ಕಾರದ ಪರಿಗಣನೆಯಲ್ಲಿರುವ ಯೋಜನೆಯು ಈ ವಸ್ತುಗಳನ್ನು 5% ತೆರಿಗೆ ಶ್ರೇಣಿಗೆ ಮರು ವರ್ಗೀಕರಿಸುವುದನ್ನು ಒಳಗೊಂಡಿರುತ್ತದೆ. ಸರ್ಕಾರವು 12% ಸ್ಲ್ಯಾಬ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಲು ಮತ್ತು ಅಸ್ತಿತ್ವದಲ್ಲಿರುವ ಕಡಿಮೆ ಅಥವಾ ಹೆಚ್ಚಿನ ಸ್ಲ್ಯಾಬ್‌ಗಳಿಗೆ ವಸ್ತುಗಳನ್ನು ಮರುಹಂಚಿಕೆ ಮಾಡಲು ಆಯ್ಕೆ ಮಾಡಬಹುದು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಇಬ್ಬರು ಆರೋಪಿಗಳಿಗೆ ಜಾಮೀನು

    ಮುಂಬರುವ 56 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಶಿಷ್ಟಾಚಾರದ ಪ್ರಕಾರ, ಕೌನ್ಸಿಲ್ ಸಭೆ ಕರೆಯುವ ಮೊದಲು 15 ದಿನಗಳ ಸೂಚನೆ ಅಗತ್ಯವಿದೆ. ಆದರೆ ಮೂಲಗಳು ಈ ತಿಂಗಳ ಕೊನೆಯಲ್ಲಿ ಅಧಿವೇಶನ ನಡೆಯಬಹುದು ಎಂದು ಸೂಚಿಸುತ್ತವೆ. ಕೇಂದ್ರ ಹಣಕಾಸು ಸಚಿವರು ಅಧ್ಯಕ್ಷತೆ ವಹಿಸಿರುವ ಮತ್ತು ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ ಜಿಎಸ್‌ಟಿ ಮಂಡಳಿಯು ತೆರಿಗೆ ದರಗಳಲ್ಲಿ ಬದಲಾವಣೆಗಳನ್ನು ಶಿಫಾರಸು ಮಾಡುವ ಅಧಿಕಾರವನ್ನು ಹೊಂದಿದೆ. ಈ ಪ್ರಸ್ತಾವನೆ ಅಂಗೀಕಾರವಾದರೆ, 2017 ರಲ್ಲಿ ಪರೋಕ್ಷ ತೆರಿಗೆ ವ್ಯವಸ್ಥೆ ಜಾರಿಗೆ ಬಂದ ನಂತರ ಜಿಎಸ್‌ಟಿ ದರಗಳಲ್ಲಿನ ಅತ್ಯಂತ ಮಹತ್ವದ ಪರಿಷ್ಕರಣೆಗಳಲ್ಲಿ ಒಂದಾಗಲಿದೆ.

    12% ಜಿಎಸ್‌ಟಿ ಸ್ಲ್ಯಾಬ್‌ನಲ್ಲಿರುವ ವಸ್ತುಗಳು ಯಾವುವು?
    ಆಹಾರ ಸಂಬಂಧಿತ ವಸ್ತುಗಳು, ಬೆಣ್ಣೆ, ಚೀಸ್, ತುಪ್ಪ, ಒಣಗಿದ ಹಣ್ಣುಗಳು, ಫ್ರೂಟ್ ಜಾಮ್, ಜೆಲ್ಲಿ, ಮಾರ್ಮಲೇಡ್, ಪಿಜ್ಜಾ ಬ್ರೆಡ್, ಪಾಸ್ತಾ, ಕಾರ್ನ್ ಫ್ಲೇಕ್ಸ್, ಫ್ರೂಟ್ ಜ್ಯೂಸ್, ತರಕಾರಿ ರಸ, ಖಾದ್ಯ ತೈಲ, ಟೂತ್‌ಪೇಸ್ಟ್, ಸಾಬೂನು, ಹೇರ್ ಆಯಿಲ್, ಶಾಂಪೂ, ಒಣಗಿದ ಮೆಹಂದಿ, ಅಗರಬತ್ತಿ, ಮೇಣದಬತ್ತಿಗಳು, ಪೊಟೊ ಫ್ರೇಮ್, ಗಾಜಿನ ಸಾಮಾನುಗಳು, ತಾಮ್ರದ ಒಡವೆಗಳು. ಇದನ್ನೂ ಓದಿ: ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್‌ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ

    1,000 ರೂ.ಗಿಂತ ಕಡಿಮೆ ಮೌಲ್ಯದ ಗಾರ್ಮೆಂಟ್ಸ್, ಔಷಧಿಗಳು, ಫರ್ನಿಚರ್ (ಕೆಲವು ರೀತಿಯ, ಉದಾಹರಣೆಗೆ ಮರದ ಫರ್ನಿಚರ್) ಎಲೆಕ್ಟ್ರಿಕಲ್ ಟ್ರಾನ್ಸ್‌ಫಾರ್ಮರ್‌ಗಳು, ಸೈಕಲ್‌ಗಳು, ಆಟಿಕೆಗಳು, ಕ್ರೀಡಾ ಸಾಮಗ್ರಿಗಳು, ಕಾಗದದ ಉತ್ಪನ್ನಗಳು. ರೈಲ್ವೆ ಟಿಕೆಟ್‌ಗಳು (ನಾನ್-ಎಸಿ ಕೋಚ್‌ಗಳು, ಸ್ಲೀಪರ್ ಕ್ಲಾಸ್), ಏರ್ ಟಿಕೆಟ್‌ಗಳು (ಎಕಾನಮಿ ಕ್ಲಾಸ್), ಹೋಟೆಲ್‌ಗಳು (ರೂಮ್ ಟಾರಿಫ್ 1,000 ರಿಂದ 7,500 ರೂ.ವರೆಗೆ), ರೆಸ್ಟೋರೆಂಟ್ ಸೇವೆಗಳು (ನಾನ್-ಎಸಿ, ಆದರೆ ಲೈಸೆನ್ಸ್‌ಡ್ ಬಾರ್‌ಗಳಿಲ್ಲದವು), ಒಡವೆ ತಯಾರಿಕೆ ಸೇವೆಗಳು, ಚಲನಚಿತ್ರ ಟಿಕೆಟ್‌ಗಳು (750 ರೂ.ಗಿಂತ ಕಡಿಮೆ ಮೌಲ್ಯದವು)

    ಸರ್ಕಾರ ನಿರ್ಧಾರದಿಂದ ಈ ಎಲ್ಲ ವಸ್ತುಗಳು 12% ರಿಂದ 5% ಜಿಎಸ್‌ಟಿಗೆ ಇಳಿಕೆಯಾದರೆ ಇವುಗಳ ಬೆಲೆಯಲ್ಲಿ ಇಳಿಕೆಯಾಗಲಿದ್ದು, ಇದು ಮಧ್ಯಮ ವರ್ಗದ ಜನರಿಗೆ ಆಗುವ ಹೊರೆಯನ್ನು ಇಳಿಕೆ ಮಾಡಲಿದೆ. ಕಳೆದ ಬಜೆಟ್‌ನಲ್ಲಿ ಆದಾಯ ತೆರಿಗೆ ಮಿತಿ ಹೆಚ್ಚಿಸುವ ಮೂಲಕ ಒಂದು ರಿಯಾಯತಿ ನೀಡಲಾಗಿತ್ತು.

  • ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

    ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

    – ರಾಜ್ಯ ಸರ್ಕಾರ ಅನುಮತಿ ನೀಡಿದ್ರೆ ಮಾತ್ರ ಅಗ್ರಿಗೇಟರ್ ಸೇವೆ

    ನವದೆಹಲಿ: ರಾಜ್ಯ ಸರ್ಕಾರ (State Government) ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ (Bike Taxi) ಕೇಂದ್ರ ಸರ್ಕಾರ (Central Government) ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ.

    ಕಳದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಬ್ಯಾನ್‌ಗೊಳಿಸಿತ್ತು. ಈ ಹಿನ್ನೆಲೆ ಇದರ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.ಇದನ್ನೂ ಓದಿ: ಭಾರತೀಯ ರೈಲ್ವೆ ಇಲಾಖೆಯಿಂದ RailOne ಆಪ್‌ ಬಿಡುಗಡೆ- ಏನೆಲ್ಲಾ ಸೇವೆ ಲಭ್ಯವಿದೆ?

    ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ಮಾರ್ಗಸೂಚಿಯಲ್ಲಿ ಏನಿದೆ?
    – ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
    – ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
    – ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
    – ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು.ಇದನ್ನೂ ಓದಿ: ಈಡೇರಿದ ಶರಾವತಿ ಮಡಿಲ ಮಕ್ಕಳ 6 ದಶಕಗಳ ಕನಸು!

  • GST ಕಲೆಕ್ಷನ್‌ನಲ್ಲಿ ದಾಖಲೆ – 5 ವರ್ಷಗಳಲ್ಲಿ ಡಬಲ್, ಬರೋಬ್ಬರಿ 22.08 ಲಕ್ಷ ಕೋಟಿ ಸಂಗ್ರಹ

    GST ಕಲೆಕ್ಷನ್‌ನಲ್ಲಿ ದಾಖಲೆ – 5 ವರ್ಷಗಳಲ್ಲಿ ಡಬಲ್, ಬರೋಬ್ಬರಿ 22.08 ಲಕ್ಷ ಕೋಟಿ ಸಂಗ್ರಹ

    ನವದೆಹಲಿ: ಕಳೆದ 5 ವರ್ಷಗಳಲ್ಲಿ ಸರಕು ಸೇವಾ ತೆರಿಗೆ (GST) ಸಂಗ್ರಹ ದ್ವಿಗುಣಗೊಂಡಿದೆ. 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಒಟ್ಟಾರೆ ತೆರಿಗೆ ಸಂಗ್ರಹ ದಾಖಲೆಯ 22.08 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ ಎಂಬುದನ್ನು ಇಂದು ಬಿಡುಯಾದ ಸರ್ಕಾರಿ ಡೇಟಾ ಬಹಿರಂಗಪಡಿಸಿದೆ.

    ಇದು ಈವರೆಗಿನ ದಾಖಲೆಯ ತೆರಿಗೆ ಸಂಗ್ರಹವಾಗಿದೆ (GST Collections). 2021ರ ಆರ್ಥಕ ವರ್ಷದಲ್ಲಿ 11.37 ಲಕ್ಷ ಕೋಟಿ ಸಂಗ್ರಹವಾಗಿತ್ತು. ಇದೀಗ 2025ರ ಆರ್ಥಿಕ ವರ್ಷದಲ್ಲಿ ಒಟ್ಟಾರೆ ಸರಾಸರಿ ಮಾಸಿಕ ಜಿಎಸ್‌ಟಿ ಸಂಗ್ರಹ 1.84 ಲಕ್ಷ ಕೋಟಿ ಇದ್ದರೆ, 2024ರ ಆರ್ಥಿಕ ವರ್ಷದಲ್ಲಿ 1.68 ಲಕ್ಷ ಕೋಟಿ ರೂ., 2022ರ ಆರ್ಥಿಕ ವರ್ಷದಲ್ಲಿ 1.51 ಲಕ್ಷ ಕೋಟಿ ರೂ. ಸಂಗ್ರಹವಾಗಿದ್ದು, ಗಮನಾರ್ಹ ಏರಿಕೆಯಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಭಾರತ ಹೊರಗಿಟ್ಟು ಸಾರ್ಕ್‌ಗೆ ಪರ್ಯಾಯವಾಗಿ ಹೊಸ ಪ್ರಾದೇಶಿಕ ಒಕ್ಕೂಟ ರಚಿಸಲು ಚಿಂತನೆ

    Indian Economy 2

    ಸರಕು ಸೇವಾ ತೆರಿಗೆ ವ್ಯವಸ್ಥೆ ಜಾರಿಗೆ ಬಂದು 8 ವರ್ಷ ತುಂಬಿದೆ. ಒಟ್ಟು ನೋಂದಾಯಿತ ತೆರಿಗೆ ಪಾವತಿದಾರರ ಸಂಖ್ಯೆ 65 ಲಕ್ಷ ದಿಂದ 1.51 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ 2024-25ರ ಆರ್ಥಿಕ ವರ್ಷದಲ್ಲಿ ದಾಖಲೆಯ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಶೇ.9.4 ರಷ್ಟು ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ ಎಂಬುದನ್ನು ದತ್ತಾಂಶ ಬಹಿರಂಗಗೊಳಿಸಿದೆ. ಇದನ್ನೂ ಓದಿ: ಭಾರತ್-NCAP ಕ್ರ್ಯಾಶ್ ಟೆಸ್ಟ್‌ನಲ್ಲಿ ಇನ್ನೋವಾ ಹೈಕ್ರಾಸ್‌ಗೆ ಸಿಕ್ತು 5 ಸ್ಟಾರ್ ರೇಟಿಂಗ್

    ಇನ್ನೂ 2025ನೇ ಸಾಲಿನ ಏಪ್ರಿಲ್‌ನಲ್ಲಿ 2.37 ಲಕ್ಷ ಕೋಟಿ, ಮೇ ತಿಂಗಳಲ್ಲಿ 2.01 ಲಕ್ಷ ಕೋಟಿ ಸಂಗ್ರಹವಾಗಿದ್ದು, ಜೂನ್‌ ತಿಂಗಳ ಅಂಕಿ ಅಂಶ ಜುಲೈ 2ರಂದು ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸೇನಾ ಸಾಮರ್ಥ್ಯಕ್ಕೆ ಇನ್ನಷ್ಟು ಬಲ – ಭಾರತದ ʻಬ್ರಹ್ಮಾಸ್ತ್ರʼ ಅಗ್ನಿ-5 ಬಂಕರ್ ಬಸ್ಟರ್? – ಪಾಕ್‌ಗೆ ನಡುಕ

    ಜಿಎಸ್‌ಟಿ ಜಾರಿಗೆ ಬಂದಾಗಿನಿಂದ ತೆರಿಗೆ ಸಂಗ್ರಹ ಹೆಚ್ಚಳ ಒಂದುಕಡೆಯಾದ್ರೆ, ತೆರಿಗೆ ಮೂಲಗಳ ವಿಸ್ತರಣೆಯೂ ಆಗಿದೆ. ಇದು ಭಾರತದ ಹಣಕಾಸಿನ ಸ್ಥಿತಿಯನ್ನು ಇನ್ನಷ್ಟು ಸ್ಥಿರವಾಗಿ ಬಲಪಡಿಸಿದೆ. ಅಲ್ಲದೇ ಪರೋಕ್ಷ ತೆರಿಗೆಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕವಾಗಿಸಿದೆ ಎಂದು ಕೇಂದ್ರ ಸರ್ಕಾರ ತನ್ನ ಅಧಿಕೃತ ಪ್ರಕರಣೆಯಲ್ಲಿ ತಿಳಿಸಿದೆ.

  • ಕೆಂಪೇಗೌಡ ಏರ್‌ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ

    ಕೆಂಪೇಗೌಡ ಏರ್‌ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ

    -300 ಹಾಸಿಗೆಗಳ ಪಾಲಿಟ್ರೌಮಾ ಕೇಂದ್ರಕ್ಕೆ ಹಣಕಾಸು ಸಚಿವಾಲಯದ ತಾತ್ವಿಕ ಅನುಮೋದನೆ

    ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಕ್ಯಾಲಸನಹಳ್ಳಿಯಲ್ಲಿ NIMHANS ಸ್ನಾತಕೋತ್ತರ ಮತ್ತು 300 ಹಾಸಿಗೆಗಳ ಪಾಲಿಟ್ರೌಮಾ ಕೇಂದ್ರದ ನಿರ್ಮಾಣಕ್ಕೆ 498 ಕೋಟಿ ರೂ. ವೆಚ್ಚಕ್ಕೆ ತಾತ್ವಿಕ ಅನುಮೋದನೆ ನೀಡಿದೆ.

    ಅಪಘಾತಕ್ಕೀಡಾದವರಿಗೆ `ನಿರ್ಣಾಯಕ’ ಸಮಯದಲ್ಲಿ ಆರೈಕೆ ದೊರೆಯುವುದು ಅತ್ಯಗತ್ಯ. NIMHANSನ ಪಾಲಿಟ್ರೌಮಾ ಕೇಂದ್ರವು ಈ ತುರ್ತು ಆರೈಕೆಯನ್ನು ಒದಗಿಸುವುದರ ಜೊತೆಗೆ, ಎತ್ತರದಿಂದ ಬಿದ್ದ, ಹಲ್ಲೆಗೊಳಗಾದ ಅಥವಾ ಯಾವುದೇ ಗಂಭೀರ ಗಾಯದಿಂದ, ಬಹು ಅಂಗಾAಗ ವೈಫಲ್ಯದಿಂದ ಬಳಲುತ್ತಿರುವವರಿಗೂ ಸೇವೆ ಸಲ್ಲಿಸಲಿದೆ. ಇದು ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಸಾವಿರಾರು ರೋಗಿಗಳ ಜೀವಗಳನ್ನು ಉಳಿಸಲು ಒಂದು ಪ್ರಮುಖ ಹೆಜ್ಜೆಯಾಗಿದೆ.

    ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಸ್ತೆ ಸಂಚಾರ ಅಪಘಾತಗಳು 2030ರ ವೇಳೆಗೆ ಸಾವಿಗೆ ಐದನೇ ಪ್ರಮುಖ ಕಾರಣವಾಗುವ ಸಾಧ್ಯತೆಯಿದೆ. ಭಾರತದಲ್ಲಿ, 2022ರಲ್ಲಿ 4,61,312 ರಸ್ತೆ ಅಪಘಾತಗಳು ಸಂಭವಿಸಿದ್ದು, 1,68,491 ಜೀವಗಳನ್ನು ಬಲಿತೆಗೆದುಕೊಂಡಿವೆ ಮತ್ತು 4,43,366 ಜನರಿಗೆ ಗಾಯಗಳಾಗಿವೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಅಪಘಾತಗಳಲ್ಲಿ 11.9% ಮತ್ತು ಸಾವುಗಳಲ್ಲಿ 9.4% ಹೆಚ್ಚಳವನ್ನು ಪ್ರತಿನಿಧಿಸುತ್ತದೆ.

    ಪಾಲಿಟ್ರೌಮಾ ಕೇಂದ್ರವು ಕಾರ್ಯಾರಂಭ ಮಾಡಿದ ನಂತರ, ರೋಗಿಗಳಿಗೆ ಬಹು ಆಯಾಮದ ತುರ್ತು ಆರೈಕೆ ನೀಡಲು ಪ್ರಮುಖ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಅದಲ್ಲದೆ, ರಾಷ್ಟ್ರೀಯ ಹೆದ್ದಾರಿ ಮತ್ತು ಕೆಐಎಗೆ ಹತ್ತಿರವಿರುವುದರಿಂದ, ಇತರ ನಗರಗಳಿಂದಲೂ ರೋಗಿಗಳು ಈ ಕೇಂದ್ರಕ್ಕೆ ಬರಲು ಅವಕಾಶವಿರುತ್ತದೆ.

    ಕ್ಯಾಲಸನಹಳ್ಳಿಯಲ್ಲಿನ 39 ಎಕರೆ ಜಾಗವನ್ನು 2012-13ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ NIMHANSಗೆ ಹಂಚಿಕೆ ಮಾಡಲಾಗಿತ್ತು. ನಂತರ ಸಂಸ್ಥೆಯು 498 ಕೋಟಿ ರೂ. ಯೋಜನಾ ವೆಚ್ಚದಲ್ಲಿ 300 ಹಾಸಿಗೆಗಳ ಅತ್ಯಾಧುನಿಕ ಪಾಲಿಟ್ರೌಮಾ ಸೌಲಭ್ಯವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಭಾರತ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯಿಂದ ತಾತ್ವಿಕ ಅನುಮೋದನೆ ದೊರೆತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಂತಿಮ ಅನುಮೋದನೆ ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ NIMHANSನ 300 ಹಾಸಿಗೆಗಳ ಪಾಲಿಟ್ರೌಮಾ ಘಟಕಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ನೀಡಿರುವ ಸರ್ಕಾರದ ಈ ನಿರ್ಧಾರವನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸ್ವಾಗತಿಸಿದ್ದು, ಬೆಂಗಳೂರು ಸುತ್ತಮುತ್ತಲಿನ ಅಪಘಾತಕ್ಕೀಡಾದವರಿಗೆ ಜೀವ ಉಳಿಸುವ ಮತ್ತು ತುರ್ತು ಆರೈಕೆಯನ್ನು ಒದಗಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಬಣ್ಣಿಸಿದ್ದಾರೆ.

    ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆಯೊಂದಿಗೆ ದೊರೆತಿರುವುದು ವಿಶೇಷ. ಇದೊಂದು ಸ್ವಾಗತಾರ್ಹ ಕ್ರಮ ಎಂದು ಕರೆದಿರುವ ಸಂಸದ ಸೂರ್ಯರವರು, ವಿಮಾನ ನಿಲ್ದಾಣದ ಸಮೀಪ ಪಾಲಿಟ್ರೌಮಾ ಕೇಂದ್ರದ ಸ್ಥಾಪನೆಯು ಅಪಘಾತಕ್ಕೀಡಾದವರಿಗೆ ತುರ್ತು ಪರಿಹಾರ ನೀಡಲು ಸಹಾಯ ಮಾಡುತ್ತದೆ. ಪ್ರಸ್ತುತ, ಈ ಪ್ರದೇಶದಲ್ಲಿ ಅಂತಹ ಆಘಾತ ಪ್ರಕರಣಗಳಿಗೆ ಸ್ಪಂದಿಸುವ ಯಾವುದೇ ಸಾರ್ವಜನಿಕ ಸೌಲಭ್ಯವಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಈ ಪಾಲಿಟ್ರೌಮಾ ಕೇಂದ್ರವನ್ನು 498 ಕೋಟಿ ರೂ. ವೆಚ್ಚದಲ್ಲಿ ಮಂಜೂರು ಮಾಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.

  • ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ – ಪ್ರತಿ ಕ್ವಿಂಟಲ್‌ಗೆ 1,616 ರೂ. ದರ ನಿಗದಿ

    ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ – ಪ್ರತಿ ಕ್ವಿಂಟಲ್‌ಗೆ 1,616 ರೂ. ದರ ನಿಗದಿ

    – 2.5 ಲಕ್ಷ ಟನ್ ಮಾವು ಖರೀದಿಗೆ ಬೆಂಬಲ ಬೆಲೆ ಘೋಷಣೆ
    – ಮಾವು ಬೆಳೆಗಾರರ ನರೆವಿಗೆ ಬರುವಂತೆ ಪತ್ರ ಬರೆದಿದ್ದ ಹೆಚ್‌ಡಿಕೆ

    ನವದೆಹಲಿ: ಮಾವು ಬೆಳೆಗಾರರ ನೆರವಿಗೆ ಬರುವಂತೆ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಪತ್ರ ಬರೆದು ಮನವಿ ಮಾಡಿಕೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ (Central Government) ಬೆಂಬಲ ಬೆಲೆ ಘೋಷಿಸಿ, ಖರೀದಿಗೆ ಬೆಲೆ ನಿಗದಿ ಮಾಡಿದೆ.

    ಈ ಮೂಲಕ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ಗೆ 1,616 ರೂ. ದರ ನಿಗದಿ ಮಾಡಿದ್ದು, 2.5 ಲಕ್ಷ ಟನ್ ಮಾವು ಖರೀದಿಸಲು ನಿರ್ಧರಿಸಿದೆ. ತಮ್ಮ ಪತ್ರವನ್ನು ಆಧರಿಸಿ ತಕ್ಷಣವೇ ಸ್ಪಂದಿಸಿದಕ್ಕಾಗಿ ಕೇಂದ್ರಕ್ಕೆ ಹೆಚ್‌ಡಿಕೆ ಧನ್ಯವಾದ ತಿಳಿಸಿದ್ದಾರೆ.ಇದನ್ನೂ ಓದಿ: ಕೇಂದ್ರ ಕೃಷಿ ಸಚಿವರಿಗೆ ಹೆಚ್‌ಡಿಕೆ ಪತ್ರ – ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರ ರೈತಪರ ಬದ್ಧತೆ, ಅಚಲತೆಗೆ ಹೃದಯಪೂರ್ವಕ ಧನ್ಯವಾದಗಳು. ರಾಜ್ಯದ ಮಾವು ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದರು. ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿಕೊಂಡಿದ್ದೆ. ನನ್ನ ಮನವಿಗೆ ಸ್ಪಂದಿಸಿ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ ಅಡಿಯಲ್ಲಿ ತಕ್ಷಣ ಬೆಂಬಲ ಬೆಲೆ ಘೋಷಿಸಿದ್ದೀರಿ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

    ಇದಕ್ಕೂ ಮುನ್ನ ಹೆಚ್‌ಡಿಕೆ ಅವರು ಪತ್ರದ ಮೂಲಕ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದರು. ಪತ್ರದ ಮೂಲಕ, ಕೇಂದ್ರ ಸರ್ಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ. ನಫೆಡ್ ಮತ್ತು ಎನ್‌ಸಿಸಿಎಫ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಕರ್ನಾಟಕದ ಗ್ರಾಮೀಣ ಭಾಗದ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂತಹ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕೋರಿದ್ದರು.

    ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರಾದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನಗಳು ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂಬ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದರು.ಇದನ್ನೂ ಓದಿ: ಸಿದ್ದರಾಮಯ್ಯನವರೇ ತಪ್ಪಿಯೂ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ, ಮಾರಿಕೊಂಡು ಹೋಗ್ತಾರೆ – ಯತ್ನಾಳ್